ಪುತ್ತೂರು
ವಿದ್ಯಾಭಾರತಿ ದ.ಕ ಜಿಲ್ಲಾಮಟ್ಟದ ಈಜುಸ್ಪರ್ಧೆ : ಪುತ್ತೂರು ಅಕ್ವಾಟಿಕ್ ಕ್ಲಬ್ ಗೆ ಒಟ್ಟು 37 ಪದಕ – ರಾಜ್ಯಮಟ್ಟಕ್ಕೆ ಆಯ್ಕೆ
ಜಿಲ್ಲಾ ಮಟ್ಟದ ವಿದ್ಯಾಭಾರತಿ ಒಕ್ಕೂಟದ ಈಜು ಸ್ಪರ್ಧೆಯಲ್ಲಿ ಪುತ್ತೂರಿನ ವಿವಿಧ ವಿದ್ಯಾಭಾರತಿ ವಿದ್ಯಾಸಂಸ್ಥೆಗಳನ್ನು ಪ್ರತಿನಿಧಿಸುವ ಪುತ್ತೂರು ಅಕ್ವಾಟಿಕ್ ಕ್ಲಬ್‌ನ 14 ಈಜುಗಾರರು ಆಗಸ್ಟ್ 8 ರಂದು ಮಂಗಳೂರಿನ ಶಕ್ತಿ ವಸತಿ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ವಿದ್ಯಾಭಾರತಿ ಈಜು ಸ್ಪರ್ಧೆಯಲ್ಲಿ 37 ಪದಕಗಳನ್ನು ಗೆಲ್ಲುವ ಮೂಲಕ ಸಾಧನೆ ಮೆರೆದು ರಾಜ್ಯ ಮಟ್ಟದ ಈಜು ಸ್ಪರ್ಧೆಗೆ ಅರ್ಹತೆ ಪಡೆದರು.
ಪುತ್ತೂರು ಅಕ್ವಾಟಿಕ್ ಕ್ಲಬ್ ನ ಈಜುಪಟುಗಳು 23 ಚಿನ್ನ, 10 ಬೆಳ್ಳಿ ಮತ್ತು 4 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ.
ಪುತ್ತೂರಿನ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ 6ನೇ ತರಗತಿಯ ವಿದ್ಯಾರ್ಥಿ ಪ್ರತ್ಯೂಷ್ ಎಲ್‌ಎಸ್ ಗೌಡ 50 ಮೀಟರ್ ಬ್ಯಾಕ್‌ಸ್ಟ್ರೋಕ್‌ನಲ್ಲಿ 1 ಚಿನ್ನದ ಪದಕ.50 ಮೀಟರ್ ಫ್ರೀಸ್ಟೈಲ್ ಮತ್ತು 50 ಮೀಟರ್ ಬಟರ್‌ಫ್ಲೈನಲ್ಲಿ 2 ಬೆಳ್ಳಿ ಪದಕಗಳು.
ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ 6 ನೇ ತರಗತಿಯ ವಿದ್ಯಾರ್ಥಿ ದೀಪಾಂಶ್ ಶೆಟ್ಟಿ 4*100 ಮೀಟರ್ ಫ್ರೀಸ್ಟೈಲ್ ರಿಲೇಯಲ್ಲಿ ತಂಡದ ಸಹ ಆಟಗಾರರಾದ ಲಾಲನ್ ಯು.ನಾಯ್ಕ್ , ಅನಿತೇಜ್ ಎಂ.ಎಸ್ ಮತ್ತು ಪ್ರತ್ಯುಷ್ ಎಲ್.ಎಸ್.ಗೌಡ ಅವರೊಂದಿಗೆ ಚಿನ್ನದ ಪದಕವನ್ನು ಗೆದ್ದಿದ್ದಾರೆ .
ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ 8ನೇ ತರಗತಿಯ ವಿದ್ಯಾರ್ಥಿ ಮೆಹೇಕ್ ರವಿ ಕೊಠಾರಿ 100 ಮೀ ಬ್ಯಾಕ್‌ಸ್ಟ್ರೋಕ್‌ನಲ್ಲಿ 1 ಚಿನ್ನದ ಪದಕ ಮತ್ತು
50 ಮೀಟರ್ ಬ್ಯಾಕ್‌ಸ್ಟ್ರೋಕ್ ಮತ್ತು 50 ಮೀಟರ್ ಬ್ರೆಸ್ಟ್ ಸ್ಟ್ರೋಕ್‌ನಲ್ಲಿ 2 ಕಂಚಿನ ಪದಕಗಳು.
ವಿವೇಕಾನಂದ ಸಿಬಿಎಸ್‌ಇ ಯ 8ನೇ ವಿದ್ಯಾರ್ಥಿನಿ ಲಾಸ್ಯ ಕಿಶನ್ 50 ಮೀಟರ್ ಬ್ಯಾಕ್‌ಸ್ಟ್ರೋಕ್, 50 ಮೀಟರ್ ಫ್ರೀಸ್ಟೈಲ್ ಮತ್ತು 50 ಮೀಟರ್ ಬ್ರೆಸ್ಟ್ ಸ್ಟ್ರೋಕ್‌ನಲ್ಲಿ 3 ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.
ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ 8 ನೇ ತರಗತಿಯ ವಿದ್ಯಾರ್ಥಿ ಅನಿತೇಜ್ ಎಂಎಸ್ 50 ಮೀಟರ್ ಬ್ಯಾಕ್‌ಸ್ಟ್ರೋಕ್‌ನಲ್ಲಿ 1 ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.
ಅಂಬಿಕಾ ವಿದ್ಯಾಲಯದ 10ನೇ ತರಗತಿಯ ವಿದ್ಯಾರ್ಥಿ ವರ್ಧಿನ್ ಡಿ.ರೈ 50 ಮೀಟರ್ ಬಟರ್‌ಫ್ಲೈ, 50 ಮೀಟರ್ ಬ್ರೆಸ್ಟ್‌ಸ್ಟ್ರೋಕ್ ಮತ್ತು 100 ಮೀಟರ್ ಬ್ರೆಸ್ಟ್‌ಸ್ಟ್ರೋಕ್‌ನಲ್ಲಿ 3 ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.
ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅನಿಕೇತ್ ಎನ್. 200 ಮೀಟರ್ ಬ್ಯಾಕ್‌ಸ್ಟ್ರೋಕ್‌ನಲ್ಲಿ 2 ಚಿನ್ನ, 200 ಮೀಟರ್ ವೈಯಕ್ತಿಕ ಮೆಡ್ಲೆ ಮತ್ತು 100 ಮೀಟರ್ ಬ್ಯಾಕ್‌ಸ್ಟ್ರೋಕ್‌ನಲ್ಲಿ 1 ಬೆಳ್ಳಿ ಪದಕ ಗೆದ್ದಿದ್ದಾರೆ.
ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಧನ್ವಿತ್ 50, 100 ಮತ್ತು 200 ಮೀಟರ್ ಫ್ರೀಸ್ಟೈಲ್‌ನಲ್ಲಿ 3 ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಲಿಕಿತ್ ರಾಮಚಂದ್ರ 100 ಮತ್ತು 200 ಮೀಟರ್ಸ್ ಬ್ರೆಸ್ಟ್ ಸ್ಟ್ರೋಕ್‌ನಲ್ಲಿ 2 ಚಿನ್ನದ ಪದಕ ಗೆದ್ದಿದ್ದಾರೆ. 50 ಮೀಟರ್ಸ್ ಬ್ರೆಸ್ಟ್ ಸ್ಟ್ರೋಕ್ ನಲ್ಲಿ 1 ಬೆಳ್ಳಿ ಪದಕ.
ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ, 50, 100, 200 ಮೀಟರ್ ಬ್ರೆಸ್ಟ್ ಸ್ಟ್ರೋಕ್ ಮತ್ತು 4*100 ಮೆಡ್ಲೆ ರಿಲೇಯಲ್ಲಿ 4 ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.
ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದ 6ನೇ ತರಗತಿಯ ವಿದ್ಯಾರ್ಥಿನಿ ಸಾನ್ವಿ ಸಿ ಹೆಚ್ 50 ಮೀಟರ್ ಫ್ರೀಸ್ಟೈಲ್, 50 ಬ್ಯಾಕ್ ಸ್ಟ್ರೋಕ್ ಮತ್ತು 100 ಫ್ರೀಸ್ಟೈಲ್ ನಲ್ಲಿ 3 ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ.
ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ 8ನೇ ವಿದ್ಯಾರ್ಥಿ ಲಾಲನ್ ಯು.ನಾಯಕ್ 50 ಮೀಟರ್ ಬ್ಯಾಕ್‌ಸ್ಟ್ರೋಕ್‌ನಲ್ಲಿ ಕಂಚು ಮತ್ತು 100 ಮೀಟರ್ ಫ್ರೀಸ್ಟೈಲ್‌ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.
ವಿವೇಕಾನಂದ ಮಧ್ಯಮ ಶಾಲೆಯ 8ನೇ ವಿದ್ಯಾರ್ಥಿ ನಮನ್ ನಾಯಕ್ ಬಿ 50 ಮೀಟರ್ ಬಟರ್ ಫ್ಲೈ, 50 ಮೀಟರ್ ಫ್ರೀಸ್ಟೈಲ್ ಹಾಗೂ 100 ಮೀಟರ್ ಫ್ರೀಸ್ಟೈಲ್ ನಲ್ಲಿ 3 ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.
ನಮನ್ ನಾಯಕ್, ಲಿಕಿತ್ ರಾಮಚಂದ್ರ ಅವರನ್ನೊಳಗೊಂಡ ತಂಡ 4*100 ಮೀಟರ್ಸ್ ಫ್ರೀಸ್ಟೈಲ್ ರಿಲೇಯಲ್ಲಿ ಕಂಚಿನ ಪದಕ ಗೆದ್ದುಕೊಂಡಿತು.
50 ಮೀಟರ್ ಬ್ಯಾಕ್‌ಸ್ಟ್ರೋಕ್‌ನಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಅನನ್ಯಾ ಎ ಬೆಳ್ಳಿ ಪದಕ ಪಡೆದರು.
ಈ ಎಲ್ಲಾ ಈಜುಗಾರರು ತರಬೇತುದಾರರಾದ ಪಾರ್ಥ ವಾರಣಾಶಿ, ದೀಕ್ಷಿತ್, ನಿರೂಪ್ ವಿಕಾಸ್ ಮತ್ತು ತ್ರಿಶೂಲ್ ಅವರ ಅಡಿಯಲ್ಲಿ ಡಾ.ಶಿವರಾಮ ಕಾರಂತ ಬಾಲವನ ಈಜುಕೊಳ ಪುತ್ತೂರು ಮತ್ತು ಸೇಂಟ್ ಅಲೋಶಿಯಸ್ ಈಜುಕೊಳ ಮಂಗಳೂರಿನಲ್ಲಿ ತರಬೇತಿ ಪಡೆದಿರುತ್ತಾರೆ.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಶಿಕ್ಷಣ
Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.
ಕಾರ್ಯಕ್ರಮಗಳು
Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.
-
ಮಂಗಳೂರು19 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಅಂತರ ರಾಜ್ಯ19 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ಕಾರ್ಯಕ್ರಮಗಳು20 hours agoPuttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
-
ದಕ್ಷಿಣ ಕನ್ನಡ14 hours ago
Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ
-
ಶಿಕ್ಷಣ18 hours agoPuttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
-
Uncategorized20 hours agoPhilomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ
-
ಶಿಕ್ಷಣ20 hours agoPhilomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ
-
ಮಂಗಳೂರು14 hours ago
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ















