Connect with us

ಮಂಗಳೂರು

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆ ಕನಸ್ಸಿಗೆ ಬಹು ದೊಡ್ಡ ಆಘಾತ ನೀಡಿದ ಅಧಿವೇಶನದಲ್ಲಿ ಸಚಿವರು ನೀಡಿದ ಉತ್ತರ

Published

on



Ad Widget

Ad Widget

Ad Widget

Ad Widget

ಪ್ರಶ್ನೆಗೆ ಉತ್ತರಿಸಿದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸುಮಾರು 610ಕೊಟಿ ಅನಾವರ್ತಕ ವೆಚ್ಚ ಹಾಗೂ 60 ಕೋಟಿ ಅವರ್ತಕ ವೆಚ್ಚ ಅವಶ್ಯಕತೆ ಇದ್ದು, ಅನುದಾನದ ಲಭ್ಯತೆಯ ಆಧಾರದಲ್ಲಿ ಜಿಲ್ಲೆಯಲ್ಲಿ ಕಾಲೇಜು ಪ್ರಾರಂಭಿಸಲು ಪರಿಶೀಲಿಸಲಾಗುವುದು. ಪುತ್ತೂರು ತಾಲೂಕಿನಲ್ಲಿ ಸದ್ಯ ಕಾಲೇಜು ಸ್ಥಾಪನೆಯ ಪ್ರಸ್ತಾವನೆ ಸರ್ಕಾರದ ಹಂತದಲ್ಲಿ ಇಲ್ಲ ಎಂದು ಶಾಕಿಂಗ್ ಉತ್ತರ ನೀಡಿದ್ದಾರೆ.

Ad Widget

Ad Widget

Ad Widget

Ad Widget


ಪುತ್ತೂರು: ಈ ಬಾರಿಯ ರಾಜ್ಯ ವಿಧಾನ ಸಭಾ ಅಧಿವೇಶನದಲ್ಲಿ ಪುತ್ತೂರಿನ ಜನತೆಗೆ ಶಾಕಿಂಗ್ ನ್ಯೂಸ್ ದೊರೆತಿದೆ. ಪುತ್ತೂರಿನ ಜನತೆಯ ಬಹುದಿನದ ಬೇಡಿಕೆಯಾದ, ಸದ್ಯ ಅಭಿಯಾನದ ರೂಪ ಪಡೆದಿರುವ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಕನಸ್ಸಿಗೆ ದೊಡ್ಡ ಆಘಾತವಾಗಿದೆ. ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜ್ ಆರಂಭಿಸುವ ಪ್ರಸ್ತಾವನೆ ಸರ್ಕಾರದ ಹಂತದಲ್ಲಿ ಇರುವುದಿಲ್ಲ ಎಂದು ಸರಕಾರ ಈ ಅಧಿವೇಶನದಲ್ಲಿ ಘಂಟಾಘೋಷವಾಗಿ ಸಾರಿದೆ. ಈ ಸುದ್ದಿ ಪುತ್ತೂರಿನ ಜನತೆಯನ್ನು ನಿರಾಶೆಗೆ ದೂಡಿದೆ. ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಮುಗಿಲು ಮುಟ್ಟಿದೆ.

