ಕ್ರೀಡೆ
Ind Vs SriLanka T-20: ರಿಂಕ್ ಸಿಂಗ್, ಸೂರ್ಯ ಬೌಲಿಂಗ್ ಕಮಾಲ್ – ರಣ ರೋಚಕ ಪಂದ್ಯ ಗೆದ್ದ ಟೀಮ್ ಇಂಡಿಯಾ – ಗೆಲ್ಲುವ ಪಂದ್ಯ ಸೋತ ಶ್ರೀಲಂಕಾ ! ಸರಣಿ ಕ್ಲೀನ್ ಸ್ವೀಪ್

ಗುರಿ ಬೆನ್ನು ಹತ್ತಿದ್ದ ಶ್ರೀಲಂಕಾ ಒಂದು ಹಂತದಲ್ಲಿ 3 ವಿಕೆಟ್ ನಷ್ಟಕ್ಕೆ 117 ರನ್ ಗಳಿಸಿತ್ತು . ಹೀಗಾಗಿ ಶ್ರೀಲಂಕಾ ಈ ಪಂದ್ಯವನ್ನು ಗೆಲ್ಲುವುದು ಖಚಿತ ಎಂದೇ ಎಲ್ಲರು ಭಾವಿಸಿದ್ದರು. . ಆದರೆ ಬಳಿಕ ಪಾರಮ್ಯ ಮೆರೆದ ಭಾರತೀಯ ಬೌಲರ್ ಗಳು ಇನ್ನಿಲ್ಲದಂತೆ ಶ್ರೀಲಂಕಾ ದಾಂಡಿಗರನ್ನು ಕಾಡಿದರು. ನಿಸ್ಸಾಂಕಾ 26 ರನ್, ಕುಸಾಲ್ ಮೆಂಡಿಸ್ 43 ರನ್ ಮತ್ತು ಕುಸಾಲ್ ಪೆರೆರಾ 46 ರನ್ ಗಳಿಸಿ ಲಂಕಾ ತಂಡವನ್ನು ಗೆಲುವಿನತ್ತ ನಡೆಸಿದ್ದರು.
ಪಳ್ಳೆಕೆಲೆ: 3ನೇ ಟಿ20 ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡ ಸೂಪರ್ ಓವರ್ ನಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಜಯ ಭರ್ಜರಿಯಾಗಿ ಗುರಿ ಬೆನ್ನಟ್ಟುತ್ತಿದ್ದ ಶ್ರೀಲಂಕಾ ತಂಡಕ್ಕೆ , ಕೊನೆಯ ಎರಡು ಓವರ್ ಎಸೆದ ಟೀಮ್ ಇಂಡಿಯಾದ ಅರೆಕಾಲಿಕ ಬೌಲರ್ ಗಳಾದ ಸೂರ್ಯ ಕುಮಾರ್ ಯಾದವ್ ಮತ್ತು ರಿಂಕು ಸಿಂಗ್ ಶಾಕ್ ನೀಡಿ ಪಂದ್ಯವನ್ನು ಭಾರತದತ್ತ ತಿರುಗಿಸಿದ್ದು ಅಸಾಧರಣ ಸಾದನೆ ಮೆರೆದರು.
ಪಳ್ಳೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 3ನೇ ಟಿ20 ಪಂದ್ಯದಲ್ಲಿ ಕೊನೆಯ 12 ಎಸೆತಗಳಲ್ಲಿ ಶ್ರೀಲಂಕಾಕ್ಕೆ ಕೇವಲ 9 ರನ್ ಬೇಕಿತ್ತು. 5 ವಿಕೆಟ್ ಕೈಯಲ್ಲಿತ್ತು. ಆದರೇ ಭಾರತದ ಪಾರ್ಟ್ ಟೈಮ್ ಬೌಲರ್ ಗಳಾದ ರಿಂಕ್ ಹಾಗೂ ಸೂರ್ಯ ಕೇವಲ 8 ರನ್ ಬಿಟ್ಟು ಕೊಟ್ಟು 4 ವಿಕೆಟ್ ಉರುಳಿಸುವ ಮೂಲಕ ಪಂದ್ಯವನ್ನು ಟೈ ಮಾಡಿಸಿದರು.
ಸೂಪರ್ ಓವರ್ʼನಲ್ಲಿ ಏನಾಯಿತು ?
ಸೂಪರ್ ಓವರ್ನಲ್ಲಿ ಕರಾರುವಕ್ಕಾದ ಬೌಲಿಂಗ್ ಮಾಡಿದ ವಾಷಿಂಗ್ಟನ್ ಸುಂದರ್ 2 ಮತ್ತು 3ನೇ ಎಸೆತಗಳಲ್ಲಿ ಸತತ 2 ವಿಕೆಟ್ ಗಳಿಸಿ ಶ್ರೀಲಂಕಾ ತಂಡವನ್ನು ಕೇವಲ 2 ರನ್ ಗೆ ಆಲೌಟ್ ಮಾಡಿದರು. 3ರನ್ ಗಳ ಸಣ್ಣ ಟಾರ್ಗೆಟ್ ಬೆನ್ನತ್ತಿದ್ದ ಟೀಮ್ ಇಂಡಿಯಾದ ಕ್ಯಾಪ್ಟನ್ ಸೂರ್ಯ ಕುಮಾರ್ ಯಾದವ್ ತಾವು ಎದುರಿಸಿದ ಮೊದಲ ಎಸೆತದಲ್ಲೇ ಬೌಂಡರಿ ಹೊಡೆದು ಭಾರತಕ್ಕೆ ಭರ್ಜರಿ ಜಯ ತಂದಿತ್ತರು.
ಭಾರತದ ಇನ್ನಿಂಗ್ಸ್
ಟಾಸ್ ಸೋತು ಬ್ಯಾಟಿಂಗ್ ಇಳಿದ ಭಾರತದ ದಾಂಡಿಗರ ವಿರುದ್ದ ಟೂರ್ನಿಯಲ್ಲಿ ಮೊದಲ ಬಾರಿ ಪಾರಮ್ಯ ಮೆರೆದ ಲಂಕಾ ಬೌಲರ್ ಗಳು ನಿಯಮಿತವಾಗಿ ವಿಕೆಟ್ ಪಡೆದು ಭಾರತದ ರನ್ ವೇಗಕ್ಕೆ ಕಡಿವಾಣ ಹಾಕಿದರು. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 10 ರನ್ ಗಳಿಸಿ ಔಟಾದರೆ, ಸಂಜು ಸ್ಯಾಮ್ಸನ್ ಸತತ ಎರಡನೇ ಶೂನ್ಯ ಸುತ್ತಿದರು. ರಿಂಕು ಸಿಂಗ್ ರನ್ ಗಳಿಕೆ ಕೇವಲ 1 ರನ್ , ನಾಯಕ ಸೂರ್ಯ ಕುಮಾರ್ ಯಾದವ್ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ಆದರೆ ಶುಭ್ ಮನ್ ಗಿಲ್ (39 ರನ್), ಕೆಳ ಕ್ರಮಾಂಕದಲ್ಲಿ ರಿಯಾನ್ ಪರಾಗ್ (26 ರನ್) ಮತ್ತು ವಾಷಿಂಗ್ಟನ್ ಸುಂದರ್ (25 ರನ್) ಅಮೂಲ್ಯ ರನ್ ಗಳನ್ನು ಕಲೆಹಾಕಿ ಭಾರತ ಗಳಿಕೆ ನೂರರ ಗಡಿ ದಾಟುವಂತೆ ನೋಡಿಕೊಂಡರು. ಅಂತಿಮವಾಗಿ ಭಾರತ ನಿಗಧಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳನ್ನು ಗಳಿಸಿತು.
ಶ್ರೀಲಂಕಾ ಪರ ಮಹೀಶಾ ತೀಕ್ಷ್ಣ 3 ವಿಕೆಟ್ ಪಡೆದರೆ, ಹಸರಂಗ 2 ವಿಕೆಟ್ ಪಡೆದರು. ವಿಕ್ರಮ ಸಂಘೆ, ಫರ್ನಾಂಡೋ ಮತ್ತು ಮೆಂಡಿಸ್ ತಲಾ ಒಂದು ವಿಕೆಟ್ ಪಡೆದರು.
ಶ್ರೀಲಂಕಾ ಇನ್ನಿಂಗ್ಸ್
ಗುರಿ ಬೆನ್ನು ಹತ್ತಿದ್ದ ಶ್ರೀಲಂಕಾ ಒಂದು ಹಂತದಲ್ಲಿ 3 ವಿಕೆಟ್ ನಷ್ಟಕ್ಕೆ 117 ರನ್ ಗಳಿಸಿತ್ತು . ಹೀಗಾಗಿ ಶ್ರೀಲಂಕಾ ಈ ಪಂದ್ಯವನ್ನು ಗೆಲ್ಲುವುದು ಖಚಿತ ಎಂದೇ ಎಲ್ಲರು ಭಾವಿಸಿದ್ದರು. . ಆದರೆ ಬಳಿಕ ಪಾರಮ್ಯ ಮೆರೆದ ಭಾರತೀಯ ಬೌಲರ್ ಗಳು ಇನ್ನಿಲ್ಲದಂತೆ ಶ್ರೀಲಂಕಾ ದಾಂಡಿಗರನ್ನು ಕಾಡಿದರು. ನಿಸ್ಸಾಂಕಾ 26 ರನ್, ಕುಸಾಲ್ ಮೆಂಡಿಸ್ 43 ರನ್ ಮತ್ತು ಕುಸಾಲ್ ಪೆರೆರಾ 46 ರನ್ ಗಳಿಸಿ ಲಂಕಾ ತಂಡವನ್ನು ಗೆಲುವಿನತ್ತ ನಡೆಸಿದ್ದರು.
ಆದರೆ ಈ ಮೂರು ವಿಕೆಟ್ ಪತನವಾಗುತ್ತಿದ್ದಂತೆಯೇ ಶ್ರೀಲಂಕಾ ತಂಡದ ಬ್ಯಾಟರ್ ಗಳ ಪೆವಿಲಿಯನ್ ಪರೇಡ್ ಆರಂಭವಾಯಿತು. ನಾಯಕ ಅಸಲಂಕಾ ಸೇರಿದಂತೆ ಎಲ್ಲ ಆಟಗಾರರೂ ಬಂದಷ್ಟೇ ವೇಗವಾಗಿ ಒಂದಂಕಿ ಮೊತ್ತಕ್ಕೆ ಪೆವಿಲಿಯನ್ ಸೇರಿಕೊಂಡರು. ಅಂತಿಮವಾಗಿ ಶ್ರೀಲಂಕಾ ತಂಡ 20 ಓವರ್ ನಲ್ಲಿ 137 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಗಿ ಪಂದ್ಯವನ್ನು ಟೈ ಮಾಡಿಕೊಂಡಿತು.
ಸೂರ್ಯ, ರಿಂಕು ಸಿಂಗ್ ಅಮೋಘ ಬೌಲಿಂಗ್
ಇನ್ನು ಈ ಪಂದ್ಯ ಬಹುತೇಕ ಶ್ರೀಲಂಕಾ ಪರ ವಾಲಿತ್ತು. ಈ ಹಂತದಲ್ಲಿ ಭಾರತದ ಸೂರ್ಯ ಕುಮಾರ್ ಯಾದವ್ ಮತ್ತು ರಿಂಕು ಸಿಂಗ್ ಅದ್ಭುತ ಬೌಲಿಂಗ್ ಮಾಡಿ ಪಂದ್ಯದ ದಿಕ್ಕನ್ನೇ ಬದಲಿಸಿದರು. ಶ್ರೀಲಂಕಾ ತಂಡ ಗೆಲ್ಲಲು 12 ಎಸೆತದಲ್ಲಿ 9 ರನ್ ಬೇಕಿದ್ದಾಗ 18ನೇ ಓವರ್ ಎಸೆದ ರಿಂಕು ಸಿಂಗ್ ಅಕ್ಷರಶಃ ಮ್ಯಾಜಿಕ್ ಮಾಡಿದರು. ಈ ನಿರ್ಣಾಯಕ ಓವರ್ ನಲ್ಲಿ ರಿಂಕು 2 ವಿಕೆಟ್ ಪಡೆದು ಕೇವಲ 3ರನ್ ನೀಡಿ ಪಂದ್ಯವನ್ನು ಅಂತಿಮ ಓವರ್ ಗೆ ಕೊಂಡೊಯ್ದರು.
ಈ ಹಂತದಲ್ಲಿ ಅಂತಿಮ ಓವರ್ ಎಸೆಯಲು ಅನುಭವಿ ಬೌಲರ್ ಮಹಮದ್ ಸಿರಾಜ್ ಬರುತ್ತಾರೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ನಾಯಕ ಸೂರ್ಯ ಕುಮಾರ್ ಯಾದವ್ ತಾವೇ ಅಂತಿಮ ಓವರ್ ಎಸೆಯಲು ನಿರ್ದರಿಸಿದರು. ಅಲ್ಲದೆ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಅದ್ಭುತ ಬೌಲಿಂಗ್ ಮಾಡಿದರು.
ಅಂತಿಮ ಓವರ್ ನಲ್ಲಿ ಗೆಲ್ಲಲು ಕೇವಲ 6ರನ್ ಗಳ ಅವಶ್ಯಕತೆ ಇದ್ದಾಗ ಸೂರ್ಯ 2ನೇ ಎಸೆತದಲ್ಲಿ ಕಮಿಂಡು ಮೆಂಡಿಸ್ ಮತ್ತು 3ನೇ ಎಸೆತದಲ್ಲಿ ತೀಕ್ಷಣ ವಿಕೆಟ್ ಪಡೆದು ಭಾರತದ ಪಾಳಯದಲ್ಲಿ ಗೆಲುವಿನ ಆಸೆ ಚಿಗುರಿಸಿದರು. ಆದರೆ ಅಂತಿಮ ಎಸೆತದಲ್ಲಿ ವಿಕ್ರಮ ಸಿಂಘೆ 2ರನ್ ಗಳಿಸಿ ಪಂದ್ಯ ಟೈ ಮಾಡಿದರು.
ಈ ಜಯದೊಂದಿಗೆ ಭಾರತ 3 ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಅಲ್ಲದೆ ನಾಯಕರಾಗಿ ಸೂರ್ಯ ಕುಮಾರ್ ಯಾದವ್ ಗೆ ಮೊದಲ ಸರಣಿ ಜಯ ಮತ್ತು ಮೊದಲ ಕ್ಲೀನ್ ಸ್ವೀಪ್ ಜಯವಾಗಿದೆ. ಇನ್ನು ಸೂಪರ್ ಓವರ್ ನಲ್ಲಿ ಸೂಪರ್ ಬೌಲಿಂಗ್ ಮಾಡಿದ ವಾಷಿಂಗ್ಟನ್ ಸುಂದರ್ ಪಂದ್ಯ ಶ್ರೇಷ್ಟ ಪ್ರಶಸ್ತಿಗೆ ಭಾಜನಾರದರೆ, ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿದ ಭಾರತದ ನಾಯಕ ಸೂರ್ಯ ಕುಮಾರ್ ಯಾದವ್ ಸರಣಿ ಶ್ರೇಷ್ಟ ಪ್ರಶಸ್ತಿಗೆ ಭಾಜನರಾದರು.
India defeated Sri Lanka in the third T20I in the Super Over to complete a clean sweep of the series. India’s part-time bowlers Suryakumar Yadav and Rinku Singh bowled the last two overs to turn the game around India.
ಕ್ರೀಡೆ
IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.
ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.
ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.
ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.
10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2
ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.
2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.
ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.
ಅಂತರ ರಾಜ್ಯ
Mohammed Shami: ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ
ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.
ಹೊಸದಿಲ್ಲಿ: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.
‘ನಾನು ಬಿಳಿ ಜೆರ್ಸಿಗೆ ವಿದಾಯ ಹೇಳುತ್ತಿದ್ದೇನೆ. ಆದರೆ ಅದರೊಂದಿಗೆ ಬೆಸೆದುಕೊಂಡಿರುವ ನೆನಪುಗಳಿಗೆ ಎಂದಿಗೂ ವಿದಾಯ ಹೇಳುವುದಿಲ್ಲ’ ಎಂದು ಶಮಿ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಭಾರತದ ಟೆಸ್ಟ್ ಜೆರ್ಸಿಯನ್ನು ಮೊದಲ ಬಾರಿಗೆ ಧರಿಸಿದ ಕ್ಷಣವನ್ನು ನೆನಪಿಸಿಕೊಂಡಿರುವ ಅವರು, ‘ಮೊದಲ ಬಾರಿಗೆ ಭಾರತದ ಟೆಸ್ಟ್ ಜೆರ್ಸಿ ಧರಿಸಿದಾಗ ನನ್ನಲ್ಲಿದ್ದದ್ದು ಒಂದೇ ಕನಸು. ನನ್ನ ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬುದಾಗಿತ್ತು. ಅಂದಿನಿಂದ ಪ್ರತಿಯೊಂದು ವಿಕೆಟ್, ಪ್ರತಿಯೊಂದು ಹೋರಾಟ, ಪ್ರತಿಯೊಂದು ಗಾಯ ಹಾಗೂ ಪ್ರತಿಯೊಂದು ಪುನರಾಗಮನವೂ ನನಗೆ ಹೊಸ ಪಾಠ ಕಲಿಸಿದೆ’ ಎಂದು ಬರೆದುಕೊಂಡಿದ್ದಾರೆ.
ಟೆಸ್ಟ್ ಕ್ರಿಕೆಟ್ ನನ್ನ ಜೀವನದ ವಿಶೇಷ ಭಾಗವಾಗಿತ್ತು
‘ನನ್ನ ಪಾಲಿಗೆ ಟೆಸ್ಟ್ ಕ್ರಿಕೆಟ್ ಕೇವಲ ಒಂದು ಮಾದರಿಯಾಗಿರಲಿಲ್ಲ. ಅದು ನನ್ನ ಜೀವನದ ಅತ್ಯಂತ ವಿಶೇಷ ಭಾಗವಾಗಿತ್ತು. ಇಂದು ಭಾರವಾದ ಹೃದಯ ಹಾಗೂ ಅಸಂಖ್ಯಾತ ಸುಂದರ ನೆನಪುಗಳೊಂದಿಗೆ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ’ ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ತಮ್ಮ ಕ್ರಿಕೆಟ್ ಪಯಣದಲ್ಲಿ ಬೆಂಬಲವಾಗಿ ನಿಂತ ಸಹ ಆಟಗಾರರು, ತರಬೇತುದಾರರು ಹಾಗೂ ಕುಟುಂಬ ಸದಸ್ಯರಿಗೆ ಶಮಿ ಹೃದಯಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ. ಒಳ್ಳೆಯ ಹಾಗೂ ಕಷ್ಟದ ಸಮಯಗಳಲ್ಲೂ ತಮ್ಮ ಮೇಲೆ ನಂಬಿಕೆ ಇಟ್ಟ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.
ತಮ್ಮ ಪ್ರತಿಭೆಯನ್ನು ಗುರುತಿಸಿ, ಬೆಳೆಯಲು ಅವಕಾಶ ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (ಸಿಎಬಿ) ಸಂಸ್ಥೆಗಳಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂಸ್ಥೆಗಳು ನೀಡಿದ ಬೆಂಬಲ ಹಾಗೂ ವಿಶ್ವಾಸ ಸದಾ ತಮ್ಮ ಪಾಲಿಗೆ ವಿಶೇಷವಾಗಿರಲಿದೆ ಎಂದು ಹೇಳಿದ್ದಾರೆ.
ಸ್ಥಳೀಯ
Shrikrishna-ಗ್ವಾಲಿಯರ್ನಲ್ಲಿ ಮಿಂಚಿದ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿ; ರಾಷ್ಟ್ರಮಟ್ಟದ ವಾಲಿಬಾಲ್ನಲ್ಲಿ ದ್ವಿತೀಯ ಸ್ಥಾನ
ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದ ವಿದ್ಯಾಭಾರತಿಯ 33ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಸಾಥ್ವಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ಪಟ್ಟೆ ಬಡಗನ್ನೂರು: ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದ ವಿದ್ಯಾಭಾರತಿಯ 33ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಸಾಥ್ವಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
17 ವರ್ಷ ವಯೋಮಾನದ ವಿಭಾಗದಲ್ಲಿ ಕರ್ನಾಟಕ ದಕ್ಷಿಣ ಮಧ್ಯ ಕ್ಷೇತ್ರ ತಂಡವನ್ನು ಪ್ರತಿನಿಧಿಸಿದ ಸಾಥ್ವಿ, ತಂಡದೊಂದಿಗೆ ಸ್ಪರ್ಧಿಸಿ ಈ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಹಾಗೂ ಸಾಥ್ವಿ ಅವರನ್ನು ಪಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷರು, ಸರ್ವ ಸದಸ್ಯರು, ಶಾಲೆಯ ಮುಖ್ಯಗುರುಗಳು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.
-
ಬಿಗ್ ನ್ಯೂಸ್24 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್16 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ21 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು24 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized23 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್24 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ22 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್23 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















