ಸ್ಥಳೀಯ
CM Siddaramaiah-ತುಂಗಭದ್ರಾ ಜಲಾಶಯ ಮತ್ತೆ ತುಂಬತ್ತೆ – ಬಾಗಿನ ಅರ್ಪಿಸೋಕೆ ನಾನು ಬರ್ತೀನಿ: ಸಿ.ಎಂ.ಸಿದ್ದರಾಮಯ್ಯ ಆತ್ಮವಿಶ್ವಾಸ; ಡ್ಯಾಂ ಗೇಟ್ ಗಳ expert ಕನ್ನಯ್ಯ ನಾಯ್ಡು ಜೊತೆ ಸಿಎಂ ಕೂಲಂಕುಷ ಚರ್ಚೆ
ತುಂಗಭದ್ರಾ ಜಲಾಶಯ ಗೇಟ್ ನ ದುರಸ್ತಿಯನ್ನು ತ್ವರಿತವಾಗಿ ಮುಗಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹೊಸಪೇಟೆ,ಆಗಸ್ಟ್ 13: ತುಂಗಭದ್ರಾ ಜಲಾಶಯ ಗೇಟ್ ನ ದುರಸ್ತಿಯನ್ನು ತ್ವರಿತವಾಗಿ ಮುಗಿಸಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ತುಂಗಭದ್ರಾ ಜಲಾಶಯ ಗೇಟ್ ಮುರಿದಿರುವ ಸ್ಥಳವನ್ನು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ತುಂಗಭದ್ರಾ ಜಲಾಶಯದ ನೀರನ್ನು ಗೇಟ್ ಗಳ ಮೂಲಕ ಬಿಡಲಾಗುತ್ತಿತ್ತು. ನೀರಿನ ಹರಿವನ್ನು ತಡೆಯುವಂತಹ ಗೇಟ್ ಗಳಲ್ಲಿ19ನೇ ಗೇಟ್ ತುಂಡಾಗಿದೆ. ಜಲಾಶಯ ಗೇಟ್ ಗಳ ನಿರ್ಮಾಣ ತಜ್ಞ ಹಾಗೂ ಸುರಕ್ಷತೆ ತಜ್ಞ ಎಂಜಿನಿಯರ್ ಕನ್ನಯ್ಯ ನಾಯ್ಡು ಅವರ ಜೊತೆ ಚರ್ಚಿಸಿದ್ದೀನಿ. ಅವರಿಂದ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ. ತುಂಗಭದ್ರಾ ಜಲಾಶಯದ ಸಂಪೂರ್ಣ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಜಲಶಾಯ ಮಂಡಳಿಯದಾಗಿದ್ದು, ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು, ಕೇಂದ್ರ ಜಲ ಆಯೋಗ, ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದ ಸದಸ್ಯರು ಮಂಡಳಿಯಲ್ಲಿರುತ್ತಾರೆ. ಈ ಜಲಾಶಯದ ನಿರ್ಮಾಣ ದೇಶಕ್ಕೆ ಸ್ವಾತಂತ್ರ್ಯ ಬಂದ ಮರು ವರ್ಷವೇ ಕೈಗೆತ್ತಿಕೊಂಡು 1948 ರಲ್ಲಿ ಪ್ರಾರಂಭವಾಗಿ 1953 ರಲ್ಲಿ ಪೂರ್ಣಗೊಂಡು, 1954 ರಿಂದ ಜಲಾಶಯದಿಂದ ನಾಲೆಗಳಿಗೆ ನೀರು ಬಿಡಲು ಪ್ರಾರಂಭಿಸಲಾಯಿತು. ಸುಮಾರು 70 ವರ್ಷಗಳಷ್ಟು ಹಳೆಯದಾದ ಡ್ಯಾಂನಲ್ಲಿ ಇಲ್ಲಿನವರೆಗೆ ಯಾವುದೇ ಗೇಟ್ ನ ಚೈನ್ ತುಂಡಾಗಿರಲಿಲ್ಲ ಎಂದು ವಿವರಿಸಿದರು.
ತಜ್ಞರ ಸಲಹೆ ಮೇರೆಗೆ ದುರಸ್ತಿ ಕಾರ್ಯ:
ಜಲಾಶಯದಲ್ಲಿ ಈ ವರ್ಷ 115 ಟಿಎಂಸಿ ನೀರಿದ್ದು, ಈಗಾಗಲೇ 25 ಟಿಎಂಸಿ ನೀರನ್ನು ರೈತರ ಜಮೀನಿಗೆ ಬಿಡಲಾಗಿದೆ. ರೈತರ ಮೊದಲನೇ ಬೆಳೆಗೆ 90 ಟಿಎಂಸಿ ನೀರು ಬೇಕಾಗಿದ್ದು, ಈ ಪ್ರಮಾಣದ ನೀರು ಜಲಾಶಯದಲ್ಲಿ ಲಭ್ಯವಿದೆ. ಆದರೆ ಜಲಾಶಯದ 19 ನೇ ಗೇಟ್ ತುಂಡಾಗಿರುವುದರಿಂದ 35 ಸಾವಿರ ಕ್ಯೂಸೆಕ್ ನೀರು ಹೋಗುತ್ತಿದೆ. ಜಲಾಶಯದ ನೀರನ್ನು ಬಿಡದೇ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಸಾಧ್ಯವಿಲ್ಲ. ನೀರಿನ ಮಟ್ಟವನ್ನು ಕಡಿಮೆ ಮಾಡಲಾಗುತ್ತಿದ್ದು, ನಂತರವೂ 64 ಟಿಎಂಸಿ ನೀರು ಉಳಿಯುತ್ತದೆ. ಗೇಟ್ ನ ದುರಸ್ತಿ ಕಾರ್ಯಕ್ಕೆ ಕನಿಷ್ಟ 4 ರಿಂದ 5 ದಿನಗಳು ಬೇಕಾಗುತ್ತವೆ. ಹಿಂದುಸ್ಥಾನ್ ಇಂಜಿನಿಯರಿಂಗ್ಸ್ ಹಾಗೂ ನಾರಾಯಣ ಇಂಜಿನಿಯರಿಂಗ್ಸ್ ಅವರಿಗೆ ಹೊಸ ಗೇಟ್ ತಯಾರಿ ಹೊಣೆ ವಹಿಸಲಾಗಿದ್ದು, ಕನ್ನಯ್ಯ ನಾಯ್ಡು ಅವರ ಸಲಹೆ ಮೇರೆಗೆ ದುರಸ್ತಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದರು.
ಆಗಸ್ಟ್ 17 ರಿಂದ ರಾಜ್ಯದಲ್ಲಿ ಹೆಚ್ಚಿನ ಮಳೆ ನಿರೀಕ್ಷೆ:
ಕರ್ನಾಟಕದಲ್ಲಿ ಸುಮಾರು 9 ಲಕ್ಷ ಹಾಗೂ ಆಂಧ್ರ ತೆಲಂಗಾಣಗಳಲ್ಲಿ ಸುಮಾರು 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾಕಿರುವ ರೈತರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಅದಲ್ಲದೇ, ಆಗಸ್ಟ್ 17 ರಿಂದ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಬರುವ ನಿರೀಕ್ಷೆ ಇದೆ ಎಂದರು.
ಘಟನೆ ಬಗ್ಗೆ ವಿಶ್ಲೇಷಣೆ ಅಗತ್ಯ:
ಕೆಲವರ್ಷಗಳಿಂದ ಜಲಾಶಯದ ದುರಸ್ತಿಯಿಂದಾಗಿ ನೀರು ಪೋಲಾಗುತ್ತಿರುವ ಬಗ್ಗೆ ಪ್ರಶ್ನಿಸಿದ ಮಾಧ್ಯಮದರಿಗೆ ಉತ್ತರಿಸಿದ ಮುಖ್ಯಮಂತ್ರಿಗಳು, 2019 ಜಲಾಶಯದ ನೀರು ಬಿಡುವ ಕಾಲುವೆಗಳಲ್ಲಿ ಸಮಸ್ಯೆ ಆಗಿತ್ತೇ ಹೊರತು, ಜಲಾಶಯದ ಗೇಟ್ ಗಳಲ್ಲಿ ಯಾವುದೇ ಸಮಸ್ಯೆ ಆಗಿರಲಿಲ್ಲ . 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗೇಟ್ ನ ಸರಪಳಿ ತುಂಡಾಗಿರುವ ಘಟನೆ ನಡೆದಿದೆ. ತಜ್ಞರ ಸಲಹೆಯಂತೆ 50 ವರ್ಷಗಳಿಗೊಮ್ಮೆ ಗೇಟ್ ಹಾಗೂ ಸರಪಳಿಗಳನ್ನು ಬದಲಾಯಿಸಬೇಕಾಗಿದ್ದು, ಇನ್ನು ಮುಂದೆ ತಜ್ಞರ ಸಲಹೆಯಂತೆ ತುಂಗಭದ್ರಾ ಮಂಡಳಿ ಹಾಗೂ ಸಂಬಂಧಪಟ್ಟ ಸರ್ಕಾರಗಳು ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.
ಇಂತಹ ಘಟನೆಗಳಿಗೆ ಯಾರು ಹೊಣೆ ಹೊರುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರ ನೇಮಿಸಿದ ತುಂಗಭದ್ರ ಮಂಡಳಿ ಅಸ್ತಿತ್ವದಲ್ಲಿದ್ದು, ಇದರಲ್ಲಿ ಕೇಂದ್ರ ಜಲ ಆಯೋಗ ಹಾಗೂ ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣದ ರಾಜ್ಯದ ಸದಸ್ಯರೂ ಇದರಲ್ಲಿದ್ದಾರೆ. ಇಂತಹ ಘಟನೆಗಳಿಗೆ ಕಾರಣವೇನು ಎಂಬುದರ ಬಗ್ಗೆ ವಿಶ್ಲೇಷಣೆ ಅಗತ್ಯ ಎಂದರು.
ನವಲಿ ಜಲಾಶಯ: ಒಪ್ಪಿಗೆ ನಂತರ ಕಾಮಗಾರಿ ಪ್ರಾರಂಭ:
ನವಲಿ ಜಲಾಶಯ ನಿರ್ಮಾಣಕ್ಕೆ15 ಸಾವಿರ ಕೋಟಿ ರೂ.ಗಳ ಡಿಪಿಆರ್ ತಯಾರಾಗಿದ್ದು, ಇದು ಅಂತರರಾಜ್ಯ ಯೋಜನೆಯಾಗಿದೆ. ಡಿಪಿಆರ್ ಗೆ ಒಪ್ಪಿಗೆ ದೊರೆತ ನಂತರ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.
ಬಾಗಿನ ಅರ್ಪಿಸಲು ನಾನೇ ಬರುತ್ತೇನೆ:
ತುಂಗಭದ್ರಾ ಜಲಾಶಯ ಮತ್ತೆ ತುಂಬುವ ವಿಶ್ವಾಸವಿದ್ದು, ಬಾಗಿನ ಅರ್ಪಿಸಲು ನಾನು ಮತ್ತೊಮ್ಮೆ ಆಗಮಿಸುವುದಾಗಿ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.
ನಾನು ರೈತರ ಪರ: ಬೆಳೆಗಳಿಗೆ ತೊಂದರೆ ಆಗಲು ಬಿಡಲ್ಲ
ನಮ್ಮ ರೈತರು ಬೇರೆಯಲ್ಲ, ನಿಮ್ಮ ರಾಜ್ಯದ ರೈತರು ಬೇರೆಯಲ್ಲ. ರೈತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಥಳದಲ್ಲಿ ಉಪಸ್ಥಿತರಿದ್ದ ಆಂಧ್ರ, ತೆಲಂಗಾಣ ರಾಜ್ಯಗಳ ಕೃಷಿ ಸಚಿವರಿಗೆ ಸಿಎಂ ಭರವಸೆ ನೀಡಿದರು.
ಕ್ರೀಡೆ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್‌ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.
ಸ್ಥಳೀಯ
Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು
ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.
ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.
ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.
ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಅಪರಾಧ21 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ21 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್20 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ನಿಧನ ವಾರ್ತೆ20 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ದಕ್ಷಿಣ ಕನ್ನಡ18 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ಅಪರಾಧ19 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಮಂಗಳೂರು19 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ
-
ಬಿಗ್ ನ್ಯೂಸ್19 hours agoGirish Mattannavar-ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್ಗೆ ಹೈಕೋರ್ಟ್ನಲ್ಲಿ ಹಿನ್ನಡೆ; ಎಫ್ಐಆರ್ ರದ್ದುಪಡಿಸಲು ನಿರಾಕರಣೆ















