ಸಾಮಾಜಿಕ ಮಾಧ್ಯಮ
Sullia-ಸುಳ್ಯ: ಬಾಂಧವ್ಯ ಗೆಳೆಯರ ಬಳಗದಿಂದ ಕಾಡಿನ ದಾರಿ ಸ್ವಚ್ಛತೆ; 2 ಲೋಡ್ ಪಿಕ್‌ಅಪ್ ತ್ಯಾಜ್ಯ ಸಂಗ್ರಹ; ಸಿಸಿಟಿವಿ ಅಳವಡಿಕೆ
ಸುಳ್ಯದ ಗುತ್ತಿಗಾರು ಗ್ರಾಮದ ಕಮಿಲದ ಬಾಂಧವ್ಯ ಗೆಳೆಯರ ಬಳಗವು ಭಾನುವಾರ ಬಳ್ಪ-ಕಮಿಲ ರಸ್ತೆಯ ಸುಮಾರು 2 ಕಿಮೀ ಕಾಡಿನ ನಡುವೆ ಹಾದು ಹೋಗುವ ರಸ್ತೆಯ ಇಕ್ಕೆಲೆಗಳಲ್ಲಿ ಸ್ವಚ್ಛತೆಯನ್ನು ಮಾಡಿದರು. ಕಾಡು-ಪರಿಸರ ಸಂರಕ್ಷಣೆ, ಸ್ವಚ್ಛತೆಯ ಉದ್ದೇಶದಿಂದ ಕೆಲಸಕ್ಕೆ ಇಳಿದ ಯುವಕರಿಗೆ ಕಾಡಿನ ದಾರಿಯಲ್ಲಿ ದೊರೆತದ್ದು 2 ಲೋಡ್ ಪಿಕ್‌ಅಪ್‌ನಲ್ಲಿ ತುಂಬುವಷ್ಟು ತ್ಯಾಜ್ಯ. ಯುವಕರು ಅರಣ್ಯದ ಕಾಳಜಿಯ ಉದ್ದೇಶದಿಂದ ಕಸ ಎಸೆಯುವವರ ಪತ್ತೆಗೆ, ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಜಾಗೃತಿ ಫಲಕ ಹಾಗೂ ಸಿಸಿಟಿವಿ ಅಳವಡಿಕೆಮಾಡಿದ್ದಾರೆ.
ಸುಳ್ಯದ ಗುತ್ತಿಗಾರು ಗ್ರಾಮದ ಕಮಿಲದ ಬಾಂಧವ್ಯ ಗೆಳೆಯರ ಬಳಗವು ಭಾನುವಾರ ಬಳ್ಪ-ಕಮಿಲ ರಸ್ತೆಯ ಸುಮಾರು 2 ಕಿಮೀ ಕಾಡಿನ ನಡುವೆ ಹಾದು ಹೋಗುವ ರಸ್ತೆಯ ಇಕ್ಕೆಲೆಗಳಲ್ಲಿ ಸ್ವಚ್ಛತೆಯನ್ನು ಮಾಡಿದರು. ಕಾಡು-ಪರಿಸರ ಸಂರಕ್ಷಣೆ, ಸ್ವಚ್ಛತೆಯ ಉದ್ದೇಶದಿಂದ ಕೆಲಸಕ್ಕೆ ಇಳಿದ ಯುವಕರಿಗೆ ಕಾಡಿನ ದಾರಿಯಲ್ಲಿ ದೊರೆತದ್ದು 2 ಲೋಡ್ ಪಿಕ್‌ಅಪ್‌ನಲ್ಲಿ ತುಂಬುವಷ್ಟು ತ್ಯಾಜ್ಯ. ಇನ್ನೂ ಇದೆ. ಇದು ಒಂದು ದಿನ ಕೆಲಸ.

