ಅಪರಾಧ
Digitel Arrest :’ಡಿಜಿಟಲ್ ಆರೆಸ್ಟ್’ ಮಾಡಿ ಉಡುಪಿಯ ವೈದ್ಯರಿಂದ ಕೋಟ್ಯಾಂತರ ರೂ ಹಣ ದೋಚಿದ ಸೈಬರ್ ವಂಚಕರು – ನಿಮಗೂ ಈ ರೀತಿ ಕರೆ ಬರಬಹುದು ಎಚ್ಚರ

ಬಳಿಕ ಆತ, ನಿಮ್ಮನ್ನು ಡಿಜಿಟಲ್ ಆರೆಸ್ಟ್ ಮಾಡುವುದಾಗಿ ತಿಳಿಸಿದ್ದು ಸ್ಕೈಪೇ ಆಯಪ್ ಮೂಲಕ ವೀಡಿಯೋ ಮಾನಿಟರಿಂಗ್ ಮಾಡುವುದಾಗಿ ಹೇಳಿದ್ದಾನೆ. ಆ ಬಳಿಕ ಜು. 29ರಿಂದ ಆ. 9ರ ವರೆಗೆ ವಂಚಕರು ವೈದರನ್ನು ಅವರದೇ ಮನೆಯ ಕೊಠಡಿಯಲ್ಲಿ ಗೃಹಬಂಧನಕ್ಕೆ ಒಳಪಡಿಸಿದ್ದಾರೆ!
ಉಡುಪಿ: ಆ 15: ಆನ್ ಲೈನ್ ಫ್ರಾಡ್ ಎನ್ನುವುದು ಜನರು ಎದುರಿಸುತ್ತಿರುವ ಅತೀ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ. ಪ್ರತಿ ದಿನವೂ ನವೀನ ತಂತ್ರಗಾರಿಕೆ ಉಪಯೋಗಿಸಿ ಸೈಬರ್ ಕ್ರಿಮಿನಲ್ಗಳು ಎಲ್ಲೋ ಅಡಗಿ ಕೂತು ವಂಚಿಸುವ ಕೈಲಸ ಮಾಡುತ್ತಿದ್ದಾರೆ. ಮೊದಲೆಲ್ಲ ಬ್ಯಾಂಕ್ ಖಾತೆಗೆ ಲಿಂಕ್ ಆದ ಮೊಬೈಲ್ ನ ಒಟಿಪಿ ಪಡೆದು ವಂಚಿಸುತ್ತಿದ್ದರು. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡುತ್ತಿದ್ದಂತೆ ವಂಚಿಸಲು ನವೀನ ಮಾದರಿಗಳನ್ನು ಆವಿಷ್ಕರಿಸಿದ್ದು,ಅದರಲ್ಲಿ ಈಗ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವುದು, ಡಿಜಿಟಲ್ ಆರೆಸ್ಟ್.
ದೇಶದ ನಾನಾ ಭಾಗದಿಂದ ಈ ರೀತಿಯ ವಂಚನೆ ಕೃತ್ಯಗಳು ವರದಿಯಾಗುತ್ತಿದ್ದು ಉಡುಪಿ ಜಿಲ್ಲೆಯ ಅತ್ರಾಡಿಯಲ್ಲೂ ವೈದ್ಯರೊಬ್ಬರಿಗೆ ಸೈಬರಂ ವಂಚಕರು ಕೋಟ್ಯಾಂತರ ಹಣ ವಂಚಿಸಿದ್ದಾರೆ.
ಆರೋಗ್ಯ ಸಂಸ್ಥೆಯ ಸಲಹೆಗಾರ ಆತ್ರಾಡಿ ನಿವಾಸಿ ಡಾ| ಅರುಣ್ ಕುಮಾರ್ (53) ಅನ್ ಲೈನಂ ವಂಚಕರ ಜಾಲಕ್ಕೆ ಬಲಿಯಾದವರು. ಡಿಜಿಟಲ್ ಆರೆಸ್ಟ್ ಹೆಸರಿನಲ್ಲಿ, ಗೃಹಬಂಧನ ವಿಧಿಸಿ ಡಾ| ಅರುಣ್ ಅವರಿಗೆ ಕೋಟ್ಯಂತರ ರೂ. ವಂಚಿಸಿದ್ದಾರೆ.
