ಬಿಗ್ ನ್ಯೂಸ್
Highest rainfall-ರಾಜ್ಯದಲ್ಲಿ ಈ ಬಾರಿ 30 ವರ್ಷಗಳಲ್ಲೇ ದಾಖಲೆ ಮಳೆ! ಕರಾವಳಿಯಲ್ಲೂ ಎರಡೂವರೆ ದಶಕದ ಬಳಿಕ ಅತ್ಯಧಿಕ ಮಳೆ
ವಾಡಿಕೆ ಪ್ರಕಾರ ಜುಲೈನಲ್ಲಿ 263 ಮಿ.ಮೀ. ಮಳೆಯಾಗಬೇಕು. ಆದರೆ, ಈ ಬಾರಿ 390 ಮಿ.ಮೀ ಮಳೆಯಾಗುವ ಮೂಲಕ ಶೇ.48ರಷ್ಟು ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ.27ರಷ್ಟು, ಉತ್ತರ ಒಳನಾಡಿನಲ್ಲಿ ಶೇ.22ರಷ್ಟು, ಮಲೆನಾಡಿನಲ್ಲಿ ಶೇ.64ರಷ್ಟು ಹಾಗೂ ಕರಾವಳಿಯಲ್ಲಿ ಶೇ.54ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಕೆಎಸ್ಎನ್ಡಿಎಂಸಿ ತಿಳಿಸಿದೆ.
ಬೆಂಗಳೂರು : ಆ 3 : ಪ್ರಸಕ್ತ ಸಾಲಿನ ಜೂನ್ ಮತ್ತು ಜುಲೈ ಅವಧಿಯಲ್ಲಿ ಸುರಿದ ಮಳೆಯು 1994ರ ನಂತರ ರಾಜ್ಯದಲ್ಲಿ ಸುರಿದ ಅತಿ ಹೆಚ್ಚು ಹಾಗೂ ದಾಖಲೆಯ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ) ಅಂಕಿ-ಅಂಶಗಳು ಬಹಿರಂಗಪಡಿಸಿದೆ. ಎರಡೂವರೆ ದಶಕದ ಬಳಿಕ ಕರಾವಳಿ ಜಿಲ್ಲೆಗಳಲ್ಲಿಯೂ ದಾಖಲೆ ಮಳೆ ವರದಿಯಾಗಿದೆ. 1999ರಲ್ಲಿ ವಾಡಿಕೆ ಪ್ರಮಾಣಕ್ಕಿಂತ ಶೇ.30ರಷ್ಟು ಹೆಚ್ಚಿನ ಮಳೆಯಾಗಿತ್ತು. ಆ ನಂತರ ಇಷ್ಟೊಂದು ಮಳೆಯಾದ ವರದಿಯಾಗಿಲ್ಲ.
ಕಳೆದ ವರ್ಷ ಮಳೆ ಕೊರತೆಯಿಂದಾಗಿ ಭೀಕರ ಬರದಿಂದ ತತ್ತರಿಸಿದ್ದ ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಆರಂಭದಿಂದ ಈವರೆಗೆ ಸುರಿದ ಮಳೆ ಸಾಮಾನ್ಯ ಮಳೆಯಲ್ಲ. ಇದು, ಕಳೆದ ಮೂರು ದಶಕದಲ್ಲಿ ಸುರಿದ ದಾಖಲೆಯ ಮಳೆಯಾಗಿದೆ. ಕಳೆದ ವರ್ಷ ಮುಂಗಾರು ಅವಧಿಯಲ್ಲಿ ವಾಡಿಕೆ ಪ್ರಮಾಣಕ್ಕಿಂತ ಶೇ.25ರಷ್ಟು, ಹಿಂಗಾರು ಅವಧಿಯಲ್ಲಿ ಶೇ.38ರಷ್ಟು ಮಳೆ ಕೊರತೆ ಉಂಟಾಗಿತ್ತು. ಇದರಿಂದ ರಾಜ್ಯದಲ್ಲಿ ಭೀಕರ ಬರ ಸೃಷ್ಟಿಯಾಗಿತ್ತು. ಹಲವು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಿತ್ತು.
ಆದರೆ, ಈ ಬಾರಿ ಮುಂಗಾರು ಅವಧಿಯಲ್ಲಿ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಮುಂಗಾರು ಅವಧಿಯ ನಾಲ್ಕು ತಿಂಗಳ ಪೈಕಿ ಪ್ರಸಕ್ತ ಜೂನ್ ಮತ್ತು ಜುಲೈ ಅವಧಿಯಲ್ಲಿ ಸುರಿದ ಮಳೆಯು 1994ರ ನಂತರ ಸುರಿದ ಅತಿ ಹೆಚ್ಚು ಹಾಗೂ ದಾಖಲೆಯ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ) ಅಂಕಿ-ಅಂಶಗಳು ದೃಢಪಡಿಸಿವೆ.
ಪೂರ್ವ ಮುಂಗಾರು ಅವಧಿಯಲ್ಲಿ ವಾಡಿಕೆ ಪ್ರಮಾಣಕ್ಕಿಂತ ಹೆಚ್ಚಿನ ಮಳೆಯಾದರೂ ಜೂನ್ ನಲ್ಲಿ ವಾಡಿಕೆ ಪ್ರಮಾಣಕ್ಕಿಂತ ಕಡಿಮೆ ಮಳೆಯಾದ ವರದಿಯಾಗಿತ್ತು. ಆದರೆ, ಜುಲೈನಲ್ಲಿ ಸುರಿದ ಮಳೆ ಜೂನ್ ತಿಂಗಳ ಕೊರತೆ ನೀಗಿಸುವುದರೊಂದಿಗೆ ಮಳೆ ಹಂಚಿಕೆಯಲ್ಲಿ ಆಗಿದ್ದ ಅಸಮತೋಲನವನ್ನೂ ಸರಿದೂಗಿಸಿದೆ
30 ವರ್ಷದಲ್ಲಿ ಕೊರತೆಯೇ ಅಧಿಕ:
ರಾಜ್ಯ ದಲ್ಲಿ 1994ರಿಂದ 2024ರ ಜೂನ್, ಜುಲೈ ಅವಧಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾದ ವರ್ಷಗಳೇ ಹೆಚ್ಚಾಗಿವೆ. 18 ವರ್ಷ ವಾಡಿಕೆ ಪ್ರಮಾಣಕ್ಕಿಂತ ಮಳೆ ಕಡಿಮೆಯಾಗಿದೆ. ಪ್ರಸಕ್ತ ವರ್ಷ ಸೇರಿದಂತೆ 12 ವರ್ಷ ಮಾತ್ರ ವಾಡಿಕೆಗಿಂತ ಹೆಚ್ಚಿನ ಪ್ರಮಾಣದ ಮಳೆಯಾಗಿದೆ.
ಕರಾವಳಿಯಲ್ಲಿ 2 ದಶಕದ ಮಳೆ:
ಕರಾವಳಿಯಲ್ಲಿಯೂ 25 ವರ್ಷಗಳ ಬಳಿಕ ಇಷ್ಟು ಆಗಾಧ ಪ್ರಮಾಣದಲ್ಲಿ ಮಳೆ ಸುರಿದಿದೆ. ಜುಲೈ ಅಂತ್ಯದ ವರೆಗೆ ವಾಡಿಕೆ ಪ್ರಕಾರ 1940 ಮಿ. ಮೀ ಮಳೆಯಾಗಬೇಕು. ಆದರೆ, ಈ ಬಾರಿ 2409 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.24ರಷ್ಟು ಹೆಚ್ಚಾಗಿದೆ. 1999ರಲ್ಲಿ ವಾಡಿಕೆ ಪ್ರಮಾಣಕ್ಕಿಂತ ಶೇ.30ರಷ್ಟು ಹೆಚ್ಚಿನ ಮಳೆಯಾಗಿತ್ತು. ಆ ನಂತರ ಇಷ್ಟೊಂದು ಮಳೆಯಾದ ವರದಿಯಾಗಿಲ್ಲ. 2003ರಲ್ಲಿ ಶೇ.10ರಷ್ಟು ಹಾಗೂ 2013ರಲ್ಲಿ ಶೇ.17ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಕೆಎಸ್ಎನ್ ಡಿಎಂಸಿ ಅಂಕಿ ಅಂಶದಲ್ಲಿ ತಿಳಿಸಲಾಗಿದೆ.
ಜುಲೈಯಲ್ಲಿ ವಾಡಿಕೆಗಿಂತ ಶೇ.48 ಹೆಚ್ಚು ಮಳೆ
ವಾಡಿಕೆ ಪ್ರಕಾರಜುಲೈನಲ್ಲಿ 263 ಮಿ.ಮೀ. ಮಳೆಯಾಗಬೇಕು. ಆದರೆ, ಈ ಬಾರಿ 390 ಮಿ.ಮೀ ಮಳೆಯಾಗುವ ಮೂಲಕ ಶೇ.48ರಷ್ಟು ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ.27ರಷ್ಟು, ಉತ್ತರ ಒಳನಾಡಿನಲ್ಲಿ ಶೇ.22ರಷ್ಟು, ಮಲೆನಾಡಿನಲ್ಲಿ ಶೇ.64ರಷ್ಟು ಹಾಗೂ ಕರಾವಳಿಯಲ್ಲಿ ಶೇ.54ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಕೆಎಸ್ಎನ್ಡಿಎಂಸಿ ತಿಳಿಸಿದೆ.
•
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.
ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.
ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.
ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.
ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.
ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
-
ಬಿಗ್ ನ್ಯೂಸ್22 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ22 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು23 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಶಿಕ್ಷಣ23 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ5 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಅಂತರ ರಾಜ್ಯ4 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ5 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ6 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















