ಅಪರಾಧ
Bengaluru-ಬೆಂಗಳೂರು : ಡ್ರಾಪ್ ಮಾಡುವ ನೆಪದಲ್ಲಿ ಅತ್ಯಾಚಾರ- ಆರೋಪಿಯ ಬಂಧನ
ಗೆಟ್ ಟು ಗೆದರ್ ಪಾರ್ಟಿ ಅಂತಾ ಸ್ನೇಹಿತರ ಜೊತೆ ಹೋಗಿ ಬರುವಾಗ ಡ್ರಾಪ್ ಮಾಡುವ ನೆಪದಲ್ಲಿ ಯುವತಿಯನ್ನು ಬೊಮ್ಮನಹಳ್ಳಿ ಸಮೀಪದ ಶೆಡ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ.
ಬೆಂಗಳೂರು, ಆ.19: ಹೆಚ್ಎಸ್ಆರ್ ಲೇಔಟ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಎಸ್ಆರ್ ಲೇಔಟ್ ಪೊಲೀಸರು ಕಾಮುಕನನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಆಡುಗೋಡಿಯ ನಿವಾಸದಿಂದ ಬಂಧಿಸಲಾಗಿದೆ. ಸದ್ಯ ತನಿಖೆ ಮುಂದುವರೆದಿದ್ದು ಆರೋಪಿ ಹಿನ್ನಲೆ ಬಗ್ಗೆ ಇನ್ನಷ್ಟೇ ಮಾಹಿತಿ ಗೊತ್ತಾಗಬೇಕಿದೆ.
ಅತ್ಯಾಚಾರ ಆರೋಪಿ ಕೊರಿಯೋಗ್ರಾಫರ್ ಆಗಿದ್ದು ನಿನ್ನೆ ಕೋರಮಂಗಲ ಪಬ್ಗೆ ಪಾರ್ಟಿಗೆ ಬಂದಿದ್ದ. ಯುವತಿ ಕೂಡ ಕೋರಮಂಗಲದ ಪಬ್ನಲ್ಲಿ ಪಾರ್ಟಿ ಮುಗಿಸಿ ಹೊರಟಿದ್ದಳು. ಮನೆಗೆ ತೆರಳುವಾಗ ಯುವತಿ ಡ್ರಾಪ್ ಕೇಳಿದ್ದಾಳೆ.
ಡ್ರಾಪ್ ಮಾಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಲಾಗಿದೆ. ಅತ್ಯಾಚಾರದ ವೇಳೆ ಆರೋಪಿ ಯುವತಿಯ ಬಟ್ಟೆ ಹರಿದು ದುಷ್ಕೃತ್ಯ ಮೆರೆದಿದ್ದಾನೆ. ಈ ವೇಳೆ ಯುವತಿ ಕೂಡ ಈತನ ಕೃತ್ಯಕ್ಕೆ ಪ್ರತಿರೋಧ ಒಡ್ಡಿದ್ದು ಆತನ ಬಟ್ಟೆ ಹರಿದು, ಮುಖಕ್ಕೆ ಪರಚಿದ್ದಾಳೆ.
ಅಷ್ಟರಲ್ಲಿ ಯುವತಿಯ ಸ್ನೇಹಿತರು ಕೂಡ ಸ್ಥಳಕ್ಕೆ ಬಂದಿದ್ದು ಇದರಿಂದ ಹೆದರಿ ಆರೋಪಿ ಮನೆಗೆ ಬಂದಿದ್ದ. ಸದ್ಯ ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಏನಿದು ಘಟನೆ:
ಬೆಂಗಳೂರಿನಲ್ಲಿ ಅಂತಿಮ ವರ್ಷದ ಪದವಿ ಓದುತ್ತಿದ್ದ ಅನ್ಯರಾಜ್ಯದ ಯುವತಿ ಗೆಟ್ ಟು ಗೆದರ್ ಪಾರ್ಟಿ ಅಂತಾ ಸ್ನೇಹಿತರ ಜತೆ ಹೋಗಿದ್ಲು. ಆ. 17ರ ರಾತ್ರಿ 1 ಗಂಟೆ ಸುಮಾರಿಗೆ ಕೋರಮಂಗಲದಲ್ಲಿ ಪಾರ್ಟಿ ಮುಗಿಸಿಕೊಂಡು ವಾಪಸ್ ಬರುವಾಗ ಸ್ನೇಹಿತರಿಂದ ಬೇರ್ಪಟ್ಟಿದ್ದಾಳೆ.
