ಅಪರಾಧ
Vitla-ವಿಟ್ಲ : ಅಪ್ರಾಪ್ತ ಬಾಲಕಿಗೆ ಅನ್ಯಕೋಮಿನ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ
ವಿಟ್ಲ : ಇಲ್ಲಿನ ಕುದ್ದುಪದವು ಎಂಬಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ತನ್ನ ಅಂಗಡಿಗೆ ಬಂದಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ವೆಸಗಿದ ಘಟನೆ ನಡೆದಿದೆ.
ವಿಟ್ಲ ಕುದ್ದುಪದವು ಸಮೀಪದಲ್ಲಿರುವ ಅಂಗಡಿಯೊಂದಕ್ಕೆ ಬಾಲಕಿ ತೆರಳಿದ್ದ ವೇಳೆ ಅಂಗಡಿಯ ಮಾಲಕ ಅಶ್ರಫ್ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಈ ಹಿಂದೆ ಆರೋಪಿ ಅಶ್ರಫ್ (40 ವ) ಎಂಬಾತ ತನ್ನ ಅಂಗಡಿಯಲ್ಲಿ 3 ಹೆಣ್ಣು ಮಕ್ಕಳಿಗೆ ದೌರ್ಜನ್ಯ ನಡೆಸಿದ್ದ. ಇದರ ಸಿಸಿ ಟಿವಿ ಫೂಟೇಜ್ ಪೊಲೀಸರಿಗೆ ಲಭಿಸಿದೆ.
ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಯೋಜಕ ನರಸಿಂಹ ಮಾಣಿ ಎಲ್ಲಾ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ತಕ್ಷಣ ಬಂಧಿಸಿ ಹಿಂದಿನ ಪ್ರಕರಣಗಳಿಗೂ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿದ್ದಾರೆ.
ಅಪರಾಧ
Arrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೃತ ಯುವಕನ ಸ್ನೇಹಿತ, ಉತ್ತರ ಪ್ರದೇಶ ಮೂಲದ ಶ್ರವಣ್ ಎಂಬಾತನನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.
ಮಂಗಳೂರು: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.
ಮೃತ ಯುವಕನ ಸ್ನೇಹಿತ, ಉತ್ತರ ಪ್ರದೇಶ ಮೂಲದ ಶ್ರವಣ್ ಎಂಬಾತನನ್ನು ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ.
ಉತ್ತರ ಪ್ರದೇಶ ಮೂಲದ ಮನೀಶ್ ಶರ್ಮಾ (25) ಎಂಬ ಯುವಕನನ್ನು ಆತನ ಸ್ನೇಹಿತ ಶ್ರವಣ್ ಕೊಲೆ ಮಾಡಿ ಬಳಿಕ ತನ್ನ ಊರಾದ ಉತ್ತರ ಪ್ರದೇಶದ ಖುಷಿನಗರಕ್ಕೆ ಪರಾರಿಯಾಗಿದ್ದ ಎನ್ನಲಾಗಿದೆ. ಪ್ರಕರಣವನ್ನು ವ್ಯವಸ್ಥಿತ ಕೊಲೆ ಎಂದು ಶಂಕಿಸಿ ಮೃತನ ಸಹೋದರ ಸೋನು ಶರ್ಮಾ ನೀಡಿದ ದೂರಿನ ಆಧಾರದ ಮೇಲೆ ತನಿಖೆ ಕೈಗೊಂಡ ಬಜಪೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸಾಲದ ಇಎಂಐ ಕಟ್ಟಲು ಕೊಲೆ?
ಆರೋಪಿಗೆ ಸಾಲದ ಇಎಂಐ ಪಾವತಿಸಲು ಹಣದ ಅವಶ್ಯಕತೆ ಇದ್ದು, ಸ್ನೇಹಿತ ಮನೀಶ್ ಬಳಿ ಹಣವಿರುವುದನ್ನು ತಿಳಿದುಕೊಂಡಿದ್ದ ಎನ್ನಲಾಗಿದೆ. ಅಲ್ಲದೆ, ಮನೀಶ್ನ ಮೊಬೈಲ್ ಪಾಸ್ವರ್ಡ್ಗಳನ್ನು ಮೊದಲೇ ತಿಳಿದುಕೊಂಡಿದ್ದ ಶ್ರವಣ್, ಹಣ ಪಡೆಯುವ ಉದ್ದೇಶದಿಂದ ಆತನನ್ನು ಉಪಾಯವಾಗಿ ಊಟಕ್ಕೆಂದು ಕರೆದುಕೊಂಡು ಹೋಗಿದ್ದಾನೆ. ಬಳಿಕ ಕಬ್ಬಿಣದ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿ, ನಿರ್ಜನ ಪ್ರದೇಶದಲ್ಲಿ ಮೃತದೇಹವನ್ನು ಬಿಸಾಡಿದ್ದಾಗಿ ಪೊಲೀಸ್ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಖಾತೆಯಿಂದ ₹63,720 ವರ್ಗಾವಣೆ
ಕೊಲೆ ಬಳಿಕ ಮನೀಶ್ನ ಬ್ಯಾಂಕ್ ಖಾತೆಯಲ್ಲಿದ್ದ ₹63,720 ಹಣವನ್ನು ರಾಜನ್ ಎಂಬ ವ್ಯಕ್ತಿಯ ಖಾತೆಗೆ ವರ್ಗಾಯಿಸಿ, ಬಳಿಕ ರಾಜನ್ ಮೂಲಕ ತನ್ನ ಖಾತೆಗೆ ಹಣ ಪಡೆದುಕೊಂಡಿದ್ದ ಎನ್ನಲಾಗಿದೆ. ಈ ಹಣ ವರ್ಗಾವಣೆಯ ಸುಳಿವು ಪ್ರಕರಣದ ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಿದೆ.
ಸಿಸಿಟಿವಿ ದೃಶ್ಯಗಳಿಂದ ಸುಳಿವು
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಅ.27ರಂದು ಮನೀಶ್ ಮತ್ತು ಶ್ರವಣ್ ಒಟ್ಟಿಗೆ ತೆರಳಿರುವುದು ಹಾಗೂ ಬಳಿಕ ಶ್ರವಣ್ ಒಬ್ಬನೇ ವಾಪಸ್ ಬಂದಿರುವುದು ಕಂಡುಬಂದಿತ್ತು. ಈ ಸುಳಿವುಗಳ ಆಧಾರದ ಮೇಲೆ ತನಿಖೆ ಮುಂದುವರಿದಿತ್ತು.
ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಪರಿಶೀಲಿಸಿದ ಪೊಲೀಸರಿಗೆ ಅಸ್ಥಿಪಂಜರದ ತುಂಡುಗಳು ಹಾಗೂ ತಲೆಬುರುಡೆಯ ಅವಶೇಷಗಳು ಪತ್ತೆಯಾಗಿದ್ದವು. ಸ್ಥಳದಲ್ಲಿ ದೊರೆತ ಶರ್ಟ್ ಮತ್ತು ಪ್ಯಾಂಟ್ಗಳನ್ನು ಮೃತನ ಸಹೋದರ ಸೋನು ಶರ್ಮಾ ಗುರುತಿಸಿದ್ದರು.
ಆರೋಪಿಯನ್ನು ಉತ್ತರ ಪ್ರದೇಶದಿಂದ ಬಂಧಿಸಿ ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.
ಅಂತರ ರಾಜ್ಯ
Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಅಗರ್ತಲಾ: ಬರೋಬ್ಬರಿ 14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಬಾಜು ಎಂದು ಗುರುತಿಸಲಾಗಿರುವ ಆರೋಪಿಯನ್ನು ಗುರುವಾರ ಬಂಧಿಸಿ ಅಗರ್ತಲಾಗೆ ಕರೆತರಲಾಗಿದೆ. ಬಳಿಕ ಪಶ್ಚಿಮ ತ್ರಿಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ನಾಲ್ಕು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಏನಿದು 14 ವರ್ಷಗಳ ಹಿಂದಿನ ಪ್ರಕರಣ?
ಅಗರ್ತಲಾದ ಭಾಟಿ ಅಭಯನಗರ ನಿವಾಸಿ ಆಶಿಶ್ ಸೋಮ್ (40) ಎಂಬ ಶಾಲಾ ಶಿಕ್ಷಕರು 2011ರ ಮೇ 28ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಮರದ ವ್ಯಾಪಾರದಲ್ಲಿಯೂ ತೊಡಗಿಸಿಕೊಂಡಿದ್ದ ಅವರು, ವ್ಯವಹಾರದ ನಿಮಿತ್ತ ಕಾಂಚನ್ಪುರಕ್ಕೆ ತೆರಳಿದ ಬಳಿಕ ಮನೆಗೆ ವಾಪಸಾಗಿರಲಿಲ್ಲ.
