ಆರೋಗ್ಯ
Information-ನಾವು ಸತ್ತ ಮೇಲೂ ಈ ಭಾಗಗಳಲ್ಲಿ ಮಾತ್ರ ಜೀವ ಇರುತ್ತಂತೆ…! ಈ ಇಂಟ್ರೆಸ್ಟಿಂಗ್ ಮಾಹಿತಿ ಕೇಳಿದ್ರೆ ನೀವೂ ಬೆಚ್ಚಿ ಬೀಳ್ತೀರಾ….!!!
ಒಬ್ಬ ವ್ಯಕ್ತಿ ಸತ್ತಾಗ, ಅವನ ನಿರ್ಜೀವ ದೇಹವನ್ನು ಸಾಮಾನ್ಯವಾಗಿ ಸುಡಲಾಗುತ್ತದೆ ಅಥವಾ ಹೂಳಲಾಗುತ್ತದೆ. ಆದರೆ ಮಾನವನ ಮರಣದ ನಂತರವೂ ಗಂಟೆಗಳ ಕಾಲ ಬದುಕುವ ಕೆಲವು ಅಂಗಗಳಿವೆ. ವ್ಯಕ್ತಿಯ ನಿಧನದ ನಂತರ ಅವನ ಕಣ್ಣುಗಳು, ಮೂತ್ರಪಿಂಡಗಳು, ಹೃದಯಗಳು ಮತ್ತು ಯಕೃತ್ತುಗಳನ್ನು ಕಸಿ ಮಾಡಲಾಗುತ್ತದೆ.
ನಿಖರ ನ್ಯೂಸ್:- ಮನುಷ್ಯನ ಬದುಕೇ ಒಂದು ರೀತಿಯ ವಿಚಿತ್ರವಾದ ಸಂಶೋಧನೆ. ಆತ ಸತ್ತ ನಂತರ ಏನಾಗುತ್ತಾನೆ, ಎಲ್ಲಿಗೆ ಹೋಗುತ್ತಾನೆ, ಆತ್ಮ ಅಂದ್ರೆ ಏನು…? ಹೀಗೆ ಸಾಲು ಸಾಲು ಉತ್ತರ ಅರಿಯದ ಪ್ರಶ್ನೆಗಳು ಮಾತ್ರ ಅದೇ ಮನುಷ್ಯನ ತಲೆಯಲ್ಲಿ ಕುತೂಹಲಕಾರಿಯಾಗಿಯೇ ಉಳಿದುಬಿಟ್ಟಿದೆ. ಮನಃಶಾಸ್ತ್ರ ಈ ಬಗ್ಗೆ ಎಷ್ಟೇ ವ್ಯಾಖ್ಯಾನಗಳನ್ನು ನೀಡಿದರೂ ಕೂಡಾ ಪ್ರಾಯೋಗಾತ್ಮಕ ಸಿದ್ಧಾಂತದ ರೂಪುರೇಷೆ ಯಾರಿಗೂ ತಿಳಿದಿಲ್ಲ. ಮಾನವ ಜೀವನವು ವಿಜ್ಞಾನದ ಅದ್ಭುತ ಅಧ್ಯಯನವಾಗಿದೆ. ಸತ್ತ ಮೇಲೂ ಕೆಲ ಹೊತ್ತು ಮಾನವನ ಈ ದೇಹದ ಭಾಗಗಳಲ್ಲಿ ಜೀವ ಇರುವುದನ್ನು ಕೇಳಿದರೆ ನಿಮಗೆ ಶಾಕ್ ಆಗಬಹುದು. ಆದರೆ ಇದು ನಿಜ.

ಒಬ್ಬ ವ್ಯಕ್ತಿ ಸತ್ತಾಗ ಆತನ ಈ ದೇಹದ ಭಾಗಗಳು ಜೀವ ಇರುತ್ತದೆಯಂತೆ…!
ಒಬ್ಬ ವ್ಯಕ್ತಿ ಸತ್ತಾಗ, ಅವನ ನಿರ್ಜೀವ ದೇಹವನ್ನು ಸಾಮಾನ್ಯವಾಗಿ ಸುಡಲಾಗುತ್ತದೆ ಅಥವಾ ಹೂಳಲಾಗುತ್ತದೆ. ಆದರೆ ಮಾನವನ ಮರಣದ ನಂತರವೂ ಗಂಟೆಗಳ ಕಾಲ ಬದುಕುವ ಕೆಲವು ಅಂಗಗಳಿವೆ. ಹಾಗಾದ್ರೆ ಸತ್ತ ನಂತರವು ಕೆಲ ಹೊತ್ತು ಜೀವ ಇರುವ ಭಾಗಗಳು ಯಾವುವು ಅಂತೀರಾ? ಮಾನವ ದೇಹದಲ್ಲಿ ಕೆಲವು ಅಂಗಗಳಿವೆ, ಅದು ಸತ್ತ ನಂತರವೂ ವರ್ಷಗಳವರೆಗೆ ಕಾರ್ಯನಿರ್ವಹಿಸುತ್ತದೆ. ಮಾನವ ದೇಹದ ಆ ವಿಶೇಷ ಅಂಗದ ಸಾಮರ್ಥ್ಯದ ಬಗ್ಗೆ ಅರಿತುಕೊಳ್ಳುವುದು ಮುಖ್ಯವಾಗಿದೆ.
ಮರಣದ ನಂತರವೂ ಕಣ್ಣುಗಳು ಬದುಕುತ್ತವೆ:
ಒಬ್ಬ ವ್ಯಕ್ತಿಯು ಸತ್ತಾಗ, ಅವನ ದೇಹದ ಅನೇಕ ಭಾಗಗಳು ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಶ್ವಾಸ ಕೂಡಾ ಉಸಿರಾಡುವುದನ್ನು ನಿಲ್ಲಿಸಿಬಿಡುತ್ತದೆ. ಒಬ್ಬ ವ್ಯಕ್ತಿಯ ಹೃದಯ ಬಡಿತ ನಿಂತ ತಕ್ಷಣ ಆತನ ಮೆದುಳಿಗೆ ಆಮ್ಲಜನಕದ ಪೂರೈಕೆಯೂ ನಿಲ್ಲುತ್ತದೆ. ಜೀವಂತವಾಗಿ ಉಳಿಯುವುದು ಕೆಲವು ಅಂಗಗಳು ಮಾತ್ರ. ಅದರಲ್ಲಿ ಕಣ್ಣುಗಳು ಕೂಡ ಒಂದಾಗಿದೆ. ಮಾನವನ ಕಣ್ಣು ಸತ್ತ ನಂತರ 6 ರಿಂದ 8 ಗಂಟೆಗಳವರೆಗೆ ಜೀವಂತವಾಗಿರುತ್ತದೆ. ಆದರೆ ಒಬ್ಬ ವ್ಯಕ್ತಿಯು ತನ್ನ ನೇತ್ರವನ್ನು ದಾನ ಮಾಡಿದ್ದರೆ, ಆತ ಸತ್ತ 6 ಗಂಟೆಗಳ ಒಳಗೆ ಅವನ ಕಣ್ಣನ್ನು ತೆಗೆಯಬೇಕು.
ಮೂತ್ರಪಿಂಡ, ಹೃದಯ ಮತ್ತು ಯಕೃತ್ ಗಳು…
ವ್ಯಕ್ತಿಯ ನಿಧನದ ನಂತರ, ಅವನ ಕಣ್ಣುಗಳನ್ನು ಹೊರತುಪಡಿಸಿ, ಮೂತ್ರಪಿಂಡಗಳು, ಹೃದಯಗಳು ಮತ್ತು ಯಕೃತ್ತುಗಳನ್ನು ಕಸಿ ಮಾಡಲಾಗುತ್ತದೆ. ಸಾವಿನ ನಂತರ ಈ ಅಂಗಗಳ ಜೀವಕೋಶಗಳು ಕಾರ್ಯನಿರ್ವಹಿಸುವುದನ್ನು ಮುಂದುವರೆಸುತ್ತವೆ. ಉದಾಹರಣೆಗೆ, ವ್ಯಕ್ತಿಯ ಹೃದಯವನ್ನು ಮರಣದ 4 ರಿಂದ 6 ಗಂಟೆಗಳ ನಂತರ ಇನ್ನೊಬ್ಬ ರೋಗಿಯ ದೇಹಕ್ಕೆ ಸ್ಥಳಾಂತರಿಸಲಾಗುತ್ತದೆ. ಕಸಿ ಮಾಡುವುದು ಅನ್ನೋದು ಇದಕ್ಕೇನೇ. ಮಾನವನ ಮೂತ್ರಪಿಂಡವು 72 ಗಂಟೆಗಳ ಕಾಲ ಮತ್ತು ಯಕೃತ್ತು 8 ರಿಂದ 12 ಗಂಟೆಗಳವರೆಗೆ ಜೀವಂತವಾಗಿರುತ್ತದೆ.
- ಇನ್ನು ಇದರ ಜೊತೆಗೆ ಸಂಶೋಧನೆಯ ಪ್ರಕಾರ ವ್ಯಕ್ತಿಯ ಸಾವಿನ ನಂತರ ಆತನ ಚರ್ಮಗಳು ಮತ್ತು ಮೂಳೆಗಳನ್ನು ಸುಮಾರು ಐದು ವರ್ಷಗಳವರೆಗೆ ಉಳಿಸಬಹುದು ಎನ್ನಲಾಗುತ್ತದೆ.
ಈ ಬಗ್ಗೆ ಮಧುರೈ ಆಸ್ಪತ್ರೆಯ ನೀಲಕಣ್ಣನ್ ಅವರು ಏನ್ ಹೇಳ್ತಾರೆ ಗೊತ್ತಾ..?

ಈ ಬಗ್ಗೆ ಮಧುರೈ ಅಪೋಲೋ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೀಲಕಣ್ಣನ್ ಪಿ ಅವರು ಒಂದಷ್ಟು ಮಾಹಿತಿ ಹಂಚಿಕೊಂಡಿದ್ದಾರೆ. ಅಂಗಾಂಗ ದಾನದ ಬಗ್ಗೆ ವಿವರಿಸುತ್ತಾ, `ದೇಹದ ಯಾವ ಅಂಗಗಳನ್ನು ದಾನ ಮಾಡಬಹುದು. ಯಾವ ಅಂಗಗಳು ದಾನಕ್ಕೆ ಅರ್ಹವಾಗಿವೆ ಎಂದು ಸಲಹೆ ಕೂಡ ನೀಡಿದ್ದಾರೆ. ಇನ್ನೂ ಈ ಪಟ್ಟಿಯಲ್ಲಿ ಕಣ್ಣುಗಳು, ಶ್ವಾಸಕೋಶಗಳು, ಯಕೃತ್ತು, ಮೂತ್ರಪಿಂಡಗಳು ಮತ್ತು ಚರ್ಮವು ಒಂದು ದೇಹದಿಂದ ಇನ್ನೊಂದಕ್ಕೆ ಕಸಿ ಮಾಡಬಹುದಾದ ಅಂಗಗಳನ್ನು ಒಳಗೊಂಡಿದೆ. ಕಸಿ ಮಾಡಬಹುದಾದ ಅಂಗಗಳು ಒಬ್ಬ ವ್ಯಕ್ತಿ ಸತ್ತ ನಂತರವೂ ಆತನ ದೇಹದಲ್ಲಿ ಜೀವಂತವಾಗಿರುತ್ತದೆ ಎಂದು ಹೇಳಬಹುದು’ ಎಂದಿದ್ದಾರೆ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
ಮಂಗಳೂರು11 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ16 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ16 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು18 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
Uncategorized9 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ10 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ12 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ರಾಜಕೀಯ17 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ


















