Connect with us

ಆರೋಗ್ಯ

Betel leaves..-ವೀಳ್ಯದೆಲೆಯಲ್ಲಿದೆ ಸೂಪರ್ ಪವರ್…!! ತ್ವಚೆಗೆ ಬಳಸೋದ್ರಿಂದ ಪಿಂಪಲ್ಸ್ ಜೊತೆ ಕಪ್ಪು ಕಲೆನೂ ಮಾಯವಾಗುತ್ತೆ‌..!!

Published

on

Ad Widget

Ad Widget

Ad Widget

Ad Widget

ನಿಖರ ನ್ಯೂಸ್ :- ಸಾಮಾನ್ಯವಾಗಿ ಮಹಿಳೆಯರಿಗೆ ತಮ್ಮ ಸೌಂದರ್ಯದ ಮೇಲೆ ವಿಶೇಷವಾದ ಕಾಳಜಿಯಿರುತ್ತದೆ. ವಯಸ್ಸಿನ ಮಾನದಂಡವಿಲ್ಲದೆ ಈಗೀಗ ಪ್ರತಿಯೊಬ್ಬ ಮಹಿಳೆಯೂ ಬ್ಯೂಟಿಪಾರ್ಲರ್ ನತ್ತ ಮುಖ ಮಾಡುತ್ತಾಳೆ. ಎಷ್ಟೇ ಪ್ರಾಯವಾದರೂ ಕೂಡಾ ಯಂಗ್ ಆಗಿ ಕಾಣಲು ಹವಣಿಸುತ್ತಿರುತ್ತಾರೆ. ಇದಕ್ಕಾಗಿ ಹಲವಾರು ಸೌಂದರ್ಯವರ್ಧಕದ ಮೊರೆ ಹೋಗುತ್ತಾರೆ. ಎಷ್ಟೋ ಬಾರಿ ಮನೆಯಲ್ಲಿ ಸಿಗುವ ನೈಸರ್ಗಿಕ ವಸ್ತುಗಳಿಂದಲೇ ನಮ್ಮ ಅಂದವನ್ನು ದುಪ್ಪಟ್ಟುಗೊಳಿಸಬಹುದು. ರಾಸಾಯನಿಕ ಮುಕ್ತ ಫೇಸ್ ಪ್ಯಾಕ್ ಗಳನ್ನು ಮನೆಯಲ್ಲೇ ತಯಾರಿಸಿ ತ್ವಚೆಯ ರಕ್ಷಣೆಯನ್ನೂ ಮಾಡಿಕೊಳ್ಳಬಹುದು. ಇದಕ್ಕೆ ವೀಳ್ಯದೆಲೆಯೂ ಒಂದು ಉತ್ತಮ ಉದಾಹರಣೆ ಅಂದ್ರೆ ನಂಬ್ತೀರಾ…ನಂಬಲೇಬೇಕು….

Ad Widget

Ad Widget

Ad Widget

Ad Widget

ವೀಳ್ಯದೆಲೆಯಲ್ಲಿ ಸಾಕಷ್ಟು ಔಷಧೀಯ ಗುಣಗಳಿವೆ

Ad Widget

Ad Widget alt="Ad Widget"/>

Ad Widget

ವೀಳ್ಯದೆಯನ್ನು ತಿನ್ನುವುದರ ಬಗ್ಗೆ ನಿಮಗೆ ಗೊತ್ತೇ ಇದೆ. ಆದರೆ ಈ ವೀಳ್ಯದೆಲೆಯಲ್ಲಿ ಸಾಕಷ್ಟು ಔಷಧೀಯ ಗುಣಗಳಿದ್ದು, ಅದನ್ನು ಮುಖಕ್ಕೆ ಹಚ್ಚೋದ್ರಿಂದ ಮುಖದಲ್ಲಿನ ಕಲೆಗಳು ನಿವಾರಣೆಯಾಗುತ್ತೆ. ವೀಳ್ಯದೆಲೆಯು ಅದರ ಔಷಧೀಯ ಬಳಕೆಗಳಿಗೆ ಹೆಸರುವಾಸಿಯಾಗಿದೆ. ಇದನ್ನು ಚರ್ಮದ ಆರೋಗ್ಯಕ್ಕೂ ಬಳಸಬಹುದು ಎಂದು ನಿಮಗೆ ತಿಳಿದಿದೆಯೇ? ವೀಳ್ಯದೆಲೆಯು ಸಾಕಷ್ಟು ಜೀವಸತ್ವಗಳು, ಉತ್ಕರ್ಷಣ ನಿರೋಧಕಗಳು ಮತ್ತು ನೈಸರ್ಗಿಕ ಸಂಯುಕ್ತಗಳಿಂದ ತುಂಬಿರುತ್ತದೆ ಮತ್ತು ನಿಮ್ಮ ತ್ವಚೆಯ ದಿನಚರಿಗೆ ಇದನ್ನು ಬಳಸುವುದು ಬಹಳ ಪ್ರಯೋಜನಕಾರಿಯಾಗಿದೆ.

Ad Widget

Ad Widget <> Ad Widget

ವೀಳ್ಯದೆಲೆಯಿಂದ ಪಿಂಪಲ್ಸ್ ಜೊತೆ ಕಪ್ಪುಕಲೆಗೂ ಗುಡ್ ಬೈ ಹೇಳಬಹುದು…

ನಿಮ್ಮ ಚರ್ಮವನ್ನು ಸುಂದರವಾಗಿಸಲು ನೀವು ವೀಳ್ಯದೆಲೆಗಳನ್ನು ಬಳಸಬಹುದು. ಇದು ಮುಖಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ರಂಧ್ರಗಳೊಳಗೆ ಅಡಗಿರುವ ಕೊಳಕು ಮತ್ತು ಕಲ್ಮಶಗಳನ್ನು ಹೊರತೆಗೆಯುವ ಮೂಲಕ ಚರ್ಮವನ್ನು ಸ್ವಚ್ಛಗೊಳಿಸಲು ಮತ್ತು ಶುದ್ಧೀಕರಿಸುವಲ್ಲಿ ಅವು ಸಹಾಯ ಮಾಡುತ್ತದೆ. ಇದರಿಂದಾಗಿ ನಿಮ್ಮ ಚರ್ಮವು ಮೃದುವಾಗಿ ಮತ್ತು ಕಾಂತಿಯುತವಾಗುತ್ತದೆ.

Ad Widget

Ad Widget

ವೀಳ್ಯದೆಲೆಯ ಫೇಸ್ ಪ್ಯಾಕ್ ಹೇಗೆ ಮಾಡಬಹುದು ಗೊತ್ತಾ..?

  • ವೀಳ್ಯದೆಲೆಗಳನ್ನು ಪುಡಿಮಾಡಿ ಮತ್ತು ಅದಕ್ಕೆ ಸ್ವಲ್ಪ ಮೊಸರು ಸೇರಿಸಿ ಪೇಸ್ಟ್ ತಯಾರಿಸಿ. ಈ ಪೇಸ್ಟ್ ಅನ್ನು ಮುಖದ ಮೇಲೆ 20 ನಿಮಿಷಗಳ ಕಾಲ ಹಚ್ಚಿಡಿ ನಂತರ ಶುದ್ಧ ನೀರಿನಿಂದ ಮುಖವನ್ನು ತೊಳೆಯಿರಿ.
  • ನೀವು ವೀಳ್ಯದೆಲೆಯ ರಸವನ್ನು ತೆಗೆಯಬಹುದು ಮತ್ತು ಅದನ್ನು ಹತ್ತಿ ಉಂಡೆಯಿಂದ ಮುಖಕ್ಕೆ ಹಚ್ಚಬಹುದು, ಇದು ಟೋನರ್ ಆಗಿ ಕೆಲಸ ಮಾಡುತ್ತದೆ.
  • ವೀಳ್ಯದೆಲೆಯಿಂದ ಸ್ಕ್ರಬ್ ಮಾಡಲು, ಎಲೆಗಳನ್ನು ಪುಡಿಮಾಡಿ, ಅದರಲ್ಲಿ ಅಕ್ಕಿ ಹಿಟ್ಟು ಮಿಶ್ರಣ ಮಾಡಿ, ಪೇಸ್ಟ್ ತಯಾರಿಸಿ ಮತ್ತು ಮುಖವನ್ನು 10 ನಿಮಿಷಗಳ ಕಾಲ ಮಸಾಜ್ ಮಾಡಿ, ನಂತರ ಮುಖವನ್ನು ತೊಳೆಯಿರಿ.

ಸ್ಕಿನ್ ಬ್ರೈಟೆನಿಂಗ್

ವೀಳ್ಯದೆಲೆಗಳು ಚರ್ಮದ ಹೊಳಪು ಮತ್ತು ಟೋನ್ ಅನ್ನು ಉತ್ತೇಜಿಸುವ ಸಂಯುಕ್ತಗಳನ್ನು ಹೊಂದಿರುತ್ತವೆ. ಇದರ ನಿಯಮಿತ ಬಳಕೆಯು ನಿಮ್ಮ ಮುಖದಲ್ಲಿನ ಕಪ್ಪು ಕಲೆಗಳು ಮತ್ತು ವರ್ಣದ್ರವ್ಯದ ನೋಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇವು ಮೊಡವೆಗಳು, ಕಲೆಗಳು ಮತ್ತು ಸುಕ್ಕುಗಳನ್ನು ಹೋಗಲಾಡಿಸಬಹುದು. ಇದು ನಿಮ್ಮ ಚರ್ಮವನ್ನು ಬಿಗಿಗೊಳಿಸಲು ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ.

ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾದ ಪರಿಣಾಮ ಬೀರುತ್ತದೆ

ಉತ್ಕರ್ಷಣ ನಿರೋಧಕಗಳಿಂದ ತುಂಬಿರುವ, ವೀಳ್ಯದೆಲೆಗಳು ಅಕಾಲಿಕ ವಯಸ್ಸಾಗುವಿಕೆ ಮತ್ತು ಚರ್ಮದ ಹಾನಿಗೆ ಕಾರಣವಾಗುವ ಫ್ರೀ ರಾಡಿಕಲ್‌ಗಳನ್ನು ಎದುರಿಸಲು ಸಹಾಯ ಮಾಡುತ್ತದೆ. ಆಂಟಿಆಕ್ಸಿಡೆಂಟ್‌ಗಳು ನಿಮ್ಮ ಚರ್ಮವನ್ನು ಪರಿಸರದ ಒತ್ತಡಗಳಿಂದ ರಕ್ಷಿಸಲು ಮತ್ತು ಅದರ ಯೌವನದ ಹೊಳಪನ್ನು ಕಾಪಾಡಿಕೊಳ್ಳಲು ಕೆಲಸ ಮಾಡುತ್ತದೆ.

ಉರಿಯೂತದ ಗುಣಲಕ್ಷಣಗಳು​

ಉತ್ಕರ್ಷಣ ನಿರೋಧಕ, ನಂಜುನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳು ಇದರಲ್ಲಿವೆ. ವೀಳ್ಯದೆಲೆಯು ಸಾರಭೂತ ತೈಲಗಳು ಮತ್ತು ಉರಿಯೂತದ ಗುಣಲಕ್ಷಣಗಳನ್ನು ಹೊಂದಿರುವ ಫಿನಾಲ್‌ಗಳಂತಹ ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ಮೊಡವೆ ಅಥವಾ ಕೆಂಪಾಗುವಿಕೆಯಂತಹ ಕಿರಿಕಿರಿಯುಂಟುಮಾಡುವ ಅಥವಾ ಉರಿಯೂತದ ಚರ್ಮದ ಪರಿಸ್ಥಿತಿಗಳನ್ನು ಶಮನಗೊಳಿಸುವಲ್ಲಿ ಪರಿಣಾಮಕಾರಿಯಾಗಿದೆ.

ಅತಿಯಾಗಿ ಬಳಸದಿರಿ

ಯಾವ ವಸ್ತುವೇ ಇರಲಿ. ಅತಿಯಾದರೆ ಅಮೃತವೂ ವಿಷ ಎಂಬ ಮಾತಿದೆ. ಆದ್ದರಿಂದ ತ್ವಚೆಯ ರಕ್ಷಣೆಗೆಂದು ಅತಿಯಾದ ವೀಳ್ಯದೆಲೆ ಬಳಕೆಯೂ ಕೂಡಾ ಚರ್ಮಕ್ಕೆ ಅಷ್ಟೊಂದು ಸೂಕ್ತವಲ್ಲ. ಚರ್ಮದ ಕಿರಿಕಿರಿಗೆ ಅದು ಕಾರಣವಾಗಬಹುದು. ಆದ್ದರಿಂದ ಮೊದಲು ಸೂಕ್ತ ತಜ್ಞರ ಸಲಹೆ ಪಡೆದು ನಂತರ ಬಳಸುವುದು ಉತ್ತಮ. ಇದರಿಂದ ಕೆಲವರಿಗೆ ಅಲರ್ಜಿ ಕೂಡಾ ಆಗುವ ಸಾಧ್ಯತೆ ಇರುತ್ತದೆ. ಮುಂಜಾಗ್ರತಾ ಕ್ರಮವನ್ನು ಅನುಸರಿಸಿ ಬಳಕೆ ಮಾಡಿದರೆ ಉತ್ತಮ.

Ad Widget

ಆರೋಗ್ಯ

Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ

Published

on

Ad Widget

Ad Widget

Ad Widget

Ad Widget

ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

Ad Widget

Ad Widget alt="Ad Widget"/>

Ad Widget

ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.

Ad Widget

Ad Widget <> Ad Widget

ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.

ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.

Ad Widget

Ad Widget

ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್‌ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.

ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.

ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.

Ad Widget
Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಆರೋಗ್ಯ

‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ

Published

on

Ad Widget

Ad Widget

Ad Widget

Ad Widget

35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.

Ad Widget

Ad Widget alt="Ad Widget"/>

Ad Widget

ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.

Ad Widget

Ad Widget <> Ad Widget

ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.

‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್‌ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.

Ad Widget

Ad Widget

ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!