ನಿಧನ ವಾರ್ತೆ
Pregnant woman dies-ಶುಭ ಪ್ರಸವಕ್ಕೆ ದೇವರನ್ನು ಪ್ರಾರ್ಥಿಸಿ ಬರುವಾಗಲೇ ನಡೆದ ಅಪಘಾತ -ಎಂಟು ತಿಂಗಳ ಗರ್ಭಿಣಿ ಸ್ಥಳದಲ್ಲೇ ಸಾವು : ಹೊಟ್ಟೆಯಿಂದ ಹೊರ ಬಂದ ಮಗು ರಸ್ತೆಯಲ್ಲೇ ನರಳಿ ಮೃತ
7 ತಿಂಗಳ ಗರ್ಭಿಣಿ, ಪತಿ ಎದುರಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ತುಮಕೂರು-ಬೆಂಗಳೂರು ರಸ್ತೆಯಲ್ಲಿ ಮನೆ ಕಡೆ ತೆರಳುವಾಗ ಹಿಂದುಗಡೆಯಿಂದ ಬಂದ ಜಲ್ಲಿ ತುಂಬಿದ ಲಾರಿ ಗುದ್ದಿದ ರಭಸಕ್ಕೆ ಸಿಂಚನ ಸ್ಕೂಟಿಯಿಂದ ಕೆಳಗಡೆ ಬಿದ್ದಿದ್ದಾರೆ. ಸಿಂಚನ ರಸ್ತೆಗೆ ಬಿದ್ದಿದ್ದು ಅವರ ಕಾಲಿನ ಮೇಲೆ ಲಾರಿ ಚಕ್ರ ಹರಿದಿದೆ. ಪರಿಣಾಮ ಸಿಂಚನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಎಡೆಹಳ್ಳಿ ಗ್ರಾಮದ ಬಳಿ 7 ತಿಂಗಳ ಗರ್ಭಿಣಿ ಪತಿ ಎದುರಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಸಿಂಚನ ಮಗುವಿನೊಂದಿಗೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ನೆಲಮಂಗಲ ತಾಲೂಕಿನ ತೋಟನಹಳ್ಳಿ ಗ್ರಾಮದ ಮಂಜುನಾಥ್, ಸಿಂಚನ ದಂಪತಿ ಇಂದು ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ಮನೆಗೆ ಸ್ಕೂಟರ್‌ನಲ್ಲಿ ವಾಪಸ್ ತೆರಳುವಾಗ ಹಿಂಬದಿಯಿಂದ ಲಾರಿ ಗುದ್ದಿದೆ.
ತುಮಕೂರು-ಬೆಂಗಳೂರು ರಸ್ತೆಯಲ್ಲಿ ಮನೆ ಕಡೆ ತೆರಳುವಾಗ ಹಿಂದುಗಡೆಯಿಂದ ಬಂದ ಜಲ್ಲಿ ತುಂಬಿದ ಲಾರಿ ಗುದ್ದಿದ ರಭಸಕ್ಕೆ ಸಿಂಚನ ಸ್ಕೂಟಿಯಿಂದ ಕೆಳಗಡೆ ಬಿದ್ದಿದ್ದಾರೆ. ಸಿಂಚನ ರಸ್ತೆಗೆ ಬಿದ್ದಿದ್ದು ಅವರ ಕಾಲಿನ ಮೇಲೆ ಲಾರಿ ಚಕ್ರ ಹರಿದಿದೆ. ಪರಿಣಾಮ ಸಿಂಚನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಣ್ಣೆದುರೇ ಪತ್ನಿಯ ಸಾವು ಕಂಡು ಪತಿ ಮಂಜುನಾಥ್ ರಸ್ತೆಯಲ್ಲೇ ಕಣ್ಣೀರಿಟ್ಟಿದ್ದಾರೆ. ಲಾರಿ ಚಾಲಕ ಅತಿ ವೇಗ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ನಿಧನ ವಾರ್ತೆ
Mumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನವವಿವಾಹಿತ ದಂಪತಿಯ ಮೃತದೇಹಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ತಾಪಿ ನದಿಯಲ್ಲಿ ಪತ್ತೆಯಾಗಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ದಂಪತಿಯ ಸಾವಿನ ಹಿಂದಿನ ಕಾರಣ ನಿಗೂಢವಾಗಿದೆ.
ಮುಂಬೈ: ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನವವಿವಾಹಿತ ದಂಪತಿಯ ಮೃತದೇಹಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ತಾಪಿ ನದಿಯಲ್ಲಿ ಪತ್ತೆಯಾಗಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ದಂಪತಿಯ ಸಾವಿನ ಹಿಂದಿನ ಕಾರಣ ನಿಗೂಢವಾಗಿದೆ.
ಧುಲೆ ಜಿಲ್ಲೆಯ ಸಾವಲ್ಲೆ ಪ್ರದೇಶದಲ್ಲಿ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಜಲಗಾಂವ್ ಜಿಲ್ಲೆಯ ಅಮಲ್ನೇರ್ ತಾಲ್ಲೂಕಿನ ಮೂಲದ ಶ್ಯಾಮ್ ಹರಿ ಪಾಟೀಲ್ ಮತ್ತು ಸಪ್ನಾ ಪಾಟೀಲ್ ಎಂದು ಗುರುತಿಸಲಾಗಿದೆ. ಇಬ್ಬರೂ ಕೆಲವು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾಲುಗಳಿಗೆ ಸರಪಳಿ, ಬೀಗ!
ದಂಪತಿಯ ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಅದಕ್ಕೆ ಬೀಗ ಹಾಕಲಾಗಿತ್ತು. ನದಿಯ ತಳಭಾಗದಲ್ಲಿ ಈ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆತ್ಮಹತ್ಯೆಯೋ, ಕೊಲೆಯೋ?
ನವದಂಪತಿಯ ಸಾವು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದ್ದು, ಸಾವಿನ ಹಿಂದಿನ ನೈಜ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.
ನಿಧನ ವಾರ್ತೆ
Accident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ. ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ ಎಂದು ಗುರುತಿಸಲಾಗಿದೆ.
ಮೂಡುಬಿದಿರೆ, ಅ.8: ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ನಡೆದಿದೆ.
ಮೃತರನ್ನು ಕೋಟೆಬಾಗಿಲು ನಿವಾಸಿ ಸುಧಾಕರ ಹೆಗ್ಡೆ ಅವರ ಪುತ್ರ, ಮೂಡುಬಿದಿರೆಯ ಜೈನ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಶ್ವಿತ್ ಹೆಗ್ಡೆ (17) ಎಂದು ಗುರುತಿಸಲಾಗಿದೆ.
ಪ್ರಶ್ವಿತ್ ಹೆಗ್ಡೆ ಹಾಗೂ ದೀಕ್ಷಿತ್ ಹೆಗ್ಡೆ ಒಂದೇ ಸ್ಕೂಟರ್‌ನಲ್ಲಿ ಶಿರ್ತಾಡಿ ಕಡೆಯಿಂದ ಕೋಟೆಬಾಗಿಲು ಕಡೆಗೆ ತೆರಳುತ್ತಿದ್ದರು. ಕೋಟೆಬಾಗಿಲಿನ ವೀರ ಮಾರುತಿ ದೇವಸ್ಥಾನದ ಬಳಿಯ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದೆ ಎನ್ನಲಾಗಿದೆ.
ಅಪಘಾತದ ಪರಿಣಾಮ ಪ್ರಶ್ವಿತ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಜೊತೆಯಲ್ಲಿದ್ದ ದೀಕ್ಷಿತ್ ಅವರ ತಲೆಗೂ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಇಬ್ಬರನ್ನೂ ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ ಪ್ರಶ್ವಿತ್ ಅವರ ತಲೆಗೆ ಗಂಭೀರ ಆಂತರಿಕ ಗಾಯವಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ತಂದೆಯ ಹೋಟೆಲ್‌ನಲ್ಲಿ ತಿಂಡಿ ಸೇವಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Beltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ: ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.
ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.
ಅ.4ರಂದು ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ, ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ದೋಟಿ ತಾಗಿದೆ ಎನ್ನಲಾಗಿದೆ. ಪರಿಣಾಮ ನಝರ್ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು.
ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
-
ಬಿಗ್ ನ್ಯೂಸ್22 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು24 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ22 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು23 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಶಿಕ್ಷಣ23 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ5 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಶಿಕ್ಷಣ23 hours agoVivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
-
ಅಂತರ ರಾಜ್ಯ4 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ


















