ರಾಜಕೀಯ
Ksheera Kranti-ಸಂಸದರ ನಿಧಿಯಿಂದ ಬೀದರ್ ನಲ್ಲಿ ಕ್ಷೀರಕ್ರಾಂತಿ – ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯಿಂದ ಮೆಚ್ಚುಗೆ
ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರನ್ನು ಆ.9 ರಂದು ಪಾರ್ಲಿಮೆಂಟ್ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಮಂತ್ರಿ ಆಯ್ಕೆಯಾಗಿರುವುದಕ್ಕೆ ಶುಭಹಾರೈಸಿ ಶ್ರೀಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದವನ್ನು ನೀಡಿ ದೇಶಕ್ಕೆ ಇನ್ನು ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಆಶೀರ್ವದಿಸಿದರು.
ನಿಖರ ನ್ಯೂಸ್ : ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರನ್ನು ದಿನಾಂಕ ಆ.9 ರಂದು ಪಾರ್ಲಿಮೆಂಟ್ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಮಂತ್ರಿ ಆಯ್ಕೆಯಾಗಿರುವುದಕ್ಕೆ ಶುಭಹಾರೈಸಿ ಶ್ರೀಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದವನ್ನು ನೀಡಿ ದೇಶಕ್ಕೆ ಇನ್ನು ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಆಶೀರ್ವದಿಸಿದರು.
ನಂತರ ಅನೇಕ ವಿಷಯಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ರಾಜ್ಯಸಭಾ ಸಂಸದರ ವ್ಯಾಪ್ತಿಗೆ ಬರುವ ನಿಧಿಯನ್ನು ಪೂಜ್ಯರು ಬೀದರ್‌ನಲ್ಲಿ ವಿನೂತನವಾಗಿ ವಿನಿಯೋಗಿಸಿ ಒಂದು ಕ್ಷೀರಕ್ರಾಂತಿಗೆ ನಾಂದಿ ಹಾಡಿರುವ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಿದರು. ಇದು ಒಂದು ಮಾದರಿ ಸಂಸದರ ನಿಧಿಯ ಸದ್ವಿನಿಯೋಗ ಎಂದು ಪ್ರಧಾನಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಹಾಗೆಯೇ ರಾಜ್ಯದಾದ್ಯಂತ ಗ್ರಾಮಾಭಿವೃದ್ಧಿ ಯೋಜನೆಯಿಂದ ನಿರ್ವಹಿಸಲ್ಪಡುತ್ತಿರುವ 10 ಸಾವಿರ ಸಿ.ಎಸ್.ಸಿ. ಕೇಂದ್ರಗಳ ಮೂಲಕ ಕೇಂದ್ರ ಸರಕಾರದ ಹಾಗೂ ಸಿ.ಎಸ್.ಸಿ.ಯ ಪ್ರಮುಖ ಸೇವೆಗಳನ್ನು ಗ್ರಾಮೀಣ ಜನತೆಯ ಮನೆ ಬಾಗಿಲಿಗೆ ತಲುಪಿಸುತ್ತಿರುವ ಬಗ್ಗೆ ಶ್ರೀ ಹೆಗ್ಗಡೆಯವರು ವಿವರಿಸಿದರು.
ಇಲ್ಲಿಯವರೆಗೆ ಸುಮಾರು 3 ಕೋಟಿ ಸಿ.ಎಸ್.ಸಿ. ಸೇವೆಗಳು ಯೋಜನೆಯ ಮೂಲಕ ಜನಸಾಮಾನ್ಯರಿಗೆ ತಲುಪಿರುವ ಬಗ್ಗೆ ಪ್ರಧಾನಮಂತ್ರಿಗಳು ಅಚ್ಚರಿ ವ್ಯಕ್ತಪಡಿಸಿದರು. ಶ್ರೀ ಹೆಗ್ಗಡೆಯವರ ಈ ಎಲ್ಲಾ ಸೇವೆಗಳ ಚಿಂತನೆಯು ದೇಶಕ್ಕೆ ಮಾದರಿಯಾಗಲಿ ಎಂದು ಪ್ರಧಾನಮಂತ್ರಿಗಳು ಶ್ಲಾಘಿಸಿದರು.
ಬೀದರ್‌ನಲ್ಲಿ ಕ್ಷೀರಕ್ರಾಂತಿ :
ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ತಮ್ಮ ಸಂಸದರ ನಿಧಿಯಿಂದ ಉತ್ತರ ಕರ್ನಾಟಕದ ಹಿಂದುಳಿದ ಜಿಲ್ಲೆಯಾದ ಬೀದರ್‌ನಲ್ಲಿ ಒಂದು ಕ್ಷೀರಕ್ರಾಂತಿಯನ್ನೇ ಮಾಡುವ ಯೋಜನೆ ಹಾಕಿಕೊಂಡು ಕೆ.ಎಂ.ಎಫ್. ಸಹಯೋಗದೊಂದಿಗೆ ಅನೇಕ ಹಾಲು ಒಕ್ಕೂಟಗಳನ್ನು ಅಭಿವೃದ್ಧಿಪಡಿಸಿ ಹೈನುಗಾರಿಕೆ ಮಾಡಲು ಅನೇಕ ಪ್ರೋತ್ಸಾಹಗಳನ್ನು ನೀಡಿದ್ದಾರೆ.
ಸಂಸದರ ನಿಧಿಯಿಂದ ಹಾಲು ಸಂಗ್ರಹಣಾ ಕಟ್ಟಡಗಳನ್ನು ನಿರ್ಮಿಸಿದ್ದಲ್ಲದೆ, ಹಾಲು ಸಂಗ್ರಹವನ್ನು ಹೆಚ್ಚಿಸಿಕೊಳ್ಳಲು ಅತ್ಯಾಧುನಿಕ ಯಂತ್ರಗಳಾದ ಆಟೋಮ್ಯಾಟಿಕ್ ಮಿಲ್ಕ್ ಕಲೆಕ್ಟಿಂಗ್ ಯುನಿಟ್(ಎ.ಎಂ.ಸಿ.ಯು.), ಸ್ಟೈನ್ ಲೆಸ್ ಸ್ಟೀಲ್ ಕ್ಯಾನ್, ಪ್ಯಾಟೋಮ್ಯಾಟಿಕ್ ಯಂತ್ರ, ಹಾಲು ತೂಕದ ಯಂತ್ರಗಳನ್ನು ಒದಗಿಸಿರುತ್ತಾರೆ. ಯೋಜನೆಯ ಕೃಷಿ ಅಧಿಕಾರಿಗಳನ್ನು ನಿಯೋಜಿಸಿ ಗ್ರಾಮೀಣ ರೈತರರಿಗೆ ಹೈನುಗಾರಿಕೆಯ ಬಗ್ಗೆ ಸೂಕ್ತ ತರಬೇತಿಯನ್ನು ನೀಡಿದ್ದಾರೆ. ಈ ಯೋಜನೆ ಪ್ರಾರಂಭವಾಗುವುದಕ್ಕಿಂತ ಮುಂಚೆ ಜಿಲ್ಲೆಯಲ್ಲಿ ಹಾಲು ಉತ್ಪಾದನೆ ಪ್ರತಿನಿತ್ಯ 18 ಸಾವಿರ ಲೀಟರ್ ಮಾತ್ರ ಇತ್ತು.