ಹೆಬ್ಬಗೋಡಿಯಲ್ಲಿರೋ ಮನೆ ಸೇರಬೇಕಿದ್ದ ಯುವತಿ, ಅಪರಿಚಿತನ ಬೈಕ್ ಹತ್ತಿದ್ದಾಳೆ. ಆ ಬೈಕ್‌ನಲ್ಲಿ ಡ್ರಾಪ್ ಪಡೆದವಳು ಮಾರ್ಗಮಧ್ಯೆ ಕೆಳಗಿಳಿದ್ದಾಳೆ. ಸ್ವಲ್ಪದೂರ ನಡೆದುಕೊಂಡು ಹೋದವಳು, ಮತ್ತೊಂದು ಬೈಕ್ ಹತ್ತಿದ್ದಾಳೆ. ಯುವತಿ ಮದ್ಯದ ನಶೆಯಲ್ಲಿರೋದನ್ನ ಬಂಡವಾಳ ಮಾಡಿಕೊಂಡ ಕ್ರಿಮಿ, ಬೊಮ್ಮನಹಳ್ಳಿ ಸಮೀಪದ ನಿರ್ಜನವಾದ ಲಾರಿ ನಿಲ್ಲಿಸುವ ಜಾಗಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.
ಜೀವ ಉಳಿಸಿದ SOS ಎಮರ್ಜೆನ್ಸಿ ಬಟನ್!
ಕಾಮುಕ ಅತ್ಯಾಚಾರಕ್ಕೆ ಯತ್ನಿಸ್ತಿದ್ದಂತೆ ಯುವತಿ ಮೊಬೈಲ್ನಲ್ಲಿ ಎಮರ್ಜೆನ್ಸಿ SOS ಬಟನ್ ಒತ್ತಿದ್ದಾಳೆ. ತಕ್ಷಣ ಮಾಹಿತಿ ಸ್ನೇಹಿತರಿಗೆ ಹೋಗಿದೆ. ಸ್ಥಳಕ್ಕೆ ದೌಡಾಯಿಸಿದ ಸ್ನೇಹಿತರು ಯುವತಿಯ ಜೀವ ಉಳಿಸಿದ್ದಾರೆ. ಸ್ಥಳದಲ್ಲೆ ಅರೆ ನಗ್ನ ಸ್ಥಿತಿಯಲ್ಲಿದ್ದ ಅಪರಿಚಿತ ಓಡಿ ಹೋಗಿದ್ದ. ಆತನ ಮುಖದ ಮೇಲೆಲ್ಲಾ ಪರಚಿದ ಗಾಯಗಳಾಗಿದೆ ಎಂದು ಸ್ನೇಹಿತರು ಮಾಹಿತಿ ಕೊಟ್ಟು ದೂರು ದಾಖಲಿಸಿದ್ದರು. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅಸ್ವಸ್ಥಗೊಂಡಿದ್ದ ಯುವತಿ ಬೊಮ್ಮಸಂದ್ರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈಕೆ ಹೊರ ರಾಜ್ಯದವಳಾಗಿದ್ದು, ಬೆಂಗಳೂರಿನಲ್ಲಿ ಕೊನೆ ವರ್ಷದ ಪದವಿ ಓದುತ್ತಿದ್ದಳೆ. ಸದ್ಯ BNS ಕಾಯ್ದೆ 64 ಅಡಿಯಲ್ಲಿ HSR ಲೇಔಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಅಪರಾಧ
Raid-ರಾಜ್ಯದ 45 ಐಸ್‌ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು, ಅ. 9: ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನಾಲ್ಕು ಘಟಕಗಳಲ್ಲಿ ನಿಯಮ ಉಲ್ಲಂಘನೆ
ಪರಿಶೀಲನೆ ವೇಳೆ ಬೆಂಗಳೂರಿನ ಜಯನಗರ 3ನೇ ಬ್ಲಾಕ್‌ನ ಸಾವರ ಐಸ್‌ಕ್ರೀಂ ಕೆಫೆ, ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯ ಎಂ.ಎನ್. ಎಂಟರ್‌ಪ್ರೈಸಸ್, ಮೈಸೂರಿನ ಜಾನ್ ಕ್ಯಾಂಡಿ ಐಸ್‌ಕ್ರೀಂ ತಯಾರಿಕಾ ಘಟಕ ಹಾಗೂ ರಾಯಚೂರಿನ ಜೆಮಿನಿ ಐಸ್‌ಕ್ರೀಂ ತಯಾರಿಕಾ ಘಟಕಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದಿದೆ.
ಈ ಘಟಕಗಳ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಹಾಗೂ ಸಂಬಂಧಿತ ನಿಯಮಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
70 ಆಹಾರ ಮಾದರಿಗಳ ಸಂಗ್ರಹ
ವಿಶೇಷ ತಪಾಸಣೆಯ ಸಂದರ್ಭದಲ್ಲಿ ವಿವಿಧ ಘಟಕಗಳಿಂದ ಐಸ್‌ಕ್ರೀಂ, ಹಾಲು, ಹಾಲಿನ ಪುಡಿ, ಫ್ಲೇವರಿಂಗ್ ಪದಾರ್ಥಗಳು, ಸಕ್ಕರೆ, ಆಹಾರ ಸೇರ್ಪಡೆ ಪದಾರ್ಥಗಳು ಸೇರಿದಂತೆ ವಿವಿಧ ಕಚ್ಚಾವಸ್ತುಗಳ ಒಟ್ಟು 70 ಮಾದರಿಗಳನ್ನು ಸಂಗ್ರಹಿಸಲಾಗಿದೆ.
ಈ ಮಾದರಿಗಳನ್ನು ಗುಣಮಟ್ಟ ಮತ್ತು ಆಹಾರ ಸುರಕ್ಷತಾ ಮಾನದಂಡಗಳ ಪರಿಶೀಲನೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
ಪರಿಶೀಲನೆಯ ವೇಳೆ ಅವಧಿ ಮೀರಿದ ಐಸ್‌ಕ್ರೀಂ, ಹಾಲು, ಬಿಸ್ಕತ್ ಹಾಗೂ ಕೊಬ್ಬರಿ ಪುಡಿ ಪತ್ತೆಯಾಗಿವೆ. ಅಲ್ಲದೆ, ಕೆಲವು ಆಹಾರ ಉತ್ಪನ್ನಗಳ ಮೇಲೆ ಲೇಬಲಿಂಗ್ ನಿಯಮಗಳನ್ನು ಸರಿಯಾಗಿ ಪಾಲಿಸದಿರುವುದೂ ಅಧಿಕಾರಿಗಳ ಗಮನಕ್ಕೆ ಬಂದಿದೆ ಎಂದು ಪ್ರಕಟಣೆ ತಿಳಿಸಿದೆ.
ಆಹಾರ ಪದಾರ್ಥಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಇಂತಹ ತಪಾಸಣೆಗಳನ್ನು ಮುಂದುವರಿಸಲಾಗುವುದು. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
ಸ್ಥಳೀಯ
Yatnal-ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿದ ಆರೋಪ : ಯತ್ನಾಳ್ ವಿರುದ್ಧ ಎಫ್‌ಐಆರ್
ಜೀವಂತವಾಗಿರುವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅರ್ಜಿ ಸಲ್ಲಿಸಿದ ಆರೋಪದ ಮೇಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದೇ ರೀತಿಯ ಆರೋಪದಡಿ ಬಿಜೆಪಿ ಪಾಲಿಕೆ ಸದಸ್ಯ ಗಿರೀಶ ಪಾಟೀಲ ಹಾಗೂ ತಿಕೋಟಾದ ಆರು ಮಂದಿ ವಿರುದ್ಧವೂ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ವಿಜಯಪುರ: ಜೀವಂತವಾಗಿರುವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅರ್ಜಿ ಸಲ್ಲಿಸಿದ ಆರೋಪದ ಮೇಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದೇ ರೀತಿಯ ಆರೋಪದಡಿ ಬಿಜೆಪಿ ಪಾಲಿಕೆ ಸದಸ್ಯ ಗಿರೀಶ ಪಾಟೀಲ ಹಾಗೂ ತಿಕೋಟಾದ ಆರು ಮಂದಿ ವಿರುದ್ಧವೂ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಯತ್ನಾಳ್ ವಿರುದ್ಧ ದೂರು
ವಿಜಯಪುರ ನಗರದ ಬಾಗವಾನ ಕಾಲೊನಿ ನಿವಾಸಿ ಅಬ್ದುಲ ರಜಾಕ ಬಾಗವಾನ್ (50) ಅವರು ಗುರುವಾರ ಜಲನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ತಾನು ಜೀವಂತವಾಗಿದ್ದು, ತರಕಾರಿ ವ್ಯಾಪಾರ ಮಾಡಿಕೊಂಡಿದ್ದೇನೆ. ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರನಾಗಿದ್ದು, ಮತದಾರರ ಗುರುತಿನ ಚೀಟಿಯನ್ನೂ ಹೊಂದಿದ್ದೇನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಆದರೆ, ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ತಾನು ಮೃತಪಟ್ಟಿರುವುದಾಗಿ ನಕಲಿ ಮರಣ ಪ್ರಮಾಣಪತ್ರವನ್ನು ಲಗತ್ತಿಸಿ, ತನ್ನ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಸೆಪ್ಟೆಂಬರ್ 3ರಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಿಗೆ ಎಸ್‌ಐಆರ್ ಫಾರ್ಮ್-7 ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಮೂಲಕ ವಂಚನೆ ಎಸಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಪಾಲಿಕೆ ಸದಸ್ಯ ಗಿರೀಶ ಪಾಟೀಲ ವಿರುದ್ಧವೂ ಪ್ರಕರಣ
ವಿಜಯಪುರ ನಗರದ ನಿಸಾರಮಡ್ಡಿ ನಿವಾಸಿ ಜಾವೀದ್ ಇಂಡಿಕರ್ (32) ಅವರು ಮಹಾನಗರ ಪಾಲಿಕೆ ಬಿಜೆಪಿ ಸದಸ್ಯ ಹಾಗೂ ಶಾಸಕ ಯತ್ನಾಳ್ ಅವರ ಬೆಂಬಲಿಗ ಗಿರೀಶ ಪಾಟೀಲ ವಿರುದ್ಧ ಗಾಂಧಿಚೌಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ತಾನು ನಿಸಾರಮಡ್ಡಿಯಲ್ಲಿ ವಾಸವಿಲ್ಲ ಎಂಬುದಾಗಿ ಸುಳ್ಳು ದಾಖಲೆ ಸೃಷ್ಟಿಸಿ, ತನ್ನ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸುವಂತೆ ಗಿರೀಶ ಪಾಟೀಲ ಅವರು ಎಸ್‌ಐಆರ್ ಫಾರ್ಮ್-7 ಸಲ್ಲಿಸಿದ್ದಾರೆ ಎಂದು ಜಾವೀದ್ ಆರೋಪಿಸಿದ್ದಾರೆ. ಈ ಸಂಬಂಧ ಅಕ್ಟೋಬರ್ 6ರಂದು ದೂರು ದಾಖಲಿಸಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ತಿಕೋಟಾದ ಆರು ಮಂದಿ ವಿರುದ್ಧ ಎಫ್‌ಐಆರ್
ತಿಕೋಟಾ ಪಟ್ಟಣದ ನಿವಾಸಿ ಹಾಜಿಲಾಲ ಕೊಟ್ಟಲಗಿ (68) ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಎಸ್‌ಐಆರ್ ಫಾರ್ಮ್-7 ಸಲ್ಲಿಸಿದ ಆರೋಪದ ಮೇಲೆ ಆರು ಮಂದಿ ವಿರುದ್ಧ ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭೀಮು ಗೊಳಸಂಗಿ, ವಿನಾಯಕ ಮಮದಾಪುರ, ಮಹೇಶ ಮುಕರ್ತಿಹಾಳ, ಆನಂದ ಅಂಬಿಗೇರ, ಹುಚ್ಚಪ್ಪ ಗಾಣಿಗೇರ ಹಾಗೂ ಗೋವಿಂದ ಮುದನೂರ ವಿರುದ್ಧ ಹಾಜಿಲಾಲ ಕೊಟ್ಟಲಗಿ ಅಕ್ಟೋಬರ್ 6ರಂದು ದೂರು ನೀಡಿದ್ದಾರೆ.
ತಾನು ಮುಸ್ಲಿಂ ಎಂಬ ಕಾರಣಕ್ಕೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವ ಉದ್ದೇಶದಿಂದ ನಕಲಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಅಪರಾಧ
Udupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉಡುಪಿ, ಅ.8: ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೊಲೆಯಾದ ಉದ್ಯಮಿ ಡೇವಿಡ್ ಡಿಸೋಜಾ ಅವರ ಪುತ್ರನಿಗೆ ವಾಟ್ಸಾಪ್ ಕರೆ ಮಾಡಿರುವ ಅಪರಿಚಿತ ವ್ಯಕ್ತಿಯೊಬ್ಬ, ₹5 ಕೋಟಿ ನೀಡುವಂತೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
“ನಿನ್ನ ತಂದೆಯಿಂದ ನನ್ನ ಸಹೋದರನಿಗೆ ಸಾಕಷ್ಟು ನಷ್ಟವಾಗಿತ್ತು. ಆ ಕಾರಣಕ್ಕೆ ನಾನೇ ಕೊಲೆ ಮಾಡಿಸಿದ್ದೆ. ನಮಗಾಗಿರುವ ನಷ್ಟವನ್ನು ತುಂಬಿಕೊಡಲು ₹5 ಕೋಟಿ ನೀಡಬೇಕು” ಎಂದು ಕರೆ ಮಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಬ್ಬ ಉದ್ಯಮಿ ಹಾಗೂ ಖಾಸಗಿ ಸಂಸ್ಥೆಯ ವ್ಯಕ್ತಿಗೂ ಹೇಮಂತ್ ಪೂಜಾರಿ ಹೆಸರಿನಲ್ಲಿ ವಾಟ್ಸಾಪ್ ಕರೆಗಳು ಬಂದಿದ್ದು, ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿವೆ.
25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಆರೋಪಿ
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಹೇಮಂತ್ ಪೂಜಾರಿ ಪ್ರಮುಖ ಆರೋಪಿಯಾಗಿದ್ದಾನೆ. ಆತನ ಸಹೋದರ ಹಾಗೂ ಇತರ ಸಹಚರರ ನೆರವಿನಿಂದ ಹೊರರಾಜ್ಯದ ಶೂಟರ್‌ಗಳನ್ನು ಕರೆಸಿ ಕೊಲೆ ಮಾಡಿಸಲಾಗಿದೆ ಎಂಬ ಆರೋಪ ಪ್ರಕರಣದಲ್ಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಪೂಜಾರಿಯನ್ನು ಹೊರತುಪಡಿಸಿ ಉಳಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಕಳೆದ 25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಹೇಮಂತ್ ಪೂಜಾರಿ ಬಗ್ಗೆ ಇದುವರೆಗೂ ಸ್ಪಷ್ಟ ಸುಳಿವು ಲಭ್ಯವಾಗಿಲ್ಲ. ಈ ನಡುವೆ ಆತನ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬಂದಿರುವುದು ಪೊಲೀಸರ ಗಮನ ಸೆಳೆದಿದೆ.
ಕರೆ ಮಾಡುತ್ತಿರುವವರು ಯಾರು?
ಹೇಮಂತ್ ಪೂಜಾರಿಯೇ ಕರೆ ಮಾಡುತ್ತಿದ್ದಾನೆಯೇ ಅಥವಾ ಆತನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಬೇರೆಯವರು ಬೆದರಿಕೆ ಹಾಕುತ್ತಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕರೆಗಳ ಮೂಲ, ಹಣದ ಬೇಡಿಕೆಯ ಹಿಂದಿನ ಉದ್ದೇಶ ಹಾಗೂ ಪ್ರಕರಣಗಳ ನಡುವಿನ ಸಂಬಂಧದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
ಬಿಗ್ ನ್ಯೂಸ್24 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್23 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ23 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ22 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ22 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಸ್ಥಳೀಯ5 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಅಪರಾಧ5 hours agoUdupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು
-
ಮಂಗಳೂರು21 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















