ಸ್ಥಳೀಯ
Jnanadeepa-ಡಾ.ಡಿ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಂತೆ 1,030 ಜ್ಞಾನದೀಪ ಅತಿಥಿ ಶಿಕ್ಷಕರ ನಿಯೋಜನೆ
ಧರ್ಮಸ್ಥಳ: ರಾಜ್ಯಾದ್ಯಂತ ಗ್ರಾಮೀಣ ಶಾಲೆಗಳ ಶಿಕ್ಷಕರ ಕೊರತೆ ಗಮನಿಸಿ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 1,030 ಶಾಲೆಗಳಿಗೆ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಂತೆ ಸಂಸ್ಥೆ ವತಿಯಿಂದ ಜ್ಞಾನದೀಪ ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್. ತಿಳಿಸಿದ್ದಾರೆ.
ಶಾಲಾ ಶಿಕ್ಷಣ ಮಟ್ಟ ಸುಧಾರಣೆ ಹಾಗೂ ಕಲಿಕಾ ವಾತಾವರಣ ಸುಧಾರಣೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಲ್ಲಿ ಜಾರಿಗೆ ತರಲಾಗಿದೆ. ಅದರಂತೆ ಶಾಲೆಯ ಮೂಲಸೌಕರ್ಯಗಳಾದ ಶಾಲಾ ಕೊಠಡಿ, ಶೌಚಾಲಯ, ಆಟದ ಮೈದಾನ, ಶಾಲಾ ಆವರಣ, ವಿದ್ಯುದೀಕರಣ, ಕುಡಿಯುವ ನೀರು, ರಂಗಮಂದಿರ, ಕಟ್ಟಡಗಳ ದುರಸ್ತಿ, ಡೆಸ್ಕ್-ಬೆಂಚ್‌ಗಳ ಒದಗಣೆ ಮೊದಲಾದವುಗಳಿಗೆ ಈ ಕಾರ್ಯಕ್ರಮದ ಮೂಲಕ ಸಹಾಯಧನ ನೀಡಲಾಗುತ್ತಿದೆ. ಇದುವರೆಗೆ 61.16 ಕೋಟಿ ರೂ. ಮೊತ್ತದ ಸಹಾಯಧನ ನೀಡಲಾಗಿದೆ.
ಶಾಲೆಗಳಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಂಖ್ಯೆಯ ಅನುಪಾತ ಗಮನಿಸಿ ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರನ್ನು ನಿಯೋಜಿಧಿಸಲಾಗುತ್ತಿದೆ. ಈ ಶಿಕ್ಷಕರ ಸೇವೆ ಗ್ರಾಮೀಣ ಶಾಲಾ ಮಕ್ಕಳು ಪಾಠ ಪ್ರವಚನದಿಂದ ವಂಚಿತರಾಗುವುದನ್ನು ತಡೆಗಟ್ಟಲು ಸಂಸ್ಥೆಯ ವತಿಯಿಂದ ರೂಪಿಸಿದ ತಾತ್ಕಾಲಿಕ ವ್ಯವಸ್ಥೆ. ಈ ಶಿಕ್ಷಕರಿಗೆ ಮಾಸಿಕ ಗೌರವಧನವನ್ನು ಸಂಸ್ಥೆಯ ವತಿಯಿಂದ ಪಾವತಿಸಲಾಗುತ್ತಿದ್ದು, ಇದಕ್ಕಾಗಿಯೇ ಸಂಸ್ಥೆಯಿಂದ 21.33 ಕೋಟಿ ರೂ. ಮೊತ್ತ ವಿನಿಯೋಗಿಸಲಾಗಿದೆ.
ವಿದ್ಯಾಭ್ಯಾಸ ಮಧ್ಯದಲ್ಲಿ ಶಾಲೆ ಬಿಟ್ಟ 6ರಿಂದ 14 ವರ್ಷದ ಮಕ್ಕಳ ಮನೆ ಸಂದರ್ಶಿಸಿ ಕಾರಣ ತಿಳಿಯುವುದು ಹಾಗೂ ಕುಟುಂಬದ ಸಂಪರ್ಕ ಬೆಳೆಸಿ ಅವರನ್ನು ಮತ್ತೆ ಶಾಲೆಗೆ ಸೇರ್ಪಡೆಗೊಳಿಸಲು ಜ್ಞಾನದೀಪ ಶಿಕ್ಷಕರ ಮೂಲಕ ಶ್ರಮಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಶೈಕ್ಷಣಿಕ ವರ್ಷದಿಂದಲೇ ಮಹತ್ತರ ಕೊಡುಗೆ:
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಮೂಲಕ ರಾಜ್ಯಾದ್ಯಂತ ನಾನಾ ಶಾಲೆಗಳಿಗೆ ಈ ಶೈಕ್ಷಣಿಕ ವರ್ಷದಿಂದಲೇ ಸುಮಾರು 1,030 ಜ್ಞಾನದೀಪ ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗಿದೆ. ಈ ಪೈಕಿ 240 ಶಾಲೆಗಳು ಏಕೋಪಾಧ್ಯಾಯ ಶಾಲೆಗಳಾಗಿರುವುದು ಉಲ್ಲೇಖನೀಯ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಈ ಶಿಕ್ಷಕರು ಆಯಾ ಶಾಲೆಗಳಿಗೆ ಮಹತ್ತರ ಕೊಡುಗೆ ನೀಡಲಿದ್ದಾರೆ ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್. ತಿಳಿಸಿದ್ದಾರೆ.
ಗ್ರಾಮೀಣ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಮಹತ್ವವಾದುದು. ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿಈಗಲೂ ಶಿಕ್ಷಣದ ಬಹಳಷ್ಟು ಅಸಮಾನತೆ ಕಾಣುತ್ತೇವೆ. ಮೂಲಸೌಕರ್ಯಗಳ ಕೊರತೆ, ಬಡತನ ಇದಕ್ಕೆ ಪ್ರಮುಖ ಕಾರಣ. ಸರಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದರೂ ಅದನ್ನು ಸಂಪೂರ್ಣ ನೀಗಿಸಲು ಸಾಧ್ಯವಾಗಿಲ್ಲ. ಇದನ್ನು ಗಮನಿಸಿದ ಡಾ.ಹೆಗ್ಗಡೆಯವರು ಗ್ರಾಮೀಣ ಪ್ರದೇಶದ ಆರ್ಥಿಕ ಹಿಂದುಳಿದ ಕುಟುಂಬದ ಮಕ್ಕಳ ಶಿಕ್ಷಣಕ್ಕೆ ವಿಶೇಷ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸರಕಾರಿ ಶಾಲೆಗಳ ಮೂಲಸೌಕರ್ಯಗಳ ಸುಧಾರಣೆಗಾಗಿಯೇ 30 ವರ್ಷ ಹಿಂದೆ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮ ಜಾರಿಗೆ ತಂದರು ಎಂದು ತಿಳಿಸಿದ್ದಾರೆ.
ಶಿಕ್ಷಣ
Narendra-ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಇಚ್ಚಿಕ ಜೈನ್ ಇವರು ಕರಾಟೆ ಸ್ಪರ್ಧೆಯಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI)ಗೆ ಆಯ್ಕೆ
ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.
ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.
ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.
ಇವರು ಜಪಾನ್ ಶೊಟೊಕಾನ್ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಸಂಸ್ಥೆಯ ತರಬೇತುದಾರರಾದ ಶಿವಪ್ರಸಾದ್ ಡಿ. ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ರಕ್ಷಕ-ಶಿಕ್ಷಕ ಸಂಘ, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಯ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.
ಶಿಕ್ಷಣ
Vivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.
ಪೌಢ ಶಾಲಾ ವಿಭಾಗದಲ್ಲಿ ಚಿಂತನ. ಎಂ (ದಿ.ಸೀತಾರಾಮ ಮೇಲ್ಪಾಡಿ ಹಾಗೂ ಸರೋಜ ಮೇಲ್ಪಾಡಿಯವರ ಪುತ್ರಿ)ಚಿತ್ರಕಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದ ಸ್ಪರ್ಧೆಗಳು ಮುಂಬರುವ ಜನವರಿ ತಿಂಗಳಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.
ಶಿಕ್ಷಣ
Narendra-ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ-ಉದ್ಘಾಟನೆ
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1 ಆದ ರಾಮಕೃಷ್ಣ ಪಡುಮಲೆ ಅವರು ಮಾತನಾಡಿದರು.
ಕ್ರೀಡೆಯು ಜೀವನದ ಒಂದು ಭಾಗವಾಗಿದ್ದು,ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಶಿಸ್ತು, ಆತ್ಮವಿಶ್ವಾಸ ಮತ್ತು ಸಾಮಾಜಿಕ ಕೌಶಲ್ಯಗಳನ್ನು ಬೆಳೆಸುತ್ತದೆ.ನಾಯಕತ್ವ, ತಾಳ್ಮೆ, ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮದ ಮೌಲ್ಯಗಳನ್ನು ಕಲಿಸುತ್ತದೆ.ಮನಸ್ಸಿನ ಸ್ಥಿತಿಯನ್ನು ಸುಧಾರಿಸುತ್ತದೆ.ಸೋಲು ಮತ್ತು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತದೆ.ತಂಡದ ಕೆಲಸ, ಒಗ್ಗಟ್ಟು ಮತ್ತು ಪರಸ್ಪರ ಸಹಕಾರವನ್ನು ಹೆಚ್ಚಿಸುತ್ತದೆ.ಯಶಸ್ಸಿನ ಶಿಖರವನ್ನು ಸಾಧಿಸಲು ವರ್ಷಗಳ ಕಠಿಣ ತರಬೇತಿಯನ್ನು ನಿಗದಿಪಡಿಸುತ್ತದೆ ಎಂಬುದನ್ನು ಗುರುತಿಸುತ್ತದೆ ಎಂದು ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1ಆದ ರಾಮಕೃಷ್ಣ ಪಡುಮಲೆ ಇವರು ಹೇಳಿದರು.
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಕ್ರೀಡಾಕೂಟದಲ್ಲಿ ಧ್ವಜಾರೋಹಣ ಮತ್ತು ಗೌರವ ವಂದನೆಯನ್ನು ಸ್ವೀಕರಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಶುಭಾ ಅಡಿಗ ಇವರು ಮಾತನಾಡುತ್ತಾ“ಇಂದಿನ ಯುವಜನತೆಯಲ್ಲಿ ಕ್ರೀಡಾಮನೋಭಾವ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ಅವರು ಛಲಬಿಡದೆ ಸಾಧನೆ ಮಾಡಿ ಜೀವನವನ್ನು ರೂಪಿಸಿಕೊಳ್ಳುತ್ತಾರೆ.ಇಂತಹ ದೃಢ ಮನಸ್ಸಿನ ನಾಗರಿಕರೇ ಸ್ವಸ್ಥ ಸಮಾಜದ ರೂವಾರಿಗಳು.ಅದಕ್ಕಾಗಿ ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿರಬೇಕು. “ಎಂದು ಹೇಳಿದರು.
ಕರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಸತ್ಯನಾರಾಯಣ ಬಿ. ಇವರು ಮಾತನಾಡುತ್ತಾ“ಕ್ರೀಡೆ ಸಹಶಿಕ್ಷಣದ ಒಂದು ಭಾಗ.ಮನಸ್ಸಿನ ಸಮತೋಲಿತ ಬೆಳವಣಿಗೆಗೆ ಮುಖ್ಯಕಾರಣ ಕ್ರೀಡೆ.ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು ಗೆಲುವಿನ ಅರ್ಥವನ್ನು ತಿಳಿದುಕೊಳ್ಳಬೇಕು.ಈ ಮೂಲಕ ಜಿವನದಲ್ಲಿ ಸಮಚಿತ್ತವನ್ನು ಸಾಧಿಸಿಕೊಳ್ಳಬಹುದು.ಉತ್ತಮ ಕ್ರೀಡಾಪಟು ಉತ್ತಮ ವಿದ್ಯಾರ್ಥಿಯಾಗುತ್ತಾನೆ.ಉತ್ತಮ ವಿದ್ಯಾರ್ಥಿಉತ್ತಮ ನಾಗರಿಕನಾಗುತ್ತಾನೆ.ನಮ್ಮ ಹಾದಿಯ ಪ್ರಗತಿಯನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ಯಶಸ್ವಿ ಜೀವನವನ್ನುರೂಪಿಸಲು ಕ್ರೀಡೆಯು ಸಹಾಯಮಾಡುತ್ತದೆ.” ಎಂದು ಹೇಳಿದರು.
ವಿದ್ಯಾರ್ಥಿಗಳ ವಿವಿಧ ತಂಡಗಳ ಶಿಸ್ತುಬದ್ಧ ಪಥಸಂಚಲನ ನಡೆಯಿತು.ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು.
ಜಿಲ್ಲಾ ,ರಾಜ್ಯ ಮತ್ತು ರಾಷ್ಟçಮಟ್ಟದ ವಿವಿಧಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನುತರುವುದರ ಮೂಲಕ ಕರ‍್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ವಿದ್ಯಾರ್ಥಿಗಳ ಆಕರ್ಷಕ ಬ್ಯಾಂಡ್ ಸೆಟ್ ಪಥಸಂಚಲನ ಕರ‍್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ,ಮಾತನಾಡುತ್ತಾ“ಕ್ರೀಡೆಯು, ಆತ್ಮವಿಶ್ವಾಸ ಮತ್ತು ದೈಹಿಕ ಕ್ಷಮತೆಯನ್ನು ಹೆಚ್ಚಿಸಲು ಸಹಕಾರಿ.ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಯ ಮೂಲವಾಗಿದೆ.ವ್ಯಾಯಾಮದ ಅತ್ಯುತ್ತಮ ಸಾಧನವೆಂದು ಪರಿಗಣಿಸಲಾಗಿದೆ.ಹಾಗಾಗಿ ಈ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಸದೃಢ ಪ್ರಜೆಗಳಾಗಿ ಮುನ್ನಡೆಯಿರಿ ”ಎಂದು ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಅರುಣ್ ಬಿ.ಕೆ. ಇವರು ಉಪಸ್ಥಿತರಿದ್ದರು.
ಈ ಕ್ರೀಡಾಕೂಟದಲ್ಲಿ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ್, ನಮಿತಾ, ಮತ್ತು ಕಾಲೇಜಿನ ಕ್ರೀಡಾ ತರಬೇತುದಾರರಾದ ಮನೋಹರ್ ಎನ್. ರವರು ಸಹಕರಿಸಿದರು.
ಕಾರ್ಯಕ್ರಮದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಲೋಚನಾ ವಂದಿಸಿದರು. ಉಪನ್ಯಾಸಕರಾದ ಮಮತಾ ಮತ್ತು ಅಪೂರ್ವ ಕಾರ‍್ಯಕ್ರಮವನ್ನು ನಿರೂಪಿಸಿದರು.
-
ಅಪರಾಧ17 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಬಿಗ್ ನ್ಯೂಸ್14 hours agoBantwal-ಬಂಟ್ವಾಳ: ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟ ಬ್ಯಾಂಕ್ ಉದ್ಯೋಗಿ ಯುವತಿ ನಾಪತ್ತೆ..!
-
ಸ್ಥಳೀಯ14 hours agoBank-ಚಿನ್ನದ ಬೆಲೆ ಕುಸಿತದ ಎಫೆಕ್ಟ್: ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್ಗಳಿಂದ ಶಾಕ್; ಒಡವೆ ಹರಾಜಿನ ಎಚ್ಚರಿಕೆ..!
-
ಮಂಗಳೂರು15 hours agoPugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
-
ನಿಧನ ವಾರ್ತೆ10 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ15 hours agoFIR-ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ: ಬಿಗ್ ಬಾಸ್ ವಿಜೇತ ಮುತ್ತುಕುಮಾರನ್ ವಿರುದ್ಧ ಇನ್ಫ್ಲುಯೆನ್ಸರ್ ವಹಿದಾ ದೂರು – ಎಫ್ಐಆರ್ ದಾಖಲು..!
-
ಮಂಗಳೂರು16 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
-
ಸ್ಥಳೀಯ15 hours agoSubrahmanya-ಸುಬ್ರಹ್ಮಣ್ಯ: ಮನೆಗೆ ರಾತ್ರಿ ನಕ್ಸಲರ ಭೇಟಿ ಪ್ರಕರಣ: ಮಾಜಿ ನಕ್ಸಲರಾದ ರವೀಂದ್ರ, ಸುಂದರಿ, ದಿಶಾರಿಂದ ಸ್ಥಳ ಮಹಜರು















