ಆರೋಗ್ಯ
Sugar-ಏನೇ ಮಾಡಿದ್ರೂ ಶುಗರ್ ಕಂಟ್ರೋಲ್ ಆಗ್ತಿಲ್ವಾ..? ಡೋಂಟ್ ವರಿ…ಈ ಮನೆಮದ್ದು ಟ್ರೈ ಮಾಡಿ…!
ಸಿಹಿ ಸೇವನೆಯ ಪ್ರಮಾಣ ಹೆಚ್ಚಾದರೆ ಮಧುಮೇಹ (Diabetes)ಹುಟ್ಟಿಕೊಳ್ಳುತ್ತದೆ ಎಂದು ಹೇಳುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ವಯಸ್ಸಿನ ಮಿತಿ ಇಲ್ಲದೆ ಮಕ್ಕಳಲ್ಲೂ ಈ ಸಮಸ್ಯೆ ಹುಟ್ಟಿಕೊಳ್ಳುತ್ತಿದೆ. ಶುಗರ್ ಕಂಟ್ರೋಲ್ ಗೆ ಜನರು ತಮ್ಮ ಅರಿವಿಗೆ ಬಂದ ಸರ್ಕಸ್ ನ್ನೆಲ್ಲ ಮಾಡುತ್ತಿರುತ್ತಾರೆ. ಮನೆಯಲ್ಲಿಯೇ ನಾವು ಮನೆ ಮದ್ದು ಮಾಡಿ ಉಪತಮಯೋಗಿಸುವುದರಿಂದಲೂ ಡಯಾಬಿಟಿಸ್ ಖಾಯಿಲೆಯನ್ನು ನಿಯಂತ್ರಣಕ್ಕೆ ತರಬಹುದು.
ನಿಖರ ನ್ಯೂಸ್:- ಸಾಮಾನ್ಯವಾಗಿ ಇವತ್ತು ಆಹಾರದ ಅಸಮತೋಲನದಿಂದಾಗಿಯೋ ಅಥವಾ ಅಸಹಜ ದಿನಚರಿಯಿಂದಲೋ ಅನೇಕ ಜನರಲ್ಲಿ ಮಧುಮೇಹ(Diabetes)ದ ಸಮಸ್ಯೆ ಆರಂಭವಾಗಿಬಿಟ್ಟಿದೆ. ಶುಗರ್ ಎಂದು ನಾವೇನು ಕರೆಯುತ್ತೇವೆಯೋ ಅದನ್ನೇ ಡಯಾಬಿಟಿಸ್ ಎಂದು ಕರೆಯುತ್ತಾರೆ. ಸಿಹಿ ಸೇವನೆಯ ಪ್ರಮಾಣ ಹೆಚ್ಚಾದರೆ ಈ ಮಧುಮೇಹ ಹುಟ್ಟಿಕೊಳ್ಳುತ್ತದೆ ಎಂದು ಹೇಳುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ವಯಸ್ಸಿನ ಮಿತಿ ಇಲ್ಲದೆ ಮಕ್ಕಳಲ್ಲೂ ಈ ಸಮಸ್ಯೆ ಹುಟ್ಟಿಕೊಳ್ಳುತ್ತಿದೆ. ಶುಗರ್ ಕಂಟ್ರೋಲ್ ಗೆ ಜನರು ತಮ್ಮ ಅರಿವಿಗೆ ಬಂದ ಸರ್ಕಸ್ ನ್ನೆಲ್ಲ ಮಾಡುತ್ತಿರುತ್ತಾರೆ. ಮನೆಯಲ್ಲಿಯೇ ನಾವು ಮನೆ ಮದ್ದು ಮಾಡಿ ಉಪತಮಯೋಗಿಸುವುದರಿಂದಲೂ ಡಯಾಬಿಟಿಸ್ ಖಾಯಿಲೆಯನ್ನು ನಿಯಂತ್ರಣಕ್ಕೆ ತರಬಹುದು.

ಮಧುಮೇಹ ಇರುವವರಿಗೆ ಬೆಳ್ಳುಳ್ಳಿ ಬೆಸ್ಟ್ ಫ್ರೆಂಡ್ ಇದ್ದ ಹಾಗೆ..
ಬೆಳ್ಳುಳ್ಳಿ ಅತ್ಯಂತ ಪರಿಣಾಮಕಾರಿಯಾಗಿ ನಮ್ಮ ದೇಹದ ಇನ್ಸುಲಿನ್ ಸೂಕ್ಷ್ಮತೆಯನ್ನು ನಿರ್ವಹಣೆ ಮಾಡುವ ಗುಣವನ್ನು ಹೊಂದಿದ ಆಯುರ್ವೇದ ಪದಾರ್ಥವಾಗಿದೆ. ಇದರಲ್ಲಿ ಅಲೀಸಿನ್ ಇರುತ್ತದೆ ಮತ್ತು ಇದು ಇನ್ಸುಲಿನ್ ಕಾರ್ಯ ಚಟುವಟಿಕೆಯನ್ನು ವೃದ್ಧಿಸುತ್ತದೆ. ಸಕ್ಕರೆ ಕಾಯಿಲೆಯನ್ನು ಸುಲಭವಾಗಿ ನಿರ್ವಹಣೆ ಮಾಡಲು ಇದು ಸಹಾಯ ಮಾಡುತ್ತದೆ. ಹೀಗಾಗಿ ಬೆಳ್ಳುಳ್ಳಿಯನ್ನು ಸಕ್ಕರೆ ಕಾಯಿಲೆ ಇರುವವರು ಆಗಾಗ ತಿನ್ನುವ ಅಭ್ಯಾಸ ಇಟ್ಟುಕೊಳ್ಳುವುದು ಒಳ್ಳೆಯದು. ಸಕ್ಕರೆ ಕಾಯಿಲೆಯ ನಿರ್ವಹಣೆಯ ಜೊತೆಗೆ ನಿಮ್ಮ ಆರೋಗ್ಯದ ಇನ್ನಿತರ ಸಮಸ್ಯೆಗಳನ್ನು ಸಹ ದೂರ ಮಾಡಿಕೊಳ್ಳಬಹುದು.

- ಹಸಿ ಬೆಳ್ಳುಳ್ಳಿ- ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಒಂದು ಹಸಿ ಬೆಳ್ಳುಳ್ಳಿ ಎಸಳನ್ನು ತಿನ್ನುವ ಅಭ್ಯಾಸವನ್ನು ಪ್ರತಿದಿನ ಮಾಡಿಕೊಂಡರೆ ಸುಲಭ ವಾಗಿ ಶುಗರ್ ಕಂಟ್ರೋಲ್ ಮಾಡಿಕೊಳ್ಳಬಹುದು ಮತ್ತು ದೇಹದಲ್ಲಿ ಇನ್ಸುಲಿನ್ ಪ್ರಭಾವ ಹೆಚ್ಚಾಗುವ ಹಾಗೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಬೆಳ್ಳುಳ್ಳಿಯನ್ನು ಜಜ್ಜಿ ಅಥವಾ ಹೆಚ್ಚಿ ಬಾಯಲ್ಲಿ ಹಾಕಿಕೊಂಡು ಅದರ ರಸ ಸೇವಿಸಿ.
- ಬೆಳ್ಳುಳ್ಳಿ ಟೀ- ಬೆಳಗಿನ ಸಮಯದಲ್ಲಿ ಒಂದು ಕಪ್ ಬೆಳ್ಳುಳ್ಳಿ ಚಹಾ ಕುಡಿಯುವುದರಿಂದ ರಕ್ತದಲ್ಲಿ ಇನ್ಸುಲಿನ್ ಪ್ರಭಾವ ಹೆಚ್ಚಾಗುತ್ತದೆ ಮತ್ತು ಸಕ್ಕರೆ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ.
- ತರಕಾರಿಗಳ ಜೊತೆ ಬೆಳ್ಳುಳ್ಳಿ-ನೀರು ಅಥವಾ ಆಲಿವ್ ಆಯಿಲ್ ಜೊತೆಗೆ ಬೆಳ್ಳುಳ್ಳಿ ಎಸಳುಗಳನ್ನು ಸೇರಿಸಿ ಬ್ಲೆಂಡ್ ಮಾಡಿ ಪೇಸ್ಟ್ ತಯಾರಿಸಿಕೊಳ್ಳಬಹುದು. ನಂತರ ಈ ಪೇಸ್ಟ್ ಅನ್ನು ನೀವು ನಿಮ್ಮ ಅನೇಕ ಅಡುಗೆಗಳಲ್ಲಿ ವಿಶೇಷವಾಗಿ ತರಕಾರಿಗಳನ್ನು ಬಳಸಿ ಮಾಡುವ ಆಹಾರ ಪದಾರ್ಥಗಳಲ್ಲಿ ಉಪಯೋಗಿಸಿ. ಮುಂದಿನ ಬಳಕೆಗೆ ಬೇಕಾದರೆ ಈ ಪೇಸ್ಟ್ ಅನ್ನು ರೆಫ್ರಿಜರೇಟರ್ ನಲ್ಲಿ ಹಾಕಿ ಇರಿಸಿ.

ಡಯಾಬಿಟೀಸ್ ಇರುವವರ ಚರ್ಮದ ಆರೈಕೆಗೆ ಕೆಲವು ಸಲಹೆಗಳು
ಮಧುಮೇಹಿಗಳ ಊಟದ ಯೋಜನೆ, ವ್ಯಾಯಾಮ, ಒತ್ತಡ ನಿರ್ವಹಿಸುವುದರ ಜೊತೆಗೆ ಚರ್ಮದ ಆರೈಕೆಯೂ ಬಹಳ ಮುಖ್ಯ. ಏಕೆಂದರೆ ಚರ್ಮದ ಆರೈಕೆಯಿಂದ ನಾವು ಸೋಂಕು, ತೆರೆದ ಹುಣ್ಣುಗಳು, ವಾಸಿಯಾಗದ ಗಾಯದಂತಹ ಗಂಭೀರ ಚರ್ಮದ ಸ್ಥಿತಿಗತಿಯನ್ನು ತಡೆಗಟ್ಟಬಹುದು.
ಬೆಚ್ಚಗಿನ ನೀರು ಬಳಸಿ:- ಡಯಾಬಿಟಿಸ್ ಇರುವವರು ಬೆಚ್ಚಗಿನ ನೀರು ಬಳಸಿ. ಅತಿಯಾದ ಬಿಸಿ ನೀರು ಕೂಡಾ ಒಳ್ಳೆಯದಲ್ಲ. ಉಗುರುಬೆಚ್ಚಗಿನ ನೀರು ಬಳಸುವುದರಿಂದ ಚರ್ಮದ ತೇವಾಂಶವನ್ನು ಕಾಪಾಡಿಕೊಳ್ಳಬಹುದು.
ಮಧುಮೇಹಿಗಳು ಉಪ್ಪು ಕಡಿಮೆ ಸೇವಿಸಬೇಕು
ನಮ್ಮ ಆಹಾರ ಪದ್ಧತಿಯಲ್ಲಿ ಉಪ್ಪನ್ನು ಕಡಿಮೆ ಬಳಸುವು ದರಿಂದ ರಕ್ತದ ಒತ್ತಡವನ್ನು ನಿರ್ವಹಣೆ ಮಾಡಿಕೊಳ್ಳಬಹುದು.
ಏಕೆಂದರೆ ಊಟ ಮಾಡಿದ ಅರ್ಧ ಗಂಟೆಯ ನಂತರದಲ್ಲಿ ನಮ್ಮ ರಕ್ತದ ಒತ್ತಡ ಹೆಚ್ಚಾಗುತ್ತದೆ. ಹಾಗಾಗಿ ನಿರಂತರವಾಗಿ ಈ ಅಭ್ಯಾಸ ವನ್ನು ಮುಂದುವರಿಸುವುದರಿಂದ ನಮ್ಮ ರಕ್ತದ ಒತ್ತಡವನ್ನು ಕೇವಲ ಕೆಲವೇ ವಾರಗಳಲ್ಲಿ ಕಂಟ್ರೋಲ್ ಗೆ ತಂದುಕೊಳ್ಳಬಹುದು.
ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಬೇಕು
ಮಾನಸಿಕ ಒತ್ತಡ ಹೆಚ್ಚಾದಂತೆ ಅದು ನಮ್ಮ ದೇಹದಲ್ಲಿ ಹಾರ್ಮೋನ್ ಗಳನ್ನು ಹೆಚ್ಚಿಸಿ ಎಂಬ ಹೃದಯ ಬಡಿತವನ್ನು ಜೋರಾಗಿಸುತ್ತದೆ ಮತ್ತು ಇದರಿಂದ ರಕ್ತದ ಒತ್ತಡ ಕೂಡ ಹೆಚ್ಚಾಗುತ್ತದೆ.
ಸಂಪೂರ್ಣವಾಗಿ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿ ಕೊಳ್ಳಲು ಆಗುವುದಿಲ್ಲ. ಆದರೂ ಕೂಡ ತಕ್ಕಮಟ್ಟಿಗೆ ನಿಯಂತ್ರಣ ಆಗುವ ಹಾಗೆ ಯೋಗ, ಧ್ಯಾನ ಮತ್ತು ಮನಸ್ಸನ್ನು ಸಂತೋಷ ಪಡಿಸುವ ಚಟುವಟಿಕೆ ಗಳು, ಆಟಗಳು, ನಿದ್ರೆ ಇತ್ಯಾದಿಗಳನ್ನು ಮಾಡುವುದರಿಂದ ಸುಲಭವಾಗಿ ನಮ್ಮ ಮಾನಸಿಕ ಒತ್ತಡವನ್ನು ಕಂಟ್ರೋಲ್ ಮಾಡಿಕೊಳ್ಳಬಹುದು.
ನಿಯಮಿತವಾದ ವ್ಯಾಯಾಮ ಅಗತ್ಯ
ರಕ್ತದ ಒತ್ತಡವನ್ನು ಮತ್ತು ಸಕ್ಕರೆ ಕಾಯಿಲೆಯನ್ನು ಕಂಟ್ರೋಲ್ ಮಾಡುವಲ್ಲಿ ವ್ಯಾಯಾಮ ಕೂಡ ಬಹಳ ಮುಖ್ಯವಾಗುತ್ತದೆ. ಆರೋಗ್ಯ ಕರವಾದ ರೀತಿಯಲ್ಲಿ ವ್ಯಾಯಾಮ ಮಾಡುವುದರಿಂದ ಇನ್ನು ಅನೇಕ ಕಾಯಿಲೆಗಳನ್ನು ನಾವು ಕಂಟ್ರೋಲ್ ಮಾಡಿಕೊಂಡು ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು.
ಹೀಗೆ ಮಾಡುವುದರಿಂದ ಮನೆಯಲ್ಲಿಯೇ ಇದ್ದು ನಾವಾಗಿಯೇ ಮಾಡಿಕೊಳ್ಳಬಹುದಾದ ಸರಳ ವಿಧಾನಗಳನ್ನು ಅನುಸರಿಸುವುದರಿಂದ ಡಯಾಬಿಟೀಸ್ ನಿಯಂತ್ರಣ ಮಾಡಿಕೊಳ್ಳಬಹುದು.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಆರೋಗ್ಯ
HIV test-ಯುವಜನರಲ್ಲಿ ಹೆಚ್ಚುತ್ತಿದೆ HIV ಸೋಂಕು; ರಾಜ್ಯದ ಪದವಿ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ
ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ಬೆಂಗಳೂರು: ರಾಜ್ಯದ ಯುವ ಸಮೂಹದಲ್ಲಿ ಎಚ್‌ಐವಿ (HIV) ಸೋಂಕು ಆತಂಕಕಾರಿ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡಿರುವ ಕರ್ನಾಟಕ ಸರ್ಕಾರ, ಎಲ್ಲ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಎಚ್‌ಐವಿ ತಪಾಸಣೆ ನಡೆಸಲು ನಿರ್ಧರಿಸಿದೆ.
ದೇಶದಲ್ಲೇ ಮೂರನೇ ಸ್ಥಾನ:
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ ವರದಿ ಪ್ರಕಾರ, ಎಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಈ ಪೈಕಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ತಗುಲಿರುವ ಅರಿವೇ ಇಲ್ಲದಿರುವುದು ದೊಡ್ಡ ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ 18 ರಿಂದ 35 ವರ್ಷದೊಳಗಿನವರಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ ಎಂದು ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ (KSAPS) ಕಳವಳ ವ್ಯಕ್ತಪಡಿಸಿದೆ.
ಕಾಲೇಜುಗಳಲ್ಲಿ ಆರೋಗ್ಯ ಶಿಬಿರ ಮತ್ತು ಜಾಗೃತಿ:
ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಆರೋಗ್ಯ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯು ಜಂಟಿಯಾಗಿ ‘ಸಂಯೋಜಿತ ಆರೋಗ್ಯ ಶಿಬಿರ’ಗಳನ್ನು (IHC) ಆಯೋಜಿಸುತ್ತಿವೆ.
ವಿಟಿಯು (VTU) ವ್ಯಾಪ್ತಿಯಲ್ಲೂ ತಪಾಸಣೆ: ರಾಜ್ಯದ ಎಲ್ಲ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ನಡೆಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಸೂಚನೆ ನೀಡಿದೆ.
ವಿವಿಧ ಸ್ಪರ್ಧೆಗಳು: 2026ರ ಜುಲೈನಿಂದ 2027ರ ಫೆಬ್ರವರಿವರೆಗೆ ಕಾಲೇಜುಗಳಲ್ಲಿ ಬೀದಿ ನಾಟಕ, ರಸಪ್ರಶ್ನೆ ಮತ್ತು ತಜ್ಞರ ಉಪನ್ಯಾಸಗಳ ಮೂಲಕ ಜಾಗೃತಿ ಮೂಡಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕೆ ಅಂಕಗಳ ಆಧಾರದ ಮೇಲೆ ಮಾರ್ಗಸೂಚಿಯನ್ನೂ ನೀಡಲಾಗಿದೆ.
ಮಾಹಿತಿಯ ಗೌಪ್ಯತೆಗೆ ಆದ್ಯತೆ (QR Code ಸೌಲಭ್ಯ):
ವಿದ್ಯಾರ್ಥಿಗಳು ತಮ್ಮ ಎಚ್‌ಐವಿ ಸ್ಥಿತಿಯನ್ನು ಅತ್ಯಂತ ಗೌಪ್ಯವಾಗಿ ತಿಳಿದುಕೊಳ್ಳಲು ಸರ್ಕಾರವು ವಿಶೇಷ ತಂತ್ರಜ್ಞಾನದ ಮೊರೆ ಹೋಗಿದೆ.
ಕ್ಯೂಆರ್ ಕೋಡ್ (QR Code): ಕಾಲೇಜುಗಳಲ್ಲಿ ಕಡ್ಡಾಯವಾಗಿ ಕ್ಯೂಆರ್ ಕೋಡ್ ಪ್ರದರ್ಶಿಸಲಾಗುತ್ತದೆ. ಇದನ್ನು ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ಸ್ವಯಂ-ಅಪಾಯ ಮೌಲ್ಯಮಾಪನ ಮಾಡಿಕೊಳ್ಳಬಹುದು.
ವೆಬ್‌ಸೈಟ್: ಗೌಪ್ಯ ಮಾರ್ಗದರ್ಶನಕ್ಕಾಗಿ www.breakfreeindia.org ಜಾಲತಾಣವನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸರ್ಕಾರದ ಮುಂದಿರುವ ಸವಾಲು:
ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ವಿರುದ್ಧ ಸಮರ ಸಾರಿರುವ ಸರ್ಕಾರಕ್ಕೆ, ಈಗ ಎಚ್‌ಐವಿ ಹರಡದಂತೆ ತಡೆಯುವುದು ದೊಡ್ಡ ಸವಾಲಾಗಿದೆ. ರಾಜ್ಯದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಕೆಎಸ್‌ಎಪಿಎಸ್ ತಿಳಿಸಿದೆ. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಈ ತಪಾಸಣಾ ಪ್ರಕ್ರಿಯೆಯ ಉಸ್ತುವಾರಿ ವಹಿಸಲಿದ್ದಾರೆ.
ಆರೋಗ್ಯ
Puttur-ಪುತ್ತೂರು: ಜು.9ರಂದು ಡಾ. ನಝೀರ್ ಅಹಮ್ಮದ್ ರವರ ಕ್ಲಿನಿಕ್ ನಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಪುತ್ತೂರು: ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರವು ಜು.9, ಗುರುವಾರದಂದು ಬೆಳಗ್ಗೆ 9-30ರಿಂದ ಮಧ್ಯಾಹ್ನ 12-30ರವರೆಗೆ ಪುತ್ತೂರಿನ ಕಲ್ಲಾರೆಯಲ್ಲಿರುವ ಡಾ. ನಝೀರ್ ಅಹಮದ್ ರವರ ಕ್ಲಿನಿಕ್ ನಲ್ಲಿ ನಡೆಯಲಿರುವುದು.
ಶಿಬಿರದಲ್ಲಿ ಸಿಗುವ ಸೌಲಭ್ಯಗಳು:
ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಈ ಕೆಳಗಿನ ಪರೀಕ್ಷೆಗಳನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುವುದು.
ಉಚಿತ ಪರೀಕ್ಷೆಗಳು: ಥೈರಾಯಿಡ್ (TSH), ರಕ್ತದ ಸಕ್ಕರೆ ಅಂಶ (Sugar), HBA1C ಮತ್ತು ಮೂಳೆ ಸಾಂದ್ರತೆ ಪರೀಕ್ಷೆ (BMD Test).
-
ಮಂಗಳೂರು11 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ16 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ16 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಮಂಗಳೂರು18 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
Uncategorized8 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಅಂತರ ರಾಜ್ಯ10 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ12 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ರಾಜಕೀಯ17 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ


