Ad Widget

Ad Widget

Ad Widget alt="Ad Widget"/>

Ad Widget

ಮುಂದಿನ ಬಜೆಟ್ ಅಧಿವೇಶನದಲ್ಲಿ , ಮೆಡಿಕಲ್ ಕಾಲೇಜ್ ಗೆ ಸಿದ್ದರಾಮಯ್ಯ ಸರಕಾರ ಅನುದಾನ ಇಡಲಿದೆ ಎಂದು ಇತ್ತೀಚೆಗಷ್ಟೆ ಶಾಸಕ ಅಶೋಕ್ ರೈಯವರು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೇ ಅವರ ವಿಶ್ವಾಸಕ್ಕೆ ಧಕ್ಕೆ ಉಂಟಾಗುವಂತಹ ತ್ತೆ ಈ ಬಾರಿ ಅಧಿವೇಶನದಲ್ಲಿ ಅವರಿಗೆ ಸಿಕ್ಕಿದೆ. ಅಶೋಕ್ ರೈಯವರು ಜುಲೈನಲ್ಲಿ ನಡೆದ ಮುಂಗಾರು ಅಧಿವೇಶನದಲ್ಲಿ ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ವಿಚಾರ ಪ್ರಸ್ತುತ ಯಾವ ಹಂತದಲ್ಲಿದೆ? ಎಂದು ಪ್ರಶ್ನಿಸಿದರು. ಅಲ್ಲದೆ ಕಾಲೇಜು ಸ್ಥಾಪನೆಯ ಬಗ್ಗೆ ಜಿಲ್ಲಾಧಿಕಾರಿಗಳು 40 ಎಕ್ರೆ ಜಾಗ ಗುರುತಿಸಿದ್ದು, ವರದಿ ತಯಾರಿಸಿ ಪ್ರಸ್ತಾವನೆ ಸಲ್ಲಿಸಿರುವ ವಿಚಾರವು ಪ್ರಶ್ನೆಯ ಅಂಗವಾಗಿ ಪ್ರಸ್ತಾಪಿಸಿದ್ದರು.

Ad Widget

Ad Widget <> Ad Widget

ಪ್ರಶ್ನೆಗೆ ಉತ್ತರಿಸಿದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸುಮಾರು 610ಕೊಟಿ ಅನಾವರ್ತಕ ವೆಚ್ಚ ಹಾಗೂ 60 ಕೋಟಿ ಅವರ್ತಕ ವೆಚ್ಚ ಅವಶ್ಯಕತೆ ಇದ್ದು, ಅನುದಾನದ ಲಭ್ಯತೆಯ ಆಧಾರದಲ್ಲಿ ಜಿಲ್ಲೆಯಲ್ಲಿ ಕಾಲೇಜು ಪ್ರಾರಂಭಿಸಲು ಪರಿಶೀಲಿಸಲಾಗುವುದು. ಪುತ್ತೂರು ತಾಲೂಕಿನಲ್ಲಿ ಸದ್ಯ ಕಾಲೇಜು ಸ್ಥಾಪನೆಯ ಪ್ರಸ್ತಾವನೆ ಸರ್ಕಾರದ ಹಂತದಲ್ಲಿ ಇಲ್ಲ ಎಂದು ಶಾಕಿಂಗ್ ಉತ್ತರ ನೀಡಿದ್ದಾರೆ.



Ad Widget

ಅಶೋಕ್ ರೈವರು ಅಧಿಕಾರ ಸ್ವೀಕರಿಸಿದ 2 ವಾರದ ಬಳಿಕ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಬೇಟಿ ನೀಡಿದ್ದು ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿ, “ಮೆಡಿಕಲ್ ಕಾಲೇಜು ಪ್ರಸ್ತಾವನೆ ಕಡತ ತಾಲೂಕು ಆಡಳಿತದಲ್ಲೆ ಧೂಳು ತಿನ್ನುತ್ತಾ ಬಿದ್ದುಕೊಂಡಿತ್ತು. ಹಿಂದಿನ ಶಾಸಕರು ಇದನ್ನು ಮೇಲಿನ ಹಂತಕ್ಕೆ ತೆಗೆದುಕೊಂಡು ಹೋಗುವ ಕಾರ್ಯವನ್ನು ಮಾಡಿಲ್ಲ ಎಂದು ಆರೋಪಿಸಿದ್ದರು. ಅಲ್ಲದೇ, ತಾವು ಜಿಲ್ಲಾಧಿಕಾರಿಗಳ ಮೂಲಕ ಕಡತವನ್ನು ತಯಾರಿಸಿ ಆರೋಗ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಒಂದು ವಾರದ ಅವಧಿಯಲ್ಲಿ ನೀಡುವ ಕೆಲಸವನ್ನು ಮಾಡಿರುವುದಾಗಿ ಹೇಳಿಕೊಂಡಿದ್ದರು.

Ad Widget

Ad Widget

ಇಷ್ಟಾದ ಬಳಿಕವು ಸರಕಾರ ಹಳೇ ರಾಗವನ್ನು ಹಾಡುತ್ತಿರುವುದು, ಸುಳ್ಯ, ಕಡಬ, ಪುತ್ತೂರು ಹಾಗೂ ಬೆಳ್ತಂಗಡಿ ಜನರ ನಿದ್ದೆಗೆಡಿಸಿದೆ. ಮೆಡಿಕಲ್ ಕಾಲೇಜ್ ಅನ್ನು ರಾಜಕೀಯ ಪಕ್ಷಗಳು ಹಾಗು ಜನಪ್ರತಿನಿಧಿಗಳು ಕೇವಲ ಪ್ರಚಾರದ ವಸ್ತುವನ್ನಾಗಿಸಿಕೊಂಡಿದ್ದಾರೆ ಹೊರತು ಯಾವುದೇ ಇಚ್ಚಾಶಕ್ತಿ ಹೊಂದಿಲ್ಲ ಎನ್ನುವ ಆಕ್ರೋಶದ ಮಾತುಗಳು ಸದ್ಯ ಸಾರ್ವಜನಿಕ ವಲಯದಲ್ಲಿ ಮೂಡಿದೆ.

ಅಲ್ಲದೇ ಸದ್ಯ ಜಿಲ್ಲೆಯ ಸಾವಿರಾರು ಜನರು ವಾಟ್ಸ್ಯಾಫ್ ಗ್ರೂಪುಗಳನ್ನು ರಚಿಸಿಕೊಂಡು, ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜ್ ಬೇಕೇಂದು ಒತ್ತಾಯಿಸಿದ್ದಾರೆ. ಆ ಗ್ರೂಪುಗಳಲ್ಲೂ ಸರಕಾರದ ಉತ್ತರದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ . ಇನ್ನೂ ಶಾಸಕ ಅಶೋಕ್‌ ರೈವರು ಪುತ್ತೂರಿನಲ್ಲಿ ಮೆಡಿಕಲ್‌ ಕಾಲೇಜ್‌ ಸ್ಥಾಪಿಸುವ ವಿಚಾರವನ್ನು ಪದೇ ಪದೇ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಸ್ತಾಪಿಸಿದ್ದರು. ಮುಂದಿನ ಬಜೆಟ್ ನಲ್ಲಿ ಮೆಡಿಕಲ್ ಕಾಲೇಜಿಗೆ ಅಗತ್ಯ ಅನುದಾನ ಬಿಡುಗಡೆಯಾಗದಿದ್ದರೇ ಪುತ್ತೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಿ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹಾಕಲಾಗುವುದು ಎಂದಿದ್ದರು
.

Ad Widget
Click to comment

Leave a Reply

ಮಂಗಳೂರು

Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ

Published

on



Ad Widget

Ad Widget

Ad Widget

Ad Widget

ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.

Ad Widget

Ad Widget <> Ad Widget

ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Continue Reading

ಅಪರಾಧ

Digital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ

Published

on



Ad Widget

Ad Widget

Ad Widget

Ad Widget

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಬೆದರಿಕೆ ಹಾಕಿ 75 ವರ್ಷದ ಮಹಿಳೆಯೊಬ್ಬರಿಂದ ಸೈಬರ್‌ ಖದೀಮರು ಬರೋಬ್ಬರಿ ₹2 ಕೋಟಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತರು ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡಿದ್ದು, ಈ ಕುರಿತು ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಮಹಿಳೆಗೆ ಕರೆ ಮಾಡಿ ತಾನು ಮುಂಬೈನ ಕೊಲಾಬಾ ಪೊಲೀಸ್‌ ಅಧಿಕಾರಿ ಸಂದೀಪ್‌ ರಾವ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ನರೇಶ್‌ ಗೋಯಲ್‌ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳಸಾಗಣೆ ಸೇರಿದಂತೆ ಹಲವು ಅಪರಾಧಗಳಲ್ಲಿ ನೀವು ಭಾಗಿಯಾಗಿದ್ದೀರಿ. ಈ ಸಂಬಂಧ ಮುಂಬೈ ಕೊಲಾಬಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿ ಭಯ ಹುಟ್ಟಿಸಿದ್ದಾನೆ.

Ad Widget

Ad Widget <> Ad Widget

ಬಳಿಕ ಮತ್ತೊಂದು ಮೊಬೈಲ್‌ ಸಂಖ್ಯೆಯಿಂದ ವಾಟ್ಸ್‌ಆ್ಯಪ್‌ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್‌ ಪವಾರ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿ ನೀವು ಭಾಗಿಯಾಗಿದ್ದೀರಿ. ‘ನ್ಯಾಷನಲ್‌ ಸೀಕ್ರೆಸಿ ಆ್ಯಕ್ಟ್‌’ ಪಾಲಿಸಬೇಕು ಎಂದು ಹೇಳಿ ಮಹಿಳೆಯನ್ನು ಮತ್ತಷ್ಟು ಹೆದರಿಸಿದ್ದಾನೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರವನ್ನು ಯಾರಿಗೂ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾನೆ.



Ad Widget

ನಂತರ ಮಹಿಳೆಯ ಆಸ್ತಿ ಹಾಗೂ ಬ್ಯಾಂಕ್‌ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆನ್ಸ್ ನೀಡುವುದಾಗಿ ಆರೋಪಿಗಳು ನಂಬಿಸಿದ್ದಾರೆ. ಈ ನೆಪದಲ್ಲಿ ಬ್ಯಾಂಕ್‌ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.

Ad Widget

Ad Widget

ಆರೋಪಿಗಳ ಮಾತು ನಂಬಿದ ಮಹಿಳೆ, ಅವರ ಸೂಚನೆಯಂತೆ ₹60 ಲಕ್ಷವನ್ನು ಹಾಗೂ ಅ.3ರಂದು ₹1.40 ಕೋಟಿ ಹಣವನ್ನು ಆರ್‌ಟಿಜಿಎಸ್‌ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ₹2 ಕೋಟಿ ಹಣ ವರ್ಗಾಯಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ‘ಡಿಜಿಟಲ್ ಅರೆಸ್ಟ್’ ಸೇರಿದಂತೆ ವಿವಿಧ ರೀತಿಯ ಸೈಬರ್‌ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಪೊಲೀಸ್‌ ಅಥವಾ ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಬೆದರಿಸಿ, ಹಣ ವರ್ಗಾಯಿಸುವಂತೆ ಒತ್ತಡ ಹೇರುವುದು ವಂಚಕರ ಸಾಮಾನ್ಯ ತಂತ್ರವಾಗಿದೆ.

ಸೈಬರ್‌ ವಂಚನೆಗೆ ಒಳಗಾದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವುದು ಅತ್ಯಂತ ಮುಖ್ಯ. ವಂಚನೆಯಾದ ಕೂಡಲೇ ‘ಗೋಲ್ಡನ್ ಅವರ್’ನಲ್ಲಿ ದೂರು ನೀಡಿದರೆ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ವಂಚಿತ ಹಣವನ್ನು ಫ್ರೀಜ್‌ ಮಾಡಲು ಪೊಲೀಸರು ಪ್ರಯತ್ನಿಸಬಹುದು. ದೂರು ನೀಡಲು ವಿಳಂಬವಾದಷ್ಟೂ ಹಣವನ್ನು ಮರಳಿ ಪಡೆಯುವುದು ಕಷ್ಟವಾಗುವ ಸಾಧ್ಯತೆ ಇದೆ.

Ad Widget
Continue Reading

ಮಂಗಳೂರು

Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್‌ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ

Published

on



Ad Widget

Ad Widget

Ad Widget

Ad Widget

ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.

Ad Widget

Ad Widget <> Ad Widget

ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್‌ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.



Ad Widget

ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading