ಮಂಗಳೂರು
Mangaluru City bus-ಪ್ರಯಾಣಿಕರಿಗಿನ್ನು ಚಿಲ್ಲರೆ ಕಿರಿಕಿರಿಯಿಲ್ಲ; ನಗದು ರಹಿತ ಪ್ರಯಾಣಕ್ಕೆ ಸಜ್ಜಾದ ಮಂಗಳೂರು ಸಿಟಿ ಬಸ್!
ನಿಖರ ನ್ಯೂಸ್ :- ರಾಜ್ಯದ ಮಹಾನಗರಗಳ ಸಾಲಿನಲ್ಲಿರುವ ಕಡಲ ನಗರಿ ಮಂಗಳೂರಿಗೆ ಸಿಟಿ ಬಸ್ಗಳೇ ಜೀವನಾಡಿಗಳು. ಈ ಸಿಟಿ ಬಸ್ಗಳು ಹತ್ತಾರು ವರ್ಷಗಳಿಂದ ಮಂಗಳೂರಿನ ಜನ ಜೀವನದ ಅವಿಭಾಜ್ಯ ಅಂಗಗಳೇ ಆಗಿವೆ.

ಮಂಗಳೂರಿನ ಮೂಲೆ ಮೂಲೆಗಳ ಪರಿಚಯ ಮಾಡಿಸುವ ಈ ಬಸ್ಗಳಲ್ಲಿ ಇದೀಗ ಹೊಸ ತಂತ್ರಜ್ಞಾನದ ಪರಿಚಯವಾಗುತ್ತಿದೆ. ಹೌದು, ಇನ್ಮುಂದೆ ಮಂಗಳೂರಿನ ಸಿಟಿ ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಚಿಲ್ಲರೆಗಾಗಿ ಕಿರಿಕಿರಿ ಅನುಭವಿಸಬೇಕಾಗಿಲ್ಲ ಕ್ಯೂ ಆರ್ ಕೋಡ್ ಮೂಲಕ ತಮ್ಮ ಟಿಕೆಟ್ ದರ ಪಾವತಿಸಬಹುದಾಗಿದೆ. ಈ ಬಗೆಗಿನ ಡೀಟಿಯಲ್ಸ್ ಇಲ್ಲಿದೆ.

ಈ ಭಾಗದ ಬಸ್ ನಲ್ಲಿ ಡಿಜಿಟಲ್ ಪಾವತಿ!
ಸದಾ ಜನಜಂಗುಳಿಯಿಂದ ಕಿಕ್ಕಿರಿಯುವ ಮಂಗಳೂರಿನ ಸಿಟಿ ಬಸ್ ಗಳಲ್ಲಿ ಇದೀಗ ಡಿಜಿಟಲ್ ಪಾವತಿ ಆರಂಭವಾಗುತ್ತಿದೆ. ಆದರೆ ಈ ಹೊಸ ಕ್ರಮಕ್ಕೆ ಜನಸ್ಪಂದನೆ ಹೇಗಿದೆ ಎಂಬುದನ್ನು ತಿಳಿದುಕೊಳ್ಳಲು ಮೊದಲು ಪ್ರಾಯೋಗಿಕವಾಗಿ ಸ್ಟೇಟ್ಬ್ಯಾಂಕ್ನಿಂದ ಅತ್ತಾವರ-ಮಂಗಳಾದೇವಿ ನಡುವೆ ಸಂಚರಿಸುವ 27 ನಂಬರ್ನ 5 ಬಸ್ಗಳಲ್ಲಿ ಈ ಯೋಜನೆ ಈಗಾಗಲೇ ಜಾರಿಯಾಗಿದ್ದು, ಜನರು ಖುಷಿಯಾಗಿದ್ದಾರೆ ಎಂದು ತಿಳಿದು ಬಂದಿದೆ.ತಕ್ಷಣದಿಂದಲೇ ಈ ಡಿಜಿಟಲ್ ಪಾವತಿ ನಗರ ಎಲ್ಲಾ ಬಸ್ಗಳಲ್ಲಿ ಜಾರಿಯಾಗಲಿದೆ ಎನ್ನಲಾಗಿದೆ.

ಈ ರೀತಿ ಇರಲಿದೆ ಡಿಜಿಟಲ್ ಪಾವತಿ!
