ಬಿಗ್ ನ್ಯೂಸ್
Google’s new update-ಮಹಿಳೆಯರು ಈ ಮಾಹಿತಿ ತಿಳಿದುಕೊಳ್ಳೇ ಬೇಕು…! ಗೂಗಲ್ ನಲ್ಲಿ ನಿಮ್ ಫೋಟೋ ಮಿಸ್ ಯೂಸ್ ಆಗದ ಹಾಗೆ ಏನ್ ಮಾಡ್ಬೋದು ಗೊತ್ತಾ..?
ನಿಮ್ಮ ಫೋಟೋ, ವೈಯಕ್ತಿಕ ಮಾಹಿತಿ ದುರ್ಬಳಕೆಯಾಗುತ್ತಿದ್ದರೆ ಅದನ್ನು ತಡೆಯುವ ನಿಟ್ಟಿನಲ್ಲಿ, ಮಹಿಳೆಯರ ಸುರಕ್ಷತೆಗೆ ಅನುಗುಣವಾಗಿ ಗೂಗಲ್ ಹೊಸ ಅಪ್ಡೇಟ್ ಒಂದನ್ನು ಬಳಕೆದಾರರಿಗೆ ಪರಿಚಯಿಸಿದೆ. ಗೂಗಲ್ ಹೊಸ ಅಪ್ಡೇಟ್ ನಮ್ಮ ವೈಯಕ್ತಿಕ ಮಾಹಿತಿ ಅಥವಾ ಫೋಟೋಗಳನ್ನು ಸರ್ಜ್ ಇಂಜಿನ್ನಿಂದ ತೆಗೆದು ಹಾಕುತ್ತದೆ.
ನಿಖರ ನ್ಯೂಸ್:- ಆಧುನಿಕತೆ ಹೆಚ್ಚಾದಂತೆ ಮನುಷ್ಯ ಹಣ ಸಂಪಾದನೆಗೆ ಅಡ್ಡ ದಾರಿ ಹಿಡಿಯುವ ಪ್ರಮೇಯವೂ ಹೆಚ್ಚಾಗುತ್ತಿದೆ. ನಿಮಗೆಲ್ಲಾ ತಿಳಿದಿರುವಂತೆ ಈಗ ನಡೆಯುವ ಸೈಬರ್ ಕ್ರೈಂ ಪ್ರಕರಣಗಳಿಗೆ ಲೆಕ್ಕವಿಲ್ಲದಂತಾಗಿದೆ. ಮಹಿಳೆಯರ ಫೋಟೋಗಳನ್ನು ಅಸಭ್ಯವಾಗಿ ಎಡಿಟ್ ಮಾಡಿ ಹಣ ಕಬಳಿಸುವ ಖದೀಮರ ಕುಕೃತ್ಯಕ್ಕೆ ಬ್ರೇಕ್ ಹಾಕುವಲ್ಲಿ ಕೆಲವೊಮ್ಮೆ ಸೈಬರ್ ಕ್ರೈಂ ಪೊಲೀಸರು ಕೂಡಾ ಸೋಲುತ್ತಾರೆ. ಮೊಬೈಲ್ ಟೆಕ್ನಾಲಜಿ ಮುಂದುವರೆದಂತೆ ಮನುಷ್ಯನಿಗೆ ಎಷ್ಟು ಅನುಕೂಲ ಆಗುತ್ತೋ ಅಷ್ಟೇ ಅನಾನುಕೂಲತೆಯೂ ಇರುತ್ತದೆ. ಇದೀಗ ಗೂಗಲ್ ನಲ್ಲಿ ನಿಮ್ಮ ಫೋಟೋ, ವೈಯಕ್ತಿಕ ಮಾಹಿತಿ ದುರ್ಬಳಕೆಯಾಗುತ್ತಿದ್ದರೆ ಅದನ್ನು ತಡೆಯುವ ನಿಟ್ಟಿನಲ್ಲಿ, ಮಹಿಳೆಯರ ಸುರಕ್ಷತೆಗೆ ಅನುಗುಣವಾಗಿ ಗೂಗಲ್ ಹೊಸ ಅಪ್ಡೇಟ್ ಒಂದನ್ನು ಬಳಕೆದಾರರಿಗೆ ಪರಿಚಯಿಸಿದೆ.
ಗೂಗಲ್ ನ ಹೊಸ ಅಪ್ಡೇಟ್ ಏನು…?
ಗೂಗಲ್ ಪರಿಚಯಿಸಿದ ಹೊಸ ಅಪ್ಡೇಟ್ ನಿಂದಾಗಿ ಮಹಿಳೆಯರು ನಿಟ್ಟುಸಿರು ಬಿಡುವಂತಾಗಿದೆ. ಇದು ನಮ್ಮ ವೈಯಕ್ತಿಕ ಮಾಹಿತಿ ಅಥವಾ ಫೋಟೋಗಳನ್ನು ಸರ್ಜ್ ಇಂಜಿನ್ನಿಂದ ತೆಗೆದು ಹಾಕುತ್ತದೆ. ಗೂಗಲ್ನಲ್ಲಿ ನಾವು ಅನೇಕ ವಿಚಾರಗಳನ್ನು ಹುಡುಕಬಹುದು. ಇದನ್ನು ಕೆಲವು ಗೂಗಲ್ ಕಳ್ಳರು ದುರ್ಬಳಕೆ ಮಾಡಬಹುದು. ಅದಕ್ಕಾಗಿ ಗೂಗಲ್ ಹೊಸ ಅಪ್ಡೇಟ್ ನೀಡಿದೆ. ನಮ್ಮ ವೈಯಕ್ತಿಕ ಫೋಟೋಗಳನ್ನು ಬಳಸಿಕೊಂಡು ತಮ್ಮ ವೆಬ್ ಸೈಟ್ಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಇದನ್ನು ತಡೆಯಲು ಗೂಗಲ್ ಹೊಸ ಕ್ರಮವನ್ನು ತಂದಿದೆ. ಗೂಗಲ್ ನಿಮ್ಮ ವೈಯಕ್ತಿಕ ಫೋಟೋಗಳನ್ನು ಹಾಗೂ ವೈಯಕ್ತಿಕ ಮಾಹಿತಿಗಳನ್ನು ಇತರರಿಗೆ ಉಪಯೋಗವಾಗದಂತೆ ಅಥವಾ ಅವರು ದುರುಪಯೋಗಪಡಿಸಿಕೊಳ್ಳದಂತೆ ನೋಡಿಕೊಳ್ಳುತ್ತದೆ.

ಫೋಟೋ, ಮಾಹಿತಿ ದುರ್ಬಳಕೆ ಆದರೆ ತಡೆಯುವುದು ಹೇಗೆ..?
ಇದಕ್ಕೆ ಅದರದ್ದೇ ಆದ ಕೆಲವು ಹಂತಗಳಿವೆ. ಆ ಹಂತಗಳಿಗನುಸಾರವಾಗಿ ನಾವು ಸೆಟ್ ಮಾಡುತ್ತಾ ಹೋದಲ್ಲಿ ಫೋಟೋ ಮಿಸ್ ಯೂಸ್ ಆಗುವುದಕ್ಕೆ ಬ್ರೇಕ್ ಹಾಕಬಹುದು.
- ಹಂತ 1: https://support.google.com/websearch/contact/content_removal_form?sjid=1 ಗೆ ಹೋಗಿ
- ಹಂತ 2: ಈ ಪುಟದಲ್ಲಿ, ‘Google ಹುಡುಕಾಟದಿಂದ ವೈಯಕ್ತಿಕ ವಿಷಯವನ್ನು ತೆಗೆದುಹಾಕಲು ನೀವು ಏಕೆ ವಿನಂತಿಸುತ್ತಿರುವಿರಿ? ಎಂಬ ಕಾರಣ ನೀಡಿ. ಅಲ್ಲಿ ನಿಮ್ಮ ವಿಳಾಸ ಹಾಕಿ
- ಹಂತ 3: ‘ಮುಂದೆ’ ಕ್ಲಿಕ್ ಮಾಡಿ.
- ಹಂತ 4: ನೀವು ವೈಯಕ್ತಿಕ ಮಾಹಿತಿಯನ್ನು ತೆಗೆದುಹಾಕುವುದನ್ನು ಆಯ್ಕೆ ಮಾಡಿದ ನಂತರ ಮುಂದಿನ ಪುಟದಲ್ಲಿ ‘Google ಹುಡುಕಾಟ ಫಲಿತಾಂಶಗಳಿಂದ ನೀವು ತೆಗೆದುಹಾಕಲು ಬಯಸುವ ವೈಯಕ್ತಿಕ ಮಾಹಿತಿಯನ್ನು ಆಯ್ಕೆಮಾಡಿ
- ಹಂತ 5: ಹುಡುಕಾಟ ಪದ, ಪುಟ URL, Google ಹುಡುಕಾಟ ಫಲಿತಾಂಶ URL ಮತ್ತು ಇತರ ಸಂಬಂಧಿತ ಮಾಹಿತಿಯಂತಹ ಅಗತ್ಯವಿರುವ ಎಲ್ಲಾ ಡೇಟಾವನ್ನು ನಮೂದಿಸಿ.
- ಹಂತ 6: ಮುಂದಿನ ಪುಟದಲ್ಲಿ, ವೈಯಕ್ತಿಕ ವಿವರಗಳಿಗಾಗಿ ನಮೂದಿ ಇಲ್ಲಿ ಕ್ಲಿಕ್ ಮಾಡಿ.
ಈ ಕ್ರಮವನ್ನು ಪಾಲಿಸಿದ ನಂತರ ನಿಮ್ಮ ಫೋಟೋ, ಮತ್ತು ವೈಯಕ್ತಿಕ ಮಾಹಿತಿಗಳನ್ನು ತೆಗೆದು ಹಾಕಬಹುದು.
ಈ ಮೂಲಕ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಗೂಗಲ್..!
ಇದು ನಿಮ್ಮ ವೈಯಕ್ತಿಕ ಫೋಟೋ, ನಿಮ್ಮ ಫೋಟೋಗಳನ್ನು ಅಶ್ಲೀಲ ಫೋಟೋಗಳ ಜತೆಗೆ ಎಡಿಟ್ ಮಾಡುವುದು, ಲೈಂಗಿಕ ಸೈಟ್ಗಳಿಗೆ ನಿಮ್ಮ ಫೋಟೋಗಳನ್ನು ಬಳಸಿದ್ದರೆ ಅದನ್ನು ತೆಗೆದು ಹಾಕಲು ಅವಕಾಶ ನೀಡಿದೆ. ಇದು ಅದೆಷ್ಟೋ ಮಹಿಳೆಯರಿಗೆ ಅತ್ಯಂತ ಪ್ರಯೋಜನಕಾರಿ ಸಂಗತಿಯಾಗಿದೆ. ಏಕೆಂದರೆ ಇಂತಹ ಸೈಬರ್ ಕ್ರೈಂ ಪ್ರಕರಣಗಳಲ್ಲಿ ಏನೂ ತಪ್ಪು ಮಾಡದೆ ಸಮಸ್ಯೆ ಎದುರಿಸುತ್ತಿದ್ದರೂ ಕೆಲವೊಮ್ಮೆ ಮರ್ಯಾದೆಗೆ ಹೆದರಿ ಅದೆಷ್ಟೋ ಹೆಣ್ಣು ಮಕ್ಕಳು ಅಥವಾ ಮಹಿಳೆಯರು ಸಂಗತಿಯನ್ನು, ತಾವು ಎದುರಿಸುತ್ತಿರುವ ಸಮಸ್ಯೆಯನ್ನು ಮುಕ್ತವಾಗಿ ಇತರರಲ್ಲಿ ಹಂಚಿಕೊಳ್ಳಲು ಹೆದರುತ್ತಾರೆ. ಹಾಗಿರುವಾಗ ಗೂಗಲ್ ನ ಈ ಹೊಸ ಹೆಜ್ಜೆ ಮಹಿಳೆಯರ ಇಂತಹ ಸಂಕಷ್ಟಕ್ಕೆ ಬ್ರೇಕ್ ಹಾಕುವುದರಲ್ಲಿ ಸಂದೇಹವಿಲ್ಲ.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
ಬಿಗ್ ನ್ಯೂಸ್
ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ
ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.
ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.
ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.
-
ಬಿಗ್ ನ್ಯೂಸ್22 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
Uncategorized23 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ರಾಜಕೀಯ22 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
Uncategorized23 hours ago
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ
-
ಅಂತರ ರಾಜ್ಯ9 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಮಂಗಳೂರು11 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಸ್ಥಳೀಯ9 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ರಾಜಕೀಯ11 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ


















