ಅಂತರ ರಾಜ್ಯ
Vijender Singh-ತೂಕ ಇಳಿಸಿಕೊಳ್ಳಲು 1 ಗಂಟೆ ಸಮಯ ಕೊಡ್ತಾರೆ – ಭಾರಿ ದೊಡ್ಡ ಸಂಚು ನಡೆದಿದೆ : ಒಲಿಂಪಿಕ್ಸ್ ಪದಕ ವಿಜೇತ ವಿಜೇಂದರ್ ಸಿಂಗ್
100ಗ್ರಾಂನಷ್ಟು ತೂಕ ಹೆಚ್ಚಿದ ಹಿನ್ನೆಲೆಯಲ್ಲಿ ಭಾರತದ ವಿನೇಶಾ ಫೋಗಟ್ ಅವರನ್ನು ಒಲಿಂಪಿಕ್ಸ್‌ನಲ್ಲಿ ಅನರ್ಹಗೊಳಿಸಲಾಗಿದೆ. ಈ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ 2008ರ ಬೀಜಿಂಗ್ ಒಲಿಂಪಿಕ್ಸ್ ಪದಕ ವಿಜೇತ ಮಾಜಿ ಬಾಕ್ಸರ್ ವಿಜೇಂದರ್ ಸಿಂಗ್, ‘ಭಾರತೀಯ ಕುಸ್ತಿಪಟು ವಿರುದ್ಧ ಭಾರಿ ದೊಡ್ಡ ಸಂಚು ನಡೆದಿದೆ’ ಎಂದು ಆರೋಪಿಸಿದ್ದಾರೆ.
ಪ್ಯಾರಿಸ್ : ಒಲಿಂಪಿಕ್ಸ್‌ನಲ್ಲಿ ಭಾರತದ ವಿನೇಶಾ ಫೋಗಟ್ ಅವರು 50 ಕೆ.ಜಿ ವಿಭಾಗದ ಮಹಿಳೆಯರ ಕುಸ್ತಿಯ ಫೈನಲ್‌ನಲ್ಲಿ ಆಡುವ ಅವಕಾಶದಿಂದ ವಂಚಿತರಾಗಿದ್ದಾರೆ.
100ಗ್ರಾಂನಷ್ಟು ತೂಕ ಹೆಚ್ಚಿದ ಹಿನ್ನೆಲೆಯಲ್ಲಿ ಅವರನ್ನು ಅನರ್ಹಗೊಳಿಸಲಾಗಿದೆ. ಇದರೊಂದಿಗೆ ಭಾರತಕ್ಕೆ ಪದಕ ನಷ್ಟವಾಗಿದೆ.
ಈ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ 2008ರ ಬೀಜಿಂಗ್ ಒಲಿಂಪಿಕ್ಸ್ ಪದಕ ವಿಜೇತ ಮಾಜಿ ಬಾಕ್ಸರ್ ವಿಜೇಂದರ್ ಸಿಂಗ್, ‘ಭಾರತೀಯ ಕುಸ್ತಿಪಟು ವಿರುದ್ಧ ಭಾರಿ ದೊಡ್ಡ ಸಂಚು ನಡೆದಿದೆ’ ಎಂದು ಆರೋಪಿಸಿದ್ದಾರೆ.
‘ಭಾರಿ ದೊಡ್ಡ ಸಂಚು ನಡೆದಿದೆ. ವಿನೇಶಾ ಸ್ಪರ್ಧಿಸಿದ ರೀತಿ ನಿಜಕ್ಕೂ ಪ್ರಶಂಸನೀಯ. ಬಹುಶಃ ಕೆಲವರಿಗೆ ಅವರ ಯಶಸ್ಸನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ’ ಎಂದು ವಿಜೇಂದರ್ ಹೇಳಿದ್ದಾರೆ.
‘ಒಂದೇ ರಾತ್ರಿಯಲ್ಲಿ ಐದರಿಂದ ಆರು ಕೆ.ಜಿಗಳಷ್ಟು ತೂಕ ಕಡಿಮೆ ಮಾಡಲು ಸಾಧ್ಯ. ಹಾಗಿರುವಾಗ 100ಗ್ರಾಂ ದೊಡ್ಡ ಸಮಸ್ಯೆಯೇ ಅಲ್ಲ. ಯಾರಿಗೋ ಏನೋ ಸಮಸ್ಯೆಯಿದೆ. ಆದ್ದರಿಂದ ಅನರ್ಹಗೊಳಿಸುವ ಕ್ರಮ ಕೈಗೊಳ್ಳಲಾಗಿದೆ. 100 ಗ್ರಾಂ ತೂಕ ಕಡಿಮೆ ಮಾಡಲು ಆಕೆಗೆ ಅವಕಾಶ ಸಿಗಬೇಕಿತ್ತು’ ಎಂದು ಹೇಳಿದ್ದಾರೆ.
‘ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಓರ್ವ ಕ್ರೀಡಾಪಟುವಾಗಿ ನಾನೆಂದೂ ಇಂತಹ ಘಟನೆಯನ್ನು ಕಂಡಿರಲಿಲ್ಲ’ ಎಂದು ಅವರು ತಿಳಿಸಿದ್ದಾರೆ.
ವಿನೇಶಾ ಪ್ರಕರಣದಲ್ಲಿ ಮೇಲ್ಮನವಿ ಸಾಧ್ಯ. ಭಾರತ ಒಲಿಂಪಿಕ್ಸ್ ಸಂಸ್ಥೆಯು (ಐಒಎ) ಮೇಲ್ಮನವಿ ಸಲ್ಲಿಸಬೇಕು. 100 ಗ್ರಾಂ ಏನೂ ವಿಷಯ ಅಲ್ಲ. ತೂಕ ಇಳಿಸಿಕೊಳ್ಳಲು ಬಾಕ್ಸರ್‌ಗಳಿಗೆ ಒಂದು ತಾಸಿಗೂ ಹೆಚ್ಚು ಸಮಯ ನೀಡಲಾಗುತ್ತದೆ’ ಎಂದು ಅವರು ತಿಳಿಸಿದ್ದಾರೆ.
ಸಿನೆಮಾ
Aakasham Lo Ok Tara-ಬಾಕ್ಸ್ ಆಫೀಸ್‌ನಲ್ಲಿ ದುಲ್ಕರ್ ಸಲ್ಮಾನ್ ಅಬ್ಬರ: 4 ದಿನಕ್ಕೆ 20 ಕೋಟಿ ರೂ. ಗಳಿಸಿದ ‘ಆಕಾಶಮ್ ಲೋ ಒಕ ತಾರ’
ಮಲಯಾಳಂ ಚಿತ್ರರಂಗದ ಸ್ಟಾರ್ ನಟ ದುಲ್ಕರ್ ಸಲ್ಮಾನ್ ಅಭಿನಯದ ತೆಲುಗು ಸಿನಿಮಾ ‘ಆಕಾಶಮ್ ಲೋ ಒಕ ತಾರ’ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಿಡುಗಡೆಯಾದ ಮೊದಲ ದಿನದಿಂದಲೇ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ಚಿತ್ರ, ದಿನದಿಂದ ದಿನಕ್ಕೆ ತನ್ನ ಗಳಿಕೆಯನ್ನು ಹೆಚ್ಚಿಸಿಕೊಳ್ಳುತ್ತಿದೆ.
ಹೈದರಾಬಾದ್: ಮಲಯಾಳಂ ಚಿತ್ರರಂಗದ ಸ್ಟಾರ್ ನಟ ದುಲ್ಕರ್ ಸಲ್ಮಾನ್ ಅಭಿನಯದ ತೆಲುಗು ಸಿನಿಮಾ ‘ಆಕಾಶಮ್ ಲೋ ಒಕ ತಾರ’ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಿಡುಗಡೆಯಾದ ಮೊದಲ ದಿನದಿಂದಲೇ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ಚಿತ್ರ, ದಿನದಿಂದ ದಿನಕ್ಕೆ ತನ್ನ ಗಳಿಕೆಯನ್ನು ಹೆಚ್ಚಿಸಿಕೊಳ್ಳುತ್ತಿದೆ.
ಸಿನಿಮಾದ ನೈಜ ಯಶಸ್ಸನ್ನು ನಿರ್ಧರಿಸುವಲ್ಲಿ ಸೋಮವಾರದ ಕಲೆಕ್ಷನ್ ಪ್ರಮುಖ ಪಾತ್ರ ವಹಿಸುತ್ತದೆ. ಈ ಪರೀಕ್ಷೆಯಲ್ಲೂ ‘ಆಕಾಶಮ್ ಲೋ ಒಕ ತಾರ’ ಯಶಸ್ವಿಯಾಗಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 4 ಕೋಟಿ ರೂಪಾಯಿ ಗಳಿಸಿದೆ. ವಿಶೇಷವೆಂದರೆ, ಈ ಗಳಿಕೆ ಚಿತ್ರದ ಮೊದಲ ದಿನದ ಕಲೆಕ್ಷನ್‌ಗಿಂತ ಶೇ.10ರಷ್ಟು ಹೆಚ್ಚಾಗಿದೆ.
ಚಿತ್ರ ಬಿಡುಗಡೆಯಾಗಿ ನಾಲ್ಕು ದಿನಗಳಲ್ಲಿ ಭಾರತದ ಬಾಕ್ಸ್ ಆಫೀಸ್‌ನಲ್ಲಿ ಒಟ್ಟು 20 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇದೇ ವೇಗ ಮುಂದುವರಿದರೆ ಮೊದಲ ವಾರದ ಅಂತ್ಯಕ್ಕೆ 30 ಕೋಟಿ ರೂಪಾಯಿ ಗಡಿ ದಾಟುವ ನಿರೀಕ್ಷೆಯಿದೆ. ಮುಂದಿನ ವಾರವೂ ಉತ್ತಮ ಪ್ರದರ್ಶನ ಮುಂದುವರಿಸಿದರೆ ಚಿತ್ರ ಹಿಟ್ ಪಟ್ಟಿಗೆ ಸೇರುವ ಸಾಧ್ಯತೆಯಿದೆ. ಈ ಮೂಲಕ ತೆಲುಗು ಚಿತ್ರರಂಗದಲ್ಲಿ ದುಲ್ಕರ್ ಸಲ್ಮಾನ್ ಅವರ ಯಶಸ್ಸಿನ ಓಟ ಮುಂದುವರಿದಂತಾಗಲಿದೆ.
ಪವನ್ ಸಾಧಿನೇನಿ ನಿರ್ದೇಶನದ ಈ ಚಿತ್ರದಲ್ಲಿ ದುಲ್ಕರ್ ಸಲ್ಮಾನ್‌ಗೆ ನಾಯಕಿಯಾಗಿ ಹೊಸ ಪ್ರತಿಭೆ ಸಾತ್ವಿಕಾ ವೀರವಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರುತಿ ಹಾಸನ್, ರುಹಾನಿ ಶರ್ಮಾ, ಸ್ವಾಸಿಕಾ, ಮುರಳಿ ಶರ್ಮಾ, ಗೌತಮ್ ವಾಸುದೇವ್ ಮೆನನ್, ಗೆಟಪ್ ಶ್ರೀನು ಹಾಗೂ ಪ್ರವೀಣ್ ಸೇರಿದಂತೆ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಅಂತರ ರಾಜ್ಯ
Kerala government-ಪೋಷಕರ ಆಸ್ತಿ ಬರೆಸಿಕೊಂಡು ನಿರ್ಲಕ್ಷಿಸಿದರೆ ಮಕ್ಕಳಿಗೆ 3 ವರ್ಷ ಜೈಲು: ಕೇರಳ ಸರ್ಕಾರದ ಮಹತ್ವದ ನಿರ್ಧಾರ..!
ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ: ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.
ಕೊಲ್ಲಂ ಜಿಲ್ಲೆಯ ಪಟ್ಟಣಪುರಂನ ಗಾಂಧಿ ಭವನದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ವೃದ್ಧ ಪುರುಷರಿಗಾಗಿ ಅತ್ಯಾಧುನಿಕ ವಸತಿ ಸೌಲಭ್ಯವಾದ ‘ಪಿತೃಮಂದಿರಂ’ ಉದ್ಘಾಟಿಸಿ ಅವರು ಮಾತನಾಡಿದರು.
ಅಕ್ಟೋಬರ್‌ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿರುವ ಹಿರಿಯ ನಾಗರಿಕರ ಕಾಳಜಿ ಮತ್ತು ರಕ್ಷಣೆಗೆ ಸಂಬಂಧಿಸಿದ ಮಸೂದೆಯ ಪ್ರಮುಖ ಅಂಶಗಳನ್ನು ವಿವರಿಸಿದ ಅವರು, ಪೋಷಕರ ಆಸ್ತಿಯನ್ನು ಸಂಪೂರ್ಣವಾಗಿ ತಮ್ಮ ಹೆಸರಿಗೆ ಬರೆಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಮಕ್ಕಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ನಿಬಂಧನೆಯನ್ನು ಉದ್ದೇಶಪೂರ್ವಕವಾಗಿಯೇ ಕಾಯ್ದೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.
ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಂಡ ಮೊದಲ ನಿರ್ಧಾರವೇ ಹಿರಿಯ ನಾಗರಿಕರಿಗಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿತ್ತು. ಹಿರಿಯ ನಾಗರಿಕರಿಗೆ ಹಲವು ಹಕ್ಕುಗಳನ್ನು ಒದಗಿಸುವ ವಿಶೇಷ ಕಾನೂನನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.
ಈ ಮಸೂದೆಗೆ ರಾಜ್ಯಪಾಲರ ಅಂಕಿತ ದೊರೆತ ಬಳಿಕ ಕಾನೂನಾಗಿ ಜಾರಿಗೆ ಬರಲಿದೆ. ಪೋಷಕರ ಆಸ್ತಿಯನ್ನು ಪಡೆದುಕೊಂಡು ಅವರನ್ನು ಬೀದಿಗೆ ತಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.
ಮಕ್ಕಳನ್ನು ಬೆಳೆಸಲು ಪೋಷಕರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅಪಾರ ತ್ಯಾಗ ಮಾಡುತ್ತಾರೆ. ಆದರೆ ಮಕ್ಕಳು ದೊಡ್ಡವರಾದ ಬಳಿಕ ಅದೇ ಪೋಷಕರನ್ನು ನಿರ್ಲಕ್ಷಿಸುವ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಸಂಸ್ಕೃತಿ ಕೇರಳದಲ್ಲಿ ಬೆಳೆಯಬಾರದು ಎಂದು ಅವರು ಹೇಳಿದರು.
ಪೋಷಕರನ್ನು ತಮ್ಮೊಂದಿಗೆ ಇರಿಸಿಕೊಂಡು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಕೇರಳದಲ್ಲಿ ಯಾವೊಬ್ಬ ಹಿರಿಯ ನಾಗರಿಕರೂ ಏಕಾಂಗಿಯಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದೇ ತಮ್ಮ ದೊಡ್ಡ ಕನಸು ಎಂದು ಮುಖ್ಯಮಂತ್ರಿ ತಿಳಿಸಿದರು.
ಅಂತರ ರಾಜ್ಯ
Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.
ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.
ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.
-
Uncategorized17 hours ago
ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್
-
ನಿಧನ ವಾರ್ತೆ22 hours agoBabu Gowda-ಧರ್ಮಸ್ಥಳ: ದಿ. ಸೌಜನ್ಯ ಅಜ್ಜ ಪಾಂಗಳ ನಿವಾಸಿ ಬಾಬು ಗೌಡ ನಿಧನ
-
ಅಂತರ ರಾಜ್ಯ22 hours agoPunjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ
-
ಕ್ರೈಂ4 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ರಾಜಕೀಯ22 hours agoRural election-ಗ್ರಾಮೀಣ ಚುನಾವಣೆ ಅಖಾಡ ಸಜ್ಜು: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ; ಜನವರಿಯಲ್ಲಿ ಮತದಾನ ಸಾಧ್ಯತೆ..!
-
ಅಂತರ ರಾಜ್ಯ22 hours agoSreejit Ravi-ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಮಲಯಾಳಂ ನಟ ಶ್ರೀಜಿತ್ ರವಿಗೆ 1 ವರ್ಷ ಜೈಲು
-
ಶಿಕ್ಷಣ22 hours agoVivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ
-
ಬಿಗ್ ನ್ಯೂಸ್4 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ















