ಬಿಗ್ ನ್ಯೂಸ್
ಗಾನ ಗಂಧರ್ವ, ಪದ್ಯಾಣ ಶೈಲಿಯ ಸೃಷ್ಟಿಕರ್ತ, ತೆಂಕುತಿಟ್ಟಿನ ಶ್ರೇಷ್ಠ ಭಾಗವತ ಶ್ರೀ ಪದ್ಯಾಣ ಗಣಪತಿ ಭಟ್ ಇನ್ನಿಲ್ಲ – ಪದಯಾನಕ್ಕೆ ವಿರಾಮ
ಗಾನ ಗಂಧರ್ವ, ಪದ್ಯಾಣ ಶೈಲಿಯ ಸೃಷ್ಟಿಕರ್ತ, ತೆಂಕುತಿಟ್ಟಿನ ಶ್ರೇಷ್ಠ ಭಾಗವತ ಶ್ರೀ ಪದ್ಯಾಣ ಗಣಪತಿ ಭಟ್ (66) ವಯೋ ಸಹಜ ಖಾಯಿಲೆಯಿಂದ ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದರು. ಪದ್ಯಾಣರು ಪತ್ನಿ ಶೀಲಾಶಂಕರಿ, ಮಕ್ಕಳಾದ ಸ್ವಸ್ತಿಕ್, ಕಾರ್ತಿಕ್ ,ನೂರಾರು ಶಿಷ್ಯಂದಿರು ಹಾಗೂ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.
ಎರಡು ವರ್ಷಗಳ ಹಿಂದೆ ಇವರು ಪ್ರಯಾಣಿಸುತ್ತಿದ್ದ ಕಾರು ಪುತ್ತೂರು ತಾಲೂಕಿನ ತಿಂಗಳಾಡಿ ಸಮೀಪದ ಎಂಡೆಸಾಗು ಎಂಬಲ್ಲಿ ಅಪಘಾತಕ್ಕಿಡಾಗಿತ್ತು. ಆ ಆಪಘಾತದ ವೇಳೆ ಗಾಯಾಳುವಾಗಿದ್ದ ಅವರು ಬಳಿಕ ಒಂದಷ್ಟು ಚೇತರಿಸಿಕೊಂಡಿದ್ದರಾದರೂ ನಂತರ ಅವರನ್ನು ವಯೋಸಹಜ ಅನಾರೋಗ್ಯಗಳು ನಿರಂತರವಾಗಿ ಕಾಡಿದ್ದವು.
ಶ್ರೀ ಪದ್ಯಾಣ ಗಣಪತಿ ಭಟ್ಟರು ತೆಂಕುತಿಟ್ಟಿನ ಶ್ರೇಷ್ಠ ಭಾಗವತರಲ್ಲೊಬ್ಬರು. ಪ್ರಸ್ತುತ ಶ್ರೀ ಹನುಮಗಿರಿ ಮೇಳದ ಪ್ರಧಾನ ಭಾಗವತರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈಟಿವಿಯ “ಎದೆ ತುಂಬಿ ಹಾಡುವೆನು’ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಭಾಗವಹಿಸಿದ ಮೊದಲ ಯಕ್ಷಗಾನ ಭಾಗವತ ಎಂಬ ಹೆಗ್ಗಳಿಕೆ ಇವರದು. ಇವರ ಗಾಯನವನ್ನು ನೋಡಿ ಕಾರ್ಯಕ್ರಮದ ನಿರ್ವಾಹಕ ಡಾ| ಎಸ್.ಪಿ. ಬಾಲಸುಬ್ರಹ್ಮಣ್ಯ ಅವರು ಪ್ರಶಂಸಿದ್ದರು. ಅಷ್ಟು ಸುಲಭವಾಗಿ ಯಾರನ್ನೂ ಮೆಚ್ಚದ ಯಕ್ಷಗಾನ ಲೋಕದ ದಂತ ಕಥೆ ಶೇಣಿ ಡಾ| ಗೋಪಾಲ ಕೃಷ್ಣ ಭಟ್ ರವರಿಂದಲೂ ಸೈ ಅನ್ನಿಸಿಕೊಂಡ ಭಾಗವತ ಪದ್ಯಾಣ. ಹಿರಿಯ ಭಾಗವತ ದಾಮೋದರ ಮಂಡೆಚ್ಚರ ನಿಧನದ ಬಳಿಕ ತಮ್ಮ ಬಹುತೇಕ ಕೂಟ , ತಾಳಮದ್ದಲೆ ಕಾರ್ಯಕ್ರಮಗಳಿಗೆ ಪದ್ಯಾಣ ಗಣಪತಿ ಅವರನ್ನೇ ಶೇಣಿಯವರು ಭಾಗವತರನ್ನಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದರು ಅಥಾವ ಕೂಟದ ಆಯೋಜಕರಿಗೆ ಶಿಫಾರಸ್ಸು ಮಾಡುತ್ತಿದ್ದರು.
ಯಕ್ಷಗಾನದಲ್ಲಿ ಅಷ್ಟೇನೂ ಬಳಕೆಯಲ್ಲಿಲ್ಲದ ಕೆಲವು ರಾಗಗಳನ್ನು ಬಳಸಿದ ಕೀರ್ತಿ ಪದ್ಯಾಣರದ್ದು. ಸಿಂಹೇಂದ್ರ ಮಧ್ಯಮ, ವೃಂದಾವನ ಸಾರಂಗ್, ಯಮನ್ ಕಲ್ಯಾಣಿ, ರೇವತಿ ಮೊದಲಾದ ರಾಗ ಪ್ರಕಾರಗಳನ್ನು ಅವರು ಭಾಗವತಿಕೆಯಲ್ಲಿ ದುಡಿಸಿಕೊಂಡವರು. ವಾಸಂತಿ ರಾಗವನ್ನು ಯಕ್ಷಗಾನದಲ್ಲಿ ಪ್ರಪ್ರಥಮ ವಾಗಿ ಅಳವಡಿಸಿದ ಕೀರ್ತಿ ಪದ್ಯಾಣರದ್ದು ಎಂದು ಹಿರಿಯ ಅಂಕಣಕಾರ ಶಾಂತರಾಮ ಕುಡ್ವರವರು ತಮ್ಮ ಅಂಕಣವೊಂದರಲ್ಲಿ ಬರೆದುಕೊಂಡಿದ್ದಾರೆ. ಹೀಗೆ ಯಕ್ಷಗಾನ ಲೋಕದಲ್ಲಿ ತಮ್ಮದೇ ಆದ ಪದ್ಯಾಣ ಶೈಲಿಯನ್ನು ಅವರು ಸೃಷ್ಟಿಸಿದ್ದರು.

ಸುಳ್ಯ ತಾಲೂಕಿನ ಕಲ್ಮಡ್ಕದ ಸಮೀಪ ಗೋಳ್ತಜೆ ಎಂಬಲ್ಲಿ ಪದ್ಯಾಣ ತಿರುಮಲೇಶ್ವರ ಭಟ್, ಸಾವಿತ್ರಿ ಅಮ್ಮ ದಂಪತಿಗಳ ಪುತ್ರನಾಗಿ 1955 ಜನವರಿ 21ರಂದು ಪದ್ಯಾಣ ಗಣಪತಿ ಭಟ್ಟರು ಜನಿಸಿದರು. ಪದ್ಯಾಣ ಕುಟುಂಬಕ್ಕೆ ಯಕ್ಷಗಾನ ರಕ್ತಗತವಾಗಿ ಒಲಿದಿತ್ತು. ಗಣಪತಿ ಭಟ್ಟರ ಅಜ್ಜ ಪುಟ್ಟುನಾರಾಯಣ ಭಟ್ಟರು ಶ್ರೇಷ್ಠ ಭಾಗವತರಾಗಿದ್ದರು. ಹಿಮ್ಮೇಳದ ಮಹಾನ್ ಗುರು ಮಾಂಬಾಡಿ ನಾರಾಯಣ ಭಾಗವತರಿಗೂ ಗುರುಸದೃಶರಾಗಿದ್ದವರು. ಗಣಪತಿ ಭಟ್ಟರ ತಂದೆ ತಿರುಮಲೇಶ್ವರ ಭಟ್ಟರೂ ಉತ್ತಮ ಮದ್ದಳೆಗಾರ
ಪದ್ಯಾಣ ಗಣಪತಿ ಭಟ್ಟರು ಸಣ್ಣ ಮಗು ವಾಗಿದ್ದಾಗ ಬಾಲಪೀಡೆ ಎಂಬ ರೋಗಕ್ಕೆ ತುತ್ತಾಗಿ ಸಾವಿನ ದವಡೆಯವರೆಗೂ ಸಾಗಿ ಪುನರ್ಜನ್ಮ ಪಡೆದಿದ್ದರು. ಇವರು ಕಲ್ಮಡ್ಕ ಸರಕಾರೀ ಶಾಲೆಯಲ್ಲಿ 7ನೇ ತರಗತಿ ಓದಿದ್ದು ಬಳಿಕ ಬೆಳ್ಳಾರೆಯ ಬಾಳಿಲ ವಿದ್ಯಾಬೋಧಿನೀ ಶಾಲೆಗೆ ಸೇರಿದ್ದರು. ಶಾಲೆಯಲ್ಲಿ ಯಕ್ಷಗಾನ ತಂಡ ಕ್ರಿಯಾಶೀಲವಾಗಿತ್ತು. ಆಗ ಶ್ರೀನಿವಾಸ ಉಡುಪರು ಅಲ್ಲಿ ಮಖ್ಯೋಪಾಧ್ಯಾಯರಾಗಿದ್ದರು. ಅವರ ಇಷಾರೆಯಂತೆ ಶಾಲಾ ವಾರ್ಷಿಕೋತ್ಸವದ ಪ್ರದರ್ಶನ ಬಭ್ರುವಾಹನ ಕಾಳಗ ಪ್ರಸಂಗದಲ್ಲಿ ವೃಷಕೇತು ಪಾತ್ರವನ್ನು ಮಾಡಿದ್ದರು.

ಗಣಪತಿ ಭಟ್ ಅವರಿಗೆ ಕಲಿಕೆಯಲ್ಲಿ ಅಷ್ಟು ಆಸಕ್ತಿಯಿರಲಿಲ್ಲ. ಹಿರಿಯರ ಒತ್ತಡಕ್ಕೆ ಮಣಿದು ಶಾಲೆಗೆ ಹೋಗುತ್ತಿದ್ದರು. ಹೀಗಾಗಿ ಆತ ಯಕ್ಷಗಾನವನ್ನಾದರೂ ಕಲಿಯಲಿ ಎಂದು ಅವರಮ್ಮ ಹೇಳಿದರಂತೆ. ಹೀಗಾಗಿ ಅವರು ಶ್ರೀ ಧರ್ಮಸ್ಥಳ ಯಕ್ಷಗಾನ ಲಲಿತ ಕಲಾ ತರಬೇತಿ ಕೇಂದ್ರ ಸೇರಿ ಅಲ್ಲಿ ಯಕ್ಷಗಾನದ ಪಟ್ಟುಗಳನ್ನು ಕಲಿತರು. ಅಲ್ಲಿ ಮಾಂಬಾಡಿ ನಾರಾಯಣ ಭಟ್ಟರ ಶಿಷ್ಯನಾಗಿ ಕಲಿಕೆಯಲ್ಲಿ ತೊಡಗಿಸಿಕೊಂಡರು. ಪದ್ಯಾಣ ಗಣಪತಿ ಭಟ್ಟರು ಶೇಣಿ ಗೋಪಾಲಕೃಷ್ಣ ಭಟ್ಟರು ನನ್ನ ಎರಡನೇಯ ಗುರು ಹಾಗೂ ಅಗರಿ ಶ್ರೀ ರಘುರಾಮ ಭಾಗವತರು ನನ್ನ ಮೂರನೆಯ ಗುರುಗಳು ಎಂದು ಹೇಳಿಕೊಂಡಿದ್ದರು
ಗಣಪತಿ ಭಟ್ಟರು ತಮ್ಮ 16ರ ಹರೆಯದಲ್ಲೇ (1971ರಲ್ಲಿ) ಚೌಡೇಶ್ವರೀ ಮೇಳದಲ್ಲಿ ಸಂಗೀತಗಾರರಾಗಿ ತಮ್ಮ ಯಕ್ಷಲೋಕದ ಬದುಕು ಅರಂಭಿಸಿದರು . ಬಳಿಕ ಭಾಗವತರಾಗಿ ಕುಂಡಾವು, ಚೌಡೇಶ್ವರೀ, ಸುರತ್ಕಲ್, ಮಂಗಳಾದೇವಿ, ಕರ್ನಾಟಕ, ಎಡನೀರು, ಹೊಸನಗರ ಮೇಳದಲ್ಲಿ ದುಡಿದಿದ್ದಾರೆ. ಸುಮಾರು 5 ದಶಕಗಳ ಕಾಲ ಯಕ್ಷರಂಗವನ್ನು ತಮ್ಮ ಕರ್ಣಾನಂದಕರ ಗಾಯನದಿಂದ ಆಳಿದರು. ಅವರ ಇಂಪಾದ ಗಾಯನಕ್ಕೆ ಯಕ್ಷಪ್ರಿಯರು ಮನಸೋತರು. ಯಕ್ಷಗಾನದ ಸ್ಟಾರ್ ಭಾಗವತರೆನ್ನಿಸಿಕೊಂಡರು. ಜಿಲ್ಲೆಯ ವಿವಿಧ ಯಕ್ಷಗಾನ ಮೇಳಗಳಲ್ಲಿ ಕಾರ್ಯ ನಿರ್ವಹಿಸಿ ಯಕ್ಷಲೋಕವನ್ನು ಶ್ರೀಮಂತಗೊಳಿಸಿದರು.
ದ. ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪದ್ಯಾಣರು ಒಲಿದಿತ್ತು. ದುಬೈ, ಮಸ್ಕತ್, ಕುವೈಟ್ ಹೀಗೆ ವಿದೇಶಗಳಲ್ಲಿ ಪ್ರದರ್ಶನ ನೀಡಿ ಸನ್ಮಾನಗಳನ್ನು ಪಡೆದಿದ್ದಾರೆ. ಮುಂಬೈ, ದಿಲ್ಲಿ, ಕಾಸರಗೋಡು, ಶಿವಮೊಗ್ಗ, ಮಂಗಳೂರು ಸೇರಿದಂತೆ ದೇಶಾದ್ಯಂತ ಹಲವೆಡೆ ಅಭಿಮಾನಿಗಳ ಗೌರವ ಸಮ್ಮಾನಗಳನ್ನು ಅವರು ಸ್ವೀಕರಿಸಿದ್ದಾರೆ.
ಮಾಹಿತಿ : ಹಿರಿಯ ಯಕ್ಷಗಾನ ಕಲಾವಿದ ರವಿಶಂಕರ ವಳಕ್ಕುಂಜರವರು ಬರೆದ ಅಂತರಂಗದ ಧ್ವನಿ ಲೇಖನದಿಂದ ಹಾಗೂ ಹಿರಿಯ ಲೇಖಕ ಶಾಂತರಾಮ ಕುಡ್ವರವರ ಬಯಲಾಟ ಅಂಕಣದಿಂದ
ಸ್ಥಳೀಯ
Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.
ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.
ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಅಂತರ ರಾಜ್ಯ
ಕಾಸರಗೋಡು: ಆರ್‌ಎಸ್‌ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.
ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಂತರ ರಾಜ್ಯ
Ashutosh Dixit-ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹಾಲಿ ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಅಕ್ಟೋಬರ್ 31ರಂದು ನಿವೃತ್ತರಾಗಲಿದ್ದು, ಅವರ ಸ್ಥಾನವನ್ನು ದೀಕ್ಷಿತ್ ಅಲಂಕರಿಸಲಿದ್ದಾರೆ.
ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ 59 ವರ್ಷದ ಅಶುತೋಷ್ ದೀಕ್ಷಿತ್ ಅವರು 1986ರ ಡಿಸೆಂಬರ್‌ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ನಿಯೋಜನೆಗೊಂಡಿದ್ದರು. ಅವರು 2028ರ ಡಿಸೆಂಬರ್ 31ರವರೆಗೆ ವಾಯುಪಡೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ.
ಅಶುತೋಷ್ ದೀಕ್ಷಿತ್ ಅವರು ಪ್ರಾಯೋಗಿಕ ಪರೀಕ್ಷಾರ್ಥ ಪೈಲಟ್ ಹಾಗೂ ಫ್ಲೈಟ್ ಇನ್‌ಸ್ಟ್ರಕ್ಟರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಮಿರಾಜ್-2000, ವಿವಿಧ ಮಾದರಿಯ ಮಿಗ್ ಯುದ್ಧ ವಿಮಾನಗಳು, ಜಾಗ್ವಾರ್ ಮತ್ತು ತೇಜಸ್ ಸೇರಿದಂತೆ ಹಲವು ಯುದ್ಧ ವಿಮಾನಗಳಲ್ಲಿ 3,500 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದಾರೆ.
-
ದಕ್ಷಿಣ ಕನ್ನಡ21 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ20 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ನಿಧನ ವಾರ್ತೆ19 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಬಿಗ್ ನ್ಯೂಸ್15 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಶಿಕ್ಷಣ18 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ20 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ನಿಧನ ವಾರ್ತೆ19 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
ರಾಜಕೀಯ20 hours agoDK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ


















