ಸ್ಥಳೀಯ
Kolara-ಮದುವೆ ದಿನವೇ ಮಚ್ಚಿನಿಂದ ಕೊಚ್ಚಾಡಿಕೊಂಡು ಸತ್ತ ವಧು-ವರ – ಶವ ಪರೀಕ್ಷೆಯಲ್ಲಿ ಬಯಲಾಯ್ತು ಬಹುದೊಡ್ಡ ಸತ್ಯ! ಇದೀಯಾ 3ನೇ ವ್ಯಕ್ತಿಯ ಕೈವಾಡ
ವಧು-ವರರು ಪರಸ್ಪರ ಮಚ್ಚಿನಿಂದ ಕೊಚ್ಚಾಡಿಕೊಂಡು ಮಸಣ ಸೇರಿದ ಘಟನೆ ಕೆಜಿಎಫ್ ನಲ್ಲಿ ನಡೆದಿದ್ದು ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಂಬಾರಸನಹಳ್ಳಿ ಗ್ರಾಮದ ಲಿಖಿತಾಶ್ರೀ ಹಾಗೂ ಅಂಧ್ರ ಮೂಲದ ರಾಜಪೇಟೆ ರಸ್ತೆಯಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದ ನವೀನ್ ಕುಮಾರ್ ಮೃತಪಟ್ಟ ನವ ದಂಪತಿಗಳು. ಈ ಪ್ರಕರಣಕ್ಕೆ ಮರಣೋತ್ತರ ಪರೀಕ್ಷೆಯಲ್ಲಿ ಮಹತ್ವದ ತಿರುವು ಲಭ್ಯವಾಗಿದೆ.
ಕೈಗೆ ಹಾಕಿದ್ದ ಮದರಂಗಿಯ ಬಣ್ಣ ಕರುಗುವ ಮುನ್ನವೇ ವಧು-ವರರು ಪರಸ್ಪರ ಮಚ್ಚಿನಿಂದ ಕೊಚ್ಚಾಡಿಕೊಂಡು ಮಸಣ ಸೇರಿದ ಘಟನೆ ಮೊನ್ನೆ ಕೋಲಾರದ ಕೆಜಿಎಫ್ ನಲ್ಲಿ ನಡೆದಿದ್ದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಂಬಾರಸನಹಳ್ಳಿ ಗ್ರಾಮದಲ್ಲಿ ಲಿಖಿತಾಶ್ರೀ ಹಾಗೂ ಅಂಧ್ರ ಮೂಲದ ರಾಜಪೇಟೆ ರಸ್ತೆಯಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದ ನವೀನ್ ಕುಮಾರ್ ಮೃತಪಟ್ಟ ನವ ದಂಪತಿಗಳು.
ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸಿ, ಮನೆಯವರನ್ನು ಕಷ್ಟ ಪಟ್ಟು ಒಪ್ಪಿಸಿ ಮದುವೆಯಾದ ದಿನವೇ ಸಂಜೆಯ ಹೊತ್ತಿಗೆ ಇಬ್ಬರು ಹೊಡೆದಾಡಿಕೊಂಡು ಸತ್ತಿರುವ ವಿಚಾರ ಸಾಕಷ್ಟು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿತ್ತು. ಸದ್ಯ, ಈ ಪ್ರಕರಣಕ್ಕೆ ಮರಣೋತ್ತರ ಪರೀಕ್ಷೆಯಲ್ಲಿ ಮಹತ್ವದ ತಿರುವು ಲಭ್ಯವಾಗಿದೆ. ಈ ಬಗ್ಗೆ ತಿಳಿಯಬೇಕಿದ್ದರೆ ಈ ವರದಿ ಓದಿ.
ನವೀನ್ ಮತ್ತು ಲಿಖಿತಾಶ್ರೀ ಲೆಕ್ಕಾಚಾರದಲ್ಲಿ ದೂರದ ಸಂಬಂಧಿಗಳೇ. ಆರು ತಿಂಗಳ ಹಿಂದೆಯೇ ಪರಿಚಯಸ್ಥರೊಬ್ಬರ ಸಮ್ಮುಖದಲ್ಲಿ ವಧು ನೋಡುವ ಶಾಸ್ತ್ರ ನಡೆದಿತ್ತು. ಆಷಾಢ ಮುಗಿದ ನಂತರ ಮದುವೆ ಶಾಸ್ತ್ರ ಇಟ್ಟುಕೊಳ್ಳಲು ಎರಡೂ ಕುಟುಂಬಗಳು ಸಹಮತ ಸೂಚಿಸಿದ್ದವು. ಇವರಿಬ್ಬರ ಮದುವೆ ವಿಚಾರದಲ್ಲಿ ಒಮ್ಮೆ ಮಾತುಕತೆ ಮುರಿದು ಬಿದ್ದಿತ್ತು. ಮತ್ತೊಮ್ಮೆ ನಡೆಸಿದ್ದ ಮಾತುಕತೆ ಫಲಪ್ರದವಾಗಿತ್ತು.
ಬೆಳಗ್ಗೆ ಮದುವೆ, ಸಂಜೆ ಶವ ಪರೀಕ್ಷೆ!
ಹೌದು, ಹತ್ತಾರು ವರ್ಷ ಪ್ರೀತಿಸಿ, ನೂರಾರು ಕನಸುಗಳೊಂದಿಗೆ ಸಪ್ತಪದಿ ತುಳಿದಿದ್ದ ಲಿಖಿತಾಶ್ರೀ ಹಾಗೂ ನವೀನ್ ಸಂಜೆಯ ಹೊತ್ತಿಗೆ ರೂಮ್ಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಆ ಬಳಿಕ ಒಳಗೆ ಏನಾಗಿತ್ತೋ ಗೊತ್ತಿಲ್ಲ ಇಬ್ಬರು ಕೂಡ ಜಿದ್ದಿಗೆ ಬಿದ್ದವರಂತೆ ಮಚ್ಚಿನಿಂದ ಹೊಡೆದಾಡಿಕೊಂಡಿದ್ದಾರೆ. ಕತ್ತಿ ಏಟಿನಿಂದ ಯುವತಿ ದಾರಿ ಮಧ್ಯೆ ಸಾವನಪ್ಪಿದರೆ, ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕ ಆಸ್ಫತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಆದರೆ ಈ ಅನಿರೀಕ್ಷಿತ ಘಟನೆಗೆ ಕಾರಣವೇನು ಎಂಬುದು ಯಕ್ಷಪ್ರಶ್ನೆಯಾಗಿಯೇ ಉಳಿದಿತ್ತು. ಜೊತೆಗೆ ಇವರಿಬ್ಬರ ಸಾವು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಇದೀಗ ಶವ ಪರೀಕ್ಷೆಯಲ್ಲಿ ಮಹತ್ವದ ಅಂಶ ಬೆಳಕಿಗೆ ಬಂದಿದೆ.
ಮದುವೆ ದಿನ ಸಂಜೆ 5ಗಂಟೆ ಸುಮಾರಿಗೆ ನವೀನ್ಕುಮಾರ್ ಮತ್ತು ಲಿಖಿತಾಶ್ರೀ ಸಂಬಂಧಿಕರ ಮನೆಗೆ ಚಹಾ ಸೇವಿಸಲು ಒಟ್ಟಿಗೆ ಹೋಗಿದ್ದರು. ಆ ಸಂದರ್ಭದಲ್ಲಿ ಯಾವುದೇ ವೈಮನಸ್ಯದ ಕುರುಹು ಕೂಡ ಕಂಡು ಬಂದಿರಲಿಲ್ಲ. ಚಹಾ ನೀಡಿದ ಸಂಬಂಧಿಕರ ಮಹಿಳೆ ಮಗುವನ್ನು ಕರೆದುಕೊಂಡು ಹೊರಗೆ ಹೋದ ತಕ್ಷಣ ಜಗಳ ಶುರುವಾಗಿ ದುರಂತ ನಡೆದು ಹೋಗಿದೆ.
ಶವ ಪರೀಕ್ಷೆಯಲ್ಲಿ ಬಯಲಾದ ಸತ್ಯ!
ಲಿಖಿತಾಶ್ರೀ ಬಲ ಅಂಗೈ ಹಾಗೂ ಕುತ್ತಿಗೆ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದೆ. ವರ ನವೀನ್ ತಲೆಯ ನೆತ್ತಿಯ ಭಾಗ ಹಾಗೂ ತಲೆಯ ಹಿಂಭಾಗಕ್ಕೆ ಮಚ್ಚಿನಿಂದ ಹೊಡೆದ ಗಾಯಗಳಾಗಿವೆ. ಮೊದಲು ಲಿಖಿತಶ್ರೀ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ನಂತರ ತಾನೂ ತಲೆಗೆ ಮಚ್ಚಿನಿಂದ ಹೊಡೆದುಕೊಂಡಿದ್ದಾನೆ ಎಂಬ ಶಂಕೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ವ್ಯಕ್ತವಾಗಿದೆ. ಲಿಖಿತಶ್ರೀ ನವೀನ್ ಮೇಲೆ ಹಲ್ಲೆ ಮಾಡಿಲ್ಲ ಅನ್ನೋದು ಸ್ಪಷ್ಟವಾಗಿದೆ. ಹೀಗಾಗಿ ನವೀನ ಮೊದಲು ಲಿಖಿತಾಶ್ರೀಯ ಹತ್ಯೆ ಮಾಡಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಬ್ಬರ ತಲೆಗೂ ಬಲವಾದ ಪೆಟ್ಟು ಬಿದ್ದ ಕಾರಣ ಸಾವಿಗೀಡಾಗಿದ್ದಾರೆ ಎಂಬುದು ಇಲ್ಲಿ ನಿರೂಪಿತವಾಗಿದೆ. ಆದರೆ ಕಾರಣ ಮಾತ್ರ ಗುಟ್ಟಾಗಿಯೇ ಉಳಿದಿದೆ.
ಪೊಲೀಸರು ನಡೆಸುತ್ತಿರುವ ಪ್ರಾಥಮಿಕ ತನಿಖೆಯ ಪ್ರಕಾರ ಹುಡುಗ ಮತ್ತು ಹುಡುಗಿ ಇಬ್ಬರೂ ಮದುವೆಯಾಗಲು ತುದಿಗಾಲಿನಲ್ಲಿ ನಿಂತಿದ್ದರು. ಕಲ್ಯಾಣ ಮಂಟಪದಲ್ಲಿ ದುಂದು ವೆಚ್ಚ ಮಾಡಿ ಮದುವೆ ಮಾಡುವುದು ಬೇಡ. ಮನೆಯಲ್ಲಿಯೇ ಮದುವೆಯಾಗೋಣ ಎಂಬ ಒಪ್ಪಂದವನ್ನೂ ಮಾಡಿಕೊಳ್ಳಲಾಗಿತ್ತು. ಅದರಂತೆ ಚಂಬರಸನಹಳ್ಳಿಯಲ್ಲಿರುವ ನವೀನ್ ಕುಮಾರ್ ಅವರ ಅಕ್ಕ ಮೋನಿಕಾ ಅವರ ಮನೆಯಲ್ಲಿ ಮದುವೆ ನಡೆದಿದೆ. ಮದುವೆಯ ಹಿಂದಿನ ದಿನವೇ ನವೀನ್ ಕುಮಾರ್ ಕುಟುಂಬ ಚಂಬರಸನಹಳ್ಳಿಗೆ ಬಂದು ವಾಸ್ತವ್ಯ ಮಾಡಿದ್ದರು.
ಮನೆಯ ಬಾಗಿಲು ಹಾಕಿಕೊಂಡಿದ್ದನ್ನು ಗಮನಿಸಿದ ಕುಟುಂಬಸ್ಥರು, ಹೊಸದಾಗಿ ಮದುವೆಯಾಗಿದ್ದಾರೆ ಎಂಬ ಭಾವನೆಯಲ್ಲಿ ಸುಮ್ಮನಿದ್ದರು. ಆದರೆ ಒಳಗೆ ಕಿರುಚಾಟ ಮತ್ತು ನರಳಾಟ ಕೇಳಿ ಬಂದಿದ್ದರಿಂದ ಕಿಟಕಿಯಲ್ಲಿ ನೋಡಿದ್ದಾರೆ. ಆಗ ಲಿಖಿತಾಶ್ರೀ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ನವೀನ್ಕುಮಾರ್ ಮಚ್ಚಿನಲ್ಲಿ ತನ್ನ ಮೇಲೆಯೇ ಹಲ್ಲೆ ಮಾಡಿಕೊಂಡು ಕತ್ತು ಕತ್ತರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು. ದುರ್ಘಟನೆಯನ್ನು ನೋಡಿ ಗಾಬರಿಯಾದ ಸಂಬಂಧಿಕರು ಮನೆಯ ಬಾಗಿಲು ಒಡೆದು ಒಳ ಪ್ರವೇಶಿಸಿ ಇಬ್ಬರನ್ನೂ ರಾಬರ್ಟಸನ್ ಪೇಟೆಯ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು.
ಮೃತಪಟ್ಟ ಇಬ್ಬರ ಮರಣೋತ್ತರ ಪರೀಕ್ಷೆಯನ್ನು ಕೋಲಾರದ ಎಸ್ಎನ್ಆರ್ ಆಸ್ಪತ್ರೆಯಲ್ಲಿ ನಡೆಸಲಾಯಿತು. ಮೃತ ಲಿಖಿತಾಶ್ರೀ ಅವರ ಅಂತ್ಯಸಂಸ್ಕಾರ ಬೈನೇಪಲ್ಲಿ ಗ್ರಾಮದಲ್ಲಿ ಗುರುವಾರ ನಡೆಯಿತು.
ಮೂರನೇಯ ವ್ಯಕ್ತಿಯ ಕೈವಾಡದ ಶಂಕೆ
ವಧು ಹಾಗೂ ವರ ಬಡಿದಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರನೇ ವ್ಯಕ್ತಿಯ ಕೈವಾಡ ಇರುವ ಬಗ್ಗೆ ಲಿಖಿತಶ್ರೀ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ವಧುವಿನ ತಾತ ಹಾಗೂ ತಂಗಿ ಮೂರನೇ ವ್ಯಕ್ತಿಯ ಕೈವಾಡದ ಬಗ್ಗೆ ಆರೋಪ ಮಾಡಿದ್ದಾರೆ. ‘ಇಬ್ಬರೂ ಬಹಳಷ್ಟು ಅನ್ನೋನ್ಯವಾಗಿದ್ದವರು ಪ್ರೀತಿಸಿ ಮದುವೆಯಾಗಿದ್ದವರು. ಮದುವೆ ದಿನವೂ ನಗುನಗುತ್ತಾ ಇದ್ದರು. ಹೀಗಾಗಿ ಯಾರೋ ಮೂರನೇ ವ್ಯಕ್ತಿ ಈ ದುರ್ಘಟನೆಯ ಹಿಂದೆ ಇದ್ದಾರೆ’ ಎಂದು ಆರೋಪಿಸಿದ್ದಾರೆ.
ತನಿಖೆ ಮುಂದುವರೆಸಿದ ಪೊಲೀಸರು!
ಕಾರಣ ತಿಳಿಸದೇ ಸಾವನಪ್ಪಿರುವ ನವಜೋಡಿಯ ಪ್ರಕರಣ ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದೆ. ಈ ಬಗ್ಗೆ ಸತ್ಯಾಸತ್ಯತೆ ತಿಳಿಯಲು ತನಿಖೆ ಮುಂದುವರೆದಿದೆ.
ಇಂದು ಪೊಲೀಸರು ನವೀನ್, ಲಿಖಿತಶ್ರೀ ಇಬ್ಬರ ಮೊಬೈಲ್ ಸೀಜ್ ಮಾಡಲಿದ್ದಾರೆ. ಇಬ್ಬರ ಮೊಬೈಲ್ ಕಾಲ್ ಡೀಟೇಲ್ಸ್ ಪರಿಶೀಲನೆ ನಡೆಸಲಾಗುತ್ತದೆ. ಜೊತೆಗೆ ಘಟನೆಗೂ ಮುನ್ನ ಇಬ್ಬರು ಯಾರ ಜೊತೆಗಾದರೂ ಫೋನ್ನಲ್ಲಿ ಮಾತನಾಡಿದ್ರ ಅನ್ನೋದರ ಕುರಿತು ತನಿಖೆ ನಡೆಸಲಾಗುತ್ತೆ. ಮದುವೆಗೂ ಮೊದಲು ಎರಡು ಕುಟುಂಬದ ನಡುವೆ ಏನಾದ್ರು ಜಗಳಗಳಿದ್ದವಾ? ನವೀನ್ ಮಾನಸಿಕ ಸ್ಥಿತಿ ಹೇಗಿತ್ತು? ಇತ್ಯಾದಿ ವಿಚಾರಗಳ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಲಿದ್ದಾರೆ.
ಬಿಗ್ ನ್ಯೂಸ್
Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.
ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.
ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಮಂಗಳೂರು
MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.
ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
-
ಮಂಗಳೂರು9 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ12 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ14 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್14 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಅಪರಾಧ14 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಮಂಗಳೂರು8 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಸಿನೆಮಾ13 hours agoNana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು
-
ಬಿಗ್ ನ್ಯೂಸ್7 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ


















