ಕಾರ್ಕಳ
V. Sunil Kumar-ಹಿಂದಿನ ಸರ್ಕಾರದ ಅವಧಿಯಲ್ಲಿ ಮಂಜೂರಾದ ವಿವಿದ ಅಭಿವೃದ್ಧಿ ಕಾಮಗಾರಿಗಳ ತಡೆ ಹಿಡಿದಿರುವ ಬಾಕಿ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹ – ವಿ. ಸುನಿಲ್ ಕುಮಾರ್
ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯ 2022-23ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಂಜೂರಾತಿ ನೀಡಿ ಬಿಡುಗಡೆ ಮಾಡಿದ್ದ ಸುಮಾರು ರೂ.75 ಕೋಟಿಗೂ ಅಧಿಕ ಮೊತ್ತದ ಅನುದಾನವನ್ನು ಈಗಿನ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದ್ದು, ಕೂಡಲೇ ಬಿಡುಗಡೆ ಮಾಡುವಂತೆ ಕಾರ್ಕಳ ಶಾಸಕರು ಹಾಗೂ ಮಾಜಿ ಸಚಿವರಾದ ವಿ ಸುನಿಲ್ ಕುಮಾರ್‌ರವರು ಮುಖ್ಯಮಂತ್ರಿಯವರನ್ನು ಆಗ್ರಹಿಸಿದ್ದಾರೆ.
ಕಾರ್ಕಳ ಆ 13: ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯ 2022-23ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಂಜೂರಾತಿ ನೀಡಿ ಬಿಡುಗಡೆ ಮಾಡಿದ್ದ ಸುಮಾರು ರೂ.75 ಕೋಟಿಗೂ ಅಧಿಕ ಮೊತ್ತದ ಅನುದಾನವನ್ನು ಈಗಿನ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದ್ದು ತಡೆ ಹಿಡಿದಿರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಕಾರ್ಕಳ ಶಾಸಕರು ಹಾಗೂ ಮಾಜಿ ಸಚಿವರಾದ ವಿ ಸುನಿಲ್ ಕುಮಾರ್‌ರವರು ಮುಖ್ಯಮಂತ್ರಿಯವರನ್ನು ಆಗ್ರಹಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಂಜಿನಿಯರಿಂಗ್ ಇಲಾಖೆ, ಲೋಕೋಪಯೋಗಿ ಇಲಾಖೆ, ಬೃಹತ್ ನೀರಾವರಿ ಇಲಾಖೆ (ವಾರಾಹಿ), ಪ್ರವಾಸೋದ್ಯಮ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಇಂಧನ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ಇತರ ಇಲಾಖೆಗಳಿಂದ ಮಂಜೂರಾತಿಯಾದ ಕಾಮಗಾರಿಗಳ ಪೈಕಿ ಕೆಲವು ಕಾಮಗಾರಿಗಳು ಆಡಳಿತಾತ್ಮಕ ಅನುಮೋದನೆ ಆಗಿದ್ದು ಕೆಲವು ಕಾಮಗಾರಿಗಳು ಟೆಂಡರ್ ಪ್ರಕ್ರಿಯೆ ಮುಗಿದಿರುತ್ತದೆ, ಕೆಲವು ಟೆಂಡರ್ ಆಗಿ ಎಗ್ರೀಮೆಂಟ್ ಹಂತದಲ್ಲಿದ್ದವು.
ಆದರೆ 2023ರಲ್ಲಿ ಅಧಿಕಾರಕ್ಕೆ ಬಂದ ಶ್ರೀ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದ್ದ ಎಲ್ಲಾ ಕಾಮಗಾರಿಗಳ ಅನುದಾನವನ್ನು ತಡೆಹಿಡಿದಿದ್ದು ಇದರಿಂದಾಗಿ ಕ್ಷೇತ್ರದ ಮೂಲಭೂತ ಸೌಕರ್ಯ ಸೇರಿದಂತೆ ಇತರ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿರುತ್ತದೆ. ಈ ಕುರಿತು ಹಲವು ಬಾರಿ ಸಂಬಂಧಪಟ್ಟ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನ ಆಗಿರುವುದಿಲ್ಲ ತಡೆ ಹಿಡಿದ ಅನುದಾನ ಈವರೆಗೆ ಬಿಡುಗಡೆಯಾಗಿರುವುದಿಲ್ಲ.

ಈ ನಿಟ್ಟಿನಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ಮಂಜೂರಾತಿಗೊಂಡು ಬಿಡುಗಡೆಯಾಗಿದ್ದ ವಿವಿಧ ಇಲಾಖೆಗಳ ಸುಮಾರು ರೂ 75 ಕೋಟಿಗೂ ಅಧಿಕ ಮೊತ್ತದ ಬಾಕಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಆಗ್ರಹಿಸಿರುತ್ತಾರೆ.
ನಿಧನ ವಾರ್ತೆ
Karkala-ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು; ಸ್ನೇಹಿತನ ರಕ್ಷಣೆಗೆ ಧಾವಿಸಿ ಹರ್ಷನ್ ಸಾವು
ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನ ಸುಳಿಗೆ ಸಿಲುಕಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿ ಸಮೀಪ ಸೆ.29ರಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಹಿರ್ಗಾನ ಗ್ರಾಮದ ರಾಜೀವ ನಗರ ನಿವಾಸಿಗಳಾದ ಭರತ್ ಪೂಜಾರಿ (29) ಹಾಗೂ ಹರ್ಷನ್ ಆಚಾರ್ಯ (22) ಎಂದು ಗುರುತಿಸಲಾಗಿದೆ.

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನ ಸುಳಿಗೆ ಸಿಲುಕಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿ ಸಮೀಪ ಸೆ.29ರಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಹಿರ್ಗಾನ ಗ್ರಾಮದ ರಾಜೀವ ನಗರ ನಿವಾಸಿಗಳಾದ ಭರತ್ ಪೂಜಾರಿ (29) ಹಾಗೂ ಹರ್ಷನ್ ಆಚಾರ್ಯ (22) ಎಂದು ಗುರುತಿಸಲಾಗಿದೆ.
ಭರತ್ ಅವರು ಪೇಂಟಿಂಗ್ ಹಾಗೂ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದು, ಹರ್ಷನ್ ಮಂಗಳೂರಿನಲ್ಲಿ ಎಟಿಎಂ ಪಿನ್ ಜನರೇಟರ್ ಸಂಬಂಧಿತ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಮಂಗಳವಾರ ಮಧ್ಯಾಹ್ನ ಸುಮಾರು 3 ಗಂಟೆಗೆ ಭರತ್, ಹರ್ಷನ್, ವಿತೇಶ್ ಶೆಟ್ಟಿ ರಂಜಿತ್ ನಾಯಕ್, ಕೇತನ್ ನಾಯಕ್ ನದಿಗೆ ಈಜಲು ತೆರಳಿದ್ದು ಈ ವೇಳೆ ಭರತ್ ನೀರಿನ ಸುಳಿಗೆ ಸಿಲುಕಿ ಹೊರಬರಲು ಒದ್ದಾಡುತ್ತಿರುವುದನ್ನು ಗಮನಿಸಿದ ಹರ್ಷನ್, ಆತನನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ಈ ವೇಳೆ ಹರ್ಷನ್ ಕೂಡ ನೀರಿನ ಸುಳಿಗೆ ಸಿಲುಕಿ ಮುಳುಗಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿದ ಬಳಿಕ ಹಿರ್ಗಾನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿ ಅವರು ಕಾರ್ಕಳ ನಗರ ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಶೋಧ ಕಾರ್ಯ ಆರಂಭಿಸಿದರು.
ಘಟನಾ ಸ್ಥಳಕ್ಕೆ ವಾಹನಗಳು ತೆರಳಲು ಸೂಕ್ತ ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಅಗ್ನಿಶಾಮಕ ಸಿಬ್ಬಂದಿ ಸುಮಾರು ಮೂರು ಕಿ.ಮೀ. ದೂರ ನಡೆದುಕೊಂಡೇ ಸ್ಥಳಕ್ಕೆ ತೆರಳಬೇಕಾಯಿತು. ಬಳಿಕ ಠಾಣಾಧಿಕಾರಿ ಚಂದ್ರಶೇಖರ್ ನೇತೃತ್ವದ ತಂಡ ಮೂರು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಸಂಜೆ 6 ಗಂಟೆ ಸುಮಾರಿಗೆ ಇಬ್ಬರ ಮೃತದೇಹಗಳನ್ನು ಪತ್ತೆಹಚ್ಚಿ ನದಿಯಿಂದ ಮೇಲಕ್ಕೆತ್ತಿತು.
