Connect with us

ಬಿಗ್ ನ್ಯೂಸ್

ನರ್ಸರಿ ಶಾಲೆಯ ಪುಟಾಣಿಗಳಿಗೆ ಲೈಂಗಿಕ ದೌರ್ಜನ್ಯ: ಮಹಾರಾಷ್ಟ್ರ ಉದ್ವಿಗ್ನ – ರಸ್ತೆ ರೈಲ್ವೇ ಮಾರ್ಗಗಳಲ್ಲಿ ಭಾರೀ ಪ್ರತಿಭಟನೆ :ಗಲ್ಲುಕಂಭ ತಯಾರಿಸಿದ ಪ್ರತಿಭಟನಾಕಾರರು

Published

on



Ad Widget

Ad Widget

Ad Widget

Ad Widget

ಥಾಣೆ: ಲೈಂಗಿಕ ದೌರ್ಜನ್ಯದಂತಹ ಹೀನ ಕೃತ್ಯಗಳು ಈಗ ಆಸ್ಪತ್ರೆಯಿಂದ ಶಾಲೆಗಳವರೆಗೂ ಎಲ್ಲೆಲ್ಲಿಯೂ ಘಟಿಸುತ್ತಿವೆ. ಮಹಾರಾಷ್ಟ್ರದ ಥಾಣೆಯ ಶಾಲೆಯೊಂದರಲ್ಲಿ ಇಬ್ಬರು ನಾಲ್ಕು ವರ್ಷದ ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಪಾಲಕರು ಸೇರಿದಂತೆ ಸಾರ್ವಜನಿಕರಲ್ಲಿ ಆಕ್ರೋಶದ ಕಟ್ಟೆಯೊಡೆದಿದೆ. ಹೇಯ ಕೃತ್ಯವನ್ನು ವಿರೋಧಿಸಿ ರಸ್ತೆ, ರೈಲು ಮಾರ್ಗಗಳಲ್ಲಿ ಭಾರೀ ಪ್ರತಿಭಟನೆ ನಡೆದಿವೆ. ಹಲವು ಕಡೆ ಕಲ್ಲು ತೂರಾಟಗಳು ನಡೆದು ಗೊಂದಲದ ವಾತಾವರಣ ಸೃಷ್ಟಿಯಾಗಿದೆ.

Ad Widget

Ad Widget

Ad Widget

Ad Widget

ಥಾಣೆಯ ಇಂಗ್ಲಿಷ್‌ ಮೀಡಿಯಂ ಶಾಲೆಯೊಂದರಲ್ಲಿ ಸ್ವಚ್ಛತೆಯ ಕೆಲಸ ಮಾಡುತ್ತಿದ್ದ ಇಪ್ಪತ್ನೂರು ವರ್ಷದ ಯುವಕನೊಬ್ಬ ನಾಲ್ಕು ವರ್ಷದ ಇಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ ಕೊಟ್ಟಿರುವುದಾಗಿ ಆರೋಪಿಸಲಾಗಿದೆ. ಈ ಘಟನೆಯು ಸಾಮೂಹಿಕ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯರು ಪ್ರತಿಭಟನೆಗೆ ಇಳಿದಿದ್ದು, ಬಾದಲ್ಪುರ್‌ ರೈಲು ನಿಲ್ದಾಣದಲ್ಲಿ ಮುಂಬೈ ರೈಲು ಮಾರ್ಗಕ್ಕೆ ತಡೆ ಹಾಕಿದ್ದಾರೆ. ಅದರಿಂದಾಗಿ ಆ ಮಾರ್ಗದ ರೈಲುಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ರೈಲ್ವೆ ಹಳಿಗಳ ಮೇಲೆ ಪ್ರತಿಭಟನಾಕಾರರು ನುಗ್ಗಿದ್ದು, ತಡೆಯಲು ಬಂದ ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಶಾಲೆಯಲ್ಲಿ ಶೌಚಾಲಯದಲ್ಲಿ ನಡೆದಿದ್ದೇನು?

Ad Widget

Ad Widget <> Ad Widget

ಅವತ್ತು ಆಗಸ್ಟ್‌ 16, ಶುಕ್ರವಾರ. ಇಂಗ್ಲಿಷ್‌ ಮೀಡಿಯಂನ ಆ ಶಾಲೆಯಲ್ಲಿ ಪುಟ್ಟ ಮಕ್ಕಳು ಶಿಕ್ಷಕರ ಅನುಮತಿ ಪಡೆದು ಶೌಚಾಲಯಕ್ಕೆ ಹೋದ ಪುಟ್ಟ ಮಕ್ಕಳ ಮೇಲೆ ಅಲ್ಲೇ ಸ್ವಚ್ಛತಾ ಕೆಲಸ ಮಾಡ್ತಿದ್ದ ಕಾಮುಕನ ಕಣ್ಣು ಬಿತ್ತು. ಆ ಪುಟಾಣಿಗಳ ಮೇಲೆ ಆತ ಲೈಂಗಿಕ ದೌರ್ಜನ್ಯ ಎಸೆಗಿದ. ಆ ಘಟನೆಯ ವಿಚಾರ ಗೊತ್ತಾಗುತ್ತಿದ್ದಂತೆ ಪಾಲಕರು ದೂರು ದಾಖಲಿಸಿದ್ದಾರೆ. ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಶಾಲೆಯ ಆಡಳಿತವು ಪ್ರಿನ್ಸಿಪಲ್‌, ಶಾಲಾ ಶಿಕ್ಷಕಿ ಹಾಗೂ ಮಕ್ಕಳನ್ನು ಗಮನಿಸುವ ಸಹಾಯಕರನ್ನು ಕೆಲಸದಿಂದ ವಜಾಗೊಳಿಸಿದೆ. ಆದರೆ, ಈ ಕ್ರಮಗಳು ಪಾಲಕರಲ್ಲಿ ಸಮಾಧಾನ ತಂದಿಲ್ಲ. ಕಠಿಣ ಕ್ರಮ ಹಾಗೂ ಸುರಕ್ಷತೆಯ ಖಾತ್ರೆಗೆ ಆಗ್ರಹಿಸಿ ಪ್ರತಿಭಟನೆಗೆ ಇಳಿದಿದ್ದಾರೆ.



Ad Widget

ಪ್ರತಿಭಟನಕಾರರು ಸಾರ್ವಜನಿಕರ ಮುಂಭಾಗದಲ್ಲೇ ಆರೋಪಿಗೆ ಗಲ್ಲು ಶಿಕ್ಷೆ ಕೊಡಬೇಕೆಂದು ಗಲ್ಲು ಕಂಬ ಕೂಡ ತಯಾರಿಸಿ ಪ್ರತಿಭಟಿಸಿದರು.

Ad Widget

Ad Widget

ಶಾಲೆಯಲ್ಲಿ ಮಹಿಳಾ ಸಹಾಯಕಿಯೇ ಇಲ್ಲ!

ಮಕ್ಕಳ ಸುರಕ್ಷತೆಯ ಪೂರ್ಣ ಹೊಣೆಯನ್ನು ಹೊರುವಲ್ಲಿ ಶಾಲೆಯು ವಿಫಲವಾಗಿದೆ ಎಂದು ಹಲವು ಪಾಲಕರು ಆರೋಪಿಸಿದ್ದಾರೆ. ಇಂಥ ಘಟನೆಯ ನಂತರವೂ ಶಾಲೆಯ ಆಡಳಿತವು ಅಧಿಕೃತವಾಗಿ ಕ್ಷಮೆಯಾಚಿಸಲಿಲ್ಲ ಹಾಗೂ ಸುರಕ್ಷತೆಯ ಬಗ್ಗೆ ಖಾತ್ರೆ ಕೊಟ್ಟಿಲ್ಲ ಎಂದು ಆರೋಪಿಸಲಾಗಿದೆ.

ಶಾಲೆಯ ಸುರಕ್ಷತಾ ಕ್ರಮಗಳಲ್ಲಿ ದೊಡ್ಡ ಲೋಪಗಳು ಇರುವುದು ಪೊಲೀಸರ ತನಿಖೆಯಲ್ಲಿ ಹೊರಬಂದಿವೆ. ಬಾಲಕಿಯರ ಶೌಚಾಲಯದ ಬಳಿ ಮಕ್ಕಳನ್ನು ಗಮನಿಸಲು ಮಹಿಳಾ ಸಹಾಯಕಿ ಇರಲಿಲ್ಲ. ಅಂಥ ಕನಿಷ್ಠ ವ್ಯವಸ್ಥೆಯೂ ಶಾಲೆಯಲ್ಲಿ ಇಲ್ಲದಿರುವುದು ಬೆಳಕಿಗೆ ಬಂದಿದೆ. ಅದರ ಜೊತೆಗೆ ಶಾಲೆಯಲ್ಲಿರುವ ಬಹುತೇಕ ಸಿಸಿಟಿವಿ ಕ್ಯಾಮೆರಾಗಳು ಡಮ್ಮಿ ಪೀಸ್‌! ಈ ಎಲ್ಲ ಅಂಶಗಳು ಪಾಲಕರನ್ನು ರೊಚ್ಚಿಗೇಳುವಂತೆ ಮಾಡಿವೆ.

