Connect with us

ಮಂಗಳೂರು

Kali Yogesh-ಪುತ್ತೂರು, ಮಂಗಳೂರು ಸಹಿತ ಹಲವೆಡೆ ಶೂಟೌಟ್ ನಡೆಸಿದ್ದ ಭೂಗತ ಡಾನ್ ಕಲಿ ಯೋಗೀಶನ ಸಹಚರರು ಅಂದರ್

Published

on

Ad Widget

Ad Widget

Ad Widget

Ad Widget

ಪುತ್ತೂರು, ಮಂಗಳೂರು ಹಾಗೂ ಕಾಸರಗೋಡಿನಲ್ಲಿ ಶೂಟೌಟ್ ನಡೆಸಿದ ನಟೋರಿಯಸ್ ಕ್ರಿಮಿನಲ್ ಹಾಗೂ ವಿವಿಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವ ಆತನ ಸಹಚರನನ್ನು ಜು 30 ರಂದು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಭೂಗತ ಪಾತಕಿ ಕಲಿ ಯೋಗೀಶನ ಸಹಚರರಾದ ಪೈವಳಿಕೆಯ ಹನೀಫ್ ಯಾನೆ ಅಲಿ ಮುನ್ನಾ (40) ಮತ್ತು ಮುಡಿಪು ಕುಕ್ಕುದಕಟ್ಟೆಯ ರಫೀಕ್ ಯಾನೆ ಮುಡಿಪು ರಫೀಕ್ (36) ಬಂಧಿತ ಆರೋಪಿಗಳು. ಮೊಹಮ್ಮದ್ ಹನೀಫ್ ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ ಕುರುಡಪದವು ನಿವಾಸಿಯಾಗಿದ್ದು, ಮೊಹಮ್ಮದ್ ರಫೀಕ್ ಕೋಣಾಜೆ ಬಳಿಯ ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ನಿವಾಸಿ. ಸದ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನೆಲೆಸಿದ್ದ ಬಂಧಿತರ ಬಳಿ ಪಿಸ್ತೂಲ್-1, ರಿವಾಲ್ವರ್-1, 12 ಸಜೀವ ಮದ್ದುಗುಂಡುಗಳು, 42 ಗ್ರಾಂ ಮಾದಕ ವಸ್ತು ಎಂಡಿಎಂಎ, ಇನ್ನೋವಾ ಕಾರು ಹಾಗೂ 3 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪಕ ದೊರೆತಿದೆ. ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಬಂಧನ ಏತಕ್ಕಾಗಿ ?
ಮಂಗಳೂರಿನಲ್ಲಿರುವ ಸೌರಾಷ್ಟ್ರ ಬಟ್ಟೆ ಮಳಿಗೆಯ ಮಾಲೀಕರಿಗೆ ಹಪ್ತಾಕ್ಕಾಗಿ ಬೆದರಿಕೆ ಒಡ್ಡಿದ್ದ ಬಗ್ಗೆ ವ್ಯಾಪಾರಿ ಯಶವಂತ ರಾವಲ್ ಬಂದರು ಠಾಣೆಗೆ ದೂರು ನೀಡಿದ್ದರು . ಆರೋಪಿಗಳಲ್ಲಿ ಒಬ್ಬನಾದ ಮೊಹಮ್ಮದ್ ರಫೀಕ್ ಜುಲೈ 21ರಂದು ಬೆಳಗ್ಗೆ ಶಟರ್ ಓಪನ್ ಮಾಡುತ್ತಿದ್ದ ವೇಳೆ ಹಂಪನಕಟ್ಟೆಯಲ್ಲಿರುವ ಸೌರಾಷ್ಟ್ರ ಕ್ಲೋತ್ ಸ್ಟೋರ್ ಅಂಗಡಿಗೆ ನುಗ್ಗಿ ಕಲಿ ಯೋಗೀಶ ಫೋನ್ ಮಾಡಿದರೂ ರಿಸೀವ್ ಮಾಡಿಲ್ಲ ಯಾಕೆ ? ಎಂದು ಪ್ರಶ್ಣಿಸಿದ್ದಾನೆ . ಬಳಿಕ “ ಹಫ್ತಾ ನೀಡದಿದ್ದರೆ ಜೀವ ಉಳಿಸಲ್ಲ ಎಂದು ಬೆದರಿಕೆ ಹಾಕಿದ್ದ. ಸಿಸಿಟಿವಿ ಪರಿಶೀಲಿಸಿದಾಗ, ನಿರಂತರವಾಗಿ ಕ್ರಿಮಿನಲ್‌ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಮೊಹಮ್ಮದ್ ರಫೀಕ್ ಗುರುತು ಪೊಲೀಸರಿಗೆ ಸಿಕ್ಕಿತ್ತು.
ಮಂಗಳವಾರ ಸಿಸಿಬಿ ಪೊಲೀಸರಿಗೆ ಮಂಗಳೂರು ನಗರದಲ್ಲಿ ಅಪರಾಧ ಕೃತ್ಯ ನಡೆಸಲು ಸಂಚು ರೂಪಿಸಿ ಇನ್ನೋವಾ ಕಾರಿನಲ್ಲಿ ತಿರುಗಾಡಿಕೊಂಡಿದ ಇಬ್ಬರ ಬಗ್ಗೆ ಮಾಹಿತಿ ಸಿಕ್ಕಿದೆ. ತಕ್ಷಣ ಕಾರ್ಯ ಪ್ರವೃತ್ತರಾದ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

Ad Widget

Ad Widget <> Ad Widget

ಆರೋಪಿಗಳ ಪೈಕಿ ಹನೀಫ್ ಈ ಹಿಂದೆ ಮಂಗಳೂರು ನಗರದ ಸಂಜೀವ ಶೆಟ್ಟಿ ಬಟ್ಟೆ ಅಂಗಡಿಯಲ್ಲಿ ಶೂಟೌಟ್ ನಡೆಸಿದ ಪ್ರಕರಣ, ಪುತ್ತೂರು ರಾಜಧಾನಿ ಜುವೆಲ್ಲರಿ ಶೂಟೌಟ್ ಪ್ರಕರಣ, ಕಾಸರಗೋಡು ಜಿಲ್ಲೆಯ ಬೇವಿಂಜೆಯ ಪಿಡಬ್ಲೂಡಿ ಕಂಟ್ರಾಕ್ಟರ್ ಮನೆಗೆ ಶೂಟೌಟ್ ನಡೆಸಿದ ಪ್ರಕರಣ ಸಹಿತ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಈತನ ವಿರುದ್ಧ ಮಂಗಳೂರು ಉತ್ತರ, ಬರ್ಕೆ, ಉಳ್ಳಾಲ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ವಾರಂಟ್ ಜ್ಯಾರಿಯಲ್ಲಿರುತ್ತದೆ.

ಇನ್ನೋರ್ವ ಆರೋಪಿ ಮುಡಿವು ರಫೀಕ್ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮಹಿಳಾ ಠಾಣೆಯಲ್ಲಿ ಪೋಸ್ಕೋ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ದರೋಡೆಗೆ ಸಂಚು ರೂಪಿಸಿದ ಪ್ರಕರಣ, ಕೊಣಾಜೆ ಠಾಣೆಯಲ್ಲಿ ಅಪಹರಣ ಪ್ರಕರಣ, ದೇವಸ್ಥಾನ ಕಳವು ಪ್ರಕರಣ ಹಾಗೂ ಹಲ್ಲೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸರ್ ಠಾಣೆಯಲ್ಲಿ ಕಳವು ಪ್ರಕರಣ ಹಾಗೂ ಕೇರಳದ ಮಂಜೇಶ್ವರ, ಕಣ್ಣೂರು ನಗರ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣ ಹೀಗೆ ಒಟ್ಟು 9 ಪ್ರಕರಣಗಳು ದಾಖಲಾಗಿರುತ್ತದೆ.

Ad Widget

Ad Widget

ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಗೀತಾ ಡಿ ಕುಲಕರ್ಣಿ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಎಚ್ ಎಂ. ಸಿಸಿಬಿ ಪಿಎಸ್ಐ ಯವರಾದ ನರೇಂದ್ರ, ಶರಣಪ್ಪ ಭಂಡಾರಿ, ಹರೀಶ್ ಪದವಿನಂಗಡಿ, ಎಎಸ್ಐ ಮೋಹನ್ ಕೆ ವಿ. ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿ ಪಾಲ್ಗೊಂಡಿದ್ದರು.

Ad Widget
Click to comment

Leave a Reply

ಅಪರಾಧ

Mangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್‌ಐ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ ಹಾಗೂ 73 ಲಕ್ಷ ರೂ. ನಗದು ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget alt="Ad Widget"/>

Ad Widget

ಬಂಧಿತ ಇಬ್ಬರು ಸಿಬ್ಬಂದಿಯಲ್ಲಿ ಒಬ್ಬರು ಮಂಗಳೂರು ಮೂಲದವರಾಗಿದ್ದು, ಮತ್ತೊಬ್ಬರು ಕಾಸರಗೋಡು ಮೂಲದವರು ಎಂದು ತಿಳಿದುಬಂದಿದೆ. ದುಬೈ ಹಾಗೂ ಕೇರಳ ಮೂಲದ ಚಿನ್ನ ಕಳ್ಳಸಾಗಣೆ ಜಾಲದೊಂದಿಗೆ ಸಂಪರ್ಕ ಹೊಂದಿ ಅಕ್ರಮ ಚಿನ್ನ ಸಾಗಾಟಕ್ಕೆ ನೆರವಾಗುತ್ತಿದ್ದ ಆರೋಪ ಇವರ ಮೇಲಿದೆ.

Ad Widget

Ad Widget <> Ad Widget

ವ್ಯವಸ್ಥಿತವಾಗಿ ನಡೆಯುತ್ತಿದ್ದ ಕಳ್ಳಸಾಗಣೆ
ದುಬೈ ಸೇರಿದಂತೆ ವಿದೇಶಗಳಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರು, ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಲ್ಲಿ ಚಿನ್ನವನ್ನು ಅಡಗಿಸಿಟ್ಟು ತೆರಳುತ್ತಿದ್ದರು ಎನ್ನಲಾಗಿದೆ. ಬಳಿಕ ಈ ಮಾಹಿತಿಯನ್ನು ಜಾಲದ ಸಂಪರ್ಕದಲ್ಲಿದ್ದ ವಿಮಾನ ನಿಲ್ದಾಣದ ಸಿಬ್ಬಂದಿಗೆ ತಲುಪಿಸಲಾಗುತ್ತಿತ್ತು. ವಿಮಾನಗಳ ನಿರ್ವಹಣಾ ಕಾರ್ಯ ಮುಗಿದ ಬಳಿಕ ಸಿಬ್ಬಂದಿ ಶೌಚಾಲಯಕ್ಕೆ ತೆರಳಿ, ಅಲ್ಲಿ ಅಡಗಿಸಿಟ್ಟ ಚಿನ್ನವನ್ನು ಹೊರತೆಗೆದು ತಮ್ಮ ಸಂಪರ್ಕದಲ್ಲಿದ್ದ ಕಳ್ಳಸಾಗಣೆದಾರರಿಗೆ ಹಸ್ತಾಂತರಿಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಖಚಿತ ಮಾಹಿತಿಯ ಮೇರೆಗೆ ಡಿಆರ್‌ಐ ಅಧಿಕಾರಿಗಳು ಆರೋಪಿಗಳ ಮೇಲೆ ನಿಗಾ ಇರಿಸಿದ್ದರು. ಅದರಂತೆ ನ. 23ರಂದು ಇಮಿಗ್ರೇಷನ್ ಕೌಂಟರ್ ಬಳಿಯ ಶೌಚಾಲಯದಿಂದ ಚಿನ್ನದ ಪೇಸ್ಟ್ ರೂಪದ ಎರಡು ಪ್ಯಾಕ್‌ಗಳನ್ನು ಹೊರತೆಗೆಯುತ್ತಿದ್ದ ಮಂಗಳೂರು ಮೂಲದ ಸಿಬ್ಬಂದಿಯನ್ನು ಅಧಿಕಾರಿಗಳು ಹಿಡಿದಿದ್ದಾರೆ.

