ಜೀವನಶೈಲಿ
Astrology-ಮನೆಯಲ್ಲಿ ಬೆಕ್ಕು ಸಾಕುವುದು ಶುಭವೋ? ಅಶುಭವೋ?; ಈ ಬಗ್ಗೆ ಜೋತಿಷ್ಯ ಏನು ಹೇಳುತ್ತೆ ಗೊತ್ತಾ?
ಹೆಚ್ಚಿನವರು ಮನೆಯಲ್ಲಿ ನಾಯಿ, ಬೆಕ್ಕುಗಳನ್ನು ಸಾಕಲು ಇಷ್ಟ ಪಡುತ್ತಾರೆ. ಆದರೆ ಈ ಸಾಕು ಪ್ರಾಣಿಗಳು ಕೆಲವೊಮ್ಮೆ ಜೀವನಕ್ಕೆ ಶುಭ ಹಾಗೂ ಅಶುಭ ಎನಿಸುತ್ತದೆ ಎಂದು ಜೋತಿಷ್ಯ ಶಾಸ್ತ್ರ ಪ್ರತಿಪಾದಿಸುತ್ತದೆ.
ನಿಖರ ನ್ಯೂಸ್ :- ಹೆಚ್ಚಿನವರು ಮನೆಯಲ್ಲಿ ನಾಯಿ, ಬೆಕ್ಕುಗಳನ್ನು ಸಾಕಲು ಇಷ್ಟ ಪಡುತ್ತಾರೆ. ಅವುಗಳನ್ನು ಮನೆ ಮಕ್ಕಳಂತೆ ನೋಡಿಕೊಳ್ಳುತ್ತಾರೆ. ಭಾಗಶಃ ನಾಯಿ, ಬೆಕ್ಕು ಇಲ್ಲದ ಮನೆ ತೀರಾ ಕಡಿಮೆ. ಮಹಿಳೆಯರಿಗಂತೂ ಸಾಕು ಪ್ರಾಣಿಗಳೆಂದರೆ ಬಲು ಪ್ರೀತಿ. ಆದರೆ ಈ ಸಾಕು ಪ್ರಾಣಿಗಳು ಕೆಲವೊಮ್ಮೆ ಜೀವನಕ್ಕೆ ಶುಭ ಹಾಗೂ ಅಶುಭ ಎನಿಸುತ್ತದೆ ಎಂದು ಜೋತಿಷ್ಯ ಶಾಸ್ತ್ರ ಪ್ರತಿಪಾದಿಸುತ್ತದೆ. ಮುಖ್ಯವಾಗಿ ಮನೆಯಲ್ಲಿ ಬೆಕ್ಕು ಮರಿಗಳಿಗೆ ಜನ್ಮ ನೀಡಿದರೆ ಅದು ಶುಭವೋ ಅಥವಾ ಅಶುಭದ ಸಂಕೇತವೋ ಎಂಬುದನ್ನು ತಿಳಿದುಕೊಳ್ಳಬೇಕು. ಈ ಬಗ್ಗೆ ಜೋತಿಷ್ಯ ಶಾಸ್ತ್ರ ಒಂದಿಷ್ಟು ಸ್ವಾರಸ್ಯಕರ ಮಾಹಿತಿ ನೀಡುತ್ತದೆ.

ನಾಯಿ ಒಳ್ಳೆಯದು, ಆದರೆ ಬೆಕ್ಕು..?
ಮನುಷ್ಯನ ನಾಗರಿಕತೆಯೊಂದಿಗೆ ಸಾಗಿ ಬಂದ ಬಹುಮುಖ್ಯ ಸಾಕು ಪ್ರಾಣಿ ನಾಯಿ. ಪ್ರತೀ ಮನೆಯಲ್ಲೂ ನಾಯಿಗಳಿಗೆ ವಿಶೇಷ ಸ್ಥಾನವಿದೆ. ನಿಷ್ಠೆಗೆ ಸಮಾನಾರ್ಥಕ ಪದದಂತಿರುವ ನಾಯಿಯನ್ನು ಇಷ್ಟ ಪಡದವರೇ ಇಲ್ಲ.ಕೆಲವೊಂದು ಧಾರ್ಮಿಕ ಗ್ರಂಥಗಳೂ ಕೂಡ ನಾಯಿಗಳ ಬಗ್ಗೆ ಒಳ್ಳೆಯ ಅಭಿಪ್ರಾಯ ಹೊಂದಿದೆ. ಆದರೆ ಬೆಕ್ಕನ್ನು ಸಾಕಷ್ಟು ಜನ ಅಥವಾ ಗ್ರಂಥಗಳು ಅಶುಭದ ಸಂಕೇತ ಎನ್ನುವುದನ್ನು ನೀವು ಕೇಳಿರಬಹುದು. ಬೆಕ್ಕು ಅಡ್ಡ ಬಂದರೆ ಕೆಡುಕಾಗುತ್ತದೆ ಎನ್ನುವ ಅಭಿಪ್ರಾಯವೂ ಹೆಚ್ಚಿನವರಲ್ಲಿದೆ. ಬೆಕ್ಕಿನ ಬಗ್ಗೆ ಈ ಅಭಿಪ್ರಾಯವಿರಲು ಕಾರಣವೇನು ಎಂಬುದನ್ನು ನೋಡೋಣ.
ಬೆಕ್ಕಿನ ಬಗ್ಗೆ ಎರಡು ರೀತಿಯ ಅಭಿಪ್ರಾಯಗಳಿವೆ!
ಹೌದು, ಮನೆಯಲ್ಲಿ ಬೆಕ್ಕು ಸಾಕುವ ಬಗ್ಗೆ ಜನರಲ್ಲಿ ಎರಡು ರೀತಿಯ ಅಭಿಪ್ರಾಯಗಳಿದೆ. ಕೆಲವರು ಬೆಕ್ಕು ಸಾಕುವುದು ಮಂಗಳಕರ ಎಂದರೆ, ಇನ್ನೂ ಕೆಲವರು ಬೆಕ್ಕುಗಳು ಅಪಶಕುನದ ಸಂಕೇತ ಅವುಗಳಿಂದ ಅಶುಭ ಉಂಟಾಗುತ್ತದೆ ಎನ್ನುತ್ತಾರೆ. ಇನ್ನು ಕೆಲವು ಶಾಸ್ತ್ರಗಳ ಪ್ರಕಾರ, ಬೆಕ್ಕು ಮರಿ ಇಟ್ಟರೆ ಮರಿಗಳ ಜನನದ ನಂತರ 90 ದಿನಗಳಲ್ಲಿ, ಕುಟುಂಬದ ಸದಸ್ಯರು ಪ್ರತಿ ಕ್ಷೇತ್ರದಲ್ಲೂ ಪ್ರಗತಿ, ಯಶಸ್ಸನ್ನು ಸಾಧಿಸುತ್ತಾರೆ ಎಂದು ಹೇಳಲಾಗಿದೆ.

ಕಂದು ಬೆಕ್ಕು ಶುಭ, ಕಪ್ಪು ಬೆಕ್ಕು ಅಶುಭ!
ಕೆಲವೊಂದಿಷ್ಟು ಜೋತಿಷ್ಯ ಶಾಸ್ತ್ರ, ಪುರಾಣಗಳ ಪ್ರಕಾರ, ಮನೆಯಲ್ಲಿ ಬಂಗಾರದ ಬಣ್ಣದ ಅಥವಾ ಕಂದು ಬಣ್ಣದ ಬೆಕ್ಕುಗಳಿದ್ದರೆ ಶುಭವಾಗುತ್ತದೆ ಎನ್ನಲಾಗಿದೆ. ಆದರೆ ಕಪ್ಪು ಬಣ್ಣದ ಬೆಕ್ಕುಗಳಿಂದ ಜೀವನದಲ್ಲಿ ಕೆಡುಕಾಗುತ್ತದೆ. ಅವುಗಳ ಕೂಗು ಅಪಶಕುನದ ಸಂಕೇತ, ಮಾಟ-ಮಂತ್ರ ಇತ್ಯಾದಿಗಳಲ್ಲಿ ಕಪ್ಪು ಬೆಕ್ಕಿನ ಬಳಕೆಯ ಸಿದ್ದಾಂತ ಇರುವ ಕಾರಣ ಕಪ್ಪು ಬೆಕ್ಕು ಸಾಕುವುದು ಮನೆಗೆ ಶ್ರೇಯಸ್ಸಲ್ಲ ಎನ್ನಲಾಗಿದೆ.
ವಿ.ಸೂ:- ಬೆಕ್ಕುಗಳ ಬಗೆಗಿನ ಈಶುಭ ಹಾಗೂ ಅಶುಭ ಅನ್ನುವ ವಿಚಾರಗಳನ್ನು ಜೋತಿಷ್ಯ ಹಾಗೂ ಇತರೆ ದಾಖಲೆಗಳ ಪ್ರಕಾರ ಮಾತ್ರ ಬರೆಯಲಾಗಿದೆ. ಇದ್ಯಾವುದನ್ನೂ ಕೂಡ ನಿಖರ ನ್ಯೂಸ್ ಸತ್ಯ ಎಂದು ಪ್ರತಿಪಾದಿಸುವುದಿಲ್ಲ.
ಮಂಗಳೂರು
CM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.

ಮಂಗಳೂರು, ಅ.03: ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಬಂಗಾರದ ಪದಕ ತಂದುಕೊಟ್ಟ ಮಂಗಳೂರಿನ ಹೆಮ್ಮೆಯ ಅಥ್ಲೀಟ್ ಎಂ.ಆರ್. ಪೂವಮ್ಮ ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರಿಗೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ್ದಾರೆ. ಅಲ್ಲದೆ ಅಕ್ಟೋಬರ್ 6 ರಂದು ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾಗುವಂತೆ ಆಹ್ವಾನ ನೀಡಿದ್ದಾರೆ.
ತನ್ನದೇ ತಂಡದ ಬೇರೆ ಕ್ರೀಡಾಪಟುಗಳಿಗೆ ಅಲ್ಲಿನ ಸಿಎಂ ಹಾಗೂ ಇತರ ಮಂತ್ರಿಗಳು ಫೋನ್ ಮೂಲಕ ಅಭಿನಂದಿಸಿದ್ದಾರೆ ಹಾಗೂ ಕರ್ನಾಟಕದಲ್ಲಿ ಕೇವಲ 30 ಲಕ್ಷ ಬಹುಮಾನ ನೀಡಲಾಗುತ್ತಿದೆ ಬೇರೆ ರಾಜ್ಯದಲ್ಲಿ 1 ಕೋಟಿ ಬಹುಮಾನ ನೀಡುತ್ತಾರೆ ಎಂದು ಸಾಧಕಿ ಪೂವಮ್ಮ ನಿನ್ನೆ ಬೇಸರ ವ್ಯಕ್ತಪಡಿಸಿದ್ದರು.
ಅದ್ಧೂರಿ ಸ್ವಾಗತ:
ಜಪಾನ್‌ನಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 4×400 ಮೀಟರ್ ಮಹಿಳೆಯರ ರಿಲೇ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಪೂವಮ್ಮ, ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೂಮಳೆಗರೆದು ಅದ್ಧೂರಿ ಸ್ವಾಗತ ಕೋರಿದರು. ಇದು ಪೂವಮ್ಮ ಭಾಗವಹಿಸಿದ 3ನೇ ಏಷ್ಯನ್ ಗೇಮ್ಸ್ ಆಗಿದ್ದು, ಒಟ್ಟಾರೆಯಾಗಿ ಅವರ 6ನೇ ಪದಕವಾಗಿದೆ. ಕ್ರೀಡಾಂಗಣದಲ್ಲಿ ಭಾರತದ ರಾಷ್ಟ್ರಗೀತೆ ಮೊಳಗಿದ್ದು ಅತ್ಯಂತ ಹೆಮ್ಮೆಯ ಕ್ಷಣ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಹಲವು ಗಣ್ಯರಿಂದ ಅಭಿನಂದನೆ
ಆರಂಭದಲ್ಲಿ ತಮಗೆ ಸೂಕ್ತ ಗೌರವ ಹಾಗೂ ಶುಭಾಶಯಗಳು ದೊರೆಯದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದ ಪೂವಮ್ಮ, ಬಳಿಕ ಡಿಸಿಎಂ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರಿಂದ ಅಭಿನಂದನೆಗಳನ್ನು ಸ್ವೀಕರಿಸಿದರು.
ಇದೇ ವೇಳೆ ಕ್ರೀಡಾಪಟುಗಳ ಪ್ರೋತ್ಸಾಹಧನ ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ ಪೂವಮ್ಮ, “ಹರಿಯಾಣ ಸೇರಿದಂತೆ ಇತರ ರಾಜ್ಯಗಳಲ್ಲಿ ಚಿನ್ನ ಗೆದ್ದವರಿಗೆ 3 ಕೋಟಿ ರೂ. ನಗದು ಬಹುಮಾನ ನೀಡಲಾಗುತ್ತಿದೆ. ಆದರೆ ನಮ್ಮ ಕರ್ನಾಟಕದಲ್ಲಿ ಕೇವಲ 35 ಲಕ್ಷ ರೂ. ಮಾತ್ರ ನೀಡಲಾಗುತ್ತಿದೆ. ಯುವ ಅಥ್ಲೀಟ್‌ಗಳನ್ನು ಪ್ರೋತ್ಸಾಹಿಸಲು ಈ ಬಹುಮಾನದ ಮೊತ್ತವನ್ನು ಹೆಚ್ಚಿಸಬೇಕು,” ಎಂದು ಒತ್ತಾಯಿಸಿದ್ದಾರೆ.
ಆರೋಗ್ಯ
Puttur-ಸೆ.29: ವಿಶ್ವ ಹೃದಯ ದಿನ: ಪುತ್ತೂರಿನ ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಹೃದಯ ತಪಾಸಣಾ ಶಿಬಿರ
ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29, ಮಂಗಳವಾರದಂದು ಸಂಜೆ ಗಂಟೆ 3ರಿಂದ ವಿಶೇಷ ಹೃದಯ ತಪಾಸಣಾ ಶಿಬಿರ ಹಾಗೂ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದಂತೆ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಅಗತ್ಯ ತಪಾಸಣೆಗಳನ್ನು ನಡೆಸಲಾಗುವುದು. ತಪಾಸಣೆಯ ಬಳಿಕ ಹೃದ್ರೋಗ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಮತ್ತು ಮಾರ್ಗದರ್ಶನವೂ ದೊರೆಯಲಿದೆ.
ಹೃದಯ ಸಂಬಂಧಿ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಶಿಬಿರವು ಸಾರ್ವಜನಿಕರಿಗೆ ಉಪಯುಕ್ತ ಅವಕಾಶವಾಗಲಿದೆ. ವಿಶೇಷವಾಗಿ ಎದೆನೋವು, ಉಸಿರಾಟದ ತೊಂದರೆ, ಹೃದಯ ಬಡಿತದಲ್ಲಿ ವ್ಯತ್ಯಾಸ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು ಶಿಬಿರದ ಪ್ರಯೋಜನ ಪಡೆಯುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ಮನವಿ ಮಾಡಿದೆ.
ಹೃದಯದ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ನಿಯಮಿತ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವಂತೆ ಆಸ್ಪತ್ರೆ ತಿಳಿಸಿದೆ.
ಲೇಖನಗಳು
Mercury-ಬುಧನ ನಕ್ಷತ್ರ ಬದಲಾವಣೆ: ಈ 5 ರಾಶಿಯವರಿಗೆ ಇಂದಿನಿಂದ ‘ರಾಜಯೋಗ’, ಅದೃಷ್ಟದ ಬಾಗಿಲು ಓಪನ್..!
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜಕುಮಾರ ಎಂದೇ ಕರೆಯಲ್ಪಡುವ ‘ಬುಧ’ ಇಂದು ತನ್ನ ನಕ್ಷತ್ರವನ್ನು ಬದಲಾಯಿಸುತ್ತಿದ್ದಾನೆ. ಸದ್ಯ ಪೂರ್ವಫಲ್ಗುಣಿ ನಕ್ಷತ್ರದಲ್ಲಿರುವ ಬುಧನು ಇಂದು (ಶನಿವಾರ) ಸಂಜೆ 4:31ಕ್ಕೆ ಸೂರ್ಯನ ಅಧಿಪತ್ಯದ ‘ಉತ್ತರಾಫಲ್ಗುಣಿ’ ನಕ್ಷತ್ರಕ್ಕೆ ಪ್ರವೇಶಿಸಲಿದ್ದಾನೆ.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜಕುಮಾರ ಎಂದೇ ಕರೆಯಲ್ಪಡುವ ‘ಬುಧ’ ಇಂದು ತನ್ನ ನಕ್ಷತ್ರವನ್ನು ಬದಲಾಯಿಸುತ್ತಿದ್ದಾನೆ. ಸದ್ಯ ಪೂರ್ವಫಲ್ಗುಣಿ ನಕ್ಷತ್ರದಲ್ಲಿರುವ ಬುಧನು ಇಂದು (ಶನಿವಾರ) ಸಂಜೆ 4:31ಕ್ಕೆ ಸೂರ್ಯನ ಅಧಿಪತ್ಯದ ‘ಉತ್ತರಾಫಲ್ಗುಣಿ’ ನಕ್ಷತ್ರಕ್ಕೆ ಪ್ರವೇಶಿಸಲಿದ್ದಾನೆ.
ಈ ನಕ್ಷತ್ರ ಬದಲಾವಣೆಯು ಮುಂದಿನ 13 ದಿನಗಳ ಕಾಲ ಎಲ್ಲಾ ರಾಶಿಗಳ ಮೇಲೆ ಪ್ರಭಾವ ಬೀರಲಿದ್ದರೂ, 5 ರಾಶಿಯವರಿಗೆ ಮಾತ್ರ ಅತ್ಯಂತ ಶುಭ ಫಲಗಳನ್ನು ನೀಡಲಿದೆ. ಉದ್ಯೋಗ, ವ್ಯವಹಾರ ಮತ್ತು ಆರ್ಥಿಕವಾಗಿ ಲಾಭ ಪಡೆಯಲಿರುವ ಆ ಅದೃಷ್ಟದ ರಾಶಿಗಳು ಇಲ್ಲಿವೆ:
ವೃಷಭ ರಾಶಿ
ವೃಷಭ ರಾಶಿಯವರಿಗೆ ಬುಧನ ನಕ್ಷತ್ರ ಬದಲಾವಣೆ ಹೊಸ ಅವಕಾಶಗಳ ಬಾಗಿಲು ತೆರೆಯಬಹುದು. ವೃತ್ತಿಜೀವನದಲ್ಲಿ ಬಹುದಿನಗಳಿಂದ ಎದುರು ನೋಡುತ್ತಿದ್ದ ಅವಕಾಶಗಳು ಸಿಗುವ ಸಾಧ್ಯತೆಯಿದೆ. ಕೆಲಸದಲ್ಲಿ ಹಿರಿಯ ಅಧಿಕಾರಿಗಳ ಸಂಪೂರ್ಣ ಬೆಂಬಲ ದೊರೆಯುವುದರಿಂದ ನಿಮ್ಮ ಯೋಜನೆಗಳನ್ನು ಯಶಸ್ವಿಯಾಗಿ ಮುಂದಕ್ಕೆ ಕೊಂಡೊಯ್ಯಬಹುದು. ಇದರಿಂದ ವೃತ್ತಿಯಲ್ಲಿ ಆತ್ಮವಿಶ್ವಾಸವೂ ಹೆಚ್ಚಾಗಬಹುದು. ಉದ್ಯೋಗದ ಜೊತೆಗೆ ಕುಟುಂಬದ ವಿಚಾರದಲ್ಲೂ ಈ ಅವಧಿ ಖುಷಿ ನೀಡಬಹುದು. ಕುಟುಂಬದವರೊಂದಿಗೆ ಪ್ರವಾಸ ಅಥವಾ ಮಕ್ಕಳೊಂದಿಗೆ ವಿಶೇಷ ಸಮಯ ಕಳೆಯುವ ಅವಕಾಶ ಸಿಗಬಹುದು. ಒಟ್ಟಿನಲ್ಲಿ, ಕೆಲಸದಲ್ಲಿ ಪ್ರಗತಿ ಮತ್ತು ಕುಟುಂಬದಲ್ಲಿ ಸಂತೋಷ ಎರಡೂ ಒಟ್ಟಿಗೆ ಸಿಗುವ ಆಹ್ಲಾದಕರ ದಿನಗಳು ನಿಮ್ಮದಾಗಬಹುದು.
ಮಿಥುನ ರಾಶಿ
ಬುಧನ ಬದಲಾವಣೆ ಮಿಥುನ ರಾಶಿಯವರಿಗೆ ಹಣದ ವಿಚಾರದಲ್ಲಿ ಹೊಸ ದಾರಿ ತೋರಿಸಬಹುದು. ವ್ಯಾಪಾರದಲ್ಲಿ ತೊಡಗಿರುವವರಿಗೆ ಹೊಸ ಯೋಜನೆಗಳು ಮತ್ತು ಪ್ರಮುಖ ಒಪ್ಪಂದಗಳನ್ನು ಅಂತಿಮಗೊಳಿಸುವ ಅವಕಾಶ ಸಿಗಬಹುದು. ಈಗ ಮಾಡಿಕೊಳ್ಳುವ ಕೆಲವು ವ್ಯವಹಾರ ಸಂಪರ್ಕಗಳು ಮುಂದಿನ ದಿನಗಳಲ್ಲಿ ದೊಡ್ಡ ಲಾಭ ತಂದುಕೊಡುವ ಸಾಧ್ಯತೆಯಿದೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗುವ ಸಮಯ ಇದಾಗಿದ್ದು, ಆದಾಯ ಗಳಿಸಲು ಹೊಸ ಮಾರ್ಗಗಳು ತೆರೆದುಕೊಳ್ಳಬಹುದು. ಹಣಕಾಸಿನ ಪರಿಸ್ಥಿತಿಯಲ್ಲೂ ಸುಧಾರಣೆ ಕಂಡುಬರಬಹುದು. ವ್ಯವಹಾರ ವಿಸ್ತರಣೆ ಜೊತೆಗೆ ಆದಾಯ ಹೆಚ್ಚಿಸಿಕೊಳ್ಳುವ ಅವಕಾಶವೂ ಒಟ್ಟಿಗೆ ಒಲಿದುಬರಬಹುದು.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಇಂದಿನಿಂದಲೇ ಶುಭ ಸುದ್ದಿಗಳ ನಿರೀಕ್ಷೆ. ಸೂರ್ಯನ ಅಧಿಪತ್ಯದ ಸಿಂಹ ರಾಶಿಯವರಿಗೆ ಬುಧನ ನಕ್ಷತ್ರ ಬದಲಾವಣೆ ವಿಶೇಷವಾಗಿರಬಹುದು. ವಿಶೇಷವಾಗಿ ಸೆಪ್ಟೆಂಬರ್ 13ರವರೆಗಿನ ಅವಧಿ ಹಲವು ವಿಚಾರಗಳಲ್ಲಿ ಅನುಕೂಲಕರವಾಗಿರಬಹುದು. ನೀವು ಅಂದುಕೊಂಡ ಕೆಲಸಗಳು ನಿರೀಕ್ಷೆಯಂತೆ ನಡೆಯುವ ಸಾಧ್ಯತೆಯಿದ್ದು, ಮನಸ್ಸಿನಲ್ಲೂ ಹೊಸ ಉತ್ಸಾಹ ಮೂಡಬಹುದು. ಮನೆಯ ವಾತಾವರಣ ಸಂತೋಷದಿಂದ ಕೂಡಿರಲಿದ್ದು, ಕುಟುಂಬದವರಿಂದ ಉತ್ತಮ ಬೆಂಬಲ ಸಿಗಬಹುದು. ಹಣಕಾಸಿನ ವಿಚಾರಗಳಲ್ಲೂ ಸ್ಥಿರತೆ ಹೆಚ್ಚಾಗುವ ಸಾಧ್ಯತೆಯಿದೆ. ಹಣದ ಚಿಂತೆ ಕಡಿಮೆಯಾಗಿ ಮನಸ್ಸಿಗೆ ನೆಮ್ಮದಿ, ಕೆಲಸದಲ್ಲಿ ಸ್ಪಷ್ಟತೆ ಸಿಗುವ ದಿನಗಳು ಆರಂಭವಾಗಬಹುದು.
ವೃಶ್ಚಿಕ ರಾಶಿ
ಮುಂದಿನ ದಿನಗಳು ವೃಶ್ಚಿಕ ರಾಶಿಯವರಿಗೆ ಹೊಸ ಅನುಭವಗಳ ಜೊತೆಗೆ ನೆಮ್ಮದಿಯನ್ನೂ ತರಬಹುದು. ಇಂದಿನಿಂದ ಸೆ.13ರವರೆಗಿನ ಅವಧಿ ನಿಮಗೆ ವಿಶೇಷವಾಗಿರಬಹುದು. ಹೊಸ ವಿಷಯಗಳನ್ನು ಕಲಿಯಲು ಮತ್ತು ನಿಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಲು ಉತ್ತಮ ಅವಕಾಶಗಳು ಸಿಗಬಹುದು. ಕುಟುಂಬದವರೊಂದಿಗೆ ಪ್ರವಾಸಕ್ಕೆ ಯೋಜನೆ ರೂಪಿಸುವ ಸಾಧ್ಯತೆಯಿದ್ದು, ಬಹುದಿನಗಳಿಂದ ಬಯಸುತ್ತಿದ್ದವರೊಂದಿಗೆ ಗುಣಮಟ್ಟದ ಸಮಯ ಕಳೆಯಬಹುದು. ಇದೇ ಸಮಯದಲ್ಲಿ ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಟುವಟಿಕೆಗಳತ್ತ ಆಸಕ್ತಿ ಹೆಚ್ಚಾಗಬಹುದು. ಕುಟುಂಬದ ಸಂತೋಷ, ಹೊಸ ಕಲಿಕೆ ಮತ್ತು ಮನಸ್ಸಿನ ನೆಮ್ಮದಿ-ಮೂರೂ ಒಂದೇ ಸಮಯದಲ್ಲಿ ಸಿಗುವ ಸಾಧ್ಯತೆಯಿದೆ.
ಧನು ರಾಶಿ
ಬುಧನ ನಕ್ಷತ್ರ ಬದಲಾವಣೆ ಧನು ರಾಶಿಯವರಿಗೆ ಪ್ರಗತಿಯ ಹೊಸ ಬಾಗಿಲು ತೆರೆಯಬಹುದು. ಉದ್ಯೋಗದಲ್ಲಿರುವವರಿಗೆ ತಮ್ಮ ಕ್ಷೇತ್ರದಲ್ಲಿ ಮುನ್ನಡೆಯಲು ಉತ್ತಮ ಅವಕಾಶಗಳು ದೊರೆಯಬಹುದು. ವ್ಯವಹಾರಸ್ಥರಿಗೂ ಹೊಸ ಅವಕಾಶಗಳು ಸಿಗುವ ಸಾಧ್ಯತೆಯಿದ್ದು, ಕೈಗೆತ್ತಿಕೊಂಡ ಕೆಲಸಗಳಲ್ಲಿ ಯಶಸ್ಸು ಕಾಣಬಹುದು. ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವ ಸಾಧ್ಯತೆಯಿದ್ದು, ಆರ್ಥಿಕ ಲಾಭವೂ ದೊರೆಯಬಹುದು. ಯಶಸ್ಸಿನ ಅನುಭವದಿಂದ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚಾಗಲಿದೆ. ಕೆಲಸದಲ್ಲಿ ಯಶಸ್ಸು, ಹಣದಲ್ಲಿ ಲಾಭ ಮತ್ತು ಆತ್ಮವಿಶ್ವಾಸದ ಹೆಚ್ಚಳ-ಧನು ರಾಶಿಯವರಿಗೆ ಶುಭ ದಿನಗಳು ಆರಂಭವಾಗಬಹುದು.


