ಕಮಿಲದ ಬಾಂಧವ್ಯ ಗೆಳೆಯರ ಬಳಗವು ಅರಣ್ಯದ ಕಾಳಜಿಯ ಉದ್ದೇಶದೊಂದಿಗೆ ಆರಂಭದಲ್ಲಿ ಕಾಡಿನ ದಾರಿಯಲ್ಲಿ ಸ್ವಚ್ಛತೆ ಹಾಗೂ ಜಾಗೃತಿ ಫಲಕದ ಕಾರ್ಯಕ್ಕೆ ಮುಂದಾದರು. ಕಾಡಿನ ನಡುವೆ ಹಾದು ಹೋಗುವ ರಸ್ತೆಯ ಇಕ್ಕೆಲೆಗಳಲ್ಲಿ ಸ್ವಚ್ಛತೆಯನ್ನು ಮಾಡಿದರು. ಅದರ ಜೊತೆಗೇ ಜಾಗೃತಿ ಫಲಕಗಳನ್ನು ಅಳವಡಿಕೆ ಮಾಡಿದರು. ಅರಣ್ಯ ಇಲಾಖೆ ಕೂಡಾ ಸಹಯೋಗ ನೀಡಿ ಸಿಸಿಟಿವಿ ಅಳವಡಿಕೆ ಮಾಡಿ ಕಸ ಎಸೆಯುವವರ ಪತ್ತೆ ಮಾಡುವ ಹಂತಕ್ಕೂ ಈ ಕೆಲಸ ಬಂದಿದೆ. ಇಲಾಖೆಯೂ ಬಹಳ ಆಸಕ್ತಿಯಿಂದ ಯುವಕರ ತಂಡಕ್ಕೆ ಸಹಕಾರ ನೀಡಿದೆ.

ಮುಂದೆ ಯುವಕರ ತಂಡವು ವೀಕ್ಷಣೆ ಮಾಡುತ್ತದೆ, ತ್ಯಾಜ್ಯ ಎಸೆಯುವವರನ್ನು ಸಿಸಿಟಿವಿಯಲ್ಲಿ ಮಾತ್ರವೇ ಅಲ್ಲ, ಯಾರೇ ಆಗಲಿ ತ್ಯಾಜ್ಯ ಎಸೆಯುವವರನ್ನು ಕಂಡರೆ ತಕ್ಷಣವೇ ಫೋಟೋ ಸಹಿತ ಇಲಾಖೆಗಳಿಗೆ ಮಾಹಿತಿ ನೀಡುವ ಬಗ್ಗೆಯೂ ಯುವಕರು ನಿರ್ಧರಿಸಿದ್ದಾರೆ. ಕಾಡಿನಲ್ಲಿ ಕಸ ಎಸೆದು ಹೋಗುವುದು ಈಚೆಗೆ ಹೆಚ್ಚಾಗಿದೆ. ಬಾಟಲಿಗಳು, ಪ್ಲಾಸ್ಟಿಕ್ ಗಳು, ಸಿಮೆಂಟ್ ತ್ಯಾಜ್ಯಗಳನ್ನು ಕಾಡಿನ ರಸ್ತೆ ಬದಿ ಎಸೆದು ಹೋಗುವುದು ಕಂಡುಬರುತ್ತಿದೆ. ಈ ಬಗ್ಗೆ ಎಚ್ಚರಿಸಿದರೂ ಮತ್ತೆ ಕಾಡಿನಲ್ಲಿ ಕಸದ ರಾಶಿ ಕಂಡುಬರುತ್ತದೆ. ಇದಕ್ಕಾಗಿ ಯುವಕರ ಈ ತಂಡವು ಜಾಗೃತವಾಗಿದೆ.

ಇದರ ಜೊತೆಗೆ ಕಾಡಿನ ರಸ್ತೆಯ ಬದಿಯಲ್ಲಿ ವಿಷಪೂರಿತ ಹಾವುಗಳನ್ನೂ ಬಿಡದಂತೆ ಮನವಿಯನ್ನೂ ಮಾಡಿದ್ದರು ಯುವಕರು, ಇದಕ್ಕಾಗಿ ಈ ಫಲಕವೂ ಇದೇ ವೇಳೆ ಅಳವಡಿಕೆ ಮಾಡಲಾಯಿತು. ರಸ್ತೆ ಬದಿ ತ್ಯಾಜ್ಯ ಎಸೆದರೆ ಅದು ನೀರಿಗೆ ಸೇರಿ ಅದೇ ನೀರನ್ನು ಸ್ಥಳೀಯರು ಕುಡಿಯಬೇಕಾದ ಪರಿಸ್ಥಿತಿ ಇರುತ್ತದೆ. ಅಷ್ಟೇ ಅಲ್ಲ ಕಾಡುಪ್ರಾಣಿಗಳೂ ಈ ಪ್ಲಾಸ್ಟಿಕ್‌ಗಳನ್ನು ತಿಂದು ಸಂಕಷ್ಟ ಉಂಟಾಗುವ ಸಾಧ್ಯತೆಯೂ ಇದೆ. ಈ ಎಲ್ಲಾ ಕಾರಣಗಳಿಂದ ಯುವಕರ ತಂಡವು ಮಾದರಿ ಕಾರ್ಯ ಮಾಡಿದೆ.

ಕಾಡು ಉಳಿಯಬೇಕು, ಪರಿಸರ ಸೌಂದರ್ಯ ಆಸ್ವಾದಿಸಬೇಕು ಎಂದು ಬಯಸುವ ಎಲ್ಲರೂ ಕಮಿಲದ ಬಾಂಧವ್ಯ ಗೆಳೆಯರ ಬಳಗದ ಕಾರ್ಯವನ್ನು ಶ್ಲಾಘಿಸಿದ್ದಾರೆ. ಇದೇ ಮಾದರಿ ಎಲ್ಲಾ ಕಡೆಯೂ ಕಾಡು ರಸ್ತೆಯಲ್ಲಿ ತ್ಯಾಜ್ಯ ಎಸೆಯದಂತೆ ಯುವಕರ ತಂಡವು ಎಚ್ಚರಿಸಿ ವಹಿಸಿ ಜಾಗೃತಿ ಮೂಡಿಸುವ ಕೆಲಸ ನಡೆಸಬೇಕಿದೆ. ಈ ಮೂಲಕವೂ ಪರಿಸರ ಪ್ರೀತಿಯನ್ನು, ಪರಿಸರ ಉಳಿವನ್ನು ಮಾಡಲು ಸಾಧ್ಯವಿದೆ.
ಈ ಸಂದರ್ಭ ಪ್ರಮುಖರಾದ ತಾಪಂ ಮಾಜಿ ಸದಸ್ಯ ಅಶೋಕ್ ನೆಕ್ರಾಜೆ, ಗ್ರಾಪಂ ಸದಸ್ಯರುಗಳಾದ ಲತಾ ಆಜಡ್ಕ, ಭರತ್ ಕಮಿಲ, ಗುತ್ತಿಗಾರು ಪ್ರಾಥಮಿಕ ಸಹಕಾರಿ ಸಂಘದ ನಿರ್ದೇಶಕ ಜಯಪ್ರಕಾಶ್ ಮೊಗ್ರ, ಪ್ರಮುಖರಾದ ರಾಧಾಕೃಷ್ಣ ತುಪ್ಪದಮನೆ, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳಾದ ಸಂತೋಷ್ , ಧರ್ಣಪ್ಪ, ಭರಮಪ್ಪ, ಧನಂಜಯ , ಗಣೇಶ್ ಹೆಗ್ಡೆ ಇದ್ದರು. ಬಾಂಧವ್ಯ ಗೆಳೆಯರ ಬಳಗದ ಅಧ್ಯಕ್ಷ ತುಂಗನಾಥ ಕಾಯನಕೋಡಿ, ಕಾರ್ಯದರ್ಶಿ ಹರ್ಷಿತ್ ಕಾಂತಿಲ, ಸದಸ್ಯರುಗಳಾದ ಚೇತನ್ ಕಾಂತಿಲ, ಪವನ್ ಕಾಂತಿಲ, ನಿತ್ಯಾನಂದ ಅಂಬೆಕಲ್ಲು ಕಮಿಲ, ವಿನಯಚಂದ್ರ ಕಾಂತಿಲ, ಉದಯಕುಮಾರ್ ಕಾಂತಿಲ, ಭರತ್ ಕಾಂತಿಲ, ಕುಸುಮಾಧರ ಕಾಂತಿಲ, ತನ್ವಿತ್ , ನಿರಂಜನ ಕಾಂತಿಲ, ಪ್ರಣಾಮ್, ಜಯಪ್ರಕಾಶ್ ಕಾಂತಿಲ, ವೆಂಕಟ್ರಮಣ ಮೊದಲಾದವರಿದ್ದರು.
ಕಾಡಿನ ದಾರಿಯಲ್ಲಿ ಎಲ್ಲೆಂದರಲ್ಲಿ ಕಸ ಎಸೆದು ಹೋಗುತ್ತಾರೆ. ಅದರ ಜೊತೆಗೆ ವಿಷಪೂರಿತ ಹಾವುಗಳನ್ನು ರಸ್ತೆ ಬದಿಯೇ ಬಿಟ್ಟು ಹೋಗುತ್ತಾರೆ, ರಸ್ತೆಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಎಲ್ಲರೂ ನಡೆದಾಡುವ ಪ್ರದೇಶ ಇದು. ಹೀಗಾಗಿ ರಸ್ತೆ ಬದಿ ವಿಷಪೂರಿತ ಹಾವುಗಳನ್ನು ಬಿಡುವುದು, ಕಸ ಎಸೆಯುವುದು ಮಾಡಬಾರದು. ಪರಿಸರ ಸ್ವಚ್ಛತೆಯ ಕಾರ್ಯವನ್ನು ಮಾಡಿದ್ದೇವೆ. ಮುಂದೆ ಈ ಪ್ರದೇಶದಲ್ಲಿ ನಮ್ಮ ಯುವಕರೂ ತ್ಯಾಜ್ಯ ಎಸೆಯುವುದರ ಬಗ್ಗೆ ಗಮನಿಸುತ್ತಾರೆ ಎಂದು ಹೇಳುತ್ತಾರೆ ಬಾಂಧವ್ಯ ಗೆಳೆಯರ ಬಳಗದ ಅಧ್ಯಕ್ಷ ತುಂಗನಾಥ ಕಾಯನಕೋಡಿ.
ಸಾಮಾಜಿಕ ಮಾಧ್ಯಮ
ನೀವು ಕಳ್ಳರ ಜೊತೆಗಾದರೂ ಇರಿ. ಯಾರ ಜೊತೆಗಾದರೂ ಇರಿ. ಆದರೆ, ಸತ್ಯದ ಪರವಾಗಿ ಇರಿ: ಎಲೆಕ್ಟ್ರಾನಿಕ್ ಮೀಡಿಯಾದವರಿಗೆ ಸಿಎಂ ಕರೆ : ಯುಟ್ಯೂಬ್ ಚಾನಲ್ ಗಳ ಆರಂಭಕ್ಕೆ ಪರವಾನಗಿ ನಿಗಧಿ ಮಾಡುವ ಬಗ್ಗೆ ಪರಿಶೀಲನೆ – ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ ಸೆ 15: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.
ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.
ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.
ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು.
ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ ಸರ್ಕಾರ ಸದಾ ಸಿದ್ದ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದರು.
ಸಂಘದ ಬೇಡಿಕೆ
ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಸಿನೆಮಾ
Kiara Advani War 2 bikini look: ಕಿಯಾರಾ ಬಿಕಿನಿ ಕಿಡಿ – ಎಲ್ಲರ ಕಣ್ಣು ಅಲ್ಲೇ! ‘ವಾರ್ 2’ ಟೀಸರ್‌ನಿಂದ ಇಂಟರ್ನೆಟ್‌ನಲ್ಲಿ ಅಲ್ಲೋಲ ಕಲ್ಲೋಲ

ವಾರ್ 2′ ಟೀಸರ್‌ನಲ್ಲಿ ಕಿಯಾರಾ ಅಡ್ವಾಣಿಯವರ ಚಿನ್ನದ ಬಿಕಿನಿ ಲುಕ್ ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅವರ ಕೇವಲ ಎರಡು ಸೆಕೆಂಡ್‌ಗಳ ಹಾಟ್ ದೃಶ್ಯವು ಎಲ್ಲೆಡೆ ಭಾರಿ ಚರ್ಚೆಗೆ ಕಾರಣವಾಗಿದೆ.
Kiara Advani War 2 bikini look ಬಾಲಿವುಡ್‌ನ ಬ್ಯೂಟಿ ಕ್ವೀನ್ ಕಿಯಾರಾ ಅಡ್ವಾಣಿ ಇದೀಗ ಇಂಟರ್ನೆಟ್‌ನಲ್ಲಿ ಅಕ್ಷರಶಃ ಬೆಂಕಿ ಹಚ್ಚಿದ್ದಾರೆ! “ವಾರ್ 2” ಚಿತ್ರದ ಟೀಸರ್‌ನಲ್ಲಿ ಅವರು ತೊಟ್ಟ ಚಿನ್ನದ ಬಿಕಿನಿ ಇದೀಗ ನ್ಯಾಷನಲ್ ಹಾಟ್ ಟಾಪಿಕ್. ಜೂನಿಯರ್ ಎನ್‌ಟಿಆರ್ ಹುಟ್ಟುಹಬ್ಬದ ಗಿಫ್ಟ್ ಆಗಿ ರಿಲೀಸ್ ಆದ ಈ ಟೀಸರ್‌ನಲ್ಲಿ ಹೃತಿಕ್ ರೋಷನ್‌ರವರ ಮೈ ಜುಮ್ಮೆನ್ನಿಸೋ ಆಕ್ಷನ್ ಸೀಕ್ವೆನ್ಸ್‌ಗಳಿವೆ, ನಿಜ. ಆದರೆ, ಎಲ್ಲರ ಕಣ್ಣು, ಮನಸ್ಸು ಕದ್ದಿದ್ದು ಮಾತ್ರ ಕಿಯಾರಾ ಅವರ ಹಾಟ್ ಅವತಾರ!
ಬರೀ ಎರಡೇ ಎರಡು ಸೆಕೆಂಡುಗಳ ಕಾಲ ಕಡಲತೀರದಲ್ಲಿ, ಚಿನ್ನದ ಬಿಕಿನಿಯಲ್ಲಿ ಕಂಗೊಳಿಸಿರುವ ಕಿಯಾರಾ, ತಮ್ಮ ಫಿಟ್ ದೇಹ ಮತ್ತು ಆಕರ್ಷಕ ಮೈಮಾಟದಿಂದ ಅಭಿಮಾನಿಗಳ ಹೃದಯ ಕದ್ದಿದ್ದಾರೆ. ರೆಡ್ಡಿಟ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ಕಾಳ್ಗಿಚ್ಚಿನಂತೆ ಹಬ್ಬಿದೆ. ‘ಕಿಯಾರಾ ಎರಡೇ ಸೆಕೆಂಡ್‌ನಲ್ಲಿ ಇಡೀ ಶೋ ಕದ್ದಿದ್ದಾರೆ’ ಎಂದು ಕೆಲವರು ಹೊಗಳಿದರೆ, ‘ಗರ್ಭಿಣಿಯಾಗಿದ್ದರೂ ಕಿಯಾರಾ ದೇವತೆಯಂತೆ ಕಾಣುತ್ತಿದ್ದಾರೆ’ ಎಂದು ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವನ್ನೇ ಹರಿಸಿದ್ದಾರೆ.ಅವರ ಫಿಟ್ನೆಸ್, ಆಕರ್ಷಕ ಮೈಮಾಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಸದ್ಯ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಿಯಾರಾಗೆ, ‘ವಾರ್ 2’ ಹಲವು ಪ್ರಥಮಗಳ ಚಿತ್ರ. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್‌ನಲ್ಲಿ ಮೊದಲ ಸಿನಿಮಾ, ಮೊದಲ ಪಕ್ಕಾ ಆಕ್ಷನ್ ಸಿನಿಮಾ, ಮತ್ತು ಹೌದು, ತೆರೆಮೇಲೆ ಮೊದಲ ಬಿಕಿನಿ ದೃಶ್ಯ ಕೂಡಾ ಇದೇ! ಅಯಾನ್ ಮುಖರ್ಜಿ ನಿರ್ದೇಶನದ ಈ ಚಿತ್ರ 2025ರ ಆಗಸ್ಟ್ 14ಕ್ಕೆ ತೆರೆಗೆ ಅಪ್ಪಳಿಸಲಿದೆ.

ಆದರೆ, ಇಲ್ಲೊಂದು ಸಣ್ಣ ಟ್ವಿಸ್ಟ್! ಈ ಹಾಟ್ ಲುಕ್ ಕೆಲವರಲ್ಲಿ ಅನುಮಾನದ ಕಿಡಿಯನ್ನೂ ಹತ್ತಿಸಿದೆ. ಕೆಲವರು ಇದನ್ನು ಸಿಜಿಐ (ಕಂಪ್ಯೂಟರ್ ಜನರೇಟೆಡ್ ಇಮೇಜರಿ) ಇರಬೇಕು “ಇಲ್ಲ, ಬಾಡಿ ಡಬಲ್ ಇರಬಹುದು” ಅಂತೆಲ್ಲಾ ಕೆಲ ನೆಟ್ಟಿಗರು ಗುಸುಗುಸು ಶುರುಮಾಡಿದ್ದಾರೆ. ಆದರೆ, ಕಿಯಾರಾ ಅವರ ತಂಡ, “ಅದೆಲ್ಲಾ ಸುಳ್ಳು, ಕಿಯಾರಾ ಈ ಲುಕ್‌ಗಾಗಿ ಸಖತ್ ಆಗಿ ಜಿಮ್‌ನಲ್ಲಿ ಬೆವರು ಹರಿಸಿದ್ದಾರೆ” ಅಂತ ಸ್ಪಷ್ಟನೆ ಕೊಟ್ಟಿದೆ.
ಸಾಮಾಜಿಕ ಮಾಧ್ಯಮ
ದೂರು ನೀಡಲು ಬಂದ ಮಹಿಳೆಯ ಜತೆ ಡಿವೈಎಸ್ಪಿ ಬಲವಂತದ ಸೆಕ್ಸ್ ! ಕಛೇರಿಯಲ್ಲೆ ರಾಸಲೀಲೆ ನಡೆಸುತ್ತಿರುವ ವಿಡಿಯೋ ವೈರಲ್ – ಗೃಹ ಸಚಿವರ ತವರು ಜಿಲ್ಲೆಯಲ್ಲಿ ಶಾಕಿಂಗ್ ಘಟನೆ

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.
ತುಮಕೂರು : ಜ 2ಡಿವೈಎಸ್ಪಿಯೊಬ್ಬರು ರಾಜ್ಯ ಪೊಲೀಸ್ ಇಲಾಖೆಯ ಮಾನ ಹಾಗೂ ಗೌರವವನ್ನು ಹರಾಜು ಹಾಕಿದ ಘಟನೆಯೊಂದು ಗೃಹ ಸಚಿವ ಡಾ| ಪರಮೇಶ್ವರ್ ಅವರ ತವರು ಜಿಲ್ಲೆಯಿಂದ ವರದಿಯಾಗಿದೆ. ದೂರು ನೀಡಲು ಬಂದ ಸಂತ್ರಸ್ತ ಮಹಿಳೆಯನ್ನು ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ತನ್ನ ಕಾಮತೃಷೆ ತೀರಿಸಲು ಬಲವಂತವಾಗಿ ಬಳಸಲು ಯತ್ನಿಸಿದ ಆರೋಪ ಕೇಳಿ ಬಂದಿದೆ.ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಘಿದೆ.
ಏನಿದು ಪ್ರಕರಣ ?
ದೂರು ನೀಡಲು ಕಚೇರಿಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹದ್ದು ಮೀರಿದ ವರ್ತನೆಯ ವಿಡಿಯೊ ವೈರಲ್ ಆಗಿದೆ. ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಯನ್ನು ಏಕಾಂತ ಕೊಠಡಿಗೆ ಎಳೆದುಕೊಂಡು ಹೋದ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ.
ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ.
ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ಆರಂಭಿಸಿದ್ದಾರೆ. ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ.
ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ. ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.
‘ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ನಾನೂ ವೀಕ್ಷಿಸಿದ್ದೇನೆ. ಅದರಲ್ಲಿ ಡಿವೈಎಸ್‌ಪಿ ರಾಮಚಂದ್ರಪ್ಪ ಆಕ್ಷೇಪಾರ್ಹವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಸಂತ್ರಸ್ತೆಯನ್ನು ಹುಡುಕುತ್ತಿದ್ದೇವೆ. ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದನ್ನು ಈಗಾಗಲೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ’ ಎಂದು ತುಮಕೂರು ಜಿಲ್ಲೆ ಎಸ್‌ಪಿ ಕೆ.ವಿ. ಅಶೋಕ್ ಪ್ರತಿಕ್ರಿಯಿಸಿದ್ದಾರೆ
-
ಮಂಗಳೂರು16 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized13 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ21 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ21 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು23 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
Uncategorized11 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
ಉದ್ಯೋಗ17 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ15 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!



















