Connect with us

ಸ್ಥಳೀಯ

“Siri Habba”-ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ “ಸಿರಿ ಹಬ್ಬ” ಸಾಂಸ್ಕೃತಿಕ ಕಾರ್ಯಕ್ರಮ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಸಿರಿ ಸಂಸ್ಥೆಯ ಮಾನ್ಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ.ಎನ್.ಜನಾರ್ಧನರವರು ಸಿರಿ ಸಿಬ್ಬಂದಿಗಳಿಗಾಗಿ ಆಯೋಜಿಸಲಾದ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮೂಡಬಿದ್ರೆ ಎಕ್ಸಲೆಂಟ್ ಕಾಲೇಜಿನ ಚೇರ್‌ಮೆನ್ ಆಗಿರುವ ಶ್ರೀ ಯುವರಾಜ್ ಜೈನ್‌ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ‘ಸಿರಿ’ ಅಂದರೆ ಚಿಗುರು, ಪೂಜ್ಯ ಖಾವಂದರು ಹಾಗೂ ಮಾತೃಶ್ರೀ ಅಮ್ಮನವರ ಅಶ್ರಯದಲ್ಲಿ, ಸಿರಿ ಎಂ.ಡಿ ಯವರ ಮುಂದಾಳತ್ವದಲ್ಲಿ ನಡೆಯುತ್ತಿರುವ ನಮ್ಮ ಈ ಸಿರಿ ಸಂಸ್ಥೆ ಸದಾ ಚಿಗುರುತ್ತಿರಲಿ. ನಾವು ನಮ್ಮಲ್ಲಿರೋ ಅಹಂ ಭಾವವನ್ನು ತೊರೆದಾಗ ಮಾತ್ರ ದೇವರಿಗೆ ಅತ್ಯಂತ ಪ್ರಿಯವಾಗುತ್ತೇವೆ. ಅದೇ ರೀತಿ ನಾವೆಲ್ಲರೂ ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಂಡು, ನಮ್ಮನ್ನು ಹಾಗೂ ನಮ್ಮ ಕುಟುಂಬದವರನ್ನು ಯಾವ ಸಂಸ್ಥೆ ಬೆಳೆಸ್ತಾ ಇದೆಯೋ ಆ ಸಂಸ್ಥೆಯನ್ನು ಪ್ರೀತಿಸಿ, ಮುನ್ನಡೆಸುವ, ಜೊತೆ ಜೊತೆಗೆ ನಾವೂ ಬೆಳೆಯೋಣ. ಸಿರಿ ಸಂಸ್ಥೆ ಹಾಗೂ ಸಿರಿ ಸಿಬ್ಬಂದಿಗಳ ಏಳಿಗೆಗಾಗಿ ಸದಾ ಶ್ರಮಿಸುತ್ತಿರುವ ಪರಮಪೂಜ್ಯ ದಂಪತಿಗಳ ಸ್ತ್ರೀ ಸಬಲೀಕರಣದ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಸಿರಿ ಎಂ.ಡಿಯವರೊಂದಿಗೆ ನಾವೆಲ್ಲರೂ ಕೈಜೋಡಿಸಿ ಸಿರಿಯ ಕಂಪನ್ನು ಜಗತ್ತಿನಾದ್ಯಂತ ಪಸರಿಸೋಣ ಎಂದು ಪ್ರೇರಣಾತ್ಮಕ ನುಡಿಗಳನ್ನಾಡಿ ಎಲ್ಲಾ ಸಿರಿ ಸಿಬ್ಬಂದಿಗಳನ್ನು ಹುರಿದುಂಬಿಸಿದರು.

Ad Widget

Ad Widget alt="Ad Widget"/>

Ad Widget

ಇನ್ನೋರ್ವ ಮುಖ್ಯ ಅತಿಥಿ ಕೆನರಾ ಬ್ಯಾಂಕ್ ಮಂಗಳೂರು ಸರ್ಕಲ್ ಜನರಲ್ ಮ್ಯಾನೇಜರ್ ಆಗಿರುವ ಶ್ರೀ ಬಿ.ಸುಧಾಕರ ಕೊಟ್ಟಾರಿಯವರು ಮಾತನಾಡಿ ಯಾವುದೇ ಒಂದು ಸಂಸ್ಥೆ ಬೆಳೆಯಬೇಕಾದಲ್ಲಿ ಆ ಸಂಸ್ಥೆಯಲ್ಲಿ ದುಡಿಯುತ್ತಿರುವ ಸಿಬ್ಬಂದಿಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಅದೇ ರೀತಿ ಸುಮಾರು ಇಪ್ಪತ್ತು ದಶಕಗಳಿಂದ ಯಾವುದೇ ಲಾಭದ ಉದ್ದೇಶವಿಲ್ಲದೆ ಮಹಿಳಾ ಸಬಲೀಕರಣಕ್ಕಾಗಿಯೇ ಶ್ರಮಿಸುತ್ತಿರುವ ಸಂಸ್ಥೆಯೊAದಿದ್ದರೇ ಅದು ನಮ್ಮ ಈ ಸಿರಿ ಸಂಸ್ಥೆ ಮಾತ್ರ. ಯಾವಾಗ ಒಂದು ಸಂಸ್ಥೆಯ ಸಿಬ್ಬಂದಿಗಳಲ್ಲಿ ನಾವೆಲ್ಲರೂ ಒಂದೇ ಅನ್ನುವ ಭಾವನೆ ಇರುತ್ತದೆಯೋ ಅಂತಹ ಸಂಸ್ಥೆ ಮಾತ್ರ sಸಮಾಜದಲ್ಲಿ ಮುಂದೆ ಬರಲು ಸಾಧ್ಯ. ಸಿರಿಯಲ್ಲಿರುವ ಸಿಬ್ಬಂದಿಗಳಲ್ಲಿ ಒಗ್ಗಟ್ಟಿದೆ. ಇದೇ ಒಗ್ಗಟ್ಟಿನ ಬಲದಿಂದ ಮುಂದಿನ ದಿನಗಳಲ್ಲಿ ಸಿರಿ ಸಂಸ್ಥೆಯ ಇನ್ನಷ್ಟು ಎತ್ತರಕ್ಕೆ ಬೆಳೆದು, ಸಿರಿ ಬ್ರಾ ಂಡ್‌ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಲಿ ಎಂದು ಶುಭ ಹಾರೈಸಿದರು.

Ad Widget

Ad Widget <> Ad Widget

ಉಜಿರೆಯ ಉದ್ಯಮಿ ಹಾಗೂ ಸಿರಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ರಾಜೇಶ್ ಪೈಯವರು ಮುಖ್ಯ ಅತಿಥಿಯಾಗಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಅಮ್ಮನವರ ಕನಸಿನ ಕೂಸಾಗಿರುವ ಸಿರಿ ಸಂಸ್ಥೆ ಸಿಬ್ಬಂದಿಗಳ ಪರಿಶ್ರಮದಿಂದಾಗಿ ಇಂದು ಲಾಭದ ಹಾದಿಯಲ್ಲಿ ನಡೆಯುತ್ತಿದೆ. ಮುಂದಿನ ವರ್ಷ ಈ ಸಿರಿ ಹಬ್ಬವನ್ನು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಹೊಸ ಕಟ್ಟಡದಲ್ಲಿ ಆಚರಿಸುವಂತಾಗಲಿ. ಅದೇ ರೀತಿ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಿರಿ ಸಂಸ್ಥೆಯ ಮಾನ್ಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ.ಎನ್ ಜನಾರ್ಧನರವರು ಸಿರಿ ಹಬ್ಬ ಕಾರ್ಯಕ್ರಮಕ್ಕೆ ಬಂದತAಹ ಅತಿಥಿ ಅಭ್ಯಾಗತರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿ, ಗೌರವಾರ್ಪಣೆ ಸಲ್ಲಿಸಿದರು ಹಾಗೂ ಕಾರ್ಯಕ್ರಮವು ಯಶಸ್ವಿಯಾಗಿ ಮೂಡಿಬರಲು ಸಹಕರಿಸಿದ ಸಿರಿ ಕ್ಲಬ್‌ನ ಪದಾಧಿಕಾರಿಗಳು ಮತ್ತು ಎಲ್ಲಾ ಸಿರಿ ಸಿಬ್ಬಂದಿಗಳಿಗೂ ಶುಭವನ್ನು ಹಾರೈಸಿದರು.

Ad Widget

Ad Widget

ಇನ್ನೋರ್ವ ಮುಖ್ಯ ಅತಿಥಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀ ಚೈತ್ರೇಶ್ ಇಳಂತಿಳ, ಸಾಂಸ್ಕೃತಿಕ ಸ್ಪರ್ಧೆಯ ತೀರ್ಪುಗಾರರಾಗಿ ಆಗಮಿಸಿದ್ದ ಉಜಿರೆ ಶ್ರೀ ಧ.ಮಂ ಐಟಿ ಕಾಲೇಜಿನ ಗಣಿತ ವಿಭಾಗದ ಮುಖ್ಯಸ್ಥರಾದ ಡಾ. ವಿದ್ಯಾ ಕೆ, ಇದೇ ಕಾಲೇಜಿನ ಗ್ರಂಥಾಲಯ ಅಧಿಕಾರಿ ಡಾ. ರಂಜಿತಾ, ಉಜಿರೆ ಸಂಧ್ಯಾ ಟ್ರೆರ‍್ಸ್ ಮಾಲಕಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರು ವೇದಿಕೆಯಲ್ಲಿ ಉಪಸ್ಥಿತರಿದ್ದು, ಸಿರಿ ಸಿಬ್ಬಂದಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಉಜಿರೆ ಶ್ರೀ ಧ.ಮಂ.ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಜನಾರ್ಧನ ಮೋಗರಾಜ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ವಿವಿಧ ವಿಭಾಗಗಳ ಮೇಲಾಧಿಕಾರಿಗಳು ಹಾಗೂ ಘಟಕಗಳಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿರಿ ಸಿಬ್ಬಂದಿಗಳಿಗೆ ಅತಿಥಿ ಗಣ್ಯರು ಪ್ರಶಂಸ ಪತ್ರವನ್ನು ನೀಡಿ ಗೌರವಿಸಿದರು. ಅದೇ ರೀತಿ ಸಿರಿ ಸಿಬ್ಬಂದಿಗಳಿಗಾಗಿ ಆಯೋಜಿಸಲಾದ ವಿವಿಧ ಆಟೋಟ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಸಿಬ್ಬಂದಿಗಳಿಗೆ ಬಹುಮಾನ ವಿತರಿಸಿದರು.

ಸಿರಿ ಬ್ರಾಂಡ್‌ ಮತ್ತು ಮಾರುಕಟ್ಟೆ ವಿಭಾಗದ ಸಲಹೆಗಾರರಾದ ಶ್ರೀ ವಿಶ್ವಜ್ಞಚಾರ್ ಸ್ವಾಗತಿಸಿ, ಸಿರಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಶ್ರೀ ಪ್ರಸನ್ನರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಗೊದಾಮು ಪ್ರಬಂಧಕರಾದ ಜೀವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಅಗರಬತ್ತಿ ವಿಭಾಗದ ಮೇಲ್ವಿಚಾರಕ ಶ್ರೀ ಸತೀಶ್ ಧನ್ಯವಾದವಿತ್ತರು.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!