ಆಯಾ ಬಸ್ ಕಂಡಕ್ಟರ್ ಕೈಯಲ್ಲಿ ಇಟಿಎಂ ಯಂತ್ರ ಇರುತ್ತದೆ. ಪ್ರಯಾಣಿಕರು ಎಲ್ಲಿಂದ ಎಲ್ಲಿಗೆ ಹೋಗುತ್ತಿದ್ದಾರೆ ಎಂದು ಹೇಳಿದಾಗ ಈ ಮಿಷನ್ನಲ್ಲಿ ದರ ನಮೂದು ಆಗುತ್ತದೆ. ಅದನ್ನು ಸ್ಕ್ಯಾನ್ ಮಾಡಿ ಗೂಗಲ್ ಪೇ, ಪೋನ್ ಪೇ ಅಥವಾ ಇತರ ಯಾವೂದೇ ಸ್ಕ್ಯಾನರ್ ಮೂಲಕ ಹಣ ಪಾವತಿ ಮಾಡಬಹದು. ಈ ಹೊಸ ಕ್ರಮ ಎಲ್ಲಾ ಬಸ್ ಗಳಲ್ಲಿ ಜಾರಿಯಾದರೆ, ಇನ್ಮುಂದೆ ಪ್ರಯಾಣಿಕರು ಚಿಲ್ಲರೆಗಾಗಿ ತಡಕಾಡುವ ಕಿರಿಕಿರಿ ತಪ್ಪುತ್ತದೆ.
ಮಂಗಳೂರು
Pugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
ಅಡಕೆ ಮತ್ತು ವೀಳ್ಯದೆಲೆಯನ್ನು ಪ್ರಧಾನವಾಗಿ ಬಳಸಿ ತಯಾರಿಸಿದ ಸಂಯುಕ್ತ ಗಿಡಮೂಲಿಕೆ ಮಿಶ್ರಣವು ಕ್ಯಾನ್ಸರ್ ಬೆಳವಣಿಗೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ ಎಂಬ ಮಹತ್ವದ ಅಂಶವನ್ನು ದಕ್ಷಿಣ ಕನ್ನಡದ ವಿಜ್ಞಾನಿಗಳ ತಂಡ ನಡೆಸಿದ ಸಂಶೋಧನೆ ಬಹಿರಂಗಪಡಿಸಿದೆ.
ಮಂಗಳೂರು: ಅಡಕೆ ಮತ್ತು ವೀಳ್ಯದೆಲೆಯನ್ನು ಪ್ರಧಾನವಾಗಿ ಬಳಸಿ ತಯಾರಿಸಿದ ಸಂಯುಕ್ತ ಗಿಡಮೂಲಿಕೆ ಮಿಶ್ರಣವು ಕ್ಯಾನ್ಸರ್ ಬೆಳವಣಿಗೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ ಎಂಬ ಮಹತ್ವದ ಅಂಶವನ್ನು ದಕ್ಷಿಣ ಕನ್ನಡದ ವಿಜ್ಞಾನಿಗಳ ತಂಡ ನಡೆಸಿದ ಸಂಶೋಧನೆ ಬಹಿರಂಗಪಡಿಸಿದೆ.
ಅಳಿಕೆಯ ಜೆಡ್ಡು ಆಯುರ್ವೇದ ಸಂಶೋಧನಾ ಕೇಂದ್ರ ಹಾಗೂ ಮಂಗಳೂರಿನ ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವಿಜ್ಞಾನಿಗಳು ನಡೆಸಿದ ಈ ಅಧ್ಯಯನದಲ್ಲಿ ‘ಪೂಗಸಾರಂ’ ಎಂಬ ಪಾಲಿಹರ್ಬಲ್ ಜೆಲ್ನ ಕ್ಯಾನ್ಸರ್ ವಿರೋಧಿ ಗುಣಗಳನ್ನು ಪರೀಕ್ಷಿಸಲಾಗಿದೆ. ಈ ಸಂಶೋಧನೆಯ ಫಲಿತಾಂಶಗಳನ್ನು ‘ಇಂಟರ್ನ್ಯಾಷನಲ್ ಜರ್ನಲ್ ಆಫ್ ಫಾರ್ಮಸಿ ರಿಸರ್ಚ್ ಆ್ಯಂಡ್ ಟೆಕ್ನಾಲಜಿ’ (IJPRFT) ವೈಜ್ಞಾನಿಕ ನಿಯತಕಾಲಿಕೆಯ 2026ರ ಜನವರಿ-ಜೂನ್ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ.
