ಬಿಗ್ ನ್ಯೂಸ್
Fake call-ಇನ್ಮುಂದೆ ಫೇಕ್ ಕಾಲ್ ಮಾಡೋ ಮುನ್ನ ಹುಷಾರ್…! ನಿಮ್ ನಂಬರ್ ಸೇರುತ್ತೆ ಬ್ಲಾಕ್ ಲಿಸ್ಟ್…! ಸೆ.1ರಿಂದ ಹೊಸ ರೂಲ್ಸ್……!!!
ಇತ್ತೀಚೆಗೆ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿರುವುದು ಈ ಮೊಬೈಲ್ ನ ತಂತ್ರಜ್ಞಾನ ದಿನದಿಂದ ದಿನಕ್ಕೆ ಅಪ್ಡೇಟ್ ಆಗುತ್ತಿರುವುದರಿಂದಲೇ. ಇನ್ನು ನೀವು ಫ್ರಾಡ್ ಕಾಲ್, ಫೇಕ್ ಕಾಲ್ ಗಳು ಬರೋದು, ಅದನ್ನು ಸ್ವೀಕರಿಸಿ ಕಷ್ಟಕ್ಕೆ ಸಿಲುಕಿದ್ದು ಹೀಗೆ ಅನೇಕ ರೀತಿಯ ಅನುಭವಗಳು ಆಗಿರಬಹುದು. ಇನ್ನು ಇಂತಹ ಸ್ಕ್ಯಾಮ್ ಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಹೊಸ ನಿಯಮ ಜಾರಿಯಾಗಲಿದೆ.
ನಿಖರ ನ್ಯೂಸ್:- ಮೊಬೈಲ್ ತಂತ್ರಜ್ಞಾನ ಆಧುನೀಕರಣಗೊಳ್ಳುತ್ತಾ ಹೋದಂತೆ ಅನೇಕ ಹೊಸ ಹೊಸ ಫೀಚರ್ಸ್ ಗಳು, ಆ್ಯಪ್ ಗಳು ಸಿಗುತ್ತಲೇ ಇರುತ್ತದೆ. ಮೊಬೈಲ್ ನಿಂದ ಬಳಕೆದಾರರಿಗೆ ಎಷ್ಟು ಪ್ರಯೋಜನಗಳಿವೆಯೋ ಅಷ್ಟೇ ದುಷ್ಪರಿಣಾಮಗಳೂ ಕೂಡಾ ಇದೆ. ಇತ್ತೀಚೆಗೆ ಸೈಬರ್ ಕ್ರೈಂ ಪ್ರಕರಣಗಳು ಕೂಡಾ ಹೆಚ್ಚಾಗುತ್ತಿರುವುದು ಈ ಮೊಬೈಲ್ ನ ತಂತ್ರಜ್ಞಾನ ದಿನದಿಂದ ದಿನಕ್ಕೆ ಅಪ್ಡೇಟ್ ಆಗುತ್ತಿರುವುದರಿಂದಲೇ. ಇನ್ನು ನೀವು ಫ್ರಾಡ್ ಕಾಲ್, ಫೇಕ್ ಕಾಲ್ ಗಳು ಬರೋದು, ಅದನ್ನು ಸ್ವೀಕರಿಸಿ ಕಷ್ಟಕ್ಕೆ ಸಿಲುಕಿದ್ದು ಹೀಗೆ ಅನೇಕ ರೀತಿಯ ಅನುಭವಗಳು ಆಗಿರಬಹುದು. ಇನ್ನು ಇಂತಹ ಸ್ಕ್ಯಾಮ್ ಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಹೊಸ ನಿಯಮ ಜಾರಿಯಾಗಲಿದೆ.

ಸ್ಪ್ಯಾಮ್ ಕರೆಗಳಿಂದ ಪರಿಹಾರ ನೀಡಲು ಟಿಆರ್ ಎಐ ಹೊಸ ರೂಲ್ಸ್…!
ದಿನೇ ದಿನೇ ಹೆಚ್ಚಾಗುತ್ತಿರುವ ಫೇಕ್ ಕಾಲ್, ಫ್ರಾಡ್ ಕಾಲ್ಸ್ ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಟೆಲಿಕಾಂ ನಿಯಂತ್ರಕ TRAI ಹೊಸ ನಿಯಮವನ್ನು ಜಾರಿಗೆ ತರುತ್ತಿದೆ. ಈ ಕುರಿತಂತೆ ಇತ್ತೀಚೆಗಷ್ಟೇ (ಆಗಸ್ಟ್ 13) ನಿರ್ದೇಶನ ನೀಡಿರುವ ಟೆಲಿಕಾಂ ನಿಯಂತ್ರಕ TRAI, ಅನಪೇಕ್ಷಿತ (ಸ್ಪ್ಯಾಮ್) ಕರೆಗಳನ್ನು ಮಾಡುವ ನೋಂದಾಯಿತ ಟೆಲಿಮಾರ್ಕೆಟಿಂಗ್ ಕಂಪನಿಗಳ ಎಲ್ಲಾ ಟೆಲಿಕಾಂ ಸಂಪನ್ಮೂಲಗಳನ್ನು ಕಡಿತಗೊಳಿಸುವಂತೆ ಮತ್ತು ಅವುಗಳನ್ನು ಎರಡು ವರ್ಷಗಳವರೆಗೆ ಕಪ್ಪುಪಟ್ಟಿಗೆ ಸೇರಿಸುವಂತೆ ತಿಳಿಸಿದೆ.
ಏನಿದು ಹೊಸ ನಿಯಮ..?
TRAI ಹೊಸ ನಿಯಮಕ್ಕೆ ಅನುಸಾರವಾಗಿ “ಸ್ಪಾಮ್ ಕರೆಗಳನ್ನು ಮಾಡುವ ನೋಂದಾಯಿತ ಟೆಲಿಮಾರ್ಕೆಟಿಂಗ್ ಕಂಪನಿಗಳ ಎಲ್ಲಾ ಟೆಲಿಕಾಂ ಚಾನೆಲ್‌ಗಳನ್ನು ಸಂಪರ್ಕ ಕಡಿತಗೊಳಿಸುವಂತೆ ಟೆಲಿಕಾಂ ಸೇವಾ ಪೂರೈಕೆದಾರರಿಗೆ ನಿರ್ದೇಶಿಸಲಾಗಿದೆ ಮತ್ತು ಟೆಲಿಕಾಂ ಕಮರ್ಷಿಯಲ್ ಕಮ್ಯುನಿಕೇಷನ್ಸ್ ಗ್ರಾಹಕ ಆದ್ಯತೆಯ ನಿಯಮಗಳು, 2018 ರ ಅಡಿಯಲ್ಲಿ ಅಂತಹ ಕರೆಗಳನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಲಾಗುತ್ತದೆ” ಎಂದು TRAI ಹೇಳಿಕೆಯಲ್ಲಿ ತಿಳಿಸಿದೆ.
ಸ್ಪ್ಯಾಮ್ ಕರೆಗಳಿಗೆ ಇನ್ಮುಂದೆ ಪರ್ಮನೆಂಟ್ ಸೆಲ್ಯೂಷನ್…!
ನಕಲಿ ಕರೆಗಳಿಗೆ ಕಡಿವಾಣ ಹಾಕುವ ಸಲುವಾಗಿ ಆರ್ಟಿಫೀಶಿಯಲ್ ಇಂಟಲಿಜೆನ್ಸ್ ನೆರವು ಪಡೆಯಲು ಸೂಚಿಸಿರುವ ಟೆಲಿಕಾಂ ನಿಯಂತ್ರಕ TRAI, ಇದರ ಹೊರತಾಗಿಯೂ ಫೇಕ್ ಕಾಲ್ ಸಮಸ್ಯೆ ಬಗೆಹರಿಯದಿದ್ದರೆ ಟೆಲಿಕಾಂ ಆಪರೇಟರ್, ಫೇಕ್ ಕಾಲ್ ಮಾಡಿದ ಸಂಸ್ಥೆ/ವ್ಯಕ್ತಿಗಳನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ತಿಳಿಸಿದೆ. ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಟೆಲಿಕಾಂ ಕಂಪನಿಗಳಿಗೆ ಈ ಸೂಚನೆಯನ್ನು ತಕ್ಷಣ ಅನುಸರಿಸಲು ಮತ್ತು ಈ ನಿಟ್ಟಿನಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ಹದಿನೈದು ದಿನಗಳಿಗೊಮ್ಮೆ ನಿಯಮಿತ ವಿವರಗಳನ್ನು ನೀಡುವಂತೆ ಕೇಳಿದೆ. TRAI ಹೊಸ ನಿಯಮದ ಪ್ರಕಾರ, ಯಾವುದೇ ರೀತಿ ಫ್ರಾಡ್ ಅಥವಾ ಫೇಕ್ ಕಾಲ್ ಕುರಿತು ಗ್ರಾಹಕರು ದೂರು ನೀಡಬಹುದಾಗಿದ್ದು, ಇಂತಹ ಸಂಖ್ಯೆಗಳನ್ನು ಎರಡು ವರ್ಷಗಳವರೆಗೆ ಬ್ಲಾಕ್ ಲಿಸ್ಟ್ ಗೆ ಸೇರಿಸಲಾಗುವುದು.

ಸಪ್ಟೆಂಬರ್ 1ರಿಂದ ಹೊಸ ನಿಯಮ ಜಾರಿ…
ಸ್ಪ್ಯಾಮ್, ಫೇಕ್ ಕಾಲ್ ಸಂಬಂಧಿಸಿದಂತೆ TRAI ಹೊಸ ನಿಯಮ ಇದೇ ಸೆಪ್ಟೆಂಬರ್ ಒಂದರಿಂದ ಅನುಷ್ಠಾನಕ್ಕೆ ಬರಲಿದೆ. ಇದರನ್ವಯ ಇನ್ನು ಮುಂದೆ ಜಾಹೀರಾತು ಸೇರಿದಂತೆ ಗ್ರಾಹಕರಿಗೆ ಪದೇ ಪದೇ ಕರೆ ಮಾಡುವಂತೆಯಿಲ್ಲ. ಇಂತಹ ನಕಲಿ ಕರೆಗಳಿಗೆ ಕಡಿವಾಣ ಹಾಕಲು ಟ್ರಾಯ್ ಸೂಚಿಸಿದೆ.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
ಬಿಗ್ ನ್ಯೂಸ್
ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ
ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.
ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.
ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.
-
ಮಂಗಳೂರು18 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized15 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
Uncategorized13 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
ಅಂತರ ರಾಜ್ಯ17 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ18 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಅಂತರ ರಾಜ್ಯ22 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ22 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಬಿಗ್ ನ್ಯೂಸ್17 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ


















