Connect with us

ದಕ್ಷಿಣ ಕನ್ನಡ

ಪುತ್ತೂರು : ಕಾಲೇಜ್‌ ವಿದ್ಯಾರ್ಥಿನಿಯ ಕೈಯಲ್ಲಿ ಗೀರಿದ ಗಾಯ- ಆಸ್ಫತ್ರೆಗೆ ದಾಖಲು ; ತನ್ನದೇ ಕಾಲೇಜಿನ ವಿದ್ಯಾರ್ಥಿ ಚೂರಿಯಿಂದ ಇರಿದ  ಆರೋಪ  

Published

on

Ad Widget

Ad Widget

Ad Widget

Ad Widget

ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ತನಗೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ  ಚೂರಿಯಿಂದ ಇರಿದಿರುವುದಾಗಿ ಆರೋಪಿಸಿ ಪುತ್ತೂರು ಸರಕಾರಿ ಆಸ್ಫತ್ರೆಯಲ್ಲಿ ದಾಖಲಾಗಿದ್ದಾಳೆ. ಅವಳ ಕೈಯಲ್ಲಿ ಗೀರಿದ ಗುರುತು ಕಂಡು ಬಂದಿದೆ.ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿ ಬೇರೆ ಬೇರೆ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಎರಡು ಸಮುದಾಯದ ಯುವಕರು ಆಸ್ಫತ್ರೆ ಮುಂಭಾಗ ಜಮಾಯಿಸಿದ್ದಾರೆ.

Ad Widget

Ad Widget

Ad Widget

Ad Widget

ಕೊಂಬೆಟ್ಟು ಕಾಲೇಜಿನಿಂದ ಪುತ್ತೂರು ಮುಖ್ಯ ಆಂಚೆ ಕಚೇರಿ ಯನ್ನು ಸಂಪರ್ಕಿಸುವ ರಸ್ತೆಯಲ್ಲಿ ಕಾಲೇಜ್‌ ವಿದ್ಯಾರ್ಥಿಗಳು ಬರುತ್ತಿರುವ ವೇಳೆ ಶ್ರೀಮಹಾಲೀಂಗೇಶ್ವರ ದೇವಸ್ಥಾನದ ಮುಂಭಾಗ ಘಟನೆ ನಡೆದಿದೆ.  ಮೂಲಗಳ ಪ್ರಕಾರ ಮುಸ್ಲಿಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿ ಹಾಗು ಹಿಂದೂ ಧರ್ಮಕ್ಕೆ ಸೇರಿದ ವಿದ್ಯಾರ್ಥಿಯ ಮಧ್ಯೆ ಯಾವುದೋ ವಿಷಯಕ್ಕೆ ಸಣ್ಣ ಜಗಳವಾಗಿದೆ . ಈ ವೇಳೆ ವಿದ್ಯಾರ್ಥಿಯೂ ವಿದ್ಯಾರ್ಥಿನಿಗೆ ಅವಾಚ್ಯ ಶಬ್ಧಗಳಿಂದ ಬೈದಿದ್ದಾನೆ ಎಂದು ಹೇಳಲಾಗುತ್ತಿದೆ .

Ad Widget

Ad Widget alt="Ad Widget"/>

Ad Widget

 ಮುಂದುವರಿದ ಭಾಗವಾಗಿ ವಿದ್ಯಾರ್ಥಿನಿ ಸರಕಾರಿ ಆಸ್ಫತ್ರೆಯಲ್ಲಿ ಆಡ್ಮಿಟ್‌ ಆಗಿದ್ದು, ಆಕೆಯ ಕೈಯಲ್ಲಿ ಗೀರಿದ ಗುರುತು ಕಂಡು ಬಂದಿದೆ . ವಿದ್ಯಾರ್ಥಿನಿ ತನಗೆ ಆದೇ ವಿದ್ಯಾರ್ಥಿ ಚೂರಿಯಿಂದ ಇರಿದಿರುವುದಾಗಿ ಆರೋಪಿಸಿರುವುದಾಗಿ ತಿಳಿದು ಬಂದಿದೆ. ಸದ್ಯ ಪೊಲೀಸರು ಘಟನೆ ನಡೆದ ಸ್ಥಳದ ಸಿಸಿಟಿವಿ ವಿಡಿಯೋ ಪರಿಶೀಲಿಸುತ್ತಿದ್ದು, ಆಕೆಯ ಜತೆಗಿದ್ದ ಬೇರೆ ವಿದ್ಯಾರ್ಥಿಗಳ ಬಳಿಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ

Ad Widget

Ad Widget <> Ad Widget

Ad Widget
Click to comment

Leave a Reply

ಶಿಕ್ಷಣ

Vivekananda-ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ- ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು 4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ.

Ad Widget

Ad Widget alt="Ad Widget"/>

Ad Widget

4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ  ಡಿಂಪಲ್ ಶೆಟ್ಟಿ, ಪ್ರಥಮ ವಿಜ್ಞಾನ ವಿಭಾಗದ ಪ್ರತೀಕ್ಷಾ, ಗುಣಶ್ರೀ, ದಿವಿಜ್ಞಾ ಭಾಗವಹಿಸಿರುತ್ತಾರೆ.

Ad Widget

Ad Widget <> Ad Widget

4×400 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ, ಸಾನ್ವಿತಾ , ಪ್ರಥಮ ವಿಜ್ಞಾನ ವಿಭಾಗದ ದಿವಿಜ್ಞಾ, ಧನ್ವಿ ಭಾಗವಹಿಸಿರುತ್ತಾರೆ.

ವೈಯಕ್ತಿಕ ವಿಭಾಗ:                               

Ad Widget

Ad Widget
  • ದ್ವಿತೀಯ ವಿಜ್ಞಾನ ವಿಭಾಗದ ಮೋಕ್ಷಿತ್ ಅವರು ಹೈಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
  • ಪ್ರಥಮ ವಿಜ್ಞಾನ ವಿಭಾಗದ ಧನ್ವಿ ಅವರು 1500 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು  ಅಭಿನಂದಿಸಿರುತ್ತಾರೆ.

Ad Widget
Continue Reading

ಶಿಕ್ಷಣ

Philomena-ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಕೆ-ಸೆಟ್ ನಲ್ಲಿ ತೇರ್ಗಡೆ

Published

on

Ad Widget

Ad Widget

Ad Widget

Ad Widget

ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್‌ ಏಜೆನ್ಸಿ ಕೆಇಎಯು ಅಕ್ಟೋಬರ್ 11 ರಂದು ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ವಿದ್ಯಾಸಂಸ್ಥೆಯ 7 ದ್ವಿತೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ 14 ಮಂದಿ ಉತ್ತೀರ್ಣರಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು ನ. 24: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್‌ ಏಜೆನ್ಸಿ ಕೆಇಎಯು ಅಕ್ಟೋಬರ್ 11 ರಂದು ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ವಿದ್ಯಾಸಂಸ್ಥೆಯ 7 ದ್ವಿತೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ 14 ಮಂದಿ ಉತ್ತೀರ್ಣರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಕಾಲೇಜಿನ ಸ್ನಾತಕೋತ್ತರ ಕೇಂದ್ರದ  ಭೌತಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಆಯಿಷತ್ ಶಮಾ ಎ, ಸಿಂಚನ ಬಿ ಹಾಗೂ ಗಣಿತಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಅದಿತಿ, ಶ್ರೀದೇವಿ ಎನ್, ಗಣೇಶ್ ಟಿ ಡಬ್ಲ್ಯೂ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳಾದ ರಂಜನ್ ಎಸ್, ರತನ್ ಎನ್ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾದವರು. ಈ ಮೂಲಕ ವಿದ್ಯಾರ್ಥಿಗಳು ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕ ಹೊಂದಲು ಬೇಕಾಗಿರುವ ಅರ್ಹತಾ ಪಡೆದುಕೊಂಡಿದ್ದಾರೆ.

Ad Widget

Ad Widget <> Ad Widget

ಈ ವಿದ್ಯಾರ್ಥಿಗಳೊಂದಿಗೆ ಸಹಾಯಕ ಪ್ರಾದ್ಯಾಪಕರುಗಳಾದ ಸಂತೋಷ್ ಶೆಟ್ಟಿ ಅವರು ರಾಜಕೀಯ ಶಾಸ್ತ್ರ, ರಶ್ಮಿ ವಿ, ಶ್ರದ್ಧಾ ಎ ಎಸ್ ಅವರು ಕಂಪ್ಯೂಟರ್ ಸೈನ್ಸ್, ಪೃಥ್ವಿ ಕೆ ಅವರು ಕಾಮರ್ಸ್, ಸುಜಿತ್ ಎಸ್, ಕೃತಿ ಎ ಅವರು ಭೌತಶಾಸ್ತ್ರ ಹಾಗೂ ಅಂಜು ಜೇಮ್ಸ್ ಅವರು ಗಣಿತ ಶಾಸ್ತ್ರ ವಿಷಯದಲ್ಲಿ ಕೆ-ಸೆಟ್ ತೇರ್ಗಡೆಯಾಗಿದ್ದಾರೆ.

ಪ್ರಸ್ತುತ ವಿದ್ಯಾರ್ಥಿಗಳಿಗೆ ಸಾಮಾನ್ಯ ವಿಷಯದ ಕುರಿತು ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದಿಂದ ಹಾಗೂ ವಿಷಯವಾರು ಪತ್ರಿಕೆಗಳಿಗೆ ಆಯಾ ವಿಭಾಗಗಳಿಂದ ತರಬೇತಿ ನೀಡಲಾಗಿತ್ತು. ವಿಶಿಷ್ಟ ಸಾಧನೆಗೈದ ಈ ವಿದ್ಯಾರ್ಥಿಗಳನ್ನು ಹಾಗೂ ಪ್ರಾದ್ಯಾಪಕರುಗಳನ್ನು ಸಂಚಾಲಕ ರೆ. ಡಾ. ಜೆ. ಬಿ. ಸಲ್ದಾನ್ಹ, ಪ್ರಾಂಶುಪಾಲ ರೆ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ, ಸ್ನಾತಕೋತ್ತರ ವಿಭಾಗ ಸಂಯೋಜಕರುಗಳಾದ ಡಾ. ವಿನಯಚಂದ್ರ, ಡಾ. ವಿಪಿನ್ ನಾಯ್ಕ್, ಪ್ರತೀಕ್ಷಾ ಅಭಿನಂದಿಸಿದ್ದಾರೆ.

Continue Reading

ಮಂಗಳೂರು

Pugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!

Published

on

Ad Widget

Ad Widget

Ad Widget

Ad Widget

ಅಡಕೆ ಮತ್ತು ವೀಳ್ಯದೆಲೆಯನ್ನು ಪ್ರಧಾನವಾಗಿ ಬಳಸಿ ತಯಾರಿಸಿದ ಸಂಯುಕ್ತ ಗಿಡಮೂಲಿಕೆ ಮಿಶ್ರಣವು ಕ್ಯಾನ್ಸರ್ ಬೆಳವಣಿಗೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ ಎಂಬ ಮಹತ್ವದ ಅಂಶವನ್ನು ದಕ್ಷಿಣ ಕನ್ನಡದ ವಿಜ್ಞಾನಿಗಳ ತಂಡ ನಡೆಸಿದ ಸಂಶೋಧನೆ ಬಹಿರಂಗಪಡಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಅಡಕೆ ಮತ್ತು ವೀಳ್ಯದೆಲೆಯನ್ನು ಪ್ರಧಾನವಾಗಿ ಬಳಸಿ ತಯಾರಿಸಿದ ಸಂಯುಕ್ತ ಗಿಡಮೂಲಿಕೆ ಮಿಶ್ರಣವು ಕ್ಯಾನ್ಸರ್ ಬೆಳವಣಿಗೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ ಎಂಬ ಮಹತ್ವದ ಅಂಶವನ್ನು ದಕ್ಷಿಣ ಕನ್ನಡದ ವಿಜ್ಞಾನಿಗಳ ತಂಡ ನಡೆಸಿದ ಸಂಶೋಧನೆ ಬಹಿರಂಗಪಡಿಸಿದೆ.

Ad Widget

Ad Widget alt="Ad Widget"/>

Ad Widget

ಅಳಿಕೆಯ ಜೆಡ್ಡು ಆಯುರ್ವೇದ ಸಂಶೋಧನಾ ಕೇಂದ್ರ ಹಾಗೂ ಮಂಗಳೂರಿನ ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವಿಜ್ಞಾನಿಗಳು ನಡೆಸಿದ ಈ ಅಧ್ಯಯನದಲ್ಲಿ ‘ಪೂಗಸಾರಂ’ ಎಂಬ ಪಾಲಿಹರ್ಬಲ್ ಜೆಲ್‌ನ ಕ್ಯಾನ್ಸರ್ ವಿರೋಧಿ ಗುಣಗಳನ್ನು ಪರೀಕ್ಷಿಸಲಾಗಿದೆ. ಈ ಸಂಶೋಧನೆಯ ಫಲಿತಾಂಶಗಳನ್ನು ‘ಇಂಟರ್‌ನ್ಯಾಷನಲ್ ಜರ್ನಲ್ ಆಫ್ ಫಾರ್ಮಸಿ ರಿಸರ್ಚ್ ಆ್ಯಂಡ್ ಟೆಕ್ನಾಲಜಿ’ (IJPRFT) ವೈಜ್ಞಾನಿಕ ನಿಯತಕಾಲಿಕೆಯ 2026ರ ಜನವರಿ-ಜೂನ್ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ.

Ad Widget

Ad Widget <> Ad Widget

ಇಲಿಗಳ ಮೇಲಿನ ಪ್ರಯೋಗದಲ್ಲಿ ಸಕಾರಾತ್ಮಕ ಫಲಿತಾಂಶ
ಅಡಕೆ ಮತ್ತು ವೀಳ್ಯದೆಲೆಯೊಂದಿಗೆ ಇತರ ಏಳೆಂಟು ಔಷಧೀಯ ಸಸ್ಯಗಳ ಅಂಶಗಳನ್ನು ಸೇರಿಸಿ ಪೂಗಸಾರಂ ಎಂಬ ಜೆಲ್ ಸಿದ್ಧಪಡಿಸಲಾಗಿದೆ. ಇದರ ಪರಿಣಾಮಕಾರಿತ್ವವನ್ನು ಆರಂಭದಲ್ಲಿ ಯೆನಪೋಯ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಕ್ಯಾನ್ಸರ್ ಕೋಶಗಳ ಮೇಲೆ ಪರೀಕ್ಷಿಸಲಾಗಿತ್ತು. ಬಳಿಕ ಇಲಿಗಳ ಮೇಲೆ ಪ್ರಯೋಗ ನಡೆಸಲಾಯಿತು.

ಪ್ರಯೋಗದ ಭಾಗವಾಗಿ ಇಲಿಗಳ ಕೆಳತುಟಿಗಳಲ್ಲಿ ಡಿಎಂಬಿಎ (DMBA) ಎಂಬ ಕ್ಯಾನ್ಸರ್‌ಕಾರಕ ರಾಸಾಯನಿಕ ಬಳಸಿ ಕ್ಯಾನ್ಸರ್ ಉಂಟುಮಾಡಲಾಯಿತು. ನಂತರ ಎಂಟು ವಾರಗಳ ಕಾಲ ಪ್ರತಿದಿನವೂ ಪೂಗಸಾರಂ ಜೆಲ್ ಹಚ್ಚಿ ಅದರ ಪರಿಣಾಮವನ್ನು ಗಮನಿಸಲಾಯಿತು.

Ad Widget

Ad Widget

ಈ ವೇಳೆ ಇಲಿಗಳಲ್ಲಿ ಕಾಣಿಸಿಕೊಂಡ ಕ್ಯಾನ್ಸರ್ ಗಡ್ಡೆಗಳ ಗಾತ್ರ ಹಾಗೂ ಅವುಗಳ ಹರಡುವಿಕೆ ಗಣನೀಯವಾಗಿ ಕಡಿಮೆಯಾಗಿರುವುದು ಸಂಶೋಧನೆಯಲ್ಲಿ ಕಂಡುಬಂದಿದೆ. ಕೆಲವು ಇಲಿಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಸಿಸ್ಪ್ಲಾಟಿನ್ (Cisplatin) ಔಷಧಕ್ಕಿಂತಲೂ ಪೂಗಸಾರಂ ಹೆಚ್ಚು ಪರಿಣಾಮಕಾರಿ ಫಲಿತಾಂಶ ನೀಡಿದೆ ಎಂದು ಸಂಶೋಧನಾ ತಂಡ ತಿಳಿಸಿದೆ.

ಅಡಕೆಯ ಮೌಲ್ಯವರ್ಧನೆಗೆ ಸಂಶೋಧನೆ ಬಲ
ಅಡಕೆಯಲ್ಲಿ ಆರೋಗ್ಯಕ್ಕೆ ಪೂರಕವಾದ ಅಂಶಗಳಿವೆ ಎಂಬುದನ್ನು ಹಲವು ಸಂಶೋಧನೆಗಳು ಈಗಾಗಲೇ ಪ್ರಸ್ತಾಪಿಸಿವೆ. ಆದರೆ ವಿದೇಶಗಳಲ್ಲಿ ನಡೆದ ಕೆಲವು ಅಧ್ಯಯನಗಳು ಅಡಕೆಯನ್ನು ಕ್ಯಾನ್ಸರ್‌ಕಾರಕ ಎಂದು ಗುರುತಿಸಿವೆ. ಈ ಹಿನ್ನೆಲೆಯಲ್ಲಿ ಪೂಗಸಾರಂ ಕುರಿತ ಸಂಶೋಧನೆಯು ಅಡಕೆಯ ಔಷಧೀಯ ಗುಣಗಳ ಕುರಿತು ಮತ್ತಷ್ಟು ಅಧ್ಯಯನಕ್ಕೆ ಹೊಸ ಅವಕಾಶ ಕಲ್ಪಿಸಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಈ ಸಂಶೋಧನೆಯನ್ನು ರಾಜ್ಯ ಹಾಗೂ ಕೇಂದ್ರ ಸರಕಾರಗಳು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಆ ಮೂಲಕ ಅಡಕೆಯ ಕುರಿತಿರುವ ನಕಾರಾತ್ಮಕ ಅಭಿಪ್ರಾಯಗಳನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ಅದರ ಮೌಲ್ಯವರ್ಧನೆಗೆ ಆದ್ಯತೆ ನೀಡಬೇಕು ಎಂದು ಮಲೆನಾಡು ಅಡಕೆ ಮಾರಾಟದ ಸಹಕಾರ ಸಂಘದ ಉಪಾಧ್ಯಕ್ಷ ಮಹೇಶ್ ಹುಲ್ಕುಳಿ ಮನವಿ ಮಾಡಿದ್ದಾರೆ.

ಸಂಶೋಧನೆಯಲ್ಲಿ ಅಚ್ಚರಿಯ ಫಲಿತಾಂಶ
ಯೆನಪೋಯ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಕ್ಯಾನ್ಸರ್ ಸೆಲ್ ಲೈನ್‌ಗಳ ಮೇಲೆ ನಡೆಸಿದ ಪ್ರಯೋಗದಲ್ಲಿ ಯಶಸ್ಸು ಕಂಡ ಬಳಿಕ ಇಲಿಗಳ ಮೇಲೆ ಪೂಗಸಾರಂ ಬಳಸಿ ಪರೀಕ್ಷೆ ನಡೆಸಲಾಯಿತು. ಈ ಪ್ರಯೋಗದಲ್ಲಿ ಅಚ್ಚರಿಯ ಫಲಿತಾಂಶ ಲಭಿಸಿದೆ. ಸಂಶೋಧನೆಯ ವರದಿಯನ್ನು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವಿಜ್ಞಾನಿ ಡಾ. ಎಸ್. ಕೇಶವ ಭಟ್ ತಿಳಿಸಿದ್ದಾರೆ.

ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ (CPCRI) ನಡೆಸುತ್ತಿರುವ ಅಡಕೆ ಸಂಶೋಧನೆಗಳಿಗೂ ಈ ಅಧ್ಯಯನವು ಪೂರಕವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!