ಇಲಿಗಳ ಮೇಲಿನ ಪ್ರಯೋಗದಲ್ಲಿ ಸಕಾರಾತ್ಮಕ ಫಲಿತಾಂಶ
ಅಡಕೆ ಮತ್ತು ವೀಳ್ಯದೆಲೆಯೊಂದಿಗೆ ಇತರ ಏಳೆಂಟು ಔಷಧೀಯ ಸಸ್ಯಗಳ ಅಂಶಗಳನ್ನು ಸೇರಿಸಿ ಪೂಗಸಾರಂ ಎಂಬ ಜೆಲ್ ಸಿದ್ಧಪಡಿಸಲಾಗಿದೆ. ಇದರ ಪರಿಣಾಮಕಾರಿತ್ವವನ್ನು ಆರಂಭದಲ್ಲಿ ಯೆನಪೋಯ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಕ್ಯಾನ್ಸರ್ ಕೋಶಗಳ ಮೇಲೆ ಪರೀಕ್ಷಿಸಲಾಗಿತ್ತು. ಬಳಿಕ ಇಲಿಗಳ ಮೇಲೆ ಪ್ರಯೋಗ ನಡೆಸಲಾಯಿತು.
ಪ್ರಯೋಗದ ಭಾಗವಾಗಿ ಇಲಿಗಳ ಕೆಳತುಟಿಗಳಲ್ಲಿ ಡಿಎಂಬಿಎ (DMBA) ಎಂಬ ಕ್ಯಾನ್ಸರ್ಕಾರಕ ರಾಸಾಯನಿಕ ಬಳಸಿ ಕ್ಯಾನ್ಸರ್ ಉಂಟುಮಾಡಲಾಯಿತು. ನಂತರ ಎಂಟು ವಾರಗಳ ಕಾಲ ಪ್ರತಿದಿನವೂ ಪೂಗಸಾರಂ ಜೆಲ್ ಹಚ್ಚಿ ಅದರ ಪರಿಣಾಮವನ್ನು ಗಮನಿಸಲಾಯಿತು.
ಈ ವೇಳೆ ಇಲಿಗಳಲ್ಲಿ ಕಾಣಿಸಿಕೊಂಡ ಕ್ಯಾನ್ಸರ್ ಗಡ್ಡೆಗಳ ಗಾತ್ರ ಹಾಗೂ ಅವುಗಳ ಹರಡುವಿಕೆ ಗಣನೀಯವಾಗಿ ಕಡಿಮೆಯಾಗಿರುವುದು ಸಂಶೋಧನೆಯಲ್ಲಿ ಕಂಡುಬಂದಿದೆ. ಕೆಲವು ಇಲಿಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಸಿಸ್ಪ್ಲಾಟಿನ್ (Cisplatin) ಔಷಧಕ್ಕಿಂತಲೂ ಪೂಗಸಾರಂ ಹೆಚ್ಚು ಪರಿಣಾಮಕಾರಿ ಫಲಿತಾಂಶ ನೀಡಿದೆ ಎಂದು ಸಂಶೋಧನಾ ತಂಡ ತಿಳಿಸಿದೆ.
ಅಡಕೆಯ ಮೌಲ್ಯವರ್ಧನೆಗೆ ಸಂಶೋಧನೆ ಬಲ
ಅಡಕೆಯಲ್ಲಿ ಆರೋಗ್ಯಕ್ಕೆ ಪೂರಕವಾದ ಅಂಶಗಳಿವೆ ಎಂಬುದನ್ನು ಹಲವು ಸಂಶೋಧನೆಗಳು ಈಗಾಗಲೇ ಪ್ರಸ್ತಾಪಿಸಿವೆ. ಆದರೆ ವಿದೇಶಗಳಲ್ಲಿ ನಡೆದ ಕೆಲವು ಅಧ್ಯಯನಗಳು ಅಡಕೆಯನ್ನು ಕ್ಯಾನ್ಸರ್ಕಾರಕ ಎಂದು ಗುರುತಿಸಿವೆ. ಈ ಹಿನ್ನೆಲೆಯಲ್ಲಿ ಪೂಗಸಾರಂ ಕುರಿತ ಸಂಶೋಧನೆಯು ಅಡಕೆಯ ಔಷಧೀಯ ಗುಣಗಳ ಕುರಿತು ಮತ್ತಷ್ಟು ಅಧ್ಯಯನಕ್ಕೆ ಹೊಸ ಅವಕಾಶ ಕಲ್ಪಿಸಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಈ ಸಂಶೋಧನೆಯನ್ನು ರಾಜ್ಯ ಹಾಗೂ ಕೇಂದ್ರ ಸರಕಾರಗಳು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಆ ಮೂಲಕ ಅಡಕೆಯ ಕುರಿತಿರುವ ನಕಾರಾತ್ಮಕ ಅಭಿಪ್ರಾಯಗಳನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ಅದರ ಮೌಲ್ಯವರ್ಧನೆಗೆ ಆದ್ಯತೆ ನೀಡಬೇಕು ಎಂದು ಮಲೆನಾಡು ಅಡಕೆ ಮಾರಾಟದ ಸಹಕಾರ ಸಂಘದ ಉಪಾಧ್ಯಕ್ಷ ಮಹೇಶ್ ಹುಲ್ಕುಳಿ ಮನವಿ ಮಾಡಿದ್ದಾರೆ.
ಸಂಶೋಧನೆಯಲ್ಲಿ ಅಚ್ಚರಿಯ ಫಲಿತಾಂಶ
ಯೆನಪೋಯ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಕ್ಯಾನ್ಸರ್ ಸೆಲ್ ಲೈನ್ಗಳ ಮೇಲೆ ನಡೆಸಿದ ಪ್ರಯೋಗದಲ್ಲಿ ಯಶಸ್ಸು ಕಂಡ ಬಳಿಕ ಇಲಿಗಳ ಮೇಲೆ ಪೂಗಸಾರಂ ಬಳಸಿ ಪರೀಕ್ಷೆ ನಡೆಸಲಾಯಿತು. ಈ ಪ್ರಯೋಗದಲ್ಲಿ ಅಚ್ಚರಿಯ ಫಲಿತಾಂಶ ಲಭಿಸಿದೆ. ಸಂಶೋಧನೆಯ ವರದಿಯನ್ನು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವಿಜ್ಞಾನಿ ಡಾ. ಎಸ್. ಕೇಶವ ಭಟ್ ತಿಳಿಸಿದ್ದಾರೆ.
ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ (CPCRI) ನಡೆಸುತ್ತಿರುವ ಅಡಕೆ ಸಂಶೋಧನೆಗಳಿಗೂ ಈ ಅಧ್ಯಯನವು ಪೂರಕವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಂಗಳೂರು
Mangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್ಗಳು, ರೆಸ್ಟೋರೆಂಟ್ಗಳು, ಟೀ ಸ್ಟಾಲ್ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಮಂಗಳೂರು, ನ.23: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್ಗಳು, ರೆಸ್ಟೋರೆಂಟ್ಗಳು, ಟೀ ಸ್ಟಾಲ್ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಆದೇಶದ ಪ್ರಕಾರ, ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ವ್ಯಾಪಾರಿಕ ಸಂಸ್ಥೆಗಳು ಪ್ರತಿದಿನ ರಾತ್ರಿ 11:45ರಿಂದ ಮಾರನೇ ದಿನ ಬೆಳಗ್ಗೆ 5:30ರವರೆಗೆ ವ್ಯಾಪಾರ ವಹಿವಾಟು ನಡೆಸುವಂತಿಲ್ಲ. ಈ ನಿರ್ಬಂಧವು ಸಿಎಲ್-4, ಸಿಎಲ್-6(ಎ) ಹಾಗೂ ಸಿಎಲ್-7 ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ. ಅಂತಹ ಸಂಸ್ಥೆಗಳು ತಮ್ಮ ಪರವಾನಗಿಯಲ್ಲಿ ನಿಗದಿಪಡಿಸಿರುವ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಆಸ್ಪತ್ರೆಗಳು, ಔಷಧ ಅಂಗಡಿಗಳು, ತುರ್ತು ಸೇವೆಗಳು, ಅಗತ್ಯ ಸಾರ್ವಜನಿಕ ಉಪಯೋಗಿತಾ ಸೇವೆಗಳು ಹಾಗೂ ಸರಕಾರ ಅಥವಾ ಸಂಬಂಧಪಟ್ಟ ಪ್ರಾಧಿಕಾರಗಳಿಂದ ವಿಶೇಷ ಅನುಮತಿ ಪಡೆದ ಸಂಸ್ಥೆಗಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.
ನಿರ್ಬಂಧಕ್ಕೆ ಕಾರಣವೇನು?
ಮಂಗಳೂರು ನಗರವು ಕರಾವಳಿ ಕರ್ನಾಟಕದ ಪ್ರಮುಖ ವಾಣಿಜ್ಯ, ಶೈಕ್ಷಣಿಕ ಹಾಗೂ ಬಂದರು ನಗರವಾಗಿದ್ದು, ವಿವಿಧ ಧರ್ಮ, ಜಾತಿ ಮತ್ತು ಸಮುದಾಯಗಳ ಜನರು ಸಹಬಾಳ್ವೆಯಿಂದ ನೆಲೆಸಿರುವ ಕೋಮು ಸೂಕ್ಷ್ಮ ಪ್ರದೇಶವಾಗಿದೆ. ನಗರದ ಹಲವು ಭಾಗಗಳಲ್ಲಿ ತಡರಾತ್ರಿಯವರೆಗೂ, ಕೆಲವೆಡೆ ಬೆಳಗಿನ ಜಾವದವರೆಗೂ ವ್ಯಾಪಾರ ವಹಿವಾಟು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಮಾದಕ ವ್ಯಸನ ಹಾಗೂ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವುದು ಮತ್ತು ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ರಾತ್ರಿ ವೇಳೆ ಅನಗತ್ಯವಾಗಿ ಜನರು ಗುಂಪುಗೂಡುವುದು, ಓಡಾಟ ನಡೆಸುವುದು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಹರಡುವ ವದಂತಿಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿವೆ. ವ್ಯಾಪಾರ ಕೇಂದ್ರಗಳು ರಾತ್ರಿ ಪೂರ್ತಿ ತೆರೆದಿರುವುದರಿಂದ ಜನಸಂದಣಿ ಹೆಚ್ಚಾಗಿ ಅಹಿತಕರ ಘಟನೆಗಳಿಗೆ ಕಾರಣವಾಗುವ ಅಪಾಯವೂ ಇದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಇದಲ್ಲದೆ, ರಾತ್ರಿ ವೇಳೆ ಅಂಗಡಿಗಳು, ಹೋಟೆಲ್ಗಳು ಹಾಗೂ ಇತರ ವ್ಯಾಪಾರ ಕೇಂದ್ರಗಳ ಸುತ್ತಮುತ್ತ ಮಾದಕ ವ್ಯಸನಿಗಳು, ಸಮಾಜಘಾತಕ ವ್ಯಕ್ತಿಗಳು ಮತ್ತು ಅನುಮಾನಾಸ್ಪದ ವ್ಯಕ್ತಿಗಳು ಅನಗತ್ಯವಾಗಿ ಓಡಾಡುವುದು, ಕಾಲಹರಣ ಮಾಡುವುದು ಕಂಡುಬರುತ್ತಿದ್ದು, ಇಂತಹ ಪರಿಸ್ಥಿತಿಗಳು ಅಪರಾಧ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
ವ್ಯಾಪಾರ ಕೇಂದ್ರಗಳ ಸುತ್ತ ವಾಹನಗಳ ನಿಲುಗಡೆ, ಜೋರಾದ ಶಬ್ದ, ರಸ್ತೆಗಳಲ್ಲಿ ಅನಗತ್ಯ ಗುಂಪುಗೂಡುವಿಕೆಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ವಿಶೇಷವಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಹಾಗೂ ವಸತಿ ಪ್ರದೇಶಗಳ ನಿವಾಸಿಗಳ ನೆಮ್ಮದಿ ಮತ್ತು ಶಾಂತಿಗೆ ಭಂಗ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ವಹಿವಾಟಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಅಪರಾಧ
Mangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
ಮಂಗಳೂರು ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು: ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು ಸರ್ಕೀಟ್ ಹೌಸ್ ಮುಂಭಾಗದ ಕದ್ರಿ ಯುದ್ಧ ಸ್ಮಾರಕದ ಬಳಿ 1971ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾಗವಹಿಸಿದ್ದ ಟಿ-55 ಯುದ್ಧ ಟ್ಯಾಂಕ್ನ್ನು ಸಾರ್ವಜನಿಕರ ವೀಕ್ಷಣೆಗಾಗಿ ಎತ್ತರದ ವೇದಿಕೆಯಲ್ಲಿ ಇರಿಸಲಾಗಿದೆ.
ರಾತ್ರಿ ವೇಳೆ ಇಬ್ಬರು ಯುವಕರು ಟ್ಯಾಂಕ್ ಮೇಲೆ ಹತ್ತಿ, ಅದರ ಹ್ಯಾಚ್ ತೆರೆದು ಒಳಗೆ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ತಮ್ಮ ಕಿಡಿಗೇಡಿತನದ ವರ್ತನೆಯನ್ನು ವಿಡಿಯೋ ಮಾಡಿಕೊಂಡಿರುವ ಯುವಕರು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ.
ದೇಶದ ಯುದ್ಧ ಇತಿಹಾಸ ಹಾಗೂ ಸೈನಿಕರ ಶೌರ್ಯ, ತ್ಯಾಗದ ಸಂಕೇತವಾಗಿ ಇರಿಸಲಾಗಿರುವ ಟ್ಯಾಂಕ್ ಬಳಿ ಯುವಕರು ಇಂತಹ ವರ್ತನೆ ತೋರಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
ಅಪರಾಧ16 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್14 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ14 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು15 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ನಿಧನ ವಾರ್ತೆ10 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ15 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಮಂಗಳೂರು16 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಸ್ಥಳೀಯ15 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು















