ಆರೋಗ್ಯ
Zika virus-ರಾಜ್ಯದಲ್ಲಿ ರಣಕೇಕೆ ಆರಂಭಿಸಿದ ಝಿಕಾ ವೈರಸ್; ಹೈ ಅಲರ್ಟ್ ಘೋಷಣೆ!; ಹೀಗಿದೆ ಎಚ್ಚರಿಕಾ ಕ್ರಮಗಳು!
ಕೇರಳದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಝಿಕಾ ವೈರಸ್ ಕರ್ನಾಟಕಕ್ಕೂ ಕಂಟಕ ತರಲು ಆರಂಭಿಸಿದೆ. ರಾಜ್ಯದಲ್ಲಿ ಝಿಕಾ ವೈರಸ್ ಮೊದಲ ಬಲಿ ಪಡೆದಿದ್ದು, ಆರೋಗ್ಯ ಇಲಾಖೆ ಹೈಅಲರ್ಟ್ ಘೋಷಿಸಿದೆ. ಶಿವಮೊಗ್ಗದಲ್ಲಿ ಝಿಕಾ ವೈರಸ್ಗೆ ಓರ್ವ ವೃದ್ಧ ಬಲಿಯಾಗಿದ್ದು, ರಾಜ್ಯದಾದ್ಯಂತ 9 ಝಿಕಾ ವೈಸರ್ ಪತ್ತೆಯಾಗಿದೆ.
ನಿಖರ ನ್ಯೂಸ್ :- ಕೇರಳದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಝಿಕಾ ವೈರಸ್ ಕರ್ನಾಟಕಕ್ಕೂ ಕಂಟಕ ತರಲು ಆರಂಭಿಸಿದೆ. ರಾಜ್ಯದಲ್ಲಿ ಝಿಕಾ ವೈರಸ್ ಮೊದಲ ಬಲಿ ಪಡೆದಿದ್ದು, ಆರೋಗ್ಯ ಇಲಾಖೆ ಹೈಅಲರ್ಟ್ ಘೋಷಿಸಿದೆ. ಶಿವಮೊಗ್ಗದಲ್ಲಿ ಝಿಕಾ ವೈರಸ್ಗೆ ಓರ್ವ ವೃದ್ಧ ಬಲಿಯಾಗಿದ್ದು, ರಾಜ್ಯದಾದ್ಯಂತ 9 ಝಿಕಾ ವೈಸರ್ ಪತ್ತೆಯಾಗಿದೆ. ಇವರಲ್ಲಿ ಮೂವರು ಗರ್ಭಿಣಿಯರು. ಸದ್ಯ, ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿರುವ ಆರೋಗ್ಯ ಇಲಾಖೆ ಈ ಪ್ರಮುಖ ಕ್ರಮಗಳನ್ನು ಅನುಸರಿಸುವಂತೆ ಎಚ್ಚರಿಸಿದೆ. ಈ ಬಗೆಗಿನ ಡೀಟಿಯಲ್ಸ್ ಇಲ್ಲಿದೆ.
ಝಿಕಾ ವೈರಸ್ ಲಕ್ಷಣಗಳೇನು?
ಝಿಕಾ ವೈರಸ್ನಿಂದ ಸಾವು ಸಂಭವಿಸುವ ಮುನ್ನ ದೇಹದಲ್ಲಿ ಕೆಲವೊಂದು ಲಕ್ಷಣಗಳು ಕಂಡುಬರುತ್ತದೆ. ಅವುಗಳೆಂದರೆ,
1. ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ದದ್ದುಗಳು ಉಂಟಾಗುವುದು.
2. ಕೀಲು ಮತ್ತು ಸ್ನಾಯುಗಳಲ್ಲಿ ನೋವು
3.ವಿಪರೀತ ತಲೆನೋವಿನಿಂದ ದೇಹಾಯಾಸ ಉಂಟಾಗುತ್ತದೆ.
4.ಸಾಮಾನ್ಯವಾಗಿ ರೋಗದ ಲಕ್ಷಣಗಳು 2-7 ದಿನಗಳವರೆಗೆ ಇರುತ್ತದೆ.

ಗರ್ಭಿಣಿಯರೇ ಎಚ್ಚರ!
ಝಿಕಾ ವೈರಸ್ನಿಂದಾಗಿ ಗರ್ಭಾವಸ್ಥೆಯಲ್ಲಿರುವ ಮಗುವಿನ ಮೆದುಳಿಗೆ ಹಾನಿ ಉಂಟಾಗುತ್ತದೆ. ಜೊತೆಗೆ ತಾಯಿ ಕೂಡ ಸಾವನಪ್ಪುವ ಸಾಧ್ಯತೆ ಇದೆ. ಹೀಗಾಗಿ ಝಿಕಾ ವೈರಸ್ ಬಗ್ಗೆ ಗರ್ಭಿಣಿಯರು ಈ ರೀತಿ ಎಚ್ಚರಿಕೆ ವಹಿಸುವುದು ಉತ್ಯಮ.
1.ಸೊಳ್ಳೆ ನಿವಾರಕಗಳನ್ನು ಬಳಸುವುದು
2.ಉದ್ದನೆಯ ತೋಳಿನ ಬಟ್ಟೆಗಳನ್ನು ಧರಿಸುವುದು.
3.ಮನೆಯ ಅಕ್ಕ ಪಕ್ಕ ನಿಂತ ನೀರನ್ನು ಕ್ಲೀನ್ ಮಾಡ್ತಾ ಇರುವುದು
ಗರ್ಭವತಿ ಮಹಿಳೆ ಇರುವ ಕಡೆ ಸೊಳ್ಳೆ ಉತ್ಪತ್ತಿ ತಾಣ ಆಗದಂತೆ ನೋಡಿ ಕೊಳ್ಳುವುದು.
4.ರಕ್ತ ತಪಾಸಣೆ ಮಾಡಬೇಕು
2 ದಿನಕ್ಕಿಂತ ಹೆಚ್ಚು ಜ್ವರ ಕಂಡು ಬಂದ್ರೆ ವೈದ್ಯರ ಬಳಿ ತಪಾಸಣೆ ಮಾಡಿ ಕೊಳ್ಳಬೇಕು
ಸದ್ಯ, ರಾಜ್ಯದಲ್ಲಿ 9 ಝಿಕಾ ವೈರಸ್ಗಳು ಪತ್ತೆಯಾಗಿದ್ದು ಈ ಬಗ್ಗೆ ಎಚ್ಚರ ವಹಿಸುವುದು ಬಹಳಾ ಮುಖ್ಯ. ಜೊತೆಗೆ ಝಿಕಾ ವೈರಸ್ಗೆ ಯಾವುದೇ ನಿರ್ಧಿಷ್ಟ ಔಷಧ ಸಧ್ಯದ ಮಟ್ಟಿಗೆ ಇಲ್ಲದಿರುವ ಕಾರಣ ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸುವುದು ಉತ್ತಮ.
ಆರೋಗ್ಯ
Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.
ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.
ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಆರೋಗ್ಯ
‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.
ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.
ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.
‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.
-
ನಿಧನ ವಾರ್ತೆ24 hours agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ನಿಧನ ವಾರ್ತೆ24 hours agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ23 hours agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
-
ನಿಧನ ವಾರ್ತೆ23 hours agoKankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
-
ಸ್ಥಳೀಯ17 hours agoRakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ
-
ಸ್ಥಳೀಯ24 hours agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ಅಂತರ ರಾಜ್ಯ23 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
-
ಸ್ಥಳೀಯ23 hours agoDharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ















