ಸ್ಥಳೀಯ
DK Shivakumar-‘ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ’ – ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ‘ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ’ ಎಂದು ‘ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿ ಯಾರಾಗಲಿದ್ದಾರೆ’ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.
ನೆಲಮಂಗಲ: ‘ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿ ಯಾರಾಗಲಿದ್ದಾರೆ’ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ‘ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ’ ಎಂದು ಪ್ರತಿಕ್ರಿಯಿಸಿದ್ದಾರೆ.
ರಾಮನಗರದಲ್ಲಿ ಕಳೆದ ಐದು ವರ್ಷಗಳಿಂದ ನಾನು ಧ್ವಜಾರೋಹಣ ಮಾಡಿದ್ದೇನೆ. ಚನ್ನಪಟ್ಟಣದ ಬಗ್ಗೆ ಅಧಿಕಾರಿಗಳ ಬಳಿ ಕೇಳಿದಾಗ, ಆರು ವರ್ಷಗಳಿಂದ ಅಲ್ಲಿಗೆ ಬಂದು ಯಾರೂ ಧ್ವಜಾರೋಹಣ ನಡೆಸಿಲ್ಲ ಎಂದರು.
ಅವರಿಗೆ ದೇಶದ ಮೇಲೆ ವಿಶ್ವಾಸವಿಲ್ಲ ಎಂದೆನಿಸುತ್ತದೆ. ಅವರು ಏನಾದರು ಮಾಡಿಕೊಳ್ಳಲಿ, ನಾನು ನನ್ನ ಕರ್ತವ್ಯ ಮಾಡಿದ್ದೇನೆ’ ಎಂದು ಪರೋಕ್ಷವಾಗಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
-
Uncategorized10 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized8 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized7 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized11 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized9 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized8 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |




















