ಅಪರಾಧ
Puttur-ಪುತ್ತೂರು : ವಿದ್ಯಾರ್ಥಿನಿಗೆ ಚೂರಿ ಇರಿತ ಎನ್ನುವುದು ಕಾಗೆ – ಗುಬ್ಬಕ್ಕ ಕಥೆಯೇ ? ರಹಸ್ಯ ಬಿಡಿಸಿದ ಸಿಸಿಟಿವಿ ದೃಶ್ಯಗಳು
ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿನಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ತನಗೆ ಹರಿತವಾದ ಆಯುಧದಿಂದ ತನ್ನ ಪರಿಚಯದ ತನ್ನದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಗಾಯಗೊಳಿಸಿದ್ದಾನೆ ಎಂದು ಹೇಳುವ ಮೂಲಕ ಪ್ರಕರಣ ಸಾರ್ವಜನಿಕಗೊಂಡಿತ್ತು. ಆರೋಪಿತ ಅಪ್ರಾಪ್ತ ಬಾಲಕನಾಗಿರುವುದರಿಂದ ಹಾಗೂ ಆತನ ಅಪರಾಧವನ್ನು ಸಾಬೀತು ಮಾಡುವ ಯಾವುದೇ ಸಣ್ಣ ಸಾಕ್ಷ್ಯ ಸಿಗದಿರುವುದರಿಂದ ಸದ್ಯ ಆತನನ್ನು ಪೊಲೀಸರು ವಾಪಸ್ಸು ಮನೆಗೆ ಕಳುಹಿಸಿಕೊಟ್ಟಿದ್ದಾರೆ.
ಅಪ್ರಾಪ್ತ ವಯಸ್ಸಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಗೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಇರಿದು ಗಾಯಗೊಳಿಸಿದ್ದಾನೆ ಎಂಬ ವಿಚಾರವು ಸದ್ಯ ಸಾರ್ವಜನಿಕ ವಲಯ ಹಾಗೂ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿನಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ತನಗೆ ಹರಿತವಾದ ಆಯುಧದಿಂದ ತನ್ನ ಪರಿಚಯದ ತನ್ನದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಗಾಯಗೊಳಿಸಿದ್ದಾನೆ ಎಂದು ಹೇಳುವ ಮೂಲಕ ಪ್ರಕರಣ ಸಾರ್ವಜನಿಕಗೊಂಡಿತ್ತು. ಆಸ್ಫತ್ರೆಯಲ್ಲಿ ದಾಖಲಾದ ವಿದ್ಯಾರ್ಥಿನಿಯ ಎಡಗೈಯಲ್ಲಿ ಗೀರಿದ ಗಾಯದ ಗುರುತು ಕಂಡು ಬಂದಿತ್ತು.
ಆರಂಭದಲ್ಲಿ ಚೂರಿಯಿಂದ ಇರಿಯಲಾಗಿದೆ ಎಂಬ ಸುದ್ದಿ ಹಬ್ಬಿದ್ದು, ಬಳಿಕ ಬ್ಲೇಡಿನಿಂದ ಇರಿಯಲಾಗಿದೆ ಎಂದು ಅದು ಪರಿವರ್ತನೆಗೊಂಡಿತ್ತು. ಆದರೇ ಕೊನೆಯಲ್ಲಿ ಇರಿದ ಆಯುಧವಾಗಲಿ ಸಿಗದೆ, ವಿದ್ಯಾರ್ಥಿನಿಯೂ ದೂರಿನಲ್ಲಿ ಉಲ್ಲೇಖಿಸಿದ ಅಂಶಗಳನ್ನು ಸಾಬೀತು ಮಾಡುವ ಯಾ ಪ್ರತ್ಯಕ್ಷ ಸಾಂದರ್ಭಿಕ ಯಾ ಪರೋಕ್ಷ ಸಾಕ್ಷಿಗಳು ಸಿಗದೇ ಹಾಗೂ ಆರೋಪಿತ ವಿದ್ಯಾರ್ಥಿ ಅಮಾಯಕ ಎನ್ನುವುದನ್ನು ಸಾಬೀತು ಮಾಡುವ ಹಲವು ಸಾಕ್ಷ್ಯಗಳು ದೊರೆತು ಇಡೀ ಪ್ರಕರಣ ಗೊಂದಲದ ಗೂಡಾಗಿ ಪರಿಣಮಿಸಿತ್ತು
ವಿದ್ಯಾರ್ಥಿ ನೀಡಿದ ದೂರಿನಲ್ಲಿ ಏನಿದೆ ?
ಆ.20ರ ಬೆಳಗ್ಗೆ 8.45ರ ಸುಮಾರಿಗೆ ಬೆಳಿಗ್ಗೆ ಕಾಲೇಜಿಗೆ ಬರುವಾಗ ಕಾಲೇಜು ಸಮೀಪ ತಮ್ಮದೇ ಕಾಲೇಜಿನ ವಿದ್ಯಾರ್ಥಿಯೋರ್ವ ತನ್ನ ಎಡ ಕೈಗೆ ಯಾವುದೋ ಹರಿತವಾದ ವಸ್ತುವಿನಿಂದ ಗೀರಿರುವುದಾಗಿ ಸಂತ್ರಸ್ತೆಯೂ ಆರೋಪಿಸಿ ದೂರು ನೀಡಿದ್ದರು. ನಾನು ಯಾವಾಗಲೂ ಬೊಳುವಾರು ಮಾರ್ಗವಾಗಿ ಬರುವುದು. ಆದರೆ ಇವತ್ತು ಪುಸ್ತಕ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮುಖ್ಯ ರಸ್ತೆಯಾಗಿ ಶ್ರೀಧರ್ ಭಟ್ ಅಂಗಡಿಗೆ ಬಂದಾಗ ಅದು ಬಂದ್ ಆಗಿತ್ತು. ಹೀಗಾಗಿ ನಾನು ವಾಪಸ್ಸು ಆಂಚೆ ಕಚೇರಿಯ ಮಾರ್ಗವಾಗಿ ಕಾಲೇಜಿನತ್ತ ತೆರಳಿದೆ. ಈ ವೇಳೆ ನನ್ನನ್ನು ಇನ್ನೊಂದು ತರಗತಿಯ ವಿದ್ಯಾರ್ಥಿ ಫಾಲೋ ಮಾಡಿಕೊಂಡು ಬಂದಿದ್ದ. ನನಗೆ ಹೆದರಿಕೆಯಾಯಿತು. ಉಳಿದವರು ಓಡಿದರು.
ಕಾಲೇಜಿನ ಬಳಿಯ ಕಾಲು ಸಂಕದ ಬಳಿಯಿಂದ ಹೋಗುತ್ತಿದ್ದ ವೇಳೆ ಎದುರು ಬಂದ ಅವನು ನನ್ನಲ್ಲಿ ಬಂದು, ನೀನು ಇನ್ನೊಂದು ವಿದ್ಯಾರ್ಥಿನಿಯ ಫ್ರೆಂಡಾ ಎಂದು ಪ್ರಶ್ನಿಸಿದ್ದಾನೆ. ನಾನು ಅವಳನ್ನು ಪ್ರೀತಿಸುವುದಿಲ್ಲ.ನಿನ್ನನ್ನು ಪ್ರೀತಿಸುತ್ತೇನೆ ಎಂದಾಗ ನಾನು ಅವನಿಗೆ ಬೈದೆ. ಅದಕ್ಕೆ ಅವನು ನನ್ನ ಕೈಗೆ ಹರಿತವಾದ ಆಯುಧದಿಂದ ಕೊಯ್ದು ಓಡಿದ. ಅವನೊಂದಿಗೆ ಇನ್ನೂ ಮಂದಿ ಇದ್ದರು ಎನ್ನುವುದು ಆಕೆಯ ಆರೋಪದ ಒಟ್ಟಾರೆ ಒಕ್ಕಣೆ.
ಆರೋಪಿತ ವಿದ್ಯಾರ್ಥಿಯು ಕೂಡ ಅಪ್ರಾಪ್ತ ಬಾಲಕನಾಗಿದ್ದ. ದೂರುದಾರೆ ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಬೇರೆ ಬೇರೆ ಸಮುದಾಯಕ್ಕೆ ಸೇರಿದವರಾಗಿದ್ದು, ಕೋಮು ಸೂಕ್ಷ್ಮ ಪುತ್ತೂರಿನಲ್ಲಿ ಕೆಲ ಕಾಲ ಉದ್ವೀಗ್ನತೆಗೆ ಕಾರಣವಾಯಿತು. ಹೀಗಾಗಿ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ವಿದ್ಯಾರ್ಥಿನಿ ದೂರಿನಲ್ಲಿ ಆರೋಪಿಸಿದ್ದ ಅಪ್ರಾಪ್ತ ವಿದ್ಯಾರ್ಥಿ ಮತ್ತು ಆತನ ಓರ್ವನ ಸ್ನೇಹಿತನನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದರು
ರಹಸ್ಯ ಬಯಲು ಮಾಡಿದ ಸಿಸಿಟಿವಿ
ಬೆಳಿಗ್ಗೆ ಗಂಟೆ 8.45ಕ್ಕೆ ಪುಸ್ತಕ ಖರೀದಿಸಲೆಂದು ಶ್ರೀಧರ್ ಭಟ್ ಅಂಗಡಿಯ ಬಳಿಯಿಂದ ಬಂದಿರುವುದಾಗಿ ಮತ್ತು ಬಳಿಕ ನಡೆದಿದೆ ಎನ್ನಲಾದ ಘಟನೆ ಕುರಿತು ವಿದ್ಯಾರ್ಥಿನಿ ನೀಡಿದ್ದ ಹೇಳಿಕೆಯಾಧರಿಸಿ ತನಿಖೆ ಆರಂಭಿಸಿದ ಪೊಲೀಸರು, ಶ್ರೀಧರ್ ಭಟ್ ಅಂಗಡಿಯ ಸಿಸಿ ಕ್ಯಾಮರಾ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ಮಾಡಿದರು.
ಆದರೆ ವಿದ್ಯಾರ್ಥಿನಿ ಈ ರಸ್ತೆಯಲ್ಲಿ ಹೋಗಿರುವುದು ಕ್ಯಾಮರಾಗಳಲ್ಲಿ ಕಂಡು ಬರಲಿಲ್ಲ .ಬಳಿಕ ಬೊಳುವಾರು ಸ್ನೇಹ ಟೆಕ್ಸ್ ಟೈಲ್ಸ್ ಕೊಂಬೆಟ್ಟು, ಶಾಲಾ ಪರಿಸರದ ಸಿಸಿ ಕ್ಯಾಮರ ಪರಿಶೀಲನೆ ಮಾಡಿದರು. ಈ ವೇಳೆ, ಬೊಳುವಾರಿನಲ್ಲಿ ಆಕೆ ರಿಕ್ಷಾದಿಂದ ಇಳಿದು ಕಾಲೇಜಿಗೆ ಹೋಗುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ವಿದ್ಯಾರ್ಥಿನಿ ಆರೋಪ ಹೊರಿಸಿದ್ದ ವಿದ್ಯಾರ್ಥಿ ತನ್ನ ಸ್ನೇಹಿತನೊಂದಿಗೆ ನೆಲ್ಲಿಕಟ್ಟೆ ರಸ್ತೆಯಿಂದ ಬರುತ್ತಿದ್ದುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ವಿದ್ಯಾರ್ಥಿನಿ ಕಾಲೇಜಿಗೆ ಹೋಗುವ ತನಕ ಆಕೆಯ ಕೈಗೆ ಗಾಯವಾಗಿರಲಿಲ್ಲ ಎಂದು ಕೆಲ ವಿದ್ಯಾರ್ಥಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ಬೋಳ್ವಾರಿನಿಂದ ದೂರುದಾರೆಯ ಜತೆಗೆ ಆಕೆಯದೇ ಸಮುದಾಯದ ಮೂವರು ವಿದ್ಯಾರ್ಥಿನಿಯರು ಕೊಡ ಕಾಲೇಜಿಗೆ ನಡೆದುಕೊಂಡು ಹೋಗಿದ್ದರು . ಅವರು ಕೂಡ ಈ ರೀತಿಯ ಯಾವುದೇ ಘಟನೆ ನಡೆದಿರುವುದನ್ನು ನಿರಾಕರಿಸಿದ್ದರು. ಇನ್ನೂ ವಿದ್ಯಾರ್ಥಿನಿ ಮತ್ತು ಆರೋಪ ಹೊತ್ತ ವಿದ್ಯಾರ್ಥಿ ಎಲ್ಲೂ ಜೊತೆಯಾಗಿ ಬರುತ್ತಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿರಲಿಲ್ಲ.
ಸಿಸಿ ಟಿವಿಯಲ್ಲಿ ಸೆರೆಯಾಗಿದ್ದ ದೃಷ್ಯಗಳು ಮತ್ತು ಕಾಲೇಜಿಗೆ ಹೋಗುವ ತನಕ ಆಕೆಯ ಕೈಗೆ ಯಾವುದೇ ಗಾಯವಾಗದಿದ್ದ ಕುರಿತು ವಿದ್ಯಾರ್ಥಿಗಳು ನೀಡಿದ್ದ ಹೇಳಿಕೆ ಕುರಿತು ಪೊಲೀಸರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿದ್ಯಾರ್ಥಿನಿಗೆ ತಿಳಿಸಿದಾಗ ಆಕೆ ಅದನ್ನು ಒಪ್ಪದೇ ನಿರಾಕರಿಸಿದ್ದಾಳೆ. ಬಳಿಕ ಸಿಸಿಟಿವಿ ದೃಶ್ಯಗಳ ವಿಡಿಯೋ ದಾಖಲೆ ತೋರಿಸಿದಾಗ, ಇದು ಎಡಿಟ್ ಮಾಡಿದ ವಿಡಿಯೋ ಎಂದು ಪೊಲೀಸರಿಗೆ ಹೇಳಿರುವುದಾಗಿ ತಿಳಿದು ಬಂದಿದೆ.
ಇದು ಅತ್ಯಂತ ಸೂಕ್ಷ್ಮ ಪ್ರಕರಣವಾಗಿದ್ದು ಪೊಲೀಸರಿಗೂ ತಲೆ ನೋವಾಗಿ ಪರಿಣಮಿಸಿದೆ. ಒಂದು ಕಡೆಯಲ್ಲಿ ಪ್ರಕರಣದಲ್ಲಿ ಅಪ್ರಾಪ್ತ ಬಾಲಕನೊಬ್ಬನ ಭವಿಷ್ಯ ಆಡಗಿದೆ. ಇನ್ನೊಂದೆಡೆಯಲ್ಲಿ ಅಪ್ರಾಪ್ತ ಬಾಲಕಿ ತನ್ನ ಮೇಲೆ ಹರಿತ ಆಯುಧದಿಂದ ಹಲ್ಲೆಯಾಗಿದೆ ಎಂದು ಒತ್ತಿ ಒತ್ತಿ ಹೇಳಿ ದೂರು ನೀಡಿರುವುದರಿಂದ ಅಕೆಗೂ ನ್ಯಾಯ ಒದಗಿಸುವ ಗುರುತರ ಜವಬ್ದಾರಿ ಪೊಲೀಸ್ ಇಲಾಖೆಯ ಹೆಗಲ ಮೇಲಿದೆ. ಇನ್ನೂ ಸಾರ್ವಜನಿಕ ವಲಯದಲ್ಲೂ ಪ್ರಕರಣ ತೀವ್ರ ಕುತೂಹಲ ಸೃಷ್ಟಿಸಿರುವುದರಿಂದ ಅವರ ಅನುಮಾನಗಳನ್ನು ಪೊಲೀಸ್ ಇಲಾಖೆಯೇ ಪರಿಹರಿಸಬೇಕಿದೆ.
ಹೀಗಾಗಿ ಪೊಲೀಸ್ ಇಲಾಖೆ ವಿದ್ಯಾರ್ಥಿನಿಯ ದೂರಿನ ಮೇರೆಗೆ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನ ಮೇಲೆ, ಪೋಕ್ಸೋ, ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿದೆ . ಇದೇ ವೇಳೆ ಆರೋಪಿತ ಆಪ್ರಾಪ್ತ ಬಾಲಕನಾಗಿರುವುದರಿಂದ ಹಾಗೂ ಆತನ ಅಪರಾಧವನ್ನು ಸಾಬೀತು ಮಾಡುವ ಯಾವುದೇ ಸಣ್ಣ ಸಾಕ್ಷ್ಯ ಸಿಗದಿರುವುದರಿಂದ ಸದ್ಯ ಆತನನ್ನು ವಾಪಸ್ಸು ಮನೆಗೆ ಕಳುಹಿಸಿಕೊಟ್ಟಿದ್ದಾರೆ
ಅಂತರ ರಾಜ್ಯ
Arrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.
ಕಾಸರಗೋಡು: ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.
ಚೇರ್ತಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಸುಲ್ತಾನ್ ಬತ್ತೇರಿ ಮೂಲದ ಪತ್ನಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದ ವೇಳೆ ಆತ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದುಬಂದಿದೆ.
ವೈದ್ಯನೆಂದು ನಂಬಿಸಿ ಅತ್ಯಾಚಾರ ಆರೋಪ
ವೈದ್ಯನೆಂದು ಪರಿಚಯಿಸಿಕೊಂಡು ತಳಿಪರಂಬ ಮೂಲದ ಯುವತಿಯೊಬ್ಬಳನ್ನು ಮಂಜೇಶ್ವರದ ಹೊಸಂಗಡಿಯ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಬಿಜು ಆಂಟನಿ ವಿರುದ್ಧವಿದೆ. ಈ ಸಂಬಂಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯುವತಿಯಿಂದ ಮೂರೂವರೆ ಪವನ್ ಚಿನ್ನಾಭರಣವನ್ನೂ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ.
ಮದುವೆಯಾದ ಮೂರೇ ದಿನಕ್ಕೆ ಪರಾರಿ
ಆರೋಪಿ 2020ರಲ್ಲಿ ತನ್ನ ವಂಚನೆಯ ಜಾಲ ಆರಂಭಿಸಿದ್ದ ಎನ್ನಲಾಗಿದೆ. ಚೇರ್ತಲ ಸಮೀಪದ ನಿವಾಸಿ ರಮ್ಯಾ ಎಂಬ ಯುವತಿಯನ್ನು ರಾಜೇಶ್ ಎಂಬ ಹೆಸರಿನಲ್ಲಿ ಮದುವೆಯಾಗಿದ್ದ ಆತ, ಮದುವೆಯಾದ ಮೂರನೇ ದಿನವೇ ₹30 ಸಾವಿರ ನಗದು ಮತ್ತು ಏಳು ಪವನ್ ಚಿನ್ನಾಭರಣ ಪಡೆದುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ರಮ್ಯಾ ನೀಡಿದ ದೂರಿನ ಮೇರೆಗೆ ಚೇರ್ತಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಆರೋಪಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಇದೀಗ ಸುಮಾರು ಆರು ವರ್ಷಗಳ ಬಳಿಕ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜು ಆಂಟನಿಯನ್ನು ಬಂಧಿಸಲಾಗಿದೆ.
ಬೇರೆ ಬೇರೆ ಹೆಸರುಗಳಲ್ಲಿ ವಂಚನೆ
ವೈದ್ಯನೆಂದು ಹೇಳಿಕೊಂಡು ಮದುವೆ ಜಾಹೀರಾತುಗಳನ್ನು ನೀಡುವ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಳ್ಳುತ್ತಿದ್ದ ಆರೋಪಿ, ಬಳಿಕ ಮದುವೆಯಾಗುವುದಾಗಿ ನಂಬಿಸಿ ಅವರಿಂದ ಚಿನ್ನಾಭರಣ ಹಾಗೂ ಹಣ ಪಡೆದು ಪರಾರಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ವಿವಿಧ ಸ್ಥಳಗಳಲ್ಲಿ ಬೇರೆ ಬೇರೆ ಹೆಸರುಗಳನ್ನು ಬಳಸಿಕೊಂಡು ಮಹಿಳೆಯರಿಗೆ ವಂಚಿಸುತ್ತಿದ್ದ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯ ವಿರುದ್ಧದ ಪ್ರಕರಣಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಸ್ಥಳೀಯ
Navoor clinic-ನಾವೂರು ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ
ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಾವೂರು: ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಘಟನಾ ಸ್ಥಳವನ್ನು ಪರಿಶೀಲಿಸಿದ ಅವರು, ಕ್ಲಿನಿಕ್‌ನ ವೈದ್ಯ ಡಾ. ಪ್ರದೀಪ್ ಅವರಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು.
ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ಕೃತ್ಯದಲ್ಲಿ ಭಾಗಿಯಾದ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ನ್ಯಾಯ ಒದಗಿಸುವ ಭರವಸೆಯನ್ನು ಅವರು ನೀಡಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.
-
ಬಿಗ್ ನ್ಯೂಸ್19 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಮಂಗಳೂರು21 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ20 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು20 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ22 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
-
ಸ್ಥಳೀಯ22 hours agoNavoor clinic-ನಾವೂರು ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ
-
ಶಿಕ್ಷಣ21 hours agoVivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
-
ನಿಧನ ವಾರ್ತೆ2 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ


