Ad Widget

Ad Widget

ಈ ಚಿನ್ನವನ್ನು ಆತ ಕಾಸರಗೋಡು ಮೂಲದ ಮತ್ತೊಬ್ಬ ಸಿಬ್ಬಂದಿಗೆ ಹಸ್ತಾಂತರಿಸಬೇಕಿತ್ತು. ಬಳಿಕ ಆ ಸಿಬ್ಬಂದಿ ವಿಮಾನ ನಿಲ್ದಾಣದಿಂದ ಸುಮಾರು ಎರಡು ಕಿ.ಮೀ. ದೂರದಲ್ಲಿರುವ ಸ್ಥಳಕ್ಕೆ ಚಿನ್ನವನ್ನು ಕೊಂಡೊಯ್ದು ಜಾಲದ ಮೂರನೇ ವ್ಯಕ್ತಿಗೆ ತಲುಪಿಸಲು ಯೋಜಿಸಿದ್ದ ಎನ್ನಲಾಗಿದೆ. ಅಧಿಕಾರಿಗಳು ತ್ವರಿತ ಕಾರ್ಯಾಚರಣೆ ನಡೆಸಿ ಉಳಿದ ಇಬ್ಬರನ್ನೂ ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ. ಮೌಲ್ಯದ 1.65 ಕೆ.ಜಿ. ಚಿನ್ನ, 73 ಲಕ್ಷ ರೂ. ನಗದು, ಒಂದು ಕಾರು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಡಿ. 7ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.

ಇದಕ್ಕೂ ಮೊದಲು 1.77 ಕೋಟಿ ರೂ. ಮೌಲ್ಯದ ಚಿನ್ನ ವಶ
ಇದಕ್ಕೂ ಮುನ್ನ ನ. 14ರಂದು ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ಕಾಸರಗೋಡು ಮೂಲದ ಇಬ್ಬರು ಪ್ರಯಾಣಿಕರು ದೇಹದೊಳಗೆ ಚಿನ್ನವನ್ನು ಅಡಗಿಸಿಕೊಂಡು ಸಾಗಿಸುತ್ತಿದ್ದ ವೇಳೆ ಡಿಆರ್‌ಐ ಅಧಿಕಾರಿಗಳ ವಶಕ್ಕೆ ಸಿಕ್ಕಿದ್ದರು. ಅವರಿಂದ ಸುಮಾರು 1.77 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಿಖೆಯ ಹಿತದೃಷ್ಟಿಯಿಂದ ಬಂಧಿತ ಆರೋಪಿಗಳ ಹೆಸರುಗಳನ್ನು ಅಧಿಕಾರಿಗಳು ಬಹಿರಂಗಪಡಿಸಿಲ್ಲ.

Ad Widget
Continue Reading

ನಿಧನ ವಾರ್ತೆ

ಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು

Published

on

Ad Widget

Ad Widget

Ad Widget

Ad Widget

ರಾಷ್ಟ್ರೀಯ ಹೆದ್ದಾರಿ-66ರ ಪಂಪ್‌ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಪಂಪ್‌ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

Ad Widget alt="Ad Widget"/>

Ad Widget

ನ. 14ರಂದು ಬೆಳಗ್ಗೆ ಜ್ಯೋತಿ ಹಾಗೂ ಅವರ ಸಂಬಂಧಿ ನಂದಿನಿ (19) ಗೋರಿಗುಡ್ಡ ಬಳಿ ರಸ್ತೆ ವಿಭಜಕ ದಾಟಿ ನಡೆದುಕೊಂಡು ಹೋಗುತ್ತಿದ್ದ ವೇಳೆ ತೊಕ್ಕೊಟ್ಟು ಕಡೆಯಿಂದ ನಂತೂರು ಕಡೆಗೆ ಸಂಚರಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಇಬ್ಬರೂ ಗಾಯಗೊಂಡಿದ್ದು, ಬೈಕ್‌ನಲ್ಲಿದ್ದವರಿಗೂ ಗಾಯಗಳಾಗಿದ್ದವು. ಗಂಭೀರ ಗಾಯಗೊಂಡಿದ್ದ ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Ad Widget

Ad Widget <> Ad Widget

ಜ್ಯೋತಿ ನಗರದ ಖಾಸಗಿ ಕಾಲೇಜೊಂದರಲ್ಲಿ ಜಿಎನ್‌ಎಂ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು.

ಮೂಲತಃ ಚಿಕ್ಕಮಗಳೂರಿನ ಶಿಳ್ಳೆಕ್ಯಾತ ಅಲೆಮಾರಿ ಸಮುದಾಯಕ್ಕೆ ಸೇರಿದ ಜ್ಯೋತಿಯ ಕುಟುಂಬ ಹಲವು ವರ್ಷಗಳಿಂದ ಮಂಗಳೂರಿನ ಕಣ್ಣೂರಿನಲ್ಲಿ ವಾಸವಾಗಿತ್ತು. ನೇತ್ರಾವತಿ ನದಿಯಲ್ಲಿ ತೆಪ್ಪದ ಮೂಲಕ ಮೀನು ಹಿಡಿಯುವ ವೃತ್ತಿಯನ್ನು ಕುಟುಂಬ ನಡೆಸುತ್ತಿತ್ತು. ಕುಟುಂಬದ ಹಿರಿಯ ಮಗಳಾಗಿದ್ದ ಜ್ಯೋತಿ ತಂದೆ, ತಾಯಿ, ಇಬ್ಬರು ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Ad Widget

Ad Widget

ಕಮರಿದ ಕುಟುಂಬಕ್ಕೆ ಆಧಾರವಾಗುವ ಕನಸು
ಕಷ್ಟದ ಪರಿಸ್ಥಿತಿಯಲ್ಲಿ ಬೆಳೆದು ಬಂದಿದ್ದ ಜ್ಯೋತಿ ನರ್ಸ್ ಆಗಿ ಕುಟುಂಬಕ್ಕೆ ಆಸರೆಯಾಗಬೇಕೆಂಬ ಕನಸು ಕಂಡಿದ್ದರು. ಆದರೆ, ರಸ್ತೆ ಅಪಘಾತ ಆಕೆಯ ಕನಸನ್ನು ನುಚ್ಚುನೂರಾಗಿಸಿದ್ದು, ಕುಟುಂಬಸ್ಥರು ದುಃಖದಲ್ಲಿ ಮುಳುಗಿದ್ದಾರೆ.

Ad Widget
Continue Reading

ಮಂಗಳೂರು

Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್‌ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ

Published

on

Ad Widget

Ad Widget

Ad Widget

Ad Widget

ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಮಂಗಳೂರಿನಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣದ ಸೂಕ್ಷ್ಮತೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖಾಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.

Ad Widget

Ad Widget <> Ad Widget

ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿವೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರ ಅಗತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪತ್ರ ಬರೆದು ಕೆಲವು ವಿಚಾರಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಆ ಮಾಹಿತಿಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.

ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್‌ಗಳು ಪ್ರಕರಣದ ಕುರಿತು ತಾವೇ ತೀರ್ಮಾನಗಳನ್ನು ಪ್ರಕಟಿಸುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಬರುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್‌ಗಳು ಸುದ್ದಿಗಳಿಗೆ ಮಿರ್ಚಿ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ ಎಂದು ಅವರು ಟೀಕಿಸಿದರು.

Ad Widget

Ad Widget

ಯೂಟ್ಯೂಬ್‌ನಲ್ಲಿ ಅಧಿಕೃತ ಪತ್ರಕರ್ತರು ಬಹಳ ಕಡಿಮೆ ಇದ್ದಾರೆ. ಕೆಲವರು ಮಾತ್ರ ಹಿರಿಯ ಹಾಗೂ ಪ್ರಬುದ್ಧ ಪತ್ರಕರ್ತರಾಗಿದ್ದಾರೆ. ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!