ಬೆಂಗಳೂರು
Renuka Swamy case-ಪರ್ಮನೆಂಟಾಗಿ ಜೈಲಿನಲ್ಲಿರಬೇಕಾ ನಟ ದರ್ಶನ್!; ರೇಣುಕಾ ಸ್ವಾಮಿ ಪ್ರಕರಣದ ತನಿಖೆ ವೇಳೆ ಲಭ್ಯವಾಯ್ತು ಬಹುದೊಡ್ಡ ಸಾಕ್ಷಿ!
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ತಿರುವು ಪೊಲೀಸರಿಗೆ ಲಭ್ಯವಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಮರ್ಡರ್ ಪ್ರಕರಣದಲ್ಲಿ ಈ ಮೊದಲು ಸಿಸಿಟಿವಿ ದೃಶ್ಯಗಳು ಪ್ರಮುಖ ಸಾಕ್ಷಿಯಾಗಿ ಸಿಕ್ಕಿದ್ದವು. ಬಳಿಕ ಮೊಬೈಲ್ ಕರೆಗಳು ಮತ್ತು ಮೆಸೇಜ್ಗಳು ಇನ್ನಷ್ಟು ಸಾಕ್ಷಿ ಒದಗಿಸಿದವು. ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಒಂದು ಬಲವಾದ ಎವಿಡೆನ್ಸ್ ಈಗ ಪೊಲೀಸರ ಕೈ ಸೇರಿದೆ.
ನಿಖರ ನ್ಯೂಸ್: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ನಡೆದಿದ್ದು, ಇದೇ ಪ್ರಕರಣಕ್ಕೆ ನಟ ದರ್ಶನ್ ಜೈಲು ಸೇರಿದ್ದು ಎಲ್ಲವೂ ತಿಳಿದಿರುವ ವಿಚಾರ. ಇತ್ತೀಚೆಗೆ ಮನೆ ಆಹಾರಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಹಾಕಿದ್ದ ಅರ್ಜಿಯನ್ನು ಕೂಡಾ ನ್ಯಾಯಾಲಯ ತಿರಸ್ಕರಿಸಿತ್ತು. ಪ್ರಕರಣ ನಡೆದು ಇಷ್ಟು ತಿಂಗಳಾದರೂ ಪೊಲೀಸರ ತನಿಖೆ ಮಾತ್ರ ಇನ್ನೂ ಮುಗಿದಿಲ್ಲ. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ತಿರುವು ಪೊಲೀಸರಿಗೆ ಲಭ್ಯವಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಮರ್ಡರ್ ಪ್ರಕರಣದಲ್ಲಿ ಈ ಮೊದಲು ಸಿಸಿಟಿವಿ ದೃಶ್ಯಗಳು ಪ್ರಮುಖ ಸಾಕ್ಷಿಯಾಗಿ ಸಿಕ್ಕಿದ್ದವು. ಬಳಿಕ ಮೊಬೈಲ್ ಕರೆಗಳು ಮತ್ತು ಮೆಸೇಜ್ಗಳು ಇನ್ನಷ್ಟು ಸಾಕ್ಷಿ ಒದಗಿಸಿದವು. ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಒಂದು ಬಲವಾದ ಎವಿಡೆನ್ಸ್ ಈಗ ಪೊಲೀಸರ ಕೈ ಸೇರಿದೆ.
ನಟ ದರ್ಶನ್ ಬಟ್ಟೆಯಲ್ಲಿ ರಕ್ತದ ಕಲೆಗಳು…!!
ಅಂದು ದರ್ಶನ್ ಧರಿಸಿದ್ದ ಬಟ್ಟೆಗಳ ಮೇಲೆ ಪತ್ತೆಯಾದ ರಕ್ತದ ಕಲೆಗಳು ರೇಣುಕಾ ಸ್ವಾಮಿಯ ದೇಹದ್ದು ಎಂಬುದು ಖಚಿತವಾಗಿದೆ. ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್) ವರದಿಯಲ್ಲಿ ಒಂದು ಭಯಾನಕ ಸತ್ಯ ಬಹಿರಂಗ ಆಗಿದೆ. ಪ್ರಕರಣ ನಡೆದ ದಿನ ದರ್ಶನ್ ಧರಿಸಿದ್ದ ಬಟ್ಟೆಗಳ ಮೇಲೆ ರೇಣುಕಾ ಸ್ವಾಮಿ ದೇಹದ ರಕ್ತದ ಕಲೆಗಳು ಇರುವುದು ಧೃಡಪಟ್ಟಿದೆ. ಇದರಿಂದ ದರ್ಶನ್ಗೆ ಕಾನೂನಿನ ಸಂಕಷ್ಟ ಹೆಚ್ಚಾಗಿದೆ.
ಚುರುಕು ತನಿಖೆ ನಡೆಸಿದ ಬೆಂಗಳೂರು ಪೊಲೀಸರು..
ರೇಣುಕಾ ಸ್ವಾಮಿ ಮೃತದೇಹ ಪತ್ತೆ ಆದ ನಂತರ ಬೆಂಗಳೂರು ಪೊಲೀಸರು ಬಹಳ ಚುರುಕಾಗಿ ತನಿಖೆ ಆರಂಭಿಸಿದ್ದರು. ಆರೋಪಿಗಳ ಮನೆಯಿಂದ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು. ಎ2 ಆಗಿರುವ ದರ್ಶನ್ ಮನೆಯಲ್ಲಿ ವಶಪಡಿಸಿಕೊಂಡ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಮತ್ತು ಕಪ್ಪು ಬಣ್ಣದ ರೌಂಡ್ ನೆಕ್ ಶರ್ಟ್ ಅನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು.

ಎಫ್ಎಸ್ಎಲ್ ಪರಿಶೀಲನೆ ವೇಳೆ ದರ್ಶನ್ ಅವರ ಬಟ್ಟೆಯ ಮೇಲೆ ರಕ್ತದ ಕಲೆಗಳು ಪತ್ತೆಯಾಗಿದ್ದವು. ಇವುಗಳು ರೇಣುಕಾ ಸ್ವಾಮಿಯ ದೇಹದ ರಕ್ತ ಎಂಬುದು ಇದೀಗ ವರದಿಯಲ್ಲಿ ಖಚಿತವಾಗಿದೆ. ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್ ಭಾಗಿಯಾಗಿದ್ದರು ಎನ್ನುವುದಕ್ಕೆ ಇದು ಅತ್ಯಂತ ಮಹತ್ವಪೂರ್ಣ ಸಾಕ್ಷ್ಯ ಆಗುತ್ತಿದೆ. ಎಫ್ಎಸ್ಎಲ್ ತಂಡದವರು ಜಪ್ತಿ ಮಾಡಿದ್ದ ಇನ್ನೂ ಹಲವು ವಸ್ತುಗಳ ವರದಿ ಬರುವುದು ಬಾಕಿ ಇದೆ. ಆದರೆ ನಟ ದರ್ಶನ್ ಅವರಿಗೆ ಈ ಸಾಕ್ಷಿಗಳು ಜೈಲು ವಾಸವನ್ನು ಇನ್ನಷ್ಟು ವಿಸ್ತರಿಸುವುದರಲ್ಲಿ ಸಂದೇಹವಿಲ್ಲ.
ನ್ಯಾಯಾಂಗ ಬಂಧನದಲ್ಲಿರುವ ಒಟ್ಟು 17 ಮಂದಿ…!
ದರ್ಶನ್ ಸ್ನೇಹಿತೆಯಾದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶಗಳನ್ನು ಕಳಿಸಿದ್ದ ಕಾರಣಕ್ಕೆ ಕೊಲೆ ನಡೆದಿದೆ ಎಂಬ ಆರೋಪ ಇದೆ. ಆ ಕಾರಣದಿಂದಲೇ ಡಿ ಗ್ಯಾಂಗ್ನವರು ಆತನನ್ನು ಬೆಂಗಳೂರಿನಲ್ಲಿ ಥಳಿಸಿ, ಹತ್ಯೆ ಮಾಡಿದರು ಎಂಬ ಆರೋಪವಿದ್ದು, ತನಿಖೆಯಲ್ಲಿ ಅನೇಕ ವಿಚಾರಗಳು ಬಯಲಾಗುತ್ತಿವೆ. ದರ್ಶನ್ ಈ ಕೃತ್ಯ ಮಾಡಿರಲು ಸಾಧ್ಯವಿಲ್ಲ ಎಂಬುದು ಕೆಲವರ ಅಭಿಪ್ರಾಯ.
ಆದರೆ ತನಿಖೆಯ ಪ್ರತಿ ಹಂತದಲ್ಲೂ ದರ್ಶನ್ ವಿರುದ್ಧ ಸಾಕ್ಷಿಗಳು ಸಿಗುತ್ತಿವೆ. ಇದರಿಂದ ನಟನಿಗೆ ಶಿಕ್ಷೆ ಆಗುವ ಸಾಧ್ಯತೆ ಹೆಚ್ಚಾಗಿರುವಂತೆ ಕಂಡುಬರುತ್ತಿದೆ. ದರ್ಶನ್ ಮಾತ್ರವಲ್ಲದೇ ಪವಿತ್ರಾ ಗೌಡ ಸೇರಿ ಒಟ್ಟು 17 ಮಂದಿ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ಮುಂದೆ ತನಿಖೆ ಯಾವ ರೀತಿಯ ಸ್ವರೂಪವನ್ನು ಪಡೆದುಕೊಳ್ಳುತ್ತೆ, ಆರೋಪಿಗಳಿಗೆ ಜೈಲು ಶಿಕ್ಷೆ ಅವಧಿ ವಿಸ್ತರಣೆಯಾಗುತ್ತಾ ನೋಡಬೇಕಿದೆ.
ಬಿಗ್ ನ್ಯೂಸ್
Bail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ವಿಡಿಯೋ ಚಿತ್ರೀಕರಣ ಹಾಗೂ ಅದನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿದಂತೆ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಾದ ಪರಿಸ್ಥಿತಿ ಎದುರಾಗಿದೆ.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ನಡೆಸಲಾಗಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಕುರಿತು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೇಂದ್ರ ಅಪರಾಧ ವಿಭಾಗ (CCB) ಪೊಲೀಸರು ತನಿಖೆ ಕೈಗೊಂಡಿದ್ದರು.
ಪ್ರಕರಣದ ತನಿಖೆಯ ಭಾಗವಾಗಿ ಪವರ್ ಟಿವಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿ, ಕಾಂಗ್ರೆಸ್ನಿಂದ ಉಚ್ಚಾಟಿತರಾಗಿರುವ ಕೃಪಾ ಆಳ್ವಾ, ಪ್ರಜ್ವಲ್ ಪ್ರಸಾದ್, ಚಂದನ್ ಎಚ್.ಎಸ್., ಕೆ.ವಿ. ಪ್ರಶಾಂತ್ ಕುಮಾರ್ ಹಾಗೂ ವಿನೋದ್ ಕುಮಾರ್ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಆರು ಮಂದಿ ಆರೋಪಿಗಳು ಬಂಧನದ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಯುವವರೆಗೆ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಆದರೆ, ನವೆಂಬರ್ 20ರಂದು ವಿಚಾರಣೆ ಪೂರ್ಣಗೊಳಿಸಿದ 66ನೇ ಸಿಸಿಎಚ್ ನ್ಯಾಯಾಲಯ ಆರು ಮಂದಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಈ ಹಿಂದೆ ಮಧ್ಯಂತರ ರಕ್ಷಣೆ ನೀಡುವಾಗ, ಅಂತಿಮವಾಗಿ ನಿರೀಕ್ಷಣಾ ಜಾಮೀನು ದೊರೆಯದಿದ್ದಲ್ಲಿ ತನಿಖಾಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಷರತ್ತು ವಿಧಿಸಿತ್ತು ಎನ್ನಲಾಗಿದೆ.
ಇದೀಗ ಜಾಮೀನು ಅರ್ಜಿಗಳು ವಜಾಗೊಂಡಿರುವುದರಿಂದ ಆರೋಪಿಗಳು ಪೊಲೀಸರಿಗೆ ಶರಣಾಗಬೇಕಿದ್ದು, ಇಲ್ಲವಾದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಎದುರಾಗಿದೆ.
ಬಿಗ್ ನ್ಯೂಸ್
Girish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್ಗೆ ಹೈಕೋರ್ಟ್ನಲ್ಲಿ ಹಿನ್ನಡೆ; ಎಫ್ಐಆರ್ ರದ್ದುಪಡಿಸಲು ನಿರಾಕರಣೆ
ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು: ಧರ್ಮಸ್ಥಳದಲ್ಲಿ ಸಾವಿರಾರು ಶವಗಳನ್ನು ಹೂಳಲಾಗಿದೆ ಎಂದು ಸುಳ್ಳು ಸಾಕ್ಷ್ಯ ಸೃಷ್ಟಿಸಿ, ತಪ್ಪು ಮಾಹಿತಿ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಿಸಲಾಗಿರುವ ಎಫ್ಐಆರ್ ಹಾಗೂ ವಿಶೇಷ ತನಿಖಾ ತಂಡದ (SIT) ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ಗಿರೀಶ್ ಮಟ್ಟಣ್ಣನವರ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಈ ಮೂಲಕ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್, ಎಸ್ಐಟಿ ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ನ್ಯಾಯಾಲಯ ನಿರಾಕರಿಸಿದೆ.
ಏನಿದು ಪ್ರಕರಣ?
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಮುಸುಕುಧಾರಿ ವ್ಯಕ್ತಿಯೊಬ್ಬರು ನೀಡಿದ್ದ ದೂರಿನ ಸತ್ಯಾಸತ್ಯತೆ ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಆದರೆ, ತನಿಖೆಯ ವೇಳೆ ದೂರುದಾರ ಚಿನ್ನಯ್ಯನ ಹೇಳಿಕೆಗಳಲ್ಲಿ ಗೊಂದಲಗಳು ಕಂಡುಬಂದ ಹಿನ್ನೆಲೆಯಲ್ಲಿ, ಸುಳ್ಳು ಸಾಕ್ಷ್ಯ ಸೃಷ್ಟಿ ಮತ್ತು ನಕಲಿ ದಾಖಲೆ ತಯಾರಿಕೆಯ ಸಂಘಟಿತ ಪಿತೂರಿಯ ಆರೋಪದಡಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಜಯಂತ್ ಟಿ., ವಿಠಲ ಗೌಡ ಮತ್ತು ಸುಜಾತಾ ಭಟ್ ಸೇರಿದಂತೆ ಆರು ಜನರ ವಿರುದ್ಧ ಎಸ್ಐಟಿ ತನಿಖೆ ತೀವ್ರಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಟ್ಟಣ್ಣನವರ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ವೇಳೆ, ಗಿರೀಶ್ ಮಟ್ಟಣ್ಣನವರ್ ಪರ ಹಿರಿಯ ವಕೀಲ ಎಸ್. ಬಾಲನ್ ಅವರು, ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯೇ ದೂರು ನೀಡಬೇಕಿತ್ತು; ಆದರೆ ಸರ್ಕಾರಿ ನೌಕರನಲ್ಲದ ಮುಸುಕುಧಾರಿ ಚಿನ್ನಯ್ಯ ದೂರು ನೀಡಿದ್ದಾರೆ ಎಂದು ವಾದಿಸಿ, ಅಸಂಜ್ಞೆಯ ಅಪರಾಧಕ್ಕೆ ಪೊಲೀಸರು ನೇರ ಎಫ್ಐಆರ್ ದಾಖಲಿಸಿರುವುದು ಕಾನೂನುಬಾಹಿರವಾಗಿದ್ದು, ದೂರುದಾರರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗುವಂತೆ ತಿಳಿಸಬೇಕಿತ್ತು ಎಂದರು. ಜೊತೆಗೆ, ವಿಚಾರಣೆಯ ನೆಪದಲ್ಲಿ ಅರ್ಜಿದಾರರಿಗೆ ಬೆಳಗಿನಿಂದ ರಾತ್ರಿಯವರೆಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ, ಎಸ್ಐಟಿ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿದರು.
ಮತ್ತೊಂದೆಡೆ, ಎಸ್ಐಟಿ ಪರವಾಗಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಪೂರ್ವಾನುಮತಿ ಪಡೆದೇ ಕಾನೂನುಬದ್ಧವಾಗಿ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು. ಜೊತೆಗೆ, ತನಿಖೆಯ ಹಂತದಲ್ಲಿ ತಾಂತ್ರಿಕ ನಿರ್ಬಂಧಗಳು ಅನ್ವಯವಾಗುವುದಿಲ್ಲ; ಅವು ಆರೋಪಪಟ್ಟಿ ಸಲ್ಲಿಕೆಯಾದ ನಂತರ ಅನ್ವಯವಾಗುತ್ತವೆ. ಹಿಂದೆ ತನಿಖೆ ಸರಿಯಾಗಿ ನಡೆಯಲಿ ಎಂದು ಕೋರಿದ್ದ ಅರ್ಜಿದಾರರು, ಈಗ ತನಿಖೆ ತಮ್ಮ ಕಡೆ ತಿರುಗುತ್ತಿದ್ದಂತೆ ಎಫ್ಐಆರ್ ರದ್ದತಿಗೆ ಕೋರುತ್ತಿದ್ದಾರೆ ಎಂದು ವಾದಿಸಿದರು.
ಹೈಕೋರ್ಟ್ ಹೇಳಿದ್ದೇನು?
ವಿಚಾರಣೆ ವೇಳೆ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಧೀಶರು, “ಒಂದೆಡೆ ಪ್ರಕರಣದ ಸಮಗ್ರ ತನಿಖೆಯಾಗಬೇಕೆಂದು ನೀವೇ ಒತ್ತಾಯಿಸುತ್ತೀರಿ, ಮತ್ತೊಂದೆಡೆ ತನಿಖೆ ನಡೆಯುತ್ತಿರುವಾಗಲೇ ಎಫ್ಐಆರ್ ರದ್ದುಗೊಳಿಸುವಂತೆ ಕೋರುತ್ತಿದ್ದೀರಿ” ಎಂದು ಪ್ರಶ್ನಿಸಿದರು. ಜೊತೆಗೆ, ಮೂಲ ಎಫ್ಐಆರ್ ಅಪರಿಚಿತ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದು, ತನಿಖೆಯಲ್ಲಿ ದೊರೆತ ಸಾಕ್ಷ್ಯದ ಆಧಾರದ ಮೇಲೆ ಮ್ಯಾಜಿಸ್ಟ್ರೇಟ್ ಅನುಮತಿಯೊಂದಿಗೆ ಅರ್ಜಿದಾರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿರುವಾಗ ಎಫ್ಐಆರ್ ರದ್ದು ಕೋರುವುದು ಅಕಾಲಿಕ ಎಂದು ಪೀಠ ಸ್ಪಷ್ಟಪಡಿಸಿತು. ಇದೆ ವೇಳೆ, ನ್ಯಾಯಾಧೀಶರ ಕರ್ತವ್ಯವು ತಾವರೆ ಎಲೆಯ ಮೇಲಿನ ನೀರಿನಂತಿರಬೇಕು; ನೈತಿಕ ವಿಚಾರಗಳಿಂದ ಪ್ರಭಾವಿತವಾಗದೆ ಕೇವಲ ಕಾನೂನುಬದ್ಧ ದಾಖಲೆಗಳ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ನ್ಯಾಯಮೂರ್ತಿ ಶ್ರೀಶಾನಂದ ಅಭಿಪ್ರಾಯಪಟ್ಟರು.
ಬಿಗ್ ನ್ಯೂಸ್
High Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿರುವ ಕರ್ನಾಟಕ ಹೈಕೋರ್ಟ್, “ಸಾಮಾಜಿಕ ಜಾಲತಾಣದ ಖಾತೆ ಹೊಂದಿರುವ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಮುಕ್ತ ಪರವಾನಗಿ (Free Licence) ಸಿಕ್ಕಿದೆ ಎಂದು ಭಾವಿಸಬಾರದು” ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:
ಏನಿದು ಪ್ರಕರಣ?
ಏಪ್ರಿಲ್ 24, 2025 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ನಿವಾಸಿ ತನುಷ್ ಎಂ. ಶೆಟ್ಟಿ (24 ವರ್ಷ) ಎಂಬುವವರು ನೀಡಿದ ದೂರುಗಳ ಆಧಾರದ ಮೇಲೆ ಶುಭಾ ರೈ ಮತ್ತು ಮೋಹನ್ ಬೋಳಂಗಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದರು. ಅದರಲ್ಲಿ, ದೂರುದಾರರು ಆಸ್ಪತ್ರೆಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಬಳಸಿಕೊಂಡು ಅಸಭ್ಯ ಮತ್ತು ಬೆದರಿಕೆಯ ಸಂದೇಶಗಳನ್ನು ಹಾಕಲಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಮಾರ್ಫ್ ಮಾಡಿದ (ತಿರುಚಿದ) ಫೋಟೋಗಳನ್ನು ಹಂಚಿಕೊಂಡು, ದೂರುದಾರರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರು ಎಂದು ಸುಳ್ಳು ಪ್ರಚಾರ ಮಾಡಿ ಕೋಮು ದ್ವೇಷ ಹರಡಲು ಯತ್ನಿಸಲಾಗಿದೆ; ಜೊತೆಗೆ ದೂರುದಾರರು ಅತ್ಯಾಚಾರ, ಬಲವಂತದ ಗರ್ಭಪಾತ, ಪೋಕ್ಸೋ ಅಪರಾಧ, ಹಿಂದೂ ದೇವಾಲಯಗಳಿಗೆ ಅವಮಾನ ಮತ್ತು ಸೌಜನ್ಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸುಳ್ಳು ಹಾಗೂ ಮಾನಹಾನಿಕರ ಪೋಸ್ಟ್ಗಳನ್ನು ಹರಿಬಿಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬೆನ್ನಲ್ಲೇ, ಆರೋಪಿಗಳು ತಮ್ಮ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಮತ್ತು 62ರ ಅಡಿಯಲ್ಲಿ ದಾಖಲಾಗಿರುವ ಎರಡು ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್ ಮೇಟ್ಟಿಲೇರಿದ್ದರು.
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪೂರ್ವಾನುಮತಿ ಕಡ್ಡಾಯ:
ಕರ್ನಾಟಕ ಹೈಕೋರ್ಟ್ ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು, “ಮೇಲ್ನೋಟಕ್ಕೆ ದೂರುದಾರರ ಆರೋಪಗಳು ಸುಳ್ಳಲ್ಲ ಎಂಬುದು ಕಂಡುಬರುತ್ತಿದೆ. ಈ ಹಿಂದೆ ನ್ಯಾಯಾಲಯ ನೀಡಿದ್ದ ಮಧ್ಯಂತರ ತಡೆಯಾಜ್ಞೆಯಿಂದಾಗಿ ಪೊಲೀಸ್ ತನಿಖೆ ಸ್ಥಗಿತಗೊಂಡಿತ್ತು. ಆರೋಪಗಳು ಗಂಭೀರವಾಗಿದ್ದು, ಅವುಗಳ ಸತ್ಯಾಸತ್ಯತೆ ತಿಳಿಯಲು ತನಿಖೆಯ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟು ಅರ್ಜಿಗಳನ್ನು ವಜಾಗೊಳಿಸಿದ್ದಾರೆ. ಜೊತೆಗೆ, “ಸಾಮಾಜಿಕ ಜಾಲತಾಣದಲ್ಲಿ ಖಾತೆ ಇದೆ ಎಂಬ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡಲು ಅದೊಂದು ಮುಕ್ತ ಪರವಾನಗಿ (Free Licence) ಅಲ್ಲ. ವಾಕ್ ಸ್ವಾತಂತ್ರ್ಯಕ್ಕೆ ಸಂವಿಧಾನದ ಮಿತಿಗಳಿವೆ” ಎಂದು ಸ್ಪಷ್ಟಪಡಿಸಿದರು.
-
ದಕ್ಷಿಣ ಕನ್ನಡ20 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಮಂಗಳೂರು21 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















