ಬಿಗ್ ನ್ಯೂಸ್
Waqf Board Act | ವಕ್ಫ್ ಮಂಡಳಿಯ ನಿರಂಕುಶ ಅಧಿಕಾರಕ್ಕೆ ಮೂಗುದಾರ ಹಾಕಲು ಮುಂದಾದ ಮೋದಿ ಸರ್ಕಾರ : ವಕ್ಫ್ ಕಾಯ್ದೆ ಶೀಘ್ರ ತಿದ್ದುಪಡಿ – ಏನಿದು ವಕ್ಫ್ ಮಂಡಳಿ ..? ದೇಶದಲ್ಲಿ ಒಟ್ಟು ಎಷ್ಟು ಆಸ್ತಿ ಇದೆ..?
ಹಿಂದೂಗಳೇ ಬಹುಸಂಖ್ಯಾತರಾಗಿದ್ದ ತಮಿಳುನಾಡಿನ ತಿರುಚೆಂದೂರೈ ಎಂಬ ಹಳ್ಳಿಯನ್ನೇ ವಕ್ಫ್ ಬೋರ್ಡ್ ತನ್ನದು ಎಂದು ಹೇಳಿಕೊಂಡಿತ್ತು..! ಸೆಪ್ಟೆಂಬರ್ 2022ರಲ್ಲಿ ಬೆಳಕಿಗೆ ಬಂದ ಈ ಪ್ರಕರಣ ದೇಶಾದ್ಯಂತ ವಿವಾದದ ಅಲೆ ಎಬ್ಬಿಸಿತ್ತು. ಈ ಪ್ರಕರಣ ಬೆಳಕಿಗೆ ಬರುವ ಮುನ್ನವೇ ವಕ್ಫ್ ಮಂಡಳಿಯ ನಿರಂಕುಶ ಅಧಿಕಾರಕ್ಕೆ ಕಡಿವಾಣ ಹಾಕಬೇಕು ಅನ್ನೋ ಕೂಗು ಇದ್ದೇ ಇತ್ತು! 2023ರ ಮೇ ತಿಂಗಳಲ್ಲಿ ದಿಲ್ಲಿ ವಕ್ಫ್ ಬೋರ್ಡ್ ಕೂಡಾ ಸುದ್ದಿಯಲ್ಲಿ ಇತ್ತು. ಮಂಡಳಿಯ ಸ್ವಾಧೀನದಲ್ಲಿ ಇರುವ 123 ಆಸ್ತಿಗಳನ್ನ ಪರಿಶೀಲನೆ ಮಾಡಿ ಎಂದು ದಿಲ್ಲಿ ಹೈಕೋರ್ಟ್ ತಾಕೀತು ಮಾಡಿತ್ತು.
ತಮಿಳುನಾಡಿನ ತಿರುಚೆಂದೂರೈ ಗ್ರಾಮದ ರೈತನೋರ್ವ ತನ್ನ ಜಾಗ ಮಾರಟ ಮಾಡಲು ಎನ್ ಓ ಸಿ ತೆಗೆಯಲು ಹೋದಾಗ ಇಡೀ ಗ್ರಾಮ ವಕ್ಫ್ ಮಂಡಳಿಯ ಆಸ್ತಿ ಎಂದು ಉಲ್ಲೇಖಿಸಲಾಗಿದ್ದು, ಅದೇ ಗ್ರಾಮದ ಕಾವೇರಿ ನದಿ ತೀರದ 1500 ವರ್ಷಗಳ ಹಳೆಯ ಚಂದ್ರಶೇಖರ ಸ್ವಾಮಿ ದೇವಸ್ಥಾನ ಕೂಡ ವಕ್ಫ್ ಮಂಡಳಿಯ ಆಸ್ತಿ ಎಂಬುದು ಗೊತ್ತಾಗುತ್ತಿದ್ದಂತೆ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿತು. ಇಡೀ ಗ್ರಾಮವೆಂದರೆ 480 ಎಕರೆ ಜಾಗ ಕೂಡ ವಕ್ಫ್ ಆಸ್ತಿ ಎಂದು ನಮೂದಾಗಿದೆ. ಆದರೆ ಸ್ಥಳೀಯ ಜಿಲ್ಲಾಧಿಕಾರಿ ವಕ್ಫ್ ಬೋರ್ಡ್ ನ ಎನ್ಓಸಿ ಇಲ್ಲದೆ ಯಾರೂ ಕೂಡ ಜಾಗ ಖರೀದಿ ಮಾರಟ ಮಾಡಬಹುದು ಎಂದಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ನಡುವಲ್ಲೇ 2024ರ ಲೋಕಸಭಾ ಚುನಾವಣೆಗೆ ಮುನ್ನವೇ ವಕ್ಫ್ ಮಂಡಳಿಗೆ (Waqf Board Act) ಮೂಗುದಾರ ಹಾಕುವ ಹೊಸ ಕಾನೂನು ರೂಪಿಸಲು ಕೇಂದ್ರ ಸರ್ಕಾರ ಸಿದ್ದತೆ ನಡೆಸಿತ್ತು. ಆದರೆ ಈ ಪ್ರಸ್ತಾಪ ಮುಂದುವರೆಯಲಿಲ್ಲ. ಇದೀಗ ಮಹಾರಾಷ್ಟ್ರ ಸೇರಿದಂತೆ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆ ಹೊತ್ತಲ್ಲಿ ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾಪ ಸದ್ದು ಮಾಡುತ್ತಿದೆ.
ಹಾಗಾದ್ರೆ ಏನಿದು ವಕ್ಫ್ ಕಾಯ್ದೆ? ವಕ್ಫ್ ಮಂಡಳಿಗೆ ಇರುವ ಅಧಿಕಾರಗಳೇನು? ಒಟ್ಟು ಆಸ್ತಿ ಎಷ್ಟಿದೆ? ಕೇಂದ್ರದ ಹೊಸ ಕಾನೂನಿನಲ್ಲಿ ಏನಿದೆ? ಈ ಕುರಿತ ಸಮಗ್ರ ವಿಶ್ಲೇಷಣೆ ಇಲ್ಲಿದೆ.ದೇಶದಲ್ಲಿ ವಕ್ಫ್ ಆಸ್ತಿ ಎಷ್ಟಿದೆ? ಮೌಲ್ಯ ಎಷ್ಟು?ಭಾರತ ದೇಶಾದ್ಯಂತ ಒಟ್ಟು 8 ಲಕ್ಷದ 70 ಸಾವಿರ ವಕ್ಫ್ ಆಸ್ತಿ ಇದೆ. ಸುಮಾರು 9.40 ಲಕ್ಷ ಎಕರೆ ಪ್ರದೇಶದಲ್ಲಿ ದೇಶಾದ್ಯಂತ ವಕ್ಫ್ ಆಸ್ತಿ ಇದೆ. ಈ ಆಸ್ತಿಗಳ ಮೌಲ್ಯ ಹಲವು ಲಕ್ಷ ಕೋಟಿ ರೂ. ಆಗಬಹುದು. ಆಸ್ತಿಗಳು ಇರುವ ಸ್ಥಳ, ಆ ಸ್ಥಳದ ಮಾರುಕಟ್ಟೆ ಮೌಲ್ಯ ಆಧರಿಸಿ ದೇಶಾದ್ಯಂತ ಇರುವ ವಕ್ಫ್ ಆಸ್ತಿಗಳ ಒಟ್ಟು ಮೌಲ್ಯ ನಿರ್ಧರಿಸಬೇಕಾಗುತ್ತದೆ. ಸಾಕಷ್ಟು ವಕ್ಫ್ ಆಸ್ತಿಗಳು ಪ್ರಮುಖ ಸ್ಥಳಗಳ ಆಯಕಟ್ಟಿನ ಪ್ರದೇಶಗಳಲ್ಲೇ ಇವೆ. ಜೊತೆಗೆ ಕೆಲವು ಆಸ್ತಿಗಳಿಗೆ ಐತಿಹಾಸಿಕ ನಂಟು ಇರುವ ಕಾರಣ ಪುರಾತತ್ವ ಇಲಾಖೆಗೂ ಮಹತ್ವದ್ದಾಗಿದೆ.
ಏನಿದು ವಕ್ಫ್ ಆಸ್ತಿ?1995ರಲ್ಲಿ ಜಾರಿಗೆ ಬಂದ ವಕ್ಫ್ ಕಾಯಿದೆಯಲ್ಲಿ ಮುಸ್ಲಿಂ ಕಾನೂನನ್ನು ಅನ್ವಯ ಮಾಡಲಾಗಿದೆ. ಕಾನೂನಿನ ಅನ್ವಯ ಯಾವುದೇ ವ್ಯಕ್ತಿ ಧಾರ್ಮಿಕ ಕಾರಣಕ್ಕಾಗಿ ದಾನ ಮಾಡಿದ ಆಸ್ತಿ ವಕ್ಫ್ ಆಸ್ತಿಯಾಗುತ್ತದೆ. ಈ ಆಸ್ತಿ ವಕ್ಫ್ ಮಂಡಳಿಯ ಸ್ವಾಧೀನಕ್ಕೆ ಬರುತ್ತದೆ. ಜೊತೆಯಲ್ಲೇ ವಕ್ಫ್ ಮಂಡಳಿ ಯಾವುದೇ ಆಸ್ತಿಯನ್ನು ತನ್ನ ಆಸ್ತಿ ಎಂದು ಘೋಷಿಸಿ ವಶಕ್ಕೆ ಪಡೆಯುವ ಪರಮಾಧಿಕಾರವನ್ನೂ ಹೊಂದಿದೆ. 2013ರಲ್ಲಿ ಈ ಕಾಯ್ದೆಗೆ ಅಲ್ಪ ಬದಲಾವಣೆ ತಂದಿದ್ದ ಯುಪಿಎ ಸರ್ಕಾರ, ಭಾರತೀಯ ಪುರಾತತ್ವ ಇಲಾಖೆ, ಭಾರತೀಯ ವಕ್ಫ್ ಹಾಗೂ ರಾಜ್ಯ ವಕ್ಫ್ ಘಟಕಗಳಿಗೆ ಅಧಿಕಾರ ಹಂಚಿಕೆ ಮಾಡುವ ಕಾನೂನು ತಂದಿತ್ತು. ಇಂದಿಗೂ ಎಲ್ಲಾ ಆಸ್ತಿಗಳೂ ವಕ್ಫ್ ಅಧೀನದಲ್ಲೇ ಇವೆ.
ವಕ್ಫ್ ಕಾನೂನಿಗೆ ವಿರೋಧ ಏಕೆ? ವಕ್ಫ್ ಆಸ್ತಿಯಲ್ಲಿ ವಿವಾದಿತ ಭೂಮಿಗಳೇ ಹೆಚ್ಚಾಗಿವೆ. ಜೊತೆಯಲ್ಲೇ ವಕ್ಫ್ ಬೋರ್ಡ್‌ನಲ್ಲಿ ಮಹಿಳೆಯರ ಪ್ರಾತಿನಿಧ್ಯ ಇಲ್ಲವೇ ಇಲ್ಲ ಎನ್ನುವಷ್ಟಿದೆ! ಮುಸ್ಲಿಮರ ಉಪ ಪಂಗಡಗಳಾದ ಶಿಯಾ, ಬೋಹ್ರಾ ಸೇರಿದಂತೆ ಹಲವರು ವಕ್ಫ್ ಕಾನೂನಿಗೆ ವಿರೋಧಿಸುತ್ತಿದ್ದಾರೆ. ಇಸ್ಲಾಂ ಧರ್ಮ ಉದಯಿಸಿದ ಅರಬ್ ರಾಷ್ಟ್ರಗಳಾದ ಸೌದಿ ಅರೇಬಿಯಾ ಸೇರಿದಂತೆ ಹಲವು ಇಸ್ಲಾಮಿಕ್ ರಾಷ್ಟ್ರಗಳಲ್ಲೇ ಇಲ್ಲದ ಕಾನೂನು ಭಾರತದಲ್ಲಿ ಇದೆ ಎಂದು ಕೆಲವು ಬುದ್ದಿಜೀವಿಗಳು ವಾದಿಸುತ್ತಿದ್ದಾರೆ.
ಇದಕ್ಕೆ ಪೂರಕವೆಂಬಂತೆ ಮಹಾರಾಷ್ಟ್ರ, ಹರ್ಯಾಣ, ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ಹೊತ್ತಲ್ಲೇ ವಕ್ಫ್ ಮಂಡಳಿಗೆ ಮೂಗುದಾರ ಹಾಕುವ ಕಾನೂನು ತಂದು ತನ್ನ ವರ್ಚಸ್ಸು ಹೆಚ್ಚಿಸಿಕೊಳ್ಳುವ ಪ್ರಯತ್ನದಲ್ಲಿ ಕೇಂದ್ರ ಸರ್ಕಾರ ಇದೆ.
ಕೇಂದ್ರದ ಹೊಸ ಕಾನೂನಿನಲ್ಲಿ ಏನಿದೆ?ವಕ್ಫ್ ಆಸ್ತಿಗಳ ದುರ್ಬಳಕೆ ತಡೆಯೋದು ಕೇಂದ್ರ ಸರ್ಕಾರದ ಹೊಸ ಕಾನೂನಿನ ಉದ್ದೇಶ. ವಕ್ಫ್ ಆಸ್ತಿಗಳ ಅಧಿಕಾರವನ್ನು ಸರ್ಕಾರ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡುವ ಸಾಧ್ಯತೆಯೂ ಇದೆ. ಮೊದಲ ಹಂತದಲ್ಲಿ ಸರ್ಕಾರ ವಕ್ಫ್ ಬೋರ್ಡ್‌ನ ಎಲ್ಲಾ ಆಸ್ತಿಗಳ ಪರಿಶೀಲನೆ ಮಾಡಲಿದೆ ಬಳಿಕ ವಕ್ಫ್ ಬೋರ್ಡ್‌ನ ಎಲ್ಲಾ ಪರಮಾಧಿಕಾರಗಳ ಮೇಲೆ ನಿಯಂತ್ರಣ ಸಾಧಿಸಲಿದೆ. ಜೊತೆಯಲ್ಲೇ ವಕ್ಫ್ ಆಸ್ತಿ ಕುರಿತಾಗಿ ಇರುವ ವ್ಯಾಜ್ಯಗಳ ಪರಿಶೀಲನೆ ಕೂಡಾ ನಡೆಯಲಿದೆ.ತಿದ್ದುಪಡಿ ಮಸೂದೆ ಮಂಡಿಸಲು ಕೇಂದ್ರ ಸಚಿವ ಸಂಪುಟ ಸಿದ್ದತೆ ನಡೆಸಿದೆ ಎನ್ನಲಾಗಿದೆ. ಸದ್ಯ ಇರುವ ವಕ್ಫ್ ಕಾಯಿದೆಗೆ 40ಕ್ಕೂ ಹೆಚ್ಚು ತಿದ್ದುಪಡಿಗಳನ್ನು ತರಲಾಗುತ್ತದೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
ಈ ಮೂಲಕ ವಕ್ಫ್ ಮಂಡಳಿಯ ಸ್ವಾಯತ್ತತೆಗೆ ಕಡಿವಾಣ ಹಾಕಿ ವಕ್ಫ್ ಬೋರ್ಡ್‌ನ ಎಲ್ಲಾ ಆಸ್ತಿಗಳ ಮೇಲೆ ಸರ್ಕಾರ ನಿಯಂತ್ರಣ ಸಾಧಿಸಬಹುದಾಗಿದೆ. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ತಿದ್ದುಪಡಿ ಕಾಯ್ದೆಯ ಪರಾಮರ್ಶೆ ನಡೆಸಲಿದೆ.ವಕ್ಫ್ ಆಸ್ತಿಗಳ ನಿರ್ವಹಣೆಗೆ ಮುತವಲ್ಲಿಗಳನ್ನು ನೇಮಕ ಮಾಡುವ ಪ್ರಕ್ರಿಯೆಯಲ್ಲೂ ವಕ್ಫ್ ಮಂಡಳಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳೋದನ್ನ ತಡೆಯುವ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇದೆ ಎನ್ನಲಾಗಿದೆ. ದೇಶಾದ್ಯಂತ 28 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು 30 ವಕ್ಫ್ ಮಂಡಳಿಗಳು ಇವೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
Jantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಕರೆ ನೀಡಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ನಗರದ ವಿವಿಧೆಡೆ ಹಾಗೂ ಗಡಿ ಪ್ರದೇಶಗಳಲ್ಲಿ ಈಗಾಗಲೇ ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನದೊಳಗೆ ಪ್ರವೇಶಿಸಿದ ಪೊಲೀಸರು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಂತರ್ ಮಂತರ್ ನಲ್ಲಿ ಕ್ಷಣ ಕ್ಷಣ ಪ್ರತಿಭಟಕಾರರ ಸಂಖ್ಯೆ ಭಾರಿ ಏರುತ್ತಿದೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಂತರ್ ಮಂತರ್ ಗೆ ಆಗಮಿಸಿದ ನೂರಾರು ಸುಪ್ರೀಂ ಕೋರ್ಟಿನ ವಕೀಲರನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ವರದಿಯಾಗಿದೆ.
ನೋಯ್ಡಾ–ದೆಹಲಿ ಗಡಿ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನಾಕಾರರನ್ನು ಬಸ್‌ಗಳಲ್ಲಿ ಕರೆದೊಯ್ದು ವಶಕ್ಕೆ ಪಡೆಯಲಾಗಿದೆ. ಇನ್ನೂ ಟಯರ್ ಪಂಚರ್ ಆಗುವ ಕಬ್ಬಿಣದ ಬೇಲಿಯನ್ನು ಪೊಲೀಸರು ರಸ್ತೆಗಳಲ್ಲಿ ಇಟ್ಟಿರುವ ಪ್ರತಿಭಟನಕಾರರು ಆರೋಪಿಸಿದ್ದಾರೆ. ಮತ್ತೂ ನಿರ್ದಿಷ್ಟ ಸ್ಥಳಗಳಲ್ಲಿ ಮೊಬೈಲ್ ನೆಟ್‌ವರ್ಕ್ ಗಳನ್ನು ಪೊಲೀಸರ ನಿರ್ದೇಶನದ ಮೇರೆಗೆ ಟೆಲಿಕಾಂ ಕಂಪೆನಿಗಳು ನಿಷ್ಕ್ರಿಯಗೊಳಿಸಿರುವ ಬಗ್ಗೆಯೂ ಆರೋಪಗಳು ವ್ಯಕ್ತವಾಗಿದೆ.
ಭದ್ರತಾ ವ್ಯವಸ್ಥೆಯ ಭಾಗವಾಗಿ 20 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 200ಕ್ಕೂ ಹೆಚ್ಚು ಕಂಪನಿಗಳನ್ನು ನಿಯೋಜಿಸಲಾಗಿದೆ. ವಿಶೇಷವಾಗಿ ಕೇಂದ್ರ ದೆಹಲಿ, ಕನ್ನಾಟ್ ಪ್ಲೇಸ್ ಹಾಗೂ ನಗರದ ಪ್ರವೇಶ ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ಇರಿಸಲಾಗಿದೆ.
ಕನ್ನಾಟ್ ಪ್ಲೇಸ್ ಪ್ರದೇಶವನ್ನು 20 ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಭದ್ರತಾ ಜವಾಬ್ದಾರಿಯನ್ನು ಡಿಸಿಪಿ ಅಥವಾ ಐಪಿಎಸ್ ಅಧಿಕಾರಿಗಳಿಗೆ ವಹಿಸಲಾಗಿದೆ. ಅಧಿಕಾರಿಗಳ ನೇತೃತ್ವದಲ್ಲಿ ವಿವಿಧೆಡೆ ಪಥಸಂಚಲನ ನಡೆಸಿ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲಾಗಿದೆ.
ಸಂದೇಹಾಸ್ಪದ ವಾಹನಗಳನ್ನು ತಡೆದು ಪರಿಶೀಲಿಸಲು ತುರ್ತು ಬಳಕೆಯ ಸ್ಪೈಕ್ ಸ್ಟ್ರಿಪ್‌ಗಳನ್ನು ಸಿದ್ಧವಾಗಿಡಲಾಗಿದೆ. ಭದ್ರತಾ ಕಾರ್ಯಾಚರಣೆಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾನ್‌ಸ್ಟೆಬಲ್‌ಗಳು ಹಾಗೂ ಇನ್‌ಸ್ಪೆಕ್ಟರ್‌ಗಳಂತಹ ಕೆಳಹಂತದ ಪೊಲೀಸ್ ಸಿಬ್ಬಂದಿಗೂ ಬಾಡಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ.
ಸಾರ್ವಜನಿಕರ ಸಾಮಾನ್ಯ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಆದರೆ, ಅನುಮತಿಯಿಲ್ಲದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾಗುವವರನ್ನು ತಕ್ಷಣ ವಶಕ್ಕೆ ಪಡೆಯಲಾಗುವುದು ಹಾಗೂ ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
-
Uncategorized5 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized6 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized4 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized5 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized2 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized4 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |


















