ಕ್ರೀಡೆ
Manu Bhaker-ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದ ಮನು ಭಾಕರ್ ಯಾರು ಗೊತ್ತಾ..? ಅವರ ಜೀವನ ಕಥೆ ಕೇಳಿದ್ರೆ ನೀವು ಶಾಕ್ ಆಗೋದು ಗ್ಯಾರಂಟಿ…!!
ಭಾರತ ಕ್ರಿಕೆಟ್ ಗೆ ಎಷ್ಟು ಮಾನ್ಯತೆ ನೀಡುತ್ತದೆಯೋ ಅದೇ ರೀತಿ ಒಲಿಂಪಿಕ್ಸ್ ಸ್ಪರ್ಧೆಯಲ್ಲೂ ಭಾರತೀಯ ಆಟಗಾರರನ್ನು ಹುರಿದುಂಬಿಸೋದು, ಗೆದ್ದಾಗ ಸಂಭ್ರಮಿಸೋದು ಭಾರತೀಯರ ದೊಡ್ಡತನ. ಇದೀಗ ಭಾರತೀಯರ ಚಿತ್ತ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಜಯಿಸುವ ಮೂಲಕ ಇಡೀ ದೇಶವೇ ಹೆಮ್ಮೆ ಪಡುವಂತ ಸಾಧನೆ ಮಾಡಿದ ಮನು ಭಾಕರ್ ಅವರತ್ತ ಇದೆ. 22 ವರ್ಷದ ಯುವ ಶೂಟರ್ ಮನು ಭಾಕರ್ ಬಗ್ಗೆ ನೀವೆಲ್ಲರೂ ತಿಳಿದುಕೊಳ್ಳಲೇಬೇಕು. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮನು ಭಾಕರ್, ಕಂಚಿನ ಪದಕ ಗೆಲ್ಲುವುದರೊಂದಿಗೆ 2024ರ ಪ್ಯಾರಿಸ್ ಕೂಟದಲ್ಲಿ ಭಾರತ ಪದಕದ ಖಾತೆ ತೆರೆದಿದೆ.

ಮನು ಭಾಕರ್ ಅವರ ಹಿನ್ನೆಲೆ ಏನು..?
22 ವರ್ಷದ ಹರ್ಯಾಣ ಮೂಲದ ಮನು ಭಾಕರ್, ಇದೀಗ ಒಲಿಂಪಿಕ್ಸ್ ಇತಿಹಾಸದಲ್ಲೇ ಶೂಟಿಂಗ್‌ನಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಶೂಟರ್ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ. ಹರ್ಯಾಣ ಹಲವು ಬಾಕ್ಸರ್ ಹಾಗೂ ಕುಸ್ತಿಪಟುಗಳ ತವರು ಎನಿಸಿಕೊಂಡಿದೆ. ಹರ್ಯಾಣದಲ್ಲಿ ಈಗಾಗಲೇ ಹಲವಾರು ಮಂದಿ ಒಲಿಂಪಿಯನ್‌ಗಳಿದ್ದಾರೆ. ಹೀಗಾಗಿ ಕ್ರೀಡೆಗೆ ಉತ್ತೇಜನ ನೀಡುವ ವಾತಾವರಣ ಇದ್ದಿದ್ದರಿಂದಲೇ ಮನು ಭಾಕರ್ ಕೂಡಾ ಶಾಲಾ ಹಂತದಲ್ಲೇ ಕ್ರೀಡೆಯತ್ತ ಒಲವು ಬೆಳೆಸಿಕೊಂಡಿದ್ದರು. ಶಾಲಾ ಹಂತದಲ್ಲಿದ್ದಾಗ ಮನು ಭಾಕರ್ ಟೆನಿಸ್, ಸ್ಕೇಟಿಂಗ್ ಹಾಗೂ ಬಾಕ್ಸಿಂಗ್ ಕ್ರೀಡೆಗಳನ್ನು ಆಡುತ್ತಿದ್ದರು. ಇನ್ನು ಮಣಿಪುರಿ ಮಾಷಲ್ ಆರ್ಟ್ಸ್‌ನಲ್ಲಿ ಆಕೆ ನ್ಯಾಷನಲ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದರು. ಆದರೆ ಇದೆಲ್ಲದರ ಹೊರತಾಗಿ ಕೊನೆಗೆ ಮನು ಸೀರಿಯೆಸ್ ಆಗಿ ತಮ್ಮ ಆಸಕ್ತಿ ಹೆಚ್ಚಿಸಿಕೊಂಡಿದ್ದು ಶೂಟಿಂಗ್ ಮೇಲೆ.

ಮನು ಭಾಕರ್ ಕುಟುಂಬದ ಹಿನ್ನೆಲೆ ಮತ್ತು ಅವರ ಶಿಕ್ಷಣ ಏನು..?
ನಿಖರ ನ್ಯೂಸ್ :- ಮನು ಭಾಕರ್ ಅವರದ್ದು ಪುಟ್ಟ ಕುಟುಂಬ. ತಂದೆ ರಾಮ್ ಕಿಶನ್ ಭಾಕರ್, ತಾಯಿ ಸುಮೇಧಾ ಭಾಕರ್ ಹಾಗೂ ಸಹೋದರ ಅಖಿಲ್ ಭಾಕರ್. ಮನು ಭಾಕರ್ ಸದ್ಯ ಡೆಲ್ಲಿ ಯೂನಿವರ್ಸಿಟಿಯ ಶ್ರೀರಾಮ್ ಕಾಲೇಜ್ ಫಾರ್ ವುಮೆನ್ ಎನ್ನುವ ಮಹಿಳಾ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಮನು ಭಾಕರ್ ತಂದೆ ರಾಮ್ ಕಿಶನ್ ಭಾಕರ್, ಮರ್ಚೆಂಟ್ ನೇವಿಯಲ್ಲಿ ಚೀಫ್ ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಮ್ ಕಿಶನ್ ಭಾಕರ್ ಅವರು 1,50,000 ಖರ್ಚು ಮಾಡಿ ಮನು ಭಾಕರ್ ಅವರನ್ನು ಸ್ಪರ್ಧಾತ್ಮಕ ಶೂಟಿಂಗ್ ಕಲಿಯಲು ಕಳಿಸಿದ್ದರು. ಈ ಅವಕಾಶವನ್ನು ಅಂದು ಸಂಪೂರ್ಣವಾಗಿ ಸದ್ಬಳಕೆ ಮಾಡಿಕೊಂಡ ಮನು ಇಂದು ಸಾಧನೆಗೈಯುವುದರ ಮುಖೇನ ಭಾರತಕ್ಕೆ ಕೀರ್ತಿ ತಂದಿದ್ದಾರೆ.
ಮನು ಭಾಕರ್ ಸಾಧನೆ ಒಂದೆರಡಲ್ಲ
ಮನು ಭಾಕರ್ 2017ರಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕದ ಬೇಟೆ ಆರಂಭಿಸಿದರು. 2017ರಲ್ಲಿ ನಡೆದ ಏಷ್ಯನ್ ಜೂನಿಯರ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಜಯಿಸಿದ ಮನು ಭಾಕರ್, ಅದೇ ವರ್ಷ ಕೇರಳದಲ್ಲಿ ನಡೆದ ನ್ಯಾಷನಲ್ ಗೇಮ್ಸ್‌ನಲ್ಲಿ ಚಿನ್ನದ ಪದಕ ತಮ್ಮದಾಗಿಸಿಕೊಂಡರು. ತನ್ನ ಸಾಧನೆಯ ಪಥದಲ್ಲಿ ಒಮ್ಮೆಯೂ ಹಿಂಜರಿಯದ ಇವರು ಇದಾದ ಬಳಿಕ 2018ರಲ್ಲಿ ಯೂಥ್ ಒಲಿಂಪಿಕ್ಸ್ ಗೇಮ್ಸ್, ಐಎಸ್‌ಎಸ್‌ಎಫ್ ಜೂನಿಯರ್ ವರ್ಲ್ಡ್ ಚಾಂಪಿಯನ್‌ಶಿಪ್ ಸೇರಿದಂತೆ ಹಲವು ಟೂರ್ನಿಗಳಲ್ಲಿ ಪದಕ ಬೇಟೆಯನ್ನಾಡುವಲ್ಲಿ ಯಶಸ್ವಿಯಾಗಿದ್ದರು. ಮನು ಅವರ ಕ್ರೀಡಾ ಸಾಧನೆಯನ್ನು ಗುರುತಿಸಿ ಭಾರತ ಸರ್ಕಾರ 2020ರಲ್ಲಿ ಅರ್ಜುನ ಅವಾರ್ಡ್ ನೀಡಿ ಗೌರವಿಸಿತ್ತು. ಇದು ಅವರ ಸಾಧನೆಗೆ ಹಿಡಿದ ಕೈಗನ್ನಡಿಯಾಗಿದೆ.
ಒಂದು ಸಂದರ್ಭ ಟೀಕೆಗಳಿಗೆ ಕುಗ್ಗಿ ಹೋಗಿದ್ದ ಮನು..
ಮನು ಭಾಕರ್ ಒಲಿಂಪಿಕ್ಸ್‌ನಲ್ಲಿ ಪದಕಗಳನ್ನು ಬಾಚಿಕೊಂಡು ಸಾಧನೆ ಮಾಡುವ ಮುನ್ನ ಹಲವು ಸವಾಲು ಹಾಗೂ ಅವಮಾನಗಳನ್ನು ಎದುರಿಸಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಮುನ್ನ 2020ರ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಆದರೆ ಶೂಟಿಂಗ್ ವೇಳೆ ಪಿಸ್ತೂಲ್ ಕೈಕೊಟ್ಟಿದ್ದರಿಂದಾಗಿ ಫೈನಲ್ ಪ್ರವೇಶಿಸಲು ವಿಫಲವಾಗಿದ್ದರು. ಇದರ ಬೆನ್ನಲ್ಲೇ ಮನು ಭಾಕರ್ ಸಾಕಷ್ಟು ಟೀಕೆಗೂ ಗುರಿಯಾಗಿದ್ದರು. ಈ ಟೀಕೆ, ವ್ಯಂಗ್ಯ ಮಾತು, ಅವಮಾನಗಳಿಂದ ಕುಗ್ಗಿಹೋಗಿದ್ದ ಮನು ಭಾಕರ್ ಒಂದು ಹಂತದಲ್ಲಿ ಶೂಟಿಂಗ್ ತೊರೆಯಲು ಮುಂದಾಗಿದ್ದರು ಎಂಬ ಮಾಹಿತಿ ಹಲವು ಮೂಲಗಳಿಂದ ಲಭ್ಯವಾಗಿದೆ. ಆದರೆ ಧೃತಿಗೆಡದ ಮನು ಭಾಕರ್ ಸೋಲನ್ನು ಸವಾಲಾಗಿ ತೆಗೆದುಕೊಂಡು ಇದೀಗ ದೇಶಕ್ಕೆ ಪದಕದ ಖಾತೆ ತೆರೆಯುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇವರ ಕ್ರೀಡಾ ಸಾಧನೆ ಹೀಗೇ ಮುಂದುವರಿಯಲಿ. ಇಂತಹ ಅದ್ಭುತ ಆಟಗಾರರಿಂದ ಒಲಿಂಪಿಕ್ಸ್ ನಲ್ಲಿ ಭಾರತ ಮತ್ತಷ್ಟು ಪದಕಗಳನ್ನು ಗೆಲ್ಲುವಂತಾಗಲಿ ಎಂಬುವುದೇ ನಮ್ಮ ಅಭಿಲಾಷೆ ಕೂಡಾ.
ಕ್ರೀಡೆ
Vaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್‌ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ
ಭಾರತದ ಯುವ ಕ್ರಿಕೆಟ್ ಪ್ರತಿಭೆ ವೈಭವ್ ಸೂರ್ಯವಂಶಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಮಂಗಳವಾರ ದೋಹಾದಲ್ಲಿ ನಡೆದ ‘ಎಸಿಸಿ ಪುರುಷರ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026’ ಟೂರ್ನಿಯ ಯುಎಇ ವಿರುದ್ಧದ ಪಂದ್ಯದಲ್ಲಿ ಕೇವಲ 52 ಎಸೆತಗಳಲ್ಲಿ ದ್ವಿಶತಕ ಪೂರೈಸುವ ಮೂಲಕ ಲಿಸ್ಟ್-ಎ ಕ್ರಿಕೆಟ್‌ನಲ್ಲಿ ಅತಿ ವೇಗದ ದ್ವಿಶತಕದ ವಿಶ್ವದಾಖಲೆ ನಿರ್ಮಿಸಿದ್ದಾರೆ.
ದೋಹಾ: ಭಾರತದ ಯುವ ಕ್ರಿಕೆಟ್ ಪ್ರತಿಭೆ ವೈಭವ್ ಸೂರ್ಯವಂಶಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಮಂಗಳವಾರ ದೋಹಾದಲ್ಲಿ ನಡೆದ ‘ಎಸಿಸಿ ಪುರುಷರ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026’ ಟೂರ್ನಿಯ ಯುಎಇ ವಿರುದ್ಧದ ಪಂದ್ಯದಲ್ಲಿ ಕೇವಲ 52 ಎಸೆತಗಳಲ್ಲಿ ದ್ವಿಶತಕ ಪೂರೈಸುವ ಮೂಲಕ ಲಿಸ್ಟ್-ಎ ಕ್ರಿಕೆಟ್‌ನಲ್ಲಿ ಅತಿ ವೇಗದ ದ್ವಿಶತಕದ ವಿಶ್ವದಾಖಲೆ ನಿರ್ಮಿಸಿದ್ದಾರೆ.
28 ಸಿಕ್ಸರ್, 7 ಬೌಂಡರಿಗಳೊಂದಿಗೆ 204 ರನ್..!
ಯುಎಇ ನಾಯಕ ಬಾಸಿಲ್ ಹಮೀದ್ ಎಸೆತವನ್ನು ಸಿಕ್ಸರ್‌ಗೆ ಅಟ್ಟುವ ಮೂಲಕ ವೈಭವ್ ತಮ್ಮ ಐತಿಹಾಸಿಕ ದ್ವಿಶತಕ ಪೂರೈಸಿದರು. ಆದರೆ, ದ್ವಿಶತಕದ ಸಂಭ್ರಮದ ಬೆನ್ನಲ್ಲೇ ಮುಂದಿನ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಕೇವಲ 53 ಎಸೆತಗಳನ್ನು ಎದುರಿಸಿದ ಅವರು 28 ಸಿಕ್ಸರ್ ಹಾಗೂ 7 ಬೌಂಡರಿಗಳ ನೆರವಿನಿಂದ 204 ರನ್ ಸಿಡಿಸಿದರು.
2024ರಲ್ಲಿ ನ್ಯೂಜಿಲೆಂಡ್‌ನ ಚಾಡ್ ಬೋವ್ಸ್ 103 ಎಸೆತಗಳಲ್ಲಿ ದ್ವಿಶತಕ ಬಾರಿಸಿ ನಿರ್ಮಿಸಿದ್ದ ದಾಖಲೆಯನ್ನು ವೈಭವ್ ಇದೀಗ ಹಿಂದಿಕ್ಕಿದ್ದಾರೆ.
ಅತಿ ವೇಗದ ಶತಕದ ದಾಖಲೆಯೂ ವೈಭವ್ ಹೆಸರಿಗೆ
ದ್ವಿಶತಕದ ಜೊತೆಗೆ ವೈಭವ್ ಮತ್ತೊಂದು ವಿಶ್ವದಾಖಲೆಯನ್ನೂ ತಮ್ಮದಾಗಿಸಿಕೊಂಡಿದ್ದಾರೆ. ಕೇವಲ 28 ಎಸೆತಗಳಲ್ಲಿ ಶತಕ ಪೂರೈಸಿದ ಅವರು, ಲಿಸ್ಟ್-ಎ ಕ್ರಿಕೆಟ್‌ನ ಅತಿ ವೇಗದ ಶತಕದ ದಾಖಲೆ ನಿರ್ಮಿಸಿದ್ದಾರೆ.
ಇದಕ್ಕೂ ಮೊದಲು ಆಸ್ಟ್ರೇಲಿಯಾದ ಜೇಕ್ ಫ್ರೇಸರ್-ಮೆಕ್‌ಗುರ್ಕ್ 29 ಎಸೆತಗಳಲ್ಲಿ ಹಾಗೂ ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ 31 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇದೀಗ ಈ ಇಬ್ಬರ ದಾಖಲೆಗಳನ್ನು ವೈಭವ್ ಮುರಿದಿದ್ದಾರೆ.
ಹರ್‌ಪ್ರೀತ್ ಭಾಟಿಯಾ ಶತಕ ವ್ಯರ್ಥ
ಇದಕ್ಕೂ ಮುನ್ನ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಯುಎಇ ತಂಡ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತು. ಭಾರತದ ವೇಗಿಗಳಾದ ಹರ್ಷಿತ್ ರಾಣಾ ಮತ್ತು ಅರ್ಷದ್ ಖಾನ್ ದಾಳಿಗೆ ತತ್ತರಿಸಿದ ಯುಎಇ 20 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡಿತು.
ಈ ಹಂತದಲ್ಲಿ ತಂಡಕ್ಕೆ ಆಸರೆಯಾದ ಭಾರತದ ಮಾಜಿ ದೇಶೀಯ ಕ್ರಿಕೆಟಿಗ ಹರ್‌ಪ್ರೀತ್ ಸಿಂಗ್ ಭಾಟಿಯಾ 144 ಎಸೆತಗಳಲ್ಲಿ 130 ರನ್ ಸಿಡಿಸಿ ಗಮನ ಸೆಳೆದರು. ಅವರಿಗೆ ಮುಹಮ್ಮದ್ ಶಹದಾದ್ (28) ಹಾಗೂ ಇಥಾನ್ ಡಿಸೋಜಾ (25) ಉತ್ತಮ ಸಾಥ್ ನೀಡಿದರು.
ಕೊನೆಯಲ್ಲಿ ನಾಯಕ ಬಾಸಿಲ್ ಹಮೀದ್ ಅಜೇಯ 36 ರನ್ ಗಳಿಸುವ ಮೂಲಕ ಯುಎಇ ತಂಡ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 249 ರನ್ ಕಲೆಹಾಕಿತು.
ಭಾರತ ‘ಎ’ ಪರ ಅರ್ಷದ್ ಖಾನ್ 43 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಹರ್ಷ್ ದುಬೆ, ಶಹಬಾಜ್ ಅಹ್ಮದ್, ಸೂರ್ಯಾಂಶ್ ಶೆಡ್ಗೆ ಹಾಗೂ ಹರ್ಷಿತ್ ರಾಣಾ ತಲಾ ಒಂದು ವಿಕೆಟ್ ಪಡೆದರು.
ಬಳಿಕ ಬ್ಯಾಟಿಂಗ್‌ಗೆ ಇಳಿದ ಭಾರತ ‘ಎ’ ತಂಡದ ಪರ ವೈಭವ್ ಸೂರ್ಯವಂಶಿ ನಡೆಸಿದ ಸಿಕ್ಸರ್‌ಗಳ ಅಬ್ಬರಕ್ಕೆ ಯುಎಇ ಬೌಲರ್‌ಗಳು ತತ್ತರಿಸಿದರು.
ಕ್ರೀಡೆ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್‌ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.
ಕ್ರೀಡೆ
IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್‌ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್‌ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.
ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.
ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.
ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.
10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2
ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.
2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.
ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.
-
ಬಿಗ್ ನ್ಯೂಸ್20 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಅಪರಾಧ19 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ಸುಳ್ಯ14 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ17 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ನಿಧನ ವಾರ್ತೆ19 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಅಂತರ ರಾಜ್ಯ17 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ಸ್ಥಳೀಯ14 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ನಿಧನ ವಾರ್ತೆ19 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು















