ಬಿಗ್ ನ್ಯೂಸ್
Mike Lench-ಇಟಲಿ ಸಮುದ್ರದಲ್ಲಿ ಮುಳುಗಿದ ವಿಹಾರ ನೌಕೆ : ಖ್ಯಾತ ಉದ್ಯಮಿ ‘ಬ್ರಿಟಿಷ್ ಬಿಲ್ ಗೆಟ್ಸ್’ ಮೈಕ್ ಲೆಂಚ್ ನಾಪತ್ತೆ
ಬೆಂಗಳೂರು: ಇಟಲಿ ಕರಾವಳಿಯಲ್ಲಿ ವಿಹಾರ ನೌಕೆ ಮುಳುಗಿ ‘ಬ್ರಿಟಿಷ್ ಬಿಲ್ ಗೇಟ್ಸ್’ ಎಂದು ಖ್ಯಾತಿಯಾಗಿದ್ದ ಸಾಫ್ಟ್ವೇರ್ ಉದ್ಯಮಿ ಮೈಕ್ ಲೆಂಚ್ ಅವರು ನಾಪತ್ತೆಯಾಗಿದ್ದಾರೆ.
ಶನಿವಾರ ಇಟಲಿಯ ಸಿಸಿಲಿ ಕರಾವಳಿಯಲ್ಲಿ ಭಾರಿ ಬಿರುಗಾಳಿಗೆ ಸಿಕ್ಕು ವಿಹಾರ ನೌಕೆ ಮುಳುಗಿತ್ತು. ನೌಕೆಯಲ್ಲಿ ಮೈಕ್ ಲೆಂಚ್, ಅವರ ಹೆಂಡತಿ ಹಾಗೂ ಮಗಳು ಸೇರಿದಂತೆ 22 ಜನ ಇದ್ದರು.
ಪತ್ತೆ ಕಾರ್ಯಾಚರಣೆ ನಡೆಯುತ್ತಿದ್ದು ಒಬ್ಬರ ಶವ ದೊರಕಿದೆ. ಆದರೆ, ಮೈಕ್ ಅವರು ಇನ್ನೂ ಪತ್ತೆಯಾಗಿಲ್ಲ ಎಂದು ಅಂತರರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಹಡಗು ಬಿರುಗಾಳಿಗೆ ಸಿಕ್ಕ ಕೂಡಲೇ ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಣೆಗೆ ಧಾವಿಸಿ ಮೈಕ್ ಹೆಂಡತಿ ಸೇರಿದಂತೆ 15 ಜನರನ್ನು ರಕ್ಷಿಸಿದ್ದರು. ಮೈಕ್ ಹಾಗೂ ಅವರ ಮಗಳು ಸೇರಿದಂತೆ ಇನ್ನೂ ಆರು ಜನ ಪತ್ತೆಯಾಗಿಲ್ಲ.
ಐರ್ಲೆಂಡ್ ಮೂಲದ ಮೈಕ್, ಯು.ಕೆ ದೇಶದ ಬಿಲಿಯನೇರ್ ಉದ್ಯಮಿ, ಅವರು ಅಟೊನಾಮಿ ಸಾಫ್ಟ್ವೇರ್ ಕಂಪನಿ ಸಂಸ್ಥಾಪಕರು. ಪ್ರಕರಣವೊಂದರಲ್ಲಿ ಇತ್ತೀಚೆಗೆ ಯು.ಎಸ್ ಕೋರ್ಟ್ನಿಂದ ತಮ್ಮ ಪರವಾಗಿ ತೀರ್ಪು ಬಂದಿದ್ದಕ್ಕೆ ಮೈಕ್ ಹಾಗೂ ಅವರ ಸ್ನೇಹಿತರು ಐಷಾರಾಮಿ ಹಡಗಿನಲ್ಲಿ ಪಾರ್ಟಿ ಮಾಡುತ್ತಿದ್ದರು.
ಸ್ಥಳೀಯ
Dharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ
ಪಾಣೆಮಂಗಳೂರಿನಲ್ಲಿರುವ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂ. 5 ಲಕ್ಷ ಅನುದಾನವನ್ನು ನೀಡಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಬಸದಿಯ ಅರ್ಚಕರಾದ ಧರಣೇಂದ್ರ ಇಂದ್ರ ಅವರಿಗೆ ಅನುದಾನವನ್ನು ಹಸ್ತಾಂತರಿಸಿದರು.
ಉಜಿರೆ: ಪಾಣೆಮಂಗಳೂರಿನಲ್ಲಿರುವ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂ. 5 ಲಕ್ಷ ಅನುದಾನವನ್ನು ನೀಡಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರು ಬಸದಿಯ ಅರ್ಚಕರಾದ ಧರಣೇಂದ್ರ ಇಂದ್ರ ಅವರಿಗೆ ಅನುದಾನವನ್ನು ಹಸ್ತಾಂತರಿಸಿ, ಜೀರ್ಣೋದ್ಧಾರ ಕಾರ್ಯವು ಸುಸೂತ್ರವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಹಾವೀರ ಅಜ್ರಿ ಉಪಸ್ಥಿತರಿದ್ದರು.
ಅಂತರ ರಾಜ್ಯ
WhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.
ನವದೆಹಲಿ: ಜನಪ್ರಿಯ ಮೆಸೇಜಿಂಗ್ ಆ್ಯಪ್ WhatsAppನ ವಿವಿಧ ಆವೃತ್ತಿಗಳಲ್ಲಿ ಹಲವು ಭದ್ರತಾ ನ್ಯೂನತೆಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ (CERT-In) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ದೋಷಗಳನ್ನು ದುರ್ಬಳಕೆ ಮಾಡಿಕೊಂಡು ಹ್ಯಾಕರ್ಗಳು ಸಾಧನಗಳಿಗೆ ಅನಧಿಕೃತ ಪ್ರವೇಶ ಪಡೆಯುವುದರ ಜತೆಗೆ ಸೂಕ್ಷ್ಮ ಮಾಹಿತಿಯನ್ನು ಕದಿಯುವ ಅಥವಾ ಡೇಟಾವನ್ನು ಅಳಿಸುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.
WhatsApp ನಮ್ಮ ದೈನಂದಿನ ಜೀವನದ ಪ್ರಮುಖ ಸಂವಹನ ಸಾಧನವಾಗಿದ್ದು, ಅದರ ಭದ್ರತೆಗೆ ಸಂಬಂಧಿಸಿದಂತೆ CERT-In ಇದೀಗ ಅಧಿಕ ತೀವ್ರತೆಯ ಸಲಹೆ ನೀಡಿದೆ. Android, iOS, Mac ಹಾಗೂ Windows ಸೇರಿದಂತೆ ವಿವಿಧ ಪ್ಲಾಟ್ಫಾರ್ಮ್ಗಳಲ್ಲಿ ಬಳಕೆಯಾಗುವ WhatsAppನ ಕೆಲವು ಆವೃತ್ತಿಗಳಲ್ಲಿನ ನ್ಯೂನತೆಗಳು ಸೈಬರ್ ದಾಳಿಗೆ ಅವಕಾಶ ಮಾಡಿಕೊಡಬಹುದು ಎಂದು ಎಚ್ಚರಿಸಲಾಗಿದೆ.
ಕೇಂದ್ರ ಸರ್ಕಾರದ ಸೈಬರ್ ಭದ್ರತಾ ಸಂಸ್ಥೆಯ ಪ್ರಕಾರ, ವಿಶೇಷವಾಗಿ ರೂಪಿಸಲಾದ ಸಂದೇಶಗಳು, ಅಟ್ಯಾಚ್ಮೆಂಟ್ಗಳು ಅಥವಾ URL ಲಿಂಕ್ಗಳ ಮೂಲಕ ಈ ದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಬಳಕೆದಾರರು ಹಾಗೂ ಸಂಸ್ಥೆಗಳು ತಮ್ಮ ಸಾಧನಗಳಲ್ಲಿ WhatsApp ಅನ್ನು ತಕ್ಷಣವೇ ನವೀಕರಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.
ಈ ಹಿಂದೆ ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ (I4C) ರಾಷ್ಟ್ರೀಯ ಸೈಬರ್ ಅಪರಾಧ ಬೆದರಿಕೆ ವಿಶ್ಲೇಷಣಾ ಘಟಕ (NCTAU) ಕೂಡ WhatsApp ಬಳಕೆಯ ಕುರಿತು ಎಚ್ಚರಿಕೆ ನೀಡಿತ್ತು. ಸಾರ್ವಜನಿಕ ಕಂಪ್ಯೂಟರ್ಗಳಲ್ಲಿ WhatsApp ವೆಬ್ಗೆ ಲಾಗಿನ್ ಮಾಡಿ ಕೆಲಸ ಮುಗಿದ ಬಳಿಕ ಲಾಗ್ಔಟ್ ಮಾಡದೆ ಬಿಟ್ಟರೆ, ಅನಧಿಕೃತ ವ್ಯಕ್ತಿಗಳು ಖಾತೆಯನ್ನು ಪ್ರವೇಶಿಸಿ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿತ್ತು. ಬ್ರೌಸರ್ ಟ್ಯಾಬ್ ಮುಚ್ಚಿದ ಮಾತ್ರಕ್ಕೆ WhatsApp ವೆಬ್ನಿಂದ ಲಾಗ್ಔಟ್ ಆಗುವುದಿಲ್ಲ ಎಂಬುದನ್ನೂ ಎಚ್ಚರಿಸಿತ್ತು.
WhatsAppನಲ್ಲಿ ಪತ್ತೆಯಾದ ಪ್ರಮುಖ ಭದ್ರತಾ ದೋಷಗಳೇನು?
CERT-In ಸಲಹೆಯಲ್ಲಿ WhatsAppನ ವಿವಿಧ ಆವೃತ್ತಿಗಳಲ್ಲಿನ ಐದು ಭದ್ರತಾ ನ್ಯೂನತೆಗಳನ್ನು ಉಲ್ಲೇಖಿಸಲಾಗಿದೆ.
CVE-2026-102769: Android WhatsAppನಲ್ಲಿ ವಿಶೇಷವಾಗಿ ರೂಪಿಸಲಾದ ಆರ್ಡರ್ ವಿವರಗಳ ಸಂದೇಶಕ್ಕೆ ಸಂಬಂಧಿಸಿದ ಈ ದೋಷವು SQL ಇಂಜೆಕ್ಷನ್ಗೆ ಅವಕಾಶ ನೀಡಬಹುದು. ಸಂದೇಶವನ್ನು ಬಳಕೆದಾರರು ತೆರೆಯುವ ಸಂದರ್ಭದಲ್ಲಿ ಸ್ಥಳೀಯವಾಗಿ ಸಂಗ್ರಹವಾಗಿರುವ ಚಾಟ್ಗಳು, ಮಾಧ್ಯಮ ಹಾಗೂ ಇತರ ಫೈಲ್ಗಳನ್ನು ಅಳಿಸುವ ಅಪಾಯವಿದೆ ಎಂದು ಎಚ್ಚರಿಸಲಾಗಿದೆ. ಸಂದೇಶ ತಲುಪಿದ ಸಮಯ ಹಾಗೂ ಡಬಲ್ ಟಿಕ್ನ ಮಾಹಿತಿಯನ್ನು ಗಮನಿಸುವ ಮೂಲಕ ಚಾಟ್ ಡೇಟಾಬೇಸ್ ಕುರಿತು ಕೆಲವು ಮಾಹಿತಿಯನ್ನು ತಿಳಿದುಕೊಳ್ಳುವ ಸಾಧ್ಯತೆಯೂ ಇದೆ. ಆದರೆ ಈ ದೋಷದ ದುರ್ಬಳಕೆಗೆ ಸಂಬಂಧಿಸಿದ ಯಾವುದೇ ಪುರಾವೆ ಇಲ್ಲ ಎಂದು WhatsApp ತಿಳಿಸಿದೆ.
CVE-2026-44908: Meta AIನ ಕಂಪ್ಯೂಟಿಂಗ್ ವ್ಯವಸ್ಥೆಯೊಂದಿಗೆ ವಿಶ್ವಾಸಾರ್ಹ ಸಂಪರ್ಕ ಸ್ಥಾಪಿಸಲು ಬಳಸುವ ಸರ್ಟಿಫಿಕೇಟ್ ಚೈನ್ ಪರಿಶೀಲನೆಯಲ್ಲಿನ ನ್ಯೂನತೆಗೆ ಈ ದೋಷ ಸಂಬಂಧಿಸಿದೆ. ಇದರಿಂದ ಕೆಲವು ಸಂದರ್ಭಗಳಲ್ಲಿ ಹಾರ್ಡ್ವೇರ್ ಭದ್ರತಾ ವ್ಯವಸ್ಥೆಯನ್ನು ಬೈಪಾಸ್ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಈ ದೋಷವನ್ನು ದುರ್ಬಳಕೆ ಮಾಡಿಕೊಂಡಿರುವ ಪುರಾವೆಯೂ ಇಲ್ಲ ಎಂದು WhatsApp ಹೇಳಿದೆ.
CVE-2026-23871: Android ಸಾಧನಗಳಲ್ಲಿನ ಬಾಹ್ಯ ಜಾಹೀರಾತು-ಪ್ರತಿಕ್ರಿಯೆ URLಗಳಿಗೆ ಸಂಬಂಧಿಸಿದ ಈ ದೋಷವು ವಿಶೇಷವಾಗಿ ರೂಪಿಸಲಾದ ‘Click to WhatsApp’ ಸಂದೇಶಗಳ ಮೂಲಕ ಸಾಧನವು ಹ್ಯಾಕರ್ ನಿಯಂತ್ರಿತ ವಿಳಾಸದಿಂದ ಮಾಧ್ಯಮವನ್ನು ಲೋಡ್ ಮಾಡುವಂತೆ ಮಾಡಬಹುದು. ಇದರಿಂದ ಬಳಕೆದಾರರ IP ವಿಳಾಸ ಬಹಿರಂಗಗೊಳ್ಳುವ ಸಾಧ್ಯತೆಯಿದೆ.
ಇದಲ್ಲದೆ, Instagram Reelಗೆ ಸಂಬಂಧಿಸಿದ AI ಪ್ರತಿಕ್ರಿಯೆಯಲ್ಲಿನ ದುರ್ಬಲತೆಯ ಮೂಲಕ iOS ಅಥವಾ Android ಸಾಧನಗಳಲ್ಲಿ ದುರುದ್ದೇಶಪೂರಿತ ವಿಷಯವನ್ನು ಪ್ರಕ್ರಿಯೆಗೊಳಿಸುವ ಸಾಧ್ಯತೆಯಿರುವ ಮತ್ತೊಂದು ದೋಷವನ್ನೂ ಉಲ್ಲೇಖಿಸಲಾಗಿದೆ.
CVE-2026-23863: Windows WhatsAppನಲ್ಲಿ ದುರುದ್ದೇಶಪೂರಿತ ಅಟ್ಯಾಚ್ಮೆಂಟ್ಗಳನ್ನು ಸಾಮಾನ್ಯ ಫೈಲ್ಗಳಂತೆ ತೋರಿಸಿ, ತೆರೆಯುವಾಗ ಕಾರ್ಯಗತಗೊಳಿಸಬಹುದಾದ ಫೈಲ್ಗಳಾಗಿ ರನ್ ಆಗುವಂತೆ ಮಾಡುವ ನ್ಯೂನತೆ ಇದಾಗಿದೆ. ಈ ದೋಷಗಳ ದುರ್ಬಳಕೆಗೆ ಸಂಬಂಧಿಸಿದ ಪುರಾವೆಗಳು ಇಲ್ಲ ಎಂದು WhatsApp ತಿಳಿಸಿದೆ.
ಸೈಬರ್ ಭದ್ರತಾ ಆತಂಕಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ CERT-In ಬಳಕೆದಾರರು WhatsAppನ ಇತ್ತೀಚಿನ ಆವೃತ್ತಿಯನ್ನು ಬಳಸುವಂತೆ ಹಾಗೂ ಅಪರಿಚಿತ ಸಂದೇಶಗಳು, ಲಿಂಕ್ಗಳು ಮತ್ತು ಅಟ್ಯಾಚ್ಮೆಂಟ್ಗಳನ್ನು ತೆರೆಯುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಬಿಗ್ ನ್ಯೂಸ್
Vitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಚೆನ್ನಯ್ಯ ಪೂಜಾರಿ ಮದ್ಯಪಾನ ಮಾಡಿ ತನ್ನ ಅಣ್ಣನ ಮಗಳಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಸಂದರ್ಭ ಯುವತಿ ಕತ್ತಿಯಿಂದ ಬೀಸಿದಾಗ ಅದು ಚೆನ್ನಯ್ಯ ಪೂಜಾರಿ ಅವರ ಎದೆಗೆ ತಾಗಿ ಗಂಭೀರ ಗಾಯಗೊಂಡಿದ್ದರು.
ಗಾಯಗೊಂಡ ಅವರನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಕುಟುಂಬದೊಳಗಿನ ಕಲಹ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಶಿಕಾಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
-
ನಿಧನ ವಾರ್ತೆ17 hours agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ನಿಧನ ವಾರ್ತೆ17 hours agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
-
ಅಂತರ ರಾಜ್ಯ17 hours agoViral video-ಚಲಿಸುತ್ತಿರುವ ರೈಲಿನ AC ಬೋಗಿಯಲ್ಲಿ ದೀಪ ಹಚ್ಚಿ ಆರತಿ, ಶಂಖನಾದ; ವೈರಲ್ ವಿಡಿಯೋಗೆ ರೈಲ್ವೆ ಪ್ರತಿಕ್ರಿಯೆ
-
ನಿಧನ ವಾರ್ತೆ16 hours agoKankanadi-ಶಾಲೆಯಿಂದ ನಡೆದು ಹೋಗುತ್ತಿದ್ದ ಎರಡನೇ ಕ್ಲಾಸ್ ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಕಂಕನಾಡಿಯಲ್ಲಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕ ಬಲಿ
-
ಸ್ಥಳೀಯ17 hours agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ಸ್ಥಳೀಯ10 hours agoRakshit Shivaram-ವಳಾಲು ಟೋಲ್ ದರ ರೂ.250ಕ್ಕೆ ಏರಿಕೆ : ಬಿಜೆಪಿಯವರಿಗೂ ಪಾಲಿದೆಯಾ..? ಶಾಸಕರ ಮೌನಕ್ಕೆ ರಕ್ಷಿತ್ ಶಿವರಾಂ ಗರಂ
-
ಅಂತರ ರಾಜ್ಯ17 hours agoWhatsApp-WhatsApp ಬಳಕೆದಾರರಿಗೆ CERT-In ಎಚ್ಚರಿಕೆ; ಡೇಟಾ ಕದಿಯುವ, ಅಳಿಸುವ ಅಪಾಯ..!
-
ಸ್ಥಳೀಯ16 hours agoDharmasthala-ಪಾಣೇರು ಬಸದಿ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 5 ಲಕ್ಷ ಅನುದಾನ















