ಸಿನೆಮಾ
Nikkita Ghags extremely bold pictures : ಬೆತ್ತಲೆ ಫೋಟೋಶೂಟ್‌ನೊಂದಿಗೆ ಇಂಟರ್‌ನೆಟ್‌ಗೆ ಕಿಚ್ಚು ಹಚ್ಚಿದ ಖ್ಯಾತ ಬಾಲಿವುಡ್ ನಟಿ! ಮೂಕವಿಸ್ಮಿತರಾದ ಅಭಿಮಾನಿಗಳು

ಟಾಪ್‌ಲೆಸ್ ಫೋಟೋಶೂಟ್‌ನಲ್ಲಿ, ಅರ್ಧ-ಬೀಜ್ ಟ್ರೆಂಚ್ ಕೋಟ್ ಧರಿಸಿ ಬೆತ್ತಲೆ ದೇಹವನ್ನು ಪ್ರದರ್ಶಿಸುವುದನ್ನು ಕಾಣಬಹುದು. ನಿಖಿತಾ ಘಾಗ್ ಟಾಪ್ ಪೋನಿ ಸ್ಟೈಲ್ ಮತ್ತು ಮೇಕಪ್‌ನೊಂದಿಗೆ ಸ್ಟನ್ನಿಂಗ್ ಆಗಿ ಕಂಡಿದ್ದಾರೆ. ಚಿತ್ರಗಳನ್ನು ಹಂಚಿಕೊಂಡ ಅವರು ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ, “ಡ್ರೆಸ್ಸಿಂಗ್‌ನ ಸಂತೋಷವು ಒಂದು ಕಲೆ.”ಎಂದು ಬರೆದುಕೊಂಡಿದ್ದಾರೆ. ಈ ಫೋಟೋಶೂಟ್ ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಹಾಕುತ್ತಲೇ ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ್ದಾರೆ
ಬೆಂಗಳೂರು: ಸಿನಿಮಾ ನಟಿಯರ ಬಿಚ್ಚಾಟಕ್ಕೆ ಕೊನೆ ಮೊದಲು ಇಲ್ಲ . ಈ ಹಿಂದೆ ಸಿನಿಮಾಗಳಿಗಾಗಿ ಬಿಚ್ಚಿತ್ತಿದ್ದ ನಟಿಯರು , ಈಗ ಸಾಮಾಜಿಕ ಜಾಲತಾಣದಲ್ಲಿ ಹಸಿಬಿಸಿಯಾಗಿ ಕಾಣಿಸಿಕೊಳ್ಳಲು ಆರಂಭಿಸಿದ್ದಾರೆ. ಒಬ್ಬರಿಗಿಂತ ಒಬ್ಬರು ಮೈಮೇಲೆ ಬಿದ್ದವರಂತೆ ಬಟ್ಟೆ ಮೇಲೆ ಅಲರ್ಜಿ ಪ್ರದರ್ಶಿಸಿ, ಫೋಟೊ ಶೂಟ್ ಮಾಡಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆ, ನಟಿ ನಿಖಿತಾ ಘಾಗ್ (Nikkita Ghag). ಈಕೆ Instgram ನಲ್ಲಿ ಹಂಚಿಕೊಂಡ ಫೊಸ್ಟ್ ವೋಂದು ಸದ್ಯ ಇಂಟರನೆಟ್ ನಲ್ಲಿ ಬೆಂಕಿ ಹೊತಿ ಕೊಂಡಿದೆ.
ಬೆಕಾಬೂ 3, ಫುಹ್ ಸೆ ಫ್ಯಾಂಟಸಿ, ನಶಿಲಾ ಹುಸ್ನ್ ಸೇರಿದಂತೆ ಹಲವು ಸಿನಿಮಾಗಳಲ್ಲಿ, ವೆಬ್ ಸಿರೀಸ್‌ನಲ್ಲಿ ಅವರು ಕೆಲಸ ಮಾಡಿದ್ದಾರೆ. ಫ್ಯಾಶನ್ ಬಗ್ಗೆ ವಿಪರೀತ ಕ್ರೇಜ್ ಹೊಂದಿರುವ ನಟಿ, ಆಗಾಗ ಸೋಷಿಯಲ್ ಮೀಡಿಯಾದಲ್ಲಿ ಫೋಟೊಗಳನ್ನು ಹಂಚಿಕೊಂಡು ಪಡ್ಡೆ ಹೈಕಳ ತಾಪಮಾನವನ್ನು ಹೆಚ್ಚಿಸುತ್ತಿದ್ದಾರೆ. ಇದಕ್ಕೆ ಹೊಸ ಸೇರ್ಪಡೆಯಾಗಿ, ಇತ್ತೀಚೆಗೆ ಆರೆ ಬೆತ್ತಲೆ ಫೋಟೊವೊಂದನ್ನು ನಟಿ ಹಂಚಿಕೊಂಢಿದ್ದಾರೆ. ನಟಿಯ ಈ ಹಾಟ್ ಪೋಸ್‌ಗೆ ಪಡ್ಡೆ ಹುಡುಗರು ಸುಸ್ತಾಗಿದ್ದಾರೆ.

ಟಾಪ್‌ಲೆಸ್ ಫೋಟೋಶೂಟ್‌ನಲ್ಲಿ, ಅರ್ಧ-ಬೀಜ್ ಟ್ರೆಂಚ್ ಕೋಟ್ ಧರಿಸಿ ಬೆತ್ತಲೆ ದೇಹವನ್ನು ಪ್ರದರ್ಶಿಸುವುದನ್ನು ಕಾಣಬಹುದು. ನಿಖಿತಾ ಘಾಗ್ ಟಾಪ್ ಪೋನಿ ಸ್ಟೈಲ್ ಮತ್ತು ಮೇಕಪ್‌ನೊಂದಿಗೆ ಸ್ಟನ್ನಿಂಗ್ ಆಗಿ ಕಂಡಿದ್ದಾರೆ. ಚಿತ್ರಗಳನ್ನು ಹಂಚಿಕೊಂಡ ಅವರು ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ, “ಡ್ರೆಸ್ಸಿಂಗ್‌ನ ಸಂತೋಷವು ಒಂದು ಕಲೆ.”ಎಂದು ಬರೆದುಕೊಂಡಿದ್ದಾರೆ. ಈ ಫೋಟೋಶೂಟ್ ಇನ್ಸ್ಟಾಗ್ರಾಂ ನಲ್ಲಿ ಪೋಸ್ಟ್ ಹಾಕುತ್ತಲೇ ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ್ದಾರೆ.
ನಿಖಿತಾ ಕಿಚ್ಚು ಹಚ್ಚುವ ಫೋಟೋಶೂಟ್ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಚಿತ್ರಗಳು ಅಭಿಮಾನಿಗಳ ಗಮನವನ್ನು ಸೆಳೆದವು. ತಕ್ಷಣ ಕಾಮೆಂಟ್ ವಿಭಾಗಕ್ಕೆ ಹೋಗಿ ಕಾಮೇಂಟ್ ಗಳ ಸುರಿ ಮಳೆಯನ್ನೆ ಹರಿಸಿದರು.
ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ವೆಬ್ ಸರಣಿಯ ಸೆನ್ಸೇಷನ್ ಅನ್ನು ಅವರ ಹುಚ್ಚು ಹಿಡಿಸುವ ನೋಟ ಮತ್ತು ಪರ್ಫೆಕ್ಟ್ ಆಕಾರದ ದೇಹಕ್ಕಾಗಿ ಶ್ಲಾಘಿಸಿದರೆ, ಇತರರು ಅಶ್ಲೀಲತೆಯನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಿ ಅವರ ದಿಟ್ಟ ನಡೆಯನ್ನು ಟೀಕಿಸಿದರು.
“ವಾಹ್ ನೀವು ಅದ್ಭುತವಾಗಿ ಕಾಣುತ್ತೀರಿ” ಎಂದು ಇಂಟರ್ನೆಟ್ ಬಳಕೆದಾರರೊಬ್ಬರು ಬರೆದಿದ್ದಾರೆ. ಇನ್ನೊಬ್ಬರು ಕಾಮೆಂಟ್ ಮಾಡಿದ್ದಾರೆ, “ನಿಜವಾಗಿಯೂ ಚೆನ್ನಾಗಿ ಫೋಟೊ ಸೆರೆಹಿಡಿಯಲಾಗಿದೆ. ಸೊಗಸಾದ ಮೋಹಕತೆ. ಆದರೆ ಹೃದಯವು ಇನ್ನಷ್ಟು ಹೆಚ್ಚು ತೆರೆದುಕೊಳ್ಳಬೇಕಿತ್ತು”. ಮೂರನೆಯ ಸಂದೇಶವೆಂದರೆ, “ಅತ್ಯಂತ ಸುಂದರ”.
ಸದ್ಯ ನಟಿ ನಿಖಿತಾ ಘಾಗ್ಡಿ ಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಆನಂದಿ ಕಾರ್ಯಕ್ರಮದೊಂದಿಗೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಕೊನೆಯದಾಗಿ ಆಲ್ಟ್ಸ್ ಪ್ಯಾರ್ ಕಾ ಬಜಾರ್ (ಕಾರ್-ಒ-ಬಾರ್) ನಲ್ಲಿ ಕಾಣಿಸಿಕೊಂಡಿದ್ದರು. ಅವರ ಜೊತೆಗೆ, ಶೋನಲ್ಲಿ ಹೇಮಾನ್ಶಿ ರೂಪಾರೆಲ್, ದರ್ಶ್ ಪ್ರಜಾಪತಿ ಮತ್ತು ಮೋಹಿತ್ ದುಸೇಜಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಸಿನೆಮಾ
Rajinikanth-ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ತಲೈವಾ: ರಜಿನಿಕಾಂತ್ ನೋಡಲು ಮುಗಿಬಿದ್ದ ಅಭಿಮಾನಿಗಳು
‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರು: ‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರಿನ ಸುತ್ತಮುತ್ತ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ರಜಿನಿಕಾಂತ್ ಅವರು ನಗರದಲ್ಲಿರುವ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ʻತಲೈವಾʼನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಶೂಟಿಂಗ್ ಸ್ಥಳಗಳು ಹಾಗೂ ಅವರು ಭೇಟಿ ನೀಡುವ ಪ್ರದೇಶಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ.
ಚಾಮುಂಡೇಶ್ವರಿ ದೇವಾಲಯಕ್ಕೆ ರಜಿನಿಕಾಂತ್ ಭೇಟಿ ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಅಭಿಮಾನಿಗಳು ಅವರನ್ನು ನೋಡಲು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳನ್ನು ಕಂಡ ರಜಿನಿಕಾಂತ್ ಅವರು ಪ್ರೀತಿಯಿಂದ ಕೈಬೀಸಿ ಅಭಿಮಾನಿಗಳ ಖುಷಿಗೆ ಕಾರಣರಾದರು.
ಇದಕ್ಕೂ ಮುನ್ನ ಮಂಗಳವಾರ (ಸೆ.29) ಸೋಮನಾಥಪುರದಲ್ಲಿ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟ ವಿಷ್ಣುವರ್ಧನ್ ಅವರ ಕುಟುಂಬದ ಸದಸ್ಯರು ರಜಿನಿಕಾಂತ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಕೆಲಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದ್ದು, ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಕರ್ನಾಟಕದಲ್ಲಿ ರಜಿನಿಕಾಂತ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ಅವರು ರಾಜ್ಯಕ್ಕೆ ಆಗಮಿಸಿದಾಗಲೆಲ್ಲ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆಯುತ್ತದೆ. ಇದೀಗ ಮೈಸೂರಿನಲ್ಲಿ ನಡೆಯುತ್ತಿರುವ ‘ಧರ್ಮನ್’ ಚಿತ್ರದ ಚಿತ್ರೀಕರಣದ ಹಿನ್ನೆಲೆಯಲ್ಲಿ ತಲೈವಾ ನಗರದಲ್ಲಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಉತ್ಸಾಹ ಮೂಡಿಸಿದೆ.
ರಜಿನಿಕಾಂತ್ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ ‘ಜೈಲರ್-2’ ಕೂಡ ಸದ್ಯ ಗಮನ ಸೆಳೆಯುತ್ತಿದೆ. ಚಿತ್ರದಲ್ಲಿ ಕನ್ನಡದ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ. ‘ಜೈಲರ್-2’ ಅಕ್ಟೋಬರ್ 15ರಂದು ತೆರೆಗೆ ಬರಲಿದೆ.
ಸಿನೆಮಾ
Bethlehem Family Unit-ಮಲಯಾಳಂ ಚಿತ್ರರಂಗದಲ್ಲಿ ದಾಖಲೆ ಬರೆದ ‘ಬೆತ್ಲೆಹೆಮ್ ಕುಟುಂಬ ಯೂನಿಟ್’: ಅ.2ಕ್ಕೆ ಒಟಿಟಿ ಎಂಟ್ರಿ
ಮಲಯಾಳಂ ಚಿತ್ರರಂಗದಲ್ಲಿ ಭರ್ಜರಿ ಯಶಸ್ಸು ಕಂಡಿರುವ ‘ಬೆತ್ಲೆಹೆಮ್ ಕುಟುಂಬ ಯೂನಿಟ್’ (Bethlehem Kudumba Unit) ಇದೀಗ ಒಟಿಟಿ ಬಿಡುಗಡೆಗೆ ಸಜ್ಜಾಗಿದೆ. ನಿವಿನ್ ಪೌಲಿ ಹಾಗೂ ಮಮಿತಾ ಬೈಜು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರ ಅ.2ರಿಂದ ಜಿಯೋಹಾಟ್‌ಸ್ಟಾರ್ (JioHotstar) ಒಟಿಟಿ ವೇದಿಕೆಯಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ.
ಕೊಚ್ಚಿ: ಮಲಯಾಳಂ ಚಿತ್ರರಂಗದಲ್ಲಿ ಭರ್ಜರಿ ಯಶಸ್ಸು ಕಂಡಿರುವ ‘ಬೆತ್ಲೆಹೆಮ್ ಕುಟುಂಬ ಯೂನಿಟ್’ (Bethlehem Kudumba Unit) ಇದೀಗ ಒಟಿಟಿ ಬಿಡುಗಡೆಗೆ ಸಜ್ಜಾಗಿದೆ. ನಿವಿನ್ ಪೌಲಿ ಹಾಗೂ ಮಮಿತಾ ಬೈಜು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರ ಅ.2ರಿಂದ ಜಿಯೋಹಾಟ್‌ಸ್ಟಾರ್ (JioHotstar) ಒಟಿಟಿ ವೇದಿಕೆಯಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ.
ಗಿರೀಶ್ ಎ.ಡಿ. ನಿರ್ದೇಶನದ ಈ ರೊಮ್ಯಾಂಟಿಕ್ ಕಾಮಿಡಿ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಸುಮಾರು 326 ಕೋಟಿ ರೂ. ಗಳಿಸುವ ಮೂಲಕ ಮಲಯಾಳಂ ಚಿತ್ರರಂಗದ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ದಾಖಲೆ ನಿರ್ಮಿಸಿದೆ ಎಂದು ವರದಿಯಾಗಿದೆ.
ಇದಕ್ಕೂ ಮುನ್ನ ‘ಲೋಕಾ ಚಾಪ್ಟರ್ 1: ಚಂದ್ರ’ ಚಿತ್ರ 304 ಕೋಟಿ ರೂ. ಗಳಿಕೆಯೊಂದಿಗೆ ಮೊದಲ ಸ್ಥಾನದಲ್ಲಿತ್ತು. ‘ಬೆತ್ಲೆಹೆಮ್ ಕುಟುಂಬ ಯೂನಿಟ್’ ಈ ದಾಖಲೆಯನ್ನು ಹಿಂದಿಕ್ಕಿದೆ.
ಚಿತ್ರವು ಕೇರಳದಲ್ಲಿ ಮೊದಲ ಬಾರಿಗೆ 150 ಕೋಟಿ ರೂ. ಗಳಿಕೆ ದಾಖಲಿಸಿದ ಮಲಯಾಳಂ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಅತಿ ವೇಗವಾಗಿ 300 ಕೋಟಿ ರೂ. ಕ್ಲಬ್ ಸೇರಿದ ಚಿತ್ರ ಎಂಬ ದಾಖಲೆಗೂ ಪಾತ್ರವಾಗಿದೆ.
ಸಿನೆಮಾ
Hanuman Ansh-₹2 ಕೋಟಿ ಬಜೆಟ್ ಸಿನಿಮಾ ₹347 ಕೋಟಿ ಗಳಿಕೆ; ‘ಪೆದ್ದಿ’, ‘ಟಾಕ್ಸಿಕ್’ ದಾಖಲೆ ಹಿಂದಿಕ್ಕಿದ ‘ಹನುಮಾನ್ ಅಂಶ್ʼ
ಆಧ್ಯಾತ್ಮಿಕ ಗುರು ನೀಮ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿದ ‘ಹನುಮಾನ್ ಅಂಶ್’ (Hanuman Ansh) ಹಿಂದಿ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಸಾಧಿಸುತ್ತಿದೆ. ಕೇವಲ ₹2 ಕೋಟಿ ಬಜೆಟ್‌ನಲ್ಲಿ ನಿರ್ಮಾಣಗೊಂಡಿರುವ ಈ ಸಿನಿಮಾ ವಿಶ್ವದಾದ್ಯಂತ ₹300 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ್ದು, ಇದೀಗ ₹347 ಕೋಟಿಯ ಗಡಿ ದಾಟಿದೆ ಎಂದು ವರದಿಯಾಗಿದೆ.
ಮುಂಬಯಿ: ಆಧ್ಯಾತ್ಮಿಕ ಗುರು ನೀಮ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿದ ‘ಹನುಮಾನ್ ಅಂಶ್’ (Hanuman Ansh) ಹಿಂದಿ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಸಾಧಿಸುತ್ತಿದೆ.
ಕೇವಲ ₹2 ಕೋಟಿ ಬಜೆಟ್‌ನಲ್ಲಿ ನಿರ್ಮಾಣಗೊಂಡಿರುವ ಈ ಸಿನಿಮಾ ವಿಶ್ವದಾದ್ಯಂತ ₹300 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ್ದು, ಇದೀಗ ₹347 ಕೋಟಿಯ ಗಡಿ ದಾಟಿದೆ ಎಂದು ವರದಿಯಾಗಿದೆ. ಸಿನಿಮಾ ಬಿಡುಗಡೆಯಾಗಿ 45 ದಿನಗಳು ಕಳೆದರೂ ಬಾಕ್ಸ್ ಆಫೀಸ್‌ನಲ್ಲಿ ಗಳಿಕೆ ಮುಂದುವರಿದಿರುವುದು ವಿಶೇಷವಾಗಿದೆ.
‘ಪೆದ್ದಿ’, ‘ಟಾಕ್ಸಿಕ್’ ದಾಖಲೆ ಹಿಂದಿಕ್ಕಿದ ಸಿನಿಮಾ
ಭಾನುವಾರ (ಸೆ.20) ‘ಹನುಮಾನ್ ಅಂಶ್’ ಭಾರತದಲ್ಲಿ ₹13.75 ಕೋಟಿ ಹಾಗೂ ವಿದೇಶದಲ್ಲಿ ₹1.50 ಕೋಟಿ ಗಳಿಕೆ ಮಾಡಿದೆ. ಇದರೊಂದಿಗೆ ಚಿತ್ರದ ಒಟ್ಟು ಜಾಗತಿಕ ಗಳಿಕೆ ₹347.05 ಕೋಟಿಗೆ ತಲುಪಿದೆ ಎಂದು ಸ್ಯಾಕ್‌ನಿಲ್ಕ್ ವರದಿ ಮಾಡಿದೆ.
ಈ ಮೂಲಕ ರಾಮ್ ಚರಣ್ ಅಭಿನಯದ ‘ಪೆದ್ದಿ’ ಹಾಗೂ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಗಳ ವಿಶ್ವದಾದ್ಯಂತದ ಗಳಿಕೆಯನ್ನು ‘ಹನುಮಾನ್ ಅಂಶ್’ ಹಿಂದಿಕ್ಕಿದೆ.
‘ಪೆದ್ದಿ’ ₹341.90 ಕೋಟಿ ಹಾಗೂ ‘ಟಾಕ್ಸಿಕ್’ ₹341.99 ಕೋಟಿ ಗಳಿಕೆ ಮಾಡಿದ್ದರೆ, ‘ಹನುಮಾನ್ ಅಂಶ್’ ₹347.05 ಕೋಟಿ ಗಳಿಕೆಯೊಂದಿಗೆ ಈ ಎರಡೂ ಸಿನಿಮಾಗಳನ್ನು ಹಿಂದಿಕ್ಕಿದೆ ಎಂದು ವರದಿಯಾಗಿದೆ.
ಇತ್ತೀಚೆಗೆ ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಂಗ್ಲಾ’ ಸಿನಿಮಾದ ಗಳಿಕೆಯನ್ನೂ ಹಿಂದಿಕ್ಕಿರುವ ‘ಹನುಮಾನ್ ಅಂಶ್’, ಈ ವರ್ಷದ ಹಿಂದಿ ಸಿನಿಮಾಗಳ ಪೈಕಿ ಅತಿ ಹೆಚ್ಚು ಗಳಿಕೆ ಕಂಡ ಮೂರನೇ ಚಿತ್ರವಾಗಿ ಹೊರಹೊಮ್ಮಿದೆ ಎಂದು ವರದಿಯಾಗಿದೆ.
ಇತರ ಭಾಷೆಯ ಸಿನಿಮಾಗಳನ್ನೂ ಹಿಂದಿಕ್ಕಿದ ‘ಹನುಮಾನ್ ಅಂಶ್’
ಕಳೆದ ವಾರದಲ್ಲಿಯೂ ಸಿನಿಮಾ ತನ್ನ ಗಳಿಕೆಯ ಓಟ ಮುಂದುವರಿಸಿದ್ದು, ‘ಜನಾ ನಾಯಕನ್’, ‘ಬೆತ್ತೆಹೇಮ್ ಕುಟುಂಬ ಯೂನಿಟ್’, ‘ಮಾನ ಶಂಕರ ವರಪ್ರಸಾದ್ ಗಾರು’ ಹಾಗೂ ‘ಕರುಪ್ಪು’ ಸೇರಿದಂತೆ ವಿವಿಧ ಚಿತ್ರರಂಗಗಳ ಪ್ರಮುಖ ಸಿನಿಮಾಗಳ ಜಾಗತಿಕ ಗಳಿಕೆಯನ್ನು ಹಿಂದಿಕ್ಕಿದೆ ಎಂದು ವರದಿಯಾಗಿದೆ.
ವಿಶಾಲ್ ಚತುರ್ವೇದಿ ನಿರ್ದೇಶನದ ‘ಹನುಮಾನ್ ಅಂಶ್’ ಚಿತ್ರವು ‘ಮಹಾರಾಜ್ ಜಿ’ ಎಂದೇ ಜನಪ್ರಿಯರಾಗಿದ್ದ ನೀಮ್ ಕರೋಲಿ ಬಾಬಾ ಅವರ ಜೀವನವನ್ನು ಆಧರಿಸಿದೆ.
ಸ್ವಯಂಭೂ ಮೀಡಿಯಾ ನೆಟ್‌ವರ್ಕ್, ರಾಗಿಣಿ ಎಸ್., ನಮ್ರತಾ ಜಿ.ಎಸ್. ಹಾಗೂ ಅನುಪ್ರಿಯಾ ಎ. ನಗರ್ ನಿರ್ಮಿಸಿರುವ ಚಿತ್ರದಲ್ಲಿ ಚಂದನ್ ಕೆ. ಆನಂದ್ ಮತ್ತು ಶೋಭಿನವ್ ಸತ್ಯಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಿಖಿಲ್ ದುಬೆ, ಉದಯಸಿಂಹ ರಜಪೂತ್, ಪೂರ್ಣಿಮಾ ತಿವಾರಿ ಹಾಗೂ ಮನೀಶ್ ಚೌಧರಿ ಸೇರಿದಂತೆ ಹಲವು ಕಲಾವಿದರು ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
-
ನಿಧನ ವಾರ್ತೆ11 hours agoUppinangadi-ಉಪ್ಪಿನಂಗಡಿ: ಸೇತುವೆ ಮೇಲೆ ಬೈಕ್, ಮೊಬೈಲ್ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ
-
ಬಿಗ್ ನ್ಯೂಸ್17 hours agoBantwal-Big Breaking-ದ.ಕ. ಜಿಲ್ಲೆಯಲ್ಲಿ ಗುಡುಗು-ಮಿಂಚಿನ ಮಳೆ: ಸಿಡಿಲು ಬಡಿದು ಮನೆ ಜಖಂ-ಮಹಿಳೆ ಅಸ್ವಸ್ಥ
-
ಅಪರಾಧ17 hours agoPuttur-ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ 11 ಗೋವುಗಳ ಸಾಗಾಟ; ವಾಹನ ಪತ್ತೆ, ಇಬ್ಬರು ಪರಾರಿ
-
ಅಂತರ ರಾಜ್ಯ16 hours agoMurder-ಆಸ್ತಿಗಾಗಿ ಬೆಲ್ಟ್ನಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ: ಆಕಸ್ಮಿಕ ಸಾವೆಂದು ನಂಬಿಸಿದ್ದ ಪತ್ನಿ ಅರೆಸ್ಟ್
-
ಸ್ಥಳೀಯ17 hours agoCrop insurance-ಬೆಳೆ ವಿಮೆಯಲ್ಲಿ ಭಾರೀ ಇಳಿಕೆ – ದ.ಕ. ಜಿಲ್ಲೆಯ ಅಡಿಕೆ, ಕಾಳುಮೆಣಸು ಬೆಳೆಗಾರರು ಶಾಕ್..!; ಬೇಗನೆ ಜಮೆಯಾದರೂ ಪರಿಹಾರ ಮೊತ್ತದಲ್ಲಿ ಭಾರೀ ಇಳಿಕೆ; ಲೆಕ್ಕಾಚಾರ ಬಹಿರಂಗಕ್ಕೆ ಆಗ್ರಹ
-
ನಿಧನ ವಾರ್ತೆ15 hours agoAccident-ಹುತಾತ್ಮ ಸೈನಿಕನ ಮೃತದೇಹ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅಪಘಾತ: ಸೈನಿಕನ ಮಗ, ಸಹೋದರ ಸೇರಿ ನಾಲ್ವರು ಸಾವು
-
ನಿಧನ ವಾರ್ತೆ16 hours agoLalitamma-ಸುಂಟರಗಾಳಿ’, ‘ಜಂಗ್ಲಿ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ
-
ರಾಜಕೀಯ11 hours agoPuttur-ಪುತ್ತೂರು: ಅಲ್ಪಸಂಖ್ಯಾತ ಸೇವಾ ಕೇಂದ್ರ ಉದ್ಘಾಟನೆಗೆ ಬಿಜೆಪಿ ಮೋರ್ಚಾದಿಂದ ಆಗ್ರಹ


















