ಸ್ಥಳೀಯ
Dharmasthala-ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ನವಜೀವನೋತ್ಸವ
ಶನಿವಾರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಂಟಿ ಆಶ್ರಯದಲ್ಲಿ ಮದ್ಯವ್ಯಸನ ಶಿಬಿರ, ವ್ಯಸನಮುಕ್ತರಾದವರ ಶತದಿನೋತ್ಸವದ ಸಂಭ್ರಮದ ನವಜೀವನೋತ್ಸವ ಸಮಾರಂಭ ನಡೆಯಿತು.
ಉಜಿರೆ: ಅನ್ನದಾಸೋಹ, ಅರಿವುದಾಸೋಹ ಮತ್ತು ಅಕ್ಷರದಾಸೋಹ ಎಂಬ ತ್ರಿವಿಧ ದಾಸೋಹದೊಂದಿಗೆ ಮನಪರಿವರ್ತನೆ ಮೂಲಕ ಕ್ರಾಂತಿಕಾರಿ ಸಮಾಜಸುಧಾರಣೆಯೊಂದಿಗೆ ಲೋಕಕಲ್ಯಾಣ ಕಾರ್ಯಗಳನ್ನು ನಿರಂತರ ಮಾಡುತ್ತಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗಡೆಯವರು ಸಾಧುಸಂತರಿಗಿಂತಲೂ ಮಿಗಿಲಾಗಿ ಎಲ್ಲರಿಂದಲೂ ದೇವಮಾನವರಾಗಿ ಗೌರವಿಸಲ್ಪಡುತ್ತಾರೆ. ಅವರ ದರ್ಶನದಿಂದ ದೇವರ ದರ್ಶನ ಮಾಡಿದಷ್ಟೇ ಸಂತೋಷ, ಮಾನಸಿಕ ಶಾಂತಿ ಮತ್ತು ನೆಮ್ಮದಿ ಸಿಗುತ್ತದೆ ಎಂದು ತುಮಕೂರಿನ ಕಾರದೇಶ್ವರ ಮಠದ ಕಾರದ ವೀರಬಸವ ಸ್ವಾಮೀಜಿ ಹೇಳಿದರು.

ಅವರು ಶನಿವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಮದ್ಯವ್ಯಸನ ಶಿಬಿರಗಳಲ್ಲಿ ಭಾಗವಹಿಸಿ ವ್ಯಸನಮುಕ್ತರಾದವರ ಶತದಿನೋತ್ಸವದ ಸಂಭ್ರಮದ ನವಜೀವನೋತ್ಸವ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.

ಮದ್ಯಪಾನದಂತಹ ವ್ಯಸನಗಳಿಗೆ ಬಿದ್ದವರನ್ನು ಮತ್ತು ಬೀಳುತ್ತಿರುವವರನ್ನು ಎತ್ತಿ ಹಿಡಿಯುವುದೇ ನಿಜವಾದ ಧರ್ಮವಾಗಿದೆ. “ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು” ಎನ್ನುವಂತೆ ಮನೆಯಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಕಾರ್ಯವಾಗಬೇಕು. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಮಾತಾ-ಪಿತರಂತೆ ಬಹಳ ಪ್ರೀತಿ-ವಿಶ್ವಾಸದಿಂದ ಸಮಾಜದ ಸರ್ವರ ಕಲ್ಯಾಣಕ್ಕಾಗಿ ಮಾಡುತ್ತಿರುವ ಸೇವಾಕಾರ್ಯಗಳು ವಿಶ್ವಮಾನ್ಯವಾಗಿವೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಹಿಳಾಸಬಲೀಕರಣ, ಕೆರೆಗಳ ಪುನಶ್ಚೇತನ, ಶುದ್ಧ ಕುಡಿಯುವ ನೀರಿನಘಟಕ, ಮನಪರಿವರ್ತನೆ ಮೂಲಕ ಮದ್ಯವರ್ಜನ ಶಿಬಿರಗಳು, ಸ್ವ-ಉದ್ಯೋಗ ತರಬೇತಿ ಇತ್ಯಾದಿ ಸೇವಾ ಕಾರ್ಯಕ್ರಮ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರವಾಗಿವೆ ಎಂದರು.

ತುಮಕೂರಿನಲ್ಲಿ ತಮ್ಮ ಮಠದ ಭಕ್ತರಾದ ಚಂದ್ರಶೇಖರ ಎಂಬವರು ಮದ್ಯವ್ಯಸನಿಯಾಗಿದ್ದು ಮದ್ಯ್ಯವರ್ಜನ ಶಿಬಿರಕ್ಕೆ ಸೇರಿ ವ್ಯಸನಮುಕ್ತರಾಗಿ ಈಗ ಎಂಜಿನಿಯರ್‌ರಾಗಿ ಸ್ವಂತ ಉದ್ಯಮದೊಂದಿಗೆ ಸ್ವಾವಲಂಬಿ ಜೀವನ ನಡೆಸುತ್ತಿರುವುದನ್ನು ಸ್ವಾಮೀಜಿ ಉಲ್ಲೇಖಿಸಿ ಕಾರ್ಯಕರ್ತರ ಸೇವೆಯನ್ನು ಶ್ಲಾಘಿಸಿದರು.
ಸಮಾರಂಭವನ್ನು ಉದ್ಘಾಟಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ವ್ಯಸನಮುಕ್ತರಾದವರು ಮನ, ವಚನ, ಕಾಯದಿಂದ ದೃಢ ಸಂಕಲ್ಪ ಮಾಡಿ ಮುಂದೆ ಸಾರ್ಥಕ ಜೀವನ ನಡೆಸಬೇಕು. ಅಂತರಂಗದಲ್ಲಿಯೂ ಬಹಿರಂಗದಲ್ಲಿಯೂ ಪರಿಶುದ್ಧರಾಗಿ ದೇವರ ದರ್ಶನ ಮಾಡಿ ಅನುಗ್ರಹ ಪಡೆದು ಮುಂದೆ ಸುಖ-ಶಾಂತಿ, ನೆಮ್ಮದಿಯ ಕೌಟುಂಬಿಕ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು. ವ್ಯಸನಮುಕ್ತರ ಭಾಗ್ಯದ ಬಾಗಿಲು ತೆರೆದಿದೆ ಎಂದು ಅವರಿಗೆ ಉಜ್ವಲ ಭವಿಷ್ಯವನ್ನು ಹೆಗ್ಗಡೆಯವರು ಹಾರೈಸಿದರು.

ಮಾಜಿ ವಿಧಾನಪರಿಷತ್ ಸದಸ್ಯ ಕೆ ಹರೀಶ್ ಕುಮಾರ್ ಶುಭಾಶಂಸನೆ ಮಾಡಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಕನಸು ಕಂಡ ಗ್ರಾಮ ರಾಜ್ಯದ ಮೂಲಕ ರಾಮ ರಾಜ್ಯ ಹಾಗೂ ವ್ಯಸನಮುಕ್ತ ಭಾರತವನ್ನು ಹೆಗ್ಗಡೆಯವರು ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಶೇ. ನೂರರಷ್ಟು ನನಸಾಗುವಂತೆ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಶತದಿನೋತ್ಸವವನ್ನು ಆಚರಿಸಿದ ವ್ಯಸನಮುಕ್ತರು ಜೀವನಪರ್ಯಂತ ಆತ್ಮಸಾಕ್ಷಿಗೆ ಅನುಗುಣವಾಗಿ ಉತ್ತಮ ಜೀವನ ನಡೆಸಬೇಕು. ತಮಗೆ ಯಾವುದೇ ಸಮಸ್ಯೆ ಬಂದರೂ ಯೋಜನಾಧಿಕಾರಿ ಅಥವಾ ಶಿಬಿರಾಧಿಕಾರಿಗಳನ್ನು ಸಂಪರ್ಕಿಸಿದಲ್ಲಿ ಸೂಕ್ತ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಯ ಡಾ. ಅಭಿಷೇಕ್ ಚತುರ್ವೇದಿ ಮತ್ತು ದೇರಳೆಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಡಾ. ಮೇಖಲಾ ದಿವಾಕರ್ ಅವರು ಮದ್ಯವರ್ಜನ ಶಿಬಿರಗಳ ಬಗ್ಗೆ ರಚಿಸಿದ ಸಂಶೋಧನಾ ಪ್ರಬಂಧಗಳನ್ನು ಡಿ. ವೀರೇಂದ್ರ ಹೆಗಡೆಯವರಿಗೆ ಅರ್ಪಿಸಿದರು.
ಮಂಗಳೂರಿನ ಡಾ. ಶ್ರೀನಿವಾಸ ಭಟ್, ಎಸ್. ಡಿ. ಸಂಪತ್ ಸಾಮ್ರಾಜ್ಯ, ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಾದೇಶಿಕ ಅಧಿಕಾರಿ ದುಗ್ಗೇಗೌಡ, ಜಿಲ್ಲಾಧ್ಯಕ್ಷ ಪದ್ಮನಾಭ ಭಟ್, ಸ್ಥಾಪಕ ಅಧ್ಯಕ್ಷ ವಸಂತ ಸಾಲಿಯಾನ್, ಕಾಸಿಂ ಮಲ್ಲಿಗೆಮನೆ ಮೊದಲಾದವರು ಉಪಸ್ಥಿತರಿದ್ದರು.
ಪ್ರಾಸ್ತಾವಿಕ ಮಾತುಗಳೊಂದಿಗೆ ವಿವೇಕ್ ವಿ. ಸ್ವಾಗತಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ ಧನ್ಯವಾದವಿತ್ತರು. ಯೋಜನಾಧಿಕಾರಿಗಳಾದ ನಾಗೇಶ್ ಮತ್ತು ಭಾಸ್ಕರ್, ಎನ್. ಕಾರ್ಯಕ್ರಮ ನಿರ್ವಹಿಸಿದರು.
ಬಿಗ್ ನ್ಯೂಸ್
Vitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ವಿಟ್ಲ: ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಚೆನ್ನಯ್ಯ ಪೂಜಾರಿ (45) ಅವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪದಲ್ಲಿ ರಿಶಿಕಾ (24) ಎಂಬ ಯುವತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಚೆನ್ನಯ್ಯ ಪೂಜಾರಿ ಮದ್ಯಪಾನ ಮಾಡಿ ತನ್ನ ಅಣ್ಣನ ಮಗಳಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಸಂದರ್ಭ ಯುವತಿ ಕತ್ತಿಯಿಂದ ಬೀಸಿದಾಗ ಅದು ಚೆನ್ನಯ್ಯ ಪೂಜಾರಿ ಅವರ ಎದೆಗೆ ತಾಗಿ ಗಂಭೀರ ಗಾಯಗೊಂಡಿದ್ದರು.
ಗಾಯಗೊಂಡ ಅವರನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಪುತ್ತೂರಿಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಕುಟುಂಬದೊಳಗಿನ ಕಲಹ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಿಶಿಕಾಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬಿಗ್ ನ್ಯೂಸ್
Virupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆಯದೆ ಕೈಗೊಳ್ಳಲಾಗುತ್ತಿದೆ ಎನ್ನಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಟೆಂಡರ್ ಪ್ರಕ್ರಿಯೆಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ.23ರಂದು ನೀಡಿರುವ ಈ ಆದೇಶವು ಮುಂದಿನ ವಿಚಾರಣೆಯವರೆಗೆ ಜಾರಿಯಲ್ಲಿರಲಿದ್ದು, ಇಲಾಖಾ ನಿಯಮಗಳನ್ನು ಉಲ್ಲಂಘಿಸಿ ಯಾವುದೇ ಕಾಮಗಾರಿ ನಡೆಸದಂತೆ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಸರಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮಚ್ಚಿಮಲೆ ವಿರೂಪಾಕ್ಷ ಭಟ್ ತಿಳಿಸಿದ್ದಾರೆ.
ಪುತ್ತೂರು: ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆಯದೆ ಕೈಗೊಳ್ಳಲಾಗುತ್ತಿದೆ ಎನ್ನಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಟೆಂಡರ್ ಪ್ರಕ್ರಿಯೆಗಳಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ.23ರಂದು ನೀಡಿರುವ ಈ ಆದೇಶವು ಮುಂದಿನ ವಿಚಾರಣೆಯವರೆಗೆ ಜಾರಿಯಲ್ಲಿರಲಿದ್ದು, ಇಲಾಖಾ ನಿಯಮಗಳನ್ನು ಉಲ್ಲಂಘಿಸಿ ಯಾವುದೇ ಕಾಮಗಾರಿ ನಡೆಸದಂತೆ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಸರಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ ಎಂದು ಮಚ್ಚಿಮಲೆ ವಿರೂಪಾಕ್ಷ ಭಟ್ ತಿಳಿಸಿದ್ದಾರೆ.
ಪುತ್ತೂರು ವಾರ್ತಾಭವನದಲ್ಲಿ ನ.25ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಸ್ಥಾನದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಧಾರ್ಮಿಕ ದತ್ತಿ ಇಲಾಖೆಯ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ. ಸಮರ್ಪಕ ಅನುಮೋದನೆ ಪಡೆಯದೆ ಕಾಮಗಾರಿಗಳನ್ನು ನಡೆಸಿರುವುದು, ಹಣಕಾಸಿನ ನಿರ್ವಹಣೆಯಲ್ಲಿ ಲೋಪದೋಷಗಳು ಹಾಗೂ ದೇವಸ್ಥಾನದ ದೈನಂದಿನ ಆಡಳಿತದಲ್ಲಿ ಪಾರದರ್ಶಕತೆಯ ಕೊರತೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಕಾನೂನು ಹೋರಾಟಕ್ಕೆ ಮುಂದಾಗಿದ್ದೇವೆ ಎಂದರು.
ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದ್ದು, ಇಲಾಖಾ ಮಟ್ಟದಲ್ಲಿ ತನಿಖೆ ನಡೆಯುತ್ತಿದೆ. ಇದೇ ವಿಚಾರವಾಗಿ ಮಚ್ಚಿಮಲೆ ವಿರೂಪಾಕ್ಷ ಭಟ್ ಮತ್ತು ದಿನೇಶ್ ಜೈನ್ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ W.P. No. 32628/2026ರಡಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರು ಸಲ್ಲಿಸಿದ ದಾಖಲೆಗಳು ಮತ್ತು ಮನವಿಯನ್ನು ಪರಿಗಣಿಸಿರುವ ನ್ಯಾಯಾಲಯವು ನ.23ರಂದು ಮುಂದಿನ ವಿಚಾರಣೆಯವರೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ ಎಂದು ಅವರು ವಿವರಿಸಿದರು.
ಅಭಿವೃದ್ಧಿ ಸಮಿತಿ ರಚನೆ ಬಗ್ಗೆಯೂ ಆಕ್ಷೇಪ
ದೇವಸ್ಥಾನದಲ್ಲಿ ರಚಿಸಲಾಗಿರುವ ಅಭಿವೃದ್ಧಿ ಸಮಿತಿಯ ರಚನೆಯೇ ಧಾರ್ಮಿಕ ದತ್ತಿ ಇಲಾಖೆಯ ನಿಯಮಗಳಿಗೆ ಅನುಗುಣವಾಗಿಲ್ಲ ಎಂಬುದು ಅರ್ಜಿದಾರರ ಪ್ರಮುಖ ಆಕ್ಷೇಪವಾಗಿದೆ. ಇಲಾಖೆಯಿಂದ ಅನುಮೋದನೆ ಪಡೆಯದ ಜೀರ್ಣೋದ್ಧಾರ ಅಥವಾ ಅಭಿವೃದ್ಧಿ ಸಮಿತಿಯ ಹೆಸರಿನಲ್ಲಿ ಭಕ್ತರಿಂದ ಹಣ ಸಂಗ್ರಹಿಸುವುದು, ಕಾಮಗಾರಿಗಳನ್ನು ಕೈಗೊಳ್ಳುವುದು ಹಾಗೂ ಅನಧಿಕೃತ ಸಭೆಗಳನ್ನು ನಡೆಸುವುದು ನಿಯಮಬಾಹಿರವಾಗಿದೆ ಎಂದು ವಿರೂಪಾಕ್ಷ ಭಟ್ ಆರೋಪಿಸಿದರು.
ಅನುಮೋದನೆ ಪಡೆಯದ ಸಮಿತಿಯ ಹೆಸರಿನಲ್ಲಿ ಟೆಂಡರ್ ಪ್ರಕ್ರಿಯೆ ನಡೆಸಿರುವುದು ಮತ್ತು ಪತ್ರಿಕೆಗಳಲ್ಲಿ ಟೆಂಡರ್ ಪ್ರಕಟಣೆಗಳನ್ನು ನೀಡಿರುವುದಕ್ಕೂ ಅವರು ಆಕ್ಷೇಪ ವ್ಯಕ್ತಪಡಿಸಿದರು. ಇಲಾಖೆಯ ಅಧಿಕೃತ ಅನುಮೋದನೆ ಹಾಗೂ ನಿಗದಿತ ಪ್ರಕ್ರಿಯೆಗಳನ್ನು ಪಾಲಿಸದೆ ಇಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದೂರಿದರು.
ಉತ್ತರ ಭಾಗದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಆಕ್ಷೇಪ
ದೇವಸ್ಥಾನದ ಉತ್ತರ ಭಾಗದ ಜಮೀನಿನಲ್ಲಿ ರಸ್ತೆ ನಿರ್ಮಾಣಕ್ಕೆ ಮುಂದಾಗಿರುವುದರ ಬಗ್ಗೆಯೂ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ. ಈ ಕಾಮಗಾರಿಗೆ ಧಾರ್ಮಿಕ ದತ್ತಿ ಇಲಾಖೆಯ ಪೂರ್ವಾನುಮತಿ ಪಡೆದಿಲ್ಲ. ಅಲ್ಲದೆ, ಇದೇ ಜಮೀನಿಗೆ ಸಂಬಂಧಿಸಿದಂತೆ ಬೇರೆ ಬೇರೆ ನ್ಯಾಯಾಲಯಗಳಲ್ಲಿ ಪ್ರಕರಣಗಳು ಬಾಕಿಯಿದ್ದು, ತಡೆಯಾಜ್ಞೆಗಳಿದ್ದರೂ ಕಾಮಗಾರಿ ಮುಂದುವರಿಸಲಾಗಿದೆ ಎಂಬುದು ಅರ್ಜಿದಾರರ ಆರೋಪವಾಗಿದೆ.
ಐದು ಕಟ್ಟೆಗಳ ತೆರವು, ನೂತನ ಶಿಲಾಮಯ ಕಟ್ಟಡ ನಿರ್ಮಾಣ
ದೇವಸ್ಥಾನದ ಹೊರಾಂಗಣದಲ್ಲಿದ್ದ ಐದು ಹಳೆಯ ಕಟ್ಟೆಗಳನ್ನು ತೆರವುಗೊಳಿಸಿ, ಧಾರ್ಮಿಕ ದತ್ತಿ ಇಲಾಖೆಯ ಅನುಮತಿ ಪಡೆಯದೆ ನೂತನ ಶಿಲಾಮಯ ಕಟ್ಟಡ ನಿರ್ಮಿಸಲಾಗಿದೆ ಎಂದು ವಿರೂಪಾಕ್ಷ ಭಟ್ ಆರೋಪಿಸಿದರು. ಈ ಕಾಮಗಾರಿಗೆ ಸಂಬಂಧಿಸಿದಂತೆ ಅನಧಿಕೃತವಾಗಿ ಹಣ ಸಂಗ್ರಹಿಸಲಾಗಿದ್ದು, ಯಾವುದೇ ಟೆಂಡರ್ ಪ್ರಕ್ರಿಯೆ ನಡೆಸದೆ ಸರಕಾರದ ನಿಯಮಾವಳಿಗಳನ್ನು ಪಾಲಿಸದೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ ಎಂದು ದೂರಿದರು.
ಇದಲ್ಲದೆ, ದೇವಸ್ಥಾನಕ್ಕೆ ಸಂಬಂಧಿಸಿದ ನವಗ್ರಹ ಗುಡಿ, ಅಯ್ಯಪ್ಪ ಸನ್ನಿಧಿ ಹಾಗೂ ನಟರಾಜ ವೇದಿಕೆ ಸಭಾಂಗಣವನ್ನು ತೆರವುಗೊಳಿಸುವ ಸಂದರ್ಭದಲ್ಲಿಯೂ ಸರಕಾರದ ನಿಯಮದಂತೆ ಟೆಂಡರ್ ಪ್ರಕ್ರಿಯೆ ಮತ್ತು ಮೌಲ್ಯಮಾಪನ ನಡೆಸಿಲ್ಲ. ಅಗತ್ಯ ಇಲಾಖಾ ಅನುಮೋದನೆಯನ್ನೂ ಪಡೆದಿಲ್ಲ ಎಂದು ಅವರು ಆರೋಪಿಸಿದರು.
ಚಿನ್ನದ ಮುಖವಾಡಕ್ಕೆ ಚಿನ್ನ ಸಂಗ್ರಹ: ಸಮರ್ಪಕ ಮಾಹಿತಿ ಇಲ್ಲವೆಂಬ ಆರೋಪ
ಶ್ರೀ ದೇವರಿಗೆ ಚಿನ್ನದ ಮುಖವಾಡ ನಿರ್ಮಿಸುವ ಉದ್ದೇಶದಿಂದ ಭಕ್ತರಿಂದ ಕಾಣಿಕೆ ರೂಪದಲ್ಲಿ ಚಿನ್ನ ಸಂಗ್ರಹಿಸಲಾಗುತ್ತಿದೆ. ಆದರೆ ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆಯ ಸಮರ್ಪಕ ಅನುಮತಿ ಪಡೆಯಲಾಗಿದೆಯೇ, ಆಗಮ ಪಂಡಿತರ ಅಭಿಪ್ರಾಯ ಹಾಗೂ ವರದಿ ಪಡೆಯಲಾಗಿದೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಸಂಗ್ರಹಿಸಲಾದ ಚಿನ್ನದ ನಿರ್ವಹಣೆ ಮತ್ತು ಅದರ ಲೆಕ್ಕಪತ್ರಗಳ ಕುರಿತು ದೇವಸ್ಥಾನದಲ್ಲಿ ಸಮರ್ಪಕ ಮಾಹಿತಿ ಲಭ್ಯವಿಲ್ಲ ಎಂಬ ವಿಚಾರವನ್ನೂ ನ್ಯಾಯಾಲಯದ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.
ದೇವಸ್ಥಾನದ ಆಡಳಿತ ಸಮಿತಿ ನೇಮಕಗೊಂಡ ಬಳಿಕ ನಿರ್ವಹಿಸಲಾದ ವಾರ್ಷಿಕ ಲೆಕ್ಕಪತ್ರಗಳಲ್ಲಿನ ಲೋಪದೋಷಗಳ ಬಗ್ಗೆಯೂ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ದೇವಸ್ಥಾನದ ಆಡಳಿತದಲ್ಲಿ ಇಲಾಖಾ ನಿಯಮಗಳ ಉಲ್ಲಂಘನೆ ಹಾಗೂ ಕಾರ್ಯನಿರ್ವಹಣಾಧಿಕಾರಿಗಳ ಅಧಿಕಾರ ಬಳಕೆಯಲ್ಲಿನ ಲೋಪಗಳ ಬಗ್ಗೆಯೂ ಕಾನೂನು ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು.
ನ್ಯಾಯಾಲಯದ ಆದೇಶ ಪಾಲನೆಗೆ ಆಗ್ರಹ
ನ್ಯಾಯಾಲಯ ನೀಡಿರುವ ಮಧ್ಯಂತರ ತಡೆಯಾಜ್ಞೆಯ ಪ್ರಕಾರ, ಮುಂದಿನ ವಿಚಾರಣೆಯವರೆಗೆ ಇಲಾಖೆಯ ಅನುಮತಿ ಇಲ್ಲದ ಕಾಮಗಾರಿಗಳನ್ನು ನಡೆಸುವಂತಿಲ್ಲ. ಈಗಾಗಲೇ ಕರೆಯಲಾಗಿರುವ ನಿಯಮಬಾಹಿರ ಟೆಂಡರ್ ಪ್ರಕ್ರಿಯೆಗಳನ್ನು ಮುಂದುವರಿಸುವಂತಿಲ್ಲ. ಅನುಮೋದನೆ ಪಡೆಯದ ಜೀರ್ಣೋದ್ಧಾರ ಸಮಿತಿಯ ಹೆಸರಿನಲ್ಲಿ ಕಾಮಗಾರಿಗಳನ್ನು ನಡೆಸಲು ಅಥವಾ ಸಭೆಗಳನ್ನು ಆಯೋಜಿಸಿ ಕಾಮಗಾರಿಗಳನ್ನು ಮುಂದುವರಿಸಲು ಅವಕಾಶವಿಲ್ಲ. ಕಾಮಗಾರಿಗಳ ಹೆಸರನ್ನು ಬದಲಾಯಿಸಿ ಆದೇಶದ ವ್ಯಾಪ್ತಿಯಿಂದ ಹೊರಬಂದು ಮುಂದುವರಿಸುವ ಪ್ರಯತ್ನವೂ ಮಾಡಬಾರದು ಎಂಬುದು ನ್ಯಾಯಾಲಯದ ಆದೇಶದ ಆಶಯವಾಗಿದೆ ಎಂದು ವಿರೂಪಾಕ್ಷ ಭಟ್ ತಿಳಿಸಿದರು.
ನ್ಯಾಯಾಲಯದ ಆದೇಶವನ್ನು ಪ್ರತಿವಾದಿಗಳು ಗೌರವಿಸಬೇಕು. ಆದೇಶದ ವ್ಯಾಪ್ತಿಗೆ ಒಳಪಡುವ ಕಾಮಗಾರಿಗಳನ್ನು ತಕ್ಷಣ ಸ್ಥಗಿತಗೊಳಿಸಿ, ಮುಂದಿನ ದಿನಗಳಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಧಾರ್ಮಿಕ ದತ್ತಿ ಇಲಾಖೆಯ ಕಾನೂನುಬದ್ಧ ಅನುಮೋದನೆ ಮತ್ತು ಪಾರದರ್ಶಕ ಟೆಂಡರ್ ಪ್ರಕ್ರಿಯೆಯ ಮೂಲಕವೇ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ದೇವಸ್ಥಾನದ ಅಭಿವೃದ್ಧಿಗೆ ವಿರೋಧವಿಲ್ಲ
ದೇವಸ್ಥಾನದ ಅಭಿವೃದ್ಧಿಗೆ ನಮ್ಮ ಯಾವುದೇ ವಿರೋಧವಿಲ್ಲ. ದೇವಸ್ಥಾನ ಇನ್ನಷ್ಟು ಅಭಿವೃದ್ಧಿಯಾಗಬೇಕು, ಭಕ್ತರಿಗೆ ಉತ್ತಮ ಸೌಲಭ್ಯಗಳು ದೊರೆಯಬೇಕು ಎಂಬುದೇ ನಮ್ಮ ಆಶಯ. ಆದರೆ ಅಭಿವೃದ್ಧಿಯ ಹೆಸರಿನಲ್ಲಿ ಇಲಾಖಾ ನಿಯಮಗಳನ್ನು ಮೀರಿ, ಕಾನೂನುಬಾಹಿರವಾಗಿ ಕಾಮಗಾರಿಗಳನ್ನು ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ದೇವಸ್ಥಾನದ ಆಡಳಿತದಲ್ಲಿ ಗೊಂದಲ ಸೃಷ್ಟಿಯಾಗದೆ ಪಾರದರ್ಶಕ ವ್ಯವಸ್ಥೆ ಇರಬೇಕು. ಭಕ್ತರ ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಗೆ ಧಕ್ಕೆಯಾಗದಂತೆ ದೇವಸ್ಥಾನದ ಆಡಳಿತ ನಡೆಯಬೇಕು. ಕಾನೂನುಬದ್ಧ ಅನುಮೋದನೆ, ನಿಯಮಾನುಸಾರ ಹಣಕಾಸಿನ ನಿರ್ವಹಣೆ ಹಾಗೂ ಪಾರದರ್ಶಕತೆಯೊಂದಿಗೆ ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂದು ಮಚ್ಚಿಮಲೆ ವಿರೂಪಾಕ್ಷ ಭಟ್ ಒತ್ತಾಯಿಸಿದರು.
ಅಪರಾಧ
Bantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ಬಂಟ್ವಾಳ: ಯಾವುದೇ ಪೂರ್ವಾನುಮತಿ ಪಡೆಯದೆ ರಾಜಕೀಯ ಪಕ್ಷವೊಂದರ ಧ್ವಜ ಹಾಗೂ ಬ್ಯಾನರ್‌ಗಳನ್ನು ಹಿಡಿದು ಗುಂಪುಗೂಡಿದ ಕೆಲವರು ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಕಾರ್ಯಾಚರಣೆಗೆ ಅಡ್ಡಿಪಡಿಸಿ, ಉಪಕರಣಗಳಿಗೆ ಹಾನಿ ಮಾಡಲು ಯತ್ನಿಸಿದ ಘಟನೆ ನ.26ರಂದು ನಡೆದಿದೆ.
ನ.26ರಂದು ಬೆಳಿಗ್ಗೆ ಸುಮಾರು 11.40ರ ವೇಳೆಗೆ ಈ ಘಟನೆ ನಡೆದಿದ್ದು, ಗುಂಪುಗೂಡಿದವರು ಟೋಲ್ ಪ್ಲಾಜಾದ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದಲ್ಲದೆ, ಅಲ್ಲಿನ ಉಪಕರಣಗಳಿಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ನಿರ್ದೇಶಕರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ದೂರಿನ ಆಧಾರದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 166/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 189(2), 191(2) ಹಾಗೂ 190ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
ನಿಧನ ವಾರ್ತೆ12 hours agoMangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು
-
ಅಪರಾಧ12 hours agoPunacha-ಪುಣಚದಲ್ಲಿ ಬೈಕ್ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?
-
ಅಂತರ ರಾಜ್ಯ12 hours agoChennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!
-
ಬಿಗ್ ನ್ಯೂಸ್6 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಅಪರಾಧ12 hours agoPunacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!
-
ರಾಜಕೀಯ12 hours agoKumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ
-
ಬಿಗ್ ನ್ಯೂಸ್7 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ಅಪರಾಧ10 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು















