ಅಂತರ ರಾಜ್ಯ
Kangana Ranaut-ವಿಪಕ್ಷ ನಾಯಕ ರಾಹುಲ್ ಗಾಂಧಿ ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ : ವಿವಾದಾತ್ಮಕ ಹೇಳಿಕೆ ನೀಡಿದ ಸಂಸದೆ ಕಂಗನಾ ರನೌತ್
ಕಾಂಗ್ರೆಸ್ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮದ್ಯ ಅಥವಾ ಮಾದಕ ವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಹಿಮಾಚಲ ಪ್ರದೇಶದ ಸಂಸದೆ, ನಟಿ ಕಂಗನಾ ರನೌತ್ ಹೇಳಿದ್ದಾರೆ. ‘ನಾನು ನೂತನ ಸದಸ್ಯೆಯೇ ಇರಬಹುದು. ಆದರೆ, ಅವರು ಸಂಸತ್ತಿಗೆ ಬರುವ ಸ್ಥಿತಿ ಮತ್ತು ನೀಡುವ ಹೇಳಿಕೆಗಳನ್ನು ನೋಡಿ ಸಂಪೂರ್ಣವಾಗಿ ಆಘಾತಗೊಂಡಿದ್ದೇನೆ. ವ್ಯಕ್ತಿಯೊಬ್ಬರು ಸಂಸತ್ತಿನಲ್ಲಿ ಈಶ್ವರನ ಭಾರತ ಮತ್ತು ಚಕ್ರವ್ಯೂಹದ ಬಗ್ಗೆ ಮಾತನಾಡುತ್ತಾರೆ ಎಂದರೆ ಅದು ಉತ್ತಮ ನಡೆ ಎಂದು ನನಗನಿಸುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ಕಾಂಗ್ರೆಸ್ ಸಂಸದ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಹಿಮಾಚಲ ಪ್ರದೇಶದ ಸಂಸದೆ, ನಟಿ ಕಂಗನಾ ರನೌತ್ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು ‘ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ’ ಎಂದು ಆರೋಪಿಸಿ ಲೋಕಸಭೆಯಲ್ಲಿ ಇತ್ತೀಚೆಗೆ ಮಾಡಿದ್ದ ಭಾಷಣದ ಬಗ್ಗೆ ಕಂಗನಾ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಪ್ರಧಾನಿಯವರು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿದ್ದಾರೆ. ಇಡೀ ದೇಶ ಪ್ರಧಾನಿ ಅವರನ್ನು ಆಯ್ಕೆ ಮಾಡಿದೆ. ಹಾಗಿದ್ದಾಗ, ರಾಹುಲ್ ಗಾಂಧಿಯವರು ಪ್ರಜಾಪ್ರಭುತ್ವವನ್ನು ಗೌರವಿಸುವುದಿಲ್ಲವೇ?
ಪ್ರಧಾನ ಮಂತ್ರಿಯನ್ನು ಲಿಂಗ, ವಯಸ್ಸು, ಸಾಮಾಜಿಕ ಸ್ಥಾನಮಾನ ಅಥವಾ ಜಾತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆಯೇ? ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಅವರು (ರಾಹುಲ್ ಗಾಂಧಿ) ಸಂವಿಧಾನವನ್ನು ನಿರಂತರವಾಗಿ ಅವಮಾನಿಸಿದ್ದಾರೆ. ಮುಂದೊಂದು ದಿನ ಅವರು ಪ್ರಧಾನಿಯನ್ನು ಚರ್ಮದ ಬಣ್ಣದ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ ಎಂದೂ ಹೇಳಬಹುದು’ ಎಂದು ಕಿಡಿಕಾರಿದ್ದಾರೆ.
ಮುಂದುವರಿದು, ‘ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಗೌರವವಿಲ್ಲವೇ? ಸಂಸತ್ತಿನಲ್ಲಿ ನಿನ್ನೆಯೂ ಹಾಸ್ಯ ಪ್ರದರ್ಶನ ನೀಡಿದ್ದಾರೆ. ಅವರಿಗೆ ನೀತಿ ನಿಯಮಗಳ ಅರಿವಿಲ್ಲ. ಲೋಕಸಭೆಯಲ್ಲಿ ತಮ್ಮನ್ನು ತಾವು ಈಶ್ವರನ ದೇಶದವರು ಎಂತಲೂ, ಬಿಜೆಪಿಯವರು ಚಕ್ರವ್ಯೂಹ ರಚಿಸಿದ್ದಾರೆ ಎಂದೂ ಹೇಳಿದ್ದಾರೆ. ಅವರು ಯಾವುದೇ ರೀತಿಯ ಮಾದಕ ವಸ್ತು ಸೇವಿಸಿದ್ದಾರೆಯೇ ಎಂಬುದನ್ನು ಪರೀಕ್ಷಿಸಬೇಕು ಎಂದು ನನಗನಿಸುತ್ತದೆ’ ಎಂದಿದ್ದಾರೆ.
‘ನಾನು ನೂತನ ಸದಸ್ಯೆಯೇ ಇರಬಹುದು. ಆದರೆ, ಅವರು ಸಂಸತ್ತಿಗೆ ಬರುವ ಸ್ಥಿತಿ ಮತ್ತು ನೀಡುವ ಹೇಳಿಕೆಗಳನ್ನು ನೋಡಿ ಸಂಪೂರ್ಣವಾಗಿ ಆಘಾತಗೊಂಡಿದ್ದೇನೆ. ವ್ಯಕ್ತಿಯೊಬ್ಬರು ಸಂಸತ್ತಿನಲ್ಲಿ ಈಶ್ವರನ ಭಾರತ ಮತ್ತು ಚಕ್ರವ್ಯೂಹದ ಬಗ್ಗೆ ಮಾತನಾಡುತ್ತಾರೆ ಎಂದರೆ, ಆತನನ್ನು ಮಾದಕ ದ್ರವ್ಯ ಸೇವನೆ ಪರೀಕ್ಷೆಗೊಳಪಡಿಸಬೇಕು ಎನಿಸುವುದಿಲ್ಲವೇ? ಅವರು ಸಂಸತ್ತಿಗೆ ಮದ್ಯ ಸೇವಿಸಿ ಅಥವಾ ಮಾದಕ ದ್ರವ್ಯದ ಮತ್ತಿನಲ್ಲೇ ಬರುತ್ತಾರೆ. ಅದು ಉತ್ತಮ ನಡೆ ಎಂದು ನನಗನಿಸುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಹುಲ್ ಅವರು ಮಾದಕ ವಸ್ತು ಸೇವಿಸುತ್ತಾರೆ ಎಂದು ಆರೋಪಿಸುತ್ತಿದ್ದೀರಾ ಎಂದು ಕೇಳಿದ್ದಕ್ಕೆ, ‘ಇಂತಹ ಹೇಳಿಕೆ ನೀಡುವ ವ್ಯಕ್ತಿಗಳು ತಮ್ಮ ಹಿಡಿತದಲ್ಲಿ ತಾವಿದ್ದಾರೆ ಎಂದು ಭಾವಿಸುತ್ತೀರಾ’ ಎಂದು ಮರು ಪ್ರಶ್ನೆ ಎಸೆದಿದ್ದಾರೆ.
ಅಂತರ ರಾಜ್ಯ
DK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಅ8) ಹೇಳಿಕೆ ನೀಡಿ “ಸ್ಟಿಂಗ್ ಆಪರೇಷನ್” ವಿಚಾರದ ಚರ್ಚೆ ವಿಚಾರದಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದ್ದಾರೆ.
ನವದೆಹಲಿ: ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಅ8) ಹೇಳಿಕೆ ನೀಡಿ “ಸ್ಟಿಂಗ್ ಆಪರೇಷನ್” ವಿಚಾರದ ಚರ್ಚೆ ವಿಚಾರದಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ”ನನ್ನ ಬಳಿ “ಸ್ಟಿಂಗ್ ಆಪರೇಷನ್” ಬಗ್ಗೆ ಎಲ್ಲ ಮಾಹಿತಿ ಇದೆ. ನಾನು ಸಿಎಂ ಆದ ಬಳಿಕ ಕೆಲವರು ಬಂದಿದ್ದರು. ಫೋಟೋ ಬೇಕಿದ್ದರೆ ನೀಡುತ್ತೇನೆ, ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂಬುದು ಗೊತ್ತಿದೆ. ಈ ವಿಚಾರದ ಹಿಂದಿನ ಪಿತಾಮಹ ಯಾರು ಎಂಬುದೂ ಗೊತ್ತಿದೆ. ಯಾರು ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಮಾಹಿತಿಯೂ ಇದೆ.ನಾನು ಜವಾಬ್ದಾರಿಯುತ ಸ್ಥಾನದಲ್ಲಿರುವುದರಿಂದ ಸುಮ್ಮನೆ ಮಾತನಾಡುವುದಿಲ್ಲ. ಎಲ್ಲ ಸಾಕ್ಷ್ಯಾಧಾರಗಳು ಇವೆ” ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಫಾರ್ಮ್-7 ಮುದ್ರಣ
ಬಿಜೆಪಿ ಕಾರ್ಯಕರ್ತರು ಅಲ್ಪಸಂಖ್ಯಾಕರ ಮತಗಳನ್ನು ದೊಡ್ಡ ಪ್ರಮಾಣದಲ್ಲಿ ಅಳಿಸಲು, ಮತದಾರರ ವಿವರಗಳನ್ನು ಮೊದಲೇ ಭರ್ತಿ ಮಾಡಲಾಗಿರುವ ಫಾರ್ಮ್-7ಗಳನ್ನು ಮುದ್ರಿಸಿ ಬಳಸಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದರು.
ಮತದಾರರ ವಿವರಗಳನ್ನು ಮೊದಲೇ ನಮೂದಿಸಿರುವ ಫಾರ್ಮ್-7ಗಳನ್ನು ಪ್ರದರ್ಶಿಸಿದ ಅವರು, ಈ ಫಾರ್ಮ್‌ಗಳನ್ನು ಬಿಜೆಪಿಯವರು ಮತದಾರರ ಹೆಸರುಗಳನ್ನು ಅಳಿಸಲು ಬಳಸಿದ್ದಾರೆ ಎಂದು ಆರೋಪಿಸಿದರು.
‘ಫಾರ್ಮ್-7 ದುರ್ಬಳಕೆಯನ್ನು ತಡೆಯಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಯಾವುದೇ ಕ್ರಮ ಕೈಗೊಂಡಿಲ್ಲ. ಇಡೀ ಜಗತ್ತು ಈ ಬೆಳವಣಿಗೆಯನ್ನು ಗಮನಿಸುತ್ತಿದೆ’ ಎಂದು ಶಿವಕುಮಾರ್ ಹೇಳಿದರು.
ಜಿಎಸ್‌ಟಿ ಮಂಡಳಿ ಸಭೆಗೆ ದೆಹಲಿಗೆ
ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬಂದಿರುವುದಾಗಿ ತಿಳಿಸಿದ ಶಿವಕುಮಾರ್, ‘ಇಂದು ಕೆಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ’ ಎಂದರು.
ರಾಹುಲ್ ಗಾಂಧಿ ಉತ್ತಮ ಕೆಲಸ ಮಾಡುತ್ತಿದ್ದಾರೆ
ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ದೇಶಾದ್ಯಂತ ನಡೆದಿರುವ ಬೆಳವಣಿಗೆಗಳು ಈಗಾಗಲೇ ಬಹಿರಂಗಗೊಂಡಿವೆ. ಚುನಾವಣಾ ಆಯೋಗದ ಸದಸ್ಯರೂ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ನ್ಯಾಯಾಲಯಗಳೂ ಇದನ್ನು ಗಮನಕ್ಕೆ ತೆಗೆದುಕೊಂಡಿವೆ. ಸೂಕ್ತ ನಿರ್ದೇಶನ ನೀಡಿದ ನ್ಯಾಯಾಲಯಗಳಿಗೆ ನಾನು ಕೃತಜ್ಞನಾಗಿದ್ದೇನೆ’ ಎಂದರು.
‘ನನ್ನ ರಾಜ್ಯದಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಅಳಿಸಲು ಪ್ರಯತ್ನಿಸಲಾಗುತ್ತಿದೆ. ಫಾರ್ಮ್-7 ಅರ್ಜಿಗಳನ್ನು ಬಿಜೆಪಿ ಕೇಂದ್ರ ಕಚೇರಿಯಲ್ಲೇ ಮುದ್ರಿಸಲಾಗಿದೆ ಎಂಬ ಆರೋಪವಿದೆ. ನಾವು ದೂರು ಸಲ್ಲಿಸಿದ ಬಳಿಕ ಅವರು ಕೂಡಲೇ ಹಲವು ಬಿಎಲ್‌ಒಗಳನ್ನು ಸಂಪರ್ಕಿಸಿ, ಆ ಫಾರ್ಮ್‌ಗಳನ್ನು ವಾಪಸ್ ಪಡೆದಿದ್ದಾರೆ. ಇದು ಅಪರಾಧವಲ್ಲವೇ? ತಡೆಯುವ ಮುನ್ನವೇ ಮತದಾರರ ಹೆಸರುಗಳನ್ನು ಅಳಿಸುವ ಪ್ರಯತ್ನ ನಡೆದಿತ್ತು’ ಎಂದು ಸಿಎಂ ಪ್ರಶ್ನಿಸಿದರು.
ಸ್ಟಿಂಗ್ ಆಪರೇಷನ್
ಡಿ.ಕೆ.ಶಿವಕುಮಾರ್ ಅವರೇ ಸಚಿವ ಸಂಪುಟ ಸಭೆಯಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಈ ಎಚ್ಚರಿಕೆ ನೀಡಿರುವುದು ಈಗ ತೀವ್ರ ಚರ್ಚೆಗೆ ಕಾರಣವಾಗಿದ್ದು, ವಿಪಕ್ಷಗಳಿಂದ ಕೆಲ ಸಚಿವರು ‘ಟಾರ್ಗೆಟ್’ ಆಗಿದ್ದು, ರಹಸ್ಯ ಕಾರ್ಯಾಚರಣೆ ನಡೆಸಲು ತಂಡಗಳನ್ನೇ ರಚನೆ ಮಾಡಲಾಗಿದೆ ಎಂಬುದಾಗಿ ಹೇಳಿದ್ದಾರೆನ್ನಲಾಗಿದೆ. ಈ ಬೆಳವಣಿಗೆ ಬಗ್ಗೆ ವಿಪಕ್ಷಗಳು ಖಾರವಾದ ಪ್ರತಿಕ್ರಿಯೆಯನ್ನೂ ನೀಡಿವೆ.
ಅಂತರ ರಾಜ್ಯ
Nana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಪ್ರಯತ್ನ ಫಲಿಸದೆ ಬೆಳಗ್ಗೆ 5.20ರ ಸುಮಾರಿಗೆ ನಿಧನರಾದರು.
ನವದೆಹಲಿ: ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಪ್ರಯತ್ನ ಫಲಿಸದೆ ಬೆಳಗ್ಗೆ 5.20ರ ಸುಮಾರಿಗೆ ನಿಧನರಾದರು.
ನಾನಾ ಪಾಟೇಕರ್ ಕೇವಲ ಬೆಳ್ಳಿತೆರೆಯ ನಟನಾಗಿ ಮಾತ್ರ ಗುರುತಿಸಿಕೊಂಡವರಲ್ಲ. ಸರಳತೆ, ಸಾಮಾಜಿಕ ಕಳಕಳಿ ಹಾಗೂ ದೇಶಪ್ರೇಮಕ್ಕೂ ಅವರು ಹೆಸರಾಗಿದ್ದರು. ಭಾರತೀಯ ಸೇನೆಯೊಂದಿಗೆ ಅವರಿಗಿದ್ದ ನಂಟು ಕೂಡ ಅವರ ಬದುಕಿನ ಪ್ರಮುಖ ಅಧ್ಯಾಯವಾಗಿತ್ತು.
ಸೇನಾ ತರಬೇತಿ ಪಡೆದು ಟೆರಿಟೋರಿಯಲ್ ಆರ್ಮಿಗೆ ಸೇರ್ಪಡೆ
1991ರಲ್ಲಿ ತೆರೆಕಂಡ ತಮ್ಮ ಪ್ರಸಿದ್ದ ‘ಪ್ರಹಾರ್: ದಿ ಫೈನಲ್ ಅಟ್ಯಾಕ್’ ಸಿನಿಮಾದ ಕಮಾಂಡೋ ಪಾತ್ರಕ್ಕಾಗಿ ನಾನಾ ಪಾಟೇಕರ್ ಅವರು ಯಾವುದೇ ಶಾರ್ಟ್‌ಕಟ್ ಬಳಸದೆ, ಮರಾಠಾ ಲೈಟ್ ಇನ್ವೆಂಟ್ರಿ ಜೊತೆ ಮೂರು ವರ್ಷಗಳ ಕಾಲ ಕಠಿಣ ಮಿಲಿಟರಿ ತರಬೇತಿ ಪಡೆದಿದ್ದರು. ಈ ತರಬೇತಿಯ ನಂತರ ಅವರು 1980ರ ದಶಕದ ಉತ್ತರಾರ್ಧದಲ್ಲಿ ಟೆರಿಟೋರಿಯಲ್ ಆರ್ಮಿಗೆ (ಪ್ರಾದೇಶಿಕ ಸೇನೆ) ಅಧಿಕೃತವಾಗಿ ಸೇರ್ಪಡೆಗೊಂಡಿದ್ದರು.
1999ರಲ್ಲಿ ಕಾರ್ಗಿಲ್ ಯುದ್ಧ ಆರಂಭವಾದಾಗ ಗಡಿಯಲ್ಲಿ ಸೈನಿಕರೊಂದಿಗೆ ಸೇವೆ ಸಲ್ಲಿಸುವ ಇಚ್ಛೆಯನ್ನು ಅವರು ವ್ಯಕ್ತಪಡಿಸಿದ್ದರು. ಅನುಮತಿ ಪಡೆದ ಬಳಿಕ ತಮ್ಮ ನಟನಾ ವೃತ್ತಿಜೀವನವನ್ನು ಕೆಲಕಾಲ ಬದಿಗೊತ್ತಿ ಸೇನೆಯ ಕ್ವಿಕ್ ರಿಯಾಕ್ಷನ್ ಟೀಮ್‌ನೊಂದಿಗೆ ಗಡಿ ಪ್ರದೇಶದಲ್ಲಿ ಸೇವೆ ಸಲ್ಲಿಸಿದ್ದರು.
ಶ್ರೀನಗರ, ಡ್ರಾಸ್ ಹಾಗೂ ಲೇಹ್ ಸೇರಿದಂತೆ ಕಠಿಣ ಹವಾಮಾನವಿರುವ ಪ್ರದೇಶಗಳಲ್ಲಿ ಸೈನಿಕರೊಂದಿಗೆ ಸುಮಾರು ಎರಡು ತಿಂಗಳು ಕಳೆದಿದ್ದರು. ಈ ಅವಧಿಯಲ್ಲಿ ಸುಮಾರು 20 ಕೆ.ಜಿ. ತೂಕ ಕಳೆದುಕೊಂಡಿದ್ದಾಗಿ ಅವರು ಹಿಂದಿನ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು.
ಗಣ್ಯರಿಂದ ಸಂತಾಪ
ನಾನಾ ಪಾಟೇಕರ್ ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ರಿತೇಶ್ ದೇಶ್‌ಮುಖ್ ಸೇರಿದಂತೆ ದೇಶದ ಪ್ರಮುಖ ರಾಜಕಾರಣಿಗಳು, ಚಲನಚಿತ್ರ ರಂಗದ ಗಣ್ಯರು ಹಾಗೂ ಕ್ರೀಡಾಪಟುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ”ಎಕ್ಸ್”ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ನಾನಾ ಪಾಟೇಕರ್‌ಜಿ ಅವರ ಅಭಿನಯದಲ್ಲಿನ ವಿಶಿಷ್ಟತೆ, ತೀವ್ರತೆ ಹಾಗೂ ಪ್ರಭಾವಶಾಲಿ ವ್ಯಕ್ತಿತ್ವ ಕೆಲವೇ ಕೆಲವು ಕಲಾವಿದರಲ್ಲಿ ಮಾತ್ರ ಕಾಣಸಿಗುತ್ತದೆ. ತಮ್ಮ ಪಾತ್ರಗಳ ಮೂಲಕ ಜ್ವಾಲಾಮುಖಿಯಂತೆ ಸ್ಫೋಟಿಸುವ ಪ್ರತಿಭೆ ಹಾಗೂ ಸೃಜನಶೀಲತೆಯನ್ನು ಅವರು ಪ್ರದರ್ಶಿಸುತ್ತಿದ್ದರು. ಬೆಳ್ಳಿತೆರೆಯ ಮೇಲೆ ಅವರು ಜೀವ ತುಂಬಿದ ಪಾತ್ರಗಳು ಹಲವು ತಲೆಮಾರುಗಳ ನೆನಪಿನಲ್ಲಿ ಶಾಶ್ವತವಾಗಿ ಉಳಿಯಲಿವೆ. ನೇರ ಹಾಗೂ ಸ್ಪಷ್ಟ ಅಭಿಪ್ರಾಯಗಳಿಗೆ ಹೆಸರಾಗಿದ್ದ ನಾನಾ ಪಾಟೇಕರ್ ಅವರದು ಅದೇ ವಿಶಿಷ್ಟ ಛಾಪು. ತಾವು ಕಂಡ ಸಂಗತಿಗಳ ಕುರಿತು ಯಾವುದೇ ಮುಚ್ಚುಮರೆಯಿಲ್ಲದೆ ಅತ್ಯಂತ ಸ್ಪಷ್ಟವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದರು’ ಎಂದು ಹೇಳಿದ್ದಾರೆ.
ಅವರ ಅಗಲಿಕೆಗೆ ಸಂತಾಪ ಸೂಚಿಸಿರುವ ನಟ ಅಕ್ಷಯ್ ಕುಮಾರ್, “ಅವರ ಗಂಭೀರ ಧ್ವನಿ, ನಟನೆಯಲ್ಲಿನ ತೀವ್ರತೆ ಹಾಗೂ ಪ್ರಾಮಾಣಿಕತೆ ಅವರನ್ನು ಅನನ್ಯ ವ್ಯಕ್ತಿಯನ್ನಾಗಿ ಮಾಡಿತ್ತು. ವೆಲ್ಕಮ್ ಹಾಗೂ ಇತ್ತೀಚಿನ ಹೌಸ್‌ಫುಲ್ 5 ಚಿತ್ರಗಳಲ್ಲಿ ಅವರೊಂದಿಗೆ ಕೆಲಸ ಮಾಡಿದ ನೆನಪುಗಳು ಎಂದಿಗೂ ನನ್ನೊಂದಿಗಿರುತ್ತವೆ” ಎಂದಿದ್ದಾರೆ.
ನಟ ರಿತೇಶ್ ದೇಶ್‌ಮುಖ್ ಪ್ರತಿಕ್ರಿಯಿಸಿ, “ನಾನಾ ಪಾಟೇಕರ್ ಅವರು ಬೆಳ್ಳಿಪರದೆಯ ಮೇಲಷ್ಟೇ ಅಲ್ಲದೆ, ನಿಜ ಜೀವನದಲ್ಲೂ ಒಬ್ಬ ರಿಯಲ್ ಹೀರೋ ಆಗಿದ್ದರು. ಅವರು ಕೈಗೊಂಡ ಸಾಮಾಜಿಕ ಕಾರ್ಯಗಳು ಅಪಾರವಾದವು. ನಾಯಕನಾಗಿ, ಖಳನಾಯಕನಾಗಿ ಹಾಗೂ ಹಾಸ್ಯನಟನಾಗಿ ಎಲ್ಲಾ ರೀತಿಯ ಪಾತ್ರಗಳಿಗೂ ಜೀವ ತುಂಬುತ್ತಿದ್ದ ಅವರ ಅಗಲಿಕೆ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ” ಎಂದು ಸ್ಮರಿಸಿದ್ದಾರೆ.
ಅಂತರ ರಾಜ್ಯ
CEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.
ಹೊಸದಿಲ್ಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆ ಹೆಚ್ಚಿಸಲಾಗಿದೆ.
ಜ್ಞಾನೇಶ್ ಕುಮಾರ್ ಅವರಿಗೆ ಈಗಾಗಲೇ Z-ಪ್ಲಸ್ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಇತ್ತೀಚಿನ ಗುಪ್ತಚರ ಮಾಹಿತಿ ಹಾಗೂ ದಿಲ್ಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಗಮನದಲ್ಲಿಟ್ಟುಕೊಂಡು ಅವರ ನಿವಾಸದ ಸುತ್ತಮುತ್ತ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಿಲ್ಲಿಯಲ್ಲಿ ವಿವಿಧ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಭದ್ರತಾ ಏಜೆನ್ಸಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಸಿಇಸಿ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಭಟನೆಗಳು ದೇಶದ ವಿವಿಧೆಡೆ ತೀವ್ರಗೊಳ್ಳುತ್ತಿರುವ ನಡುವೆಯೇ ಅವರ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.
-
Uncategorized18 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಬಿಗ್ ನ್ಯೂಸ್12 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು16 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
Uncategorized17 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ನಿಧನ ವಾರ್ತೆ16 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
ಅಪರಾಧ17 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ16 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್17 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ


















