ಕಾರ್ಯಕ್ರಮಗಳು
Astrologer-ಜ್ಯೋತಿಷಿ ಶಿವಪ್ರಸಾದ್ ಭಾರದ್ವಾಜರಿಗೆ ಸೇವಾರತ್ನ ಅವಾರ್ಡ್
ಮಂಗಳೂರಿನ ಅತ್ತಾವರದಲ್ಲಿ ಇರುವ ಟ್ರಿನಿಟಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಮ್ಯಾಕ್ಸ್ ಲೈಫ್ ಇನ್ಯೂರೆನ್ಸ್ ಮತ್ತು ಆಕ್ಸಿಸ್ ಬ್ಯಾಂಕ್ ವತಿಯಿಂದ ಜಿಲ್ಲಾ ಮಟ್ಟದ ಸೇವಾ ರತ್ನ ಅವಾರ್ಡ್ ನ್ನು ಆ. 2ರಂದು ಪುತ್ತೂರಿನ ಜ್ಯೋತಿಷಿ ಶಿವಪ್ರಸಾದ್ ಭಾರದ್ವಾಜ್ ರವರಿಗೆ ನೀಡಿ ಗೌರವಿಸಲಾಯಿತು.
ಮಂಗಳೂರಿನ ಅತ್ತಾವರದಲ್ಲಿ ಇರುವ ಟ್ರಿನಿಟಿ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಮ್ಯಾಕ್ಸ್ ಲೈಫ್ ಇನ್ಯೂರೆನ್ಸ್ ಮತ್ತು ಆಕ್ಸಿಸ್ ಬ್ಯಾಂಕ್ ವತಿಯಿಂದ ಜಿಲ್ಲಾ ಮಟ್ಟದ ಸೇವಾ ರತ್ನ ಅವಾರ್ಡ್ ನ್ನು ಆ. 2ರಂದು ಪುತ್ತೂರಿನ ಜ್ಯೋತಿಷಿ ಶಿವಪ್ರಸಾದ್ ಭಾರದ್ವಾಜ್ ರವರಿಗೆ ನೀಡಿ ಗೌರವಿಸಲಾಯಿತು.

ಇವರು ಪುತ್ತೂರಿನ ಎ. ಪಿ. ಎಂ. ಸಿ. ರಸ್ತೆಯಲ್ಲಿರುವ ಅಲ್ಫಾ ಕಾಂಪ್ಲೆಕ್ಸ್ ನಲ್ಲಿ ಶ್ರೀಸಾಯಿ ಜ್ಯೋತಿಷ್ಯಾಲಯವನ್ನು ನಡೆಸುತ್ತಿದ್ದಾರೆ.
ಮೈಸೂರಿನ ಶ್ರೀ ಲಗಧ ಮಹರ್ಷಿ ಜ್ಯೋತಿರ್ವಿಜ್ಞಾನ ಸಂಸ್ಥೆಯಿಂದ ತರಬೇತು ಪಡೆದಿರುತ್ತಾರೆ. ಮೊಬೈಲ್ ಹಾಗೂ ಆನ್ ಲೈನ್ ಗೇಮ್ ಗೀಳು ಹೊಂದಿರುವವರ ಸಮಸ್ಯೆ ಪರಿಹರಿಸುವಲ್ಲಿ ಇವರು ಯಶಸ್ವಿಯಾಗಿದ್ದಾರೆ.
ಮಂಗಳೂರು
Mangalore Dasara-ಮಂಗಳೂರು ದಸರಾಕ್ಕೆ ಚಾಲನೆ: ಸಿಎಂ ಆಗಮನ ಮುಂದೂಡಿಕೆ
ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ ದೇವಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಮಂಗಳೂರು: ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ ದೇವಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.
ಬೆಳಗ್ಗೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ ಹಾಗೂ ನವಕಲಶಾಭಿಷೇಕ ನೆರವೇರಿತು. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಶ್ರೀ ಮಹಾಗಣಪತಿ, ಶ್ರೀ ಶಾರದಾ ಮಾತೆ, ಆದಿಶಕ್ತಿ ಹಾಗೂ ಸ್ಕಂದಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ ಮತ್ತು ಕೂಷ್ಮಾಂಡಿನಿ ದೇವಿಯರ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಯಿತು.
ರವಿವಾರದ ರಜೆಯ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯರ ವಿಗ್ರಹಗಳ ಪ್ರತಿಷ್ಠಾಪನೆಯ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.
ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹಾಗೂ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಕ್ಷೇತ್ರಾಡಳಿತ ಮಂಡಳಿಯ ಟ್ರಸ್ಟಿಗಳು, ಕ್ಷೇತ್ರ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.
ಈ ಬಾರಿ ಮಹಿಳಾ ದಸರಾ ವಿಶೇಷ ಆಕರ್ಷಣೆ
ಕ್ಷೇತ್ರದ ಖಜಾಂಚಿ ಪದ್ಮರಾಜ್ ಆರ್. ಪೂಜಾರಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಆಡಳಿತ ಮಂಡಳಿ ಹಾಗೂ ಅಭಿವೃದ್ಧಿ ಸಮಿತಿಯ ಸಹಯೋಗದೊಂದಿಗೆ ಈ ಬಾರಿಯ ಮಂಗಳೂರು ದಸರಾ ನಡೆಯುತ್ತಿದೆ ಎಂದು ತಿಳಿಸಿದರು.
ಕಳೆದ ವರ್ಷ ಆರಂಭಿಸಿದ್ದ ಮಕ್ಕಳ ದಸರಾ ಮತ್ತು ಕಿನ್ನಿಪಿಲಿ ಕಾರ್ಯಕ್ರಮಗಳನ್ನು ಈ ಬಾರಿಯೂ ಮುಂದುವರಿಸಲಾಗುವುದು. ಇದೇ ಮೊದಲ ಬಾರಿಗೆ ಮಹಿಳಾ ದಸರಾ ಆಯೋಜಿಸಲಾಗುತ್ತಿದ್ದು, ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳು ಹಾಗೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಭಕ್ತರ ಬೇಡಿಕೆಯಂತೆ ಅಕ್ಟೋಬರ್ 20ರಂದು ಅಕ್ಷರಾಭ್ಯಾಸ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ. ಈ ಬಾರಿ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಶೇ. 25ರಿಂದ 30ರಷ್ಟು ಹೆಚ್ಚಾಗುವ ನಿರೀಕ್ಷೆಯಿದ್ದು, ವ್ಯವಸ್ಥಿತ ನಿರ್ವಹಣೆಗಾಗಿ ಒಂದು ಸಾವಿರಕ್ಕೂ ಹೆಚ್ಚು ಸ್ವಯಂಸೇವಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಆಗಮನ ಮುಂದೂಡಿಕೆ
ಸೋಮವಾರ ಸಂಜೆ 6.30ಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳೂರು ದಸರಾ ಮಹೋತ್ಸವವನ್ನು ಉದ್ಘಾಟಿಸಬೇಕಿತ್ತು. ಆದರೆ ತುರ್ತು ಕಾರಣದಿಂದ ದೆಹಲಿಗೆ ತೆರಳಬೇಕಾದ ಹಿನ್ನೆಲೆಯಲ್ಲಿ ಅವರ ಪ್ರವಾಸ ರದ್ದಾಗಿದೆ. ಅಕ್ಟೋಬರ್ 15 ಅಥವಾ 16ರಂದು ಮುಖ್ಯಮಂತ್ರಿ ಕ್ಷೇತ್ರಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಪದ್ಮರಾಜ್ ಆರ್. ಪೂಜಾರಿ ತಿಳಿಸಿದರು.
ಮಂಗಳೂರು
Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ
ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.
ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.
ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಸ್ಥಳೀಯ
Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.
-
Uncategorized24 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
ಅಂತರ ರಾಜ್ಯ10 hours agoKasaragod-ಕಾಸರಗೋಡು: ಮದುವೆ ರದ್ದು, ₹7.57 ಲಕ್ಷದ ಉಡುಗೊರೆ ವಾಪಸ್ ನೀಡದೆ ವಂಚನೆ ಆರೋಪ; ಯುವತಿ ಸಹಿತ ಮೂವರ ವಿರುದ್ಧ ಪ್ರಕರಣ
-
ಬಿಗ್ ನ್ಯೂಸ್10 hours agoPuttur-ಪುತ್ತೂರು : ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ಒಳಚರಂಡಿ ಕಾಮಗಾರಿ ಟೆಂಡರ್ ಸ್ಥಗಿತಗೊಳಿಸಿ : ನಗರಸಭೆಗೆ ಮನವಿ
-
ಅಪರಾಧ7 hours agoUdupi-ಉಡುಪಿ: ಹೇಮಂತ್ ಪೂಜಾರಿ ಬೇಟೆಗೆ ಪೊಲೀಸರ ಬಲೆ; ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ವಶಕ್ಕೆ..!
-
ಮಂಗಳೂರು4 hours agoMangalore-ಮಂಗಳೂರು: ಅನೈತಿಕ ಸಂಬಂಧ ಶಂಕೆ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ
-
ಸುಳ್ಯ7 hours agoSullia-ಸುಳ್ಯ: ಕಳ್ಳತನಕ್ಕೆ ಬಂದವನು ಮಕ್ಕಳನ್ನು ಕಂಡು ಪರಾರಿ; ಕೇರಳ ಮೂಲದ ಆರೋಪಿ ಬಂಧನ
-
ಸ್ಥಳೀಯ10 hours agoSharavuru-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಂದ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ
-
ಅಂತರ ರಾಜ್ಯ7 hours agoElon Musk-ಅಂಬಾನಿ ಮತ್ತು ಅವರ ಬೆಂಬಲಿಗರ ವಾದ ಹಾಸ್ಯಾಸ್ಪದವಾಗಿದೆ : ಸ್ಟಾರ್ ಲಿಂಕ್ ಕುರಿತು ಇಲಾನ್ ಮಸ್ಕ್


