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳಾದ ರೂಪೇಶ್, ಸುರೇಶ್, ದಿನೇಶ್, ನಿತ್ಯಾನಂದ, ಶಿವಾನಂದ ಹಾಗೂ ಸ್ಥಳೀಯರಾದ ರಂಜಿತ್ ಮತ್ತು ಕೇತನ್ ಭಾಗವಹಿಸಿದ್ದರು. ಎಎಸ್‌ಪಿ ಇಷಿತಾ ಗುಪ್ತ, ವೃತ್ತ ನಿರೀಕ್ಷಕ ರಾಘವೇಂದ್ರ ಹಾಗೂ ನಗರ ಠಾಣೆ ಎಸ್‌ಐ ಶಿವಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿದರು.
ಬಡ ಕುಟುಂಬ
ಮೃತ ಭರತ್ ಪೂಜಾರಿ ಬಡ ಕುಟುಂಬದವರಾಗಿದ್ದು, ತಂದೆ-ತಾಯಿಯೊಂದಿಗೆ ವಾಸಿಸುತ್ತಿದ್ದರು. ಕುಟುಂಬದ ಜವಾಬ್ದಾರಿ ಅವರ ಮೇಲಿತ್ತು ಎನ್ನಲಾಗಿದೆ. ಅವರು ಹೊಸ ಮನೆ ನಿರ್ಮಿಸುತ್ತಿದ್ದು, ಕಾಮಗಾರಿ ಈಗಾಗಲೇ ಸ್ಲ್ಯಾಬ್ ಹಂತ ತಲುಪಿತ್ತು. ಹರ್ಷನ್ ಆಚಾರ್ಯ ಅವರ ತಂದೆ ನಿಧನರಾಗಿದ್ದು, ತಾಯಿ ಹಾಗೂ ಅಕ್ಕನೊಂದಿಗೆ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಕಾರ್ಕಳ
Sunil Kumar-ಸ್ಥಳೀಯ ಕಂಬಳ ಕಡೆಗಣಿಸಿ ಮೈಸೂರು ಕಂಬಳಕ್ಕೆ 8 ಕೋಟಿ ಖರ್ಚು -ಸರ್ಕಾರದ ವಿರುದ್ಧ ಸುನಿಲ್ ಕುಮಾರ್ ಕಿಡಿ..! ಜಿಲ್ಲೆಯ ಕಂಬಳಕ್ಕೆ ತಲಾ 25 ಕೋಟಿ ಕೊಡಿ
ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆಯನ್ನು ಪರಿಚಯಿಸುವ ಸರ್ಕಾರದ ನಿರ್ಧಾರದ ಬಗ್ಗೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರ್ಕಾರ ಕೇವಲ ಹಠಕ್ಕೆ ಬೀಳದೆ, ತಜ್ಞರ ಮತ್ತು ಅನುಭವಸ್ಥರ ಅಭಿಪ್ರಾಯ ಪಡೆಯುವುದು ಅಗತ್ಯ ಎಂದು ಅವರು ಹೇಳಿದ್ದಾರೆ.
ಕಾರ್ಕಳ: ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆಯನ್ನು ಪರಿಚಯಿಸುವ ಸರ್ಕಾರದ ನಿರ್ಧಾರದ ಬಗ್ಗೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರ್ಕಾರ ಕೇವಲ ಹಠಕ್ಕೆ ಬೀಳದೆ, ತಜ್ಞರ ಮತ್ತು ಅನುಭವಸ್ಥರ ಅಭಿಪ್ರಾಯ ಪಡೆಯುವುದು ಅಗತ್ಯ ಎಂದು ಅವರು ಹೇಳಿದ್ದಾರೆ.
ಸಮಾಲೋಚನೆ ಅತ್ಯಗತ್ಯ:
ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯನ್ನು ಮೈಸೂರಿಗೆ ‘ರಫ್ತು’ ಮಾಡುವಾಗ ಅದರಿಂದಾಗುವ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಕಂಬಳವನ್ನು ಕೇವಲ ಪ್ರದರ್ಶನದ ವಸ್ತುವನ್ನಾಗಿ ನೋಡಬಾರದು. ಹೀಗಾಗಿ, ಈ ಬಗ್ಗೆ ಯಾವುದೇ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಮೊದಲು ಕಂಬಳ ಆಯೋಜಕರು ಮತ್ತು ಕೋಣಗಳ ಮಾಲೀಕರ ಜೊತೆ ಸರ್ಕಾರ ವಿಸ್ತೃತವಾಗಿ ಚರ್ಚಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಅನುದಾನದ ತಾರತಮ್ಯಕ್ಕೆ ಆಕ್ರೋಶ:
ಮೈಸೂರು ಕಂಬಳಕ್ಕಾಗಿ ಸುಮಾರು 8 ಕೋಟಿ ರೂಪಾಯಿ ಖರ್ಚು ಮಾಡಲು ಚಿಂತಿಸುತ್ತಿರುವ ಸರ್ಕಾರ, ಕರಾವಳಿಯ ಮೂಲ ಕಂಬಳಗಳನ್ನು ಕಡೆಗಣಿಸುತ್ತಿದೆ ಎಂದು ಸುನಿಲ್ ಕುಮಾರ್ ದೂರಿದ್ದಾರೆ. “ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವರ್ಷಾನುಗಟ್ಟಲೆ ನಡೆಯುತ್ತಿರುವ ಕಂಬಳಗಳಿಗೆ ತಲಾ 2.5 ಲಕ್ಷ ರೂಪಾಯಿ ನೀಡಲು ಈ ಸರ್ಕಾರ ಹಿಂದೇಟು ಹಾಕುತ್ತಿದೆ. ಮೈಸೂರಿನಲ್ಲಿ ಕೋಟ್ಯಂತರ ರೂಪಾಯಿ ವೆಚ್ಚ ಮಾಡುವ ಬದಲು, ಕರಾವಳಿಯ 20 ಪ್ರಮುಖ ಜಿಲ್ಲಾಮಟ್ಟದ ಕಂಬಳಗಳಿಗೆ ತಲಾ 25 ಲಕ್ಷ ರೂಪಾಯಿ ಅನುದಾನ ನೀಡಲಿ” ಎಂದು ಅವರು ಸವಾಲು ಹಾಕಿದ್ದಾರೆ.
ಈ ಬಗ್ಗೆ ಈಗಾಗಲೇ ಸದನದಲ್ಲಿ ಪಕ್ಷಾತೀತವಾಗಿ ಧ್ವನಿ ಎತ್ತಲಾಗಿದ್ದು, ಸರ್ಕಾರ ಮೊದಲು ಸ್ಥಳೀಯ ಕಂಬಳಗಳ ವೈಭವ ಮತ್ತು ಅಸ್ತಿತ್ವವನ್ನು ಉಳಿಸಲು ಆದ್ಯತೆ ನೀಡಬೇಕು ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಅಪರಾಧ
Karkala-ಕಾರ್ಕಳ : ಪತಿ-ಇಬ್ಬರು ಮಕ್ಕಳನ್ನು ತೊರೆದು ಪ್ರಿಯಕರನೊಂದಿಗೆ ಹೋದ ವಿವಾಹಿತೆ: ಪೊಲೀಸ್ ಠಾಣೆಯಲ್ಲಿ “ತಪ್ಪಿನ ಅರಿವಾಗಿ” ವಾಪಸ್ಸು ಪತಿ ಮನೆಗೆ ತೆರಳಿದ ಮಹಿಳೆ
ಪತಿ ಹಾಗೂ ಇಬ್ಬರು ಮಕ್ಕಳನ್ನು ತೊರೆದು ಪ್ರಿಯಕರನೊಂದಿಗೆ ಕಾರ್ಕಳಕ್ಕೆ ಬಂದಿದ್ದ ವಿವಾಹಿತೆಯ ಪ್ರಕರಣವೊಂದು, ಪೊಲೀಸರ ಸಕಾಲಿಕ ಮಧ್ಯಸ್ಥಿಕೆ ಮತ್ತು ಸಮಾಲೋಚನೆಯಿಂದಾಗಿ ಸುಖಾಂತ್ಯ ಕಂಡಿದೆ.
ಕಾರ್ಕಳ: ಪತಿ ಹಾಗೂ ಇಬ್ಬರು ಮಕ್ಕಳನ್ನು ತೊರೆದು ಪ್ರಿಯಕರನೊಂದಿಗೆ ಕಾರ್ಕಳಕ್ಕೆ ಬಂದಿದ್ದ ವಿವಾಹಿತೆಯ ಪ್ರಕರಣವೊಂದು, ಪೊಲೀಸರ ಸಕಾಲಿಕ ಮಧ್ಯಸ್ಥಿಕೆ ಮತ್ತು ಸಮಾಲೋಚನೆಯಿಂದಾಗಿ ಸುಖಾಂತ್ಯ ಕಂಡಿದೆ.
ಮಹಿಳೆಯೊಬ್ಬರು ತನ್ನ ಸಂಸಾರವನ್ನು ಬಿಟ್ಟು ಪ್ರಿಯಕರನೊಡನೆ ಕಾರ್ಕಳದಲ್ಲಿ ವಾಸವಿದ್ದರು. ಈ ವಿಷಯ ತಿಳಿದ ಪತಿ ಹಾಗೂ ಕುಟುಂಬಸ್ಥರು ತಕ್ಷಣ ಕಾರ್ಕಳ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ನೆರವು ಕೋರಿದ್ದರು. ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಠಾಣೆಗೆ ಕರೆಸಿದರು.
ಈ ಸಂದರ್ಭದಲ್ಲಿ ಪೊಲೀಸರು ಮಹಿಳೆಗೆ ಸಂಸಾರದ ಮಹತ್ವ, ಮಕ್ಕಳ ಭವಿಷ್ಯ ಹಾಗೂ ಕುಟುಂಬದ ಜವಾಬ್ದಾರಿಗಳ ಕುರಿತು ಗಂಭೀರವಾಗಿ ಬುದ್ಧಿವಾದ ಹೇಳಿದರು. ಕುಟುಂಬಸ್ಥರು ಕೂಡ ಮಹಿಳೆಯನ್ನು ಮರಳಿ ಮನೆಗೆ ಬರುವಂತೆ ಮನವೊಲಿಸಿದರು. ಕೊನೆಗೆ ತನ್ನ ತಪ್ಪಿನ ಅರಿವಾದ ಮಹಿಳೆ, ಪ್ರಿಯಕರನ ಸಹವಾಸ ತೊರೆದು ಪತಿ ಮತ್ತು ಮಕ್ಕಳೊಂದಿಗೆ ಸಂಸಾರ ನಡೆಸಲು ಒಪ್ಪಿಕೊಂಡರು.
ಇಬ್ಬರ ನಡುವಿನ ಮನಸ್ತಾಪವು ಮಾತುಕತೆಯ ಮೂಲಕ ರಾಜಿಯಾಗಿ ಬಗೆಹರಿದ ಕಾರಣ, ಯಾವುದೇ ಕಾನೂನು ಕ್ರಮ ಅಥವಾ ಕೇಸು ದಾಖಲಾಗದೆ ಪ್ರಕರಣವು ಠಾಣೆಯಲ್ಲೇ ಇತ್ಯರ್ಥವಾಯಿತು. ಈ ಮೂಲಕ ವಿಭಜನೆಯ ಅಂಚಿನಲ್ಲಿದ್ದ ಕುಟುಂಬವೊಂದು ಮತ್ತೆ ಒಂದಾಗಿದೆ.
-
ಬಿಗ್ ನ್ಯೂಸ್19 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು21 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ19 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು20 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ21 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಸ್ಥಳೀಯ21 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್‌ಪಿ ಭೇಟಿ, ಪರಿಶೀಲನೆ
-
ಶಿಕ್ಷಣ20 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ಶಿಕ್ಷಣ20 hours agoVivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ


