ನೇಪಾಲದ ಕಾಠ್ಮಂಡುವಿನಲ್ಲಿ ವಾಸವಿ ರುವ ಡಾ| ಅರುಣ್ ಕುಮಾರ್ ಅವರು ಜುಲೈ 29ಕ್ಕೆ ಆತ್ರಾಡಿಯ ಮನೆಗೆ ಆಗಮಿಸಿದ್ದರು. ಈ ವೇಳೆ ಅವರರು ವಂಚಕರ ಕುತಂತ್ರಕ್ಕೆ ಬಲಿಯಾಗಿದ್ದಾರೆ.
ಕೊರಿಯರ್ ನಲ್ಲಿ ಡ್ರಗ್ಸ್ ಬಂದಿದೆ…
ಜು. 29ರಂದು +919232037584 ಸಂಖ್ಯೆಯಿಂದ ಡಾ| ಅರುಣ್ ಗೆ ಅಪರಿಚಿತರಿಂದ ಕರೆ ಬಂದಿದೆ. ಕಸ್ಟಮ್ಸ್ನಿಂದ ಕರೆ ಮಾಡುವುದಾಗಿ ಆಗಂತುಕರು ತಿಳಿಸಿದ್ದಾರೆ. ನಿಮ್ಮ ಆಧಾರ್ ನಂಬರ್ ಬಳಸಿ ಬುಕ್ ಆಗಿರುವ ಫೆಡ್ಎಕ್ಸ್ ಕೊರಿಯರ್ನಲ್ಲಿ 5 ಪಾಸ್ಪೋರ್ಟ್, 5 ಎಟಿಎಂ ಕಾರ್ಡ್, 200 ಗ್ರಾಂ ಎಂಡಿಎಂಎ ಹಾಗೂ 5000 ಯುಎಸ್ಡಿ ಇದ್ದು ಈ ಕೊರಿಯರ್ ಪ್ರಸ್ತುತ ಮುಂಬಯಿ ಕಸ್ಟಮ್ಸ್ ಅವರ ವಶದಲ್ಲಿರುವುದಾಗಿ ತಿಳಿಸಿದ್ದಾರೆ.
ಈ ವೇಳೆ ಅರುಣ್ ಅವರು ಕೋರಿಯರ್ ಮಾಡಿಲ್ಲ ಎಂದು ತಿಳಿಸಿದಾಗ ಅಪರಿಚಿತ ವ್ಯಕ್ತಿ ಆತನ ಮೇಲಾಧಿಕಾರಿಯವರಿಗೆ ಹಾಟ್ಲೆçನ್ ಮೂಲಕ ಸಂಪರ್ಕ ಕಲ್ಪಿಸಿಕೊಟ್ಟಿದ್ದು, ಆ ವ್ಯಕ್ತಿ ತಾನು ಪೊಲೀಸ್ ಅಧಿಕಾರಿ ಎಂಬಂತೆ ಬಿಂಬಿಸಿದ್ದಾನೆ. “ನಿಮ್ಮ ಆಧಾರ್ ನ ದುರ್ಬಳಕೆಯ ಬಗ್ಗೆ ದೂರು ಸ್ವೀಕರಿಸಲಾಗಿದೆ ಎಂದು ತಿಳಿಸಿ ನಮ್ಮ ಕೇಂದ್ರ ಕಚೇರಿಗೆ ಕರೆಯನ್ನು ಫಾರ್ವಡ್ ಮಾಡುವುದಾಗಿ ಹೇಳಿದ್ದ. ಅನಂತರದಲ್ಲಿ ಕರೆ ಸ್ವೀಕರಿಸಿದ ವ್ಯಕ್ತಿ ನಿಮ್ಮ ಆಧಾರ್ ವಿವಿಧ ಬ್ಯಾಂಕ್ ಖಾತೆಗಳಿಗೆ ಲಿಂಕ್ ಆಗಿದೆ.ಭಯೋತ್ಪಾದಕರು ಸಿಮ್ ಖರೀದಿಸಲು ಬಳಸಿದ್ದಾರೆ ಎಂದು ಹೆದರಿಸಿದ್ದಾನೆ..
ಬಳಿಕ ಆತ, ನಿಮ್ಮನ್ನು ಡಿಜಿಟಲ್ ಆರೆಸ್ಟ್ ಮಾಡುವುದಾಗಿ ತಿಳಿಸಿದ್ದು ಸ್ಕೈಪೇ ಆಯಪ್ ಮೂಲಕ ವೀಡಿಯೋ ಮಾನಿಟರಿಂಗ್ ಮಾಡುವುದಾಗಿ ಹೇಳಿದ್ದಾನೆ. ಆ ಬಳಿಕ ಜು. 29ರಿಂದ ಆ. 9ರ ವರೆಗೆ ವಂಚಕರು ವೈದರನ್ನು ಅವರದೇ ಮನೆಯ ಕೊಠಡಿಯಲ್ಲಿ ಗೃಹಬಂಧನಕ್ಕೆ ಒಳಪಡಿಸಿದ್ದಾರೆ!
ಅಷ್ಟೂ ದಿನ ಮನೆಯ ರೂಮ್ ಒಂದರಲ್ಲಿ ಇರುವಂತೆ ಹಾಗೂ ಬೇರೆಯವರೊಂದಿಗೆ ಸಂಪರ್ಕಿಸದಂತೆ ಸೂಚಿಸಿದ್ದ ಆರೋಪಿಗಳು ವಾಶ್ರೂಂಗೆ ಹೋಗುವಾಗಲೂ ಮೊಬೈಲ್ ಆನ್ ಇಟ್ಟು ಕ್ಷಣಾರ್ಧದಲ್ಲಿ ಬರುವಂತೆ ಸೂಚಿಸಿದ್ದರು. ಜತೆಗೆ ಮೊಬೈಲ್ ಅನ್ನು ಯಾವುದೇ ಕಾರಣಕ್ಕೂ ಆಫ್ ಮಾಡದಂತೆ ಎಚ್ಚರಿಕೆಯನ್ನೂ ನೀಡಿದ್ದರು.
ವೈದ್ಯರು ಯಾವುದೋ ಕೆಲಸದಲ್ಲಿ ಇರಬಹುದು ಎಂದುಕೊಂಡು ಮನೆಮಂದಿ ಅನ್ನ-ಆಹಾರವನ್ನು ಕೊಠಡಿಯೊಳಗೆ ನೀಡಿ ಹೋಗುತ್ತಿದ್ದರು. ಬಳಿಕ ಅಪರಿಚಿತರು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ಪಾವತಿಸುವಂತೆ ತಿಳಿಸಿದ್ದು ವೈದ್ಯರು ತನ್ನ ಎಚ್.ಡಿ.ಎಫ್.ಸಿ. ಬ್ಯಾಂಕ್ ಖಾತೆಯಿಂದ ಆ. 6ರಿಂದ ಆ. 9ರ ವರೆಗೆ ಹಂತ-ಹಂತವಾಗಿ ಒಟ್ಟು 1,33,81,000 ರೂ.ಗಳನ್ನು ಆರೋಪಿಗಳ ಖಾತೆಗೆ ವರ್ಗಾಯಿಸಿದ್ದಾರೆ.
ಈ ವೇಳೆ ಆರೋಪಿಗಳು ಈ ಹಣವನ್ನು ಆ. 12ಕ್ಕೆ ನಿಮ್ಮ ಅಕೌಂಟ್ಗೆ ಜಮೆ ಮಾಡಲಾಗುವುದು ಎಂದು ತಿಳಿಸಿದ್ದು, ಇದುವರೆಗೂ ಹಣ ಜಮೆಯಾಗಿಲ್ಲ. ಇದರಿಂದ ವಂಚನೆ ಅರಿವಿಗೆ ಬಂದ ವೈದರು ಸೆನ್ ಠಾಣೆಗೆ ದೂರು ನೀಡಿದ್ದಾರೆ. ಪ್ರಸ್ತುತ ವೈದ್ಯರು ನೇಪಾಲಕ್ಕೆ ತೆರಳಿದ್ದು, ಪೊಲೀಸರು ಮತ್ತಷ್ಟು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇದೆ ರೀತಿ ಡಿಜಿಟಲ್ ಆರೆಸ್ಟ್ ಮಾಡಿದ ಪ್ರಕರಣ ನಿನ್ನೆ ಉತ್ತರ ಪ್ರದೇಶದಿಂದಲೂ ವರದಿಯಾಗಿದ್ದು ಅಲ್ಲಿ ಕೂಡ ಬಲಿಪಶು ಆದವರು ವೈದ್ಯರೇ. ಹಲವು ತಿಂಗಳುಗಳ ಪುತ್ತೂರಿನ ವೈದ್ಯರೂಬ್ಬರನ್ನು ಇದೇ ರೀತಿ ಸೈಬರ್ ವಂಚಕರು ವಂಚಿಸಿದ್ದು ಲಕ್ಷಾಂತರ ರೂಪಾಯಿ ದೋಚಿದ್ದರು. ಶ್ರೀಮಂತರು, ಸಮಾಜದಲ್ಲಿ ಪ್ರತಿಷ್ಟಿತರು ಎನಿಸಿದವರನ್ನೇ ಗುರಿಯಾಗಿಸಿ ಈ ಆನ್ ಲೈನ್ ವಂಚಕರು ವಂಚಿಸುತ್ತಿದ್ದಾರೆ.
ಅಂತರ ರಾಜ್ಯ
Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಅಗರ್ತಲಾ: ಬರೋಬ್ಬರಿ 14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ ಸುಲಿಗೆ ಹಣ ನೀಡಿದ್ದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಪುರ ಪೊಲೀಸರ ಅಪರಾಧ ತನಿಖಾ ದಳ (CID) ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಪ್ರಮುಖ ಶಂಕಿತನೊಬ್ಬನನ್ನು ಬಂಧಿಸಿದೆ.
ಬಾಜು ಎಂದು ಗುರುತಿಸಲಾಗಿರುವ ಆರೋಪಿಯನ್ನು ಗುರುವಾರ ಬಂಧಿಸಿ ಅಗರ್ತಲಾಗೆ ಕರೆತರಲಾಗಿದೆ. ಬಳಿಕ ಪಶ್ಚಿಮ ತ್ರಿಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (CJM) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ನಾಲ್ಕು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಏನಿದು 14 ವರ್ಷಗಳ ಹಿಂದಿನ ಪ್ರಕರಣ?
ಅಗರ್ತಲಾದ ಭಾಟಿ ಅಭಯನಗರ ನಿವಾಸಿ ಆಶಿಶ್ ಸೋಮ್ (40) ಎಂಬ ಶಾಲಾ ಶಿಕ್ಷಕರು 2011ರ ಮೇ 28ರಂದು ನಿಗೂಢವಾಗಿ ನಾಪತ್ತೆಯಾಗಿದ್ದರು. ಮರದ ವ್ಯಾಪಾರದಲ್ಲಿಯೂ ತೊಡಗಿಸಿಕೊಂಡಿದ್ದ ಅವರು, ವ್ಯವಹಾರದ ನಿಮಿತ್ತ ಕಾಂಚನ್ಪುರಕ್ಕೆ ತೆರಳಿದ ಬಳಿಕ ಮನೆಗೆ ವಾಪಸಾಗಿರಲಿಲ್ಲ.
ಶಿಕ್ಷಕರು ನಾಪತ್ತೆಯಾದ ಕೆಲವೇ ದಿನಗಳಲ್ಲಿ ಅವರನ್ನು ಅಪಹರಿಸಿರುವುದಾಗಿ ಹೇಳಿಕೊಂಡು ಕುಟುಂಬಸ್ಥರಿಗೆ ದೂರವಾಣಿ ಕರೆಗಳು ಬಂದಿದ್ದವು. ಅಪಹರಣಕಾರರು ಹಣಕ್ಕೆ ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ವಿವಿಧ ಹಂತಗಳಲ್ಲಿ ಸುಮಾರು ₹25 ಲಕ್ಷ ಹಣವನ್ನು ನೀಡಿದ್ದಾರೆ. ಆದರೆ ಹಣ ಪಡೆದ ಬಳಿಕವೂ ಶಿಕ್ಷಕರನ್ನು ಬಿಡುಗಡೆ ಮಾಡಿರಲಿಲ್ಲ. ಹಲವು ವರ್ಷಗಳ ಕಾಲ ಅವರ ಸುಳಿವು ಕೂಡ ಪತ್ತೆಯಾಗಿರಲಿಲ್ಲ.
ಸಮಾಧಿಗಳಲ್ಲಿ ಪತ್ತೆಯಾದ ಅಸ್ಥಿಪಂಜರದಿಂದ ತನಿಖೆಗೆ ವೇಗ
ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಿದ್ದರು. ತನಿಖೆಯ ವೇಳೆ ಶಿಕ್ಷಕ ಆಶಿಶ್ ಸೋಮ್ ಅವರ ವ್ಯಾಪಾರ ಪಾಲುದಾರ ಎನ್ನಲಾದ ಹೊಸೈನ್ ಅಹ್ಮದ್ ಕೂಡ ಅಪಹರಣ ಪ್ರಕರಣದ ಶಂಕಿತರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಬಂಧಿತ ಬಾಜುವನ್ನು ವಿಚಾರಣೆ ನಡೆಸಲಾಗುತ್ತಿದ್ದು, ಆತ ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾನೆ ಎನ್ನಲಾಗಿದೆ.
ಇದೇ ವರ್ಷದ ಸೆಪ್ಟೆಂಬರ್ 16ರಂದು ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಸೋನ್ಸಿಲ್ ಪ್ರದೇಶದ ಸ್ಮಶಾನವೊಂದರ ಮೂರು ಸಮಾಧಿಗಳಿಂದ ಅಪರಿಚಿತ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದವು. ಈ ಬೆಳವಣಿಗೆ ಪ್ರಕರಣದ ತನಿಖೆಗೆ ಹೊಸ ವೇಗ ನೀಡಿದೆ.
ಪತ್ತೆಯಾದ ಅಸ್ಥಿಪಂಜರದ ಅವಶೇಷಗಳು ನಾಪತ್ತೆಯಾಗಿರುವ ಆಶಿಶ್ ಸೋಮ್ ಅವರದ್ದೇ ಎಂಬುದನ್ನು ಪತ್ತೆಹಚ್ಚಲು ಪೊಲೀಸರು ಅವರ ಕುಟುಂಬ ಸದಸ್ಯರ ಡಿಎನ್ಎ ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಸದ್ಯ ಡಿಎನ್ಎ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದ್ದು, ಅದರ ಬಳಿಕ ಪ್ರಕರಣದ ಹಲವು ನಿಗೂಢ ಸಂಗತಿಗಳು ಬಯಲಾಗುವ ನಿರೀಕ್ಷೆಯಿದೆ.
ಸ್ಥಳೀಯ
Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು
ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.
ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.
ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.
ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.