ಶಿಕ್ಷಕರು ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರನ್ನು ಅಪಹರಿಸಿರುವುದಾಗಿ ಹೇಳಿಕೊಂಡು ಕುಟುಂಬಸ್ಥರಿಗೆ ದೂರವಾಣಿ ಕರೆಗಳು ಬಂದಿದ್ದವು. ಅಪಹರಣಕಾರರು ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಿಧ ಹಂತಗಳಲ್ಲಿ ಸುಮಾರು ₹25 ಲಕ್ಷ ಹಣವನ್ನು ನೀಡಿದ್ದಾರೆ. ಆದರೆ ಹಣ ಪಡೆದ ಬಳಿಕವೂ ಶಿಕ್ಷಕರನ್ನು ಬಿಡುಗಡೆ ಮಾಡಿರಲಿಲ್ಲ. ಹಲವು ವರ್ಷಗಳ ಕಾಲ ಅವರ ಸುಳಿವು ಕೂಡ ಪತ್ತೆಯಾಗಿರಲಿಲ್ಲ.
ಸಮಾಧಿಗಳಲ್ಲಿ ಪತ್ತೆಯಾದ ಅಸ್ಥಿಪಂಜರದಿಂದ ತನಿಖೆಗೆ ವೇಗ
ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ತನಿಖೆಯ ವೇಳೆ ಶಿಕ್ಷಕ ಆಶಿಶ್ ಸೋಮ್ ಅವರ ವ್ಯಾಪಾರ ಪಾಲುದಾರ ಎನ್ನಲಾದ ಹೊಸೈನ್ ಅಹ್ಮದ್ ಕೂಡ ಅಪಹರಣ ಪ್ರಕರಣದ ಶಂಕಿತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಬಂಧಿತ ಬಾಜುವನ್ನು ವಿಚಾರಣೆ ನಡೆಸಲಾಗುತ್ತಿದ್ದು, ಆತ ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.
ಇದೇ ವರ್ಷದ ಸೆಪ್ಟೆಂಬರ್ 16ರಂದು ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಸೋನ್ಸಿಲ್ ಪ್ರದೇಶದ ಸ್ಮಶಾನವೊಂದರ ಮೂರು ಸಮಾಧಿಗಳಿಂದ ಅಪರಿಚಿತ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಈ ಬೆಳವಣಿಗೆ ಪ್ರಕರಣದ ತನಿಖೆಗೆ ಹೊಸ ವೇಗ ನೀಡಿದೆ.
ಪತ್ತೆಯಾದ ಅಸ್ಥಿಪಂಜರದ ಅವಶೇಷಗಳು ನಾಪತ್ತೆಯಾಗಿರುವ ಆಶಿಶ್ ಸೋಮ್ ಅವರದ್ದೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಅವರ ಕುಟುಂಬ ಸದಸ್ಯರ ಡಿಎನ್ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಡಿಎನ್ಎ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಅದರ ಬಳಿಕ ಪ್ರಕರಣದ ಹಲವು ನಿಗೂಢ ಸಂಗತಿಗಳು ಬಯಲಾಗುವ ನಿರೀಕ್ಷೆಯಿದೆ.
ಸ್ಥಳೀಯ
Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು
ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.
ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.
ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.
ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.
-
ಸ್ಥಳೀಯ13 hours agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಬಿಗ್ ನ್ಯೂಸ್12 hours agoRailway-ರೈಲ್ವೆ ಗುಂಪು ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಬರ್ತ್ಗಳ ಸಂಖ್ಯೆಗೆ ಮಿತಿ ರದ್ದು, ಬೆಳಗ್ಗೆ 9ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ..!
-
ಶಿಕ್ಷಣ6 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಬಿಗ್ ನ್ಯೂಸ್8 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಮಂಗಳೂರು6 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಕಾರ್ಯಕ್ರಮಗಳು7 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ6 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ14 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ















