Connect with us

ಸ್ಥಳೀಯ

Savanoor-ಸವಣೂರು ಕ್ಲಸ್ಟರ್ ಸಿ.ಆರ್.ಪಿ.ಯಾಗಿ ಜಯಂತ್ ವೈ.

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಕಾಣಿಯೂರು: ಸವಣೂರು ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ ಕೊಂಡಾಡಿಕೊಪ್ಪ ಶಾಲಾ ಮುಖ್ಯೋಪಾಧ್ಯಾಯರಾದ ಜಯಂತ್ ವೈ ಯವರು ನೇಮಕಗೊಂಡಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಕಳೆದ ಮೇ ತಿಂಗಳಲ್ಲಿ ನಡೆದ ನಿರ್ಧಿಷ್ಟಪಡಿಸಿದ ಹುದ್ದೆಗಳ ಅರ್ಹತಾ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ಸಿ.ಆರ್.ಪಿ.ಯಾಗಿ ಆಯ್ಕೆಯಾಗಿದ್ದರು.

Ad Widget

Ad Widget <> Ad Widget

ಈ ಹಿಂದೆ 2013 ರಿಂದ 2017 ರವರೆಗೆ ಕಾಣಿಯೂರು ಕ್ಲಸ್ಟರ್‌ನ ಸಿ.ಆರ್.ಪಿಯಾಗಿದ್ದ ಇವರು ಹಲವಾರು ಸೃಜನಶೀಲ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಇವರ ಶೈಕ್ಷಣಿಕ ಕಾರ್ಯಗಳನ್ನು ಗುರುತಿಸಿ ಶಿಕ್ಷಣ ಇಲಾಖೆಯು 2019ನೇ ಸಾಲಿನಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿ ನೀಡಿ ಗೌರವಿಸಿದೆ.



Ad Widget

ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿ, ಕ್ರಿಯಾಶೀಲ ಶಿಕ್ಷಕರಾಗಿರುವ ಇವರು ಕೊರೋನಾ ಸಂದರ್ಭದಲ್ಲಿ ಸಲ್ಲಿಸಿದ ಅತ್ಯುತ್ತಮ ಸೇವೆಯನ್ನು ಗುರುತಿಸಿ 2021 ರಲ್ಲಿ ಕಡಬ ತಾಲೂಕು ಆಡಳಿತ ವತಿಯಿಂದ ಗೌರವಿಸಲಾಗಿತ್ತು.

Ad Widget

Ad Widget

ಮೈಸೂರು ಯೋಗ ಫೌಂಡೇಶನ್ ವತಿಯಿಂದ ‘ಯೋಗ ಭೂಷಣ’ ಪ್ರಶಸ್ತಿ ಪುರಸ್ಕೃತರಾಗಿರುವ ಇವರು ರಜಾ ಅವಧಿಯಲ್ಲಿ ಶಾಲಾ ಮಕ್ಕಳಿಗೆ ಜಾನಪದ ನೃತ್ಯ, ಯಕ್ಷಗಾನ, ನೃತ್ಯ ತರಬೇತಿ ನೀಡುತ್ತಿದ್ದಾರೆ.

Ad Widget
Click to comment

Leave a Reply

ಅಪರಾಧ

Raid-ರಾಜ್ಯದ 45 ಐಸ್‌ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!

Published

on



Ad Widget

Ad Widget

Ad Widget

Ad Widget

ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ಅ. 9: ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ನಾಲ್ಕು ಘಟಕಗಳಲ್ಲಿ ನಿಯಮ ಉಲ್ಲಂಘನೆ
ಪರಿಶೀಲನೆ ವೇಳೆ ಬೆಂಗಳೂರಿನ ಜಯನಗರ 3ನೇ ಬ್ಲಾಕ್‌ನ ಸಾವರ ಐಸ್‌ಕ್ರೀಂ ಕೆಫೆ, ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯ ಎಂ.ಎನ್. ಎಂಟರ್‌ಪ್ರೈಸಸ್, ಮೈಸೂರಿನ ಜಾನ್ ಕ್ಯಾಂಡಿ ಐಸ್‌ಕ್ರೀಂ ತಯಾರಿಕಾ ಘಟಕ ಹಾಗೂ ರಾಯಚೂರಿನ ಜೆಮಿನಿ ಐಸ್‌ಕ್ರೀಂ ತಯಾರಿಕಾ ಘಟಕಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದಿದೆ.

Ad Widget

Ad Widget <> Ad Widget

ಈ ಘಟಕಗಳ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಹಾಗೂ ಸಂಬಂಧಿತ ನಿಯಮಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.



Ad Widget

70 ಆಹಾರ ಮಾದರಿಗಳ ಸಂಗ್ರಹ
ವಿಶೇಷ ತಪಾಸಣೆಯ ಸಂದರ್ಭದಲ್ಲಿ ವಿವಿಧ ಘಟಕಗಳಿಂದ ಐಸ್‌ಕ್ರೀಂ, ಹಾಲು, ಹಾಲಿನ ಪುಡಿ, ಫ್ಲೇವರಿಂಗ್ ಪದಾರ್ಥಗಳು, ಸಕ್ಕರೆ, ಆಹಾರ ಸೇರ್ಪಡೆ ಪದಾರ್ಥಗಳು ಸೇರಿದಂತೆ ವಿವಿಧ ಕಚ್ಚಾವಸ್ತುಗಳ ಒಟ್ಟು 70 ಮಾದರಿಗಳನ್ನು ಸಂಗ್ರಹಿಸಲಾಗಿದೆ.

Ad Widget

Ad Widget

ಈ ಮಾದರಿಗಳನ್ನು ಗುಣಮಟ್ಟ ಮತ್ತು ಆಹಾರ ಸುರಕ್ಷತಾ ಮಾನದಂಡಗಳ ಪರಿಶೀಲನೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
ಪರಿಶೀಲನೆಯ ವೇಳೆ ಅವಧಿ ಮೀರಿದ ಐಸ್‌ಕ್ರೀಂ, ಹಾಲು, ಬಿಸ್ಕತ್ ಹಾಗೂ ಕೊಬ್ಬರಿ ಪುಡಿ ಪತ್ತೆಯಾಗಿವೆ. ಅಲ್ಲದೆ, ಕೆಲವು ಆಹಾರ ಉತ್ಪನ್ನಗಳ ಮೇಲೆ ಲೇಬಲಿಂಗ್ ನಿಯಮಗಳನ್ನು ಸರಿಯಾಗಿ ಪಾಲಿಸದಿರುವುದೂ ಅಧಿಕಾರಿಗಳ ಗಮನಕ್ಕೆ ಬಂದಿದೆ ಎಂದು ಪ್ರಕಟಣೆ ತಿಳಿಸಿದೆ.

ಆಹಾರ ಪದಾರ್ಥಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಇಂತಹ ತಪಾಸಣೆಗಳನ್ನು ಮುಂದುವರಿಸಲಾಗುವುದು. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

Ad Widget
Continue Reading

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಗ್ಲಿಷ್ ಭಾಷಣ ಸ್ಪರ್ಧೆ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.

Ad Widget

Ad Widget

Ad Widget

Ad Widget

ಪುತ್ತೂರು, ಅ.8: ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.

Ad Widget

Ad Widget

Ad Widget alt="Ad Widget"/>

Ad Widget

“ಎಮೋಷನಲ್ ಇಂಟೆಲಿಜೆನ್ಸ್, ಎಮೋಷನಲ್ ಲೈಫ್, ಎಮೋಷನಲ್ ಕೋಶಂಟ್ ಮತ್ತು ಎಮೋಷನಲ್ ಮ್ಯಾನೇಜ್ಮೆಂಟ್” ಎಂಬ ವಿಷಯದ ಕುರಿತು ನಡೆದ ಈ ಸ್ಪರ್ಧೆಯನ್ನು ಪ್ರಾಂಶುಪಾಲರಾದ ರೆ| ಡಾ| ಆಂಟನಿ ಪ್ರಕಾಶ್ ಮೊಂತೇರೊ ಅವರು ಉದ್ಘಾಟಿಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಇಂದಿನ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಭಾವನಾತ್ಮಕ ಬುದ್ಧಿವಂತಿಕೆ ಮತ್ತು ಭಾವನಾತ್ಮಕ ನಿರ್ವಹಣೆಯ ಪ್ರಸ್ತುತತೆಯನ್ನು ಎತ್ತಿ ತೋರಿಸಿದರು. ಯಶಸ್ಸಿಗೆ ಕೇವಲ ಶೈಕ್ಷಣಿಕ ಜ್ಞಾನವೊಂದೇ ಸಾಕಾಗುವುದಿಲ್ಲ; ವಿದ್ಯಾರ್ಥಿಗಳು ತಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ನಿರ್ವಹಿಸುವ, ಇತರರೊಂದಿಗೆ ಸಹಾನುಭೂತಿ ಹೊಂದುವ, ಸವಾಲುಗಳನ್ನು ಎದುರಿಸುವ ಮತ್ತು ಆರೋಗ್ಯಕರ ಸಂಬಂಧಗಳನ್ನು ಕಾಪಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರಬೇಕು” ಎಂದು ಅವರು ಅಭಿಪ್ರಾಯಪಟ್ಟರು.



Ad Widget

ಭಾಷಣ ಸ್ಪರ್ಧೆಗಳಂತಹ ವೇದಿಕೆಗಳು ವಿದ್ಯಾರ್ಥಿಗಳು ತಮ್ಮ ಆಲೋಚನೆಗಳನ್ನು ಆತ್ಮವಿಶ್ವಾಸದಿಂದ ವ್ಯಕ್ತಪಡಿಸಲು, ವಿಮರ್ಶಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಲು ಮತ್ತು ತಮ್ಮ ಆಲೋಚನೆಗಳನ್ನು ಪರಿಣಾಮಕಾರಿಯಾಗಿ ಸಂವಹನ ಮಾಡಲು ಕಲಿಯಲು ಅನುವು ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು.

Ad Widget

Ad Widget

ಸ್ಪರ್ಧೆಯಲ್ಲಿ ಕಾಲೇಜಿನ ನಿವೃತ್ತ ಉಪ-ಪ್ರಾಂಶುಪಾಲರಾದ ಡಾ| ಎ. ಪಿ. ರಾಧಾಕೃಷ್ಣ ಮತ್ತು ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ| ಈಶ್ವರ ಗೌಡ ಪಿ.  ಅವರು ತೀರ್ಪುಗಾರರಾಗಿ ಭಾಗವಹಿಸಿದ್ದರು

ಸ್ಪರ್ಧೆಯ ಫಲಿತಾಂಶ:

ತೀವ್ರ ಪೈಪೋಟಿಯಿಂದ ನಡೆದ ಈ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಎಂ.ಸಿ.ಎ ತರಗತಿಯ ಡೆಲಿಶಾ ಲೋಬೋ ಪ್ರಥಮ ಸ್ಥಾನ, ತೃತೀಯ ಬಿ.ಕಾಂನ ಅಪೂರ್ವ ಡಿ. ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಬಿ.ಸಿ.ಎ ತರಗತಿಯ ಪ್ರತ್ಯಕ್ಷ ಪಿ. ಎ. ತೃತೀಯ ಸ್ಥಾನ ಪಡೆದರು. ಜೆನಿಶಾ ಕುಟಿನ್ಹಾ (ದ್ವಿತೀಯ ಬಿ.ಎಸ್ಸಿ) ಮತ್ತು ಕೃಷ್ಣ ವಂಶಿ (ದ್ವಿತೀಯ ಬಿ.ಬಿ.ಎ) ಸಮಾಧಾನಕರ ಬಹುಮಾನಗಳನ್ನು ಪಡೆದುಕೊಂಡರು.

ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಸಂಯೋಜಕರಾದ ಪ್ರಶಾಂತ್ ರೈ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕರಾದ ಅಬ್ದುಲ್ ರೆಹಮಾನ್ ಜಿ. ವಂದನಾರ್ಪಣೆ ಮಾಡಿದರು ಸನ್ನಿಧಿ (ಪ್ರಥಮ ಬಿ.ಬಿ.ಎ.) ಮತ್ತು ಮಾನಸ (ತೃತೀಯ ಬಿ.ಎಸ್ಸಿ.) ಪ್ರಾರ್ಥಿಸಿದರು.

ಸ್ನಾತಕೋತ್ತರ ವಿಭಾಗದ ಗ್ರಂಥಪಾಲಕ ಮನೋಹರ್ ಎಸ್. ಜಿ. ಹಾಗೂ ಎಂ.ಸಿ.ಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅಕ್ಷತಾ ಬಿ. ಸಹಕರಿಸಿದರು.

Ad Widget
Continue Reading

ಶಿಕ್ಷಣ

Philomena-ಎತ್ತರ ಜಿಗಿತ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಸುಫೈ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ತುಮಕೂರು ಡಿಸ್ಟ್ರಿಕ್ಟ್ ಅಥ್ಲೆಟಿಕ್ ಅಸೋಸಿಯೇಷನ್ ನ ಆಶ್ರಯದಲ್ಲಿ ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು, ಅ 23 ಮತ್ತು 27ರಂದು ತಮಿಳುನಾಡಿನ ಜೆ. ಎನ್ ಕ್ರೀಡಾಂಗಣ ಚೆನ್ನೈ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎತ್ತರ ಜಿಗಿತ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಬಪ್ಪಳಿಗೆ ನಿವಾಸಿ ಇಸ್ಮೈಲ್ ಪಿ ಎಂ ಹಾಗೂ ಕಮರುನ್ನಿಸಾ ದಂಪತಿಗಳ ಪುತ್ರನಾಗಿರುತ್ತಾರೆ.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading