ಸುಳ್ಯ
Sullia-ಸುಳ್ಯದ ವಿಸ್ಮಯ ಬಾವಿಯ ರಹಸ್ಯ ಬಿಚ್ಚಿಟ್ಟ ಪುರಾತತ್ವ ತಜ್ಞರು!; ಈ ಬಾವಿಯ ಹಿನ್ನಲೆ ಏನ್ ಗೊತ್ತಾ?
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮೇದಿನಡ್ಕ ವಿಶಾಲ ಮೈದಾನದಲ್ಲಿ ಬಾವಿ ಆಕೃತಿ, ಸುರುಳಿ, ಕೇಂದ್ರ ಬಿಂದು ಹೊಂದಿರುವ ವೃತ್ತಗಳು ಕಂಡುಬಂದಿದೆ. ಸುರುಳಿಗಳು ನಿರ್ದಿಷ್ಟ ಸಂಖ್ಯೆ ಗುಂಪುಗಳಾಗಿ, ಪ್ರತ್ಯೇಕ ಗುಂಪುಗಳಾಗಿ ಮಾಡಿರುವುದು ಕಂಡುಬಂದಿದೆ. ಸುರುಳಿಗಳು ಖಗೋಳ ವಿಜ್ಞಾನಕ್ಕೆ ಸಂಬಂಧಿಸಿದ ಚಿತ್ರಗಳಂತೆ ಕಂಡುಬರುತ್ತದೆ. ಅಂದರೆ ನಕ್ಷತ್ರ ಪುಂಜಗಳು ಹಾಗೂ ಸೌರವ್ಯೂಹದ ಸಂಕೇತಗಳಾಗಿರಬಹುದು ಎಂದು ಸದ್ಯಕ್ಕೆ ಅಂದಾಜಿಸಲಾಗಿದೆ.
ನಿಖರ ನ್ಯೂಸ್ :- ಪ್ರಕೃತಿ ಅನ್ನುವುದೇ ಒಂದು ವಿಸ್ಮಯ. ಅದೆಷ್ಟೇ ಸಂಶೋಧನೆ, ಹುಡುಕಾಟ ನಡೆಸಿದರೂ ಕೂಡ ಕಲ್ಪನೆಗೂ ಮೀರಿದ ಮತ್ತಷ್ಟು ಸತ್ಯಗಳು ಪ್ರಕೃತಿಯ ಮಡಿಲಿನಲ್ಲಿ ಅಡಗಿರುತ್ತದೆ ಎಂಬುದಕ್ಕೆ ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಾಡೊಂದರಲ್ಲಿ ಅಚ್ಚರಿಯ ಸಾಕ್ಷಿಯೊಂದು ದೊರೆತಿದೆ. ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮೇದಿನಡ್ಕ ಅರಣ್ಯದೊಳಗೆ ಬಾವಿ ಆಕೃತಿ ಇದ್ದು, ಇದಕ್ಕೆ ಸುಮಾರು ನೂರಾರು ಎಕ್ರೆ ವ್ಯಾಪ್ತಿಯ ಮಳೆಗಾಲದ ಒರತೆ ನೀರು ಹರಿದು ಬಂದು ಸೇರುತ್ತಿದ್ದು, ಈ ನೀರು ಬಾವಿಯೊಳಗಿನಿಂದಲೇ ಬೇರೆ ಕಡೆಯಿಂದ ಹೊರ ಹೋಗುತ್ತಿರುವುದು ಕಂಡುಬಂದಿತ್ತು. ಜತೆಗೆ ಇಲ್ಲೇ ಸಮೀಪದ ವಿಶಾಲ ಮೈದಾನದಲ್ಲಿ ವಿವಿಧ ಆಕೃತಿಗಳು ಕಂಡುಬಂದಿತ್ತು. ಸದ್ಯ, ಈ ವಿಸ್ಮಯಕಾರಿ ಬಾವಿಯ ರಹಸ್ಯವನ್ನು ಪುರಾತತ್ವ ತಜ್ಞರು ಬಿಚ್ಚಿಟ್ಟಿದ್ದಾರೆ.

ಆದಿಮಕಲೆಯ ಬಾವಿ ಎಂದ ತಜ್ಞರು!
ಈ ವಿಸ್ಮಯ ಬಾವಿಯ ಬಗ್ಗೆ ಮಾಧ್ಯಮಗಳಲ್ಲಿ ಪ್ರಚಾರವಾದ ಬಳಿಕ ಸಾಕಷ್ಟು ಜನ ಈ ಬಗ್ಗೆ ಕುತೂಹಲ ವ್ಯಕ್ತ ಪಡಿಸಿದ್ದರು. ಜೊತೆಗೆ ಈ ಬಗ್ಗೆ ಸಂಶೋಧನೆ ಮಾಡಲು ಉಡುಪಿಯ ಶಿರ್ವದ ಮೂಲ್ಕಿ ಸುಂದರ್ ರಾಮ್ ಶೆಟ್ಟಿ, ಕಾಲೇಜಿನ ಪ್ರಾಚೀನ ಇತಿಹಾಸ ಹಾಗೂ ಪುರಾತತ್ತ್ವಶಾಸ್ತ್ರ ವಿಭಾಗದ ನಿವೃತ್ತ ಸಹಪ್ರಾಧ್ಯಾಪಕ ಪ್ರೊ| ಟಿ.ಮುರುಗೇಶಿ ಅವರ ನೇತೃತ್ವದ ತಂಡ ಆಗಮಿಸಿ ಅರಣ್ಯದೊಳಗಿನ ಬಾವಿ, ವಿಶಾಲ ಮೈದಾನದಲ್ಲಿನ ವಿವಿಧ ಆಕೃತಿಗಳನ್ನು ಪರಿಶೀಲನೆ ನಡೆಸಿದ್ದು, ಬಾವಿಯ ಸಮೀಪ ಆದಿಮಕಲೆಯ ನಿವೇಶನ ಇರುವುದರಿಂದ ಈ ಆದಿಮಕಲೆಯ ನಿರ್ಮಾಣರೇ ಈ ಬಾವಿಯನ್ನು ನಿರ್ಮಿಸಿರಬಹುದೆಂದು ಅಭಿಪ್ರಾಯಪಟ್ಟಿದ್ದಾರೆ.
ಇಲ್ಲಿದೆ ಮತ್ತಷ್ಟು ವಿಸ್ಮಯಗಳು!
ಕೇವಲ ಅಚ್ಚರಿಯ ಬಾವಿ ಮಾತ್ರವಲ್ಲದೆ ಈ ಬಾವಿಯ ಸುತ್ತಮುತ್ತಲೂ ಕೂಡ ಸಾಕಷ್ಟು ವಿಸ್ಮಯಕಾರಿ ವಿಚಾರಗಳನ್ನು ಕಂಡು ಜನ ಸಾಮಾನ್ಯರು ಹಾಗೂ ತಜ್ಞರು ಅಚ್ಚರಿಪಟ್ಟಿದ್ದಾರೆ. ಇಲ್ಲಿನ ವಿಶಾಲ ಮೈದಾನದಲ್ಲಿ ಸುರುಳಿ, ಕೇಂದ್ರ ಬಿಂದು ಹೊಂದಿರುವ ವೃತ್ತಗಳು ಕಂಡುಬಂದಿದೆ. ಸುರುಳಿಗಳು ನಿರ್ದಿಷ್ಟ ಸಂಖ್ಯೆ ಗುಂಪುಗಳಾಗಿ, ಪ್ರತ್ಯೇಕ ಗುಂಪುಗಳಾಗಿ ಮಾಡಿರುವುದು ಕಂಡುಬಂದಿದೆ. ಸುರುಳಿಗಳು ಖಗೋಳ ವಿಜ್ಞಾನಕ್ಕೆ ಸಂಬಂಧಿ ಸಿದ ಚಿತ್ರಗಳಂತೆ ಕಂಡುಬರುತ್ತದೆ. ಅಂದರೆ ನಕ್ಷತ್ರ ಪುಂಜಗಳು ಹಾಗೂ ಸೌರವ್ಯೂಹದ ಸಂಕೇತಗಳಾಗಿರಬಹುದು ಎಂದು ಸದ್ಯಕ್ಕೆ ಅಂದಾಜಿಸಲಾಗಿದೆ.
3 ಸಾವಿರ ವರ್ಷಗಳಷ್ಟು ಇತಿಹಾಸ!
ಬೃಹತ್ ಶಿಲಾಯುಗ ಕಾಲದ್ದು ಇಲ್ಲಿನ ಚಿತ್ರಗಳು ಬಹಳ ಸ್ಪಷ್ಟವಾಗಿ ಲೋಹದ, ಕಬ್ಬಿಣ ಆಯುಧ ಉಪಯೋಗಿಸಿ ಕೆತ್ತಿರುವ ಚಿತ್ರಗಳಾಗಿವೆ. ಮೇದಿನಡ್ಕ ಸಮೀಪದಲ್ಲಿ ಕರಿಯಮೂಲೆ, ಇತರ ಪ್ರದೇಶಗಳಲ್ಲಿ ಬೃಹತ್ ಶಿಲಾಯುಗ ಕಾಲದ ಗುಹಾ ಸಮಾಧಿಗಳು ಪತ್ತೆಯಾಗಿವೆ. ಆದ್ದರಿಂದ ಈ ಆದಿಮಕಲೆಯ ನಿರ್ಮಾಣರು ಕೂಡ ಸುಮಾರು 3 ಸಾವಿರ ವರ್ಷಗಳ ಪುರಾತನ ಬೃಹತ್ ಶಿಲಾಯುಗ ಕಾಲದ ಚಿತ್ರಗಳೆಂದು ಭಾವಿಸಲಾಗಿದ್ದು, ಈ ಬಗ್ಗೆ ಇನ್ನಷ್ಟು ಅಧ್ಯಯನದ ಅಗತ್ಯವಿದೆ ಎಂದು ತಜ್ಞರು ತಿಳಿಸಿದ್ದಾರೆ.
ಸುಳ್ಯ
Sevaratna-ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ; 20 ವರ್ಷಗಳ ನಿರಂತರ ಕಾಯಕಕ್ಕೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ
ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಸುಳ್ಯ: ಕಲ್ಪವೃಕ್ಷವೆಂದೇ ಕರೆಯಲ್ಪಡುವ ತೆಂಗಿನ ಮರವನ್ನು ಏರಿ, ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಶ್ರೀ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಹಾಗೂ ಸೇವೆಯಿಂದ ಇದೀಗ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ಹಾಗೂ ಮ್ಯಾಕ್ಸ್ ಲೈಫ್ ಇನ್ಶೂರೆನ್ಸ್ ವತಿಯಿಂದ ಕೊಡಮಾಡುವ ಜಿಲ್ಲಾಮಟ್ಟದ ‘ಸೇವಾರತ್ನ ಪ್ರಶಸ್ತಿ’ಗೆ ಅಚ್ಚುತ ನಾಯಕ್ ಕಿಲಂಗೋಡಿಯವರನ್ನು ಆಯ್ಕೆ ಮಾಡಲಾಗಿದೆ.
ಒಕ್ಟೊಬರ್ 9ರಂದು ಸಂಜೆ 4.30ಕ್ಕೆ ಮoಗಳೂರಿನಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ತೆಂಗಿನ ಮರವೇರುವುದು ಸುಲಭದ ಕೆಲಸವಲ್ಲ. ಮರದ ಎತ್ತರ, ಗಾಳಿಯ ವೇಗ, ಹವಾಮಾನ ವೈಪರೀತ್ಯ ಸೇರಿದಂತೆ ಹಲವು ಸವಾಲುಗಳ ನಡುವೆಯೂ ಮರದ ತುದಿಗೆ ಏರಿ ತೆಂಗಿನಕಾಯಿಗಳನ್ನು ಕೊಯ್ದು ಕೆಳಗಿಳಿಸುವ ಈ ಕಾಯಕಕ್ಕೆ ಧೈರ್ಯ, ದೈಹಿಕ ಸಾಮರ್ಥ್ಯ, ಕೌಶಲ್ಯ ಹಾಗೂ ಅಪಾರ ಅನುಭವದ ಅಗತ್ಯವಿದೆ. ಇಂತಹ ಅಪಾಯಭರಿತ ಕಾಯಕವನ್ನು ಅಚ್ಚುತ ನಾಯಕ್ ಅವರು ಕಳೆದ 20 ವರ್ಷಗಳಿಂದ ಅತ್ಯಂತ ಪ್ರಾಮಾಣಿಕತೆ ಮತ್ತು ಕಾಯಕನಿಷ್ಠೆಯಿಂದ ಮಾಡಿಕೊಂಡು ಬರುತ್ತಿದ್ದಾರೆ.
ಕಳಂಜ ಗ್ರಾಮಕ್ಕೆ ಮಾತ್ರ ಸೀಮಿತವಾಗದೆ ಸುಳ್ಯ ತಾಲೂಕು ಹಾಗೂ ಹೊರ ತಾಲೂಕುಗಳ ವಿವಿಧ ಪ್ರದೇಶಗಳಿಗೆ ತೆರಳಿ, ರೈತರು ಮತ್ತು ಸಾರ್ವಜನಿಕರ ತೆಂಗಿನ ಮರಗಳಿಂದ ತೆಂಗಿನಕಾಯಿಗಳನ್ನು ಕೊಯ್ದು ತೆಗೆದು ಕೊಡುವ ಸೇವೆಯನ್ನು ಅವರು ನಿರಂತರವಾಗಿ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅತ್ಯಗತ್ಯವಾಗಿರುವ ಈ ಸೇವೆಯನ್ನು ಯಾವುದೇ ಪ್ರಚಾರದ ನಿರೀಕ್ಷೆಯಿಲ್ಲದೆ ಮಾಡುತ್ತಿರುವುದು ಅವರ ಕಾಯಕದ ವಿಶೇಷತೆಯಾಗಿದೆ.
ಮೌನ ಸಾಧಕರ ಸೇವೆಗೆ ಮತ್ತೊಂದು ಗೌರವ
ಅಚ್ಚುತ ನಾಯಕ್ ಅವರ ಸೇವೆಯನ್ನು ಈಗಾಗಲೇ ಹಲವು ಸಂಸ್ಥೆಗಳು ಗುರುತಿಸಿವೆ. ರೋಟರಿ ಕ್ಲಬ್ ಬೆಳ್ಳಾರೆ ಸಂಸ್ಥೆಯು 2018–19ನೇ ಸಾಲಿನಲ್ಲಿ ಅವರ ಸೇವೆಯನ್ನು ಗುರುತಿಸಿ ಗೌರವಿಸಿತ್ತು.
ಅದೇ ರೀತಿ ಜೆಸಿಐ ಬೆಳ್ಳಾರೆ ಸಂಸ್ಥೆಯು 2025ರಲ್ಲಿ ಅವರ ನಿರಂತರ ಹಾಗೂ ಶ್ರಮದಾಯಕ ಸೇವೆಯನ್ನು ಗುರುತಿಸಿ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪ್ರಶಸ್ತಿ ನೀಡಿ ಗೌರವಿಸಿತ್ತು.
ಯಾವುದೇ ಪ್ರಚಾರದ ಹಿಂದೆ ಹೋಗದೆ, ತನ್ನ ಶ್ರಮವನ್ನೇ ಬಂಡವಾಳವನ್ನಾಗಿ ಮಾಡಿಕೊಂಡು ಪ್ರತಿದಿನವೂ ದುಡಿಯುತ್ತಿರುವ ಅಚ್ಚುತ ನಾಯಕ್ ಅವರು ನಿಜವಾದ ಮೌನ ಕಾಯಕಯೋಗಿ. ತೆಂಗಿನ ಮರದ ತುದಿಯಲ್ಲಿ ನಿಂತು ಅವರು ಮಾಡುವ ಪ್ರತಿಯೊಂದು ಕೆಲಸದ ಹಿಂದೆಯೂ ಧೈರ್ಯ, ಪರಿಶ್ರಮ, ಕೌಶಲ್ಯ ಮತ್ತು ಕುಟುಂಬದ ಬದುಕಿಗಾಗಿ ನಡೆಸುವ ಪ್ರಾಮಾಣಿಕ ಹೋರಾಟವಿದೆ.
ಕಲ್ಪವೃಕ್ಷದೊಂದಿಗೆ ಎರಡು ದಶಕಗಳ ಕಾಲ ನಂಟು ಬೆಳೆಸಿಕೊಂಡಿರುವ ಅಚ್ಚುತ ನಾಯಕ್ ಅವರ ಕಾಯಕವು ಗ್ರಾಮೀಣ ಶ್ರಮಜೀವಿಗಳ ಬದುಕಿನ ಪ್ರತೀಕವಾಗಿದೆ. ರೈತರ ಅಗತ್ಯಕ್ಕೆ ಸ್ಪಂದಿಸುತ್ತಾ, ಅಪಾಯವನ್ನು ಲೆಕ್ಕಿಸದೆ ತಮ್ಮ ವೃತ್ತಿಯನ್ನು ಮುಂದುವರಿಸಿಕೊಂಡು ಬಂದಿರುವ ಅವರ ಸೇವೆಗೆ ‘ಸೇವಾರತ್ನ’ ಪ್ರಶಸ್ತಿ ಮತ್ತೊಂದು ಸಾರ್ಥಕ ಗೌರವವಾಗಿದೆ.
ಕಾಯಕಕ್ಕೆ ಸಂದ ಸಾರ್ಥಕ ಗೌರವ
ಕಳೆದ 20 ವರ್ಷಗಳಿಂದ ತೆಂಗಿನ ಮರದ ತುದಿಯಲ್ಲಿ ಬೆವರು ಸುರಿಸಿ, ರೈತರು ಮತ್ತು ಸಾರ್ವಜನಿಕರಿಗೆ ಅಗತ್ಯವಾದ ಸೇವೆಯನ್ನು ಸಲ್ಲಿಸುತ್ತಿರುವ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ದೊರೆಯುತ್ತಿರುವ ‘ಸೇವಾರತ್ನ’ ಪ್ರಶಸ್ತಿ, ಅವರ ಕಾಯಕನಿಷ್ಠೆಗೆ ಸಂದ ಗೌರವ ಮಾತ್ರವಲ್ಲದೆ, ಗ್ರಾಮೀಣ ಶ್ರಮಜೀವಿಗಳ ಪರಿಶ್ರಮಕ್ಕೂ ಸಂದ ಗೌರವವಾಗಿದೆ.
ಕಲ್ಪವೃಕ್ಷದ ಕಾಯಕಯೋಗಿಯ ಎರಡು ದಶಕಗಳ ನಿರಂತರ ಸೇವೆಗೆ ಇದೀಗ ‘ಸೇವಾರತ್ನ’ದ ಗೌರವದ ಕಿರೀಟ ದೊರೆತಿದೆ.
ಸುಳ್ಯ
ಸುಳ್ಯ :ಗ್ಯಾರೇಜ್‌ನಲ್ಲಿ ಬೈಕ್‌ಗೆ ಬೆಂಕಿ: ಇಬ್ಬರ ಬಂಧನ

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ಸುಳ್ಯ ಐವರ್ನಾಡು ನಿವಾಸಿ ದಯಾನಂದ (30) ಹಾಗೂ ಸುಳ್ಯ ಕಸಬಾ ನಿವಾಸಿ ದರ್ಶನರಾಜು (23) ಎಂದು ಗುರುತಿಸಲಾಗಿದೆ.
ಸುಳ್ಯ ಕಸಬಾ ಗ್ರಾಮದ ಅಂಬೆಟಡ್ಕದಲ್ಲಿ ಆ.26ರ ರಾತ್ರಿ ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ.120/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 326(g) ಅಡಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಸುಳ್ಯ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಸುಳ್ಯ
Dr. Deviprasad Kanattur-ಪಂಜ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ; ಸತ್ಯ ಪ್ರಮಾಣಕ್ಕೆ ಡಾ. ದೇವಿಪ್ರಸಾದ್ ಕಾನತ್ತೂರ್ ನಿರ್ಧಾರ
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.
ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರು ಹಾಗೂ ಪರಿವಾರ ದೈವಗಳು ಉತ್ತರ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಯಾರು ನನ್ನ ಮೇಲೆ ಆರೋಪ ಮಾಡಿದ್ದಾರೆ. ಅವರೂ ಪ್ರಮಾಣಕ್ಕೆ ಬರಲಿ ಎಂದು ಅವರು ತಿಳಿಸಿದ್ದಾರೆ.
-
ಬಿಗ್ ನ್ಯೂಸ್19 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಮಂಗಳೂರು22 hours agoMangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
-
ನಿಧನ ವಾರ್ತೆ23 hours agoBeltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
-
Uncategorized23 hours agoAshok Rai-ಬದ್ಯಾರ್ನಲ್ಲಿ 50 ವರ್ಷದ ರಸ್ತೆ ವಿವಾದಕ್ಕೆ ತೆರೆ ಎಳೆದ ಶಾಸಕ ಅಶೋಕ್ ರೈ
-
ಅಪರಾಧ24 hours agoUppinangadi-ಉಪ್ಪಿನಂಗಡಿ: ತೋಟದ ಕೆಲಸಕ್ಕೆ ಬರುತ್ತೇನೆಂದು ಹಣ ಪಡೆದು ನಾಪತ್ತೆ
-
ನಿಧನ ವಾರ್ತೆ22 hours agoAccident-ಮೂಡುಬಿದಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು
-
ಬಿಗ್ ನ್ಯೂಸ್23 hours agoHalf helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ
-
ಅಪರಾಧ23 hours agoMangalore-ಮಂಗಳೂರು: ನಕಲಿ ಪಾಸ್ಪೋರ್ಟ್ ಪ್ರಕರಣ; 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ


















