Connect with us

ಸ್ಥಳೀಯ

Yettinahole-ಎತ್ತಿನಹೊಳೆ ನೀರಾವರಿ ಯೋಜನೆ: 16 ಸಾವಿರ ಕೋಟಿ ರೂ. ವೆಚ್ಚದ ಕಾಮಗಾರಿಯಿಂದ ಜಿಲ್ಲೆಗೆ ಹನಿ ನೀರು ಇಲ್ಲ!

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಜನರ ಬಹು ನಿರೀಕ್ಷೆಯ ಎತ್ತಿನಹೊಳೆ ನೀರಾವರಿ ಯೋಜನೆಗೆ ಇಲ್ಲಿಯವರೆಗೆ ಒಟ್ಟು ರೂ. 16,076,71 ಕೋಟಿ ವೆಚ್ಚವಾಗಿದೆ. ಹೀಗೆ ಒಂದು ದಶಕದ ಅವಧಿಯಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಹಣ ವ್ಯಯವಾಗಿದ್ದರೂ ಯೋಜನೆಯಿಂದ ಜಿಲ್ಲೆಗೆ ಹನಿ ನೀರು ದೊರೆತಿಲ್ಲ!

Ad Widget

Ad Widget alt="Ad Widget"/>

Ad Widget

ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನಲ್ಲಿ ಎತ್ತಿನಹೊಳೆ ಯೋಜನೆಯ ಕಾಮಗಾರಿಗಳು ನಡೆಯುತ್ತಿವೆ. ಗೌರಿಬಿದನೂರು ಮೂಲಕವೇ ಜಿಲ್ಲೆಗೆ ಎತ್ತಿನಹೊಳೆ ನೀರು ಪ್ರವೇಶಿಸಬೇಕು.

Ad Widget

Ad Widget <> Ad Widget

ಒಂದು ದಶಕದ ಅವಧಿಯಲ್ಲಿ ಎತ್ತಿನಹೊಳೆ ನೀರಾವರಿ ಯೋಜನೆಯ ವೆಚ್ಚ ಮೂರು ಪಟ್ಟು ಹೆಚ್ಚಳ ಕಂಡಿದೆ. 2012ರಲ್ಲಿ ರೂ. 8,300 ಕೋಟಿ ಯೋಜನೆಯ ಅಂದಾಜು ವೆಚ್ಚವಾಗಿತ್ತು. ಅದು 2014ಕ್ಕೆ ರೂ. 12,900 ಕೋಟಿ ಮುಟ್ಟಿತು. 2023ರಲ್ಲಿ ರೂ. 23,251 ಕೋಟಿ ತಲುಪಿದೆ. ಹೀಗೆ ವೆಚ್ಚ ದೊಡ್ಡ ಪ್ರಮಾಣದಲ್ಲಿ ಏರಿಕೆ ಆಗಿದೆ. ವೆಚ್ಚ ಹೆಚ್ಚಳದ ಸಮಯದಲ್ಲಿ ಪರ ವಿರೋಧದ ಚರ್ಚೆಗಳು ಗರಿಗೆದರಿವೆ. ನೀರಾವರಿ ಹೋರಾಟಗಾರರು ತೀಕ್ಷ್ಮವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ಎತ್ತಿನಹೊಳೆ ಯೋಜನೆ ಪ್ರಾರಂಭವಾದ ದಿನದಿಂದ ಇಲ್ಲಿಯವರೆಗೆ ಒಟ್ಟು ರೂ. 16,076,71 ಕೋಟಿ ವೆಚ್ಚವಾಗಿದೆ. ಈ ಹಣದಲ್ಲಿ ನಿರ್ಮಾಣ ಕಾಮಗಾರಿಗಳಿಗಾಗಿಯೇ ಹೆಚ್ಚು ವ್ಯಯಿಸಲಾಗಿದೆ.

Ad Widget

Ad Widget

ಭೂಸ್ವಾಧಿನಕ್ಕೆ ಎಂದು ರೂ. 1,688.26 ಕೋಟಿ, ಚಾಲ್ತಿ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳಿಗೆ 13,663.18 ಕೋಟಿ, ಯೋಜನಾ ಪ್ರದೇಶ ವ್ಯಾಪ್ತಿಯಲ್ಲಿನ ಬಾಧಿತ ಪ್ರದೇಶಗಳ ರಸ್ತೆಗಳ ಸುಧಾರಣೆ, ರೈಲ್ವೆ, ರಾಷ್ಟ್ರೀಯ ಹೆದ್ದಾರಿ, ಕೆಪಿಟಿಸಿಎಲ್, ಚೆಸ್ಕಾಂ, ಅರಣ್ಯ ಇತ್ಯಾದಿ ಇಲಾಖೆಗಳಿಗೆ ಭರಿಸಿರುವ ಠೇವಣಿ ಮೊತ್ತ ರೂ. 588.66 ಕೋಟಿ ಮತ್ತು ವೇತನ ಹಾಗೂ ಇತರೆ ಖರ್ಚುಗಳಿಗೆ ರೂ.141.61 ಕೋಟಿ ಭರಿಸಲಾಗಿದೆ ಎಂದು ಸರ್ಕಾರವು ಕೋಲಾರ ಶಾಸಕ ಕೊತ್ತೂರು ಜಿ.ಮಂಜುನಾಥ್ ಅವರ ಪ್ರಶ್ನೆಗೆ ಸಮಗ್ರವಾಗಿ ಉತ್ತರಿಸಿದೆ.

2022ರ ಜನವರಿ ಅಂತ್ಯದವರೆಗೆ ಎತ್ತಿನಹೊಳೆ ಯೋಜನೆಗೆ ರೂ. 9268,76 ಕೋಟಿ ವೆಚ್ಚ ಮಾಡಲಾಗಿತ್ತು. ಅಲ್ಲಿಂದ ನಂತರ ಮೂರು ವರ್ಷಗಳಲ್ಲಿ ಒಟ್ಟು ವೆಚ್ಚ ರೂ 16 ಸಾವಿರ ಕೋಟಿ ತಲುಪಿದೆ.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ನೀಡುವ ಮತ್ತು ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದಲೇ ಈ ಯೋಜನೆಗೆ ಚಾಲನೆ ನೀಡಲಾಗಿತ್ತು. ಜಿಲ್ಲೆಯಲ್ಲಿ ಕಾಮಗಾರಿಗೆ ಭೂಸ್ವಾಧೀನವು ಇನ್ನೂ ವೇಗ ಪಡೆದಿಲ್ಲ. ಈ ಕಾರಣದಿಂದ ಚಿಕ್ಕಬಳ್ಳಾಪುರ ಜಿಲ್ಲೆಗೆ ನೀರು ಯಾವಾಗ ಹರಿಯುತ್ತದೆ ಎನ್ನುವ ಕುತೂಹಲ ನಾಗರಿಕರಲ್ಲಿ ಇದೆ. ಭೂಸ್ವಾಧೀನ ಪ್ರಕ್ರಿಯೆಗಳು ಜಿಲ್ಲೆಯಲ್ಲಿ ತೆವಳುತ್ತಲೇ ಸಾಗಿವೆ.

Ad Widget

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಶಿಕ್ಷಣ

RTE-ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ

Published

on

Ad Widget

Ad Widget

Ad Widget

Ad Widget

ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget alt="Ad Widget"/>

Ad Widget

ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್‌ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್‌ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.

ಆರ್‌ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.

Ad Widget

Ad Widget

ಆದಾಯ ಮಿತಿ ಹೆಚ್ಚಳದಿಂದ ಹೆಚ್ಚಿನ ಕುಟುಂಬಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶ ಸಿಗುವ ನಿರೀಕ್ಷೆಯಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!