ಕ್ರೀಡೆ
Free Visa For All ನೀರಜ್ ಚೋಪ್ರಾ ಚಿನ್ನ ಗೆದ್ರೆ ಎಲ್ಲರಿಗೂ ಫ್ರೀ ವೀಸಾ ಗ್ಯಾರಂಟಿ…!! ಈ ಬಿಗ್ ಆಫರ್ ನೀಡಿದ್ದು ಯಾರು ಗೊತ್ತಾ..?

ಮಂಗಳವಾರ, ಲಿಂಕ್ಡ್‌ಇನ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಒಲಿಂಪಿಕ್ಸ್‌ನಲ್ಲಿ ನೀರಜ್ ಚೋಪ್ರಾ ಚಿನ್ನ ಗೆದ್ದರೆ ನಾನು ಎಲ್ಲರಿಗೂ ಉಚಿತ ವೀಸಾವನ್ನು ಕಳುಹಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ. ಅವರ ಈ ಘೋಷಣೆಯಿಂದ ಈಗಾಗಲೇ ಅಟ್ಲಿಸ್ ವೆಬ್‌ಸೈಟ್‌ಗೆ ಭೇಟಿ ನೀಡುವವರ ಸಂಖ್ಯೆ 124% ಹೆಚ್ಚಳಕ್ಕೆ ಕಾರಣವಾಗಿದೆ. ದಿಢೀರ್ ಈ ರೀತಿ ಘೋಷಣೆ ಮಾಡಲು ಕಾರಣವೇನು ಎಂಬುವುದು ಎಲ್ಲರ ಕುತೂಹಲಕಾರಿ ಪ್ರಶ್ನೆಯಾಗಿದೆ.
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಎಲ್ಲಾ ರೀತಿಯ ಕ್ರೀಡಾ ಸ್ಪರ್ಧೆಗಳು ಬಹು ಬಿರುಸಿನಿಂದ ಸಾಗುತ್ತಿದೆ. ಭಾರತ ಈಗಾಗಲೇ ಮೂರು ಪದಕಗಳನ್ನೂ ಗೆದ್ದುಕೊಂಡಿದೆ. ಇದೀಗ ನೀರಜ್ ಚೋಪ್ರಾ ಅವರ ಪಂದ್ಯದ ಮೇಲೆ ಎಲ್ಲರ ಕಣ್ಣು. ಇವರ ಹೆಸರು ಭಾರತೀಯರಿಗೆ ಅಪರಿಚಿತವಲ್ಲ ಬಿಡಿ. ಭಾರತದ ಗೋಲ್ಡನ್ ಬಾಯ್ ಎಂದೇ ಫೇಮಸ್ ಆಗಿರುವ ನೀರಜ್ ಚೋಪ್ರಾ ಆಗಸ್ಟ್ 6 ರಂದು ನಡೆಯಲಿರುವ 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್ ಥ್ರೋ ಸ್ಪರ್ಧೆಗೆ ಸಜ್ಜಾಗುತ್ತಿದ್ದಾರೆ.
ಫ್ರೀ ವೀಸಾ ಆಫರ್..!
ಹಾಲಿ ಒಲಿಂಪಿಕ್ ಚಾಂಪಿಯನ್ ಆಗಿರುವ ಚೋಪ್ರಾ ಅವರಿಂದ ಮತ್ತೊಂದು ಚಿನ್ನದ ಪದಕಕ್ಕಾಗಿ ಕಾತರದಿಂದ ಕಾಯುತ್ತಿರುವ ಲಕ್ಷಾಂತರ ಭಾರತೀಯರ ಭರವಸೆ ನೀರಜ್ ಚೋಪ್ರಾ ಮೇಲಿದೆ. ಈ ನಡುವೆ ಆನ್‌ಲೈನ್ ವೀಸಾ ಅಪ್ಲಿಕೇಶನ್ ಪ್ಲಾಟ್‌ಫಾರ್ಮ್ ಅಟ್ಲಿಸ್‌ನ ಸಂಸ್ಥಾಪಕ ಮತ್ತು ಸಿಇಒ ಮೊಹಕ್ ನಹ್ತಾ ಒಂದು ದೊಡ್ಡ ಆಫರ್ ನೀಡಿದ್ದಾರೆ.
ನೀರಜ್ ಚೋಪ್ರಾ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದರೆ ‘ಎಲ್ಲರಿಗೂ ಉಚಿತ ವೀಸಾ’ ಭರವಸೆ ಅವರು ನೀಡಿದ್ದಾರೆ. ಮಂಗಳವಾರ, ಲಿಂಕ್ಡ್‌ಇನ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಒಲಿಂಪಿಕ್ಸ್‌ನಲ್ಲಿ ನೀರಜ್ ಚೋಪ್ರಾ ಚಿನ್ನ ಗೆದ್ದರೆ ನಾನು ಎಲ್ಲರಿಗೂ ಉಚಿತ ವೀಸಾವನ್ನು ಕಳುಹಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ. ಅವರ ಈ ಘೋಷಣೆಯಿಂದ ಈಗಾಗಲೇ ಅಟ್ಲಿಸ್ ವೆಬ್‌ಸೈಟ್‌ಗೆ ಭೇಟಿ ನೀಡುವವರ ಸಂಖ್ಯೆ 124% ಹೆಚ್ಚಳಕ್ಕೆ ಕಾರಣವಾಗಿದೆ. ದಿಢೀರ್ ಈ ರೀತಿ ಘೋಷಣೆ ಮಾಡಲು ಕಾರಣವೇನು ಎಂಬುವುದು ಎಲ್ಲರ ಕುತೂಹಲಕಾರಿ ಪ್ರಶ್ನೆಯಾಗಿದೆ.

ನಹ್ತಾ ಪೋಸ್ಟ್ ಎಲ್ಲೆಡೆ ವೈರಲ್..!
ಮೋಹಕ್ ನಹ್ತಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಪೋಸ್ಟ್ ಎಲ್ಲೆಡೆ ವೈರಲ್ ಆಗುತ್ತಿದ್ದು, ಇದು ಹೇಗೆ ಸಾಧ್ಯ? ಎಷ್ಟು ದಿನ ಈ ಆಫರ್ ಇರುತ್ತದೆ? ಯಾರಿಗೆ ನೀವು ವೀಸಾ ಮಾಡಿಕೊಡುತ್ತೀರಿ? ಎಂದು ನೆಟ್ಟಿಗರು ಕಾಮೆಂಟ್ ಮಾಡುವ ಮೂಲಕ ಕೆಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ನೆಟ್ಟಿಗರಿಂದ ಬಂದ ಹಲವು ಪ್ರಶ್ನೆಗಳನ್ನು ಕಂಡ ನಹ್ತಾ, ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಉಚಿತ ವೀಸಾ ನೀಡುವುದರ ಬಗ್ಗೆ ಮೆಹ್ತಾ ಏನ್ ಹೇಳ್ತಾರೆ ಗೊತ್ತಾ..?
ನೀರಜ್ ಚೋಪ್ರಾ ಚಿನ್ನ ಗೆದ್ದರೆ ಎಲ್ಲರಿಗೂ ಉಚಿತ ವೀಸಾ ನೀಡುವುದಾಗಿ ನಾನು ಈ ಹಿಂದೆ ಭರವಸೆ ನೀಡಿದ್ದೆ. ನಿಮ್ಮಲ್ಲಿ ಹಲವರು ಕೆಲವು ಪ್ರಶ್ನೆ ಕೇಳಿದ್ದರು. ಆ ಕುರಿತ ಮಾಹಿತಿಯನ್ನು ನೀಡುತ್ತಿದ್ದೇನೆ ಎಂದು ಮತ್ತೊಂದು ಪೋಸ್ಟ್ ಮಾಡಿದ್ದಾರೆ. ಆಗಸ್ಟ್ 8 ರಂದು ನಡೆಯುವ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಅವರು ಚಿನ್ನದ ಪದಕ ಗೆದ್ದರೆ, ನಮ್ಮ ಬಳಿ ಬರುವ ಎಲ್ಲ ಗ್ರಾಹಕರಿಗೆ ಇಡೀ ಒಂದು ದಿನಕ್ಕೆ ಒಂದು ಉಚಿತ ವೀಸಾ ನೀಡುತ್ತೇವೆ.

ಯಾವುದೇ ರೂಪದಲ್ಲೂ ಹಣ ಪಡೆಯುವುದಿಲ್ಲ, ಶೂನ್ಯ ಖರ್ಚಿನಲ್ಲಿ ವೀಸಾ ನೀಡಲಾಗುವುದು. ಯಾವುದೇ ನಿರ್ದಿಷ್ಟ ದೇಶಗಳಿಗೆ ಸೀಮಿತವಲ್ಲ, ನಿಮ್ಮಿಷ್ಟದ ದೇಶಗಳಿಗೆ ವೀಸಾ ನೀಡಲಾಗುವುದು. ಈ ಆಫರ್ ಪಡೆಯಲು ನೀವು ಎಲ್ಲಿಗೆ ಪ್ರಯಾಣಿಸಲು ಬಯಸುತ್ತೀರೋ ಅದನ್ನು ಆಯ್ಕೆ ಮಾಡಿ, ಕಾಮೆಂಟ್‌ಗಳಲ್ಲಿ ನಿಮ್ಮ ಇಮೇಲ್ ನೀಡಿದರೆ ಉಚಿತ ವೀಸಾ ಕ್ರೆಡಿಟ್‌ನೊಂದಿಗೆ ನಾವು ನಿಮ್ಮ ಖಾತೆ ರಚಿಸುತ್ತೇವೆ ಎಂದು ಬರೆದಿದ್ದಾರೆ.
ಒಟ್ಟಾರೆಯಾಗಿ ನಹ್ತಾ ಅವರ ಈ ಪೋಸ್ಟ್ ನೋಡಿ ಜನ ದಿಗ್ಭ್ರಮೆಗೊಳಗಾಗಿದ್ದಾರೆ. ಅಷ್ಟೇ ಅಲ್ಲದೆ ಕೆಲವರು ವಿದೇಶಕ್ಕೆ ತೆರಳಲು ಸಿದ್ಧತೆಯನ್ನೂ ನಡೆಸಿಕೊಳ್ಳುತ್ತಿದ್ದಾರೆ.
Neeraj Chopra has the hope of millions of Indians who are eagerly waiting for another gold medal from chopra, the reigning Olympic champion. Meanwhile, Mohak Nahta, founder and CEO of online visa application platform Atlis, has come up with a big offer. He promised a ‘free visa for all’ if Neeraj Chopra wins gold at the Olympics.
ಕ್ರೀಡೆ
IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್‌ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್‌ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.
ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.
ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.
ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.
10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2
ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.
2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.
ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.
ಅಂತರ ರಾಜ್ಯ
Mohammed Shami: ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ
ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.
ಹೊಸದಿಲ್ಲಿ: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.
‘ನಾನು ಬಿಳಿ ಜೆರ್ಸಿಗೆ ವಿದಾಯ ಹೇಳುತ್ತಿದ್ದೇನೆ. ಆದರೆ ಅದರೊಂದಿಗೆ ಬೆಸೆದುಕೊಂಡಿರುವ ನೆನಪುಗಳಿಗೆ ಎಂದಿಗೂ ವಿದಾಯ ಹೇಳುವುದಿಲ್ಲ’ ಎಂದು ಶಮಿ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಭಾರತದ ಟೆಸ್ಟ್ ಜೆರ್ಸಿಯನ್ನು ಮೊದಲ ಬಾರಿಗೆ ಧರಿಸಿದ ಕ್ಷಣವನ್ನು ನೆನಪಿಸಿಕೊಂಡಿರುವ ಅವರು, ‘ಮೊದಲ ಬಾರಿಗೆ ಭಾರತದ ಟೆಸ್ಟ್ ಜೆರ್ಸಿ ಧರಿಸಿದಾಗ ನನ್ನಲ್ಲಿದ್ದದ್ದು ಒಂದೇ ಕನಸು. ನನ್ನ ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬುದಾಗಿತ್ತು. ಅಂದಿನಿಂದ ಪ್ರತಿಯೊಂದು ವಿಕೆಟ್, ಪ್ರತಿಯೊಂದು ಹೋರಾಟ, ಪ್ರತಿಯೊಂದು ಗಾಯ ಹಾಗೂ ಪ್ರತಿಯೊಂದು ಪುನರಾಗಮನವೂ ನನಗೆ ಹೊಸ ಪಾಠ ಕಲಿಸಿದೆ’ ಎಂದು ಬರೆದುಕೊಂಡಿದ್ದಾರೆ.
ಟೆಸ್ಟ್ ಕ್ರಿಕೆಟ್ ನನ್ನ ಜೀವನದ ವಿಶೇಷ ಭಾಗವಾಗಿತ್ತು
‘ನನ್ನ ಪಾಲಿಗೆ ಟೆಸ್ಟ್ ಕ್ರಿಕೆಟ್ ಕೇವಲ ಒಂದು ಮಾದರಿಯಾಗಿರಲಿಲ್ಲ. ಅದು ನನ್ನ ಜೀವನದ ಅತ್ಯಂತ ವಿಶೇಷ ಭಾಗವಾಗಿತ್ತು. ಇಂದು ಭಾರವಾದ ಹೃದಯ ಹಾಗೂ ಅಸಂಖ್ಯಾತ ಸುಂದರ ನೆನಪುಗಳೊಂದಿಗೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ’ ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ತಮ್ಮ ಕ್ರಿಕೆಟ್ ಪಯಣದಲ್ಲಿ ಬೆಂಬಲವಾಗಿ ನಿಂತ ಸಹ ಆಟಗಾರರು, ತರಬೇತುದಾರರು ಹಾಗೂ ಕುಟುಂಬ ಸದಸ್ಯರಿಗೆ ಶಮಿ ಹೃದಯಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ. ಒಳ್ಳೆಯ ಹಾಗೂ ಕಷ್ಟದ ಸಮಯಗಳಲ್ಲೂ ತಮ್ಮ ಮೇಲೆ ನಂಬಿಕೆ ಇಟ್ಟ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.
ತಮ್ಮ ಪ್ರತಿಭೆಯನ್ನು ಗುರುತಿಸಿ, ಬೆಳೆಯಲು ಅವಕಾಶ ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (ಸಿಎಬಿ) ಸಂಸ್ಥೆಗಳಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂಸ್ಥೆಗಳು ನೀಡಿದ ಬೆಂಬಲ ಹಾಗೂ ವಿಶ್ವಾಸ ಸದಾ ತಮ್ಮ ಪಾಲಿಗೆ ವಿಶೇಷವಾಗಿರಲಿದೆ ಎಂದು ಹೇಳಿದ್ದಾರೆ.
ಸ್ಥಳೀಯ
Shrikrishna-ಗ್ವಾಲಿಯರ್‌ನಲ್ಲಿ ಮಿಂಚಿದ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ ವಿದ್ಯಾರ್ಥಿ; ರಾಷ್ಟ್ರಮಟ್ಟದ ವಾಲಿಬಾಲ್‌ನಲ್ಲಿ ದ್ವಿತೀಯ ಸ್ಥಾನ
ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದ ವಿದ್ಯಾಭಾರತಿಯ 33ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಸಾಥ್ವಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
ಪಟ್ಟೆ ಬಡಗನ್ನೂರು: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದ ವಿದ್ಯಾಭಾರತಿಯ 33ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಸಾಥ್ವಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.
17 ವರ್ಷ ವಯೋಮಾನದ ವಿಭಾಗದಲ್ಲಿ ಕರ್ನಾಟಕ ದಕ್ಷಿಣ ಮಧ್ಯ ಕ್ಷೇತ್ರ ತಂಡವನ್ನು ಪ್ರತಿನಿಧಿಸಿದ ಸಾಥ್ವಿ, ತಂಡದೊಂದಿಗೆ ಸ್ಪರ್ಧಿಸಿ ಈ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಹಾಗೂ ಸಾಥ್ವಿ ಅವರನ್ನು ಪಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷರು, ಸರ್ವ ಸದಸ್ಯರು, ಶಾಲೆಯ ಮುಖ್ಯಗುರುಗಳು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.
-
ಬಿಗ್ ನ್ಯೂಸ್21 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ23 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ5 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ4 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ4 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಚಿನ್ನ-ಬೆಳ್ಳಿ ದರ4 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ4 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಸಿನೆಮಾ3 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು















