Connect with us

ಆರೋಗ್ಯ

ರಾಜಸ್ತಾನದಿಂದ ಬೆಂಗಳೂರಿಗೆ ರೈಲಿನಲ್ಲಿ ಮಾಂಸ ಪೂರೈಕೆ ವಿವಾದ : ಮೂರು ಪ್ರಯೋಗಾಲಯದಿಂದ ವರದಿ : ಈ ಮಾಂಸ ತಿನ್ನುವವರಿಗೆ ಲ್ಯಾಬ್ ಕೊಟ್ಟ ವಿಶೇಷ ಸೂಚನೆ ಏನೂ ಗೊತ್ತಾ..?

Published

on

Ad Widget

Ad Widget

Ad Widget

Ad Widget

ನಿಖರ ನ್ಯೂಸ್: ರಾಜಸ್ತಾನದ ಜೈಪುರದಿಂದ ರೈಲಿನಲ್ಲಿ ನಗರಕ್ಕೆ ಪೂರೈಕೆಯಾಗಿರುವುದು ನಾಯಿ ಮಾಂಸವಲ್ಲ, ಕುರಿ ಮಾಂಸ ಎಂಬುದು ಪ್ರಯೋಗಾಲಯದ ಎಲ್ಲಾ ವರದಿಗಳಲ್ಲಿ ದೃಢಪಟ್ಟಿದೆ. ಆದರೆ, ಶುಚಿತ್ವ ಹಾಗೂ ಗುಣಮಟ್ಟದ ಕುರಿತು ಹೊಸದಾಗಿ ಮೂರು ಪ್ರಯೋಗಾಲಯಗಳಿಂದ ವರದಿ ಪ್ರಕಟವಾಗಿದ್ದು, ಚೆನ್ನಾಗಿ ಬೇಯಿಸಿ ತಿನ್ನಲು ಸೂಚನೆ ನೀಡಲಾಗಿದೆ. ಈ ಬಗ್ಗೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಮಾಹಿತಿ ನೀಡಿದೆ.

Ad Widget

Ad Widget

Ad Widget

Ad Widget

ಜುಲೈ 26ರ ರಾತ್ರಿ ಜೈಪುರ – ಮೈಸೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ನಗರಕ್ಕೆ ಸುಮಾರು 4,500 ಕೆ.ಜಿ.ಯಷ್ಟು ಮಾಂಸ ತರಲಾಗಿತ್ತು. ಇದನ್ನು ಅಬ್ದುಲ್‌ ರಜಾಕ್‌ ಎಂಬುವವರು ತರಿಸಿದ್ದರು. ಜೈಪುರದಿಂದ ನಾಯಿ ಮಾಂಸ ತಂದು ಮಾರಾಟ ಮಾಡಲಾಗುತ್ತಿದೆ ಎಂದು ರಾಷ್ಟ್ರ ರಕ್ಷಣಾ ಪಡೆಯ ಕಾರ್ಯಕರ್ತರು ಆರೋಪಿಸಿದ್ದರು.

Ad Widget

Ad Widget alt="Ad Widget"/>

Ad Widget

ಈ ಹಿನ್ನೆಲೆಯಲ್ಲಿ ಮಾಂಸದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಹೈದರಾಬಾದ್‌ನ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ಐಸಿಎಆರ್‌) ಅಧೀನದಲ್ಲಿರುವ ರಾಷ್ಟ್ರೀಯ ಮಾಂಸ ಸಂಶೋಧನಾ ಸಂಸ್ಥೆಯ (ಎನ್‌ಎಂಆರ್‌ಐ) ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅಲ್ಲಿ ನಡೆಸಲಾದ ಪರೀಕ್ಷಾ ವರದಿಯಲ್ಲಿ ಜೈಪುರದಿಂದ ಪೂರೈಕೆಯಾಗಿರುವುದು ಕುರಿ ಮಾಂಸ ಎಂಬುದು ದೃಢಪಟ್ಟಿದೆ.

Ad Widget

Ad Widget <> Ad Widget

ಮೂರು ಪ್ರತ್ಯೇಕ ಲ್ಯಾಬ್‌ಗಳಲ್ಲಿ ವಿಶ್ಲೇಷಣೆ
ಮಾಂಸದ ಶುಚಿತ್ವ ಮತ್ತು ಅದರಲ್ಲಿನ ಬ್ಯಾಕ್ಟೀರಿಯಾ ಬೆಳವಣಿಗೆಗೆ ಸಂಬಂಧಿಸಿದಂತೆ ಎಫ್‌ಎಸ್‌ಎಸ್‌ಎಐ ಅಂಗೀಕೃತ, ಎನ್‌ಎಬಿಎಲ್‌ ಮಾನ್ಯತೆ ಹೊಂದಿದ 3 ಪ್ರತ್ಯೇಕ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿತ್ತು. ಮೂರು ವರದಿಯಲ್ಲೂ ಕುರಿ ಮಾಂಸವೆಂಬುದು ದೃಢಪಟ್ಟಿದೆ.

ಚೆನ್ನಾಗಿ ಬೇಯಿಸಿ
ಕುರಿ ಮಾಂಸ ಎಂದು ವರದಿ ನೀಡಿರುವ ಪ್ರಯೋಗಾಲಯಗಳು ಈ ಮಾಂಸ ಸೇವಿಸುವವರಿಗೆ ಮಹತ್ವದ ಮಾಹಿತಿ ನೀಡಿವೆ. ಮಾಂಸವನ್ನು ಚನ್ನಾಗಿ ಸ್ವಚ್ಛ ಮಾಡಿ, ಬೇಯಿಸಿ ಸೇವಿಸಬೇಕೆಂದು ವರದಿಯಲ್ಲಿ ಸಲಹೆಯನ್ನು ನೀಡಿವೆ.

Ad Widget

Ad Widget

ಬ್ಯಾಕ್ಟೀರಿಯಾ ಮಟ್ಟ ಹೆಚ್ಚಳ
ಎರಡು ಪ್ರಯೋಗಾಲಯಗಳ ವರದಿಗಳಲ್ಲಿ ಮಾಂಸದ ಮೈಕ್ರೋಬಯೋಲಾಜಿಕಲ್‌ ಪ್ಯಾರಾಮೀಟರ್‌ಗಳು ನಿರ್ದಿಷ್ಟಪಡಿಸಿದ ಮಾನದಂಡಗಳಿಗೆ ಅನುಗುಣವಾಗಿವೆ ಎಂದು ತಿಳಿಸಲಾಗಿದೆ. ಒಂದು ಪ್ರಯೋಗಾಲಯದ ವರದಿಯಲ್ಲಿಇಕೋಲಿ ಬ್ಯಾಕ್ಟೀರಿಯಾ ಮಟ್ಟವು ಎಫ್‌ಎಸ್‌ಎಸ್‌ಎಐಗೆ ನಿರ್ದಿಷ್ಟಪಡಿಸಿದ ಮಾನದಂಡಕ್ಕಿಂತ ಹೆಚ್ಚಿರುವುದು ಕಂಡುಬಂದಿದೆ. ಇತರೆ ಮೈಕ್ರೋಬಯೋಲಾಜಿಕಲ್‌ ಮಾನದಂಡಗಳು ನಿಗದಿತ ಮಾನದಂಡಗಳಿಗೆ ಅನುಗುಣವಾಗಿವೆ ಎಂದು ಉಲ್ಲೇಖಿಸಿವೆ ಎಂದು ಇಲಾಖೆ ತಿಳಿಸಿದೆ.

Ad Widget
Click to comment

Leave a Reply

ಆರೋಗ್ಯ

Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ

Published

on

Ad Widget

Ad Widget

Ad Widget

Ad Widget

ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್‌ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

Ad Widget

Ad Widget alt="Ad Widget"/>

Ad Widget

ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.

Ad Widget

Ad Widget <> Ad Widget

ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.

ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.

Ad Widget

Ad Widget

ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್‌ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.

ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.

ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.

Ad Widget
Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಆರೋಗ್ಯ

‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ

Published

on

Ad Widget

Ad Widget

Ad Widget

Ad Widget

35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.

Ad Widget

Ad Widget alt="Ad Widget"/>

Ad Widget

ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.

Ad Widget

Ad Widget <> Ad Widget

ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.

‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್‌ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.

Ad Widget

Ad Widget

ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!