Connect with us

ಶಿಕ್ಷಣ

Ambika-ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ; ವಿದ್ಯಾರ್ಥಿಗಳ ಭವಿಷ್ಯಕ್ಕೆ ದ್ವಿತೀಯ ಪಿಯು ದಿಕ್ಸೂಚಿ: ಶಿವರಾಮ ಆಳ್ವ

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಪುತ್ತೂರು: ಪದವಿ ಪೂರ್ವ ದ್ವಿತೀಯ ವರ್ಷ ಎನ್ನುವುದು ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ದಿಕ್ಸೂಚಿಯಾಗಿದೆ. ಪಿಯುದಲ್ಲಿ ನಡೆಸಲ್ಪಡುವ ಸಿ.ಇ.ಟಿ.ಯಲ್ಲಿ ಉತ್ತಮ ಅಂಕ ಪಡೆದಲ್ಲಿ ವಿದ್ಯಾರ್ಥಿಗಳ ಮುಂದಿನ ಜೀವನ ಸುಗಮವಾಗುವುದು ಎಂದು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷ ಶಿವರಾಮ ಆಳ್ವ ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಅವರು ನಗರದ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವವಿದ್ಯಾಲಯದ ಶಿಕ್ಷಕ -ರಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪೋಷಕರು ಸದಾ ಮಕ್ಕಳ ಶೈಕ್ಷಣಿಕ ವಿಚಾರಗಳನ್ನು ಅರಿತುಕೊಂಡು ಸೂಕ್ತ ಮಾರ್ಗದರ್ಶನ, ಸಲಹೆ ಹಾಗೂ ಸೂಚನೆ ನೀಡುವುದು ಅಗತ್ಯ. ಅದೇ ರೀತಿ ಸಂಬಂಧಿತ ಶಿಕ್ಷಕರ ಜೊತೆಗೆ ಸಮಾಲೋಚನೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಅವಲೋಕನವನ್ನೂ ನಡೆಸಬೇಕು. ಆದ್ದರಿಂದ ಆಗಾಗ ವಿದ್ಯಾಲಕ್ಕೆ ಭೇಟಿ ನೀಡುವ ಪರಿಪಾಠ ರೂಢಿಸಿಕೊಳ್ಳಬೇಕು ಎಂದರು.

Ad Widget

Ad Widget <> Ad Widget

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ಅಂಬಿಕಾ ಸಂಸ್ಥೆಯ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆಯುತ್ತಿರುವುದು ಉತ್ತಮ ಸಾಧನೆ ಮೆರೆಯುತ್ತಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪ್ರೋತ್ಸಾಹ ಕೊಡುವುದು ಶಿಕ್ಷಣ ಸಂಸ್ಥೆಗಳ, ಆಡಳಿತ ಮಂಡಳಿಯ ಹೊಣೆಗಾರಿಕೆ. ಮಕ್ಕಳಿಗೆ ಸ್ವಾತಂತ್ರ‍್ಯ ನೀಡಬೇಕು ಆದರೆ ಅದರ ದುರುಪಯೋಗವಾಗದಂತೆ ಪೋಷಕರು ಜವಾಬ್ದಾರಿ ವಹಿಸಿಕೊಳ್ಳುವುದು ಅಗತ್ಯ ಎಂದರು.



Ad Widget

ಪ್ರಾಪಂಚಿಕ ಜ್ಞಾನಕ್ಕೆ ಆದ್ಯತೆ:

Ad Widget

Ad Widget

ತರಗತಿಗಳಲ್ಲಿ ಸ್ಮಾರ್ಟ್ ಬೋರ್ಡ್ ಅಳವಡಿಸಿ ಪ್ರಯೋಗಾತ್ಮಕ ತರಗತಿಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಪ್ರಾಪಂಚಿಕ ಜ್ಞಾನ ವೃದ್ಧಿಗೆ ವೈವಿಧ್ಯಮಯ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುತ್ತಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಹಾಗೂ ಅವರ ಚಟುವಟಿಕೆಯ ಕುರಿತು ಮಾಹಿತಿ ಪಡೆಯಲು ಪೋಷಕರು ಆಗಾಗ ವಿದ್ಯಾಲಯಕ್ಕೆ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಅರಿಯುವುದು ಅಗತ್ಯ. ಹಿರಿಯರಿಗೆ ದೇಶದ ಮೇಲೆ ಹೆಚ್ಚು ಋಣವಿದ್ದು ಮಕ್ಕಳನ್ನು ಉತ್ತಮ ನಾಗರೀಕರನ್ನಾಗಿ ಮಾಡುವ ಜವಾಬ್ದಾರಿಯಿದೆ. ಮಕ್ಕಳನ್ನು ಬ್ರಾಹ್ಮಿ ಮುಹೂರ್ತದಲ್ಲಿ ಏಳುವಂತೆ ಮಾಡಿ, ಅವರನ್ನು ಓದಲು ಪ್ರೋತ್ಸಾಹಿಸಿದಲ್ಲಿ ಹೆಚ್ಚು ಹೆಚ್ಚು ಸಾಧನೆ ಮಾಡಲು ಸಾಧ್ಯ ಎಂದರು.

ಕಾಲೇಜಿನ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ನಟ್ಟೋಜ ಫೌಂಡೇಶನ್ ಟ್ರಸ್ಟ್  ಕಾರ್ಯದರ್ಶಿ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಉಪ ಪ್ರಾಂಶುಪಾಲೆ ಶೈನಿ ಕೆ.ಜೆ., ಉಪನ್ಯಾಸಕರು, ಪೋಷಕರು ಉಪಸ್ಥಿತರಿದ್ದರು. ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಪೂರ್ಣ ನಿರೂಪಿಸಿದರು. ಪ್ರಯೋಗಾಲಯ ಸಹಾಯಕರಾದ ಮುರಳಿ ಮೋಹನ್ ಮತ್ತು ನಯನ್ ಸಹಕರಿಸಿದರು.

Ad Widget
Click to comment

Leave a Reply

ಶಿಕ್ಷಣ

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ಕನ್ನಡ ಭಾಷಾ ಕಾರ್ಯಾಗಾರ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಅ 7 ರಂದು ಭಾಷಣ ಕಲೆ, ಕವನ ರಚನೆ, ಕಥಾ ರಚನೆ, ಕಾರ್ಯಕ್ರಮ ನಿರೂಪಣೆ ಹಾಗೂ ಪತ್ರಿಕಾ ವರದಿಯ ಕುರಿತು ಕಾರ್ಯಾಗಾರವು ಕಾಲೇಜು ಸಭಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಸುಳ್ಯದ ಸಾಹಿತಿ ಹಾಗೂ ಡಿಜಿಟಲ್ ಆರ್ಟ್ ನ ಉದಯ ಭಾಸ್ಕರ್ ಮಾತನಾಡಿ, ಸಾಹಿತ್ಯವು ನಮ್ಮೊಳಗಿನಿಂದ ಅಭಿವ್ಯಕ್ತಿಗೊಳ್ಳುವ ಮಾಧ್ಯಮ. ಸಾಹಿತ್ಯ ಲೋಕದ ಬರಹಗಳು ಮನುಷ್ಯನ ಕಲ್ಪನೆ ಮತ್ತು ಚಿಂತನೆಗಳ ಫಲಶ್ರುತಿ. ಸಾಹಿತಿಗೆ ಮುಖ್ಯವಾಗಿ ಶಬ್ದ ಸಂಪತ್ತು ಇರಬೇಕು. ಓದುವ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಪ್ರತಿಯೊಂದು ಭಾಷೆಗೂ ಸಮಾನ ಗೌರವವನ್ನು ನೀಡುವುದು ಅತ್ಯಂತ ಅಗತ್ಯವಿದ್ದು, ವಿವಿಧ ಭಾಷೆಗಳನ್ನು ಕಲಿಯುವುದರಿಂದ ನಮ್ಮ ಯೋಚನಾ ಶಕ್ತಿ ವೃದ್ಧಿಸುತ್ತದೆ. ಕನ್ನಡ ಒಂದು ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಕನ್ನಡವನ್ನು ಕಲಿಯುವುದರ ಜೊತೆಗೆ, ಕನ್ನಡ ಭಾಷೆಯ ಅಭಿವೃದ್ಧಿಗೆ ನಿಮ್ಮ ಕೊಡುಗೆಗಳನ್ನು ನೀಡಬೇಕೆಂದು ತಿಳಿಸಿದರು.



Ad Widget

ವೇದಿಕೆಯಲ್ಲಿ ಕನ್ನಡ ಸಂಘದ ನಿರ್ದೇಶಕರಾದ ಉಷಾ ಎ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ವರ್ಗ  ಉಪಸ್ಥಿತರಿದ್ದರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಸಿಂಚನ ಸ್ವಾಗತಿಸಿ, ಗೌತಮ್ ವಂದಿಸಿ, ಗ್ರೀಷ್ಮ ಕಾರ್ಯಕ್ರಮ ನಿರೂಪಿಸಿದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಶಾಲಾ ರಕ್ಷಕ-ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.

Ad Widget

Ad Widget

Ad Widget

Ad Widget

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿಣಿ ಸಮಿತಿಯ ಸಭೆಯು ದಿನಾಂಕ 02-10-2026 ರಂದು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಶಿವಪ್ರಕಾಶ್ ಎಂ ಅವರ ಅಧ್ಯಕ್ಷತೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಭಾಸ್ಕರ ಬಲ್ಯಾಯರವರ ಉಪಸ್ಥಿತಿಯಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಸಭೆಯಲ್ಲಿ 2026-27 ನೇ ಶೈಕ್ಷಣಿಕ ಸಾಲಿನ ರಕ್ಷಕ- ಶಿಕ್ಷಕ ಸಂಘದ ಪದಾಧಿಕಾರಿಗಳಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು.

Ad Widget

Ad Widget <> Ad Widget

ಅಧ್ಯಕ್ಷರಾಗಿ ಹತ್ತನೆಯ ತರಗತಿಯ ವಿದ್ಯಾರ್ಥಿಯ ಪೋಷಕರದ ಪ್ರತಿಭಾರವರು ಆಯ್ಕೆಯಾದರು.



Ad Widget

ಉಪಾಧ್ಯಕ್ಷರುಗಳಾಗಿ ಚೇತನ, ರವೀಂದ್ರ, ವಿದ್ಯಾ ಅವರುಗಳು ಆಯ್ಕೆಯಾದರು.

Ad Widget

Ad Widget

2025-2026 ನೇ ಸಾಲಿನ ಅಧ್ಯಕ್ಷರಾದ ಭಾಸ್ಕರ ಬಲ್ಯಾಯ ಅವರು ನಿಯೋಜಿತ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಸಮರ್ಪಿಸಿ ಸಂಸ್ಥೆಯ ಶ್ರೇಯಾಭಿವೃದ್ಧಿಗೆ ಭರವಸೆಯ ಮಾತುಗಳನ್ನಾಡಿದರು.

ಸಭೆಯಲ್ಲಿ ಕಾರ್ಯಕಾರಿಣಿ ಸಮಿತಿಯ ಪ್ರತಿನಿಧಿಗಳು ಹಾಗೂ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Ad Widget
Continue Reading

ಶಿಕ್ಷಣ

Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Ad Widget

Ad Widget <> Ad Widget

ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.



Ad Widget

ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading