ಆರೋಗ್ಯ
IVF-ಮಕ್ಕಳಿಲ್ಲದ ದಂಪತಿಗಳ ಪಾಲಿಗೆ ವರದಾನವಾಗುತ್ತಿರುವ ಐವಿಎಫ್ – ಮಾಡಿಸುವ ಮೊದಲು ಗೊತ್ತಿರಲೇ ಬೇಕಾದ ಸಂಗತಿಗಳು ಹಾಗೂ ತಗಲುವ ವೆಚ್ಚದ ವಿವರ ಇಲ್ಲಿದೆ
ಈಗಿನ ಆಹಾರ ಕ್ರಮ, ಜೀವನ ಶೈಲಿ, ಒತ್ತಡದ ಬದುಕು ದಂಪತಿಗಳ ಬಾಳಲ್ಲಿ ಮಕ್ಕಳಾಗುವುದಕ್ಕೆ ಸಮಸ್ಯೆಯಾಗುತ್ತಿದೆ. ದೊಡ್ಡ ಸಂಖ್ಯೆಯಲ್ಲಿ ಸ್ತೀಯರನ್ನು ಬಂಜೆತನ ಕಾಡುತ್ತದೆ. ಇಂತಹ ದಂಪತಿಗಳಿಗೆ ಇನ್ ವಿಟ್ರೋ ಫರ್ಟಿಲೈಸೇಶನ್ ವರದಾನವಾಗಿ ಬಂದಿದೆ. ಐವಿಎಫ್ ಅಥವಾ ಇನ್ ವಿಟ್ರೊ ಫರ್ಟಿಲೈಸೇಶನ್ ಮಕ್ಕಳಾಗದ ದಂಪತಿಗಳಿಗೆ ಮಗುವನ್ನು ಪಡೆಯಲು ಸಹಾಯ ಮಾಡುವ ವೈದ್ಯಕೀಯ ವಿಧಾನ.
ತಾಯ್ತನ ಎಂಬುದು ಹೆಣ್ಣಿನ ಬಾಳಿನ ಮಧುರ ಘಟ್ಟ. ಮಗುವಿನ ಆಗಮನವಾಗುತ್ತದೆ ಎನ್ನುವಾಗ, ದಂಪತಿಗಳ ಸಂತೋಷಕ್ಕೆ ಪಾರವೇ ಇರುವುದಿಲ್ಲ ಅದು ಅವರ ಬದುಕಿನ ಅತ್ಯಂತ ಸಂಭ್ರಮದ ಕ್ಷಣ , ಖುಷಿ, ಸಡಗರದ ಸಮಯ . ಆದರೇ ಇಂತಹ ಅವಕಾಶಗಳು ಎಲ್ಲ ದಂಪತಿಗಳಿಗೂ ಸಿಗುವುದಿಲ್ಲ .
ಈಗಿನ ಆಹಾರ ಕ್ರಮ, ಜೀವನ ಶೈಲಿ, ಒತ್ತಡದ ಬದುಕು ದಂಪತಿಗಳ ಬಾಳಲ್ಲಿ ಮಕ್ಕಳಾಗುವುದಕ್ಕೆ ಸಮಸ್ಯೆಯಾಗುತ್ತಿದೆ. ದೊಡ್ಡ ಸಂಖ್ಯೆಯಲ್ಲಿ ಸ್ತೀಯರನ್ನು ಬಂಜೆತನ ಕಾಡುತ್ತದೆ
ಇಂತಹ ದಂಪತಿಗಳಿಗೆ ಇನ್ ವಿಟ್ರೋ ಫರ್ಟಿಲೈಸೇಶನ್ ವರದಾನವಾಗಿ ಬಂದಿದೆ. ಐವಿಎಫ್ ಅಥವಾ ಇನ್ ವಿಟ್ರೊ ಫರ್ಟಿಲೈಸೇಶನ್ ಮಕ್ಕಳಾಗದ ದಂಪತಿಗಳಿಗೆ ಮಗುವನ್ನು ಪಡೆಯಲು ಸಹಾಯ ಮಾಡುವ ವೈದ್ಯಕೀಯ ವಿಧಾನ.
ಇದು ಮಹಿಳೆಯ ಅಂಡಾಶಯದಿಂದ ಮೊಟ್ಟೆಗಳನ್ನು ಪಡೆದು ಪ್ರಯೋಗಾಲಯದ ವ್ಯವಸ್ಥೆಯಲ್ಲಿ ವೀರ್ಯದೊಂದಿಗೆ ಅವುಗಳನ್ನು ಫಲವತ್ತಾಗಿಸಿ ಅನಂತರ ಭ್ರೂಣವನ್ನಾಗಿ ಮಾಡಿ ಗರ್ಭಾಶಯಕ್ಕೆ ವರ್ಗಾಯಿಸುವ ಮೂಲಕ ಗರ್ಭಧಾರಣೆ ಆಗುವಂತೆ ಮಾಡುವ ವೈದಕೀಯ ಪ್ರಕ್ರಿಯೆ.
ಗೊತ್ತಿರಬೇಕಾದ ಮಾಹಿತಿಗಳು
ಸದ್ಯ ಭಾರತದಲ್ಲಿ ಇದಕ್ಕೆ ತಗಲುವ ವೆಚ್ಚ 5- 6 ಲಕ್ಷ ರೂ. ಪ್ರಸ್ತುತ ಭಾರತದಲ್ಲಿ ಇದರ ಯಶಸ್ಸಿನ ಪ್ರಮಾಣ ಸುಧಾರಿಸುತ್ತಿದೆ. ಪೋಷಕರ ವಯಸ್ಸನ್ನು ಆಧರಿಸಿ ಜನನ ದರಗಳು ಶೇ. 30ರಿಂದ ಶೇ. 35ರಷ್ಟಿದೆ. ಐವಿಎಫ್ ಪ್ರಕ್ರಿಯೆಗೆ ಒಳಗಾಗ ಬಯಸುವವರು ಐವಿಎಫ್ ಪ್ರಕ್ರಿಯೆ, ಸಂಭಾವ್ಯ ಅಪಾಯಗಳು ಮತ್ತು ಯಶಸ್ಸಿನ ದರಗಳನ್ನು ಮೊದಲು ತಿಳಿದುಕೊಳ್ಳಬೇಕು. ಸರಿಯಾದ ಚಿಕಿತ್ಸೆ ಎಲ್ಲಿ ದೊರೆಯುತ್ತದೆ ಎಂಬುದನ್ನು ವಿಶ್ವಾಸಾರ್ಹ ಮೂಲಗಳಿಂದ ಸಂಗ್ರಹಿಸಬೇಕು
ಚಿಕಿತ್ಸೆಯ ಸಮಯದಲ್ಲಿ ದೇಹದ ಮೇಲೆ ಹೆಚ್ಚಿನ ಒತ್ತಡ ಹೇರಬೇಡಿ. ಶ್ರಮದಾಯಕ ವ್ಯಾಯಾಮ ಅಥವಾ ಚಟುವಟಿಕೆಗಳನ್ನು ತಪ್ಪಿಸಿ.
ಚಿಕಿತ್ಸೆಯ ವೇಳೆ ಉಂಟಾಗುವ ಅಡ್ಡ ಪರಿಣಾಮಗಳ ಬಗ್ಗೆ ತಕ್ಷಣವೇ ವೈದ್ಯರ ಗಮನಕ್ಕೆ ತನ್ನಿ.
ಸಕಾರಾತ್ಮಕ ಮನಸ್ಥಿತಿಯಲ್ಲಿ ಈ ಚಿಕಿತ್ಸೆ ಪಡೆಯಲು ಸಿದ್ಧರಾಗಿ. ಪ್ರತಿಯೊಂದು ಹಂತದಲ್ಲೂ ಭರವಸೆ ಇಟ್ಟಿರಿ.
ಐವಿಎಫ್ ಪ್ರಕ್ರಿಯೆ:
ಐವಿಎಫ್ ಪ್ರಕ್ರಿಯೆಯು ಹಲವಾರು ಹಂತಗಳನ್ನು ಹೊಂದಿರುತ್ತದೆ. ಪ್ರತಿಯೊಂದು ಹಂತವೂ ಚಿಕಿತ್ಸೆಯ ಯಶಸ್ಸಿಗೆ ನಿರ್ಣಾಯಕವಾಗಿರುತ್ತದೆ. ಆರಂಭಿಕ ಹಾರ್ಮೋನ್ ಪ್ರಚೋದನೆಯಿಂದ ಅಂತಿಮ ಗರ್ಭಧಾರಣೆಯ ಪರೀಕ್ಷೆಯವರೆಗೆ ಪೋಷಕರಾಗಬೇಕು ಎಂದು ಬಯಸುವ ದಂಪತಿ ಅದನ್ನು ಅರ್ಥಮಾಡಿಕೊಳ್ಳುವುದು, ತಾಳ್ಮೆಯಿಂದ ಕಾಯುವುದು ಬಹುಮುಖ್ಯವಾಗಿರುತ್ತದೆ.
ಇದರಲ್ಲಿ ಮುಖ್ಯವಾಗಿ ಆರಂಭಿಕ ಸಮಾಲೋಚನೆ, ರೋಗನಿರ್ಣಯ ಪರೀಕ್ಷೆಗಳು, ಚಿಕಿತ್ಸೆಯ ಯೋಜನೆ, ಅಂಡಾಶಯದ ಪ್ರಚೋದನೆ, ಟ್ರಿಗ್ಗರ್ ಚುಚ್ಚುಮದ್ದು, ಮೊಟ್ಟೆ ಮರುಪಡೆಯುವಿಕೆ, ವೀರ್ಯಾಣು ಸಂಗ್ರಹ, ಫಲೀಕರಣ, ಭ್ರೂಣ ಬೆಳವಣಿಗೆ, ಪೂರ್ವನಿಯೋಜಿತ ಜೆನೆಟಿಕ್ ಟೆಸ್ಟಿಂಗ್ (PGT), ಪ್ರೆಗ್ನೆನ್ಸಿ ಟೆಸ್ಟ್ ಮೊದಲಾದವುಗಳನ್ನು ಮಾಡಲಾಗುತ್ತದೆ. ಈ ಪ್ರಕ್ರಿಯೆಯ ಉದ್ದಕ್ಕೂ ವೈದ್ಯಕೀಯ ತಂಡವು ಮಾರ್ಗದರ್ಶನ ಮತ್ತು ಬೆಂಬಲವನ್ನು ಒದಗಿಸುತ್ತದೆ. ಐವಿಎಫ್ ನ ಸಂಕೀರ್ಣವೆಂದು ತೋರುತ್ತದೆಯಾದರೂ ತಜ್ಞರು ಇದನ್ನು ಪೋಷಕರಾಗ ಬಯಸುವ ದಂಪತಿಗೆ ಸಾಧ್ಯವಾದಷ್ಟು ಸುಲಭವಾಗುವಂತೆ, ಅರ್ಥವಾಗುವಂತೆ ವಿವರಿಸುತ್ತಾರೆ.
ಹಲವು ವರ್ಷಗಳಿಂದ ಮಕ್ಕಳಾಗಲಿಲ್ಲ ಎಂದು ಕೊರಗುತ್ತಿರುವ ದಂಪತಿಗಳ ಜೀವನದಲ್ಲಿ ಕೃತಕ ಗರ್ಭಧಾರಣೆ(IVF) ನಿರ್ಣಾಯಕ ಚಿಕಿತ್ಸೆಯ ಆಯ್ಕೆಯಾಗಿ ಕಾರ್ಯನಿರ್ವಹಿಸುತ್ತದೆ. ಆಧುನಿಕ ಸುಧಾರಿತ ಸಂತಾನೋತ್ಪತ್ತಿ ತಂತ್ರಗಳ ಮೂಲಕ ಮಗು ಹೊಂದುವ ಪರಿಕಲ್ಪನೆಗೆ ಮಾರ್ಗವನ್ನು ಒದಗಿಸುವ ಮೂಲಕ, ಐವಿಎಫ್ ದಂಪತಿಗಳ ಬಾಳಲ್ಲಿ ಪರಿವರ್ತನೆ ತರುತ್ತದೆ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
ನಿಧನ ವಾರ್ತೆ19 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು18 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು15 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ಅಂತರ ರಾಜ್ಯ19 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ರಾಜ್ಯ19 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ19 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ19 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ20 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















