Connect with us

ವರದಿಗಳು

ಬಾಂಗ್ಲದೊಂದಿಗೆ ಭಾರತ ಗೆಳೆಯನಂತೆ ಜೊತೆ ನಿಲ್ಲಬೇಕು – ಆದಷ್ಟು ಶೀಘ್ರ ಪ್ರಜಾಪ್ರಭುತ್ವ ಜಾತ್ಯತೀತ ಸರ್ಕಾರ ಬಾಂಗ್ಲದಲ್ಲಿ ತಲೆಎತ್ತಲಿ : ಮೋದಿ ಸರ್ಕಾರ ಬಾಂಗ್ಲದ ಹಿಂದೂ ಸಿಖ್ ರ ರಕ್ಷಣೆ ಗೆ ಮುಂದಾಗಬೇಕು – ವಿಶ್ವ ಹಿಂದೂ ಪರಿಷತ್ ಆಗ್ರಹ

Published

on

Ad Widget

Ad Widget

Ad Widget

Ad Widget

ನವದೆಹಲಿ: ಹಿಂಸಾ ಪೀಡಿತ ಬಾಂಗ್ಲಾದೇಶದಲ್ಲಿರುವ ಹಿಂದೂ, ಸಿಖ್ ಹಾಗೂ ಇತರ ಅಲ್ಪಸಂಖ್ಯಾತರನ್ನು ಮೂಲಭೂತವಾದಿಗಳು ಗುರಿಯಾಗಿಸಿದ್ದು, ಇವರನ್ನು ರಕ್ಷಿಸಲು ಸರ್ಕಾರ ಮುಂದಾಗಬೇಕು ಎಂದು ವಿಶ್ವ ಹಿಂದೂ ಪರಿಷದ್ (ವಿಎಚ್‌ಪಿ) ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.

Ad Widget

Ad Widget

Ad Widget

Ad Widget

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಎಚ್‌ಪಿ ಅಧ್ಯಕ್ಷ ಅಲೋಕ್ ಕುಮಾರ್, ‘ಭಾರತ- ಬಾಂಗ್ಲಾ ಗಡಿಯಲ್ಲಿ ಕಟ್ಟುನಿಟ್ಟಿನ ಭದ್ರತಾ ಕಣ್ಣಾವಲು ವಹಿಸಬೇಕು. ಅಲ್ಲಿನ ಪರಿಸ್ಥಿತಿಯ ಲಾಭ ಪಡೆದು ಪ್ರಾಯೋಜಿತ ಒಳನುಸುಳುವಿಕೆ ನಡೆಯುವ ಅಪಾಯವಿದೆ. ಇದನ್ನು ತಡೆಯಲು ಭಾರತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಬಾಂಗ್ಲಾದೇಶದಲ್ಲಿರುವ ಅಲ್ಪಸಂಖ್ಯಾತರು ವಿಲಕ್ಷಣ ರೀತಿಯ ಅತಂತ್ರ ಸ್ಥಿತಿಗೆ ಸಿಲುಕಿದ್ದಾರೆ. ಅಲ್ಲಿ ಹಿಂಸೆ ಮತ್ತು ಅರಾಜಕತೆ ಸೃಷ್ಟಿಯಾಗಿದೆ. ಅಲ್ಪಸಂಖ್ಯಾತರ ರಕ್ಷಣೆ ಹಾಗೂ ಮಾನವ ಹಕ್ಕುಗಳ ರಕ್ಷಣೆಗೆ ಅಂತರರಾಷ್ಟ್ರೀಯ ಸಮುದಾಯ ಅಗತ್ಯ ಕ್ರಮ ಕೈಗೊಳ್ಳಬೇಕು.

Ad Widget

Ad Widget <> Ad Widget

ಈ ಹಿಂದೆಯೂ ಬಾಂಗ್ಲಾದಲ್ಲಿರುವ ಹಿಂದೂ, ಸಿಖ್ ಹಾಗೂ ಇತರ ಅಲ್ಪಂಖ್ಯಾತರಿಗೆ ಸೇರಿದ್ದ ಧಾರ್ಮಿಕ ಕೇಂದ್ರಗಳು, ಉದ್ದಿಮೆಗಳು ಹಾಗೂ ಮನೆಗಳನ್ನು ಲೂಟಿ ಮಾಡಿ, ಧ್ವಂಸ ಮಾಡಿರುವ ಉದಾಹರಣೆಗಳಿವೆ. ಸೋಮವಾರ ರಾತ್ರಿಯವರೆಗೂ ಪಂಚಗಡ್ ಜಿಲ್ಲೆಯಲ್ಲಿ 22 ಮನೆಗಳು, ಜೆನೀದಾ ಜಿಲ್ಲೆಯಲ್ಲಿ 20 ಹಾಗೂ ಜೆಸ್ಕೋರ್ ಪ್ರದೇಶದಲ್ಲಿ 22 ಮಳಿಗೆಗಳನ್ನು ಗುರಿಯಾಗಿಸಿ ಮೂಲಭೂತವಾದಿಗಳು ದಾಳಿ ನಡೆಸಿದ್ದಾರೆ. ಇಂಥ ಘಟನೆಗಳು ದೇಶದ ಹಲವು ಭಾಗಗಳಲ್ಲಿ ನಡೆದಿವೆ’ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.

‘ಹಿಂದೂಗಳನ್ನು ಒಳಗೊಂಡು ಬಾಂಗ್ಲಾದೇಶದಲ್ಲಿರುವ ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರು, ಮಕ್ಕಳು, ಧಾರ್ಮಿಕ ಕೇಂದ್ರಗಳು ಯಾವುದಕ್ಕೂ ರಕ್ಷಣೆ ಇಲ್ಲದಂತಾಗಿದೆ. ಅಲ್ಲಿ ತುಳಿತಕ್ಕೊಳಗಾದ ಅಲ್ಪಸಂಖ್ಯಾತರ ಸ್ಥಿತಿ ಹೇಳತೀರದಾಗಿದೆ. ಇಸ್ಕಾನ್‌ಗೆ ಸೇರಿದ ದೇಗುಲಕ್ಕೂ ಹಾನಿ ಮಾಡಲಾಗಿದೆ. ಬಾಂಗ್ಲಾದೇಶದಲ್ಲಿ ಒಂದು ಸಮಯದಲ್ಲಿ ಶೇ 32ರಷ್ಟಿದ್ದ ಹಿಂದೂಗಳ ಸಂಖ್ಯೆ, ಈಗ ಶೇ 8ಕ್ಕೆ ಕುಸಿದಿದೆ. ಜಿಹಾದಿಗಳ ಕಿರುಕುಳಕ್ಕೆ ಇವರು ಸತತವಾಗಿ ಒಳಗಾಗಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು.

Ad Widget

Ad Widget

‘ಭಾರತದೊಳಗೆ ನುಸುಳಲು ಭಾರೀ ದೊಡ್ಡ ಸಂಚು ರೂಪಿಸಲಾಗಿದ್ದು, ಇದಕ್ಕಾಗಿ ಭಾರತ ಮತ್ತು ಬಾಂಗ್ಲಾ ನಡುವಿನ 4,096 ಕಿ.ಮೀ. ಉದ್ದದ ಗಡಿಯಲ್ಲಿ ಕಟ್ಟೆಚ್ಚರ ವಹಿಸುವುದು ಅಗತ್ಯ. ದಿನದ 24 ಗಂಟೆಗಳ ಕಾಲವೂ ಗಡಿಯುದ್ದಕ್ಕೂ ಕಣ್ಣಾವಲು ವಹಿಸುವುದು ಭಾರತಕ್ಕೆ ತೀರಾ ಅಗತ್ಯವಿದೆ. ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿ, ದೇಶ ತೊರೆದ ನಂತರ ಅಲ್ಲಿ ಮಧ್ಯಂತರ ಸರ್ಕಾರ ರಚನೆ ಪ್ರಕ್ರಿಯೆಯಲ್ಲಿದೆ’ ಎಂದಿದ್ದಾರೆ.

‘ಇಂಥ ವಿಷಮ ಪರಿಸ್ಥಿತಿಯಲ್ಲಿ ಭಾರತವು ನೆರೆಯ ಬಾಂಗ್ಲಾದೇಶದೊಂದಿಗೆ ಗೆಳೆಯನಂತೆ ಜತೆಗೆ ನಿಲ್ಲಲಿದೆ. ಆದಷ್ಟು ಬೇಗ ಪ್ರಜಾಪ್ರಭುತ್ವ ಮತ್ತು ಜಾತ್ಯಾತೀತ ಸರ್ಕಾರ ಅಲ್ಲಿ ರಚನೆಯಾಗಬೇಕು. ಈ ನಿಟ್ಟಿನಲ್ಲಿ ಭಾರತ ಸರ್ಕಾರ ಹಾಗೂ ಸಮಾಜ ಬಾಂಗ್ಲಾದೊಂದಿಗೆ ನಿಲ್ಲಲಿದೆ’ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

Ad Widget
Click to comment

Leave a Reply

ಅಂತರ ರಾಜ್ಯ

Women’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?

Published

on

Ad Widget

Ad Widget

Ad Widget

Ad Widget

ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.

Ad Widget

Ad Widget alt="Ad Widget"/>

Ad Widget

ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹತ್ವದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.

Ad Widget

Ad Widget <> Ad Widget

ಪ್ರಸ್ತಾವನೆಯ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ. ಈ ಕ್ರಮವು ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಬೇಡಿಕೆಗೆ ಅನುಗುಣವಾಗಿದೆ ಎಂದು ಹೇಳಲಾಗಿದೆ.

Ad Widget
Continue Reading

ಅಂತರ ರಾಜ್ಯ

Viral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ

Published

on

Ad Widget

Ad Widget

Ad Widget

Ad Widget

ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಚಲಿಸುತ್ತಿರುವ ರೈಲಿನ ಎಸಿ ಬೋಗಿಯೊಳಗೆ ಪ್ರಯಾಣಿಕನೊಬ್ಬ ಎಣ್ಣೆ ದೀಪ ಹಚ್ಚಿ ಪೂಜೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಹಪ್ರಯಾಣಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಅಪಾಯದ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ವೈರಲ್ ವಿಡಿಯೋದಲ್ಲಿ ರೈಲಿನ ಹವಾನಿಯಂತ್ರಿತ ಬೋಗಿಯಲ್ಲಿ ಕುಳಿತಿರುವ ವ್ಯಕ್ತಿಯೊಬ್ಬರು ಶಂಖ ಊದುತ್ತಾ ಆರತಿ ಮಾಡುತ್ತಿರುವುದು ಕಂಡುಬಂದಿದೆ. ಅವರ ಪಕ್ಕದಲ್ಲಿರುವ ಸಣ್ಣ ಟೇಬಲ್ ಮೇಲೆ ದೀಪ, ದೇವರ ಫೋಟೋ, ಹೂವು ಹಾಗೂ ಇತರ ಪೂಜಾ ಸಾಮಗ್ರಿಗಳನ್ನು ಇರಿಸಲಾಗಿದೆ. ಪಂಚೆ ಧರಿಸಿ, ಹಣೆಗೆ ವಿಭೂತಿ ಹಚ್ಚಿಕೊಂಡಿರುವ ವ್ಯಕ್ತಿ ರೈಲು ಚಲಿಸುತ್ತಿರುವಾಗಲೇ ಪೂಜಾ ವಿಧಿವಿಧಾನಗಳನ್ನು ನಡೆಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ.

Ad Widget

Ad Widget <> Ad Widget

ಮುಚ್ಚಿದ ಹಾಗೂ ಜನನಿಬಿಡ ರೈಲು ಬೋಗಿಯೊಳಗೆ ಬೆಂಕಿ ಹಚ್ಚಲು ಅವಕಾಶ ನೀಡಿರುವುದು ಹೇಗೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಧಾರ್ಮಿಕ ಆಚರಣೆ ವೈಯಕ್ತಿಕ ವಿಚಾರವಾದರೂ, ಹಲವು ಪ್ರಯಾಣಿಕರಿರುವ ಬೋಗಿಯೊಳಗೆ ತೆರೆದ ಜ್ವಾಲೆಯೊಂದಿಗೆ ದೀಪ ಹಚ್ಚುವುದು ಅಗ್ನಿ ಅವಘಡಕ್ಕೆ ಕಾರಣವಾಗುವ ಅಪಾಯವಿದೆ ಎಂದು ಹಲವರು ಆತಂಕ ವ್ಯಕ್ತಪಡಿಸಿದ್ದಾರೆ.

ವೈರಲ್ ವಿಡಿಯೋಗೆ ಪ್ರತಿಕ್ರಿಯಿಸಿರುವ ಭಾರತೀಯ ರೈಲ್ವೆ, ಘಟನೆಯ ಬಗ್ಗೆ ಪರಿಶೀಲನೆ ನಡೆಸಲು ಹೆಚ್ಚಿನ ಮಾಹಿತಿಯನ್ನು ಕೇಳಿದೆ. ಪ್ರಯಾಣದ ದಿನಾಂಕ, ರೈಲು ಸಂಖ್ಯೆ ಹಾಗೂ ಪಿಎನ್‌ಆರ್ (PNR) ಸಂಖ್ಯೆಯಂತಹ ವಿವರಗಳನ್ನು ಹಂಚಿಕೊಳ್ಳುವಂತೆ ರೈಲ್ವೆಯ ಅಧಿಕೃತ ‘ರೈಲ್ವೆ ಸೇವಾ’ ಖಾತೆಯ ಮೂಲಕ ಮನವಿ ಮಾಡಲಾಗಿದೆ.

Ad Widget

Ad Widget

ರೈಲಿನಲ್ಲಿ ಬೆಂಕಿ ಹಚ್ಚುವುದು ಅಥವಾ ಸುಡುವ ವಸ್ತುಗಳ ಬಳಕೆಯಂತಹ ಸುರಕ್ಷತಾ ನಿಯಮಗಳ ಉಲ್ಲಂಘನೆ ಕಂಡುಬಂದಲ್ಲಿ ಪ್ರಯಾಣಿಕರು ತಕ್ಷಣ ದೂರು ನೀಡುವಂತೆ ರೈಲ್ವೆ ಸೂಚಿಸಿದೆ. ಇಂತಹ ಘಟನೆಗಳನ್ನು ‘ರೈಲ್ ಮದದ್’ ಪೋರ್ಟಲ್ ಮೂಲಕ ಅಥವಾ 139 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ವರದಿ ಮಾಡಬಹುದಾಗಿದೆ

Ad Widget
Continue Reading

ಅಂತರ ರಾಜ್ಯ

WhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!

Published

on

Ad Widget

Ad Widget

Ad Widget

Ad Widget

ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್‌ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್‌ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget alt="Ad Widget"/>

Ad Widget

WhatsApp ನಮ್ಮ ದೈನಂದಿನ ಜೀವನದ ಪ್ರಮುಖ ಸಂವಹನ ಸಾಧನವಾಗಿದ್ದು, ಅದರ ಭದ್ರತೆಗೆ ಸಂಬಂಧಿಸಿದಂತೆ CERT-In ಇದೀಗ ಅಧಿಕ ತೀವ್ರತೆಯ ಸಲಹೆ ನೀಡಿದೆ. Android, iOS, Mac ಹಾಗೂ Windows ಸೇರಿದಂತೆ ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಬಳಕೆಯಾಗುವ WhatsAppನ ಕೆಲವು ಆವೃತ್ತಿಗಳಲ್ಲಿನ ನ್ಯೂನತೆಗಳು ಸೈಬರ್ ದಾಳಿಗೆ ಅವಕಾಶ ಮಾಡಿಕೊಡಬಹುದು ಎಂದು ಎಚ್ಚರಿಸಲಾಗಿದೆ.

Ad Widget

Ad Widget <> Ad Widget

ಕೇಂದ್ರ ಸರ್ಕಾರದ ಸೈಬರ್ ಭದ್ರತಾ ಸಂಸ್ಥೆಯ ಪ್ರಕಾರ, ವಿಶೇಷವಾಗಿ ರೂಪಿಸಲಾದ ಸಂದೇಶಗಳು, ಅಟ್ಯಾಚ್‌ಮೆಂಟ್‌ಗಳು ಅಥವಾ URL ಲಿಂಕ್‌ಗಳ ಮೂಲಕ ಈ ದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಬಳಕೆದಾರರು ಹಾಗೂ ಸಂಸ್ಥೆಗಳು ತಮ್ಮ ಸಾಧನಗಳಲ್ಲಿ WhatsApp ಅನ್ನು ತಕ್ಷಣವೇ ನವೀಕರಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.

ಈ ಹಿಂದೆ ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ರಾಷ್ಟ್ರೀಯ ಸೈಬರ್ ಅಪರಾಧ ಬೆದರಿಕೆ ವಿಶ್ಲೇಷಣಾ ಘಟಕ (NCTAU) ಕೂಡ WhatsApp ಬಳಕೆಯ ಕುರಿತು ಎಚ್ಚರಿಕೆ ನೀಡಿತ್ತು. ಸಾರ್ವಜನಿಕ ಕಂಪ್ಯೂಟರ್‌ಗಳಲ್ಲಿ WhatsApp ವೆಬ್‌ಗೆ ಲಾಗಿನ್ ಮಾಡಿ ಕೆಲಸ ಮುಗಿದ ಬಳಿಕ ಲಾಗ್‌ಔಟ್ ಮಾಡದೆ ಬಿಟ್ಟರೆ, ಅನಧಿಕೃತ ವ್ಯಕ್ತಿಗಳು ಖಾತೆಯನ್ನು ಪ್ರವೇಶಿಸಿ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿತ್ತು. ಬ್ರೌಸರ್ ಟ್ಯಾಬ್ ಮುಚ್ಚಿದ ಮಾತ್ರಕ್ಕೆ WhatsApp ವೆಬ್‌ನಿಂದ ಲಾಗ್‌ಔಟ್ ಆಗುವುದಿಲ್ಲ ಎಂಬುದನ್ನೂ ಎಚ್ಚರಿಸಿತ್ತು.

Ad Widget

Ad Widget

WhatsAppನಲ್ಲಿ ಪತ್ತೆಯಾದ ಪ್ರಮುಖ ಭದ್ರತಾ ದೋಷಗಳೇನು?
CERT-In ಸಲಹೆಯಲ್ಲಿ WhatsAppನ ವಿವಿಧ ಆವೃತ್ತಿಗಳಲ್ಲಿನ ಐದು ಭದ್ರತಾ ನ್ಯೂನತೆಗಳನ್ನು ಉಲ್ಲೇಖಿಸಲಾಗಿದೆ.

CVE-2026-102769: Android WhatsAppನಲ್ಲಿ ವಿಶೇಷವಾಗಿ ರೂಪಿಸಲಾದ ಆರ್ಡರ್ ವಿವರಗಳ ಸಂದೇಶಕ್ಕೆ ಸಂಬಂಧಿಸಿದ ಈ ದೋಷವು SQL ಇಂಜೆಕ್ಷನ್‌ಗೆ ಅವಕಾಶ ನೀಡಬಹುದು. ಸಂದೇಶವನ್ನು ಬಳಕೆದಾರರು ತೆರೆಯುವ ಸಂದರ್ಭದಲ್ಲಿ ಸ್ಥಳೀಯವಾಗಿ ಸಂಗ್ರಹವಾಗಿರುವ ಚಾಟ್‌ಗಳು, ಮಾಧ್ಯಮ ಹಾಗೂ ಇತರ ಫೈಲ್‌ಗಳನ್ನು ಅಳಿಸುವ ಅಪಾಯವಿದೆ ಎಂದು ಎಚ್ಚರಿಸಲಾಗಿದೆ. ಸಂದೇಶ ತಲುಪಿದ ಸಮಯ ಹಾಗೂ ಡಬಲ್ ಟಿಕ್‌ನ ಮಾಹಿತಿಯನ್ನು ಗಮನಿಸುವ ಮೂಲಕ ಚಾಟ್ ಡೇಟಾಬೇಸ್ ಕುರಿತು ಕೆಲವು ಮಾಹಿತಿಯನ್ನು ತಿಳಿದುಕೊಳ್ಳುವ ಸಾಧ್ಯತೆಯೂ ಇದೆ. ಆದರೆ ಈ ದೋಷದ ದುರ್ಬಳಕೆಗೆ ಸಂಬಂಧಿಸಿದ ಯಾವುದೇ ಪುರಾವೆ ಇಲ್ಲ ಎಂದು WhatsApp ತಿಳಿಸಿದೆ.

CVE-2026-44908: Meta AIನ ಕಂಪ್ಯೂಟಿಂಗ್ ವ್ಯವಸ್ಥೆಯೊಂದಿಗೆ ವಿಶ್ವಾಸಾರ್ಹ ಸಂಪರ್ಕ ಸ್ಥಾಪಿಸಲು ಬಳಸುವ ಸರ್ಟಿಫಿಕೇಟ್ ಚೈನ್ ಪರಿಶೀಲನೆಯಲ್ಲಿನ ನ್ಯೂನತೆಗೆ ಈ ದೋಷ ಸಂಬಂಧಿಸಿದೆ. ಇದರಿಂದ ಕೆಲವು ಸಂದರ್ಭಗಳಲ್ಲಿ ಹಾರ್ಡ್‌ವೇರ್ ಭದ್ರತಾ ವ್ಯವಸ್ಥೆಯನ್ನು ಬೈಪಾಸ್ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಈ ದೋಷವನ್ನು ದುರ್ಬಳಕೆ ಮಾಡಿಕೊಂಡಿರುವ ಪುರಾವೆಯೂ ಇಲ್ಲ ಎಂದು WhatsApp ಹೇಳಿದೆ.

CVE-2026-23871: Android ಸಾಧನಗಳಲ್ಲಿನ ಬಾಹ್ಯ ಜಾಹೀರಾತು-ಪ್ರತಿಕ್ರಿಯೆ URLಗಳಿಗೆ ಸಂಬಂಧಿಸಿದ ಈ ದೋಷವು ವಿಶೇಷವಾಗಿ ರೂಪಿಸಲಾದ ‘Click to WhatsApp’ ಸಂದೇಶಗಳ ಮೂಲಕ ಸಾಧನವು ಹ್ಯಾಕರ್ ನಿಯಂತ್ರಿತ ವಿಳಾಸದಿಂದ ಮಾಧ್ಯಮವನ್ನು ಲೋಡ್ ಮಾಡುವಂತೆ ಮಾಡಬಹುದು. ಇದರಿಂದ ಬಳಕೆದಾರರ IP ವಿಳಾಸ ಬಹಿರಂಗಗೊಳ್ಳುವ ಸಾಧ್ಯತೆಯಿದೆ.

ಇದಲ್ಲದೆ, Instagram Reelಗೆ ಸಂಬಂಧಿಸಿದ AI ಪ್ರತಿಕ್ರಿಯೆಯಲ್ಲಿನ ದುರ್ಬಲತೆಯ ಮೂಲಕ iOS ಅಥವಾ Android ಸಾಧನಗಳಲ್ಲಿ ದುರುದ್ದೇಶಪೂರಿತ ವಿಷಯವನ್ನು ಪ್ರಕ್ರಿಯೆಗೊಳಿಸುವ ಸಾಧ್ಯತೆಯಿರುವ ಮತ್ತೊಂದು ದೋಷವನ್ನೂ ಉಲ್ಲೇಖಿಸಲಾಗಿದೆ.

CVE-2026-23863: Windows WhatsAppನಲ್ಲಿ ದುರುದ್ದೇಶಪೂರಿತ ಅಟ್ಯಾಚ್‌ಮೆಂಟ್‌ಗಳನ್ನು ಸಾಮಾನ್ಯ ಫೈಲ್‌ಗಳಂತೆ ತೋರಿಸಿ, ತೆರೆಯುವಾಗ ಕಾರ್ಯಗತಗೊಳಿಸಬಹುದಾದ ಫೈಲ್‌ಗಳಾಗಿ ರನ್ ಆಗುವಂತೆ ಮಾಡುವ ನ್ಯೂನತೆ ಇದಾಗಿದೆ. ಈ ದೋಷಗಳ ದುರ್ಬಳಕೆಗೆ ಸಂಬಂಧಿಸಿದ ಪುರಾವೆಗಳು ಇಲ್ಲ ಎಂದು WhatsApp ತಿಳಿಸಿದೆ.

ಸೈಬರ್ ಭದ್ರತಾ ಆತಂಕಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ CERT-In ಬಳಕೆದಾರರು WhatsAppನ ಇತ್ತೀಚಿನ ಆವೃತ್ತಿಯನ್ನು ಬಳಸುವಂತೆ ಹಾಗೂ ಅಪರಿಚಿತ ಸಂದೇಶಗಳು, ಲಿಂಕ್‌ಗಳು ಮತ್ತು ಅಟ್ಯಾಚ್‌ಮೆಂಟ್‌ಗಳನ್ನು ತೆರೆಯುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!