ನಿಧನ ವಾರ್ತೆ
Wayanad-ಹನಿಮೂನಿಗಾಗಿ ವಯನಾಡಿಗೆ ಬಂದ ಎರಡು ಯುವ ಜೋಡಿಗಳ ಪೈಕಿ ಪತ್ನಿಯರು ಈಗ ಏಕಾಂಗಿ
ವಯನಾಡಿನಲ್ಲಿ ಸಂಭವಿಸಿದ ಘೋರ ಭೂ ಕುಸಿತದಲ್ಲಿ ಹಲವು ಕುಟುಂಬಗಳು ಸಂಪೂರ್ಣವಾಗಿ ನಶಿಸಿ ಹೋದರೆ, ಇನ್ನು ಹಲವರು ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದಾರೆ. ಸ್ಥಳೀಯ ನಿವಾಸಿಗಳ ಜತೆ ಪ್ರವಾಸಕ್ಕೆ ಬಂದ ಹಲವರು ಕೂಡ ಜೀವ ಕಳಕೊಂಡಿದ್ದಾರೆ. ಒಡಿಶಾ ಮೂಲದ ಎರಡು ಪತಿ –ಪತ್ನಿ ಜೋಡಿ ಹನಿಮೂನ್ಗೆಂದು ವಯನಾಡಿಗೆ ಬಂದಿದ್ದರು . ಈ ದುರಂತದಲ್ಲಿ ಇಬ್ಬರೂ ಮಹಿಳೆಯರು ತಮ್ಮ ಪತಿಯನ್ನು ಕಳೆದುಕೊಂಡಿದ್ದಾರೆ.
ಪ್ರಿಯದರ್ಶಿನಿ ಮತ್ತು ಆಕೆಯ ಸ್ನೇಹಿತೆ ಸ್ವೀಕೃತಿ ಜತೆಯಾಗಿ ಹನಿಮೂನ್ ಪ್ರವಾಸಕ್ಕಾಗಿ ವಯನಾಡಿಗೆ ಬಂದವರು. ಪ್ರಿಯದರ್ಶಿನಿ- ಭುವನೇಶ್ವರ ಏಮ್ಸ್ನ ಡಾ.ಬಿಷ್ಣು ಪ್ರಸಾದ್ ಚಿನ್ನಾರ ಹಾಗೂ ಡಾ. ಸ್ವಾಧ್ವೀನ್ ಪಾಂಡಾ- ಡಾ. ಸ್ವೀಕೃತಿ ಮಹಾಪಾತ್ರ ದಂಪತಿ ಜತೆಯಾಗಿ ವಯನಾಡ್ಗೆ ಬಂದಿದ್ದರು. ಕೇರಳದ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ್ದ ಅವರು ದುರಂತ ಸಂಭವಿಸಿದ ಒಂದು ದಿನದ ಹಿಂದೆಯಷ್ಟೇ ಚೂರಲ್ಮಲಾಕ್ಕೆ ಆಗಮಿಸಿದ್ದರು.
ಕಳೆದ ವಾರ ಕೇರಳದ ಪ್ರಸಿದ್ದ ಪ್ರವಾಸಿ ತಾಣ ವಯನಾಡಿನಲ್ಲಿ ಸಂಭವಿಸಿದ ಘೋರ ಭೂ ಕುಸಿತದಲ್ಲಿ ಹಲವು ಕುಟುಂಬಗಳು ಸಂಪೂರ್ಣವಾಗಿ ನಶಿಸಿ ಹೋದರೆ, ಇನ್ನು ಹಲವರು ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದಾರೆ. ಈ ದುರಂತದಲ್ಲಿ ಸ್ಥಳೀಯ ನಿವಾಸಿಗಳ ಜತೆ ಪ್ರವಾಸಕ್ಕೆ ಬಂದ ಹಲವರು ಕೂಡ ಜೀವ ಕಳಕೊಂಡಿದ್ದಾರೆ. ಒಡಿಶಾ ಮೂಲದ ಎರಡು ಪತಿ –ಪತ್ನಿ ಜೋಡಿ ಹನಿಮೂನ್ಗೆಂದು ವಯನಾಡಿಗೆ ಬಂದಿದ್ದರು . ಆದರೇ ವಿಧಿಯಾಟ ಬೇರೆಯದೇ ಆಗಿತ್ತು . ಈ ದುರಂತದಲ್ಲಿ ಇಬ್ಬರೂ ಮಹಿಳೆಯರು ತಮ್ಮ ಪತಿಯನ್ನು ಕಳೆದುಕೊಂಡಿದ್ದಾರೆ.

ಪ್ರಿಯದರ್ಶಿನಿ ಮತ್ತು ಆಕೆಯ ಸ್ನೇಹಿತೆ ಸ್ವೀಕೃತಿ ಜತೆಯಾಗಿ ಹನಿಮೂನ್ ಪ್ರವಾಸಕ್ಕಾಗಿ ವಯನಾಡಿಗೆ ಬಂದವರು. ಪ್ರಿಯದರ್ಶಿನಿ- ಭುವನೇಶ್ವರ ಏಮ್ಸ್ನ ಡಾ.ಬಿಷ್ಣು ಪ್ರಸಾದ್ ಚಿನ್ನಾರ ಹಾಗೂ ಡಾ. ಸ್ವಾಧ್ವೀನ್ ಪಾಂಡಾ- ಡಾ. ಸ್ವೀಕೃತಿ ಮಹಾಪಾತ್ರ ದಂಪತಿ ಜತೆಯಾಗಿ ವಯನಾಡ್ಗೆ ಬಂದಿದ್ದರು. ಕೇರಳದ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ್ದ ಅವರು ದುರಂತ ಸಂಭವಿಸಿದ ಒಂದು ದಿನದ ಹಿಂದೆಯಷ್ಟೇ ಚೂರಲ್ಮಲಾಕ್ಕೆ ಆಗಮಿಸಿದ್ದರು.
ಭೂಕುಸಿತದಲ್ಲಿ ದಂಪತಿಗಳು ತಂಗಿದ್ದ ರೆಸಾರ್ಟ್ ಕೊಚ್ಚಿ ಹೋಗಿದೆ. ಗಾಢ ನಿದ್ದೆಯಲ್ಲಿದ್ದ ಪ್ರಿಯದರ್ಶಿನಿ ಮತ್ತು ಸ್ವೀಕೃತಿ ಭಾರೀ ಸದ್ದು ಕೇಳಿ ಕಣ್ಣು ತೆರೆದಾಗ ದುರಂತ ಘಟಿಸಿ ಹೋಗಿತ್ತು. ನೀರಿನಲ್ಲಿ ಕೊಚ್ಚಿ ಹೋಗಿದ್ದ ಅವರು ರೆಸಾರ್ಟ್ ಇದ್ದ ಜಾಗದಿಂದ 200 ಮೀಟರ್ ದೂರದಲ್ಲಿ ಶಾಲೆಯ ಆವರಣದಲ್ಲಿ ಕೆಸರಿನಲ್ಲಿ ಬಿದ್ದಿದ್ದರು. ಅವರ ಕುತ್ತಿಗೆಯವರೆಗೆ ಕೆಸರು ತುಂಬಿತ್ತು.
ರಕ್ಷಿಸುವಂತೆ ಕಿರುಚಾಡುತ್ತಿದ್ದ ಅವರನ್ನ ರಕ್ಷಣಾ ಸಿಬ್ಬಂದಿ ಬಂದು ರಕ್ಷಿಸಿ ಆಸ್ಫತ್ರೆಗೆ ದಾಖಲಿಸಿದ್ದರು . ಅವರಿಬ್ಬರೂ ಬದುಕಿ ಉಳಿದರಾದರೂ, ಅವರ ಪತಿಯರಿಗೆ ಆ ಭಾಗ್ಯ ಇರಲಿಲ್ಲ. ಪ್ರಿಯದರ್ಶಿನಿ ಅವರ ಪತಿ ಡಾ. ಬಿಷ್ಣು ಪ್ರಸಾದ್ ಮೃತದೇಹ ಚೂರಲ್ಮಲಾದಲ್ಲಿ ಪತ್ತೆಯಾಗಿತ್ತು. ದುರಂತದ ಸುದ್ದಿ ತಿಳಿದ ಪ್ರಿಯದರ್ಶಿನಿಯ ಮನೆಯವರು ವಯನಾಡಿಗೆ ಧಾವಿಸಿ ಬಂಧಿದ್ದರು . ಅಲ್ಲಿ ಆಸ್ಫತ್ರೆಯಲ್ಲಿ ಒಬ್ಬಂಟಿಯಾಗಿದ್ದ ಆಕೆಗೆ ದೈರ್ಯ ತುಂಬಿದ್ದಾರೆ. ಬಳಿಕ ಬಿಷ್ಣು ಪ್ರಸಾದ್ ಅವರ ಮೃತದೇಹವನ್ನು ಹುಟ್ಟೂರಿಗೆ ಕೊಂಡೊಯ್ದಿದ್ದಾರೆ
ಆದರೆ ಅವರೊಂದಿಗಿದ್ದ ಡಾ.ಸ್ವಾಧ್ವೀನ್ ಪಾಂಡಾ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಅವರ ಪತ್ನಿ ಡಾ. ಸ್ವೀಕೃತಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ತಮ್ಮ ಜೀವನದ ಅತ್ಯಂತ ರಸಮಯ ಕ್ಷಣಗಳನ್ನು ಅನುಭವಿಸಲು ಬಂದಿದ್ದರು . ಆದರೇ ವಿಧಿಯಾಟ ಬೇರೆಯೇ ಇತ್ತು . ಜೀವನದ ಅತ್ಯಂತ ಯಾತನದಾಯಕ ಕ್ಷಣಗಳೊಂದಿಗೆ ಅವರು ಹಿಂದಿರುಗಿದ್ದಾರೆ.
ಇನ್ನೂ ದುರಂತ ಸಂಭವಿಸಿದ ಮೇಪ್ಪಾಡ್ನ ಮುಂಡಕೈ ಮತ್ತು ಚೂರಲ್ಮಲಾದಲ್ಲಿ ನಾಪತ್ತೆಯಾದವರ ಹುಡುಕಾಟ ಮುಂದುವರಿದಿದೆ . ಕಡಿದಾದ ಪ್ರದೇಶವಾದ ಸನ್ರೈಸ್ ವ್ಯಾಲಿಯಲ್ಲಿ ಹೆಲಿಕಾಪ್ಟರ್ ಮೂಲಕ ಕಾರ್ಯಾಚರಣೆ ನಡೆಯುತ್ತಿದೆ
ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 400ರ ಗಡಿ ದಾಟಿದೆ. ಇನ್ನೂ 150ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಮೃತಪಟ್ಟ ಎಲ್ಲಅಪರಿಚಿತರ ಮೃತದೇಹಗಳ ಅಂಗಾಂಗಳನ್ನು ಸರ್ವಧರ್ಮ ಪ್ರಾರ್ಥನೆಯೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗಿದೆ.
ನಿಧನ ವಾರ್ತೆ
Kadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಕಡಬ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ.
ಹೆದ್ದಾರಿಯಲ್ಲಿ ಕಾರೊಂದು ಸಂಚರಿಸುತ್ತಿದ್ದ ವೇಳೆ ಏಕಾಏಕಿ ಅಡ್ಡ ಬಂದ ಕಡವೆಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಈ ಭಾಗದಲ್ಲಿ ಕಾಡುಪ್ರಾಣಿಗಳ ಸಂಚಾರ ಸಾಮಾನ್ಯವಾಗಿರುವ ಹಿನ್ನೆಲೆಯಲ್ಲಿ ಘಟನೆ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ರಾತ್ರಿ ಹಾಗೂ ಮುಂಜಾನೆ ವೇಳೆ ಕಾಡುಪ್ರಾಣಿಗಳು ಹೆದ್ದಾರಿಗೆ ಬರುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಅಗತ್ಯವಿದೆ.
ಈ ಹಿಂದೆಯೂ ಇದೇ ಪರಿಸರದಲ್ಲಿ ಕಾಡುಪ್ರಾಣಿಗಳಿಂದ ವಾಹನ ಸವಾರರಿಗೆ ಅಪಾಯ ಉಂಟಾದ ಘಟನೆಗಳು ನಡೆದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಾಡುಪ್ರಾಣಿಗಳ ಸಂಚಾರವಿರುವ ಪ್ರದೇಶಗಳಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದರ ಜತೆಗೆ, ರಸ್ತೆ ಬದಿಯ ಪೊದೆಗಳನ್ನು ತೆರವುಗೊಳಿಸಿ ವಾಹನ ಸವಾರರಿಗೆ ದೂರದಿಂದಲೇ ಪ್ರಾಣಿಗಳು ಕಾಣುವಂತೆ ಮಾಡುವ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾಡುಪ್ರಾಣಿಗಳು ಹೆದ್ದಾರಿಗೆ ಬರುವುದರಿಂದ ಉಂಟಾಗುವ ಅಪಘಾತಗಳನ್ನು ತಡೆಯಲು ಕ್ರಮ ವಹಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.
ನಿಧನ ವಾರ್ತೆ
Kasaragod-ಕಾಸರಗೋಡು: ಬೈಕ್-ಕಾರು ಮುಖಾಮುಖಿ ಡಿಕ್ಕಿ; ಸವಾರ ಸಾವು, ಪತ್ನಿ ಗಂಭೀರ
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ.
ಕಾಸರಗೋಡು: ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರ ಪತ್ನಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಮುಹಮ್ಮದ್ ಅಶ್ರಫ್ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಮುಖಾಮುಖಿಯಾಗಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಅಶ್ರಫ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನಿಧನ ವಾರ್ತೆ
Mangalore-ಮಂಗಳೂರು: ನ್ಯಾಯಾಧೀಶರ ಕಾರು, ಗೂಡ್ಸ್ ಆಟೋ, ಬೈಕ್ ನಡುವೆ ಸರಣಿ ಅಪಘಾತ; ಗೂಡ್ಸ್ ಆಟೋ ಚಾಲಕ ಮೃತ್ಯು
ಮಂಗಳೂರು ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ಮಂಗಳೂರು: ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ.
ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿನಯ್ ಡಿ. ಅವರು ಕಾರಿನಲ್ಲಿ (ಕೆಎ-05-ಎನ್‌ಕೆ-2504) ಬೆಳಗ್ಗೆ ನ್ಯಾಯಾಲಯದತ್ತ ತೆರಳುತ್ತಿದ್ದರು. ಕರಂಗಲ್ಪಾಡಿಯ ರಾಧಾ ಮೆಡಿಕಲ್ಸ್ ಎದುರಿನ ತಿರುವಿನಲ್ಲಿ ಸಾಗುತ್ತಿದ್ದಾಗ, ಗೂಡ್ಸ್ ಆಟೋ ರಿಕ್ಷಾ (ಕೆಎ-19-ಎಡಿ-4395) ನಿಯಂತ್ರಣ ತಪ್ಪಿ ನ್ಯಾಯಾಧೀಶರ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಬಳಿಕ ಗೂಡ್ಸ್ ಆಟೋ ರಿಕ್ಷಾ ಅದೇ ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ (ಕೆಎ-19-ಎಚ್‌ವೈ-1664)ಕ್ಕೂ ಢಿಕ್ಕಿ ಹೊಡೆದು ಮಗುಚಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಚಂದ್ರ ಕೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಗೂಡ್ಸ್ ಆಟೋ ರಿಕ್ಷಾ ಢಿಕ್ಕಿಯಿಂದ ದ್ವಿಚಕ್ರ ವಾಹನ ಸವಾರ ಪ್ಲೆವಿಯನ್ ಮೆರ್ವಿನ್ ಅವರಿಗೂ ಗಾಯಗಳಾಗಿವೆ. ಅಪಘಾತದಲ್ಲಿ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನ ಜಖಂಗೊಂಡಿವೆ.
ಅಪಘಾತದಲ್ಲಿ ನ್ಯಾಯಾಧೀಶ ವಿನಯ್ ಡಿ. ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ನ್ಯಾಯಾಧೀಶ ವಿನಯ್ ಡಿ. ಅವರು ನೀಡಿದ ದೂರಿನ ಆಧಾರದ ಮೇಲೆ ಕದ್ರಿ ಟ್ರಾಫಿಕ್ ಈಸ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
-
ನಿಧನ ವಾರ್ತೆ24 hours agoKadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
-
ಪುತ್ತೂರು15 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್19 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು18 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
Uncategorized24 hours agoಅ.6: ಮಂಗಳೂರಿನ ಪುರಭವನದಲ್ಲಿ ‘ಲವ್ ಜಿಹಾದ್ ಮತ್ತು ಮತಾಂತರ: ಪ್ರಚಾರ ಮತ್ತು ವಾಸ್ತವ’ ಪುಸ್ತಕ ಬಿಡುಗಡೆ
-
ಅಂತರ ರಾಜ್ಯ22 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್17 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ರಾಜ್ಯ21 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!


















