ರಾಷ್ಟ್ರೀಯ
Sheikh Hasina-ಬಾಂಗ್ಲದ ನೂತನ ಮುಖ್ಯಸ್ಥರಿಗೆ ಶುಭಕೋರಿದ ಪ್ರಧಾನಿ ಮೋದಿ – ಶೇಖ್ ಹಸೀನಾಗೆ ಆಶ್ರಯ ನೀಡಿದ ಭಾರತ: ಬಾಂಗ್ಲಾದೇಶ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಮತ್ತು ಬಾಂಗ್ಲದ ಹಿಂದೂ ರಾಜಕೀಯ ಮುಖಂಡ ಅಸಮಾಧಾನ
ಬಾಂಗ್ಲಾದೇಶದಲ್ಲಿ ಹಿಂಸಾಚಾರದ ಬಳಿಕ ರಾಜೀನಾಮೆ ನೀಡಿ, ದೇಶದಿಂದ ಪಲಾಯನ ಮಾಡಿರುವ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಭಾರತ ಆಶ್ರಯ ನೀಡಿರುವುದಕ್ಕೆ ಅಲ್ಲಿನ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಾಂಗ್ಲದ ನೂತನ ಸರ್ಕಾರದ ಮುಖ್ಯಸ್ಥ ಯೂನಸ್ ಗೆ ಪ್ರಧಾನಿ ಮೋದಿ ಶುಭಹಾರೈಸಿದ್ದಾರೆ.
ಢಾಕಾ: ಬಾಂಗ್ಲಾದೇಶದಲ್ಲಿ ಹಿಂಸಾಚಾರದ ಬಳಿಕ ರಾಜೀನಾಮೆ ನೀಡಿ, ದೇಶದಿಂದ ಪಲಾಯನ ಮಾಡಿರುವ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಭಾರತ ಆಶ್ರಯ ನೀಡಿರುವುದಕ್ಕೆ ಅಲ್ಲಿನ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈತನ್ಮಧ್ಯೆ, ಬಾಂಗ್ಲದ ನೂತನ ಸರ್ಕಾರದ ಮುಖ್ಯಸ್ಥ ಯೂನಸ್ ಗೆ ಪ್ರಧಾನಿ ಮೋದಿ ಶುಭಹಾರೈಸಿದ್ದಾರೆ. ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.
ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದ ನೊಬೆಲ್ ಪುರಸ್ಕೃತ ಯೂನಸ್, ದೇಶವು ಹೊಸ ನಾಯಕತ್ವದತ್ತ ಪರಿವರ್ತನೆ ಹೊಂದುತ್ತಿರುವಾಗ ಬಾಂಗ್ಲಾದೇಶದ ರಾಜಕೀಯ ಸನ್ನಿವೇಶದಲ್ಲಿ ಜನರ ಭದ್ರತೆ ಹಾಗೂ ಸುರಕ್ಷತೆ ಕಾಪಾಡಲು ಬದ್ಧರಾಗಿರುವುದಾಗಿ ಹೇಳಿದ್ದಾರೆ.
ಬಾಂಗ್ಲಾದೇಶದಲ್ಲಿ ನಡೆದ ಪ್ರತಿಭಟನೆಯು ಆಂತರಿಕ ವಿಚಾರ ಎಂದು ಪರಿಗಣಿಸಿದ ಭಾರತದ ನಿಲುವು ತಮಗೆ ನೋವುಂಟು ಮಾಡಿದೆ ಎಂದು ಯೂನಸ್ ಹೇಳಿದ್ದಾರೆ.
ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು, “ಸಹೋದರನ ಮನೆಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವಾಗ, ಅದು ಆಂತರಿಕ ಸಂಗತಿ ಎಂದು ನೀವು ಹೇಗೆ ತಾನೆ ಹೇಳುತ್ತೀರಿ?” ಎಂದು ಭಾರತವನ್ನು ಅವರು ಪ್ರಶ್ನಿಸಿದ್ದಾರೆ.
ಬಾಂಗ್ಲಾ ದೇಶದಲ್ಲಿನ ಪ್ರತಿಭಟನೆಗೆ ಭಾರತದ ಪ್ರತಿಕ್ರಿಯೆ ಕುರಿತಾದ ಪ್ರಶ್ನೆಗೆ ಅವರು, “ಎಲ್ಲ ಸದಸ್ಯ ದೇಶಗಳ ಜತೆ ನಾವು ಸ್ನೇಹ ಸಂಬಂಧ ಹೊಂದಲು ಬಯಸುತ್ತೇವೆ. ಐರೋಪ್ಯ ಒಕ್ಕೂಟದ ರೀತಿಯಲ್ಲಿ ನಾವು ಒಂದು ಕುಟುಂಬದಂತೆ ಇರಲು, ಪರಸ್ಪರದ ಸಾಂಗತ್ಯವನ್ನು ಆನಂದಿಸಲು ಬಯಸುತ್ತೇವೆ. ನಾವು ಒಂದು ನಿಜವಾದ ಕುಟುಂಬ. ಹೀಗಾಗಿ ಇದು ಆಂತರಿಕ ವಿಚಾರ ಎಂದು ಭಾರತ ಹೇಳಿದಾಗ ನೋವಾಗುತ್ತದೆ” ಎಂದಿದ್ದಾರೆ.
ಭಾರತಕ್ಕೂ ಕಿಚ್ಚು ಹರಡಬಹುದು :
ಭಾರತವು ಶೇಖ್ ಹಸೀನಾಗೆ ಆಶ್ರಯ ನೀಡಿರುವುದರ ಬಗ್ಗೆಯೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಅವರು ಇರುವುದು ಸರಿಯಲ್ಲ ಎಂದು ಯೂನಸ್ ಹೇಳಿದ್ದಾರೆ.
“ಬಾಂಗ್ಲಾದೇಶದಲ್ಲಿ ಏನಾದರೂ ನಡೆಯುತ್ತಿದ್ದರೆ, 17 ಕೋಟಿ ಜನರು ಪರಸ್ಪರ ಆಕ್ರೋಶಗೊಂಡಿದ್ದರೆ, ಸರ್ಕಾರದ ಬುಲೆಟ್‌ಗಳಿಗೆ ಯುವಜನರು ಸಾಯುತ್ತಿದ್ದರೆ, ಕಾನೂನು ಮತ್ತು ಸುವ್ಯವಸ್ಥೆಯು ಮರೆಯಾಗುತ್ತಿದ್ದರೆ, ಇದು ಬಾಂಗ್ಲಾದೇಶದ ಗಡಿಯೊಳಗೇ ಸೀಮಿತಗೊಳ್ಳುವುದಿಲ್ಲ, ಪಕ್ಕದ ದೇಶಗಳಿಗೂ ಹರಡಲಿದೆ ಎಂದು ಹೇಳಲು ನಿಮಗೆ ಪರಿಣತರ ಅಗತ್ಯವಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.
ಹಿಂಸಾಚಾರದಿಂದ ತಪ್ಪಿಸಿಕೊಳ್ಳಲು ನೆರೆಹೊರೆಯ ದೇಶಗಳಿಗೆ ಯುವಜನರು ಪರಾರಿಯಾಗುತ್ತಿರುವುದರಿಂದ ಪ್ರದೇಶದ ಉದ್ದಕ್ಕೂ ಅಸ್ಥಿರತೆಗೆ ಎಡೆಮಾಡಿಕೊಡಬಹುದು. ಇದು ನಾವು ಬೆಂಕಿಯೊಂದಿಗೆ ಆಡುತ್ತಿರುವ ಆಟ. ಅದನ್ನು ನಮ್ಮೊಳಗೆ ಹತ್ತಿಕ್ಕುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಭಾರತ ಅರ್ಥ ಮಾಡಿಕೊಳ್ಳಲಿ
ಶೇಖ್ ಹಸೀನಾಗೆ ಆಶ್ರಯ ನೀಡಿರುವ ಭಾರತದ ನಡೆಯನ್ನು ಅವಾಮಿ ಲೀಗ್‌ನ ಎದುರಾಳಿ ಪಕ್ಷವಾದ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಕೂಡ ಟೀಕಿಸಿದೆ. “ಬಾಂಗ್ಲಾದೇಶ ಮತ್ತು ಭಾರತದ ನಡುವೆ ಸಹಕಾರ ಇರಬೇಕು ಎಂದು ಬಿಎನ್‌ಪಿ ಭಾವಿಸುತ್ತದೆ. ಭಾರತ ಸರ್ಕಾರವು ಇದನ್ನು ಅರ್ಥ ಮಾಡಿಕೊಂಡು ಈ ಸ್ಫೂರ್ತಿಯನ್ನು ಮೆರೆಯಬೇಕು. ಆದರೆ ನಮ್ಮ ಅಡೆತಡೆಗಳನ್ನು ಬೆಂಬಲಿಸುವುದು ಆ ಸಹಕಾರದ ನಿರ್ವಹಣೆಯನ್ನು ಜಟಿಲಗೊಳಿಸುತ್ತದೆ” ಎಂದು 1991ರ ಬಿಎನ್‌ಪಿ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದ ಹಿರಿಯ ನಾಯಕ ಗಾಯೇಶ್ವರ್ ರಾಯ್ ಹೇಳಿದ್ದಾರೆ.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ರಾಷ್ಟ್ರೀಯ
ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣ ಆಯುಕ್ತ ಜ್ಞಾನೇಶ್ ಕುಮಾರ್ ಆಹ್ವಾನಿಸಿದ್ದರು..! ನಿವೃತ್ತ ಐಎಎಸ್ ಅಧಿಕಾರಿ ಬಹಿರಂಗ
ತಿರುವನಂತಪುರ: ‘2019ರ ಲೋಕಸಭಾ ಚುನಾವಣೆಯಲ್ಲಿ ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರು ತಮಗೆ ಆಹ್ವಾನ ನೀಡಿದ್ದರು’ ಎಂದು ಕೇರಳಂನ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಜಿಜಿ ಥಾಮ್ರನ್ ಬಹಿರಂಗಪಡಿಸಿದ್ದಾರೆ.
ಬಿಜೆಪಿ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನಡುವಿನ ಮೈತ್ರಿಯ ಕುರಿತು ಆರೋಪಗಳು ಕೇಳಿಬಂದಿರುವ ಬೆನ್ನಲ್ಲೇ ಥಾಮ್ಸ್‌ನ್ ಅವರ ಹೇಳಿಕೆ ಹೊರಬಿದ್ದಿದೆ.
‘ಜ್ಞಾನೇಶ್ ಕುಮಾರ್ ಅವರನ್ನು ಬಿಜೆಪಿಯು ಆರಂಭದಲ್ಲಿ ಪಕ್ಷದ ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಂಡಿತ್ತು. ನಂತರ ಅವರನ್ನು ‘ಅಂಪೈರ್’ ರೀತಿ ಮಾಡಿ, ಭಾರತದ ಚುನಾವಣೆಗಳನ್ನು `ಫಿಕ್ಸಿಂಗ್’ ಮಾಡುವ ಉಸ್ತುವಾರಿ ವಹಿಸಲಾಯಿತು’ ಎಂದು ಲೋಕಸಭೆಯ ವಿರೋಧ ಪಕ್ಷದ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
2016ರಲ್ಲಿ ವಿಮಾನ ಪ್ರಯಾಣವೊಂದರ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿಯಾದೆ. ಕೇರಳಂನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ಅವರು ನನಗೆ ಸೂಚಿಸಿದರು. ನಾನು ಅದೇ ವರ್ಷ ನಿವೃತ್ತಿಯಾಗಲಿದ್ದೆ. ಕೇಂದ್ರ ಸಚಿವ ಕೂಡ ಆಗಲು ಅವಕಾಶವಿದೆ ಎಂದು ಅವರು ಹೇಳಿದರು. ಆದರೆ, ನನಗೆ ಆಸಕ್ತಿ ಇಲ್ಲದ ಕಾರಣ, ಆ ಆಹ್ವಾನವನ್ನು ನಿರಾಕರಿಸಿದೆ.
ಬಿಜೆಪಿ ಮುಖಂಡರ ಬದಲು ಮುಖ್ಯ ಚುನಾವಣಾ ಆಯುಕ್ತರೇ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು ಆಶ್ಚರ್ಯ ತಂದಿತ್ತು’ ಎಂದು ಥಾಮ್ರನ್ ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ರಾಷ್ಟ್ರೀಯ
Crude oil-100 ಡಾಲರ್ ಗಡಿ ದಾಟಿದ ಕಚ್ಚಾ ತೈಲ ಬೆಲೆ : ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ..!
ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ನ್ಯೂಯಾರ್ಕ್: ಅಮೆರಿಕ ಮತ್ತು ಇರಾನ್ ನಡುವಿನ ತೀವ್ರಗೊಳ್ಳುತ್ತಿರುವ ಯುದ್ಧ ಹಾಗೂ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಏರಿಳಿತ ಉಂಟಾಗಿದೆ. ಇದರ ಪರಿಣಾಮವಾಗಿ ಜುಲೈ ಬಳಿಕ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರಲ್‌ಗೆ 100 ಡಾಲರ್ ಗಡಿ ದಾಟಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯ ಪ್ರಮುಖ ಮಾನದಂಡವಾಗಿರುವ ಬ್ರೆಂಟ್ ಕ್ರೂಡ್ ಬೆಲೆ ಶೇ.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 100 ಡಾಲರ್ ಮಟ್ಟ ತಲುಪಿದೆ.
ಕಚ್ಚಾ ತೈಲದ ಬೆಲೆ ಏರಿಕೆಯಿಂದ ಪೆಟ್ರೋಲ್, ಡೀಸೆಲ್ ಹಾಗೂ ಜೆಟ್ ಇಂಧನದ ಬೆಲೆಗಳ ಮೇಲೂ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಇದರ ಪರಿಣಾಮ ಪ್ರಯಾಣ ವೆಚ್ಚ ಹೆಚ್ಚುವುದರ ಜೊತೆಗೆ, ತಾಜಾ ಆಹಾರ ಪದಾರ್ಥಗಳು ಸೇರಿದಂತೆ ತ್ವರಿತವಾಗಿ ಸಾಗಿಸಬೇಕಾದ ಸರಕುಗಳ ಬೆಲೆಯೂ ಏರಿಕೆಯಾಗಬಹುದು. ದೂರದ ಪ್ರದೇಶಗಳಿಗೆ ಸಾಗಿಸುವ ಪೀಠೋಪಕರಣ, ವಿದ್ಯುತ್ ಉಪಕರಣ ಸೇರಿದಂತೆ ವಿವಿಧ ವಸ್ತುಗಳ ಬೆಲೆಯ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.
ಡೀಸೆಲ್ ಮಾರಾಟದಲ್ಲಿ ಲೀಟರ್‌ಗೆ ₹23 ನಷ್ಟ!
ಕಚ್ಚಾ ತೈಲದ ಬೆಲೆ 100 ಡಾಲರ್ ದಾಟಿರುವ ಹಿನ್ನೆಲೆಯಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಪ್ರತಿ ಲೀಟರ್ ಪೆಟ್ರೋಲ್ ಮಾರಾಟದಲ್ಲಿ ಸುಮಾರು ₹5 ಹಾಗೂ ಡೀಸೆಲ್ ಮಾರಾಟದಲ್ಲಿ ₹23ರಷ್ಟು ನಷ್ಟ ಉಂಟಾಗುತ್ತಿದೆ ಎಂದು ವರದಿಯಾಗಿದೆ.
-
ಮಂಗಳೂರು13 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ18 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
Uncategorized10 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಸ್ಥಳೀಯ17 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು20 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಅಂತರ ರಾಜ್ಯ12 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ14 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ರಾಜಕೀಯ19 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ


