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್‌ ಅವರು ಈ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುವಂತೆ ಆದೇಶಿಸಿದ್ದಾರೆ. ಈ ಪ್ರಕರಣವನ್ನು ಫಾಸ್ಟ್ರಾಕ್‌ ಕೋರ್ಟ್‌ನಲ್ಲಿ ವಿಚಾರಣೆ ನಡೆಸಲು ಪ್ರಸ್ತಾವನೆ ಸಲ್ಲಿಸಲು ಥಾಣೆಯ ಪೊಲೀಸ್‌ ಕಮಿಷನರ್‌ಗೆ ಸೂಚಿಸಿದ್ದಾರೆ. ಇಂಥ ಘಟನೆಗಳು ಮಹಾರಾಷ್ಟ್ರದ ಮಾನ ಕಳೆಯುತ್ತವೆ. ಆರೋಪಿಯನ್ನು ಮೂರು ತಿಂಗಳ ಒಳಗಾಗಿ ನೇಣಿಗೇರಿಸಬೇಕು ಎಂದು ವಿಪಕ್ಷ ನಾಯಕರು ಆಗ್ರಹಿಸಿದ್ದಾರೆ.

ದೇಶದಲ್ಲಿ ಇತ್ತೀಚೆಗೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಹತ್ಯೆಯ ಘಟನೆಗಳು ಏರಿಕೆಯಾಗುತ್ತಿರುವುದು ಕಳವಳಕಾರಿಯಾಗಿದೆ. ಇಂಥ ಪ್ರಕರಣಗಳಲ್ಲಿ ತಡವಾಗಿ ವಿಚಾರಣೆ ನಡೆಯುವುದು, ಸೂಕ್ತ ಸಾಕ್ಷ್ಯಗಳಿಲ್ಲದೆ ಶಿಕ್ಷೆಯಿಂದ ಆರೋಪಿಗಳು ತಪ್ಪಿಸಿಕೊಳ್ಳುವುದು ಹೆಚ್ಚಿದೆ. ವರದಿಯೊಂದರ ಪ್ರಕಾರ, 2022ರವರೆಗೂ ಒಂಭತ್ತು ವರ್ಷಗಳಲ್ಲಿ ಶೇಕಡ 30ರಷ್ಟು ಅತ್ಯಾಚಾರ ಪ್ರಕರಣಗಳಲ್ಲಿ ಮಾತ್ರ ಆರೋಪಿಗಳಿಗೆ ಶಿಕ್ಷೆಯಾಗಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಮಂಗಳೂರು

MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ

Published

on



Ad Widget

Ad Widget

Ad Widget

Ad Widget

MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.

Ad Widget

Ad Widget <> Ad Widget

ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.



Ad Widget

ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

Ad Widget

Ad Widget

ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.

EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.

Ad Widget
Continue Reading

ಮಂಗಳೂರು

Mangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು

Published

on



Ad Widget

Ad Widget

Ad Widget

Ad Widget

ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು, ಅ 9: ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ (Albert Rego) ಅವರು ಕಳೆದ ಜುಲೈ 19ರಂದು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದೀಗ ಕುಂಟಿಕಾನ ಸಮೀಪದ ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಹೂತು ಹಾಕಿರುವ ಅವರ ಶವವನ್ನು ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರ ನೆರವಿನಿಂದ ಪರಿಶೀಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಸ್ನೇಹಿತನ ದೂರಿನಿಂದ ಬಯಲಿಗೆ ಬಂದ ಅನುಮಾನ



Ad Widget

ಆಲ್ಬರ್ಟ್ ರೇಗೋ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಅವರ ಸ್ನೇಹಿತ ಹೆರಾಲ್ಡ್ ಪಿರೇರಾ ಅವರು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾವಿನ ಬಗ್ಗೆ ಸ್ಥಳೀಯರಿಗೆ ಹಾಗೂ ಕುಟುಂಬದ ಇತರ ಸದಸ್ಯರಿಗೆ ಮಾಹಿತಿ ನೀಡದೆ, ಆಪ್ತರ ಮೂಲಕ ಮಗಳು ಮಾಯಾ ರೇಗೋ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಾ ರೇಗೋ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

Ad Widget

Ad Widget

ಆಸ್ತಿಗಾಗಿ ಕಿರುಕುಳ ನೀಡಿದ್ದ ಆರೋಪ

ಆಲ್ಬರ್ಟ್ ರೇಗೋ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಸಾಕಷ್ಟು ಆಸ್ತಿ ಸಂಪಾದಿಸಿದ್ದರು ಎನ್ನಲಾಗಿದೆ. ಅವರ ಇಬ್ಬರು ಮಕ್ಕಳು ಬೇರೆ ಬೇರೆ ಕಡೆ ನೆಲೆಸಿದ್ದರೆ, ಮಾಯಾ ರೇಗೋ ಮಾತ್ರ ಅವರೊಂದಿಗೆ ವಾಸವಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಬಲವಂತವಾಗಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಳ್ಳಲು ಯತ್ನಿಸಿದ್ದಾಳೆ ಎಂಬುದು ದೂರುದಾರರ ಆರೋಪ. ತನಗೆ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿರುವ ಬಗ್ಗೆ ಆಲ್ಬರ್ಟ್ ಅವರು ಸ್ನೇಹಿತರ ಬಳಿ ಹೇಳಿಕೊಂಡಿದ್ದರು. ತನಗೇನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮಗಳ ಕಿರುಕುಳವೇ ಕಾರಣವಾಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದರು ಎಂದು ಹೆರಾಲ್ಡ್ ಪಿರೇರಾ ದೂರಿನಲ್ಲಿ ತಿಳಿಸಿದ್ದಾರೆ.

ಮಾದಕ ವ್ಯಸನದ ಆರೋಪವನ್ನೂ ಮಾಯಾ ರೇಗೋ ವಿರುದ್ಧ ಮಾಡಲಾಗಿದ್ದು, ಹಣ ಮತ್ತು ಆಸ್ತಿಯ ವಿಚಾರವಾಗಿ ಇತರರ ನೆರವಿನಿಂದ ತಂದೆಯನ್ನು ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕೃತ್ಯಕ್ಕೆ ಬೋಂದೆಲ್‌ನ ವೈದ್ಯರೊಬ್ಬರು ಹಾಗೂ ಪೊಲೀಸ್ ಪೇದೆಯೊಬ್ಬರು ಸಹಕರಿಸಿದ್ದಾರೆ ಎಂದೂ ಆರೋಪಿಸಲಾಗಿದೆ. ಆದರೆ, ಈ ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.

ಅಸ್ಥಿಪಂಜರದ ಪರೀಕ್ಷೆಯಿಂದ ಸಿಗಲಿದೆಯೇ ಸುಳಿವು?

ಪ್ರಕರಣದ ತನಿಖೆಯಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, ಇದೀಗ ಸಾವಿನ ನೈಜ ಕಾರಣ ಪತ್ತೆಹಚ್ಚಲು ಹೂತು ಹಾಕಿರುವ ಶವವನ್ನು ಹೊರತೆಗೆಯುವ ನಿರ್ಧಾರ ಕೈಗೊಂಡಿದ್ದಾರೆ. ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಆಗಮಿಸಿ ಪ್ರಕ್ರಿಯೆಗೆ ಮುಂದಾಗಿದ್ದಾರೆ.

ಮಾಯಾ ರೇಗೋ ಹಾಗೂ ದೂರುದಾರರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.

ಎರಡು ತಿಂಗಳ ಹಿಂದೆ ನಡೆದ ಸಾವು ಕೊಲೆ ಕೃತ್ಯವೇ? ಸಾವಿನ ಹಿಂದಿದೆಯಾ ಆಸ್ತಿ ವಿವಾದ ? ಎಂಬ ಪ್ರಶ್ನೆಗಳಿಗೆ ವಿಧಿವಿಜ್ಞಾನ ಪರೀಕ್ಷೆ ಮತ್ತು ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ. ಸದ್ಯ ಪ್ರಕರಣದ ಆರೋಪಗಳು ತನಿಖಾ ಹಂತದಲ್ಲಿದ್ದು, ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆ ನಿರ್ಣಾಯಕವಾಗಲಿವೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading