ಬಿಗ್ ನ್ಯೂಸ್
Raksha Bandhana ರಾಖಿ ಕಟ್ಟೋ ಸಹೋದರರಿಗೆ ಈ ಗಿಫ್ಟ್ ಕೊಟ್ರೆ ಅಪಾಯ ಕಟ್ಟಿಟ್ಟ ಬುತ್ತಿ….! ಅದೃಷ್ಟ ಅಲ್ಲ ಅದು ದಾರಿದ್ರ್ಯಕ್ಕೆ ಆಹ್ವಾನ..!!

ನಿಖರ ನ್ಯೂಸ್:- ಭಾರತ ಅಂದ್ರೆ ಅದು ಸಂಸ್ಕೃತಿಯ ನಾಡು. ಇಲ್ಲಿ ಅನೇಕ ಹಬ್ಬಗಳು ಕೂಡಾ ಅದರದ್ದೇ ಆದ ಹಿನ್ನೆಲೆ, ಮೌಲ್ಯ ಮತ್ತು ಅರ್ಥವನ್ನು ಹೊಂದಿದೆ. ಅದೇ ರೀತಿ ಸಹೋದರತೆಯ ಪ್ರತೀಕವಾದ, ಆ ಬಾಂಧವ್ಯವನ್ನು ಪ್ರೇರೇಪಿಸುವ ಹಬ್ಬವೆಂದರೆ ಅದು ರಕ್ಷಾಬಂಧನ. ಈ ದಿನ ರಾಖಿ ಕಟ್ಟಿ ಅದೆಷ್ಟೋ ಸಹೋದರ ಸಹೋದರಿಯರು ಒಬ್ಬರಿಗೊಬ್ಬರು ಶುಭ ಕೋರುತ್ತಾರೆ. ಉಡುಗೊರೆಯನ್ನು ಕೂಡಾ ನೀಡುತ್ತಾರೆ. ಆದರೆ ಈ ಕೆಲವೊಂದು ರೀತಿಯ ಉಡುಗೊರೆ ಕೊಟ್ರೆ ನಿಮ್ಮ ಸಹೋದರಿಗೆ ಒಳ್ಳೆಯದಕ್ಕಿಂತ ಕೆಟ್ಟದಾಗೋದು ಜಾಸ್ತಿಯಂತೆ…!
ರಕ್ಷಾಬಂಧನಕ್ಕೆ ರಾಖಿ ಕಟ್ಟಿ ಉಡುಗೊರೆ ನೀಡೋದು ಸಹಜ
ಶ್ರಾವಣ ಮಾಸದ ಹುಣ್ಣಿಮೆಯಂದು ಬರುವ ರಕ್ಷಾಬಂಧನ ಹಬ್ಬವೂ ಒಂದು. ಇದು ಸಹೋದರ ಮತ್ತು ಸಹೋದರಿಯ ಪ್ರೀತಿಯ ಸಂಕೇತವಾಗಿದೆ. ಸಹೋದರಿ ತನ್ನ ಸಹೋದರನ ಮಣಿಕಟ್ಟಿನ ಮೇಲೆ ರಾಖಿಯನ್ನು ಕಟ್ಟುತ್ತಾಳೆ ಮತ್ತು ಸಹೋದರನು ತನ್ನ ಸಹೋದರಿಯನ್ನು ರಕ್ಷಿಸಲು ಪ್ರತಿಜ್ಞೆ ಮಾಡುತ್ತಾನೆ. ತಂಗಿಗೆ ಒಂದಷ್ಟು ಉಡುಗೊರೆಗಳನ್ನೂ ಕೊಡುತ್ತಾನೆ. ಈ ವರ್ಷ ರಕ್ಷಾಬಂಧನವು ಆಗಸ್ಟ್ 19 ರಂದು ಬರುತ್ತದೆ. ಅದೆಷ್ಟೋ ಪ್ರೀತಿಯ ಸಹೋದರ ಬಂಧವನ್ನು ಬೆಸೆದಿರುವ ಅಣ್ಣ ತಂಗಿಯಂದಿರು ಈ ದಿನಕ್ಕಾಗಿ ಕಾಯುತ್ತಿರುತ್ತಾರೆ.
ಯಾವ ರೀತಿಯ ಗಿಫ್ಟ್ ನೀಡಿದರೆ ಉತ್ತಮ..? ಬಗ್ಗೆ ಜ್ಯೋತಿಷಿಗಳ ಸಲಹೆ ಏನು ಗೊತ್ತಾ….?
ಈ ಬಗ್ಗೆ ಜ್ಯೋತಿಷಿ ಮತ್ತು ವಾಸ್ತು ಸಲಹೆಗಾರ ಪಂಡಿತ್ ಹಿತೇಂದ್ರ ಕುಮಾರ್ ಶರ್ಮಾ ಅವರು ಸಲಹೆ ನೀಡಿದ್ದಾರೆ. ಚರ್ಮದ ವಸ್ತುಗಳು ಅಥವಾ ಚರ್ಮದ ಚೀಲಗಳು ಸೇರಿದಂತೆ ಮಾರುಕಟ್ಟೆಯಲ್ಲಿ ಅನೇಕ ಸೊಗಸಾದ ವಸ್ತುಗಳು ಲಭ್ಯವಿದೆ. ಅನೇಕ ಬಾರಿ ಇವುಗಳನ್ನು ಉಡುಗೊರೆಯಾಗಿ ಖರೀದಿಸಲಾಗುತ್ತದೆ, ಆದರೆ ಚರ್ಮದ ವಸ್ತುಗಳು ಶನಿಯೊಂದಿಗೆ ಸಂಬಂಧ ಹೊಂದಿವೆ, ಆದ್ದರಿಂದ ಈ ವಸ್ತುಗಳನ್ನು ಎಂದಿಗೂ ಸಹೋದರಿಗೆ ಉಡುಗೊರೆಯಾಗಿ ನೀಡಬೇಡಿ, ಏಕೆಂದರೆ ಅವು ಅವಳ ತೊಂದರೆಗಳನ್ನು ಹೆಚ್ಚಿಸಬಹುದು.

ಸಹೋದರಿಯರಿಗೆ ಉಡುಗೊರೆಗಳನ್ನು ಖರೀದಿಸುವಾಗ, ಬಣ್ಣವು ಕಪ್ಪು ಆಗಿರಬಾರದು. ಏಕೆಂದರೆ ಕಪ್ಪು ಬಣ್ಣವು ಜೀವನದಲ್ಲಿ ನಕಾರಾತ್ಮಕತೆಯನ್ನು ತರುತ್ತದೆ ಎಂದು ನಂಬಲಾಗಿದೆ. ರಕ್ಷಾಬಂಧನದಂದು ನಿಮ್ಮ ಸಹೋದರಿಗೆ ಕಪ್ಪು ಬಟ್ಟೆ ಅಥವಾ ಕಪ್ಪು ಬಣ್ಣದ ವಸ್ತುಗಳನ್ನು ಉಡುಗೊರೆಯಾಗಿ ನೀಡಬೇಡಿ. ಇದು ದಾರಿದ್ರ್ಯ ಕ್ಕೆ ಆಮಂತ್ರಣ ನೀಡಿದಂತೆ ಎಂದು ಜ್ಯೋತಿಷ್ಯ ಹೇಳುತ್ತದೆ.
ವಾಚ್, ಸ್ಮಾರ್ಟ್ ವಾಚ್ ಗಳು ಸೇರಿದಂತೆ ಇಂದಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಹಲವು ರೀತಿಯ ವಾಚ್ ಗಳು ಲಭ್ಯವಿವೆ. ಆದಾಗ್ಯೂ, ರಕ್ಷಾಬಂಧನಕ್ಕೆ ಗಡಿಯಾರವನ್ನು ಉಡುಗೊರೆಯಾಗಿ ನೀಡುವುದು ಅಶುಭವೆಂದು ಪರಿಗಣಿಸಲಾಗಿದೆ. ಒಳ್ಳೆಯ ಮತ್ತು ಕೆಟ್ಟ ಸಮಯಗಳು ಗಡಿಯಾರಕ್ಕೆ ಸಂಬಂಧಿಸಿವೆ. ಈ ಹಬ್ಬದಂದು ತಪ್ಪಾಗಿ ವಾಚ್ ಉಡುಗೊರೆ ನೀಡಬೇಡಿ.
ಚೂಪಾದ ವಸ್ತುಗಳನ್ನು ಉಡುಗೊರೆಯಾಗಿ ನೀಡುವುದು ಹಿಂದೂ ಧರ್ಮದಲ್ಲಿ ಮಂಗಳಕರವೆಂದು ಪರಿಗಣಿಸಲಾಗುವುದಿಲ್ಲ. ಯಾರಿಗಾದರೂ ತೀಕ್ಷ್ಣವಾದ ವಸ್ತುಗಳನ್ನು ಉಡುಗೊರೆಯಾಗಿ ನೀಡುವುದು ನಿಮ್ಮ ಸಂಬಂಧದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು.

ಯಾವ ಸಮಯದಲ್ಲಿ ರಕ್ಷೆ ಕಟ್ಟುವುದು ಶುಭಕರ…?
ಶ್ರಾವಣ ಮತ್ತು ರಕ್ಷಾಬಂಧನದಲ್ಲಿ ಸೋಮವಾರದಂದು ಅಶುಭ ನೆರಳು ಇರುತ್ತದೆ. ಹೀಗಾಗಿ ಈ ದಿನ ಉಪವಾಸ ಮಾಡಬೇಕೋ ಬೇಡವೋ, ಅಣ್ಣನಿಗೆ ರಾಖಿ ಕಟ್ಟಬೇಕೋ ಬೇಡವೋ ಎಂಬ ಹಲವು ಪ್ರಶ್ನೆಗಳು ಹಲವರ ಮನಸ್ಸಿನಲ್ಲಿ ಮೂಡುತ್ತವೆ. ಸೋಮವಾರ ಮತ್ತು ಪೂರ್ಣಿಮೆಯಂದು ಉಪವಾಸ ಮಾಡುವವರು ರಕ್ಷಾ ಬಂಧನದ ದಿನವೂ ಉಪವಾಸ ಮಾಡಿ ಮರುದಿನ ಪಾರಣ ಮಾಡಬೇಕು. ಭದ್ರಾ ಕಾಲದಲ್ಲಿ ರಾಖಿ ಕಟ್ಟುವುದು ಅಶುಭಕರ.
ಈ ಮಾಹಿತಿ ಜ್ಯೋತಿಷ್ಯ ಪ್ರಕಾರ ನೀಡಲಾಗಿರುವುದರಿಂದ ಇದಕ್ಕೆ ಯಾವುದೇ ರೀತಿಯ ವೈಜ್ಞಾನಿಕ ಸಾಕ್ಷ್ಯಗಳಿಲ್ಲ..
ಅಂತರ ರಾಜ್ಯ
Toll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ನವದೆಹಲಿ: ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ನೋಂದಣಿ ಸಂಖ್ಯೆಯ ಆಧಾರದ ಮೇಲೆ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ ಪರಿಚಯಿಸಲು ಮುಂದಾಗಿದೆ.
ಈ ವ್ಯವಸ್ಥೆಯ ಪ್ರಕಾರ, ಟೋಲ್ ಪ್ಲಾಜಾ ದಾಟುವ ವಾಹನದ ವಿಮೆ ಚಾಲ್ತಿಯಲ್ಲಿದೆಯೇ ಎಂಬುದನ್ನು ಸ್ವಯಂಚಾಲಿತವಾಗಿ ಪರಿಶೀಲಿಸಲಾಗುತ್ತದೆ. ಒಂದು ವೇಳೆ ವಿಮೆಯ ಅವಧಿ ಮುಗಿದಿದ್ದರೆ, ವಾಹನದ ಮಾಲೀಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ತಕ್ಷಣವೇ SMS ಮೂಲಕ ಎಚ್ಚರಿಕೆ ಸಂದೇಶ ಕಳುಹಿಸಲಾಗುತ್ತದೆ. ವಿಮೆ ಇಲ್ಲದೆ ವಾಹನ ಚಲಾಯಿಸುವವರಿಗೆ ನಿಯಮಾನುಸಾರ 10,000 ರೂ.ವರೆಗೆ ದಂಡ ವಿಧಿಸುವ ಅವಕಾಶವೂ ಇದೆ.
ಟೋಲ್ ಪ್ಲಾಜಾದಲ್ಲಿ ವಿಮೆ ಪರಿಶೀಲನೆ ಹೇಗೆ?
ಹೊಸ ವ್ಯವಸ್ಥೆಯು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ನಿರ್ವಹಿಸುವ ‘ವಾಹನ್’ (VAHAN) ಡೇಟಾಬೇಸ್ನಲ್ಲಿರುವ ವಾಹನಗಳ ನೋಂದಣಿ ಹಾಗೂ ವಿಮೆಯ ಮಾಹಿತಿಯನ್ನು ಆಧರಿಸಿ ಕಾರ್ಯನಿರ್ವಹಿಸಲಿದೆ.
ವಾಹನ ಟೋಲ್ ಪ್ಲಾಜಾ ದಾಟುವಾಗ ಅದರ ನೋಂದಣಿ ಸಂಖ್ಯೆಯನ್ನು ಗುರುತಿಸಿ, ಡೇಟಾಬೇಸ್ನಲ್ಲಿರುವ ವಿಮೆಯ ವಿವರಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಈ ಮೂಲಕ ವಿಮೆ ಚಾಲ್ತಿಯಲ್ಲಿದೆಯೇ ಅಥವಾ ಅವಧಿ ಮುಗಿದಿದೆಯೇ ಎಂಬುದನ್ನು ತಂತ್ರಜ್ಞಾನದ ಸಹಾಯದಿಂದ ಪರಿಶೀಲಿಸಲಾಗುತ್ತದೆ.
ವಿಮೆಯ ಅವಧಿ ಮುಗಿದಿದ್ದರೆ ಕೆಲವೇ ನಿಮಿಷಗಳಲ್ಲಿ ವಾಹನ ಮಾಲೀಕರ ಮೊಬೈಲ್ಗೆ SMS ರವಾನೆಯಾಗಲಿದೆ.
SMSನಲ್ಲಿ ಯಾವ ಮಾಹಿತಿ ಇರಲಿದೆ?
ವಾಹನದ ವಿಮೆ ಅವಧಿ ಮುಗಿದಿದ್ದರೆ ಮಾಲೀಕರಿಗೆ ಕಳುಹಿಸುವ ಸಂದೇಶದಲ್ಲಿ ಈ ಕೆಳಗಿನ ವಿವರಗಳಿರಲಿವೆ:
- ವಾಹನದ ನೋಂದಣಿ ಸಂಖ್ಯೆ.
- ಟೋಲ್ ಪ್ಲಾಜಾ ದಾಟಿದ ದಿನಾಂಕ ಮತ್ತು ಸಮಯ.
- ವಾಹನದ ವಿಮೆ ಅವಧಿ ಮುಗಿದ ದಿನಾಂಕ.
- ವಿಮೆಯನ್ನು ನವೀಕರಿಸಿಕೊಳ್ಳುವಂತೆ ಸೂಚನೆ.
ಈ ಮೂಲಕ ವಾಹನ ಮಾಲೀಕರು ವಿಮೆಯನ್ನು ತಕ್ಷಣ ನವೀಕರಿಸಿಕೊಳ್ಳಲು ಎಚ್ಚರಿಕೆ ನೀಡುವ ಉದ್ದೇಶ ಹೊಂದಲಾಗಿದೆ. - ವಿಮೆ ಇಲ್ಲದೆ ವಾಹನ ಚಲಾಯಿಸಿದರೆ ಎಷ್ಟು ದಂಡ?
- ಮೋಟಾರು ವಾಹನ ಕಾಯ್ದೆಯ ಪ್ರಕಾರ ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಂದು ವಾಹನಕ್ಕೂ ಮಾನ್ಯವಾದ ಥರ್ಡ್ ಪಾರ್ಟಿ ವಿಮೆ ಹೊಂದಿರುವುದು ಕಡ್ಡಾಯವಾಗಿದೆ. ಅಪಘಾತ ಸಂಭವಿಸಿದಾಗ ಮತ್ತೊಬ್ಬ ವ್ಯಕ್ತಿಗೆ ಗಾಯ, ಸಾವು ಅಥವಾ ಆಸ್ತಿಗೆ ಹಾನಿಯಾದರೆ ಪರಿಹಾರ ನೀಡಲು ಈ ವಿಮೆ ನೆರವಾಗುತ್ತದೆ.
ಮಾನ್ಯ ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನು ಉಲ್ಲಂಘನೆಯಾಗಿದ್ದು, ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 196ರ ಅಡಿಯಲ್ಲಿ ಮೊದಲ ಬಾರಿಗೆ ತಪ್ಪು ಎಸಗಿದರೆ 2,000 ರೂ. ಹಾಗೂ ಮರುಕಳಿಸಿದರೆ 4,000 ರೂ. ದಂಡ ಅಥವಾ ಕಾಯ್ದೆಯಲ್ಲಿ ನಿಗದಿಪಡಿಸಿರುವ ಇತರ ಶಿಕ್ಷೆ ವಿಧಿಸಬಹುದು.
ಸದ್ಯ ಒಂದು ಟೋಲ್ ಪ್ಲಾಜಾದಲ್ಲಿ ಮಾತ್ರ ಪ್ರಾಯೋಗಿಕ ಪರೀಕ್ಷೆ
ಪ್ರಸ್ತುತ ದೆಹಲಿಯ ಅರ್ಬನ್ ಎಕ್ಸ್ಟೆನ್ಷನ್ ರಸ್ತೆ-2 (UER-II)ಯ ಮುಂಡ್ಯಾ ಟೋಲ್ ಪ್ಲಾಜಾದಲ್ಲಿ ಈ ವ್ಯವಸ್ಥೆಯ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಪ್ರಯೋಗ ಯಶಸ್ವಿಯಾದರೆ ದೇಶದ ಇತರ ಟೋಲ್ ಪ್ಲಾಜಾಗಳಿಗೂ ವಿಸ್ತರಿಸುವ ಕುರಿತು NHAI ಚಿಂತನೆ ನಡೆಸಿದೆ.
ಆದರೆ ದೇಶಾದ್ಯಂತ ಈ ವ್ಯವಸ್ಥೆ ಯಾವಾಗ ಜಾರಿಗೆ ಬರಲಿದೆ ಎಂಬ ಬಗ್ಗೆ ಪ್ರಾಧಿಕಾರ ಇನ್ನೂ ಅಧಿಕೃತ ದಿನಾಂಕ ಪ್ರಕಟಿಸಿಲ್ಲ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
ವಾಹನ ಸವಾರರೇ ಎಚ್ಚರ: ನಿಮ್ಮ ವಾಹನದ ವಿಮೆಯ ಅವಧಿಯನ್ನು ಆಗಾಗ್ಗೆ ಪರಿಶೀಲಿಸಿ. ಅವಧಿ ಮುಗಿಯುವ ಮೊದಲೇ ವಿಮೆಯನ್ನು ನವೀಕರಿಸಿಕೊಳ್ಳಿ. ವಿಮೆ ಇಲ್ಲದೆ ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪಘಾತ ಸಂಭವಿಸಿದ ಸಂದರ್ಭದಲ್ಲಿ ದೊಡ್ಡ ಆರ್ಥಿಕ ಹೊರೆ ಎದುರಿಸಬೇಕಾಗಬಹುದು.
ಬಿಗ್ ನ್ಯೂಸ್
Puttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
ಪುತ್ತೂರು: ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 18 ಶಾಖೆಗಳನ್ನು ಹೊಂದಿರುವ ಈ ಸಂಘವು ಕುಂಬಾರಿಕೆ ಉದ್ಯಮದ ಉತ್ತೇಜನ ಹಾಗೂ ಗ್ರಾಮೀಣ ಕುಶಲಕರ್ಮಿಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿದೆ.
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಸಂಘವು ಕುಂಬಾರಿಕೆ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದೆ. ಇಲ್ಲಿ ಗ್ರಾಮೀಣ ಕುಂಬಾರಿಕೆಯ ಉತ್ಪಾದನೆ ಹಾಗೂ ತರಬೇತಿ ನೀಡಲಾಗುತ್ತಿದ್ದು, ಇಂತಹ ಸೌಲಭ್ಯ ಹೊಂದಿರುವ ರಾಜ್ಯದ ಏಕೈಕ ಸಹಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಬಿಗ್ ನ್ಯೂಸ್
Adarsha-25ನೇ ವರ್ಷದ ಸಂಭ್ರಮಕ್ಕೆ ಮತ್ತೊಂದು ಗರಿ: ಸವಣೂರಿನ ಆದರ್ಶ ಸಹಕಾರ ಸಂಘಕ್ಕೆ ರಾಜ್ಯ ಸಹಕಾರ ಸಪ್ತಾಹದಲ್ಲಿ ಪ್ರಶಸ್ತಿ ಗೌರವ
ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸಹಕಾರ ಸಂಘಗಳಲ್ಲಿ ಒಂದಾಗಿರುವ ಸವಣೂರಿನ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಸಹಕಾರ ಸಂಘಗಳಲ್ಲಿ ಒಂದಾಗಿರುವ ಸವಣೂರಿನ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
ರಾಜ್ಯ ಸಹಕಾರ ಸಪ್ತಾಹದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನೀಡಲಾಗುವ ಈ ಪ್ರಶಸ್ತಿಗೆ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು ಪ್ರಥಮ ಸ್ಥಾನ ಪಡೆದು ಆಯ್ಕೆಯಾಗಿದೆ.
ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನ.20ರಂದು ನಡೆಯಲಿರುವ ರಾಜ್ಯ ಮಟ್ಟದ 73ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಸಂಘಕ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಪ್ರಸ್ತುತ ಸವಣೂರಿನಲ್ಲಿ ಸ್ವಂತ ನಿವೇಶನ ಹಾಗೂ ಕಟ್ಟಡದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವದ ಸಂಭ್ರಮದಲ್ಲಿದೆ. ಈ ವಿಶೇಷ ಸಂದರ್ಭದಲ್ಲಿ ಸಂಘಕ್ಕೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಂಘದ ಅಧ್ಯಕ್ಷರಾದ ‘ಸಹಕಾರ ರತ್ನ’ ಸವಣೂರು ಸೀತಾರಾಮ ರೈ ಕೆ. ತಿಳಿಸಿದ್ದಾರೆ.
-
ರಾಜಕೀಯ19 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಸಿನೆಮಾ20 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಪರಾಧ24 hours agoMadikeri-ಗಾಂಜಾ ಸೇವಿಸಿದವನಿಗೆ ವಿಭಿನ್ನ ಶಿಕ್ಷೆ: ದಿನವಿಡೀ ಟ್ರಾಫಿಕ್ ಕರ್ತವ್ಯ ನಿರ್ವಹಿಸಿದ ಆರೋಪಿ
-
ಉಡುಪಿ24 hours agoUdupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
-
ಅಂತರ ರಾಜ್ಯ20 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
ಅಂತರ ರಾಜ್ಯ24 hours agoBird flu alert-ಕೇರಳದಲ್ಲಿ ಹಕ್ಕಿಜ್ವರ ಆತಂಕ: 26 ಸಾವಿರ ಕೋಳಿ, ಬಾತುಕೋಳಿ ಸೇರಿ ಪಕ್ಷಿಗಳ ಹತ್ಯೆಗೆ ನಿರ್ಧಾರ..!
-
ಬಿಗ್ ನ್ಯೂಸ್3 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಕ್ರೀಡೆ23 hours agoIPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..