ಇದು ಯೋಜನೆಯಿಂದಾಗಿ ಪ್ರತಿ ದಿನ ಗರಿಷ್ಠ 70 ಸಾವಿರ ಲೀಟರ್‌ಗೆ ಏರಿಕೆ ಕಂಡಿದ್ದು ಕೆಲವೇ ತಿಂಗಳುಗಳಲ್ಲಿ ಪ್ರತಿನಿತ್ಯ 1 ಲಕ್ಷ ಲೀಟರ್ ಹಾಲು ಸಂಗ್ರಹದ ಗುರಿಯನ್ನು ತಲುಪಲಿದ್ದು ಇದೊಂದು ಐತಿಹಾಸಿಕ ಉತ್ಪಾದನೆಯಾಗಿರುತ್ತದೆ. ಸಂಸದರ ನಿಧಿಯ ಬಳಕೆಗೆ ಇದು ಒಂದು ಉತ್ತಮ ಮಾದರಿ ಎಂದು ಪ್ರಧಾನಮಂತ್ರಿಗಳು ಶ್ಲಾಘಿಸಿದರು.
ಆಯುಷ್ಮಾನ್ ಸೇವೆಗೂ ಮೆಚ್ಚುಗೆ :
ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಮುನ್ನಡೆಸುತ್ತಿರುವ ಗ್ರಾಮಾಭಿವೃದ್ಧಿ ಯೋಜನೆಯೊಂದಿಗೆ ಕೇಂದ್ರ ಸರಕಾರದ ತಂತ್ರಜ್ಞಾನ ಮತ್ತು ಮಾಹಿತಿ ವಿದ್ಯುನ್ಮಾನ ಸಚಿವಾಲಯದ ಮಹತ್ವದ ಕಾರ್ಯಕ್ರಮವಾದ ಸಿ.ಎಸ್.ಸಿ. ಸೇವೆಗಳನ್ನು ಜನ ಸಾಮಾನ್ಯರಿಗೆ ನೀಡುವ ಒಂದು ಪಾಲುದಾರಿಕಾ ಒಪ್ಪಂದವಾಗಿರುತ್ತದೆ. ರಾಜ್ಯಾದ್ಯಾಂತ ಯೋಜನೆಯು 10 ಸಾವಿರ ಗ್ರಾಹಕ ಸೇವಾಕೇಂದ್ರಗಳ ಮೂಲಕ ಸಿ.ಎಸ್.ಸಿ. ಸೇವೆಯನ್ನು ಯಶಸ್ವಿಯಾಗಿ ಜನಸಾಮಾನ್ಯರಿಗೆ ಯೋಜನೆಯಿಂದ ನೀಡಲಾಗುತ್ತಿದೆ. ‘ಆಯುಷ್ಮಾನ್ ಭಾರತ್’ ಸರಕಾರದ ಮಹತ್ವದ ಆರೋಗ್ಯ ವಿಮೆಯಾಗಿದ್ದು ಅರ್ಹ ಫಲಾನುಭವಿಗಳಿಗೆ ಇದನ್ನು ಉಚಿತವಾಗಿ ಸಿ.ಎಸ್.ಸಿ. ಕೇಂದ್ರಗಳ ಮೂಲಕ ವಿತರಿಸಿದ್ದು ಇಲ್ಲಿಯವರೆಗೆ 1.40 ಕೋಟಿಗೂ ಅಧಿಕ ಜನರು ‘ಆಯುಷ್ಮಾನ್ ವಿಮೆ’ಗೆ ನೋಂದಾಯಿಸಿಕೊಂಡಿದ್ದಾರೆ.
ಗ್ರಾಮೀಣ ಮಟ್ಟದಲ್ಲಿ ಜನರಿಗೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೇವೆ ನೀಡುವ ಬಗ್ಗೆಯೂ ಪ್ರಧಾನಮಂತ್ರಿಗಳು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಸ್ಥಳೀಯ
Rakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ
ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಬೆಳ್ತಂಗಡಿ: ಉಪ್ಪಿನಂಗಡಿ ಸಮೀಪದ ವಳಾಲು ಟೋಲ್ ಗೇಟ್‌ನಲ್ಲಿ ಏಕಾಏಕಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತೀವ್ರವಾಗಿ ಖಂಡಿಸಿದ್ದಾರೆ. ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ನಾಯಕರು, ಕೇಂದ್ರ ಸರ್ಕಾರದ ಟೋಲ್ ದರ ಏರಿಕೆ ವಿರುದ್ಧ ಮೌನ ವಹಿಸಿರುವುದೇಕೆ ಎಂದು ಅವರು ಪ್ರಶ್ನಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ರಕ್ಷಿತ್ ಶಿವರಾಂ, ವಳಾಲು ಟೋಲ್ ಗೇಟ್‌ನಲ್ಲಿ ವಾಹನ ಸವಾರರಿಂದ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಹೊಸ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಸಂದರ್ಭದಲ್ಲೇ ರಸ್ತೆ ತೆರಿಗೆ ಪಾವತಿಸಲಾಗುತ್ತಿದ್ದರೂ, ರಸ್ತೆ ಬಳಕೆಯ ಹೆಸರಿನಲ್ಲಿ ಮತ್ತೆ ಮತ್ತೆ ಟೋಲ್ ಶುಲ್ಕ ಹೆಚ್ಚಿಸುತ್ತಿರುವುದು ಎಷ್ಟು ಸಮಂಜಸ ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ನಿಯಮಗಳ ಪ್ರಕಾರ ಎರಡು ಟೋಲ್ ಪ್ಲಾಜಾಗಳ ನಡುವೆ ನಿಗದಿತ ಅಂತರ ಇರಬೇಕು. ಆದರೆ, ಬ್ರಹ್ಮರಕೊಟ್ಟು ಟೋಲ್ ಗೇಟ್‌ನಿಂದ 35 ಕಿ.ಮೀ.ಗಿಂತ ಕಡಿಮೆ, ಕೇವಲ 32 ಕಿ.ಮೀ. ಅಂತರದಲ್ಲೇ ವಳಾಲು ಟೋಲ್ ಆರಂಭಿಸಿ ಎರಡು ಕಡೆ ಶುಲ್ಕ ವಸೂಲಿ ಮಾಡುತ್ತಿರುವುದು ನಿಯಮಬಾಹಿರ ಎಂದು ರಕ್ಷಿತ್ ಶಿವರಾಂ ದೂರಿದ್ದಾರೆ.
ವಳಾಲು ಭಾಗದ ಸ್ಥಳೀಯರು ಬ್ಯಾಂಕ್, ಸಹಕಾರಿ ಹಾಲು ಡಿಪೋ, ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ತೆರಳುವಂತಹ ದೈನಂದಿನ ಚಟುವಟಿಕೆಗಳಿಗೂ ಪ್ರತಿನಿತ್ಯ ₹250 ವರೆಗೆ ಟೋಲ್ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಜನವಿರೋಧಿ ಟೋಲ್ ದರ ಏರಿಕೆ ವಿರುದ್ಧ ಧ್ವನಿ ಎತ್ತದಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಟೀಕಿಸಿದ್ದಾರೆ.
ವಾಹನ ಸವಾರರಿಗೆ ಹೊರೆಯಾಗುವ ರೀತಿಯಲ್ಲಿ ಟೋಲ್ ದರ ಹೆಚ್ಚಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಶ್ನಿಸುವ ಧೈರ್ಯ ಶಾಸಕರಿಗಿದೆಯೇ ಎಂದು ರಕ್ಷಿತ್ ಶಿವರಾಂ ಸವಾಲು ಹಾಕಿದ್ದಾರೆ.
ವಳಾಲು ಟೋಲ್ ದರ ಏರಿಕೆಯನ್ನು ತಕ್ಷಣ ಮರುಪರಿಶೀಲಿಸಿ ಜನಸಾಮಾನ್ಯರಿಗೆ ನ್ಯಾಯ ಒದಗಿಸಬೇಕು. ಟೋಲ್ ದರ ನಿಗದಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದರ ಜೊತೆಗೆ ಸ್ಥಳೀಯರಿಗೆ ವಿನಾಯಿತಿ ನೀಡಬೇಕು. ಬ್ರಹ್ಮರಕೊಟ್ಟು ಟೋಲ್ ಗೇಟ್ ತೆರವುಗೊಳಿಸಬೇಕು ಹಾಗೂ ಬೆಳ್ತಂಗಡಿ ತಾಲೂಕಿನ ಪಣಕಜೆಯಲ್ಲಿ ಉದ್ದೇಶಿತ ಟೋಲ್ ಗೇಟ್ ಯೋಜನೆಯನ್ನು ಕೈಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಅಂತರ ರಾಜ್ಯ
Women’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?
ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಹೊಸದಿಲ್ಲಿ: ಕ್ಷೇತ್ರ ಮರುವಿಂಗಡಣೆ ಮೂಲಕ ಮಹಿಳಾ ಮೀಸಲಾತಿ ಜಾರಿಗೆ ತರುವ ಉದ್ದೇಶದ ಸಂವಿಧಾನ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಮುಂದಿನ ವಾರ ಸಂಸತ್ತಿನಲ್ಲಿ ಕ್ಷೇತ್ರ ಮರುವಿಂಗಡಣೆ ಮಸೂದೆಯನ್ನು ಅಂಗೀಕರಿಸುವ ಪ್ರಯತ್ನಕ್ಕೆ ವೇಗ ನೀಡುವ ಉದ್ದೇಶದಿಂದ ಶುಕ್ರವಾರ ಕೇಂದ್ರ ಸಚಿವ ಸಂಪುಟವು ಮಹತ್ವದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.
ಪ್ರಸ್ತಾವನೆಯ ಪ್ರಕಾರ, ಎಲ್ಲಾ ರಾಜ್ಯಗಳಲ್ಲೂ ಸಮಾನ ಅನುಪಾತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸುವ ಯೋಜನೆ ರೂಪಿಸಲಾಗಿದೆ. ಈ ಕ್ರಮವು ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳ ಪ್ರಾತಿನಿಧ್ಯಕ್ಕೆ ಸಂಬಂಧಿಸಿದ ಆತಂಕಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಮುಖ ಬೇಡಿಕೆಗೆ ಅನುಗುಣವಾಗಿದೆ ಎಂದು ಹೇಳಲಾಗಿದೆ.
ರಾಜಕೀಯ
Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಹಳ್ಳಿಗಳಲ್ಲಿನ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳಿಗಾಗಿ ಚಿಕ್ಕಚಿಕ್ಕ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಎಂದು ಕುಮಾರಸ್ವಾಮಿ ಟೀಕಿಸಿದರು. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳುತ್ತಾರೆ. ಆದರೆ, ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರಿಗೆ ಪ್ರತಿ ಪಂಚಾಯತ್‌ಗೆ 10 ಲಕ್ಷ ರೂ.ಗಳಂತೆ ಒಟ್ಟು 1,000 ಕೋಟಿ ರೂ. ನೀಡಲು ಯಾವ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಪ್ರಶ್ನಿಸಿದರು.
1,000 ಕೋಟಿ ರೂ. ನೀಡಲು ಯಾವ ಅಧಿಕಾರಿ ಸಲಹೆ ನೀಡಿದರು? ಅಷ್ಟು ಹಣವನ್ನು ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿದ್ದರೆ, ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸಿ ಅವರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
-
ನಿಧನ ವಾರ್ತೆ8 hours agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ನಿಧನ ವಾರ್ತೆ7 hours agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ7 hours agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
-
ನಿಧನ ವಾರ್ತೆ7 hours agoKankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
-
ಸ್ಥಳೀಯ8 hours agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ಅಂತರ ರಾಜ್ಯ7 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
-
ಅಂತರ ರಾಜ್ಯ7 hours agoWomen’s reservation-ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಕೇಂದ್ರ ಸಂಪುಟ ಅಸ್ತು; ಲೋಕಸಭೆ ಸ್ಥಾನಗಳ ಸಂಖ್ಯೆ ಶೇ.50 ಹೆಚ್ಚಳ?
-
ಸ್ಥಳೀಯ7 hours agoDharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ















