ಬಿಗ್ ನ್ಯೂಸ್
ಸಿಪಿಸಿಆರ್ʼಐ ವಿಜ್ಞಾನಿಗಳಿಂದ ಹಳದಿಎಲೆ ರೋಗ ವಿಸ್ತರಣೆ ತಡೆಗೆ ಪ್ಲಾಸ್ಟಿಕ್ ಹೊದಿಕೆ ಅಳವಡಿಸಿದ ಕಲ್ಮಕಾರು, ಮರ್ಕಂಜದ ಅಡಿಕೆ ತೋಟಗಳಿಗೆ ಭೇಟಿ -ಅಧ್ಯಯನ | ರೋಗನಿರೋಧಕ ತಳಿ ಅಭಿವೃದ್ಧಿಯತ್ತ ಚಿತ್ತ
ಅಡಿಕೆ ಹಳದಿ ಎಲೆರೋಗ ವಿಸ್ತರಣೆ ತಡೆಗೆ ಹಾಗೂ ಹಳದಿ ಎಲೆ ರೋಗ ಬಾಧಿತ ಅಡಿಕೆ ಮರಗಳಿಗೆ ಪೋಷಕಾಂಶಗಳ ನಿರ್ವಹಣೆಯ ದೃಷ್ಟಿಯಿಂದ ಪ್ಲಾಸ್ಟಿಕ್ ಹೊದಿಕೆಗಳನ್ನು ಅಳವಡಿಕೆ ಮಾಡಿದ್ದ ತೋಟಗಳನ್ನು ಸಿಪಿಸಿಆರ್‌ಐ ವಿಜ್ಞಾನಿಗಳು ಅ 11 ರಂದು ವೀಕ್ಷಣೆ ಮಾಡಿದರು ಹಾಗೂ ಅಧ್ಯಯನ ವರದಿಯ ಬಗ್ಗೆ ಬೆಳೆಗಾರರಿಗೆ ಮಾಹಿತಿ ನೀಡಿದರು. ಸದ್ಯದ ಅಧ್ಯಯನ ವರದಿಯ ಪ್ರಕಾರ ಫಲಿತಾಂಶವೂ ಸಕಾರತ್ಮಕವಾಗಿ ಬಂದಿದೆ
ಅಡಿಕೆ ಹಳದಿ ಎಲೆರೋಗ ಬಾಧಿತ ಪ್ರದೇಶಗಳಲ್ಲಿ ಅಧ್ಯಯನ ಹಾಗೂ ಸಂಶೋಧನೆಯ ದೃಷ್ಟಿಯಿಂದ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ ಅಡಿಕೆ ತೋಟದಲ್ಲಿ ಹಲವಾರು ವರ್ಷಗಳಿಂದ ಪ್ಲಾಸ್ಟಿಕ್ ಹೊದಿಕೆ ಅಳವಡಿಕೆ ಮಾಡಿ ಪ್ರಯೋಗ ಮಾಡುತ್ತಿದೆ. ಇದರಭಾಗವಾಘಿ ಐದು ವರ್ಷಗಳ ಹಿಂದೆ ಸುಳ್ಯ ತಾಲೂಕಿನ ಕಲ್ಮಕಾರಿನ ಒಂದು ತೋಟದಲ್ಲಿ ಹಾಗೂ ಮರ್ಕಂಜದ ಎರಡು ತೋಟ ಹಾಗೂ ಶೃಂಗೇರಿಯ ತೋಟದಲ್ಲಿ ಪ್ಲಾಸ್ಟಿಕ್ ಹೊದಿಕೆ ಹೊದಿಸಿ ಪೋಷಕಾಂಶಗಳ ನಿರ್ವಹಣೆ ಹಾಗೂ ಇತರ ಅಧ್ಯಯನ ನಡೆಸಿದ್ದರು.
ಅಧ್ಯಯನ ವರದಿ
ಇದೀಗ ಐದು ವರ್ಷಗಳ ನಂತರ ಈ ಅಧ್ಯಯನ ವರದಿ ಪ್ರಕಾರ ಪ್ಲಾಸ್ಟಿಕ್ ಹೊದಿಕೆ ಅಳವಡಿಸಿದ ತೋಟಗಳಲ್ಲಿ ಅಡಿಕೆ ಹಳದಿ ಎಲೆರೋಗ ವಿಸ್ತರಣೆ ಕಡಿಮೆಯಾಗಿದೆ ಹಾಗೂ ಪೋಷಕಾಂಶಗಳು ಮರಗಳಿಗೆ ಸರಿಯಾಗಿ ಲಭ್ಯವಾಗುವುದರಿಂದ ಮರಗಳ ಬೇರು ಆರೋಗ್ಯಯುತವಾಗಿರುವುದು ಕಂಡುಬಂದಿದೆ ಎಂದು ವಿಜ್ಞಾನಿಗಳ ತಂಡ ಕಂಡುಕೊಂಡಿದೆ.
ರೋಗ ನಿರೋಧಕ ತಳಿ ಅಭಿವೃದ್ಧಿಯತ್ತ ಚಿತ್ತ:
ಇದೀಗ ಈ ಅಧ್ಯಯನದ ಜೊತೆಗೆ ಅಡಿಕೆ ಹಳದಿ ಎಲೆರೋಗ ಪೀಡಿತ ಪ್ರದೇಶದಲ್ಲಿ ರೋಗ ನಿರೋಧಕ ತಳಿ ಅಭಿವೃದ್ಧಿ ಹಾಗೂ ಟಿಶ್ಯೂ ಕಲ್ಚರ್ ಗಿಡಗಳನ್ನೂ ಅಭಿವೃದ್ಧಿ ಮಾಡಲು ಸಿಪಿಸಿಆರ್‌ಐ ವಿಜ್ಞಾನಿಗಳು ಮುಂದೆ ಬಂದಿದ್ದಾರೆ ಎಂದು ಸಿಪಿಸಿಆರ್‌ಐ ನಿರ್ದೇಶಕಿ ಡಾ.ಅನಿತಾ ಕರುಣ್ ತಿಳಿಸಿದ್ದಾರೆ.

ಸೋಮವಾರ ಕಲ್ಮಕಾರಿನ ನವೀನ್ ದಂಬೆಕೋಡಿ ಅವರ ತೋಟ ಹಾಗೂ ಮರ್ಕಂಜದ ಪವಿತ್ರ ಗುಂಡಿ ಅವರ ಅಡಿಕೆ ತೋಟಗಳಿಗೆ ಅಳವಡಿಸಿದ್ದ ಪ್ಲಾಸ್ಟಿಕ್ ಹೊದಿಕೆಗಳನ್ನು ವಿಜ್ಞಾನಿಗಳ ತಂಡ ವೀಕ್ಷಿಸಿದರು. ಸಿಪಿಸಿಆರ್‌ಐ ವಿಜ್ಞಾನಿಗಳ ತಂಡದಲ್ಲಿ ಸಿಪಿಸಿಆರ್‌ಐ ಕಾಸರಗೋಡು ನಿರ್ದೇಶಕಿ ಡಾ.ಅನಿತಾ ಕರುಣ್ , ಸಮಾಜವಿಜ್ಞಾನ ವಿಭಾಗ ಮುಖ್ಯಸ್ಥ ಡಾ.ಮುರಳೀಧರನ್, ಬೆಳೆಉತ್ಪಾದನಾ ವಿಭಾಗದ ಮುಖ್ಯಸ್ಥ ಡಾ.ರವಿ ಭಟ್, ಬೆಳೆಸಂರಕ್ಷಣಾ ವಿಭಾಗದ ಮುಖ್ಯಸ್ಥ ಡಾ. ರವಿ ಭಟ್, ಬೆಳೆ ಉತ್ಪಾದನಾ ವಿಭಾಗದ ವಿಜ್ಞಾನಿ ಡಾ.ಭವಿಷ್ಯ ಇದ್ದರು.

ಈ ಸಂದರ್ಭ ಬೆಳೆಗಾರರೊಂದಿಗೆ ಮಾತುಕತೆ ನಡೆಸಿದ ವಿಜ್ಞಾನಿಗಳ ತಂಡ ಅಡಿಕೆ ಬೆಳೆಗಾರರ ಅಭಿಪ್ರಾಯ ಪಡೆದರು. ಈ ಸಂದರ್ಭ ಕಲ್ಮಕಾರು ಗ್ರಾಪಂ ಅಧ್ಯಕ್ಷ ಉದಯಕುಮಾರ್ ಕೊಪ್ಪಡ್ಕ, ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ, ಸ್ಥಳೀಯರಾದ ಕೆ ಸಿ ಸುಬ್ರಹ್ಮಣ್ಯ ಕೊಪ್ಪಡ್ಕ, , ಕೆಪಿ ಚಂದ್ರಶೇಖರ್ ಕೊಪ್ಪಡ್ಕ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ , ಬಾಲಕೃಷ್ಣ ಕೊಪ್ಪಡ್ಕ , ಮೋಹನ ಉಳುವಾಲು, ಡ್ಯಾನಿ ಆಲದಾಳು, ನರೇಂದ್ರ ಬಿಳಿಮಲೆ, ಗಂಗಾಧರ ಇಡ್ಯಡ್ಕ, ಮೊದಲಾದವರು ಇದ್ದರು.

ಸ್ಥಳೀಯ
Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.
ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.
ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಅಂತರ ರಾಜ್ಯ
ಕಾಸರಗೋಡು: ಆರ್‌ಎಸ್‌ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.
ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಂತರ ರಾಜ್ಯ
Ashutosh Dixit-ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ
ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹಾಲಿ ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಅಕ್ಟೋಬರ್ 31ರಂದು ನಿವೃತ್ತರಾಗಲಿದ್ದು, ಅವರ ಸ್ಥಾನವನ್ನು ದೀಕ್ಷಿತ್ ಅಲಂಕರಿಸಲಿದ್ದಾರೆ.
ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ 59 ವರ್ಷದ ಅಶುತೋಷ್ ದೀಕ್ಷಿತ್ ಅವರು 1986ರ ಡಿಸೆಂಬರ್‌ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ನಿಯೋಜನೆಗೊಂಡಿದ್ದರು. ಅವರು 2028ರ ಡಿಸೆಂಬರ್ 31ರವರೆಗೆ ವಾಯುಪಡೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ.
ಅಶುತೋಷ್ ದೀಕ್ಷಿತ್ ಅವರು ಪ್ರಾಯೋಗಿಕ ಪರೀಕ್ಷಾರ್ಥ ಪೈಲಟ್ ಹಾಗೂ ಫ್ಲೈಟ್ ಇನ್‌ಸ್ಟ್ರಕ್ಟರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಮಿರಾಜ್-2000, ವಿವಿಧ ಮಾದರಿಯ ಮಿಗ್ ಯುದ್ಧ ವಿಮಾನಗಳು, ಜಾಗ್ವಾರ್ ಮತ್ತು ತೇಜಸ್ ಸೇರಿದಂತೆ ಹಲವು ಯುದ್ಧ ವಿಮಾನಗಳಲ್ಲಿ 3,500 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದಾರೆ.
-
ದಕ್ಷಿಣ ಕನ್ನಡ21 hours ago
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ
-
ಅಪರಾಧ20 hours agoSomasekhar-ನಕಲಿ ದಾಖಲೆ ಸೃಷ್ಟಿಸಿ ಕೈದಿಯ ಬಿಡುಗಡೆ..! ಪ್ರತಿಯಾಗಿ ಆತನ ಪತ್ನಿಯನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಒಪ್ಪಂದ ಮಾಡಿಕೊಂಡಿದ್ದ ಡಿಐಜಿ ಎಂ. ಸೋಮಶೇಖರ್
-
ನಿಧನ ವಾರ್ತೆ19 hours agoPuttur-ಪುತ್ತೂರು: ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಮೃತ್ಯು
-
ಬಿಗ್ ನ್ಯೂಸ್14 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
ಶಿಕ್ಷಣ18 hours agoPhilomena-ಸಂತ ಫಿಲೋಮಿನಾ ಕಾಲೇಜು : 35 ವರ್ಷಗಳ ಬಳಿಕ ಮತ್ತೆ ಒಂದಾದ 1991ರ ಬಿ.ಎಸ್ಸಿ. ಬ್ಯಾಚ್; ನೆನಪು, ನಂಟು ಮತ್ತು ಗುರು-ಗೌರವದ ಭಾವಪೂರ್ಣ ಸಂಗಮ
-
ನಿಧನ ವಾರ್ತೆ19 hours agoDead body-ಹುಲಿವೇಷ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಬಾಲಕ ಸಮುದ್ರ ಪಾಲು; ಮೃತದೇಹ ಪತ್ತೆ
-
ನಿಧನ ವಾರ್ತೆ18 hours agoKerala-ಕೇರಳ: ಸಿಡಿಲು ಬಡಿದು ಖ್ಯಾತ ‘ಪಲ್ಲಟ್ಟು ಬ್ರಹ್ಮದತ್ತನ್’ ಆನೆ ದಾರುಣ ಸಾವು
-
ರಾಜಕೀಯ20 hours agoDK Shivakumar-ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭರ್ಜರಿ ಬಹುಮಾನ: 8 ಕ್ರೀಡಾಪಟುಗಳಿಗೆ ₹8 ಕೋಟಿ ಘೋಷಿಸಿದ ಡಿಕೆಶಿ – ಭಾಗವಹಿಸಿದವರಿಗೆ 5 ಲಕ್ಷ


















